ಲೇಖಕ: admin

ಮಡಿಕೇರಿ ಮಾ.2 NEWS DESK :  ಜಿಲ್ಲೆಯಲ್ಲಿ ಮಾ.3 ರಿಂದ 6 ರವರೆಗೆ ‘ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ 2023-24’ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದ ಉದ್ಘಾಟನೆ  ಮಾ.3 ರಂದು ಬೆಳಗ್ಗೆ 8 ಗಂಟೆಗೆ ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಕ್ಕಳ ಲಸಿಕಾ ವಿಭಾಗದಲ್ಲಿ(ಜಿಲ್ಲಾಸ್ಪತ್ರೆ) ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್  ತಿಳಿಸಿದ್ದಾರೆ.

Read More

ಮಡಿಕೇರಿ ಫೆ.29 NEWS DESK : ಮದೆನಾಡು ಬಿಜಿಎಸ್ ವಿದ್ಯಾಸಂಸ್ಥೆಯ 2ನೇ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು. ಮೈಸೂರು ಹಾಗೂ ಕೊಡಗು ಆದಿಚುಂಚನಗಿರಿ ಮಠದ ಮುಖ್ಯಸ್ಥರಾದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ  ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ ಪ್ರತಿಯೊಂದು ಮಗುವಿನ ಜ್ಞಾನಾರ್ಜನೆಗೆ ಶಾಲೆಗಳು ಅವಶ್ಯವಾಗಿದ್ದು, ಶಾಲೆಯನ್ನು ಉಳಿಸಿ ಬೆಳಿಸಿ ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ  ಕೊಡಗು ಜಿಲ್ಲಾ ಉಪವಿಭಾಗಾಧಿಕಾರಿಯಾಗಿ ವಿನಾಯಕ್ ನರ್ವಾಡೆ ಮಾತನಾಡಿ ಪೋಷಕರು ಮಕ್ಕಳಲ್ಲಿ ಉತ್ತಮ ಹವ್ಯಾಸವನ್ನು ಕಲಿಸುವ ಮೂಲಕ ಮಾನಸಿಕ ಸದೃಢತೆಯನ್ನು ಬೆಳೆಸಬೇಕು ಎಂದರು. ವಿದ್ಯಾಸಂಸ್ಥೆ ಆಡಳಿತ ಅಧಿಕಾರಿ ಹೆಚ್.ಎನ್.ಸುಧಾಕರ್, ಸಿದ್ದಾಪುರ ಬಿಜಿಎಸ್ ವಿದ್ಯಾ ಸಂಸ್ಥೆಯ ಮೇಲ್ವಿಚಾರಕ ಮಂಜುನಾಥ್, ಮಲೆನಾಡು ಬಿಜಿಎಸ್ ವಿದ್ಯಾ ಸಂಸ್ಥೆಯ ಮೇಲ್ವಿಚಾರಕ ಹೆಚ್.ಜೆ.ಸಚಿನ್ ಗೌಡ,  ಮೇಜರ್ ಡಾ ಕುಶ್ವಂತ್ ಕೋಳಿಬೈಲು , ಕೊಡಗು ಗೌಡ ವಿದ್ಯಾ ಸಂಘ ಅಧ್ಯಕ್ಷ ಅಂಬೇಕಲ್ ನವೀನ್, ವಿದ್ಯಾ ಸಂಸ್ಥೆ ಅಧ್ಯಕ್ಷ ಹುದೇರಿ ರಾಜೇಂದ್ರ, ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ  ಸವಿತಾ ರೈ, ಮದೆ ಗ್ರಾ.ಪಂ ಅಧ್ಯಕ್ಷೆ ವಿಮಲಾಕ್ಷಿ, ಪ್ರಮುಖರಾದ ಮುದ್ದೆಯನ…

Read More

ಮಡಿಕೇರಿ ಫೆ.29 NEWS DESK  :  ಪೊನ್ನಂಪೇಟೆಯಲ್ಲಿರುವ ವೃದ್ಧಾಶ್ರಮಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ  ಭೇಟಿ ನೀಡಿ ವಯೋವೃದ್ಧರ ಸಮಸ್ಯೆಗಳನ್ನು ಆಲಿಸಿದರು. ಅಲ್ಲದೆ ಅಗತ್ಯ ಸಹಾಯ ನೀಡುವ ಭರವಸೆ ನೀಡಿದರು.

Read More

ಮಡಿಕೇರಿ ಫೆ.29 NEWS DESK : ಕೊಡಗು ಜಿಲ್ಲಾ ಬಿಜೆಪಿಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾಗಿ ಪುಷ್ಪ ನಾಗೇಶ್ ಹಾಗೂ ಶಿಲ್ಪಾ ಅಪ್ಪಣ್ಣ ಆಯ್ಕೆಯಾಗಿದ್ದಾರೆ. ಪಕ್ಷಕ್ಕಾಗಿ ಇವರಿಬ್ಬರು ಸಲ್ಲಿಸಿದ ಸೇವೆಯನ್ನು ಪರಿಗಣಿಸಿ, ಪಕ್ಷದ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ಅನುಮೋದನೆಯೊಂದಿಗೆ ಪ್ರಧಾನ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿರುವುದಾಗಿ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ ತಿಳಿಸಿದ್ದಾರೆ. ಮಹಿಳಾ ಮೋರ್ಚಾವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಪಕ್ಷ ಸಂಘಟನೆಯನ್ನು ಚುರುಕುಗೊಳಿಸುವುದಾಗಿ ಅವರು ಹೇಳಿದ್ದಾರೆ.

Read More

ಕಡಂಗ ಫೆ.29 NEWS DESK : ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ನರಿಯಂದಡ ಗ್ರಾ.ಪಂ ವ್ಯಾಪ್ತಿಯ ಕರಡ ಸಾರ್ವಜನಿಕ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ವಿಜ್ಞಾನ ವಸ್ತು ಪ್ರದರ್ಶನ ನಡೆಯಿತು. ಕಾರ್ಯಕ್ರಮದಲ್ಲಿ ಕಡಂಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿ ಬಿ.ಎಂ.ಅಂಜನಾ ಪ್ರಥಮ ಸ್ಥಾನ ಪೆಡೆದರು. ವಿಜ್ಞಾನ ವಿಭಾಗದ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮಾಡಿದ ವಿಜ್ಞಾನದ ಮಾದರಿಗಳನ್ನು ಪ್ರದರ್ಶನಕ್ಕೆ ಇಡಲಾಯಿತು. ಗ್ರಾಮ ಸದಸ್ಯರು, ಅಧಿಕಾರಿಗಳು, ನಿವೃತ್ತ ಶಿಕ್ಷಕರು, ಗ್ರಂಥಾಲಯದ ಮೇಲ್ವಿಚಾರಕರು ಹಾಜರಿದ್ದರು. ವರದಿ : ನೌಫಲ್ ಕಡಂಗ 

Read More

ಮಡಿಕೇರಿ ಫೆ.29 NEWS DESK : ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ವೇದಿಕೆಯ ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷರಾಗಿ ಚೌಡೇನಹಳ್ಳಿಯ ಕುಮಾರ್ ಎಂ.ಎಸ್ ಆಯ್ಕೆಯಾಗಿದ್ದಾರೆ. ವೇದಿಕೆಯ ರಾಜ್ಯಾಧ್ಯಕ್ಷ ಎಂ.ಟಿ.ಸುರೇಶ್ ಕಂಠಿ ಅವರು ಕುಮಾರ್ ಅವರನ್ನು ನೇಮಕ ಮಾಡಿ ಸಾಮಾಜಿಕ ಕಳಕಳಿಯೊಂದಿಗೆ ಸಂಘಟನೆಯನ್ನು ಬಲಗೊಳಿಸುವಂತೆ ಆದೇಶಿಸಿದ್ದಾರೆ.

Read More

ಗೋಣಿಕೊಪ್ಪ ಫೆ.29 NEWS DESK : ಬಹುಕಾಲದ ಬೇಡಿಕೆಯ ಗೋಣಿಕೊಪ್ಪ ಹೈಟೆಕ್ ಬಸ್ ನಿಲ್ದಾಣ ಕಾಮಗಾರಿಗೆ ಇಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ  ಚಾಲನೆ ನೀಡಿದರು. ನಂತರ ಮಾತನಾಡಿದ ಅವರು,  ಯಾವುದೇ ಕಾಮಗಾರಿಗೆ ಭೂಮಿ ಪೂಜೆ ನಡೆಸುವಾಗ ಕಾಮಗಾರಿಗೆ ಸಂಭಂದಿಸಿದಂತೆ ಅನುದಾನ ,ಅಂದಾಜು ಪಟ್ಟಿ, ಇಲಾಖಾ ಅನುಮೋದನೆ, ಕಾರ್ಯಾದೇಶ ಎಲ್ಲವನ್ನೂ ಇತ್ಯರ್ಥ ಪಡಿಸಿದ ನಂತರವೇ ಭೂಮಿ ಪೂಜೆ ಮಾಡುತ್ತಿರುವುದಾಗಿ ಸ್ಪಷ್ಟ ಪಡಿಸಿದ ಶಾಸಕರು ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ಲೋಪ ನಡೆಯದಂತೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಈ ಸಂದರ್ಭ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಗ್ರಾ.ಪಂ ಅಧ್ಯಕ್ಷ ಪ್ರಮೋದ್ ಗಣಪತಿ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಮಾಜಿ‌ ಶಾಸಕ ಚೆಪ್ಪುಡಿರ ಅರುಣ್ ಮಾಚಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ  ತೆನ್ನಿರ ಮೈನಾ, ಹಿಂದುಳಿದ ಘಟಕದ ಜಿಲ್ಲಾಧ್ಯಕ್ಷ  ಬಾನಂಡ ಪ್ರಥ್ಯು,ವಕ್ತಾರ…

Read More

ಮಡಿಕೇರಿ ಫೆ.29 NEWS DESK : ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಯು ಮೇ 2 ರಿಂದ ಆರಂಭವಾಗಲಿದೆ. ತೋಟಗಾರಿಕೆ ತರಬೇತಿ ಕೇಂದ್ರ, ಸೋಮನಹಳ್ಳಿ ಕಾವಲ್, ಹಾಸನ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುತ್ತದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಈ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಏ.1 ರ ಸಂಜೆ 5 ಗಂಟೆ ಯೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಈ ಕಚೇರಿ ಬೆಳಗ್ಗೆ 10 ರಿಂದ ಸಂಜೆ 5.30 ರೊಳಗೆ ಸಂಪರ್ಕಿಸಬಹುದಾಗಿದೆ ಅಥವಾ ಅಂತರ್ಜಾಲ https://horticulturedir.karnataka.gov.in ಇಲ್ಲಿ ಅರ್ಜಿ ಪಡೆಯಬಹುದಾಗಿದೆ. ಮೂಲ ಅಗತ್ಯ ದಾಖಲಾತಿಗಳೊಡನೆ (ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಛಾಪಾಕಾಗದ, ತಂದೆ/ತಾಯಿ/ಪೋಷಕರ ಹೆಸರಿನಲ್ಲಿರುವ ಜಮೀನಿನ ಆರ್‍ಟಿಸಿ, ಜಾತಿ ಪ್ರಮಾಣ ಪತ್ರ, ಫೋಟೋ, ತಂದೆ/ ತಾಯಿಯವರ ಒಪ್ಪಿಗೆ ಪತ್ರ) ಅರ್ಹ ಅಭ್ಯರ್ಥಿಗಳು ನಿಗಧಿತ ಸಮಯದೊಳಗೆ ಅರ್ಜಿಯನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ (ರಾಜ್ಯ ವಲಯ), ಮಡಿಕೇರಿಗೆ ಖುದ್ದು ಸಲ್ಲಿಸತಕ್ಕದ್ದು ಎಂದು…

Read More

ಮಡಿಕೇರಿ ಫೆ.29 NEWS DESK: ಕರ್ನಾಟಕ ಲೋಕಸೇವಾ ಆಯೋಗವು 384 ಗ್ರೂಪ್-ಎ ಹಾಗೂ ಗ್ರೂಪ್-ಬಿ ಗೆಜೆಟೆಡ್ ಪ್ರೊಬೇಶನರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು https://www.kpsc.kar.nic.in/ ಅಧಿಕೃತ ವೆಬ್‍ಸೈಟ್‍ಗೆ ಭೇಟಿ ನೀಡಿ ಮಾ.4 ರಿಂದ ಏ.3 ರೊಳಗೆ ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಮಾರ್ಚ್, 07 ರಂದು ಬೆಳಗ್ಗೆ 10 ಗಂಟೆಗೆ ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಫೌಂಡೇಶನ್ ನಲ್ಲಿ ಕೆಎಎಸ್, ಪಿಡಿಒ, ಬ್ಯಾಂಕ್, ಎಫ್‍ಡಿಎ, ಎಸ್‍ಡಿಎ, ಪಿಎಸ್‍ಐ, ಪೀಸಿ, ಗ್ರಾಮ ಅಡಳಿತ ಅಧಿಕಾರಿ ಹಾಗೂ ಇತರೆ ನೇಮಕಾತಿ ಪರೀಕ್ಷೆಗಳ ಬಗ್ಗೆ ನುರಿತ ವಿಷಯ ತಜ್ಞರಿಂದ ಉಚಿತ ಜಾಗೃತಿ ಕಾರ್ಯಾಗಾರ ನಡೆಯಲಿದೆ. ಆಸಕ್ತರು http://tinyurl.com/FREE-AWARENESS-WORKSHOP  ಲಿಂಕ್ ಕ್ಲಿಕ್ ಮಾಡಿ ಅಥವಾ 8660217739 ಸಂಖ್ಯೆಗೆ ಕರೆ ಅಥವಾ ವಾಟ್ಸಾಪ್ ಮಾಡಿ ಈ ಉಚಿತ ಕಾರ್ಯಾಗಾರಕ್ಕೆ ನೋಂದಣಿ ಮಾಡಿಕೊಂಡು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಹಾಸನ ಶಾಖೆಯ ಕೃಷಿಕ್ ಸರ್ವೋದಯ ಫೌಂಡೇಶನ್‍ನ ಕಾರ್ಯದರ್ಶಿ ಹೆಮ್ಮಿಗೆ ಮೋಹನ್  ತಿಳಿಸಿದ್ದಾರೆ.

Read More

ವಿರಾಜಪೇಟೆ ಫೆ.29 NEWS DESK : ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರ ಸಂಘದ ವತಿಯಿಂದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ  ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಮಾತನಾಡಿದ ಉಪನ್ಯಾಸಕ ಟಿ.ಎಲ್.ತ್ಯಾಗರಾಜು, ನವೆಂಬರ್ ಹಾಗೂ  ಡಿಸೆಂಬರ್‌ನಲ್ಲಿ 43 ನದಿನಗಳ ರಾಜ್ಯವ್ಯಾಪಿ ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಸಕಾರಾತ್ಮಕವಾದ ಸ್ಪಂದನೆ ನೀಡಿ, ಮುಖ್ಯಮಂತ್ರಿಗಳ ಗಮನಕ್ಕೆ ತಂದು ನಮ್ಮ ಬೇಡಿಕೆಗೆ ಮಾಹಿತಿ ನೀಡಿದಕ್ಕೆ ಅಭಿನಂದನೆ ಸಲ್ಲಿಸಿದರು. 2009 ಜುಲೈ 11 ರ ಒಳಗೆ ಎಂ.ಫೀಲ್ ಮುಗಿಸಿದವರು ಯುಜಿಸಿ ಮಾನದಂಡಕ್ಕೆ ಅರ್ಹತರಾಗಿದ್ದು, ಅವರನ್ನು ನೆಟ್ ಮತ್ತು ಸ್ಲೆಟ್ ಸಮಾನರು ಎಂದು ಆದೇಶ ಮಾಡಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಉಪನ್ಯಾಸಕರ ಮನವಿಗೆ ಪ್ರತಿಕ್ರಿಯೆ ನೀಡಿದ ಶಾಸಕರು, ನಿಮ್ಮ ಎಲ್ಲಾ ಬೇಡಿಕೆಗಳನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಯಾವ ತೊಂದರೆ ಅಗದಂತೆ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು. ಕಾಲೇಜಿನ ಅತಿಥಿ ಉಪನ್ಯಾಸಕರುಗಳಾದ ಡಾ.ಪ್ರಭು, ಎಂ.ಎನ್.ಮೋಹನ್ ಕುಮಾರ್, ಕೆ.ಎಸ್ ಕಾರ್ಯಪ್ಪ, ಸುಮಯ್ಯ…

Read More