ಲೇಖಕ: admin

ಮಡಿಕೇರಿ  ಜ.23 NEWS DESK  : ಅಯೋಧ್ಯೆಯಲ್ಲಿ ಶ್ರೀ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ  ಕತ್ತಲೆಕಾಡು, ಜೇನುಕೊಲ್ಲಿ ವಿನಾಯಕ ಸೇವಾ ಸಮಿತಿ ವತಿಯಿಂದ ದೀಪೋತ್ಸವ ಹಾಗೂ ಭಜನಾ ಕಾರ್ಯಕ್ರಮ‌ ಜರುಗಿತು. ಸಮಿತಿ ಆವರಣದಲ್ಲಿ  ಗ್ರಾಮದ ಸಾರ್ವಜನಿಕರು ಹಣತೆಗಳನ್ನು ಬೆಳಗಿದರು. ಬಳಿಕ ಸುಭಾಷ್ ಮತ್ತು ಸ್ಥಳೀಯ ಮಕ್ಕಳು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು. ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಿತು. ಕತ್ತಲೆಕಾಡು, ಜೇನುಕೊಲ್ಲಿ, ಕ್ಲೋಸ್‌ಬರ್ನ್ ಭಾಗದ ಸಾರ್ವಜನಿಕರು ಪಾಲ್ಗೊಂಡಿದ್ದರು. ಸಮಿತಿ ಅಧ್ಯಕ್ಷ ಎಂ.ಎಸ್. ಅಶೋಕ್, ಕಾರ್ಯದರ್ಶಿ ಬ್ರಿಜೇಶ್ ರೈ, ಖಜಾಂಚಿ ಸತೀಶ್ ರೈ, ಮಾಜಿ ಅಧ್ಯಕ್ಷ ಹೊನ್ನಪ್ಪ ಆಚಾರ್ಯ, ಮಹಿಳಾ ಘಟಕದ ಪ್ರತಿಭಾ, ರಮಣಿ ಶೇಷಪ್ಪ, ವಿದ್ಯಾರ್ಥಿ ಘಟಕದ ಸದಸ್ಯರು, ಸಾರ್ವಜನಿಕರು ಈ ಸಂದರ್ಭ ಇದ್ದರು.

Read More

ಮಡಿಕೇರಿ ಜ.23 NEWS DESK :  ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆ ಪ್ರಯುಕ್ತ ಸುದರ್ಶನ ಬಡಾವಣೆಯ ಮುನೀಶ್ವರ ದೇವಾಲಯ ಸಮಿತಿ ಮತ್ತು ಮುನೀಶ್ವರ ಯುವಕ ಸಂಘದ ವತಿಯಿಂದ ವಿವಿಧ ಕಾರ್ಯಕ್ರಮ ಜರುಗಿತು. ದೇವಾಲಯದಲ್ಲಿ ವಿಶೇಷ ಪೂಜೆ, ಪ್ರಸಾದ ವಿತರಣೆ ಜರುಗಿತು. ಬಳಿಕ ಬಡಾವಣೆ ನಿವಾಸಿಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಆಂಜನೇಯ ದೇವಾಲಯಕ್ಕೆ ಕಾಲ್ನಡಿಗೆ ಮೂಲಕ ತೆರಳಿ ಅಲ್ಲಿ ಜರುಗಿದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾದರು. ರಾಮೋತ್ಸವ ಪ್ರಯುಕ್ತ ದೇವಾಲಯದಲ್ಲಿ ಸಂಜೆ ವಿಶೇಷ ಪೂಜೆ, ಪ್ರಾರ್ಥನೆ ಜರುಗಿತು. ಮಕ್ಕಳು ರಾಮ, ಸೀತೆಯ ವೇಷ ಧರಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸ್ಥಳೀಯರು ಭಕ್ತಿಗೀತೆಗಳನ್ನು ಹಾಡಿದರು. ನಂತರ ಸಮಿತಿ ಅಧ್ಯಕ್ಷ ಬಿ.ಡಿ.ಜಗದೀಶ್ ರೈ ಅಧ್ಯಕ್ಷತೆಯಲ್ಲಿ ಜರುಗಿದ ಸಭಾ ಕಾರ್ಯಕ್ರಮದಲ್ಲಿ ಅಯೋಧ್ಯೆಯ ಕರ ಸೇವೆಯಲ್ಲಿ ಪಾಲ್ಗೊಂಡಿದ್ದ ಸ್ವಯಂ ಸೇವಕರನ್ನು ಸನ್ಮಾನಿಸಿ ಗೌರವಿಸಲಾಯಿತು. 1992ರ ಕರಸೇವೆಯಲ್ಲಿ ಪಾಲ್ಗೊಂಡಿದ್ದ ಬಡಾವಣೆ ನಿವಾಸಿಗಳಾದ ಎಂ.ಪಿ.ಸುನೀಲ್ ಸುಬ್ರಹ್ಮಣಿ, ಮನು ಮಂಜುನಾಥ್, ಕೆ.ಆರ್.ರಮೇಶ್ ಅವರಿಗೆ ಫಲ ತಾಂಬೂಲ, ಅಯೋಧ್ಯೆ ರಾಮಮಂದಿರದ ಪ್ರತಿರೂಪವನ್ನು ನೀಡಿ ಸಮಿತಿ ಪದಾಧಿಕಾರಿಗಳು ಗೌರವಿಸಿದರು. ಬಳಿಕ…

Read More

ಮಡಿಕೇರಿ, ಜ.23 NEWS DESK :  ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕಲಬುರಗಿ ಜಿಲ್ಲೆಯ ಸೇಡಂ ನಗರದಲ್ಲಿ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಸಂಯುಕ್ತಾಶ್ರಯದಲ್ಲಿ ಮೂರು ದಿನಗಳ ಕಾಲ ” ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಜೀವಿ- ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ “(Main theme : “Understanding Eco- System for Health & Well being “) ಎಂಬ ಕೇಂದ್ರ ವಿಷಯದಡಿ ಏರ್ಪಡಿಸಿದ್ದ 31ನೇ ರಾಜ್ಯಮಟ್ಟದ ಮಕ್ಕಳ ವಿಜ್ಞಾನ ಸಮಾವೇಶವು ಸಮಾರೋಪಗೊಂಡಿತು. ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ವಿದ್ಯಾರ್ಥಿಗಳು ಕೇಂದ್ರ ವಿಷಯದಡಿ ತಮ್ಮ ಸುತ್ತಲಿನ ಪರಿಸರದಲ್ಲಿ ಸಮೀಕ್ಷೆ ಕೈಗೊಂಡು ವೈಜ್ಞಾನಿಕ ಯೋಜನಾ ಪ್ರಬಂಧ ಸಿದ್ದಪಡಿಸಿ ಉತ್ತಮವಾಗಿ ಪ್ರಬಂಧ ಮಂಡಿಸಿದ ಕೊಡಗು ಜಿಲ್ಲೆಯ ಇಬ್ಬರು ಬಾಲ ವಿಜ್ಞಾನಿಗಳು 31 ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಆಯ್ಕೆಗೊಂಡಿದ್ದಾರೆ. ಸುಂಟಿಕೊಪ್ಪ ಸಮೀಪದ‌ ಕೊಡಗರಹಳ್ಳಿ…

Read More

ಚೆಟ್ಟಳ್ಳಿ ಜ.23 NEWS DESK : ಚೆಟ್ಟಳ್ಳಿ ಪ್ರೌಢಶಾಲೆಯ ಕ್ರೀಡೋತ್ಸವವು ಸಂಭ್ರಮದಿಂದ ನಡೆಯಿತು. ಶಾಲಾ ಮೈದಾನದಲ್ಲಿ‌ ಧ್ವಜರೋಹಣ ನೆರವೇರಿಸಿ ಮಾತನಾಡಿದ ಮಾದೇಟಿರ ಪಿ.ತಿಮ್ಮಯ್ಯ  ತನ್ನ ವಿದ್ಯಾರ್ಥಿಜೀವನದ ನೆನಪನ್ನು ಮೆಲುಕು ಹಾಕಿದರು.  ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರುವುದರ ಮೂಲಕ ಉತ್ತಮ ಹವ್ಯಾಸವನ್ನು ವೃದ್ಧಿಸಿಕೊಳ್ಳುವ ಮೂಲಕ ಜೀವನದಲ್ಲಿ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು. ಹೆಚ್.ಕೆ.ಬೋಜ ಮಾತನಾಡಿ, ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರಲು ಕ್ರೀಡಾಕೂಟ ಸಹಕಾರಿ ಎಂದ ಅವರು, ಕ್ರೀಡೆಗಳು ಮಕ್ಕಳಲ್ಲಿ ಆತ್ಮವಿಶ್ವಾಸ, ಶಿಸ್ತು, ಸಂಯಮ ಹಾಗೂ ಪರಸ್ಪರ ಸಹಕಾರ ಸಹಬಾಳ್ವೆಯನ್ನು ಹೆಚ್ಚಿಸಲಿದೆ ಎಂದರು. ಶಾಲಾ ಆಡಳಿತ‌ ಮಂಡಳಿಯ ಸಂಚಾಲಕ ಮುಳ್ಳಂಡ ರತ್ತುಚಂಗಪ್ಪ ಮಾತನಾಡಿ, ವಿದ್ಯಾರ್ಥಿಗಳು  ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುತ್ತ ಆಟಪಾಠಗಳಲ್ಲಿ‌ ತೊಡಗಿಸಿ ಕೊಳ್ಳಬೇಕೆಂದರು‌. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ  ಪೇರಿಯನ ಪಿ.ಜಯಾನಂದ  ಆರೋಗ್ಯವಂತ ಸದೃಢ ಯುವ ಜನಾಂಗ ನಿರ್ಮಾಣವಾಗಬೇಕಾದರೆ ಕ್ರೀಡೆ ಹಾಗೂ ಯೋಗದಲ್ಲಿ ತೊಡಗಿಸಿ ಕೊಳ್ಳಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ಉದ್ಯಮಿ‌ ಮಾದೇಟಿರ ಪಿ.ತಿಮ್ಮಯ್ಯ ಹಾಗೂ ನಿವೃತ್ತ ಮುಖ್ಯೋಪದ್ಯಾಯರಾದ ಹೆಚ್.ಕೆ.ಬೋಜ  ಪಾಲ್ಗೊಂಡಿದ್ದರು. ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು,…

Read More

ಮಡಿಕೇರಿ ಜ.23  NEWS DESK :  ಮಡಿಕೇರಿ ನಗರದ ಜಿಲ್ಲಾಸ್ಪತ್ರೆಯಲ್ಲಿ ನಿತ್ಯ ಜನಜಂಗುಳಿ ಏರ್ಪಡುತ್ತಿದ್ದು, ಹೆಸರು ನೋಂದಾವಣಿ ಮತ್ತು ಶುಲ್ಕ ಪಾವತಿ ಸ್ಥಳದಲ್ಲಿ ಹೆಚ್ಚುವರಿ ಕೌಂಟರ್ ತೆರೆಯಬೇಕೆಂದು ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ಸಂಘಟನೆಯ ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷ ಹೆಚ್.ಎಂ.ಸೋಮಪ್ಪ ಒತ್ತಾಯಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿನ ಅವ್ಯವಸ್ಥೆಗಳನ್ನು ಖುದ್ದು ಪರಿಶೀಲಿಸಿ ಮಾತನಾಡಿದ ಅವರು, ಕೊಡಗು ಜಿಲ್ಲೆ ಮಾತ್ರವಲ್ಲದೆ ಹೊರ ಜಿಲ್ಲೆಗಳಿಂದಲೂ ನೂರಾರು ರೋಗಿಗಳು ಆಸ್ಪತ್ರೆಗೆ ಬರುತ್ತಿದ್ದಾರೆ. ಇವರಲ್ಲಿ ಬಡವರು ಹಾಗೂ ಕೂಲಿ ಕಾರ್ಮಿಕರೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಆಸ್ಪತ್ರೆಯಲ್ಲಿ ಮಾಹಿತಿಯ ಕೊರತೆ ಎದುರಾಗಿದೆ ಎಂದರು. ಹೆಸರು ನೋಂದಾವಣಿ ಮತ್ತು ಶುಲ್ಕ ಪಾವತಿಗೆ ತಲಾ ಒಂದೊಂದು ಕೌಂಟರ್ ಮಾತ್ರ ಇದೆ. ಈ ಕೌಂಟರ್ ಗಳ ಎದುರು ಸಾಲು ಸಾಲು ಜನ ನಿಂತಿರುತ್ತಾರೆ. ಮಧ್ಯಾಹ್ನವಾದರೂ ಚೀಟಿ ಸಿಗದೆ ರೋಗಿಗಳು ಹಾಗೂ ಸಂಬಂಧಿಕರು ಬೇಸತ್ತು ಮರಳುತ್ತಿರುವ ದೃಶ್ಯಗಳು ಸಾಮಾನ್ಯವಾಗಿದೆ. ಶುಲ್ಕ ಪಾವತಿಯ ಬಗ್ಗೆ ಯಾರೂ ಸರಿಯಾದ ಮಾಹಿತಿಯನ್ನು ಒದಗಿಸುತ್ತಿಲ್ಲ. ಕೌಂಟರ್ ನ್ನು ಹುಡುಕಿಕೊಂಡು ಅಲೆದಾಡಬೇಕಾದ ಪರಿಸ್ಥಿತಿ…

Read More

ಮಡಿಕೇರಿ ಜ.23 NEWS DESK : ಕನಿಷ್ಟ ವೇತನ ಮತ್ತು ಪಿಂಚಣಿ ಸೌಲಭ್ಯ ಕಲ್ಪಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕೊಡಗು ಜಿಲ್ಲಾ ಅಂಗನವಾಡಿ ನೌಕರರ ಸಂಘ ಸಿಐಟಿಯು ನೇತೃತ್ವದಲ್ಲಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ, ಘೋಷಣೆಗಳನ್ನು ಕೂಗಿದರು. ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಪ್ರಸ್ತುತ ಮಾಸಿಕ 11,500 ರೂ. ಗೌರವ ಧನವನ್ನಷ್ಟೆ ಪಡೆಯುತ್ತಿದ್ದಾರೆ. 2017ರ ಬಳಿಕ ಗೌರವ ಧನ ಹೆಚ್ಚಳವಾಗಿಲ್ಲ. ಬೆಲೆ ಏರಿಕೆಯ ಈ ದಿನಗಳಲ್ಲಿ ಕನಿಷ್ಟ 31 ಸಾವಿರ ವೇತನವನ್ನು ನೀಡಬೇಕೆಂದು ಒತ್ತಾಯಿಸಿದರಲ್ಲದೆ, ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗುವವರಿಗೆ ಕನಿಷ್ಟ 10 ಸಾವಿರ ಪಿಂಚಣಿ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿದರು. ಸಮಿತಿಯ ಜಿಲ್ಲಾಧ್ಯಕ್ಷ ಪಿ.ಆರ್.ಭರತ್, ಜಿಲ್ಲಾ ಪ್ರಧನಾ ಕಾರ್ಯದರ್ಶಿ ಎ.ಸಿ.ಸಾಬು, ಪೊನ್ನಂಪೇಟೆ ತಾಲ್ಲೂಕು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ವಿ.ಎಸ್.ಸುಮಿತ್ರ, ಮಡಿಕೇರಿ ತಾಲ್ಲೂಕು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷರಾದ ಬಿ.ಎಸ್.ಸರೋಜ, ಸೋಮವಾರಪೇಟೆ…

Read More

ಚೆಯ್ಯಂಡಾಣೆ ಜ.23 NEWS DESK :  ಕೊಡಗು ಜಿಲ್ಲಾ ಮುಸ್ಲಿಂ ಸ್ಪೋಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್ ವತಿಯಿಂದ ವಿರಾಜಪೇಟೆ ತಾಲೂಕು ಮೈದಾನದಲ್ಲಿ ನಡೆದ 15ನೇ ವರ್ಷದ ಜಿಲ್ಲಾ ಮಟ್ಟದ ಜಮಾಅತ್ ಗಳ ಹೊನಲು ಬೆಳಕಿನ ಕೊಡಗು ಮುಸ್ಲಿಂ ಕಪ್ ವಾಲಿಬಾಲ್ ಪಂದ್ಯಾವಳಿಯಲ್ಲಿ  ಝೆಡ್ ವೈ ಸಿ ಕೊಟ್ಟಮುಡಿ ತಂಡ ಚಾಂಪಿಯನ್  ಪಟ್ಟವನ್ನು  ತನ್ನದಾಗಿಸಿಕೊಂಡಿದ್ದು,  ಸ್ಟಾರ್ ಬಾಯ್ಸ್ ಗುಂಡಿಕೆರೆ ತಂಡ ರನ್ನರ್ಸ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿದೆ. ಮೈಸೂರು ಯೂನಿವರ್ಸಿಟಿ ಆಟಗಾರ ಕೊಟ್ಟಮುಡಿ ತಂಡದ ಸುಹೈಲ್ ನ ಬಿರುಸಿನ ಹೊಡೆತಕ್ಕೆ ತತ್ತರಿಸಿದ ಸ್ಟಾರ್ ಬಾಯ್ಸ್ ಗುಂಡಿಕೆರೆ ತಂಡ  25-18 ಮತ್ತು 25-15 ಅಂಕಗಳಿಂದ ಮಣಿಸಿ ಚಾಂಪಿಯನ್ ಪ್ರಶಸ್ತಿ ಪಡೆದುಕೊಂಡರು. ಇದಕ್ಕೂ ಮೊದಲು ನಡೆದ ಸೆಮಿಫೈನಲ್ ಪಂದ್ಯದಲ್ಲಿ ಸ್ಟಾರ್ ಬಾಯ್ಸ್ ಗುಂಡಿಕೆರೆ ತಂಡ ನಾಪೋಕ್ಲು ‘ಎ’ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿತು. ಮತ್ತೊಂದು ಸೆಮಿಫೈನಲ್ ನಲ್ಲಿ ಝೆಡ್ ವೈ.ಸಿ ಕೊಟ್ಟಮುಡಿ ತಂಡ ಕರಿಕೆ ತಂಡವನ್ನು ಸೋಲಿಸಿ ಫೈನಲ್ ಗೆ ಅರ್ಹತೆ ಗಿಟ್ಟಿಸಿಕೊಂಡರು. ಪಂದ್ಯದುದ್ದಕ್ಕೂ ಉತ್ತಮ ಪ್ರದರ್ಶನ ನೀಡಿದ ಕೊಟ್ಟಮುಡಿ…

Read More

ವಿರಾಜಪೇಟೆ ಜ.23  NEWS DESK : ಧಾರ್ಮಿಕ, ಐತಿಹಾಸಿಕವಾಗಿ ಮಹತ್ವ ಪಡೆದಿರುವ ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಪ್ರಯುಕ್ತ ತಾಲೂಕಿನ ಕೆದಮುಳ್ಳೂರು ಗ್ರಾಮದ ತೋರದ ತೋಮರತಪ್ಪ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿತು. ಮಹಾಪೂಜೆ, ಮಹಾ ಮಂಗಳಾರತಿ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗ ನಡೆಯಿತು. ಈ ಸಂದರ್ಭ ಗ್ರಾಮಸ್ಥರಾದ ಪರಮೇಶ್ವರ, ಗೌಡುದಾರೆ ಚೋಟು ಬಿದ್ದಪ್ಪ, ಕಿರಣ್ ಪೂಜಾರಿ, ಹೇಮಂತ್, ಮಾಳೇಟಿರ ಸನ್ನಿ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

Read More

ದೆಹಲಿ ಜ.23 NEWS DESK : ಅಯೋಧ್ಯೆ ಶ್ರೀರಾಮಮಂದಿರ ಪ್ರಾಣ ಪ್ರತಿಷ್ಠಾಪನಾ ಸಮಾರಂಭದ ನಿಮಿತ್ತ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿ ಪ್ರಭು ಶ್ರೀರಾಮನಿಗೆ ದೀಪ ಹಚ್ಚುವ ಮೂಲಕ ರಾಮಜ್ಯೋತಿ ಬೆಳಗಿದರು.

Read More

ಮಡಿಕೇರಿ ಜ.23 NEWS DESK : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ “ಯುವನಿಧಿ” ಯೋಜನೆಯನ್ನು ಡಿಸೆಂಬರ್ 26 ರಂದು ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ. 2023 ರಲ್ಲಿ ಪದವಿ/ ಡಿಪ್ಲೋಮಾ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ/ಖಾಸಗಿ/ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮಒನ್, ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ http://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ “ಯುವನಿಧಿ” ಯೋಜನೆಗೆ ಅರ್ಜಿ ಸಲ್ಲಿಸಬಹುದು. ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ.ಗಳು ಹಾಗೂ ಡಿಪ್ಲೋಮಾ ಪದವೀಧರರಿಗೆ 1,500 ರೂ.ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 18005999918 / 9113935220 ಗೆ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹಾಗೂ ಜಿಲ್ಲಾ ಉದ್ಯೋಗಾಧಿಕಾರಿ ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ…

Read More