ಲೇಖಕ: admin

ಮಡಿಕೇರಿ ಡಿ.28 : ಜಿಲ್ಲಾಡಳಿತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ಆಯೋಗ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಕುಶಾಲನಗರ ಇವರ ಸಂಯುಕ್ತಾಶ್ರಯದಲ್ಲಿ ‘ಇ ಕಾಮರ್ಸ್ ಮತ್ತು ಡಿಜಿಟಲ್ ವ್ಯಾಪಾರದ ಯುಗದಲ್ಲಿ ಗ್ರಾಹಕರ ರಕ್ಷಣೆ’ ಎಂಬ ವಿಷಯದಡಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆಯು ಡಿ.30 ರಂದು ಬೆಳಗ್ಗೆ 11 ಗಂಟೆಗೆ ಕುಶಾಲನಗರ ತಾಲೂಕಿನ ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ರೇಣುಕಾಂಭ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಗೌರಮ್ಮಣ್ಣಿ, ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಕೆ.ಕೆ.ನಾಗರಾಜ ಶೆಟ್ಟಿ, ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಬಿ.ಬಸಪ್ಪ, ಮೈಸೂರು ಗ್ರಾಹಕರ ಪರಿಷತ್ ಕಾರ್ಯನಿರ್ವಾಹಕ ಸದಸ್ಯರಾದ ರವಿ ಬಳೆ ಇತರರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಡಿ.28 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರಸಭೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾ ಘಟಕ ಹಾಗೂ ಕೊಡಗು ಜಿಲ್ಲಾ ಜಾನಪದ ಪರಿಷತ್ತು ಇವರ ಸಹಕಾರದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಪ್ರಯುಕ್ತ ‘ವಿಶ್ವಮಾನವ ದಿನಾಚರಣೆ’ ಯು ಡಿ.29 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.  

Read More

ಮಡಿಕೇರಿ ಡಿ.27 : ಪ್ರಸಕ್ತ(2023-24) ಸಾಲಿನ ಡಿಸೆಂಬರ್-2024ರ ಅಂತ್ಯದವರೆಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೈಮಾಸಿಕ ಸಭೆಯು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರ ಅಧ್ಯಕ್ಷತೆಯಲ್ಲಿ ಜ.2 ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಕೊಡಗು ಜಿ.ಪಂ.ಸಿಇಒ ವರ್ಣಿತ್ ನೇಗಿ  ತಿಳಿಸಿದ್ದಾರೆ.

Read More

ಮಡಿಕೇರಿ ಡಿ.27 : ಮಡಿಕೇರಿ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್6 ಭಾಗಮಂಡಲ ಫೀಢರ್‍ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಡಿಸೆಂಬರ್, 28 ರಂದು ಬೆಳಗ್ಗೆ 10 ರಿಂದ ಸಂಜೆ 3 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ತಾಳತ್ತ್‍ಮನೆ, ಬೆಟ್ಟಗೇರಿ, ಚೇರಂಬಾಣೆ, ಅಪ್ಪಂಗಳ, ಕೋಪಟ್ಟಿ, ಚೆಟ್ಟಿಮಾನಿ, ಭಾಗಮಂಡಲ, ತಲಕಾವೇರಿ, ಚೇರಂಗಾಲ, ಕೋರಂಗಾಲ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.

Read More

ಮಡಿಕೇರಿ ಡಿ.27 : ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಇರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಡಿ.29 ರವರೆಗೆ ಕೊಡಗು ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಭೆ/ ಶಿಬಿರಗಳನ್ನು ಆಯೋಜಿಸಲಾಗಿದೆ. ಈ ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಅರ್ಜಿ ಸ್ಥಿತಿ ಪರಿಶೀಲನೆ, ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ, ಹೊಸ ಬ್ಯಾಂಕ್ ಖಾತೆ ತೆರೆಯುವುದು, ಇಕೆವೈಸಿ ಅಪ್‍ಡೇಟ್ ಮಾಡುವುದು ಹಾಗೂ ಇತರ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಜಿ.ಪಂ.ಸಿಇಒ ವರ್ಣಿತ್ ನೇಗಿ ತಿಳಿಸಿದ್ದಾರೆ.

Read More

ಮಡಿಕೇರಿ ಡಿ.27 : ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ 2024ಕ್ಕೆ ಸಂಬಂದಿಸಿದಂತೆ ಭಾರತ ಚುನಾವಣಾ ಆಯೋಗವು ಪರಿಷ್ಕೃತ ವೇಳಾಪಟ್ಟಿ ಹೊರಡಿಸಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ತಿಳಿಸಿದ್ದಾರೆ. ಹಕ್ಕು ಮತ್ತು ಆಕ್ಷೇಪಣೆ ಇತ್ಯರ್ಥ ಪಡಿಸುವ ದಿನಾಂಕ ಜನವರಿ 12, ದತ್ತಾಂಶಗಳನ್ನು ಸಂಗ್ರಹಿಸಿ ಮತ್ತು ಪರಿಶೀಲಿಸುವ ದಿನಾಂಕವನ್ನು ಜನವರಿ 17 ಹಾಗೂ ಅಂತಿಮ ಮತದಾರರ ಪಟ್ಟಿಯನ್ನು ಜನವರಿ 22 ರಂದು ಪ್ರಕಟಿಸಲು ಪರಿಷ್ಕೃತ ವೇಳಾಪಟ್ಟಿಯಲ್ಲಿ ನಿಗಧಿಪಡಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Read More

ಶ್ರೀಮಂಗಲ ಡಿ.27 :  ಪ್ರತಿಷ್ಠಿತ ‘ಕೊಡವ ತಕ್ಕ್ ಎಳ್ತ್‌ಕಾರಡ ಕೂಟ’ ಹಾಗೂ ಪೊನ್ನಂಪೇಟೆ ಹಳ್ಳಿಗಟ್ಟ್  ‘ನಿನಾದ ವಿದ್ಯಾಸಂಸ್ಥೆಯ ಜಂಟಿ ಆಶ್ರಯದಲ್ಲಿ ಕೊಡವ ಸಾಹಿತ್ಯ- ಸಾಂಸ್ಕೃತಿಕ ಕಾರ್ಯಕ್ರಮ  ನಡೆಯಿತು. ನಿನಾದ ವಿದ್ಯಾಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡವ ತಕ್ಕ್ ಎಳ್ತ್‌ಕಾರಡ ಕೂಟದ ‘ಜನಪ್ರಿಯ ಕೊಡವ ಸಾಹಿತ್ಯ ಮಾಲೆ’ ಯೋಜನೆಯ 186ನೇ ಹೆಜ್ಜೆಯ ಮೂಕಳೆರ ಟೈನಿ ಪೂಣಚ್ಚ ಬರೆದ “ರುದ್ರಾಕ್ಷಿ ಮಾಲೆ”  ಹಾಗೂ 187ನೇ ಹೆಜ್ಜೆಯ ತಂಬಾಂಡ ಡ್ಯಾನಿ ನಾಣಯ್ಯ ಬರೆದ “ಡ್ಯಾನಿರ ಚುಯಿಂಕ್” ಎಂಬ ಎರಡು ನೂತನ ಪುಸ್ತಕಗಳು ಲೋಕಾರ್ಪಣೆಗೊಂಡವು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತನಾಡಿದ ‘ಕೂಟ’ದ ಅಧ್ಯಕ್ಷ ಚೆಟ್ಟಂಗಡ ರವಿ ಸುಬ್ಬಯ್ಯ  ಕೇವಲ ಪ್ರಶಸ್ಥಿ, ಸನ್ಮಾನಗಳನ್ನು ಪಡೆಯುವ ಹಾಗೂ ತಾನೋರ್ವ ಲೇಖಕನೆಂದು ಗುರುತಿಸಿಕೊಳ್ಳುವ ದುರಾಸೆಯಿಂದ ಬರೆಯುವವರು ಉತ್ತಮ ಲೇಖಕರಾಗಲಾರರು. ಸಾಹಿತ್ಯ ಸೃಷ್ಟಿ ಒಂದು ತಪಸ್ಸು, ಅದು ಅರ್ಥ ಕಳೆದುಕೊಳ್ಳಬಾರದು. ಭಾವನೆಗೆ ನೀಡಬಹುದಾದ ಅಕ್ಷರ ರೂಪವನ್ನ ಯಾರೂ ದುರ್ಬಳಕೆ ಮಾಡಿಕೊಳ್ಳಬಾರದು ಎಂದು ಕಿವಿಮಾತು ಹೇಳಿದರು. ದತ್ತಿನಿಧಿ ದಾನಿಗಳಾದ ಕೈಬಿಲೀರ ಪಾರ್ವತಿ ಬೋಪಯ್ಯ ಮಾತನಾಡಿ,…

Read More

ಮಡಿಕೇರಿ ಡಿ.27 : ಸೋಮವಾರಪೇಟೆ ಪಂಚಾಯ್ತಿಯ ಮಳಿಗೆಗಳ ಹರಾಜು ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಂಗಳವಾರ ಆಡಳಿತಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಭೆಯಲ್ಲಿ ಅಂತಿಮ ನಿರ್ಣಯಕ್ಕೆ ಬರಲಾಗದ ಹಿನ್ನೆಲೆ, ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯುವ ನಿರ್ಣಯ ಕೈಗೊಳ್ಳಲಾಯಿತು. ಅಂಗಡಿ ಮಳಿಗೆ ಹರಾಜು ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದಾರೆ ಎಂದು ಆರೋಪಿಸಿ ಜಿಲ್ಲಾಧಿಕಾರಿಗಳಿಗೆ ಸದಸ್ಯರು ದೂರು ನೀಡಿದ ಹಿನ್ನಲೆಯಲ್ಲಿ ಡಿ.21ರಂದು ನಡೆಯಬೇಕಾಗಿದ್ದ ಹರಾಜನ್ನು ಸ್ಥಗಿತಗೊಳಿಸಿ ಏಳು ದಿನಗಳ ನೋಟಿಸ್ ನೀಡಿ, ಸಭೆ ನಡೆಸಿ ದಿನಾಂಕ ನಿಗದಿ ಗೊಳಿಸುವಂತೆ ಜಿಲ್ಲಾಧಿಕಾರಿಗಳ ಸೂಚನೆಯಂತೆ ಇಂದು ವಿಶೇಷ ಸಾಮಾನ್ಯ ಸಭೆ ನಡೆಯಿತಾದರು ಅಧಿಕಾರಿಗಳು ಮತ್ತು ಸದಸ್ಯರು ಒಮ್ಮತಕ್ಕೆ ಬರಲು ಸಾಧ್ಯವಾಗಲಿಲ್ಲ. ಸಭೆಯ ಆರಂಭದಲ್ಲೆ ಸದಸ್ಯರು, ಕಳೆದ ಸೆ.13ರಂದು ನಡೆದ ಸಭೆಯಲ್ಲಿ ನಾವು ಮಳಿಗೆ ಹರಾಜು ಮಾಡುವಂತೆ ತಿಳಿಸಿಲ್ಲ. ಹೀಗಿದ್ದೂ ಅಧಿಕಾರಿಗಳು ಹರಾಜು ಮಾಡುವಂತೆ ನಿರ್ಣಯ ಕೈಗೊಂಡಿದ್ದು, ಇದಕ್ಕೆ ನಮ್ಮ ವಿರೋಧವಿದೆ. ಆದ್ದರಿಂದ ಆ ನಿರ್ಣಯವನ್ನು ರದ್ದುಗೊಳಿಸಿ ಎಂದು ಪಟ್ಟು ಹಿಡಿದರು. ಕೊರೋನಾ ಸಂದರ್ಭದಲ್ಲಿ ಅಂಗಡಿ ಮುಚ್ಚಿದ್ದರೂ,ವ್ಯಾಪಾರ ಇಲ್ಲವಾದರೂ ವರ್ತಕರು…

Read More

ಮಡಿಕೇರಿ ಡಿ.27 : ಮುಸ್ಲಿಂ ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡಿ ಅವಮಾನಿಸಿರುವ ಆರೋಪ ಎದುರಿಸುತ್ತಿರುವ ಹಿಂದೂ ಸಂಘಟನೆಯ ಪ್ರಮುಖ ಪ್ರಭಾಕರ್ ಭಟ್ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್ ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಇತ್ತೀಚೆಗೆ ಮಂಡ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಚೋದನಾಕಾರಿ ಭಾಷಣ ಮಾಡುವ ಮೂಲಕ ಪ್ರಭಾಕರ್ ಭಟ್ ಅವರು ಮುಸ್ಲಿಂ ಸಮುದಾಯಕ್ಕೆ ನೋವುಂಟು ಮಾಡಿದ್ದಾರೆ. ಭಾರತ ಸರ್ವಧರ್ಮಗಳ ಸಮನ್ವಯತೆಯ ಸೌಹಾರ್ಧತೆಯ ರಾಷ್ಟ್ರವಾಗಿದೆ. ಇಲ್ಲಿ ಪ್ರತಿಯೊಬ್ಬ ಸ್ತ್ರೀಗೂ ಗೌರವದ ಸ್ಥಾನಮಾನವಿದೆ. ಆದರೆ ಚಪ್ಪಾಳೆ ಗಿಟ್ಟಿಸಿಕೊಳ್ಳುವ ಭರದಲ್ಲಿ ಮುಸ್ಲಿಂ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡುವ ಮೂಲಕ ಇಡೀ ಸ್ತ್ರೀ ಸಮುದಾಯವನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಪ್ರಭಾಕರ್ ಭಟ್ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಸಮಾಜದಲ್ಲಿ ಅಶಾಂತಿ ಮೂಡಿಸುವ ಈ ರೀತಿಯ ಪ್ರಯತ್ನಗಳಿಗೆ ಪೊಲೀಸ್ ಇಲಾಖೆ ಕಡಿವಾಣ ಹಾಕಬೇಕು. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಇದೇ ರೀತಿಯ ಪ್ರಚೋದನಾಕಾರಿ ಮಾತುಗಳು ಹೆಚ್ಚಾಗುವ…

Read More

ಸೋಮವಾರಪೇಟೆ  ಡಿ.27 :  ಶಿಥಿಲಾವಸ್ಥೆಯಲ್ಲಿರುವ ಅಂಗಡಿ ಮಳಿಗೆಗಳ ಹರಾಜು ಮಾಡಲು ಹೊರಟಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಪಟ್ಟಣ ಪಂಚಾಯ್ತಿ ಸದಸ್ಯರು  ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಂಚಾಯ್ತಿ ಸಭೆಯಲ್ಲಿ ಸಿ.ಕೆ.ಸುಬ್ಬಯ್ಯ ರಸ್ತೆಯ ವಾಣಿಜ್ಯ ಮಳಿಗೆಗಳು ಶಿಥಿಲಾವಸ್ಥೆ ತಲುಪಿದ್ದು, ದುರಸ್ತಿಗೊಳಿಸಿ ನಂತರ ಹರಾಜು ನಡೆಸಿ ಈ ಬಗ್ಗೆ ಆಡಳಿತಾಧಿಕಾರಿ ಸ್ಥಳ ಪರಿಶೀಲನೆ ನಡೆಸಲಾಗುವುದು ಎಂದರೂ ಸದಸ್ಯರ ಮಾತಿಗೆ ಸ್ಪಂದಿಸದಿದ್ದರಿಂದ ಸದಸ್ಯರು ಕಟ್ಟಡ ಅವ್ಯವಸ್ಥೆಯನ್ನು ಅನಾವರಣ ಗೊಳಿಸಿದರು. ಕಟ್ಟಡ ಗೋಡೆಯನ್ನು ಕೈನಲ್ಲಿ ಬಡಿದರೆ ಬಿದ್ದು ಹೋಗುತ್ತಿದೆ, ಗೋಡೆಯಲ್ಲಿರುವ ಇಟ್ಟಿಗೆಗಳನ್ನು ಕೈನಲ್ಲಿ ಎಳೆದರೆ ಹೊರಬರುತ್ತಿದೆ. ಮೇಲ್ಛಾವಣಿ ಅಲ್ಲಲ್ಲಿ ಉದುರಿ ಬೀಳುತಿದ್ದು, ಕಬ್ಬಿಣ ಹೊರಬಂದಿವೆ ಇಲ್ಲಿನ ವರ್ತಕರು ಜೀವ ಕೈಯಲ್ಲಿ ಹಿಡಿದು ವ್ಯಾಪಾರ ಮಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸದಸ್ಯರು ಆತಂಕ ವ್ಯಕ್ತಪಡಿಸಿದರು. ಪಟ್ಟಣ ಪಂಚಾಯ್ತಿ ಸದಸ್ಯ ಹಾಗೂ ಮಾಜಿ ಉಪಾಧ್ಯಕ್ಷ ಸಂಜೀವ ಈ ಸಂದರ್ಭ ಪ್ರತಿಕ್ರಿಯಿಸಿ ಪಂಚಾಯ್ತಿಯ ಅತ್ಯಂತ ಹಳೆಯ ಕಟ್ಟಡ. ಇದು ಶಿಥಿಲಾವಸ್ಥೆ ತಲುಪಿದ್ದು ತುರ್ತಾಗಿ ದುರಸ್ತಿ ಆಗಲೇ ಬೇಕಾಗಿದೆ.  ಮಳಿಗೆ ಸಂಖ್ಯೆ 5…

Read More