ಲೇಖಕ: admin

ಮಡಿಕೇರಿ ಜ.27 NEWS DESK :  ಭಾಗಮಂಡಲ- ಕರಿಕೆ ರಸ್ತೆ ಅಭಿವೃದ್ಧಿಗೆ ರಾಜ್ಯ ರಸ್ತೆ ಅಭಿವೃದ್ಧಿ ಯೋಜನೆಯಡಿ 12 ಕೋಟಿ ರೂ. ಅನುಮೋದನೆ ದೊರೆತ್ತಿದ್ದು ಶೀಘ್ರ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ. ಗಡಿ ಸಾಂಸ್ಕೃತಿಕೋತ್ಸವ ಆಚರಣೆ ಸಮಿತಿ ಕರಿಕೆ ಗ್ರಾಮ, ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ ಸವಿನೆನಪು, ಕನ್ನಡ ಗಡಿ ಅಭಿವೃದ್ಧಿ ಪ್ರಾಧಿಕಾರ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು,ಭಾಗಮಂಡಲ ಹೋಬಳಿ, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕರಿಕೆ ಗ್ರಾಮ ಪಂಚಾಯಿತಿ ಇವರ ಸಂಯುಕ್ತ ಆಶ್ರಯದಲ್ಲಿ ಕರಿಕೆ ಗ್ರಾಮದ ಬೇಕಲ್ ಉಗ್ಗಪ್ಪ ನಗರದ ಎಳ್ಳುಕೊಚ್ಚಿ ಇಲ್ಲಿ ನಡೆದ ಗಡಿ ಸಾಂಸ್ಕೃತಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಭವನ, ಆಟದ ಮೈದಾನ ಸೇರಿದಂತೆ ಕರಿಕೆ ಗ್ರಾಮದ ವಿವಿಧ ಅಭಿವೃದ್ಧಿ ಯೋಜನೆಗಳ ಬೇಡಿಕೆಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುವುದು ಎಂದು…

Read More

ಮಡಿಕೇರಿ ಜ.27  NEWS DESK :  ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಬಾಂಧವರ ನಡುವೆ ಲೀಗ್ ಮಾದರಿಯ ‌ಫುಟ್ಬಾಲ್ ಪಂದ್ಯಾವಳಿಗೆ ಮರಗೋಡಿನ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಮಡಿಕೇರಿ ತಾಲ್ಲೂಕು ಹಿಂದೂ ಮಲಯಾಳಿ ಸಮಾಜದ ಅಧ್ಯಕ್ಷ ಹಾಗೂ ನಗರಸಭೆ ಸದಸ್ಯ ಕೆ.ಎಸ್ ರಮೇಶ್ ಮಡಿಕೇರಿ ಚಾಲನೆ ನೀಡಿದರು. ಫುಟ್ಬಾಲ್ ಪಂದ್ಯವಾಳಿಯ ಉದ್ಘಾಟನೆಯನ್ನು ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಫುಟ್ಬಾಲ್ ಕಪ್ ಸಂಸ್ಥಾಪಕ ದರ್ಶನ್ ಸುಕುಮಾರ್ ಮರಗೋಡು ನೆರವೇರಿಸಿದರು. ಶ್ರೀ ಮುತ್ತಪ್ಪನ್ ಮಲಯಾಳಿ‌ ಸಮಾಜ ವಿರಾಜಪೇಟೆ ಹಾಗೂ ಶ್ರೀ ನಿಧಿ ಎಫ್.ಸಿ ಒಂಟಿಯಂಗಡಿ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಶ್ರೀ ನಿಧಿ ತಂಡವು 3-2 ಗೋಲುಗಳ ಅಂತರದಿಂದ ಗೆಲುವು ಸಾಧಿಸಿತು. ಶ್ರೀ ನಿಧಿ ಎಫ್.ಸಿ ಪರವಾಗಿ ಸತ್ಯನ್, ದೀಕ್ಷಿತ್ ಹಾಗೂ ಸ್ರೀಜಿತ್ ತಲಾ ಒಂದು ಗೋಲ್ ಬಾರಿಸಿದರು. ಮುತ್ತಪ್ಪನ್ ಮಲಯಾಳಿ ಸಮಾಜದ ಪರವಾಗಿ ಕಿರಣ್ ಎರಡು ಗೋಲುಗಳಿಸಿದರು.ಗೋಣಿಕೊಪ್ಪ ಎಫ್.ಸಿ ಹಾಗೂ ಹಿಂದೂ ಮಲಯಾಳಿ ಸಮಾಜ ಮರಗೋಡು ‌ತಂಡಗಳ ನಡುವೆ ನಡೆದ…

Read More

ಮಡಿಕೇರಿ ಜ.27 : ಜಾತಿ ಪ್ರಮಾಣವನ್ನು ಸರಿಪಡಿಸಬೇಕು ಮತ್ತು ಪರಿಶಿಷ್ಟ ಜಾತಿಯವರಿಗೆ ನಿವೇಶನ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದೆ. ಮಡಿಕೇರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಿದ್ದ ಸಂದರ್ಭ ಭೇಟಿಯಾದ ಸಂಘದ ರಾಜ್ಯಾಧ್ಯಕ್ಷ ಹೆಚ್.ಎಂ.ಸೋಮಪ್ಪ ಅವರು, ಜಾತಿ ಪ್ರಮಾಣ ಪತ್ರ ನೀಡುವಾಗ ತಪ್ಪಾಗಿ ನಮೂದಿಸುತ್ತಿರುವ ಬಗ್ಗೆ ಗಮನ ಸೆಳೆದರು. ಜಾತಿ ಪ್ರಮಾಣವನ್ನು ಸರಿ ಪಡಿಸಬೇಕು, ಪರಿಶಿಷ್ಟ ಜಾತಿಯವರಿಗೆ ನಿವೇಶನ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಲವು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು ಇಲ್ಲಿಯವರೆಗೆ ಯಾವುದೇ ಸ್ಪಂದನೆ ದೊರೆತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಕೊಡಗು, ಚಿಕ್ಕಮಗಳೂರು, ಹಾಸನ, ಕಾಸರಗೋಡು, ಉಡುಪಿ, ದಕ್ಷಿಣಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಟ್ಟು 9 ಲಕ್ಷಕ್ಕೂ ಹೆಚ್ಚು ಆದಿದ್ರಾವಿಡ ಸಮುದಾಯದವರಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಸುಮಾರು 30ಸಾವಿರ ಮಂದಿ ವಾಸವಾಗಿದ್ದಾರೆ. ಆದಿದ್ರಾವಿಡ ಸಮುದಾಯ ಸೌಲಭ್ಯದಿಂದ ವಂಚಿತವಾಗುತ್ತಿದೆ. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಪರಿಶಿಷ್ಟ…

Read More

ಮಡಿಕೇರಿ ಜ.27 NEWS DESK : ಭಾಗಮಂಡಲ- ಕರಿಕೆ ಮಾರ್ಗದ ರಸ್ತೆ ಅಭಿವೃದ್ಧಿಗೆ ರಾಜ್ಯ ರಸ್ತೆ ಅಭಿವೃದ್ಧಿ ಯೋಜನೆಯಡಿ 12 ಕೋಟಿ ರೂ. ಅನುಮೋದನೆ ದೊರೆತ್ತಿದ್ದು ಶೀಘ್ರ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ. ಗಡಿ ಸಾಂಸ್ಕೃತಿಕೋತ್ಸವ ಆಚರಣೆ ಸಮಿತಿ ಕರಿಕೆ ಗ್ರಾಮ, ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ ಸವಿನೆನಪು, ಕನ್ನಡ ಗಡಿ ಅಭಿವೃದ್ಧಿ ಪ್ರಾಧಿಕಾರ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು,ಭಾಗಮಂಡಲ ಹೋಬಳಿ, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕರಿಕೆ ಗ್ರಾಮ ಪಂಚಾಯಿತಿ ಇವರ ಸಂಯುಕ್ತ ಆಶ್ರಯದಲ್ಲಿ ಕರಿಕೆ ಗ್ರಾಮದ ಬೇಕಲ್ ಉಗ್ಗಪ್ಪ ನಗರದ ಎಳ್ಳುಕೊಚ್ಚಿ ಇಲ್ಲಿ ನಡೆದ ಗಡಿ ಸಾಂಸ್ಕೃತಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಭವನ, ಆಟದ ಮೈದಾನ ಸೇರಿದಂತೆ ಕರಿಕೆ ಗ್ರಾಮದ ವಿವಿಧ ಅಭಿವೃದ್ಧಿ ಯೋಜನೆಗಳ ಬೇಡಿಕೆಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುವುದು ಎಂದು…

Read More

ಕುಶಾಲನಗರ,ಜ 27 NEWS DESK : ಕುಶಾಲನಗರ ಮತ್ತು ಹಾರಂಗಿ ರಸ್ತೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ವಾಗುತ್ತಿದ್ದು, ರಸ್ತೆಯಲ್ಲಿ ರಸ್ತೆ ಉಬ್ಬುಗಳನ್ನು ಅಳವಡಿಸುವಂತೆ ಕೂಡುಮಂಗಳೂರು ಗ್ರಾ.ಪಂ ಸದಸ್ಯ  ಕೆ.ಬಿ.ಶಂಶುದ್ಧೀನ್ ಆಗ್ರಹಿಸಿದ್ದಾರೆ. ಕುಶಾಲನಗರದಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, ಇತ್ತೀಚೆಗೆ ಕುಶಾಲನಗರ ಹಾರಂಗಿ ರಸ್ತೆ ಡಾಂಬರೀಕರಣವಾಗಿದೆ. ಜೊತೆಗೆ ರಸ್ತೆ ಅಗಲೀಕರಣ ಕೂಡ ಆಗಿದ್ದು, ರಸ್ತೆಯಲ್ಲಿ ವಾಹನಗಳು ಅತಿ ವೇಗವಾಗಿ ಚಲಿಸುತ್ತಿದೆ. ಅತಿವೇಗ ಹಾಗೂ ಅಜಾಗರೂಕತೆಯಿಂದ ರಸ್ತೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ವಾಗುತ್ತಿದೆ. ಆದ್ದರಿಂದ ಅಪಘಾತಗಳನ್ನು ತಡೆಗಟ್ಟುವ ದೃಷ್ಟಿಯಿಂದ ಕುಶಾಲನಗರ ಹಾರಂಗಿ ರಸ್ತೆಯಲ್ಲಿ ಅಗತ್ಯವಾದ ಕಡೆಗಳಲ್ಲಿ ರಸ್ತೆ ರಸ್ತೆ ಉಬ್ಬುನ್ನು ಅಳವಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈ ರಸ್ತೆಯಲ್ಲಿ ಮೂಕಾಂಬಿಕ ಶಾಲೆ, ಸುಂದರನಗರ ಪ್ರಥಮ ದರ್ಜೆ ಕಾಲೇಜು ಇದೆ. ದಿನನಿತ್ಯ ರಸ್ತೆಯಲ್ಲಿ ನೂರಾರು ವಿದ್ಯಾರ್ಥಿಗಳು ಸಂಚರಿಸುತ್ತಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ಅನಾಹುತಗಳನ್ನು ತಡೆಯುವ ದೃಷ್ಟಿಯಿಂದ ಆದಷ್ಟು ಬೇಗನೇ ರಸ್ತೆ ಉಬ್ಬುಗಳನ್ನು ಅಳವಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಕೂಡುಮಂಗಳೂರು ಗ್ರಾ.ಪಂ ವತಿಯಿಂದ ರಸ್ತೆ ಉಬ್ಬು ಅಳವಡಿಸುವಂತೆ ಸಂಬಂಧಿಸಿದ ಪೊಲೀಸ್ ಉಪ…

Read More

ಸೋಮವಾರಪೇಟೆ,ಜ.27 NEWS DESK : ದೇಶದ ಹಾಕಿ ಕ್ಷೇತ್ರಕ್ಕೆ ಕೊಡಗು ಜಿಲ್ಲೆ ಅನೇಕ ಕ್ರೀಡಾಪಟುಗಳನ್ನು ನೀಡಿದ್ದು, ಇದೀಗ ಜಿಲ್ಲೆಯ ಹಾಕಿ ಯುವ ಕ್ರೀಡಾಪಟು ವಚನ್, ಜೂನಿಯರ್ ಇಂಡಿಯಾ ಹಾಕಿ ಕ್ಯಾಂಪ್‍ಗೆ ಆಯ್ಕೆಯಾಗುವ ಮೂಲಕ ಹಾಕಿ ಕ್ಷೇತ್ರದಲ್ಲಿ ಭರವಸೆ ಮೂಡಿಸಿದ್ದಾರೆ. ಸೋಮವಾರಪೇಟೆಯ ಕ್ಲಬ್‍ರಸ್ತೆ ನಿವಾಸಿ ಹೆಚ್.ಎನ್.ಅಶೋಕ್ ಹಾಗೂ ಹೆಚ್.ಎ. ಸುಜಿನಿ ದಂಪತಿಯ ಪುತ್ರ, ಹೆಚ್.ಎ. ವಚನ್, ಜೂನಿಯರ್ ಇಂಡಿಯಾ ಹಾಕಿ ಕ್ಯಾಂಪಸ್ ಕೋರ್ ಗ್ರೂಪ್‍ಗೆ ಆಯ್ಕೆಯಾಗಿರುವ ಕ್ರೀಡಾಪಟು. ಪಟ್ಟಣದ ಓಎಲ್‍ವಿ ಶಾಲೆಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿದ ವಚನ್, ಪೊನ್ನಂಪೇಟೆಯ ಕ್ರೀಡಾ ವಸತಿ ಶಾಲೆಯಲ್ಲಿದ್ದುಕೊಂಡು ಸೆಂಟ್ ಅಂತೋಣಿ ಶಾಲೆಯಲ್ಲಿ ಪ್ರೌಢಶಿಕ್ಷಣ ಪೂರೈಸಿದ್ದಾರೆ. ಪ್ರಸ್ತುತ ಬೆಂಗಳೂರಿನ ಡಿವೈಇಎಸ್ ಕ್ರೀಡಾ ಹಾಸ್ಟೆಲ್‍ನಲ್ಲಿದ್ದು ಜೈನ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. 2019-20, 2021-2023ರವರೆಗೆ ಹಾಕಿ ಇಂಡಿಯಾದಿಂದ ಆಯೋಜನೆಗೊಂಡಿದ್ದ ಜೂನಿಯರ್ ರಾಷ್ಟ್ರೀಯ ಪಂದ್ಯಾವಳಿಯಲ್ಲಿ ಭಾಗಿಯಾಗಿರುವ ವಚನ್, ರಾಜ್ಯಮಟ್ಟದ ಅನೇಕ ಪಂದ್ಯಾವಳಿಯಲ್ಲಿ ಆಡಿದ್ದಾರೆ.

Read More

ಮಡಿಕೇರಿ ಜ.27 NEWS DESK : ಕೊಡಗು ಪತ್ರಿಕಾ ಭವನ ಟ್ರಸ್ಟ್ ವತಿಯಿಂದ 75ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕೊಡಗು ಪತ್ರಿಕಾ ಭವನ ಟ್ರಸ್ಟ್‍ನ ಟ್ರಸ್ಟಿ ಕೆ.ತಿಮ್ಮಪ್ಪ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಲಲಿತಾ ತಿಮ್ಮಪ್ಪ, ಪತ್ರಿಕಾ ಭವನದ ಸಿಬ್ಬಂದಿಗಳಾದ ಯಮುನಾ.ಕೆ.ಪಿ, ರಾಜೇಶ್‍ಬಿ.ಪಿ, ಸವಿತಾ ಜೆ.ಎ ಹಾಗೂ ಪುಟಾಣಿಗಳಾದ ತರುಣ್.ಬಿ.ಡಿ, ಚರಿತಾ ಜೆ.ಎ. ಜೀವನ್.ಜೆ.ಎಂ, ಅಹನ್ ವರ್ತಕರಾದ ರೆಹಮಾನ್, ಇನ್ನಿತತರು ಭಾಗವಹಿಸಿದ್ದರು.

Read More

ನಾಪೋಕ್ಲು ಜ.27  NEWS DESK :  ಕಕ್ಕಬ್ಬೆ ಕೇಂದ್ರ ವಿದ್ಯಾಸಂಸ್ಥೆಯಲ್ಲಿ ಸಂಸ್ಥೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಅಧ್ಯಕ್ಷರಾದ ಕೇಟೋಳಿರ ಪಿ. ಕುಟ್ಟಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳು ಉತ್ತಮ ಆದರ್ಶ ಹಾಗೂ ದೇಶಭಕ್ತಿಯನ್ನು ಬೆಳೆಸಿಕೊಳ್ಳಬೇಕು, ಗುರು ಹಿರಿಯರಿಗೆ ಗೌರವದೊಂದಿಗೆ ಶಿಸ್ತು ಬದ್ದ ಜೀವನವನ್ನು ಅಳವಡಿಸಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರು. ಶಾಲಾ ಮುಖ್ಯ ಶಿಕ್ಷಕ ಡಿ.ಅನಿಲ್ ರಾಜ್ ಹಾಗೂ ಶಿಕ್ಷಕಿ ಬಬಿತಾ, ಶಿಕ್ಷಕ ಶರತ್ ಮಾತನಾಡಿ, ದಿನದ ಮಹತ್ವದ ಬಗ್ಗೆ ತಿಳಿಹೇಳಿದರು. ಈ ಸಂದರ್ಭ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ವಿಜೇತರಾದ ವಿದ್ಯಾರ್ಥಿಗಳಿಗೆ ಅಧ್ಯಕ್ಷರಾದ ಕೇಟೋಳಿರ ಪಿ. ಕುಟ್ಟಪ್ಪ ಬಹುಮಾನ ವಿತರಿಸಿ ವಿಶುಭ ಹಾರೈಸಿದರು. ವರದಿ : ದುಗ್ಗಳ ಸದಾನಂದ.  

Read More

ಮಡಿಕೇರಿ ಜ.26 : ಕೊಡಗು ಜಿಲ್ಲಾಡಳಿತದ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 75ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಿ, ಪಥಸಂಚಲನ ವೀಕ್ಷಿಸಿ ಗೌರವ ವಂದನೆಯನ್ನು ಸ್ವೀಕರಿಸಿದರು. ನಂತರ ಸಂದೇಶ ನೀಡಿದ ಸಚಿವರು ಮಹಾತ್ಮ ಗಾಂಧೀಜಿಯವರ ರಾಮರಾಜ್ಯ, ಡಾ.ಬಿ.ಆರ್.ಅಂಬೇಡ್ಕರ್ ಅವರ ಕಲ್ಯಾಣ ರಾಜ್ಯದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿ ಮುನ್ನಡೆಸಲು ನುಡಿದಂತೆ ನಡೆಯಲಾಗುತ್ತಿದೆ ಎಂದರು. ಸಂವಿಧಾನಕ್ಕೆ ಬದ್ಧವಾಗಿ ಬದುಕುವ ಮನೋಭೂಮಿಕೆ ಇಂದಿನ ತುರ್ತು ಅನಿವಾರ್ಯತೆಯಾಗಿದೆ. ಆಗ ಮಾತ್ರವೇ ಸಂವಿಧಾನದ ಅತೀ ಶ್ರೇಷ್ಠ ಮೌಲ್ಯಗಳಾದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವಗಳಿಗೆ ನಿಜವಾದ ಅರ್ಥ ಬರುವುದು. ಭಾರತದ 75 ನೇ ಗಣರಾಜ್ಯೋತ್ಸವ ಸಮಾರಂಭವನ್ನು ನಾವೆಲ್ಲರೂ ಅಚರಿಸುತ್ತಿದ್ದೇವೆ. 1950 ರ ಜನವರಿ 26 ರಂದು ನಾವು ಮೊದಲ ಬಾರಿಗೆ ನಮ್ಮದೇ ಸಂವಿಧಾನವನ್ನು ಹೊಂದಿ ಭಾರತವೊಂದು ಸಾರ್ವಭೌಮ ಗಣರಾಜ್ಯವಾಗಿ ಹೊರಹೊಮ್ಮಿತು. ಏಕೆಂದರೆ 1950…

Read More

ಕುಶಾಲನಗರ ಜ.26 NEWS DESK :  ವಿದ್ಯಾರ್ಥಿಗಳು ತಮ್ಮ ದೈನಂದಿನ ಬದುಕಿನಲ್ಲಿ ನಾಯಕತ್ವ, ಧೈರ್ಯ, ವೃತ್ತಿಪರ ಜ್ಞಾನ, ನಿಷ್ಠೆ, ಸ್ವಯಂ ಶಿಸ್ತು ಮತ್ತು ಆತ್ಮವಿಶ್ವಾಸದೊಂದಿಗೆ ಸಂವಹನ ಕೌಶಲ್ಯಗಳನ್ನು ಮೈಗೂಡಿಸಿಕೊಂಡು ಭವಿಷ್ಯದ ನಾಯಕರಾಗಲು ತಯಾರಾಗಿ ಎಂದು ಕೂಡಿಗೆ ಸೈನಿಕ ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಅಮರ್ ಜೀತ್ ಸಿಂಗ್ ಹೇಳಿದರು. ಕೊಡಗು ಸೈನಿಕ ಶಾಲೆಯ ಜನರಲ್ ತಿಮ್ಮಯ್ಯ ಪೆರೇಡ್ ಮೈದಾನದಲ್ಲಿ 75ನೇ ಗಣರಾಜ್ಯೋತ್ಸವ ಹಾಗೂ ಶಾಲೆಯ 12ನೇ ತರಗತಿಯ ವಿದ್ಯಾರ್ಥಿಗಳ ಅಂತಿಮ ಪಥಸಂಚಲನ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು ಸೈನಿಕ ಶಾಲೆ ಕೊಡಗು ಭಾರತೀಯ ಸೇನೆಗೆ ಅಧಿಕಾರಿಯಲ್ಲಿರಬೇಕಾದ ಗುಣಗಳನ್ನು ವೃದ್ಧಿಸುವಲ್ಲಿ ಅವಿರತವಾಗಿ ಪ್ರಯತ್ನಿಸುತ್ತಿದೆ.ಇದರೊಂದಿಗೆ ವಿದ್ಯಾರ್ಥಿಗಳು ಕೊಡಗಿನ ಸ್ಥಳೀಯ ಸಂಸ್ಕೃತಿಯನ್ನು ಬೆಳೆಸುವ ಕಾರ್ಯಕ್ಕೆ ಮುಂದಾಗಬೇಕೆಂದು ತಿಳಿಸಿದರು. ಪ್ರತಿಯೊಬ್ಬ ವಿದ್ಯಾರ್ಥಿಯು ಭಾರತೀಯ ಸೇನೆಗೆ ಸೇರ್ಪಡೆಗೊಳ್ಳಲು ಬೇಕಾದ ಸಮಗ್ರ ಪೂರ್ವ ತಯಾರಿಯನ್ನು ಮಾಡಿಕೊಳ್ಳುವಂತೆ ಕರೆ ನೀಡಿದರು. ಶಾಲೆಯ ಅಶ್ವದಳದೊಂದಿಗೆ ಆಡಳಿತಾಧಿಕಾರಿಗಳಾದ ವಿಂಗ್ ಕಮಾಂಡರ್ ಪಿ.ಪ್ರಕಾಶ್ ಮುಖ್ಯ ಅತಿಥಿಗಳನ್ನು ಸ್ವಾಗತಿಸಿದರು. ಶಾಲೆಯಲ್ಲಿರುವ ಯುದ್ಧ ವೀರರ ಸ್ಮಾರಕಕ್ಕೆ ಪುಷ್ಪಗುಚ್ಛವನ್ನು ಅರ್ಪಿಸುವುದರ…

Read More