ಲೇಖಕ: admin

ಮಡಿಕೇರಿ NEWS DESK ಏ.26 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.27ರ ಪುರುಷರ ಪ್ರಿ ಕ್ವಾರ್ಟರ್ ಮತ್ತು ಮಹಿಳೆಯರ ಕ್ವಾರ್ಟರ್ ಫೈನಲ್ಸ್ ಪಂದ್ಯಗಳು. *ಮೈದಾನ 1* ಪುರುಷರ ಪ್ರೀ ಕ್ವಾರ್ಟರ್ ಫೈನಲ್ಸ್ (ಲಾಲು ಮುದ್ದಯ್ಯ ಮೈದಾನ) ಬೆಳಿಗ್ಗೆ 9 ಗಂಟೆಗೆ ಮಂಡುವoಡ ಮತ್ತು ಮಲ್ಲಜ್ಜಿರ, 10ಕ್ಕೆ ಬೊಟ್ಟಂಗಡ ಮತ್ತು ಚೆಕ್ಕೇರ, 11ಕ್ಕೆ ಬೊಳಕಾರಂಡ (ಕೊಣಂಜಗೇರಿ) ಮತ್ತು ಮೋಟನಾಳಿರ ಹಾಗೂ 12 ಗಂಟೆಗೆ ಕೋಳೆರ ಮತ್ತು ಪಂದ್ಯoಡ *ಮಹಿಳೆಯರ ಕ್ವಾರ್ಟರ್ ಫೈನಲ್ಸ್* ಮಧ್ಯಾಹ್ನ 1 ಗಂಟೆಗೆ ಮುಕ್ಕಾಟಿರ (ಹರಿಹರ ) ಮತ್ತು ಪಾಸುರ ಹಾಗೂ 2ಕ್ಕೆ ಓಡಿಯಂಡ ಮತ್ತು ಚೆಕ್ಕೇರ

Read More

ಮಡಿಕೇರಿ NEWS DESK ಏ.26 : ರಾಜ್ಯ ಕಾಂಗ್ರೆಸ್ ಸರಕಾರ ಸ್ಥಳೀಯ ಸಂಸ್ಥೆಗಳಾದ ಜಿ.ಪಂ, ತಾ.ಪಂ ಮತ್ತು ಗ್ರಾ.ಪಂ ಚುನಾವಣೆಯನ್ನು ನಡೆಸದೆ ನಿರ್ಲಕ್ಷö್ಯ ವಹಿಸಿರುವುದನ್ನು ಖಂಡಿಸಿ ಸೋಮವಾರಪೇಟೆ ಮಂಡಲ ಬಿಜೆಪಿ ವತಿಯಿಂದ ಏ.27 ರಂದು ಬೆಳಿಗ್ಗೆ 10.30 ಗಂಟೆಗೆ ಸೋಮವಾರಪೇಟೆ ತಾ.ಪಂ ಕಚೇರಿ ಎದುರು ಪ್ರತಿಭಟನೆ ನಡೆಯಲಿದೆ ಎಂದು ಸೋಮವಾರಪೇಟೆ ಮಂಡಲ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯ ಸರಕಾರ ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಗೆ ಗೌರವ ನೀಡದೆ ಪ್ರಜಾಪ್ರಭುತ್ವ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಸ್ಥಳೀಯ ಸಂಸ್ಥೆ ಚುನಾವಣೆಯನ್ನು ನಡೆಸಿದರೆ ಸರಕಾರದ ದುರಾಡಳಿತದ ವಿರುದ್ಧ ಜನ ಮತ ಹಾಕುವುದರಿಂದ ಕಾಂಗ್ರೆಸ್ ಸೋಲುವ ಭೀತಿಯನ್ನು ಎದುರಿಸುತ್ತಿದೆ. ಇದೇ ಕಾರಣದಿಂದ ಚುನಾವಣೆ ನಡೆಸದೆ ಕಾಲಹರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ತಕ್ಷಣ ಜಿ.ಪಂ, ತಾ.ಪಂ ಮತ್ತು ಗ್ರಾ.ಪಂ ಚುನಾವಣೆಯನ್ನು ನಡೆಸಬೇಕೆಂದು ಆಗ್ರಹಿಸಿ ತಾ.ಪಂ ಕಾರ್ಯನಿರ್ವಹಣಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಲಾಗುವುದು. ಇದೇ ಸಂದರ್ಭ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು “ಭತೋತ್ಪಾದಕ”…

Read More

ಮಡಿಕೇರಿ NEWS DESK ಏ.26 : ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಮೀಸಲಾತಿ ಕುರಿತು ಸಹಿ ಸಂಗ್ರಹ ಕಾರ್ಯಕ್ರಮ ಏ.27 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿದೆ ಎಂದು ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಪುಷ್ಪಲತಾ ಜಿ.ಆರ್ ತಿಳಿಸಿದ್ದಾರೆ. ಮಹಿಳೆಯರಿಗೆ ಶೀಘ್ರ ಶೇ.33 ರಷ್ಟು ಮೀಸಲಾತಿ ನೀಡುವಂತೆ ಒತ್ತಾಯಿಸಿ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಲು ಸಹಿ ಸಂಗ್ರಹ ಅಭಿಯಾನ ನಡೆಸಲಾಗುತ್ತಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Read More

ಸೋಮವಾರಪೇಟೆ NEWS DESK ಏ.26 : ಯಡೂರು ಗ್ರಾಮದ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಶುಕ್ರವಾರ ರಾತ್ರಿ ಹಾಗೂ ಶನಿವಾರ ಹಗಲು ಭಕ್ತಾದಿಗಳ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿತು. ಯಡೂರು ಗ್ರಾಮದ ಐತಿಹಾಸಿಕ ಹಿನ್ನೆಲೆಯುಳ್ಳ ಸುಗ್ಗಿಕಟ್ಟೆಯಲ್ಲಿ ಮಲೆನಾಡಿನ ಜನರ ಗ್ರಾಮೀಣ ಸಂಸ್ಕೃತಿಯನ್ನು ಬಿಂಬಿಸುವ ಸಾಂಪ್ರದಾಯಿಕ ಪೂಜಾ ಕಾರ್ಯಗಳು ನಡೆದವು. ಶುಕ್ರವಾರ ರಾತ್ರಿ ಸುಗ್ಗಿಕಟ್ಟೆಯಲ್ಲಿ ದೇವಿಗೆ ಮಡೆ ಇಟ್ಟ ಗ್ರಾಮಸ್ಥರು ಊರಿನ ಸಮೃದ್ಧಿ ಹಾಗೂ ಮಳೆ ಬೆಳೆಗಾಗಿ ಸಾಮೂಹಿಕ ಪೂಜೆ ಸಲ್ಲಿಸಿದರು. ಸಹಬೋಜನೆ ನೆರವೇರಿತು. ಶನಿವಾರ ಬೆಳಿಗ್ಗೆ ಗ್ರಾಮದ ದೇವರಬಾವಿಯಲ್ಲಿ ಬಸವಣ್ಣ ದೇವರ ಗಂಗಾಸ್ನಾನ ನಡೆಯಿತು. ಬಸವಣ್ಣ ದೇವರನ್ನು ಅಡ್ಡಪಲ್ಲಕ್ಕಿಯಲ್ಲಿ ಕುಳ್ಳಿರಿಸಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಪ್ರತಿ ಮನೆಯವರು ಈಡುಗಾಯಿಯೊಂದಿಗೆ ಪೂಜೆ ಸಲ್ಲಿಸಿದರು. ಅಡ್ಡೆಹೊತ್ತವರ ಕುಣಿತವನ್ನು ಜನರು ವೀಕ್ಷಿಸಿ ಚಪ್ಪಾಳೆಯೊಂದಿಗೆ ಪ್ರೋತ್ಸಾಹಿಸಿದರು. ಸುಗ್ಗಿಕಟ್ಟೆಯಲ್ಲಿ ಗ್ರಾಮಸ್ಥರ ಸಾಮೂಹಿಕ ಕುಣಿತದೊಂದಿಗೆ, ದೇವತಕ್ಕರ ಮೆರವಣಿ ನಡೆಯಿತು. ಭಾನುವಾರ ಮಲ್ಲಸುಗ್ಗಿ, ಸೋಮವಾರ ಹಗಲು ಸುಗ್ಗಿ, ಮಂಗಳವಾರ ಮಾರಿ ಕಳುಹಿಸುವ ಕಾರ್ಯದೊಂದಿಗೆ 13 ದಿನಗಳ ಸುಗ್ಗಿ ಉತ್ಸವ…

Read More

ಮಡಿಕೇರಿ ಏ.25 NEWS DESK : 2025- 26 ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಸೋಮವಾರಪೇಟೆ ತಾಲ್ಲೂಕಿನ ತೋಳೂರು ಶೆಟ್ಟಳ್ಳಿ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗೆ ಶೇ.100 ಫಲಿತಾಂಶ ಬಂದಿದೆ. ಶಾಲೆಯ ಎಲ್ಲಾ 45 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಶೇ.100 ಫಲಿತಾಂಶ ಪಡೆದುಕೊಂಡಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲರಾದ ಚಂದ್ರಶೇಖರ್ ರೆಡ್ಡಿ ತಿಳಿಸಿದ್ದಾರೆ. ಶಾಲೆಯ ವಿದ್ಯಾರ್ಥಿನಿಯಾದ ಕೆ.ಎನ್.ಪುಣ್ಯ , 625 ಅಂಕಗಳಿಗೆ 607 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದರೆ,ವಿದ್ಯಾರ್ಥಿನಿ ವಿ.ಸಮೀಕ್ಷಾ, 598 ಅಂಕಗಳು ಹಾಗೂ ಕೆ.ಕೆ.ಇಂಚರ 588 ಅಂಕಗಳನ್ನು ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಶಾಲೆಗೆ ಕೀರ್ತಿ ತಂದಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೂ ಶಿಕ್ಷಕರು, ಬೋಧಕೇತರ ಸಿಬ್ಬಂದಿಗಳು ಹಾಗೂ ಪೋಷಕ ಶಿಕ್ಷಕ ಪರಿಷತ್ ನ ಸದಸ್ಯರು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Read More

ಮಡಿಕೇರಿ ಏ.25 NEWS DESK : ಕರ್ನಾಟಕ ಸರಕಾರದ ಪುಸ್ತಕ ಅಭಿವೃದ್ಧಿ ಪ್ರಾಧಿಕಾರದಿಂದ ರಚಿಸಲ್ಪಟ್ಟಿರುವ ಕೊಡಗು ಜಿಲ್ಲಾ ಜಾಗೃತಿ ಸಮಿತಿಯ ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಭೆಯು ಜಿಲ್ಲಾ ಸಂಚಾಲಕ ಎಂ.ಪಿ.ಕೇಶವ ಕಾಮತ್ ಅವರ ಅಧ್ಯಕ್ಷತೆಯಲ್ಲಿ ಕೊಡಗು ಪತ್ರಿಕಾ ಭವನದಲ್ಲಿ ನಡೆಯಿತು. ಸಮಿತಿ ಸದಸ್ಯರಾಗಿರುವ ಪತ್ರಕರ್ತ ರಂಜಿತ್ ಕವಲಪಾರ ಅವರನ್ನು ಜಿಲ್ಲಾ ಜಾಗೃತ ಸಮಿತಿಯ ಗೌರವ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು.  ಮೊದಲನೇ ಕಾರ್ಯಕ್ರಮವಾಗಿ ವಿಶ್ವ  ಪುಸ್ತಕ ದಿನಾಚರಣೆ ಮತ್ತು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು. ಜಿಲ್ಲೆಯಲ್ಲಿ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಸಾರ್ವಜನಿಕರ ಮನವೊಲಿಸಿ ಮನೆಗೊಂದು ಗ್ರಂಥಾಲಯ ಯೋಜನೆ ಅನುಷ್ಠಾನ ಮಾಡುವಂತೆ ತೀರ್ಮಾನಿಸಲಾಯಿತು. ಪ್ರಾರಂಭಿಕವಾಗಿ ಮೇ ತಿಂಗಳಿನಲ್ಲಿ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಎರಡು ಮನೆಗಳನ್ನು ಆಯ್ಕೆ ಮಾಡಿ ಮನೆಗೊಂದು ಗ್ರಂಥಾಲಯ ಯೋಜನೆ ಅನುಷ್ಠಾನ ಮಾಡುವಂತೆಯೂ ಆ ಕಾರ್ಯಕ್ರಮಕ್ಕೆ ರಾಜ್ಯಾಧ್ಯಕ್ಷರಾದ ಡಾ.ಮಾನಸ ಅವರನ್ನು ಆಹ್ವಾನಿಸುವಂತೆ ತೀರ್ಮಾನಿಸಲಾಯಿತು. ಜಿಲ್ಲಾ ಕನ್ನಡ ಜಾಗೃತಿ ಸಮಿತಿಯ ಸಭೆಯಲ್ಲಿ ಸದಸ್ಯರುಗಳಾದ ಟಿ.ಪಿ ರಮೇಶ್, ಬಿ.ಎನ್ ಪ್ರಕಾಶ್ ಕೆ.ವಿ ಉಮೇಶ್, ಎಚ್.ಎಲ್…

Read More

ಮಡಿಕೇರಿ ಏ.25 NEWS DESK : ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟಗೊಂಡಿದ್ದು, ನಾಪೋಕ್ಲು ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ  ವಿ.ಯು.ಮಿಸ್ಬಾಹ್  ಶೇ.97.76 ಅಂಕ ಪಡೆದು ಸಾಧನೆ ಮಾಡಿದ್ದಾನೆ. ಮಿಸ್ಬಾಹ್  ಕುಂಜಿಲ ವಯಕೋಲ್ ಗ್ರಾಮದ ವಿ.ಎ.ಉಸ್ಮಾನ್ – ಖೈರುನ್ನಿಶಾ ದಂಪತಿಯ ಪುತ್ರ.

Read More

ವಿರಾಜಪೇಟೆ ಏ.25 NEWS DESK : ಕೆದಮುಳ್ಳೂರು ಗ್ರಾಮ ತರ್ಮೆಮೊಟ್ಟೆ ಗ್ರಾಮದಲ್ಲಿ ಶ್ರೀ ಪಾಷಾಣಮೂರ್ತಿ, ಗುಳಿಗ ದೈವಗಳ ನೇಮೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಗ್ರಾಮದ ನಿವಾಸಿ ಬಿ.ಇ.ಹೊನ್ನಪ್ಪ ( ನಾರಾಯಣ) ಮನೆಯಲ್ಲಿ ಗಣಪತಿ ಹೋಮ ಮತ್ತು ಸತ್ಯ ನಾರಾಯಣ ಪೂಜೆಯೊಂದಿಗೆ ನೇಮೋತ್ಸವಕ್ಕೆ ಚಾಲನೆ ನೀಡಲಾಯಿತು. ಗುರು ಹಿರಿಯರು, ಕುಟುಂಬ ಸದಸ್ಯರಿಂದ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿ ವಿಶೇಷ ಎಣ್ಣೆಯನ್ನು ದೈವ ನರ್ತಕರಿಗೆ ನೀಡಲಾಯಿತು. ಸುಳ್ಯದ ಬೊಳಿಯ ಮಜಲು ಜಯರಾಂ ಅವರ( ದೈವ ನರ್ತಕರು) ಸಾನಿದ್ಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಕುಟುಂಬ ಮನೆಯಿಂದ ದೈವಗಳ ಭಂಡಾರ ಇಳಿಸಲಾಯಿತು. ಅನ್ನ ಸಂತರ್ಪಣೆ ನಡೆಯಿತು. ರಾತ್ರಿ ಪಾಷಾಣಮೂರ್ತಿ ದೈವ ನೇಮ ಮತ್ತು ಗುಳಿಗ ದೈವದ ನೇಮ ದೈವದ ನೇಮ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹರ್ಶಿತ್ ಮತ್ತು ತಂಡ (ದೈವಗಳಿಗೆ ನುಡಿಸುವ ವಿಶೇಷ ವಾದ್ಯ) ನುಡಿಸಿದ ವಾದ್ಯ ಭಕ್ತರನ್ನು ಮಂತ್ರ ಮುಗ್ದವಾಗಿಸಿತು. ನೇಮೋತ್ಸವದಲ್ಲಿ ಕುಟುಂಬ ವರ್ಗ, ಗ್ರಾಮಸ್ಥರು ಹಾಗೂ ಭಕ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ,…

Read More

ಮಡಿಕೇರಿ NEWS DESK ಏ.25 : ವಿಕಾಸ್ ಜನತಾ ಸೇವಾ ಟ್ರಸ್ಟ್, ಟ್ರಸ್ಟ್ ನ ವ್ಯವಸ್ಥಾಪನಾ ಸಮಿತಿ, ತುರ್ತು ಆರೋಗ್ಯ ಸೇವಾ ಘಟಕ ಸೇರಿದಂತೆ ವಿಕಾಸ್ ಜನತಾ ಸೇವಾ ಟ್ರಸ್ಟ್ ನ ಎಲ್ಲಾ ಸಮಿತಿಗಳ ಕಾನೂನು ಸಲಹೆಗಾರರಾಗಿ ಕರ್ನಾಟಕ ಹೈಕೋರ್ಟ್ ವಕೀಲ ರೋಷನ್ ಹೆಚ್.ಸಿ ಅವರು ಆಯ್ಕೆಯಾಗಿದ್ದಾರೆ. ವಿಕಾಸ್ ಜನತಾ ಸೇವಾ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಡಿ.ಕರಿಯಪ್ಪ, ಅಧ್ಯಕ್ಷ ನವೀನ್ ಬಿ.ಕೆ ಹಾಗೂ ಗೌರವ ಅಧ್ಯಕ್ಷ ಪ್ರಸನ್ನ ಭಟ್ ಅವರ ನೇತೃತ್ವದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.

Read More

ಮೈಸೂರು ಏ. 25 NEWS DESK : ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸುವ ಕುರಿತು ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ಮೈಸೂರಿನಲ್ಲಿ ವಿಮಾನ ನಿಲ್ದಾಣದ ಅಭಿವೃದ್ಧಿ ಕುರಿತ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಂಸದರು, ಕ್ಷಿಪ್ರಗತಿಯಲ್ಲಿ ಕಾರ್ಯಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ. ದೀರ್ಘಕಾಲೀನ ಯೋಜನೆಗೆ ಸ್ಪಷ್ಟ ರೂಪ ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಮುಂದಾಗಬೇಕು ಎಂದು ತಿಳಿಸಿದರು. ವಿಮಾನ ನಿಲ್ದಾಣ ಅಭಿವೃದ್ಧಿಗೆ ಸಂಬಂಧಿಸಿದ ಸಮಗ್ರವಾದ ಯೋಜನಾ ವರದಿ (DPR) ಅನ್ನು ಶೀಘ್ರದಲ್ಲಿ ಸಿದ್ಧಪಡಿಸಲು ಅಧಿಕಾರಿಗಳು ಮುಂದಾಗಬೇಕು. ಈ ಯೋಜನೆಗೆ ಅಗತ್ಯವಿರುವ ಉಳಿದ ಭೂಮಿ ಹಸ್ತಾಂತರ ಪ್ರಕ್ರಿಯೆಯನ್ನು ವೇಗಗೊಳಿಸಲು ಸಂಬಂಧಿತ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಸಂಸದರು ತಿಳಿಸಿದರು. ರ್ಘಕಾಲೀನ ಸಂಪರ್ಕ ಯೋಜನೆ ಅಗತ್ಯ ಮೈಸೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ದೀರ್ಘಕಾಲೀನ ಪರಿಹಾರ ಒದಗಿಸುವುದು ನಮ್ಮ ಉದ್ದೇಶವಾಗಿದ್ದು, ಕಡಿಮೆ…

Read More