ಲೇಖಕ: admin

ಮಡಿಕೇರಿ ಮಾ.1 NEWS DESK :  ಮಕ್ಕಳಿಗೆ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುವುದು ಅಪರಾಧ. ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಕೂಡದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಟರಾಜ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಹಾಗೂ ಜಿಲ್ಲಾ ಮಹಿಳಾ ಸಹಾಯವಾಣಿಯ ಸಹಯೋಗದೊಂದಿಗೆ 2023-24ನೇ ಸಾಲಿನ ಮಿಶನ್ ಶಕ್ತಿ ಯೋಜನೆಯಯಡಿ “ಬೇಟಿ ಬಚವೊ-ಬೇಟಿ ಪಡಾವೊ” ಜಿಲ್ಲಾ ಮಟ್ಟದ ಕಾರ್ಯಕ್ರಮದ ಅಂಗವಾಗಿ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನಡೆದ “ಸಮಗ್ರ ಲೈಂಗಿಕ ಶಿಕ್ಷಣದ ವಿಶೇಷ ಕಾರ್ಯಗಾರ” ಹಾಗೂ “ಮಹಿಳಾ ಸಾಧಕಿಯರ ಪ್ರೇರಾಣಾ ತುಣುಕು” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗರ್ಭದಲ್ಲಿರುವ ಮಗುವಿಗೆ ಬದುಕುವ ಹಕ್ಕಿದೆ. ಮಕ್ಕಳ ರಕ್ಷಣೆ, ಬಾಲ್ಯವಿವಾಹ, ಹೆಣ್ಣು ಭ್ರೂಣ ಹತ್ಯೆ, ಗರ್ಭದಲ್ಲಿರುವ ಮಗುವಿಗೆ ಸಾಮಾಜಿಕ ಧೋರಣೆ, ಮಕ್ಕಳಿಗೆ…

Read More

ಮಡಿಕೇರಿ ಮಾ.1 NEWS DESK :  ಪಲ್ಸ್ ಪೊಲಿಯೊ ಕಾರ್ಯಕ್ರಮ ಸಂಬಂದಿಸಿದಂತೆ ಕೊಡಗು ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳ ಒಟ್ಟು 36,595 ಗುರುತಿಸಿದ್ದು, ಇದರಲ್ಲಿ ಗ್ರಾಮೀಣ ಪ್ರದೇಶದಲ್ಲಿ 32,261 ಮಕ್ಕಳು ಹಾಗು ನಗರ ಪ್ರದೇಶದಲ್ಲಿ 4,334 ಮಕ್ಕಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ತಿಳಿಸಿದ್ದಾರೆ. ಒಟ್ಟು ಜನಸಂಖ್ಯೆಯಲ್ಲಿ 890 ವಲಸೆ ಪ್ರದೇಶಗಳನ್ನು ಗುರುತಿಸಿದ್ದು, ಒಟ್ಟು ವಲಸಿಗರ ಜನಸಂಖ್ಯೆ 24,021 ಇದ್ದು, ಇವರಲ್ಲಿ 0-5 ವರ್ಷದೊಳಗಿನ ಒಟ್ಟು 3143 ಮಕ್ಕಳನ್ನು ಗುರುತಿಸಲಾಗಿದೆ. ಸ್ಥಿರ ವಾಸಿತ ವಲಸಿಗರ 350 ಪ್ರದೇಶಗಳನ್ನು ಗುರುತಿಸಲಾಗಿದ್ದು, ಒಟ್ಟು ಜನಸಂಖ್ಯೆ 2,66,770 ಇದ್ದು, ಇವರಲ್ಲಿ 0-5 ವರ್ಷದೊಳಗಿನ 14,460 ಮಕ್ಕಳನ್ನು ಗುರುತಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 464 ಬೂತ್‍ಗಳನ್ನು ತೆರೆಯಲಾಗುತ್ತಿದ್ದು, ಜನಸಂದಣಿ ಇರುವ ಪ್ರದೇಶ ಮತ್ತು ಬಸ್ ನಿಲ್ದಾಣಗಳು ಹಾಗೂ ಪ್ರವಾಸಿ ಕೇಂದ್ರಗಳನ್ನು ಗುರಿಯಾಗಿಸಿ 31 ಟ್ರಾನ್ಸಿಟ್ ಬೂತ್‍ಗಳನ್ನು ತೆರೆಯಲಾಗುವುದು. ಮಡಿಕೇರಿ ತಾಲ್ಲೂಕಿನಲ್ಲಿ 01 ಸಂಚಾರಿ ತಂಡದ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಾದ್ಯಂತ ಲಸಿಕಾ ಬೂತ್‍ಗಳಲ್ಲಿ…

Read More

ಮಡಿಕೇರಿ ಮಾ.1 : ಭಾರತೀಯ ಜನತಾ ಪಾರ್ಟಿಯ ಮಡಿಕೇರಿ ನಗರ ಮಂಡಲಕ್ಕೆ ಪಕ್ಷದ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ಅನುಮೋದನೆಯೊಂದಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಉಪಾಧ್ಯಕ್ಷರುಗಳಾಗಿ ಬಿ.ಎಸ್.ಪ್ರಶಾಂತ್, ತಾತಪಂಡ ಉತ್ತಪ್ಪ (ನಂದ), ರಜೀ, ಬಿ.ಪಿ.ಡಿಶು, ಪಿ.ಕಲಾವತಿ, ಜಿ.ಆರ್.ಸುದರ್ಶನ್(ಗಣೇಶ್), ಕಾರ್ಯದರ್ಶಿಗಳಾಗಿ ಪ್ರೇಮ ರಾಘವಯ್ಯ, ಸಿ.ಕೆ.ಪ್ರಭಾಕರ್, ಬಿ.ಎಂ.ಹರೀಶ್, ಲಕ್ಷ್ಮಿ ಕುಟ್ಟಪ್ಪ, ಕೀರ್ತಿ ರಾಜು, ವೈಭವಿ ಸಂದೀಪ್ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ನಗರ ಮಂಡಲದ ಅಧ್ಯಕ್ಷ ಉಮೇಶ್ ಸುಬ್ರಮಣಿ ತಿಳಿಸಿದ್ದಾರೆ. ಖಜಾಂಚಿಯಾಗಿ ಜಯಂತ್ ಪೂಜಾರಿ, ಕಾರ್ಯಾಲಯ ಕಾರ್ಯದರ್ಶಿಯಾಗಿ ಟಿ.ಆರ್.ಜೀವನ್, ಯುವ ಮೋರ್ಚಾದ ಅಧ್ಯಕ್ಷರಾಗಿ ಪಾಂಡೀರ ಪೂಣಚ್ಚ, ಮಹಿಳಾ ಮೋರ್ಚಾದ ಅಧ್ಯಕ್ಷರಾಗಿ ಸೌಮ್ಯ ಸುನೀಲ್, ಹಿಂದುಳಿದ ವರ್ಗದ ಅಧ್ಯಕ್ಷರಾಗಿ ಗಜೇಂದ್ರ (ಕುಶ), ಎಸ್.ಸಿ.ಮೋರ್ಚಾದ ಅಧ್ಯಕ್ಷರಾಗಿ ಹೆಚ್.ಜಿ.ಮುಕುಂದ, ರೈತ ಮೋರ್ಚಾದ ಅಧ್ಯಕ್ಷರಾಗಿ ಎಂ.ನಯನ್ ಕುಮಾರ್ ಹಾಗೂ ಎಸ್.ಟಿ.ಮೋರ್ಚಾದ ಅಧ್ಯಕ್ಷರಾಗಿ ಕೆ.ಎ.ಕುಡಿಯರ ಸೋಮಯ್ಯ ನೇಮಕಗೊಂಡಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Read More

ಮಡಿಕೇರಿ ಮಾ.1 NEWS DESK :  ಅರಣ್ಯ ಇಲಾಖೆಯ ಅಧಿಕಾರಿಗಳು ಮರ ಕಡಿತಲೆ ಸೇರಿದಂತೆ ಇತರೆ ಕಡತಗಳನ್ನು ವಿಲೇವಾರಿ ಮಾಡಲು ವಿಳಂಬ ಧೋರಣೆ ತೋರುತ್ತಿದ್ದಾರೆ ಎಂದು ಆರೋಪಿಸಿರುವ ಕೊಡಗು ಜಿಲ್ಲಾ ಭೂ ಮಾಲೀಕರ ಮತ್ತು ಮರ ವ್ಯಾಪಾರಿಗಳ ಸಂಘದ ಅಧ್ಯಕ್ಷ ಅರವಿಂದ್ ಕುಟ್ಟಪ್ಪ, ಈ ಬಗ್ಗೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಗಮನ ಹರಿಸಬೇಕು ಎಂದು ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸರ್ವೆ ಕಾರ್ಯ, ಕಂದಾಯ ನಿಗಧಿ, ಮರಕಡಿತಲೆಗೆ ಆದೇಶ ಸೇರಿದಂತೆ ಇತರೆ ಕೆಲಸ ಕಾರ್ಯದಲ್ಲಿ ವಿಳಂಬ ಧೋರಣೆ ಕಂಡು ಬರುತ್ತಿದೆ. ಈ ಬಗ್ಗೆ ನಮ್ಮ ಸಂಘಕ್ಕೆ ಅನೇಕ ದೂರುಗಳು ಬಂದಿವೆ, ಅರಣ್ಯ ಇಲಾಖೆಯ ಅಧಿಕಾರಿಗಳ ಭೇಟಿಗೂ ಅವಕಾಶ ಇಲ್ಲದಾಗಿದೆ. ಇದೆಲ್ಲವೂ ಭೂ ಮಾಲೀಕರು ಹಾಗೂ ಮರ ವ್ಯಾಪಾರಿಗಳಿಗೆ ಸಮಸ್ಯೆಯಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಗಮನ ಹರಿಸಬೇಕು. ಕಡತಗಳನ್ನು ಶೀಘ್ರ ಪರಿಶೀಲನೆ ಮಾಡಬೇಕು ಮತ್ತು ಪ್ರಕ್ರಿಯೆಗಳನ್ನು ಸರಳೀಕರಣಗೊಳಿಸಬೇಕು ಎಂದು ಒತ್ತಾಯಿಸಿದರು. ಸಂಘದ ಉಪಾಧ್ಯಕ್ಷ ಕೆ.ಎ.ಆದಂ…

Read More

ಮಡಿಕೇರಿ ಮಾ.1 NEWS DESK :  ಕರ್ನಾಟಕದಲ್ಲಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ಎಲ್ಲಾ ರಂಗದಲ್ಲೂ ವಿಫಲವಾಗಿದ್ದು, ರೈತರು ಹಾಗೂ ಪರಿಶಿಷ್ಟರನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬರಗಾಲ ಆವರಿಸಿದ್ದರೂ ಸರ್ಕಾರ ಬರಪರಿಹಾರ ಕಾರ್ಯವನ್ನು ಕೈಗೊಂಡಿಲ್ಲ. ಪರಿಶಿಷ್ಟ ಸಮುದಾಯದ ಬಗ್ಗೆ ಕೇವಲ ಮಾತಿನಲ್ಲಿ ಮಾತ್ರ ಕಾಳಜಿಯನ್ನು ತೋರಿ, ಎಲ್ಲಾ ಹಂತದಲ್ಲೂ ವಂಚಿಸುತ್ತಾ ಬಂದಿದೆ. ಪರಿಶಿಷ್ಟರಿಗಾಗಿ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಲಾಗಿದೆ ಎಂದು ಆರೋಪಿಸಿದರು. ಸಮಾಜ ಕಲ್ಯಾಣ ಸಚಿವರು ಕಾಂಗ್ರೆಸ್ ಪಕ್ಷದ ಹಿತವನ್ನು ಕಾಪಾಡಿಕೊಳ್ಳಲು ಮಾತ್ರ ದಲಿತ ಸಮುದಾಯವನ್ನು ಬಳಸಿಕೊಳ್ಳುತ್ತಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿ ಇಲಾಖೆಗಳ ಅನುದಾನವನ್ನು ವಿದ್ಯಾರ್ಥಿಗಳಿಗೆ ಹಾಗೂ ಅರ್ಹ ಫಲಾನುಭವಿಗಳಿಗೆ ಬಳಸದೆ ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸುವ ಮೂಲಕ ಪರಿಶಿಷ್ಟರನ್ನು ಬಲಿಪಶು ಮಾಡಲಾಗುತ್ತಿದೆ ಎಂದು ಟೀಕಿಸಿದರು. ನೂರಾರು ವರ್ಷಗಳಿಂದ ಕೊಡಗಿನ ದೇವಲಗಳು, ಐನ್ ಮನೆಗಳು ಹಾಗೂ ಮಠಗಳಲ್ಲಿ ಸಾಂಪ್ರದಾಯಿಕವಾಗಿ ವನ್ಯಜೀವಿಗಳ ಉತ್ಪನ್ನಗಳನ್ನು…

Read More

ಮಡಿಕೇರಿ ಮಾ.1 NEWS DESK : ಮಡಿಕೇರಿಯ ಸುಬ್ರಹ್ಮಣ್ಯ ನಗರ  ಕೊಡಗು ಜಿಲ್ಲಾ ಸಾಮಾಜಿಕ ಸಾಂಸ್ಕೃತಿಕ ಮತ್ತು ಧರ್ಮದಾನಿಯ ಸಂಸ್ಥೆ ವತಿಯಿಂದ ಕೊಟ್ಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ನೋಟು ಪುಸ್ತಕ ಮತ್ತು  ಶೈಕ್ಷಣಿಕ ಸಾಮಾಗ್ರಿಗಳನ್ನುಉಚಿತವಾಗಿ ನೀಡಲಾಯಿತು. ಈ ಸಂದರ್ಭ ಸಂಸ್ಥೆಯ ಅಧ್ಯಕ್ಷ ಅರೆಯಡ ರಮೇಶ್, ಉಪಾಧ್ಯಕ್ಷ ಕೇಕಡ ಕಿರಣ್ ಮುತ್ತಣ್ಣ, ಖಜಾಂಜಿ ಮುಂಡಂಡ ಸುಬ್ರಮಣಿ, ನಿರ್ದೇಶಕರಾದ ಬೊಪ್ಪಂಡ ಸರಳ ಕರುಂಬಯ್ಯ, ನಾಟೋಳಂಡ ಕಾವೇರಪ್ಪ ಹಾಗೂ ಪಾಡೆಯಂಡ ವಸಂತಿ, ಶಿಕ್ಷಕರಾದ ಬಿ.ಡಿ.ವನಮಾಲ, ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಎಂ.ಪಿ.ಮೀನಾಕ್ಷ್ಮಿ ಸ್ವಾಗತಿಸಿದರು. ಶಿಕ್ಷಕಿ ಬಿ.ಡಿ.ವನಮಾಲ ವಂದಿಸಿದರು.

Read More

ಕಡಂಗ ಮಾ.1 NEWS DESK :  ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡಲು ಎಲ್ಲರೂ ಪಣ ತೊಡಬೇಕು ಎಂದು ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ನರಿಯಂದಡ ಗ್ರಾ.ಪಂ ವ್ಯಾಪ್ತಿಯ ಪೊದವಾಡ ಗ್ರಾಮದಲ್ಲಿ 8ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸ್ವಚ್ಛ ಸಂಕಿರ್ಣ ಘಟಕ ಸ್ಥಾಪನೆಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಘನತ್ಯಾಜ್ಯ ನಿವಾರಣೆ ಎಂಬುವುದು ಪಂಚಾಯಿತಿಗಳ ಮುಂದೆ ಇರುವ ಬಹಳ ದೊಡ್ಡ ಜವಾಬ್ದಾರಿಯಾಗಿದೆ. ಜಿಲ್ಲೆಗೆ ಅಪಾಯಕಾರಿ ಆದಂತಹ ಪರಿಸ್ಥಿತಿ ಉದ್ಭವಕ್ಕೆ ಘನತ್ಯಾಜ್ಯ ನಿವಾರಣೆಯಲ್ಲಿ ಆಡಳಿತ ವೈಫಲ್ಯವೇ ಮುಖ್ಯ ಕಾರಣ. ಅದನ್ನು ನಿವಾರಿಸಲು ರಸ್ತೆ ಬದಿಗಳಲ್ಲಿರುವ ತ್ಯಾಜ್ಯಗಳನ್ನು ಸ್ವಚ್ಛಗೊಳಿಸಿ ಉತ್ತಮ ಪರಿಸರ ನಿರ್ಮಾಣಮಾಡಿ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಬೇಕಾಗಿದೆ ಎಂದರು. ಇದೇ ಸಂದರ್ಭ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು. ಪೂಜಾ ಕೈಂಕರ್ಯಗಳನ್ನು ಅರ್ಚಕರಾದ ಕೀರ್ತಿಸ್ ನೆರವೇರಿಸಿದರು. ಈ ಸಂದರ್ಭ  ಕಾಂಗ್ರೆಸ್  ಜಿಲ್ಲಾಧ್ಯಕ್ಷ  ತಿತೀರ ಧರ್ಮಜ ಉತ್ತಪ್ಪ, ನರಿಯಂದಡ ಗ್ರಾ.ಪಂ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ, ಉಪಾಧ್ಯಕ್ಷ…

Read More

ಮಡಿಕೇರಿ ಮಾ.1 NEWS DESK :  ಸುಂಟಿಕೊಪ್ಪದ ಎಸ್‍ಎಂಎಸ್ ಶಿಕ್ಷಣ ಸಂಸ್ಥೆಯಲ್ಲಿ ಶರಫಿ ಪದವಿ ಪಡೆದು ಉನ್ನತ ವಿದ್ಯಾಭ್ಯಾಸಕ್ಕೆ ತೆರಳುತ್ತಿರುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಸಯ್ಯದ್ ಮುಹಮ್ಮದ್ ಅಲಿ ಶಿಹಾಬ್ ತಂಗಳ್ ಶಿಕ್ಷಣ ಸಂಸ್ಥೆಯಲ್ಲಿ 6 ವರ್ಷಗಳ ಕಾಲ ಧಾರ್ಮಿಕ ಹಾಗೂ ಲೌಕಿಕ ಶಿಕ್ಷಣವನ್ನು ಪೂರ್ಣಗೊಳಿಸಿ ಶರಫಿ ಪದವಿಯನ್ನು ಪಡೆದು ಉನ್ನತ ಶಿಕ್ಷಣಕ್ಕಾಗಿ ದಕ್ಷಿಣ ಏಷ್ಯದ ಪ್ರಖ್ಯಾತ ಶಿಕ್ಷಣ ಸಂಸ್ಥೆಯಾದ ಜಾಮಿಯಾ ನುರಿಯ ಅರಬಿಕ್ ಕಾಲೇಜ್ ಗೆ ತೆರಳುತ್ತಿರುವ ವಿದ್ಯಾರ್ಥಿಗಳನ್ನು ಎಸ್‍ಎಂಎಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಪೋಷಕರು ಸಂಭ್ರಮದಿಂದ ಅದ್ದೂರಿಯಾಗಿ ಬೀಳ್ಕೊಟ್ಟರು. ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿ ಸಿ.ಎಂ.ಅಬ್ದುಲ್ ಹಮೀದ್ ಮೌಲವಿ ಕೊಡಗು ಜಿಲ್ಲೆಯ ಮುಸ್ಲಿಂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮತ್ತು ಸುಧಾರಣೆಯನ್ನು ಗುರಿಯಾಗಿಸಿ 2016ರಲ್ಲಿ ಈ ಶಿಕ್ಷಣ ಸಂಸ್ಥೆಯನ್ನು ಆರಂಭಿಸಲಾಯಿತು. ಆರ್ಥಿಕ ಸಮಸ್ಯೆಯಿಂದ ಶಿಕ್ಷಣದಿಂದ ವಂಚಿತರಾಗುತ್ತಿರುವ ಬಡ ಮಕ್ಕಳಿಗೆ ಉತ್ತಮ ಹಾಗೂ ಉನ್ನತ ಶಿಕ್ಷಣವನ್ನು ಸಂಪೂರ್ಣವಾಗಿ ಉಚಿತವಾಗಿ ನೀಡುವ ಮೂಲಕ ಸಂಸ್ಥೆ ಶ್ರೇಷ್ಠವಾದ ಕೊಡುಗೆಯನ್ನು…

Read More

ಮಡಿಕೇರಿ ಮಾ.1 NEWS DESK : ಸಕಾಲದಲ್ಲಿ ವೇತನ ಪಾವತಿಸುವಂತೆ ಒತ್ತಾಯಿಸಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು. ತರಗತಿ ಬಹಿಷ್ಕರಿಸಿ ಕಾಲೇಜ್ ನ ಎದುರು ಮೌನ ಪ್ರತಿಭಟನೆ ನಡೆಸಿದ ಉಪನ್ಯಾಸಕರು, ವೇತನ ಪಾವತಿಸುವವರೆಗೆ ತರಗತಿಗೆ ತೆರಳುವುದಿಲ್ಲ ಎಂದು ಪಟ್ಟು ಹಿಡಿದರು. ಅತಿಥಿ ಉಪನ್ಯಾಸಕ ಡಾ.ಸೋಮಣ್ಣ ಮಾತನಾಡಿ, ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ 43 ಉಪನ್ಯಾಸಕರಿಗೆ ಕಳೆದ 5 ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಕೋವಿಡ್ ಸಂದರ್ಭದಲ್ಲಿ ಮೂರು ತಿಂಗಳ ವೇತನ ಖಡಿತಗೊಳಿಸಲಾಗಿದೆ. ಆ ವೇತನ ಸೇರಿ ಒಟ್ಟು ಎಂಟು ತಿಂಗಳ ವೇತನವನ್ನು ತಕ್ಷಣ ನೀಡಬೇಕೆಂದು ಆಗ್ರಹಿಸಿದ ಅವರು, ಅಲ್ಲಿಯವರೆಗೆ ತರಗತಿ ಬಹಿಷ್ಕರಿಸಿ ಪ್ರತಿಭಟನೆ ಮುಂದುವರೆಸುವುದಾಗಿ ಎಚ್ಚರಿಕೆ ನೀಡಿದರು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ನಡೆಸಿ ಮೌಲ್ಯಮಾಪನ ಕೂಡ ಮಾಡಲಾಗಿದೆ. ಪರೀಕ್ಷಾ ಮೇಲ್ವಿಚರಣಾ ಕಾರ್ಯವನ್ನು ಸುಸೂತ್ರವಾಗಿ ನಡೆಸಲಾಗಿದೆ. ಪ್ರತಿ ತಿಂಗಳು ಸರಿಯಾದ ಸಮಯದಲ್ಲಿ ವೇತನ ಪಾವತಿ ಮಾಡುವಂತೆ ಮಂಗಳೂರು…

Read More

ಮಡಿಕೇರಿ ಮಾ.1 NEWS DESK : ಭಾರತೀಯ ಜನತಾ ಪಾರ್ಟಿಯ ವಿರಾಜಪೇಟೆ ಮಂಡಲದ ವಕ್ತಾರರನ್ನಾಗಿ ಕಿರುಗೂರಿನ ಚೆಪ್ಪುಡಿರ ರಾಕೇಶ್ ದೇವಯ್ಯ ಅವರನ್ನು ಆಯ್ಕೆ ಮಾಡಿರುವುದಾಗಿ ಮಂಡಲದ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ ತಿಳಿಸಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ಅನುಮೋದನೆಯೊಂದಿಗೆ ರಾಕೇಶ್ ದೇವಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ವಿರಾಜಪೇಟೆಯಲ್ಲಿ ಪಕ್ಷದ ಬಲವನ್ನು ಮತ್ತಷ್ಟು ಹೆಚ್ಚಿಸಲು ಸಂಘಟನಾತ್ಮಕ ಚಟುವಟಿಕೆಯನ್ನು ಮತ್ತಷ್ಟು ಚುರುಕುಗೊಳಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Read More