ಲೇಖಕ: admin

ಸುಂಟಿಕೊಪ್ಪ,ಜ.22 NEWS DESK :  ಆಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಲೋಕಾರ್ಪಣೆಯೊಂದಿಗೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಹಿನ್ನಲೆಯಲ್ಲಿ ದೇಶದ್ಯಾಂತ ನಡೆದ ವಿಶೇಷ ಪೂಜಾ ಮತ್ತು ಇತರ ಧಾರ್ಮಿಕ ಕಾರ್ಯಕ್ರಮಗಳು ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯಲ್ಲಿ ಕೂಡ ಪ್ರತಿಸ್ಪಂದನಗೊಂಡು ಪ್ರತಿ ಹಳ್ಳಿಯ ದೇವಾಲಯಗಳಲ್ಲಿ ವಿಶೇಷ ಪೂಜೆ ಹೋಮ, ಹವನದಿಗಳ ಸಹಿತ ಅನ್ನಸಂತರ್ಪಣೆಯೊಂದಿಗೆ ಸಹಸ್ರಹಾರು ಭಕ್ತರು ಪಾಲ್ಗೊಂಡು ಐತಿಹಾಸಿಕ ಕ್ಷಣವನ್ನು ಸಂಭ್ರಮಿಸಿದರು. ಹೆಚ್ಚಿನ ದೇವಾಲಯಗಳಲ್ಲಿ ಬಹೃತ್ ಟಿವಿ ಪರದೆ ಅಳವಡಿಸುವ ಮೂಲಕ ಭಕ್ತಾಧಿಗಳು ಪೂಜೆಯೊಂದಿಗೆ ಅಯೋಧ್ಯೆಯ ನೇರ ಕಾರ್ಯಕ್ರಮವನ್ನು ಕಣ್ತುಂಬಿಕೊಂಡರು. ಸುಂಟಿಕೊಪ್ಪದ ಶ್ರೀ ಕೊದಾಂಡರಾಮ ದೇವಾಲಯದಲ್ಲಿ ವಿಶೇಷ ಪೂಜೆ ಅನ್ನಸಂತರ್ಪಣೆ ನಡೆಯಿತು. ಬೆಳಿಗ್ಗೆ ಗಣಪತಿ ಹೋಮದೊಂದಿಗೆ ಪ್ರಾರಂಭವಾಗಿ ರಾಮತರಾಕ ಹೋಮವನ್ನು ನಡೆಸಲಾಯಿತು. ಪೂಜಾ ಕೈಂಕರ್ಯಗಳನ್ನು ಪ್ರಧಾನ ಅರ್ಚಕ ದರ್ಶನ್ ಭಟ್, ಮನೋಜ್ ಭಟ್, ವೆಂಕಟರಮಣ ಭಟ್ ನೇರವೇರಿಸಿದರು. ಮಧ್ಯಾಹ್ನ ಮಹಾಪೂಜೆಯ ಬಳಿಕ ಅನ್ನ ಸಂತರ್ಪಣೆ ನೆರವೇರಿತು. ಕಾರ್ಯಕ್ರಮದ ನೇತೃತ್ವವನ್ನು ಪಿ.ಆರ್.ಸುನಿಲ್ ಕುಮಾರ್, ಎಸ್.ಶಾಂತರಾಂ ಕಾಮತ್, ಡಿ.ನರಸಿಂಹ, ಎಂ.ಎಸ್.ಸುನಿಲ್, ಧನುಕಾವೇರಪ್ಪ, ಬಿ.ಕೆ.ಮೋಹನ್, ಪ್ರಶಾಂತ್ ಕೋಕಾ, ವಾಸುದೇವ, ನಿಖಿಲ್…

Read More

ಸೋಮವಾರಪೇಟೆ ಜ.23 : ಅಯೋಧ್ಯೆಯಲ್ಲಿ ಶ್ರೀರಾಮದೇವರ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಪಟ್ಟಣದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿತು. ಪಟ್ಟಣದ ಶ್ರೀ ಗಣಪತಿ, ಬಸವೇಶ್ವರ, ಸೋಮೇಶ್ವರ, ವೆಂಕಟೇಶ್ವರ ಸೇರಿದಂತೆ ಗ್ರಾಮೀಣ ಭಾಗದ ದೇವಾಲಯಗಳಲ್ಲಿ ಪೂಜೆ ಸಲ್ಲಿಸಲಾಯಿತು. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಶ್ರೀ ಆಂಜನೇಯ ಮತ್ತು ರಾಮಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಶ್ರೀರಾಮಮಂದಿರದಲ್ಲಿ ಗಣಪತಿ ಹೋಮ, ಶ್ರೀರಾಮತಾರಕ ಹೋಮ, ವಿಶೇಷ ಪೂಜೆ, ಭಜನೆ, ಅನ್ನದಾನ ನೆರವೇರಿತು. ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಪೂಜೋತ್ಸವದಲ್ಲಿ ಭಾಗವಹಿಸಿದ್ದರು. ಅಬ್ಬೂರುಕಟ್ಟೆ ಜಂಕ್ಷನ್‍ನಲ್ಲಿ ರಾಮಭಕ್ತರು ಅಯೋಧ್ಯೆಯಲ್ಲಿ ನಡೆಯುವ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮವನ್ನು ಎಲ್‍ಇಡಿ ಪರದೆಯಲ್ಲಿ ಪ್ರದರ್ಶಿಸಿದರು. ದೇವಾಲಗಳಲ್ಲಿ ನೆರೆದಿದ್ದ ಭಕ್ತಾದಿಗಳಿಗೆ ಅನ್ನದಾನ ನಡೆಯಿತು. ರಾಮಭಕ್ತರು ಪಟ್ಟಣದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಮಹಾತ್ಮಗಾಂಧಿ ಪ್ರತಿಮೆ ಸಮೀಪ ಪಾನಕ ವಿತರಿಸಲಾಯಿತು.

Read More

ಕಡಂಗ  ಜ.23 NEWS DESK : ಅಯೋಧ್ಯೆಯಲ್ಲಿ ಶ್ರೀ ಬಾಲರಾಮನ ಪ್ರಾಣ ಪ್ರತಿಷ್ಠೆಯ ಅಂಗವಾಗಿ ಕಡಂಗ ಮುಖ್ಯ ರಸ್ತೆಯಲ್ಲಿರುವ ಗಣಪತಿ ಹಾಗೂ ಭಗವತಿ  ದೇವಾಲಯದಲ್ಲಿ ವಿಶೇಷ ಪೂಜೆ ಶ್ರದ್ಧಾಭಕ್ತಿಯಿಂದ ಜರುಗಿತು. ಮುಂಜಾನೆಯಿಂದಲೇ ಶ್ರೀ ರಾಮತಾರಕ ಹೋಮ, ಅಲಂಕಾರ ಪೂಜಾ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿತು. ಪೂಜಾ ಕಾರ್ಯಕ್ರಮದ ನೇತೃತ್ವವನ್ನು ಅರ್ಚಕ ಕೀರ್ತಿಶ್ ವಹಿಸಿದರು. ಕಾರ್ಯಕ್ರಮಕ್ಕೆ ಅಧಿಕ ಸಂಖ್ಯೆಯಲ್ಲಿ ಭಕ್ತಧಿಗಳು ಸಾಕ್ಷಿಯಾದರು. ಈ ಸಂದರ್ಭದಲ್ಲಿ ಭಗವತಿ ದೇವಸ್ಥಾನದ ಅಧ್ಯಕ್ಷರಾದ ನೆರ್ಪಂಡ ಚಿತ್ರ ಬೆಳ್ಳಿಯಪ್ಪ ಕಾರ್ಯದರ್ಶಿ ಕಣಿಯ0ಡ ಪ್ರಕಾಶ್ ,ಕೊಡಿರ ಪ್ರಸನ್ನ,ಕೋಡಿರ ರಾಬಿನ್, ಮಹಾಗಣಪತಿ ದೇವಸ್ಥಾನದ ಅಧ್ಯಕ್ಷರಾದ ಕುಲ್ಲಚಂಡ ಕರುಂಬಯ್ಯ, ಕಾರ್ಯದರ್ಶಿ ಗಿರೀಶ್ ಕುಲ್ಲಚಂಡ ರಸಿ ಪೂವಯ್ಯ, ಗಿರೀಶ್, ಜಾಯ್ ಕಾವೇರಪ್ಪ ಹಾಗೂ ಸಮಸ್ತ ರಾಮ ಭಕ್ತರು ಉಪಸ್ಥಿತರಿದ್ದರು. ವರದಿ : ನೌಫಲ್ ಕಡಂಗ 

Read More

ಮಡಿಕೇರಿ ಜ.22 NEWS DESK :  ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಜ.23, 25 ಮತ್ತು 26 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ಜ.23 ರಂದು ಬೆಳಗ್ಗೆ 11 ಗಂಟೆಗೆ ಮಾನ್ಯ ಮುಖ್ಯಮಂತ್ರಿಗಳು ಕೊಡಗು ಜಿಲ್ಲೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಕಾರ್ಯಕ್ರಮದ ಸ್ಥಳ ಪರಿಶೀಲನೆ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ನಂತರ ಸಂಜೆ 3.30 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ನೂತನವಾಗಿ ನಿರ್ಮಿಸಿ ಉದ್ಘಾಟನೆಗೆ ಸಿದ್ಧವಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಕಟ್ಟಡದ ಸ್ಥಳ ಪರಿಶೀಲನೆ ಮಾಡಲಿದ್ದಾರೆ. ಜನವರಿ, 25 ರಂದು ಬೆಳಗ್ಗೆ 10 ಗಂಟೆಗೆ ವಿರಾಜಪೇಟೆಯ ಅಂಬಟ್ಟಿ ಗ್ರಾಮದ ಕೂರ್ಗ್ ಗಾಲ್ಫ್ ಲಿಂಕ್ಸ್ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 2.30 ಗಂಟೆಗೆ ಮುಖ್ಯಮಂತ್ರಿಯವರೊಂದಿಗೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ…

Read More

ಮಡಿಕೇರಿ ಜ.22  NEWS DESK : ಲೋಕಸಭಾ ಚುನಾವಣೆ ಹಿನ್ನೆಲೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ವಿಶೇಷ ಅಭಿಯಾನ ಮೂಲಕ ಯುವ ಮತದಾರರನ್ನು ಸೇರ್ಪಡೆ ಮಾಡಲಾಗಿದೆ. ನಮೂನೆ-6, ನಮೂನೆ-7 ಮತ್ತು ನಮೂನೆ-8 ರಲ್ಲಿ ಯುವ ಮತದಾರರ ಸೇರ್ಪಡೆ ಮತ್ತಿತರ ಕಾರ್ಯಗಳನ್ನು ಬಿಎಲ್‍ಒ ಮೂಲಕ ಮನೆ ಮನೆಗೆ ತೆರಳಿ ಮತದಾರರ ಪಟ್ಟಿಯನ್ನು ತಯಾರಿಸಲಾಗಿದೆ ಎಂದರು. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ನಿರಂತರ ಪ್ರಕ್ರಿಯೆಯಾಗಿದ್ದು, ಯುವ ಮತದಾರರು ಹೆಸರು ಸೇರ್ಪಡೆ ಮಾಡಬಹುದಾಗಿದೆ ಎಂದರು. ಸದ್ಯ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಸಂಬಂಧಿಸಿದಂತೆ ವೋಟರ್ ಆಪ್ ಮೂಲಕ ತಮ್ಮ ಹೆಸರು ಇರುವುದನ್ನು ಖಾತರಿಪಡಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು. ಅಂತಿಮ ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ 546 ಮತಗಟೆಗಳಿದ್ದು, ಒಟ್ಟು 4,63,414 ಮತದಾರರು ಇದ್ದಾರೆ. ಅದರಲ್ಲಿ 2,27,339 ಪುರುಷ ಮತದಾರರು, 2,36,059 ಮಹಿಳಾ ಮತದಾರರು ಇದ್ದಾರೆ. ಹಾಗೂ 16…

Read More

ಮಡಿಕೇರಿ ಜ.22 NEWS DESK : ಪ್ರತಿಯೊಬ್ಬರೂ ವಿದ್ಯಾಭ್ಯಾಸ ಪಡೆದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ಕಾಣಲು ಸಾಧ್ಯ. ಆ ನಿಟ್ಟಿನಲ್ಲಿ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಲು ಮುಂದಾಗಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ನಡೆದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಹಾಗೂ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿಯೊಬ್ಬರೂ ವಿದ್ಯಾಭ್ಯಾಸ ಪಡೆದಾಗ ಮಾತ್ರ ಸಮಾಜದಲ್ಲಿ ಸಮಾನತೆ ಸಾಧಿಸಲು ಸಾಧ್ಯ. ಆ ನಿಟ್ಟಿನಲ್ಲಿ ವಿದ್ಯೆಗೆ ಪ್ರಥಮ ಆದ್ಯತೆ ನೀಡಬೇಕು ಎಂದರು. ಇಡೀ ವಿಶ್ವ ಒಂದು ಹಳ್ಳಿಯಾಗಿದೆ ಎಂದು ಹೇಳುತ್ತೇವೆ. ಆದರೆ ಜಾತಿಯತೆ ಹೋಗಿದೆಯೇ ಎಂಬುದನ್ನು ಆತ್ಮವಲೋಕನ ಮಾಡಿಕೊಳ್ಳಬೇಕು. ಮೌಡ್ಯ ಹಾಗೂ ಕಂದಾಚಾರಗಳಿಂದ ದೂರ ಇರಬೇಕು ಎಂದರು. ಅಲ್ಲಮಪ್ರಭು, ಬಿಜ್ಜಳ ಸೇರಿದಂತೆ ಬಸವಾದಿ ಶರಣರು ಸಮಾನತೆಗಾಗಿ ಎಲ್ಲರನ್ನೂ ಒಟ್ಟುಗೂಡಿಸಿ ಸಮಾನತೆಯ ಸಮಾಜ ನಿರ್ಮಾಣಕ್ಕೆ ಶ್ರಮಿಸಿದರು.…

Read More

ಚೆಟ್ಟಳ್ಳಿ ಜ.22 NEWS DESK : ಅಯೋಧ್ಯೆಯಲ್ಲಿ ಶ್ರೀ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಹಿನ್ನಲೆ ಚೆಟ್ಟಳ್ಳಿಯ ಶ್ರೀಮಂಗಲ ಭಗವತಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿತು. ತಕ್ಕ ಮುಖ್ಯಸ್ಥರ ಸಮ್ಮುಖದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿತು. ದೇವಾಲಯ ಸಮಿತಿಯ ಅಧ್ಯಕ್ಷ ಕ್ಯಾ. ಮುಳ್ಳಂಡ ಪಿ.ತಿಮ್ಮಯ್ಯ‌ ಮಾತನಾಡಿ,  ಅಯೋಧ್ಯೆಯ ನೆಲೆಯಲ್ಲಿ ಶ್ರೀ ರಾಮಲಾಲನ ಪ್ರಾಣಪ್ರತಿಷ್ಠಾ‌ ಕಾರ್ಯ ಸಂದರ್ಭ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದ್ದು, ಶ್ರೀ ರಾಮ  ಎಲ್ಲರಿಗೂ ಒಳಿತನ್ನು ಮಾಡಲೆಂದು ಪ್ರಾರ್ಥಿಸಿದರು. ಕಾರ್ಯಕ್ರಮದ ಅಂಗವಾಗಿ ಪ್ರಸಾದ ವಿತರಣೆ ಹಾಗೂ ಅನ್ನದಾನ ನಡೆಯಿತು.

Read More

ಮಡಿಕೇರಿ ಜ.22 NEWS DESK : ಶತ ಶತಮಾನಗಳ ಹಿಂದೂ ಸಮಾಜದ ನಿರೀಕ್ಷೆಗಳು ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರತಿಷ್ಠಾಪನೆಯ ಮೂಲಕ ಸಾಕಾರಗೊಳ್ಳುವ ಹಂತದಲ್ಲಿ, ಕೊಡಗು ಜಿಲ್ಲೆಯ ಬಹುತೇಕ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯೊಂದಿಗೆ ಶ್ರೀ ರಾಮ ನಾಮಸ್ಮರಣೆ ನಡೆಯಿತು. ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾನ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಬಹುತೇಕ ದೇವಸ್ಥಾನಗಳಲ್ಲಿ ನೇರ ಪ್ರಸಾರದ ವೀಕ್ಷಣೆಗೆ ಅನುವಾಗುವಂತೆ ಎಲ್‍ಇಡಿ ಪರದೆಗಳನ್ನು ಅಳವಡಿಸಲಾಗಿತ್ತು, ಅತ್ಯಂತ ಭಕ್ತಿ ಭಾವದಿಂದ ಪೂಜಾ ಕಾರ್ಯಗಳಲ್ಲಿ ಪಾಲ್ಗೊಂಡ ಹಿಂದೂ ಬಾಂಧವರು ಅಷ್ಟೇ ಕುತೂಹಲ ಆಸಕ್ತಿಗಳಿಂದ ಪ್ರಾಣ ಪ್ರತಿಷ್ಠಾಪನೆಯನ್ನು ವೀಕ್ಷಿಸಿ ಸಂಭ್ರಮಿಸಿದ್ದು ವಿಶೇಷ. ಮಡಿಕೇರಿಯ ಇತಿಹಾಸ ಪ್ರಸಿದ್ಧ ಶ್ರೀ ಆಂಜನೇಯ ದೇಗುಲದಲ್ಲಿ ಅಳವಡಿಸಲಾಗಿದ್ದ ಎಲ್‍ಇಡಿ ಪರದೆಯ ಮೂಲಕ ನೂರಾರು ಭಕ್ತರು ಪ್ರಾಣ ಪ್ರತಿಷ್ಠಾಪನೆಯನ್ನು ವೀಕ್ಷಿಸಿ, ಅದಾಗಲೆ ಹಿಂದೂ ಪರ ಸಂಘಟನೆಗಳಿಂದ ವಿತರಿಸಲಾಗಿದ್ದ ಅಯೋಧ್ಯೆ ಮಂತ್ರಾಕ್ಷತೆಯನ್ನು ಶಿರಕ್ಕೆ ಹಾಕಿಕೊಂಡು ಶ್ರೀರಾಮನಿಗೆ ನಮಿಸಿದರು. ಸೋಮವಾರ ಬೆಳಗ್ಗಿನಿಂದಲೆ ಶ್ರೀ ಆಂಜನೇಯ ದೇಗುದಲ್ಲಿ ವಿಶೇಷ ಪೂಜೆಯೊಂದಿಗೆ ಶ್ರೀ ರಾಮ ತಾರಕ ಹೋಮ ಭಕ್ತಾದಿಗಳ ಸಮ್ಮುಖದಲ್ಲಿ ನೆರವೇರಿತು. ಇದೇ ಹಂತದಲ್ಲಿ ದೇಗುಲದ ಆವರಣದಲ್ಲಿ…

Read More

ಮಡಿಕೇರಿ ಜ.22 NEWS DESK : ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆಗಾಗಿ ಒತ್ತಾಯಿಸಿ ಗಣರಾಜ್ಯೋತ್ಸವದ ದಿನವಾದ ಜ.26 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಿರ್ಧರಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು, ಅತ್ಯಂತ ಸೂಕ್ಷ್ಮ ಜನಾಂಗವಾಗಿರುವ ಆದಿಮಸಂಜಾತ ಕೊಡವರಿಗೆ ಕೊಡವ ಲ್ಯಾಂಡ್ ಮೂಲಕ ಸಾಂವಿಧಾನಿಕ ಭದ್ರತೆ ನೀಡಿದಾಗ ಮಾತ್ರ ಗಣರಾಜ್ಯೋತ್ಸವದ ದಿನ ಪರಿಪೂರ್ಣವಾಗಲು ಸಾಧ್ಯವೆಂದು ಅಭಿಪ್ರಾಯಪಟ್ಟಿದ್ದಾರೆ. ಆಂತರಿಕ ಸ್ವ-ನಿರ್ಣಯದ ಹಕ್ಕುಗಳಿಗಾಗಿ ಕಳೆದ 34 ವರ್ಷಗಳಿಂದ ಸಿಎನ್‌ಸಿ ಸಂಘಟನೆ ಹೋರಾಟ ನಡೆಸುತ್ತಾ ಬಂದಿದೆ. ಬೇಡಿಕೆ ಈಡೇರದ ಕಾರಣ ಈ ಬಾರಿಯ 74ನೇ ಗಣರಾಜ್ಯೋತ್ಸವದಂದು ಕೂಡ ಕೊಡವ ಆತ್ಮಸಾಕ್ಷಿ, ಕೊಡವ ಒಮ್ಮತ ಮತ್ತು ಕೊಡವ ಪ್ರಜ್ಞೆಯ ಅಭಿವ್ಯಕ್ತಿಯನ್ನು ದೃಢೀಕರಿಸಲಾಗುವುದು. ಶುಕ್ರವಾರ ಬೆಳಿಗ್ಗೆ 10.30 ರಿಂದ 11.30 ಗಂಟೆಯವರೆಗೆ ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿ ಜಿಲ್ಲಾಡಳಿತದ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುವುದು. ಸಂವಿಧಾನದ ಆರ್ಟಿಕಲ್ 244 ಆರ್/ಡಬ್ಲ್ಯೂ…

Read More

ಕುಶಾಲನಗರ ಜ.22 NEWS DESK : ಕೊಡಗು ಜಿಲ್ಲಾ ವೀರಶೈವ ಲಿಂಗಾಯತ ಸಮಾಜದಿಂದ ಕುಶಾಲನಗರದಲ್ಲಿ ಆರಂಭಿಸಿದ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರ ಸಂಘದ ಉದ್ಘಾಟನಾ ಸಮಾರಂಭ ನಡೆಯಿತು. ನೂತನ ಸಹಕಾರ ಸಂಘವನ್ನು ಉದ್ಘಾಟಿಸಿ ಮಾತನಾಡಿದ  ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ, ವಿವಿಧ ಕ್ಷೇತ್ರಗಳಲ್ಲಿ ಅನುಭವ ಹೊಂದಿರುವವರು  ಸಂಘದ ನಿರ್ದೇಶಕರಾಗಿದ್ದಾರೆ. ಎಲ್ಲರ ಅನುಭವದಿಂದ ಸಮುದಾಯದ ಸಹಕಾರ ಸಂಘ ಜಿಲ್ಲೆಯ ಇತರೆ ಸಂಘಗಳಂತೆ ಮಾದರಿ ಸಂಘವಾಗಿ ಬೆಳವಣಿಗೆ ಹೊಂದಲಿದೆ. ಹಣ ನಿಂತ ನೀರಾಗಬಾರದು. ಸದಾ ಚಲನೆಯಲ್ಲಿರುವ ಮೂಲಕ ಇತರರಿಗೆ ಸಹಕಾರವಾಗುವಂತಿರಬೇಕು ಎಂದರು. ಸಭಾಂಗಣ ಉದ್ಘಾಟಿಸಿ ಮಾತನಾಡಿದ ವಿರಾಜಪೇಟೆ ಅಮ್ಮತ್ತಿಯ ಕನ್ನಡ ಮಠದ ಶ್ರೀ ಚನ್ನಬಸವ ದೇಶೀಕೇಂದ್ರ ಸ್ವಾಮೀಜಿ, ಶ್ರೀರಾಮ ಪ್ರಾಣ ಪ್ರತಿಷ್ಠಾಪನ ಶುಭ ದಿನದಲ್ಲಿ ಉದ್ಘಾಟನೆಗೊಂಡಿರುವ ಈ ಸಂಘ ಮುಂದಿನ ದಿನಗಳಲ್ಲಿ ಅಭಿವೃದ್ಧಿ ಹೊಂದಿ ಹಲವು ಶಾಖೆಗಳನ್ನು ತೆರೆಯುವಂತಾಗಲಿ ಎಂದು ಶುಭಹಾರೈಸಿದರು. ಕೊಡಗು ಜಿಲ್ಲೆಯಲ್ಲಿ ಹಲವು ವಿಶೇಷ ಕಾರ್ಯಕ್ರಮಗಳಿಗೆ ಹೆಸರುವಾಸಿಯಾದ ವೀರಶೈವ ಲಿಂಗಾಯತ ಸಮುದಾಯ ಇದೀಗ ಸಹಕಾರ ಸಂಘ ಸ್ಥಾಪಿಸಿರುವುದು ಶ್ಲಾಘನೀಯ…

Read More