ಬೇಕಾಗುವ ಪದಾರ್ಥಗಳು : ನೀರು-ಒಂದು ಬಟ್ಟಲು, ಕಾಳು ಮೆಣಸಿನ ಪುಡಿ-ಒಂದು ಚಿಟಿಕೆ, ಏಲಕ್ಕೆ ಪುಡಿ- ಒಂದು ಚಿಟಿಕೆ, ಪುದೀನಾ ಎಲೆ-15 ರಿಂದ 20, ತುಳಸಿ ಎಲೆ- 15 ರಿಂದ 20, ನಿಂಬೆರಸ- ಒಂದು ಚಮಚ, ಜೇನುತುಪ್ಪ ಅಥವಾ ಸಕ್ಕರೆ- ಒಂದು ಚಮಚ. ಮಾಡುವ ವಿಧಾನ :: ಟೀ ತಯಾರಿಸುವ ಪಾತ್ರೆಯಲ್ಲಿ ಒಂದು ಕಪ್ ನೀರು ಹಾಕಿ. ಕುದಿ ಬಂದ ನಂತರ ಚಿಟಿಕೆ ಕಾಳು ಮೆಣಸಿನ ಪುಡಿ ಮತ್ತು ಏಲಕ್ಕಿ ಪುಡಿಯನ್ನು ಹಾಕಿ ಚೆನ್ನಾಗಿ ಕುದಿಸಿ. ಬಳಿಕ ಪುದೀನಾ ಎಲೆ ಹಾಗೂ ತುಳಸಿ ಎಲೆಗಳನ್ನು ಹಾಕಿ. ಪ್ಲೇಟ್ ಮುಚ್ಚಿ. ಸಣ್ಣ ಉರಿಯಲ್ಲಿ ಎರಡು ನಿಮಿಷಗಳ ಕಾಲ ಕಾಯಿಸಿ. ನಂತರ ಒಲೆ ಮೇಲಿಂದ ಇಳಿಸಿ ನಿಂಬೆರಸ ಬೆರೆಸಿ. ರುಚಿಗೆ ತಕ್ಕಷ್ಟು ಸಕ್ಕರೆ ಅಥವಾ ಜೇನುತುಪ್ಪ ಹಾಕಿ. ಬಳಿಕ ಕುದಿಸಿ, ಸೋಸಿ. ಇದೀಗ ಆರೋಗ್ಯಕರವಾದ ಹರ್ಬಲ್ ಗ್ರೀನ್ ಟೀ ಸವಿಯಲು ಸಿದ್ಧ.
ಲೇಖಕ: admin
ವಿರಾಜಪೇಟೆ ಡಿ.28 : ಹೆಗ್ಗಳ ಗ್ರಾಮದ ಎಡಮಕ್ಕಿಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಂಡಲ ಪೂಜೆಯನ್ನು ಭಕ್ತಿಯಿಂದ ಜರುಗಿತು. ಶ್ರೀ ಅಯ್ಯಪ್ಪ ಸ್ವಾಮಿಗೆ ತುಪ್ಪದ ಅಭಿಷೇಕ, ಹಾಲು ಹಾಗೂ ಎಳನೀರಿನ ಅಭಿಷೇಕ ನೆರವೇರಿಸಿ ಭಸ್ಮಾರ್ಚನೆಯನ್ನು ಮಾಡಲಾಯಿತು. ಮಂಡಲ ಪೂಜೆಯ ಪ್ರಧಾನ ಆಚರಣೆಯಾದ ದೀಪಾರಾಧನೆ ನಡೆಸಿ ದೇವಸ್ಥಾನದೆಲ್ಲೆಡೆಗಳಲ್ಲಿ ದೀಪಗಳನ್ನು ಬೆಳಗಿ ವಿಶೇಷ ಅರ್ಚನೆ ನಡೆಯಿತು. ಭಕ್ತರು ಧರ್ಮ ಶಾಸ್ತನಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ಮಹಾಪೂಜೆ ಹಾಗೂ ಮಂಗಳಾರತಿಯ ಬಳಿಕ ಭಕ್ತಾಧಿಗಳಿಗೆ ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನದಾನ ನೆರವೇರಿತು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯವರು, ಸಮೀಪದ ಹೆಗ್ಗಳ, ತೋರ, ಬೂದಿಮಾಳ, ರಾಮನಗರ ಗ್ರಾಮಗಳ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ದೇವಾಲಯದ ಪ್ರಧಾನ ಅರ್ಚಕ ವೇಣುಗೋಪಾಲ್ ಭಟ್ ಪೂಜಾ ಕೈಂಕರ್ಯಗಳನ್ನು ನಡೆಸಿಕೊಟ್ಟರು.
ಕುಶಾಲನಗರ ಡಿ.28 : ಕಲ್ಲಡ್ಕ ಪ್ರಭಾಕರ್ ಅವರು ಮುಸ್ಲಿಂ ಮಹಿಳೆಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಕುಶಾಲನಗರ ತಾಲ್ಲೂಕು ಮುಸ್ಲಿಂ ಒಕ್ಕೂಟ ಪ್ರತಿಭಟನೆ ನಡೆಸಿತು. ಕುಶಾಲನಗರದ ಕಾರ್ಯಪ್ಪ ವೃತ್ತದಲ್ಲಿ ಜಮಾಯಿಸಿದ ಪ್ರಮುಖರು ಹಾಗೂ ಪದಾಧಿಕಾರಿಗಳು ಕಲ್ಲಡ್ಕ ಪ್ರಭಾಕರ್ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಕುಶಾಲನಗರ ತಾಲ್ಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಅಬ್ದುಲ್ ಕರೀಂ ಹಾಗೂ ಕುಶಾಲನಗರ ಎಸ್.ಡಿ.ಪಿ.ಐ ಅಧ್ಯಕ್ಷ ಜ಼ಕರಿಯಾ ಮಾತನಾಡಿ, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಮುಸ್ಲಿಂ ಒಕ್ಕೂಟದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಜಮೀರ್, ಉಪಾಧ್ಯಕ್ಷ ಪಾಷಾ, ಪ್ರಮುಖರಾದ ಅನ್ವರ್, ಅಕ್ಬರ್, ಖಲೀಲ್, ಶರೀಫ್, ಸಲೀಂ, ಮೊಯ್ದೀನ್, ಸಮಿ, ಅಶ್ರಫ್, ಜ಼ರೀನಾ, ಹಮೀದ್, ಸಾಹುಲ್ ಹಾಗೂ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಕಡಂಗ ಡಿ.28 : ಸಮಸ್ತ ಕೇಂದ್ರೀಯ ಸುನ್ನಿ ವಿದ್ಯಾರ್ಥಿಗಳ ಒಕ್ಕೂಟ (ಎಸ್‍ಕೆಎಸ್‍ಎಸ್) ಎಡಪಾಲ ಶಾಖೆಯ ವಾರ್ಷಿಕ ಮಹಾಸಭೆಯು ಶಾಖೆಯ ಅಧ್ಯಕ್ಷರಾದ ಶಮೀಮುದ್ದೀನ್ ಅಧ್ಯಕ್ಷತೆಯಲ್ಲಿ ನಡೆಯಿತು. ಒಕ್ಕೂಟದ ಪ್ರಮುಖರಾದ ಸಲೀಂ ಅವರ ನಿವಾಸದಲ್ಲಿ ನಡೆದ ಸಭೆಯನ್ನು ಜಿಲ್ಲಾ ಸಮಿತಿ ಪ್ರತಿನಿಧಿ ಹನೀಫ್ ಫೈಝಿ ಉದ್ಘಾಟಿಸಿದರು. ನರಿಯಂದಡ ಗ್ರಾ.ಪಂ ಸದಸ್ಯ ಮುಹಮ್ಮದ್ ಮಾತನಾಡಿ, ಸಂಘಟನೆಯ ಪ್ರಾರಂಭಕಾಲದ ಬೆಳವಣಿಗೆಗಳ ಕುರಿತು ಮೆಲುಕು ಹಾಕಿದರು. ಎಸ್‍ಕೆಎಸ್‍ಎಸ್ ಕರ್ನಾಟಕ ರಾಜ್ಯ ಸಮಿತಿ ಮೀಡಿಯಾ ವಿಂಗ್ ಕನ್ವೀನರಾದ ಶಬೀರ್ ಫೈಝಿ ಅಲ್ ಮಅಬರೀ “ಯುವಕರು ಹೆಚ್ಚಾಗಿ ಸಂಘಟನಾ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುವ ಮೂಲಕ ಸಾಮಾಜಿಕ ಪ್ರಜ್ಞೆಯುಳ್ಳ ಉತ್ತಮ ನಾಗರಿಕರಾಗಬಹುದು ಮತ್ತು ಸಮಾಜದಲ್ಲಿ ವ್ಯಾಪಕವಾಗುತ್ತಿರುವ ಮಾದಕ ವ್ಯಸನಗಳಂತಹ ದುಷ್ಚಟಗಳಿಂದ ತಮ್ಮ ಮಕ್ಕಳನ್ನು ದೂರವಿರಿಸಲು ಸಮುದಾಯ ಮತ್ತು ಸಮಾಜದ ಸಬಲೀಕರಣಕ್ಕಾಗಿ ಕಾರ್ಯಚರಿಸುತ್ತಿರುವ ಸಂಘಟನೆಗಳನ್ನು ಸಕ್ರೀಯಗೊಳಿಸಿ ಎಂದರು. ಕಾರ್ಯಕ್ರಮದಲ್ಲಿ ಊರಿನ ಹಿರಿಯ ನಾಯಕರು ಮತ್ತು ಸುನ್ನಿ ಯುವಜನ ಸಂಘದ ಸದಸ್ಯರುಗಳಾದ ಹಂಝ ಕುಪ್ಪೋಡಂಡ, ಸಲೀಂ ಬೆಂಗಳೂರು, ಶಾಖಾ ಸಮಿತಿ ಉಪಾಧ್ಯಕ್ಷರಾದ ಶಂಸುದ್ದೀನ್, ಕಾರ್ಯಕಾರಿ ಕಾರ್ಯದರ್ಶಿ ಜಲೀಲ್ ಮತ್ತು…
ಮಡಿಕೇರಿ ಡಿ.28 : ಮಡಿಕೇರಿ ತಾಲ್ಲೂಕು ಲೋಕೋಪಯೋಗಿ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿ ಬಿ.ಪಿ.ರಾಜೀವಲೋಚನ ಪುನರಾಯ್ಕೆಯಾಗಿದ್ದಾರೆ. ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆದ ತಾಲ್ಲೂಕು ಸಂಘದ ಮಹಾಸಭೆಯಲ್ಲಿ ರಾಜೀವಲೋಚನ ಅಧ್ಯಕ್ಷರಾಗಿ ಹಾಗೂ ಕೆ.ಬಿ.ಪೂಣಚ್ಚ ಪ್ರಧಾನ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾದರು. ನಿರ್ದೇಶಕರುಗಳಾಗಿ ಮನು ಉತ್ತಪ್ಪ, ಎಂ.ಕೆ.ಪೂಣಚ್ಚ, ಎನ್.ಡಿ.ಪೂಣಚ್ಚ, ಪಿ.ಬಿ.ಪೂಣಚ್ಚ, ವಿ.ಜಿ.ಮೋಹನ್, ಸದಾಶಿವ ರೈ, ಮೊಯ್ದು, ಕೆ.ಎನ್.ಲೋಹಿತ್, ಪ್ರವೀಣ್, ದೇವರಾಜು ಹಾಗೂ ಬಿ.ವೈ.ರಾಜೇಶ್ ಯಲ್ಲಪ್ಪ ನೇಮಕಗೊಂಡರು. ಜಿಲ್ಲಾ ಸಂಘದ ಕಾರ್ಯದರ್ಶಿ ವಿ.ಆರ್.ರವಿಕುಮಾರ್, ಖಜಾಂಚಿ ಬಿ.ಕೆ.ರವಿಂದ್ರ ರೈ, ಸಲಹೆಗಾರ ಬಿ.ಬಿ.ಐತ್ತಪ್ಪ ರೈ, ನಿರ್ದೇಶಕ ಅರುಣ್ ಕುಮಾರ್ ಹಾಗೂ ಹಿರಿಯ ಗುತ್ತಿಗೆದಾರ ಬಾಬು ಚುನಾವಣಾ ಉಸ್ತುವಾರಿ ವಹಿಸಿದ್ದರು. ::: ಕಾನೂನು ಹೋರಾಟದ ಎಚ್ಚರಿಕೆ ::: ಬಿ.ಪಿ.ರಾಜೀವಲೋಚನ ಅವರ ಅಧ್ಯಕ್ಷತೆಯಲ್ಲಿ ನಡೆದ ತಾಲ್ಲೂಕು ಸಂಘದ ಸಭೆಯಲ್ಲಿ ಪೂರ್ಣಗೊಳಿಸಿರುವ ಕಾಮಗಾರಿಗಳ ಬಿಲ್ ಗುತ್ತಿಗೆದಾರರಿಗೆ ಪಾವತಿಯಾಗದೆ ಇರುವ ಬಗ್ಗೆ ವಿಷಯ ಪ್ರಸ್ತಾಪಿಸಲಾಯಿತು. ವಿವಿಧ ಇಲಾಖೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಿ ಬಿಲ್ ಗಳನ್ನು ಸಲ್ಲಿಸಿ ಹಲವು ತಿಂಗಳುಗಳೇ ಕಳೆದಿದ್ದರು ಹಣ ಬಿಡುಗಡೆಯಾಗುತ್ತಿಲ್ಲವೆಂದು ಗುತ್ತಿಗೆದಾರರು ಅಸಮಾಧಾನ ವ್ಯಕ್ತಪಡಿಸಿದರು.…
ನಾಪೋಕ್ಲು ಡಿ.28 : ಏಪ್ರಿಲ್ -2024 ರಲ್ಲಿ ಜರುಗಲಿರುವ ಕುಂಡ್ಯೋಳಂಡ ಕಪ್ ಹಾಕಿ ಉತ್ಸವದ ಲಾಂಛನವು ಡಿ.31 ರಂದು ಲೋಕಾರ್ಪಣೆಗೊಳ್ಳಲಿದೆ. ನಾಪೋಕ್ಲು ಕೊಡವ ಸಮಾಜದ ಅಪ್ಪಚ್ಚಕವಿ ಸಭಾಂಗಣದಲ್ಲಿ ಬೆಳಗ್ಗೆ 9.30 ಗಂಟೆಗೆ ಕುಂಡ್ಯೋಳಂಡ ಕುಟುಂಬದ ಪಟ್ಟೆದಾರ ನಾಣಿ ನಾಣಯ್ಯ ಹಾಗೂ ಹಾಕಿ ಉತ್ಸವದ ಅಧ್ಯಕ್ಷ ಕುಂಡ್ಯೋಳಂಡ ರಮೇಶ್ ಮುದ್ದಯ್ಯ ಅವರ ಮುಂದಾಲತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಸದ ಪ್ರತಾಪ್ ಸಿಂಹ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮತ್ತು ಶಾಸಕ ಎ.ಎಸ್.ಪೊನ್ನಣ್ಣ , ಕರ್ನಾಟಕ ರಾಜ್ಯ ವಿಧಾನಪರಿಷತ್ ಸದಸ್ಯ ಮಂಡೆಪಂಡ ಸುಜಾ ಕುಶಾಲಪ್ಪ, ಒಲಂಪಿಯನ್, ಹಾಕಿ ಕರ್ನಾಟಕ ಸೆಕ್ರೆಟರಿ ಜನರಲ್ ಡಾ .ಅಂಜಪರವಂಡ ಬಿ.ಸುಬ್ಬಯ್ಯ, ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ, ವೆಸ್ಟ್ ಕೊಳಕೇರಿ ಗ್ರಾಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆಟೋಳಿರ ಎಸ್.ಕುಟ್ಟಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಡಿ.28 : ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಸೌಲಭ್ಯದಲ್ಲಿ ಉಂಟಾಗಿರುವ ಸಮಸ್ಯೆಗಳ ನಿವಾರಣೆಗೆ ಗ್ರಾ.ಪಂ ಸಭಾಂಗಣದಲ್ಲಿ ಶಿಬಿರ ನಡೆಯಿತು. ಕಾರ್ಯಕ್ರಮದಲ್ಲಿ ಫಲಾನುಭವಿಗಳ ಆಧಾರ್ ಕಾರ್ಡ್ ಅಪ್ ಡೇಟ್, ಬ್ಯಾಂಕ್ ಖಾತೆಗೆ ಲಿಂಕ್ ಹಾಗೂ ರೇಶನ್ ಕಾರ್ಡ್ ಡೇಟಾ ಎಂಟ್ರಿ ಮಾಡಿ ಗೃಹಲಕ್ಷ್ಮಿ ಯೋಜನೆಯ ಸಮಸ್ಯೆ ನಿವಾರಣೆ ಮಾಡಲಾಯಿತು. ಸರ್ಕಾರದ ಆದೇಶದಂತೆ ಗೃಹ ಲಕ್ಷ್ಮಿ ಫಲಾನುಭವಿಗಳ ಖಾತೆಗೆ ರೂ. 2000 ಜಮಾ ಆಗದಿದ್ದಲ್ಲಿ ಸಮಸ್ಯೆ ನಿವಾರಣೆಗೆ ಮೂರು ದಿನಗಳ ಶಿಬಿರ ಆಯೋಜಿಸಲಾಗಿದ್ದು, ಫಲಾನುಭವಿಗಳು ಸಮಸ್ಯೆಗಳಿದ್ದಲ್ಲಿ ನಿವಾರಿಸಿಕೊಳ್ಳಬಹುದಾಗಿದೆ ಎಂದು ಗ್ರಾಮ ಅಭಿವೃದ್ಧಿ ಅಧಿಕಾರಿ (ಪಿಡಿಒ) ಚೋಂದಕ್ಕಿ ಮಾಹಿತಿ ನೀಡಿದರು. ಈ ಸಂದರ್ಭ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಉಪಾಧ್ಯಕ್ಷೆ ಕುಲೇಟಿರ ಹೇಮಾವತಿ ಅರುಣ್, ಪಂಚಾಯಿತಿ ಸದಸ್ಯರು, ವಿವಿಧ ಬ್ಯಾಂಕ್ ಗಳ ಸಿಬ್ಬಂದಿ, ಅಂಚೆ ಕಚೇರಿಯ ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ
ಸುಂಟಿಕೊಪ್ಪ ಡಿ.28 : ಸುಂಟಿಕೊಪ್ಪ ಶ್ರೀ ಪುರಂ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಮಂಡಲ ಪೂಜೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಶ್ರೀ ಅಯ್ಯಪ್ಪ ಸ್ವಾಮಿಗೆ ಎರಡು ದಿನಗಳ ಕಾಲ ವಿವಿಧ ಪೂಜಾ ಕೈಂಕರ್ಯಗಳು ನಡೆಯಿತು. ನಡೆದ ಮಹಾಮಂಗಳಾರತಿ ನಂತರ ನೆರೆದಿದ್ದವರಿಗೆ ಅನ್ನಸಂತರ್ಪಣೆ ಜರುಗಿತು. ಗಣಪತಿ ಹೋಮ, ಎಳನೀರು ಅಭಿಷೇಕ, ಪಂಚಾಮೃತ ಅಭಿಷೇಕ, ಲಕ್ಷಾರ್ಚನೆ, ಪಲ್ಲಪೂಜೆ, ಬಿಲ್ವಪತ್ರೆ ಅರ್ಚನೆ, ತುಳಸಿ ಅರ್ಚನೆ, ಪಂಚಾಮೃತ ಅಭಿಷೇಕ, ದೂರ್ವಾರ್ಚನೆ ನಂತರ ಮಹಾಮಂಗಳಾರತಿ ನಡೆಯಿತು. ದೇವಸ್ಥಾನದ ಅರ್ಚಕ ಗಣೇಶ ಉಪಾಧ್ಯಾಯ ಅವರ ನೇತೃತ್ವದಲ್ಲಿ ಮಂಜುನಾಥ ಭಟ್, ರಾಘವೇಂದ್ರ ಭಟ್, ಮಹಾಭಲೇಶ್ವರ ಭಟ್, ಮನೋಜ್ ಭಟ್ ಪೂಜಾ ಕೈಂಕರ್ಯಗಳನ್ನು ನೇರವೇರಿಸಿದರು. ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭ ಅಧ್ಯಕ್ಷ ಬಿ.ಎಂ.ಸುರೇಶ್ (ಪುಟ್ಟ), ಉಪಾಧ್ಯಕ್ಷರುಗಳಾದ ಬಿ.ಎ.ಪುನೀತ್, ಪ್ರಶಾಂತ್ ಕುಮಾರ್,(ಕೋಕ) ಎಂ.ಮಂಜುನಾಥ್, ಕೆ.ರವಿ, ಪ್ರಧಾನ ಕಾರ್ಯದರ್ಶಿ ಎಂ.ಚಂದ್ರ, ಖಜಾಂಚಿ ಎಂ.ಆರ್.ಶಶಿಕುಮಾರ್, ಗೌರವಾಧ್ಯಕ್ಷ ಕೆ.ಎ.ಬಾಲಕೃಷ್ಣ, ಮುತ್ತಯ್ಯ, ಸುರೇಶ್ ಗೋಪಿ, ಕಾರ್ಯದರ್ಶಿಗಳಾದ ವಿ.ಕೆ.ರಾಜು, ಕೆ.ಕನೀಸ್, ಮಣಿಕಂಠ, ಸಂಘಟನಾ ಕಾರ್ಯದರ್ಶಿಗಳಾದ ಪೃಥ್ವಿರಾಜ್, ಡಿ.ಕೆ.ರಾಖೇಶ್, ಶೇಖರ(ಅಣ್ಣು), ಎಂ.ಉದಯ, ಕೆ.ಕೆ.ವಾಸು,…
ಸುಂಟಿಕೊಪ್ಪ, ಡಿ.28 : ಕೊಡಗರಹಳ್ಳಿ ಶಾಂತಿನಿಕೇತನ ನರ್ಸರಿ, ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಯ ವಾರ್ಷಿಕೋತ್ಸವ ಸಮಾರಂಭವು ಸಂಭ್ರಮದಿಂದ ನಡೆಯಿತು. ಸಮಾರಂಭದಲ್ಲಿ ಶಾಲೆಯ ಭಾರತೀಯ ಎಜುಕೇಷನಲ್ ಸರ್ವಿಸ್ ಟ್ರಸ್ಟ್ ಕಾರ್ಯದರ್ಶಿ ರಂಜಿತ್ ಕಾರ್ಯಪ್ಪ ಮಾತನಾಡಿ, ಒಂದು ಶಾಲೆಯನ್ನು ನಡೆಸುವುದು ಬಹಳ ಕಷ್ಟದ ಕೆಲಸ. ಆದರೆ ಆಡಳಿತ ಮಂಡಳಿಯ ಸದಸ್ಯರು, ಪೋಷಕರು, ಶಿಕ್ಷಕ ವೃಂದ, ಸಿಬ್ಬಂದಿ ವರ್ಗದವರು ಸಮರ್ಪಣ ಮನೋಭಾವದಿಂದ ಶಾಲೆ ಕಳೆದ 16 ವರ್ಷಗಳಿಂದ ಶೇ.100 ರಷ್ಟು ಫಲಿತಾಂಶವನ್ನು ಪಡೆಯುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿ ತನ್ನದೆಯಾದ ಛಾಪು ಮೂಡಿಸಿದೆ ಎಂದರು.ಶಾಲಾ ಮುಖ್ಯೋಪಾಧ್ಯಾಯನಿ ಮೇರಿ ಫಾತೀಮಾ ಶಾಲಾ ವರದಿಯನ್ನು ಮಂಡಿಸಿ, ಶಾಲೆಯ ಯಶಸ್ಸಿಗಾಗಿ ಅವಿರತವಾಗಿ ಶ್ರಮಿಸಿದ ಎಲ್ಲಾರಿಗೂ ಕೃತಜ್ಞತೆ ಸಲ್ಲಿಸಿದರು. ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ವಿದ್ಯಾಭ್ಯಾಸ ಹಾಳಾಗದಂತೆ ನೋಡಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಸಿ.ಎ.ಉತ್ತಯ್ಯ, ಶಾಲೆಯಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿದಲ್ಲದೆ ಪಠ್ಯೇತರ ಚಟುವಟಿಕೆಗಳಲ್ಲೂ ಸಾಕಷ್ಟು ಸಾಧನೆ ಮಾಡಿರುವುದು ಹೆಮ್ಮೆಯ ವಿಚಾರವೆಂದು ಹೇಳಿದರು. ಶಾಲೆಗೆ ಸಂಬಂಧಿಸಿದ…
ಚೆನ್ನೈ ಡಿ.28 : ತಮಿಳು ಚಿತ್ರರಂಗದ ಖ್ಯಾತ ನಟ ಮತ್ತು ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ (ಆಒಆಏ) ಸಂಸ್ಥಾಪಕ ವಿಜಯಕಾಂತ್ (71) ಗುರುವಾರ ಬೆಳಗಿನ ಜಾವ ಚೆನ್ನೈಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ನ್ಯೂಮೋನಿಯಾ ಜ್ವರ ಮತ್ತು ಕೊರೊನಾ ಸೋಂಕಿನಿಂದಾಗಿ ಚೆನ್ನೈನ ಎಂಐಒಟಿ ಇಂಟರ್ನ್ಯಾಷನಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ತೀವ್ರ ಕ್ಷೀಣಿಸಿದ್ದರಿಂದ ನಿನ್ನೆ ರಾತ್ರಿಯಿಂದ ಅವರು ವೆಂಟಿಲೇಟರ್ ಬೆಂಬಲದಲ್ಲಿದ್ದರು. ಕ್ಯಾಪ್ಟನ್ ವಿಜಯಕಾಂತ್ ಅವರು ನ್ಯುಮೋನಿಯಾಕ್ಕೆ ದಾಖಲಾದ ನಂತರ ವೆಂಟಿಲೇಟರಿ ಬೆಂಬಲದಲ್ಲಿದ್ದರು. ವೈದ್ಯಕೀಯ ಸಿಬ್ಬಂದಿಯ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ, ಇಂದು ಬೆಳಗ್ಗೆ ನಿಧನರಾದರು ಎಂದು ಆಸ್ಪತ್ರೆಯ ಬುಲೆಟಿನ್ ದೃಢಪಡಿಸಿದೆ. ವಿಜಯ್ ಕಾಂತ್ ಅವರು ಡಿಎಂಡಿಕೆ ಪ್ರಧಾನ ಕಾರ್ಯದರ್ಶಿ ಪ್ರೇಮಲತಾ ವಿಜಯಕಾಂತ್ ಮತ್ತು ಅವರ ಇಬ್ಬರು ಪುತ್ರರನ್ನು ಅಗಲಿದ್ದಾರೆ.ಕಳೆದ ಕೆಲ ವರ್ಷಗಳಿಂದ ಆಗಾಗ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯ್ ಕಾಂತ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಬರುತ್ತಿದ್ದರು. ಅನಾರೋಗ್ಯದಿಂದ ರಾಜಕಾರಣದಲ್ಲಿ ಕೂಡ ಸಕ್ರಿಯರಾಗಿರಲು ಸಾಧ್ಯವಾಗುತ್ತಿರಲಿಲ್ಲ. ಮೂರು ವಾರಗಳ ಹಿಂದೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಂದು…






