ಚೆಯ್ಯಂಡಾಣೆ ಜ 22 NEWS DESK : ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ನರಿಯಂದಡ ಭಗವತಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯ ನೆರವೇರಿತು. ದೇವಾಲಯದಲ್ಲಿ ಮುಂಜಾನೆಯಿಂದಲೇ ಸತ್ಯನಾರಾಯಣ ಪೂಜೆ, ವಿಷ್ಣು ಶಾಸ್ತ್ರನಾಮ, ನಾರಾಯಣ ಸೂಕ್ತ ಪಾರಾಯಣ, ಪುರುಷ ಸೂಕ್ತ ಪಾರಾಯಣ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿತು. ಮಧ್ಯಾಹ್ನ ಮಹಾ ಪೂಜೆ ನಂತರ ಭಕ್ತದಿಗಳಿಗೆ ಪ್ರಸಾದ ವಿನಿಯೋಗ ನಡೆಯಿತು. ಭಜನೆ ಹಾಗೂ ಅಯೋಧ್ಯೆಯಲ್ಲಿ ಶ್ರೀ ಬಾಲರಾಮನಿಗೆ ಪ್ರಾಣ ಪ್ರತಿಷ್ಠಾಪನೆ ಸಂದರ್ಭ ಮಂಗಳವಾದ್ಯ, ಶಂಖ, ಜಗಟೆ, ವಾಧ್ಯದೊಂದಿಗೆ ನೇರ ಪ್ರಸಾರ ವೀಕ್ಷಣೆ ನಡೆಯಿತು. ಪೂಜಾ ಕಾರ್ಯಕ್ರಮದ ನೇತೃತ್ವವನ್ನು ಅರ್ಚಕರಾದ ಶಿವ ಶರ್ಮ ವಹಿಸಿದರು. ಶ್ರೀ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ವೀಕ್ಷಿಸಲು ಅಧಿಕ ಸಂಖ್ಯೆಯಲ್ಲಿ ಭಕ್ತಧಿಗಳುಪಾಲ್ಗೊಂಡಿದ್ದರು. ಈ ಸಂದರ್ಭ ವೇದ ಮೂರ್ತಿ ನರಸಿಂಹ ಭಟ್, ಭಗವತಿ ದೇವಸ್ಥಾನದ ಅಧ್ಯಕ್ಷ ಬಟ್ಟಿಯಂಡ ಜಯರಾಂ, ಉಪಾಧ್ಯಕ್ಷ ಛಾಯಾ ಪ್ರಕಾಶ್, ಕಾರ್ಯದರ್ಶಿ ಮಕ್ಕಿಮನೆ ಸುಧೀರ್, ಸಹ ಕಾರ್ಯದರ್ಶಿ ಮುಂಡಿಯೋಳಂಡ ದಿನು ಚಂಗಪ್ಪ, ಪ್ರಮುಖರಾದ ಕುಕ್ಕೆಮನೆ…
ಲೇಖಕ: admin
ಮಡಿಕೇರಿ ಜ.22 NEWS DESK : ಅಯೋಧ್ಯೆಯಲ್ಲಿ ಶ್ರೀ ಬಾಲರಾಮ ಪ್ರಾಣ ಪ್ರತಿಷ್ಠಾಪನೆಯ ಅಂಗವಾಗಿ ನೀರಗುಂದ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಾಲಯದಲ್ಲಿ ಶ್ರೀ ರಾಮನ ವಿಶೇಷ ಪೂಜೆ ನೆರವೇರಿತು. ಮಧ್ಯಾಹ್ನ ಮಹಾ ಪೂಜೆಯ ನಂತರ ಪ್ರಸಾದ ವಿತರಣೆ ನೆರವೇರಿತು. ಈ ಸಂದರ್ಭದಲ್ಲಿ ಗ್ರಾಮದ ಬಾಲಕಿ ಎನ್.ಎ.ರಶ್ವಿಕ ಶ್ರೀ ಬಾಲರಾಮನ ವೇಷ ತೊಟ್ಟು ಪೂಜೆಯಲ್ಲಿ ಪಾಲ್ಗೊಂಡಿದ್ದು, ವಿಷೇಶವಾಗಿತ್ತು.
ಬೆಂಗಳೂರು ಜ.22 NEWS DESK : ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿದ್ದ ಸಕುಟುಂಬ ಸಮೇತನಾಗಿರುವ ಸೀತಾರಾಮ ಲಕ್ಷ್ಮಣ ದೇವಾಲಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಬಳಿಕ ಮಹಾ ಕುಂಭಾಭಿಷೇಕದಲ್ಲಿ ಪಾಲ್ಗೊಂಡರು. ಈ ಸಂದರ್ಭ ಸಚಿವರಾದ ಬೈರತಿ ಸುರೇಶ್, ಈಶ್ವರ್ ಖಂಡ್ರೆ, ಆಯೋಗದ ಉಪಾಧ್ಯಕ್ಷರಾದ ರಾಜು ಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರಾದ ಮಂಜುಳಾ ಅರವಿಂದ ಲಿಂಬಾವಳಿ, ಮಾಜಿ ಸಚಿವರಾದ ಎಚ್.ಎಂ.ರೇವಣ್ಣ, ಅರವಿಂದ ಲಿಂಬಾವಳಿ ಸೇರಿ ಹಲವು ಪ್ರಮುಖರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಮಡಿಕೇರಿ ಜ.22 NEWS DESK : ಅಯೋಧ್ಯೆಯಲ್ಲಿ ಶ್ರೀ ರಾಮನ ಬಾಲ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ತಕ್ಕಮುಖ್ಯಸ್ಥರು ಹಾಗೂ ಆಡಳಿತ ಮಂಡಳಿ ಅಧ್ಯಕ್ಷ ಚಮ್ಮಟೀರ ಸುಗುಣ ಮುತ್ತಣ್ಣ ನೇತೃತ್ವದಲ್ಲಿ ಅರ್ಚಕರಾದ ಸುಬ್ರಮಣ್ಯ ಕೇಕುನ್ನಾಯ ಶ್ರೀರಾಮನಿಗೆ ವಿಶೇಷ ಪೂಜೆ ನೆರವೇರಿಸಿದರು. ಭದ್ರಕಾಳಿ ದೇವಿಗೆ ಮಹಾಮಂಗಳಾರತಿ ಸೇರಿದಂತೆ ಶ್ರೀ ರಾಮನ ಸ್ತೋತ್ರವನ್ನ ಪಠಣ ಮಾಡುವ ಮೂಲಕ ವಿವಿಧ ಪೂಜಾವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಪ್ರಸಾದ ವಿನಿಯೋಗದ ಬಳಿಕ ನೆರೆದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ಈ ಸಂದರ್ಭ ದೇವಾಲಯದ ಮಾಜಿ ಅಧ್ಯಕ್ಷ ಚಮ್ಮಟೀರ ಡಿಕ್ಕಿ ಕುಶಾಲಪ್ಪ ಸೇರಿದಂತೆ ಆಡಳಿತ ಮಂಡಳಿ ಸದಸ್ಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಮಡಿಕೇರಿ ಜ.22 NEWS DESK : ಅಯೋಧ್ಯೆಯಲ್ಲಿ ಶ್ರೀರಾಮನ ಬಾಲ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಯ ಹಿನ್ನೆಲೆ ನಗರದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಿತು. ನಗರದ ಆಂಜನೇಯ ದೇವಾಲಯ, ಕೋದಂಡ ರಾಮ ದೇವಾಲಯ, ಚೌಡೇಶ್ವರಿ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಶ್ರೀ ವಿಷ್ಣು ಸಹಸ್ರ ನಾಮಾರ್ಚನೆ ಹಾಗೂ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿತು. ಮಧ್ಯಾಹ್ನ ಮಹಾಪೂಜೆ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ ನೆರವೇರಿತು. ದೇವಾಲಯ ಆವರಣದಲ್ಲಿ ಅಯೋಧ್ಯೆಯಲ್ಲಿ ನಡೆಯುವ ಶ್ರೀ ರಾಮ ಪ್ರತಿಷ್ಠಾಪನಾ ಕಾರ್ಯದ ದೃಶ್ಯಗಳನ್ನು ಇದೇ ಸಂದರ್ಭ ಪರದೆಯಲ್ಲಿ ಪ್ರಸಾರ ಮಾಡಲಾಯಿತು.
ಬೆಂಗಳೂರು ಜ.22 NEWS DESK : ಪಿ.ಎಸ್.ಐ. ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು ನಸೀರ್ ಅಹಮದ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಅಯೋಧ್ಯೆ ಜ.22 NEWS DESK : ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹಕ್ಕೆ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸುವ ಮೂಲಕ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ನೆರವೇರಿದೆ. ಅಧಿಕೃತವಾಗಿ ರಾಮಮಂದಿರ ಉದ್ಘಾಟನೆಯಾಗಿದ್ದು, ಮಧ್ಯಾಹ್ನ 12:29:03ಕ್ಕೆ ಆರಂಭವಾದ ಶುಭ ಅಭಿಜಿತ್ ಮುಹೂರ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಧಾರ್ಮಿಕ ವಿದ್ವಾಂಸರ ನೇತೃತ್ವದಲ್ಲಿ ಪ್ರಾಣ ಪ್ರತಿಷ್ಠಾಪನೆ ನೆರವೇರಿತು. ಪ್ರಧಾನಿ ಮೋದಿ ಅವರು ಶ್ರೀ ರಾಮ ಜನ್ಮಭೂಮಿಯಲ್ಲಿನ ರಾಮ ಲಲ್ಲಾ ವಿಗ್ರಹವನ್ನು ಅನಾವರಣಗೊಳಿಸಿದರು. ಸುಮಾರು 500 ವರ್ಷಗಳಿಂದ ಭಾರತದ ಕೋಟ್ಯಾಂತರ ಭಕ್ತರು ಕಾಣುತ್ತಿದ್ದ ರಾಮಮಂದಿರದ ಕನಸು ನನಸಾಗಿದೆ. ವಿಶೇಷ ಹೆಲಿಕಾಪ್ಟರ್‌ನಲ್ಲಿ ರಾಮಮಂದಿರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬೆಳ್ಳಿಯ ಛತ್ರಿವನ್ನು ಹಿಡಿದುಕೊಂಡು ರಾಮಮಂದಿರ ಪ್ರವೇಶಿಸಿದರು. ಇದಾದ ಬಳಿಕ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡ ಅವರು, ಗರ್ಭಗುಡಿಯಲ್ಲಿ ಪ್ರಾಣ ಪ್ರತಿಷ್ಠಾಪನೆ ಕೈಂಕರ್ಯ ನೆರವೇರಿಸಿದರು. ಮಂತ್ರ ಘೋಷಗಳು ಮತ್ತು ಮಂಗಳ ವಾದ್ಯಗಳ ಸಂಗೀತದ ನಡುವೆ ಕಾಶಿಯ ಪ್ರಸಿದ್ಧ ವಿದ್ವಾಂಸ ಗಣೇಶ್ವರ್ ದ್ರಾವಿಡ್, ಲಕ್ಷ್ಮೀಕಾಂತ್ ದೀಕ್ಷಿತ್ ಹಾಗೂ ಇಬ್ಬರು ಪ್ರಮುಖ…
ಮಡಿಕೇರಿ ಜ.22 NEWS DESK : ಸ್ಪೂರ್ತಿ ಭಿನ್ನ ಸಮರ್ಥ್ಯದ ಮಕ್ಕಳ ಶಾಲೆ ಮತ್ತು ತರಬೇತಿ ಕೇಂದ್ರ ವತಿಯಿಂದ ಕೂರ್ಗ್ ಬ್ಲಡ್ ಫೌಂಡೇಶನ್ ಸಂಸ್ಥೆಯ ಸದಸ್ಯ ಸಿದ್ದಿಕ್ ಪಾಂಡವರಕಲ್ಲು ಅವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ ಸಂಸ್ಥೆಯ ಸಮಾಜ ಸೇವೆಯನ್ನು ಗುರುತಿಸಿ ಸ್ಪೂರ್ತಿ ಭಿನ್ನ ಸಮರ್ಥ್ಯದ ಮಕ್ಕಳ ಶಾಲೆ ಮತ್ತು ತರಬೇತಿ ಕೇಂದ್ರ ಪ್ರಮುಖರು ಹಾಗೂ ಸಿಬ್ಬಂದಿಗಳು ಸ್ಮರಣಿಕೆ ನೀಡಿ ಗೌರವಿಸಿದರು.
ಮಡಿಕೇರಿ ಜ.22 NEWS DESK : ಅಯೋಧ್ಯೆಯಲ್ಲಿ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಸೋಮವಾರಪೇಟೆಯ ಶ್ರೀ ರಾಮ ಮಂದಿರ ಹಾಗೂ ಆಂಜನೇಯಸ್ವಾಮಿ ದೇವಾಲಯಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಮಡಿಕೇರಿ ಜ.22 NEWS DESK : ಅಯೋಧ್ಯೆಯಲ್ಲಿ ಶ್ರೀ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಸೈಕಲ್ ಪ್ಯೂರ್ ಅಗರಬತ್ತಿ ವತಿಯಿಂದ ಸಿದ್ದಪಡಿಸಿರುವ 111 ಅಡಿ ಉದ್ದದ ಅಗರಬತ್ತಿ ಬೆಳಗಿಸುವ ಕಾರ್ಯಕ್ರಮಕ್ಕೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಚಾಲನೆ ನೀಡಲಾಯಿತು. ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ಶಿಲ್ಪಿ ಅರುಣ್ ಯೋಗಿರಾಜ್ ಅವರ ತಾಯಿ ಸರಸ್ವತಿ, ಶಾಸಕರಾದ ಟಿ.ಎಸ್ ಶ್ರೀವತ್ಸ, ರಂಗ ಕುಟುಂಬದ ಸದಸ್ಯರಾದ ಆರ್.ಗುರು, ಕಿರಣ್ ರಂಗ, ವಿಷ್ಣು ರಂಗ, ಅನಿರುದ್ದ ರಂಗ ಮತ್ತು ನಿಖಿಲ್ ರಂಗ ಉಪಸ್ಥಿತರಿದ್ದರು.






