ಲೇಖಕ: admin

ಮಡಿಕೇರಿ ಜ.26 : ಸಂವಿಧಾನದ ವಿಧಿ 244 ಆರ್/ಡಬ್ಲ್ಯೂ 6 ಮತ್ತು 8 ನೇ ಶೆಡ್ಯೂಲ್ ಅಡಿಯಲ್ಲಿ ಕೊಡವ ಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ನೀಡಬೇಕೆಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಗಣರಾಜ್ಯೋತ್ಸವದ ದಿನವಾದ ಇಂದು ಮಡಿಕೇರಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿತು. ಕೊಡವ ಲ್ಯಾಂಡ್ ಪರ ಘೋಷಣೆಗಳನ್ನು ಕೂಗಿದ ಸಿಎನ್‍ಸಿ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಹಾಗೂ ಪ್ರಮುಖರು ವಿಶ್ವರಾಷ್ಟ್ರ ಸಂಸ್ಥೆಯ 217 ವಿಧಿಯಂತೆ ಪ್ರಾಚೀನ ಆದಿಮ ಸಂಜಾತ ಸೂಕ್ಷ್ಮತೀ ಸೂಕ್ಷ್ಮ ಕೊಡವರ ಸ್ವಯಂ-ನಿರ್ಣಯ ಹಕ್ಕುಗಳನ್ನು ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಗೌರವಿಸಬೇಕು ಮತ್ತು ಖಾತರಿಪಡಿಸಬೇಕು. ಕೊಡವರನ್ನು ಎಸ್‍ಟಿ ಪಟ್ಟಿಯಲ್ಲಿ ಸೇರಿಸಲು ಪೂರಕವಾಗಿ ಸಿಎನ್‍ಸಿಯ ಮೇಲ್ಮನವಿಯನ್ನು ಪರಿಗಣಿಸಿ ಕೊಡವರ ಸಮಗ್ರ ಕುಲಶಾಸ್ತ್ರ ಅಧ್ಯಯನವನ್ನು ನಡೆಸಲು ಹೈಕೋರ್ಟ್ ನೀಡಿರುವ ಆದೇಶವನ್ನು ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು. ಎನ್.ಯು.ನಾಚಪ್ಪ ಅವರು ಮಾತನಾಡಿ ಸಮಾನತೆಯ ಹಕ್ಕು, ಸ್ವಾತಂತ್ರ್ಯದ ಹಕ್ಕು, ಶೋಷಣೆಯ ವಿರುದ್ಧದ ಹಕ್ಕು, ಧಾರ್ಮಿಕ ಸ್ವಾತಂತ್ರ್ಯದ ಹಕ್ಕು, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಹಕ್ಕುಗಳು ಹಾಗೂ ಸಾಂವಿಧಾನಿಕ…

Read More

ಚೆಟ್ಟಳ್ಳಿ ಜ.26  NEWS DESK : ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 75ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಘದ ಆವರಣದಲ್ಲಿ ಸಂಘದ ಅಧ್ಯಕ್ಷ  ಬಲ್ಲಾರಂಡ ಮಣಿಉತ್ತಪ್ಪ  ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, ರಾಷ್ಟ್ರದ ಬಲವರ್ಧನೆಗೆ ಯುವಕರು ಹಾಗೂ ಮುಂದಿನ ಪೀಳಿಗೆಯವರು ಶಕ್ತಿ ಮೀರಿ ರಾಷ್ಟ್ರವನ್ನು ಒಗ್ಗೂಡಿಸುವ ಕೆಲಸವನ್ನು ಮಾಡಬೇಕು ಎಂದು ಕರೆಕೊಟ್ಟರು. ಸ್ವಾತಂತ್ರ್ಯ ಹೋರಾಟಗಾರರು ಮಾಡಿದ ಬಲಿದಾನವನ್ನು ನೆನೆಸಿಕೊಂಡರು. ಈ ಸಂದರ್ಭ ಸಂಘದ ಉಪಾಧ್ಯಕ್ಷ ಪೇರಿಯನ ಪೂಣಚ್ಚ, ಸಂಘದ ನಿರ್ದೇಶಕರುಗಳು ಹಾಗೂ ಸಂಘದ ಸಿಬ್ಬಂದಿಗಳು ಹಾಜರಿದ್ದರು.

Read More

ಮಡಿಕೇರಿ ಜ.26 NEWS DESK : ಬಹುನಿರೀಕ್ಷಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊಡಗು ಭೇಟಿ ನಿರಾಶೆ ಮೂಡಿಸಿದೆ, ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಯಾವುದೇ ಪರಿಹಾರದ ಭರವಸೆ ದೊರೆತ್ತಿಲ್ಲವೆಂದು ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಟೀಕಿಸಿದ್ದಾರೆ. ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡ ನಂತರ ಕೊಡಗು ಜಿಲ್ಲೆಗೆ ಮೊದಲ ಬಾರಿಗೆ ಭೇಟಿ ಮಾಡಿದ ಸಿದ್ದರಾಮಯ್ಯ ಅವರ ಬಗ್ಗೆ ಜನರಲ್ಲಿ ಹಲವು ನಿರೀಕ್ಷೆಗಳಿದ್ದವು. ಕಳೆದ ಹಲವು ವರ್ಷಗಳಿಂದ ಕೊಡಗನ್ನು ಕಾಡುತ್ತಿರುವ ಗಂಭೀರ ಸಮಸ್ಯೆಗಳಿಗೆ ಪರಿಹಾರದ ಭರವಸೆ ದೊರೆತ್ತಿಲ್ಲ. ಅಲ್ಲದೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಅಧಿಕೃತ ಘೋಷಣೆಯಾಗಿಲ್ಲ. ತಮ್ಮ ಸಂಪುಟದ ಸಚಿವರ ಜೊತೆಗೆ ಆಗಮಿಸಿದ ಮುಖ್ಯಮಂತ್ರಿಗಳು ಇದೊಂದು ಪ್ರವಾಸಿ ಭೇಟಿ ಎಂಬಂತೆ ನಡೆದುಕೊಂಡಿದ್ದಾರೆ, ಕೇವಲ ಮನೋರಂಜನಾ ಭಾಷಣ ಮಾಡಿ ಹೋಗಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಬಹಳಷ್ಟು ಸರ್ಕಾರಿ ಶಾಲೆಗಳು ಮುಚ್ಚಿವೆ, ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳ ಕೊರತೆಯಿಂದ ರೋಗಿಗಳು ಚಿಕಿತ್ಸೆಗಾಗಿ ಅಕ್ಕಪಕ್ಕದ ಜಿಲ್ಲೆಗೆ ಹೋಗಬೇಕಾಗಿದೆ. ಜಿಲ್ಲೆಯಲ್ಲಿ ಬಹಳಷ್ಟು ಸರ್ಕಾರಿ ಹುದ್ದೆಗಳು ಖಾಲಿ ಬಿದ್ದಿವೆ, ಇದನ್ನು…

Read More

ಮಡಿಕೇರಿ ಜ.26 NEWS DESK : ನೂತನ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ 75ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಯಿತು. ಈ ಸಂದರ್ಭ  ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಮಡಿಕೇರಿ ಉಪ ವಿಭಾಗದ ಉಪಾಧೀಕ್ಷಕರು, ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಹಾಗೂ ಜಿಲ್ಲಾ ಪೊಲೀಸ್ ಕಛೇರಿಯ ಲಿಪಿಕ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

Read More

ಮಡಿಕೇರಿ ಜ.26 NEWS DESK : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಸರ್ಕಾರದ ಮುಂದಿಟ್ಟಿರುವ ಕೊಡವ ಲ್ಯಾಂಡ್ ಬೇಡಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ “ಕೊಡಗು ಸೌಹಾರ್ದ ನಾಗರಿಕ ವೇದಿಕೆ” ಕೊಡಗಿನ ಬಹುಸಂಖ್ಯಾತ ಜನರ ಹಿತರಕ್ಷಣೆ ಮಾಡಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದೆ. ಮುಖ್ಯಮಂತ್ರಿಗಳು ಮಡಿಕೇರಿಗೆ ಭೇಟಿ ನೀಡಿದ ಸಂದರ್ಭ ನಾಗರಿಕ ವೇದಿಕೆಯ ಸಂಚಾಲಕ ಎಸ್.ಎಂ.ಚಂಗಪ್ಪ ಮತ್ತಿತರರು ಕೊಡವ ಲ್ಯಾಂಡ್ ರಚನೆಗೆ ಅವಕಾಶ ನೀಡಬಾರದು ಮತ್ತು ಈ ಕುರಿತು ಸರ್ಕಾರ ಕಾನೂನು ಹೋರಾಟ ನಡೆಸಬೇಕೆಂದು ಕೋರಿದರು. ಕ್ರಿ.ಶ.1956ರ ಹಿಂದೆ ಸಂವಿಧಾನದ 7ನೇ ಶೆಡ್ಯೂಲ್ ಪ್ರಕಾರ “ಸಿ” ರಾಜ್ಯವಾಗಿದ್ದ ಕೊಡಗು, ನಂತರ ಭಾಷಾವಾರು ಪ್ರಾಂತ್ಯಗಳ ರಚನೆಯ ಸಂದರ್ಭ ಮೈಸೂರು ರಾಜ್ಯ ರೂಪುಗೊಂಡಾಗ ಅದರ ಅವಿಭಾಜ್ಯ ಅಂಗವಾಗಿತ್ತು, ಈಗ ಕರ್ನಾಟಕ ರಾಜ್ಯದ 30 ಜಿಲ್ಲೆಗಳಲ್ಲಿ ಒಂದಾಗಿದೆ. ಕರ್ನಾಟಕದೊಳಗೆ ತನ್ನ ಸಾಂಸ್ಕೃತಿಕ ಬಹುತ್ವದ ಅನನ್ಯತೆಯನ್ನು ಹೊಂದಿರುವ ಕೊಡಗು ಜಿಲ್ಲೆಯ ಎಲ್ಲಾ ವರ್ಗದ ಜನರು ಅನ್ಯೋನತೆಯಿಂದ ಬಾಳುತ್ತಿದ್ದಾರೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಅನೇಕ ಸರ್ಕಾರಗಳು ಜಿಲ್ಲೆಯ…

Read More

ಮಡಿಕೇರಿ ಜ.26 NEWS DESK : ನಿವೇಶನ ರಹಿತರಿಗೆ ಆಶ್ರಯ ಯೋಜನೆಯಡಿ ಮನೆ ನಿರ್ಮಾಣ ಮಾಡಿಕೊಡಬೇಕು ಮತ್ತು ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿ ಮಡಿಕೇರಿ ನಗರಸಭಾ ಸದಸ್ಯ ಎಂ.ಕೆ.ಮನ್ಸೂರ್ ಆಲಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಮಡಿಕೇರಿಗೆ ಮುಖ್ಯಮಂತ್ರಿಗಳು ಆಗಮಿಸಿದ್ದ ಸಂದರ್ಭ ಭೇಟಿಯಾದ ಮನ್ಸೂರ್ ಆಲಿ, ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಸುಮಾರು 1800 ನಿವೇಶನ ರಹಿತರ ಅರ್ಜಿಗಳು ಬಾಕಿ ಉಳಿದಿವೆ ಎಂದರು. ಅರ್ಜಿ ಸಲ್ಲಿಸಿದವರು ಕಡುಬಡವರಾಗಿದ್ದು, ಇವರುಗಳಿಗೆ ನಗರಸಭಾ ವ್ಯಾಪ್ತಿಯಲ್ಲಿ ಜಾಗ ಮಂಜೂರು ಮಾಡಿ ಮನೆ ನಿರ್ಮಿಸಿಕೊಡಬೇಕು. ಅಲ್ಲದೆ ಪಡಿತರ ಚೀಟಿಯಲ್ಲಿ ತುಂಬಾ ಗೊಂದಲಗಳಿದ್ದು, ಸರ್ಕಾರದಿಂದ ತಕ್ಷಣ ಪಡಿತರ ತಿದ್ದುಪಡಿ ಮತ್ತು ಹೆಸರು ಸೇರ್ಪಡೆಗೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.

Read More

ಮಡಿಕೇರಿ ಜ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಿರುವ ಫಲಪುಷ್ಪ ಪ್ರದರ್ಶನವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಹಾಗೂ ಶಾಸಕ ಡಾ.ಮಂತರ್ ಗೌಡ ಅವರು ಶುಕ್ರವಾರ ಉದ್ಘಾಟಿಸಿದರು. ರಾಜಾಸೀಟು ಉದ್ಯಾನವನದಲ್ಲಿ ಪುಷ್ಪರಾಶಿಯಿಂದಲೇ ನಿರ್ಮಾಣವಾಗಿರುವ ಇಗ್ಗುತಪ್ಪ ದೇವಾಲಯ ಸೇರಿದಂತೆ ಹಲವು ಕಲಾ ಪ್ರಕಾರಗಳ ಫಲಪುಷ್ಪ ಪ್ರದರ್ಶನ ಆಕರ್ಷಣೀಯವಾಗಿದ್ದು, ನೋಡುಗರನ್ನು ಸೆಳೆಯುತ್ತಿವೆ ಎಂದು ಸಚಿವರು ಹೇಳಿದರು. ರಾಜಾಸೀಟನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಫಲಪುಷ್ಪ ಪ್ರದರ್ಶನ ವಿಭಿನ್ನ ಹಾಗೂ ವಿಶಿಷ್ಟವಾಗಿದ್ದು, ಪ್ರಕೃತಿ ಪ್ರಿಯರನ್ನು ತನ್ನೆಡೆಗೆ ಸೆಳೆಯುತ್ತಿದೆ ಎಂದರು. ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಶಾಸಕರ ಜೊತೆಗೂಡಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮಾಹಿತಿ ವಿನಿಮಯ ಮಾಡಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಚಿವರು ತಿಳಿಸಿದರು. ಶಾಸಕ ಡಾ|| ಮಂತರ್ ಗೌಡ ಮಾತನಾಡಿ ಬಣ್ಣ ಬಣ್ಣದ ಚಿತ್ತಾರದ ಹೂವುಗಳು ನೋಡುಗರನ್ನು ಚಕಿತಗೊಳಿಸುತ್ತಿದ್ದು, ರಾಜಾಸೀಟು ಉದ್ಯಾನವನದಲ್ಲಿ ನಿರಂತರವಾಗಿ ಪುಷ್ಪ…

Read More

ಮಡಿಕೇರಿ ಜ.26 : ಸಂವಿಧಾನ ದಿನಾಚರಣೆ ಪ್ರಯುಕ್ತ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು  ಜಾಗೃತಿ ಅಭಿಯಾನದ ಸ್ತಬ್ಧಚಿತ್ರಕ್ಕೆ ಚಾಲನೆ ನೀಡಿದರು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಲನೆ ನೀಡಿ ಮಾತನಾಡಿದ ಸಂವಿಧಾನದ ಮಹತ್ವ ತಿಳಿಯುವ ನಿಟ್ಟಿನಲ್ಲಿ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು. ಜಿಲ್ಲೆಯ 103 ಗ್ರಾಮ ಪಂಚಾಯಿತಿಗಳಲ್ಲಿ 22 ದಿನಗಳ ಕಾಲ ಸಂವಿಧಾನ ಜಾಗೃತಿ ಜಾಥ ಅಭಿಯಾನ ನಡೆಯಲಿದ್ದು, ಶಾಲಾ-ಕಾಲೇಜುಗಳು ಸೇರಿದಂತೆ ಜಿಲ್ಲೆಯ ವಿವಿಧ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳು ಕೈಜೋಡಿಸುವಂತೆ ಕೋರಿದರು. ಗ್ರಾ.ಪಂ.ವ್ಯಾಪ್ತಿಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ಸಿಗೆ ಸಹಕರಿಸುವಂತೆ ಮನವಿ ಮಾಡಿದರು. ‘ಭಾರತ ಸಂವಿಧಾನ ಪೀಠಿಕೆ, ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿಕಲ್ಪನೆ ಸಾಮಾಜಿಕ ನ್ಯಾಯ, ಆರ್ಥಿಕ, ಮತ್ತು ರಾಜಕೀಯ ಪರಿಕಲ್ಪನೆ, ಬಸವಣ್ಣನವರ ವಚನಗಳು, ಭಾರತದ ಸಂವಿಧಾನದಲ್ಲಿ ವಚನಗಳ ಪ್ರಸ್ತುತತೆ, ಜಿಲ್ಲೆಯ ಸ್ಥಳೀಯ ಐತಿಹಾಸಿಕ ವ್ಯಕ್ತಿಗಳು, ಸಾಹಿತ್ಯ ದಿಗ್ಗಜರು ಸೇರಿದಂತೆ ಪ್ರಮುಖ ವ್ಯಕ್ತಿಗಳು ಮತ್ತು ಸ್ಥಳೀಯ ಕಲೆ ಮತ್ತು…

Read More

ವಿರಾಜಪೇಟೆ ಜ.26  NEWS DESK : ವಿರಾಜಪೇಟೆಯ ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ. ಫಾ. ಐಸಾಕ್ ರತ್ನಾಕರ್ ದ್ವಜಾರೋಹಣ  ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು. ಗಣರಾಜ್ಯೋತ್ಸವದ ಸಂದೇಶ ನೀಡಿದ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ರೆ. ಫಾ. ಮದಲೈ ಮುತ್ತು  ಮಾತನಾಡಿ, ನಮ್ಮ ಸಂವಿಧಾನವು ನಮ್ಮ ಹೆಮ್ಮೆಯಾಗಿದ್ದು, ಅದನ್ನು ವಿವಿಧ ರಾಷ್ಟ್ರಗಳ ಅಲಿಖಿತ ಸಂವಿಧಾನವನ್ನು ಪರಿಶೀಲಿಸಿ ರಚಿಸಲಾಗಿದೆ. ಭಾರತವು ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರವೂ ಆಗಿದೆ. ಸಂವಿಧಾನದ ಆಶಯವನ್ನು ಪ್ರತಿಯೊಬ್ಬರು ಗೌರವಿಸಬೇಕು. ವೈವಿಧ್ಯತೆಯಲ್ಲಿ ಏಕತೆಯನ್ನು ಮೂಡಿಸಬೇಕು ಎಂದರು. ಪ್ರಸ್ತುತದಲ್ಲಿ ಇರುವ ಜಾತೀಯತೆ, ಮತಾಂಧತೆ ಮುಂತಾದವು ಆತಂಕಕಾರಿಯಾಗಿದ್ದು, ನಾವೆಲ್ಲರೂ ಸಮಾನರು ಎಂಬ ತತ್ವ ಪಾಲಿಸಬೇಕಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪದವಿ ಪ್ರಾಂಶುಪಾಲೆ ತೃಪ್ತಿ, ಮುಖ್ಯೋಪಾಧ್ಯಾಯರಾದ ಬೆನ್ನಿ ಜೋಸೆಫ್, ಸಿಸ್ಟರ್ ರೋಸಿ, ಸಿಸ್ಟರ್ ಐಡಾ, ಉಪನ್ಯಾಸಕರು ಶಿಕ್ಷಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಿಕ್ಷಕ ಗಂಗಾಧರ್ ನಿರೂಪಿಸಿ, ಉಪನ್ಯಾಸಕಿ ಅಶ್ವಿನಿ ಸ್ವಾಗತಿಸಿ, ಶಿಕ್ಷಕಿ ದಿವ್ಯ ವಂದಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ…

Read More

ಮಡಿಕೇರಿ, ಜ.26 NEWS DESK : ಆನೆಗಳಿಗೆ ಮೇವು ಹಾಗೂ ನೀರನ್ನು ಕಾಡಿನಲ್ಲಿಯೇ ಒದಗಿಸಿಕೊಡಲು ಅರಣ್ಯ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ. ಇದರಿಂದಾಗಿ ಆನೆಗಳು ಹೊರಬರುವುದು ಕಡಿಮೆಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿ ರೈಲ್ವೆ ತಡೆಗೋಡೆ ನಿರ್ಮಾಣಕ್ಕೆ 600 ಕೋಟಿ ರೂ.ಗಳನ್ನು ಮೀಸಲಿಡಲಾಗಿತ್ತು. ಪೂರ್ಣವಾಗಿ ತಡೆಗೋಡೆ ನಿರ್ಮಾಣವಾದರೆ ಆನೆ ಮಾನವ ಸಂಘರ್ಷ ತಪ್ಪಿಸಬಹುದು. ತಡೆಗೋಡೆ ನಿರ್ಮಾಣವಾದರೆ ನಿಂತುಹೋಗಲಿದೆ ಎಂದರು. *ಜನರ ಸಮಸ್ಯೆಗಳಿಗೆ ನ್ಯಾಯ ಕೊಡಿಸುವುದು ಬಹಳ ಮುಖ್ಯ :: ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯನ್ನು . ಕರ್ನಾಟಕ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮದ ವತಿಯಿಂದ 12 ಕೋಟಿ ರೂ.ಗಳ ವೆಚ್ಚದಲ್ಲಿ ಕಚೇರಿ ಕೊಡಗಿನ ಸಂಪ್ರದಾಯದಂತೆ ನಿರ್ಮಾಣವಾಗಿದೆ . ಕಚೇರಿ ಮುಖ್ಯವಲ್ಲ ಜನರ ಸಮಸ್ಯೆಗಳಿಗೆ ನ್ಯಾಯ ಕೊಡಿಸುವುದು ಬಹಳ ಮುಖ್ಯ ಎಂದರು. ರಾಜ್ಯದಲ್ಲಿ ವಸತಿ ಗೃಹಗಳ ಕೊರತೆ ಇದ್ದು ಈ ನಿಟ್ಟಿನಲ್ಲಿ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ಗಮನ…

Read More