ಮಡಿಕೇರಿ ಫೆ.24 NEWS DESK : ಕೊಡಗು ಗೌಡ ಯುವ ವೇದಿಕೆ ವತಿಯಿಂದ ಆಯೋಜಿಸಲಾಗಿರುವ ಎರಡನೇ ವರ್ಷದ 10 ಕುಟುಂಬ 18 ಗೋತ್ರದ ಗೌಡ ಪ್ರೀಮಿಯರ್ ಲೀಗ್ ಲೆದರ್ ಬಾಲ್ ಕ್ರಿಕೆಟ್ ಕ್ರೀಡಾಕೂಟದ ಬಿಡ್ಡಿಂಗ್ ಪ್ರಕ್ರಿಯೆ ಮಡಿಕೇರಿಯ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ನಡೆಯಿತು. ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ ಇಂತಹ ಕ್ರೀಡಾಕೂಟಗಳ ಮೂಲಕ ಜನಾಂಗದ ಆಸಕ್ತ ಕಿರಿಯರಿಗೆ ವೃತ್ತಿಪರ ವಾಗಿ ಬದುಕು ಕಟ್ಟಿಕೊಳ್ಳಲು ಸಹಾಯವಾಗುತ್ತದೆ ಎಂದರು. ಪಾಣತ್ತಲೆ ಜಗದೀಶ್ ಮಂದಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌಡ ಸಮಾಜದ ಖಜಾಂಜಿ ಕುಯ್ಯುಮುಡಿ ವಸಂತ್, ಯುವ ವೇದಿಕೆಯ ಸ್ಥಾಪಕ ಅಧ್ಯಕ್ಷ ಪೊನ್ನಚ್ಚನ ಮಧುಸೂದನ್, ವೇದಿಕೆಯ ಕಾನೂನು ಸಮಿತಿ ಅಧ್ಯಕ್ಷ ಕೊಟ್ಟಕೇರಿಯನ ದಯಾನಂದ್, ಬಿಡ್ಡಿಂಗ್ ನಿರ್ವಾಹಕರಾಗಿ ಕಟ್ಟೆಮನೆ ಸೋನಾಜಿತ್ ಹಾಜರಿದ್ದರು. ಪುದಿಯನೆರವನ ರಿಶೀತ್ ಸ್ವಾಗತಿಸಿ, ಕೆದಂಬಾಡಿ ಕಾಂಚನ ಗೌಡ ಪ್ರಾರ್ಥಿಸಿ, ಪರಿಚನ ಸತೀಶ್ ಕಾರ್ಯಕ್ರಮ ನಿರೂಪಿಸಿದರು. ದೇರಳ ನವೀನ್ ವಂದಿಸಿದರು. 10 ಫ್ರಾಂಚೈಸಿಗಳಿಗೆ 180 ಆಟಗಾರರ ಬಿಡ್ಡಿಂಗ್ ಪ್ರಕ್ರಿಯೆ ನಡೆಯಿತು. ಪೊನ್ನಚ್ಚನ…
ಲೇಖಕ: admin
ಬೆಂಗಳೂರು, ಫೆ.24 NEWS DESK : ನಾವು ಸಂವಿಧಾನದ ಮಾಲೀಕರು. ಸಂವಿಧಾನ ಕಿತ್ತು ಎಸೆಯುವುದರಲ್ಲಿ ನಮ್ಮ ಆಸಕಿಯಿಲ್ಲ, ಸಂವಿಧಾನ ರಕ್ಷಣೆಯಾದರೆ ನಾವೆಲ್ಲರೂ ಉಳಿಯುತ್ತೇವೆ, ಸಂವಿಧಾನದ ವಿರುದ್ಧದ ಅಪಪ್ರಚಾರವನ್ನು ಯಾರೂ ಸಹಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಅರಮನೆ ಮೈದಾನದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನದ ವಿರುದ್ಧ ಎರಡು ಅಪಪ್ರಚಾರಗಳು ನಡೆಯುತ್ತಿದೆ. ಸಂವಿಧಾನ ದಲಿತರ ಉದ್ದಾರಕ್ಕಾಗಿದೆ ಹಾಗೂ ಸಾಮಾಜಿಕ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿಲ್ಲ ಎಂದು ಅಪಪ್ರಚಾರ ಮಾಡುತ್ತಿದೆ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವನ್ನು ಸ್ಪಷ್ಟವಾಗಿ ಹೇಳುವುದರಿಂದ ಇದರ ವಿರುದ್ಧ ಇರುವ ಜನರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಅರಿಯಬೇಕು. 1950 ಜನವರಿ 26 ರಿಂದ ಜಾರಿಗೆ ಬಂದಾಗಿನಿಂದ ಈ ಅಪಪ್ರಚಾರ ನಡೆಯುತ್ತಿದೆ. ಇದನ್ನು ನಾವು ಯಾರೂ ಸಹಿಸಬಾರದು. ಸಂವಿಧಾನ ರಕ್ಷಣೆಯಾದರೆ ನಾವೆಲ್ಲರೂ ಉಳಿಯುತ್ತೇವೆ. ಇಲ್ಲದಿದ್ದರೆ ಅಪಾಯಕ್ಕೆ ಸಿಲುಕುತ್ತೇವೆ ಎಂದರು. ಸಾಮಾಜಿಕ ಅಸಮಾನತೆಯನ್ನು ಅಳಿಸಿಹಾಕುವುದು ಪ್ರತಿ ಸರ್ಕಾರದ ಜವಾಬ್ದಾರಿ :: ದೇಶದಲ್ಲಿ…
ಬೆಂಗಳೂರು ಫೆ.24 NEWS DESK : ರಾಜ್ಯದಲ್ಲಿ ಅತ್ಯಂತ ಕುತೂಹಲ ಮೂಡಿಸಿರುವ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆಯಲಿದ್ದು, ವಿಧಾನ ಸೌಧದಲ್ಲಿ ಸಿದ್ದವಾಗುತ್ತಿರುವ ಮತಗಟ್ಟೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನ ಸಭಾಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ವೀಕ್ಷಣೆ ಮಾಡಿದರು. ಒಟ್ಟು ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಐದನೇ ಅಭ್ಯರ್ಥಿ ಕಣದಲ್ಲಿರುವುದರಿಂದ ಅಡ್ಡ ಮತದಾನವಾಗದೇ ಇರಲು ಕಾಂಗ್ರೆಸ್ ಮುಂಜಾಗ್ರತಾ ಕ್ರಮ ವಹಿಸಿದ್ದು, ಕಾನೂನಾತ್ಮಕವಾಗಿ ಚುನಾವಣೆ ನಡೆಸುವ ಸಲುವಾಗಿ ಕಾನೂನು ತಜ್ಞರು ಆಗಿರುವ ಎ.ಎಸ್.ಪೊನ್ನಣ್ಣ ನವರಿಗೆ ಹೆಚ್ಚಿನ ಜವಾಬ್ದಾರಿ ನೀಡಲಾಗಿದೆ.
ಕುಶಾಲನಗರ ಫೆ.24 NEWS DESK : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಕುಶಾಲನಗರದ ಕೆ.ಎಸ್.ಮೂರ್ತಿ ನೇಮಕಗೊಂಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ವಚನ ಸಾಹಿತ್ಯ ವೇದಿಕೆಯನ್ನು ಕಟ್ಟುವ ಮೂಲಕ ” ವಚನಗಳ ನಡಿಗೆ – ಶಾಲಾ ಕಾಲೇಜುಗಳೆಡೆಗೆ ” ಎಂಬ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸುವ ಮೂಲಕ ಶರಣ ಸಾಹಿತ್ಯ ಪರಿಷತ್ತಿನ ಆಶಯಕ್ಕನುಗುಣವಾಗಿ ಕೆ.ಎಸ್.ಮೂರ್ತಿ ಕಾರ್ಯನಿರ್ವಹಿಸುತ್ತಿರುವುದರಿಂದ ಪರಿಷತ್ತಿನ ಗೌರವಾಧ್ಯಕ್ಷರಾಗಿರುವ ಸುತ್ತೂರು ಶ್ರೀಗಳ ಸೂಚನೆಯಂತೆ ಇವರನ್ನು ನೇಮಕಗೊಳಿಸಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಸಮಿತಿಗಳನ್ನು ರಚಿಸುವ ಮೂಲಕ ಶರಣ ಸಾಹಿತ್ಯ ಪರಿಷತ್ತಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ಮಾಡುವ ಮೂಲಕ ಶರಣ ಸಾಹಿತ್ಯವನ್ನು ಮತ್ತಷ್ಟು ಚೈತನ್ಯಶೀಲ ಗೊಳಿಸಬೇಕೆಂದು ಅವರು ತಿಳಿಸಿದ್ದಾರೆ.
ಮಡಿಕೇರಿ ಫೆ.24 NEWS DESK : ಗೋಣಿಕೊಪ್ಪಲು ಕಾಫಿ ಮಂಡಳಿ ವಿಸ್ತರಣಾ ವಿಭಾಗ ಹಾಗೂ ಕೊಟ್ಟಗೇರಿ ಲಕ್ಷ್ಮಣತೀರ್ಥ ಸಂಘದ ವತಿಯಿಂದ ಬಾಳೆಲೆ ಹೋಬಳಿ ವ್ಯಾಪ್ತಿಯ ಕಾಫಿ ಬೆಳೆಗಾರರಿಗೆ ಫೆ.29 ರಂದು ಮಣ್ಣು ಪರೀಕ್ಷೆ ಅಭಿಯಾನ ಮತ್ತು ಕಾಫಿ ಬೆಳೆಯ ಬಗ್ಗೆ ತಾಂತ್ರಿಕ ಮಾಹಿತಿ ನೀಡುವ ಕಾರ್ಯಾಗಾರ ನಡೆಯಲಿದೆ. ಅಂದು ಬೆಳಗ್ಗೆ 9.45ಗಂಟೆಗೆ ಕೊಟ್ಟಗೇರಿ ಸಮುದಾಯ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಬಾಳೆಲೆ ಹೋಬಳಿ ವ್ಯಾಪ್ತಿಯ ಕಾಫಿ ಬೆಳೆಗಾರರು ತಮ್ಮ ತೋಟದ ಮಣ್ಣಿನ ಮಾದರಿಯನ್ನು ಕಾಫಿ ಮಂಡಳಿ ಶಿಫಾರಸು ಮಾಡಿದ ರೀತಿಯಲ್ಲಿ ಮಣ್ಣಿನ ಮಾದರಿಯ ಸಂಗ್ರಹಣೆಯನ್ನು ತಂದು ಅ ದಿನವೇ ಫಲಿತಾಂಶವನ್ನು ಪಡೆದುಕೊಳ್ಳಲು ಮನವಿ ಮಾಡಿದ್ದಾರೆ. ಮಣ್ಣಿನ ಪರೀಕ್ಷೆ ಮಾಡಿಸಿ ಕೊಳ್ಳಲು ಬೆಳೆಗಾರರು ಬೆಳಿಗ್ಗೆ 9.45ಗಂಟೆಗೆ ಹಾಜರಿರತಕ್ಕದ್ದು, ಮಣ್ಣಿನ ರಸಸಾರ ಪರೀಕ್ಷೆಗೆ ರೂ.25, ಸಾರಜನಕ,ರಂಜಕ, ಪೊಟ್ಯಾಶ್ ಪರೀಕ್ಷೆಗೆ ರೂ.150 ಪಾವತಿಸತಕ್ಕದ್ದು, ಇದರ ಜೊತೆಗೆ ನುರಿತ ತಜ್ಞರಿಂದ ಕಾಫಿ ಬೇಸಾಯದ ಬಗ್ಗೆ ವಿಶೇಷ ಮಾಹಿತಿಯನ್ನು ನೀಡಲಾಗುವುದೆಂದು ಕೊಟ್ಟಗೇರಿ ಲಕ್ಷ್ಮಣತೀರ್ಥ ಸಂಘದ ಅಧ್ಯಕ್ಷರು ಹಾಗೂ ಗೋಣಿಕೊಪ್ಪಲು ಕಾಫಿ ಮಂಡಳಿ…
ಮಡಿಕೇರಿ ಫೆ.23 NEWS DESK : 2018 ರಲ್ಲಿ ವಿಶ್ವದ ಅತ್ಯಂತ ಎತ್ತರದ ಶಿಖರದ ತುತ್ತ ತುದಿಯನ್ನು ಏರಿ ಕನ್ನಡ ಬಾವುಟ ಹಾರಿಸಿದ ಪ್ರಥಮ ಕನ್ನಡಿಗ ವಿಕ್ರಮ್ ಚಂದ್ರನಾಯಕ್ ರವರು ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿ ಮಾಡಿ ಆಡಳಿತಾತ್ಮಕ ನೆರವು ಕೋರಿದರು. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನ ಸಾಹಸಿ ಯುವಕನಾದ ಸಿ.ವಿಕ್ರಮ್ ಗಸ್ತು ಅರಣ್ಯ ಪಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು 2018 ರಲ್ಲಿ 8848.86 ಮೀ ಎತ್ತರದ ಜಗತ್ತಿನ ಅತ್ಯಂತ ತುತ್ತ ತುದಿಯಲ್ಲಿರುವ ಮೌಂಟ್ ಎವರೆಷ್ಟ್ ಶಿಖರವನ್ನು ಏರಿದ ಪ್ರಥಮ ಕನ್ನಡಿಗನಾಗಿ ಸಾಧನೆ ಮಾಡಿದ್ದರು. ಈಗ ಅವರಿಗೆ ಸರ್ಕಾರಿ ಸೇವೆಯಲ್ಲಿ ಪದೋನ್ನತಿ ಸಂಭಂದಿಸಿದಂತೆ ಕ್ಯಾಬಿನೆಟ್ ನಿಂದ ಅನುಮೋದನೆ ಬೇಕಾಗಿರುವುದರಿಂದ ಎ.ಎಸ್.ಪೊನ್ನಣ್ಣ ನವರಿಂದ ನೆರವು ಕೋರಲು ಬಂದಿದ್ದರು. ಕರ್ನಾಟಕ ರಾಜ್ಯಕ್ಕೆ ಕೀರ್ತಿ ತಂದ ಸಾಧಕನಿಗೆ ನೆರವು ನೀಡುವುದು ರಾಜ್ಯಕ್ಕೆ ನೀಡುವ ಗೌರವವಾಗಿದೆ. ಆದ್ದರಿಂದ ವಿಕ್ರಮ್ ಗೆ ಸಂಭಂದಿಸಿದಂತೆ ಆಡಳಿತಾತ್ಮಕ ನೆರವು ನೀಡಲು ತಾವು…
ಮಡಿಕೇರಿ ಫೆ.23 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಡಿವಾಳರ ಅಭಿವೃದ್ಧಿ ಸಂಘ ಇವರ ಸಹಕಾರದಲ್ಲಿ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮವು ಫೆ.25 ರಂದು ಬೆಳಗ್ಗೆ 11.30 ಗಂಟೆಗೆ ನಗರದ ದಾಸವಾಳ ರಸ್ತೆಯ ಮಡಿಕಟ್ಟೆ ವೀರಭದ್ರ ಮುನೇಶ್ವರ ದೇವಾಲಯದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಫೆ.23 NEWS DESK : ಕೊಡಗು ಜಿಲ್ಲೆಯ ಹಲವು ಬೆಳೆಗಾರರ ಮೇಲೆ ಜಾತಿ ನಿಂದನೆ ಮತ್ತು ಜೀತ ಪದ್ಧತಿ ಆರೋಪದಡಿ ಸತ್ಯಕ್ಕೆ ದೂರವಾದ ಪ್ರಕರಣವನ್ನು ದಾಖಲಿಸಲಾಗಿದೆ. ಈ ರೀತಿಯ ದೂರುಗಳು ಬಂದ ಸಂದರ್ಭ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕೂಲಂಕುಶವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕೆಂದು ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಹಾಗೂ ಕುಟ್ಟ ಕೊಡವ ಸಮಾಜದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಒತ್ತಾಯಿಸಿದ್ದಾರೆ. ಕುಟ್ಟ ಕೊಡವ ಸಮಾಜ ಸಭಾಂಗಣದಲ್ಲಿ ನಡೆದ ಕುಟ್ಟ ಕೊಡವ ಸಮಾಜದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಹಳ ಹಿಂದಿನಿಂದಲೂ ಬೆಳೆಗಾರರು ಹಾಗೂ ಕಾರ್ಮಿಕರ ನಡುವೆ ಉತ್ತಮ ಬಾಂಧವ್ಯವಿದೆ. ಆದರೆ ಕೆಲವು ಎನ್‌ಜಿಒಗಳು ಕಾರ್ಮಿಕರ ಹಾದಿ ತಪ್ಪಿಸಿ ಬೆಳೆಗಾರರನ್ನು ಸುಲಿಗೆ ಮಾಡಲು ಪ್ರಕರಣ ದಾಖಲಿಸುತ್ತಿದ್ದಾರೆ ಎಂದು ಆರೋಪಿಸಿದರು. ಜಿಲ್ಲೆಯಲ್ಲಿ ಈಗಾಗಲೇ ಜಾತಿ ನಿಂದನೆ ಹಾಗೂ ಜೀತ ವಿಮುಕ್ತಿ ಪ್ರಕರಣದ ದೂರುದಾರರು ಆಧಾರ್ ಕಾರ್ಡ್ಗಳನ್ನು ಹೊಂದಿದ್ದು, ಚುನಾವಣಾ ಗುರುತಿನ ಪತ್ರ ಹೊಂದಿದ್ದಾರೆ. ಪಡಿತರ ಚೀಟಿಯಲ್ಲಿ ತಮ್ಮ ಬೆರಳಚ್ಚನ್ನು ನೀಡಿ…
ಮಡಿಕೇರಿ ಫೆ.23 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಫೆಬ್ರವರಿ, 26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಉದ್ಯೋಗವನ್ನು ಬಯಸುವಂತಹ ಕೊಡಗು ಜಿಲ್ಲೆಯ ವಿಕಲಚೇತನರು ಉದ್ಯೋಗ ಮೇಳದಲ್ಲಿ https://udyoga.skillconnet.kaushalkar.com/ ಲಿಂಕ್ ನಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಉದ್ಯೋಗ ಪಡೆದುಕೊಳ್ಳಬೇಕೆಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ಕೋರಿದ್ದಾರೆ.
ಮಡಿಕೇರಿ ಫೆ.23 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಸೇವಾ ಮತ್ತು ಕ್ರೀಡಾ ಇಲಾಖೆ, ಕೊಡಗು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ 2023-24 ನೇ ಸಾಲಿನ ಕೊಡಗು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಫೆಬ್ರವರಿ, 24 ಮತ್ತು 25 ರಂದು ಕೂಡಿಗೆ ಕ್ರೀಡಾ ಶಾಲೆಯಲ್ಲಿ ನಡೆಯಲಿದೆ. ಆಸಕ್ತ ಸರ್ಕಾರಿ ನೌಕರ ಕ್ರೀಡಾಪಟುಗಳು ಹೆಚ್ಚಿನ ಮಾಹಿತಿಗೆ ದೂ.ಸಂ. 9480032712 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು. ಹಾಗೂ ಜಿಲ್ಲಾ ಮಟ್ಟದ ಕ್ರೀಡಾ ಕೂಟದ ನೋಂದಣಿ https://forms.gle/3arj7sBogh2kieAKA ನೋಂದಣಿ ಮಾಡಿಕೊಳ್ಳಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.






