ಲೇಖಕ: admin

ಮಡಿಕೇರಿ ಫೆ.23 NEWS DESK : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಸಮುದಾಯದ ಪತ್ರಿಕೋದ್ಯಮ ವಿದ್ಯಾರ್ಥಿಗಳು ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ತರಬೇತಿ ಪಡೆದುಕೊಳ್ಳಲು ಈ ಕಚೇರಿಯಲ್ಲಿ ಲಭ್ಯವಿರುವ ನಿಗಧಿತ ನಮೂನೆಯ ಅರ್ಜಿ ಪಡೆದು ಫೆ.29 ರೊಳಗೆ ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ನಿಗಮದ ವೆಬ್‍ಸೈಟ್ https://kmvstdcl.karnataka.gov.in ಮೂಲಕ ಪಡೆದುಕೊಳ್ಳುವುದು. ಅಥವಾ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಹೊಸ ಬಡಾವಣೆ, ರೇಸ್‍ಕೋರ್ಸ್ ರಸ್ತೆ, ಕೊಡಗು ಜಿಲ್ಲೆ-571201 ದೂ.ಸಂ. 08272-228857 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Read More

ಮಡಿಕೇರಿ ಫೆ.23 NEWS DESK : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಇಂಡಿಜೀನಿಯಸ್ ಟೆಕ್ನಾಲಜೀಸ್ ಫಾರ್ ಸೊಸೈಟಲ್ ಡೆವಲಪ್‍ಮೆಂಟ್ ಎಂಬ ವಿಷಯ ಕುರಿತು 2024 ರ ಫೆಬ್ರವರಿ, 28 ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಅಕಾಡೆಮಿ ಕಚೇರಿಯಲ್ಲಿ (ಪ್ರೊ.ಯು.ಆರ್.ರಾವ್ ವಿಜ್ಞಾನ ಭವನ, ಮೇ, ಸಂದೀಪ್ ಉನ್ನಿಕೃಷ್ಣನ್ ರಸ್ತೆ, ತೋಟಗಾರಿಕಾ ವಿಜ್ಞಾನಗಳ ಕಾಲೇಜು ಆವರಣ, ಜಿಕೆವಿಕೆ, ವಿದ್ಯಾರಣ್ಯಪುರ ಅಂಚೆ, ಬೆಂಗಳೂರು-560097) ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಭಾಗವಹಿಸಬಹುದು. ಡ್ರಾಯಿಂಗ್ ಮತ್ತು ಪೆಯಿಟಿಂಗ್ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಈ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ವಿತರಿಸಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ವಿದ್ಯಾರ್ಥಿಗಳು ಗೂಗಲ್ ಫಾರ್ಮ್ https://forms.gie/e5UbmGWkkaC1utgLA ಮೂಲಕ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಅಕಾಡೆಮಿಯ ವೆಬ್‍ಸೈಟ್  http://www.kstacademy.in ನ್ನು ವೀಕ್ಷಿಸಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ  ತಿಳಿಸಿದ್ದಾರೆ.

Read More

ಬೆಂಗಳೂರು ಫೆ.22 NEWS DESK : ಹಿಂದೂಯೇತರ ಸಮುದಾಯಗಳಿಗೆ ಹಿಂದೂ ದೇವಸ್ಥಾನಗಳ ಹಣವನ್ನು ಬಳಸಲಾಗುತ್ತದೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ಅನ್ಯಾಯಯುತ ತೆರಿಗೆ ಹಾಕಲಾಗುತ್ತಿದೆ ಎನ್ನುವ ಬಿಜೆಪಿ ನಾಯಕರ ಆರೋಪ ಸಂಪೂರ್ಣ ಕಪೋಲಕಲ್ಪಿತವಾಗಿದ್ದು, ಅಮಾಯಕ ಹಿಂದೂಗಳನ್ನು ನಮ್ಮ ಸರ್ಕಾರದ ವಿರುದ್ದ ಎತ್ತಿಕಟ್ಟುವ ದುರುದ್ದೇಶದಿಂದ ಬಿಜೆಪಿ ನಾಯಕರು ಇಂತಹ ಕ್ಷುಲ್ಲಕ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಸಂಬಂಧಪಟ್ಟಂತೆ ಮಾತ್ರವೇ ಬಳಸಲಾಗುತ್ತದೆ. ಈ ನಿಧಿಯು 2003ರಲ್ಲಿ ಕಾಯಿದೆಯು ಜಾರಿಗೆ ಬಂದಾಗಿನಿಂದ ಧಾರ್ಮಿಕ ಕಾರ್ಯಗಳಿಗೆ ಮಾತ್ರವೇ ಬಳಕೆಯಾಗುತ್ತಿದ್ದು ಭವಿಷ್ಯದಲ್ಲಿಯೂ ಅದಕ್ಕೆ ಮಾತ್ರವೇ ಬಳಕೆಯಾಗಲಿದೆ. ಬೇರೆ ಯಾವುದೇ ಧರ್ಮದ ಜನರ ಅನುಕೂಲಕ್ಕಾಗಿ ಈ ಹಣವನ್ನು ಬಳಸಲಾಗುವುದಿಲ್ಲ. ದೇವಸ್ಥಾನಗಳ ಹಣವನ್ನು ಕೇವಲ ಹಿಂದೂ ಸಮುದಾಯದ ಏಳಿಗೆ ಮತ್ತು ಕಲ್ಯಾಣಕ್ಕೆ ಮಾತ್ರವೇ ಬಳಸಬೇಕೆನ್ನುವ ಬಾಧ್ಯತೆಯನ್ನು ಈ ನಿಧಿಯ ನಿಬಂಧನೆಗಳಲ್ಲಿ ಒತ್ತಿ ಹೇಳಲಾಗಿದೆ. ವಿಧಾನಸಭೆಯಲ್ಲಿ ಅಂಗೀಕರಿಸಲಾದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ…

Read More

ಮಡಿಕೇರಿ ಫೆ.22 NEWS DESK : ಇತಿಹಾಸ ಪ್ರಸಿದ್ಧ ಕುಂಜಿಲ ಪೈನರಿ ಮಖಾಂ ಉರೂಸ್ ಸಮಾರಂಭವು ಫೆ.23 ರಿಂದ 27ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಪೈನರಿ ಮುಸ್ಲಿಂ ಜಮಾಅತ್ ಅಧ್ಯಕ್ಷ ಸೌಕತ್ ಅಲಿ ತಿಳಿಸಿದ್ದಾರೆ. ಕುಂಜಿಲ ಪೈನರಿ ಜಮಾಅತ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಉರೂಸ್ ಸಮಾರಂಭ ಕಾರ್ಯಕ್ರಮದಲ್ಲಿ ಹಲವಾರು ಸಾಮಾಜಿಕ ಧಾರ್ಮಿಕ ಹಾಗೂ ರಾಜಕೀಯ ನೇತಾರರು ಭಾಗವಹಿಸಲಿದ್ದು ಸರ್ವರೂ ಜಾತಿ ಧರ್ಮ ಭೇದ ಮರೆತು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಜಮಾಅತ್ ಕಾರ್ಯದರ್ಶಿ ಸಹೀದ್ ಪಯ್ಯಡತ್ ಮಾತನಾಡಿ ತಾ.23 ಶುಕ್ರವಾರ ಜುಮಾ ನಮಾಜ್ ಬಳಿಕ ಪೈನರಿ ಸುನ್ನಿ ಮುಸ್ಲಿಂ ಜಮಾಅತ್ ಅಧ್ಯಕ್ಷ ಎಂ.ಎ.ಸೌಕತ್ ಅಲಿ ದ್ವಜಾರೋಹಣ ನೆರವೇರಿಸುವುದರ ಮೂಲಕ ಉರೂಸ್ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಲಿದ್ದಾರೆ. ಅಂದು ರಾತ್ರಿ ಕಾಂತಪುರಂ ಅಬ್ದುಲ್ ಲತೀಫ್ ಸಖಾಫಿ ಅವರ ನೇತೃತ್ವದಲ್ಲಿ ಆತ್ಮೀಯ ಮದನಿಯಂ ಮಜ್ಲಿಸ್ ನಡೆಯಲಿದೆ. ಫೆ.24 ರ ರಾತ್ರಿ ಸ್ವಲಾತ್ ವಾರ್ಷಿಕ ಮತ್ತು…

Read More

ಮಡಿಕೇರಿ ಫೆ.22 NEWS DESK :  ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಶಿಕ್ಷಣ ಇಲಾಖೆ ಅಧಿಕಾರಿ ಸೌಮ್ಯ ಪೊನ್ನಪ್ಪ, ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಶಶಿಕಲಾ ಅವರು ಬಿಸಿ ಹಾಲಿನೊಂದಿಗೆ ಬೆರೆಸಿ ಕುಡಿಯಲು ‘ರಾಗಿ ಮಾಲ್ಟ್’ ವಿತರಿಸುವ ಕಾರ್ಯಕ್ರಮಕ್ಕೆ ‘ವಿದ್ಯಾರ್ಥಿಗಳಿಗೆ ರಾಗಿ ಮಾಲ್ಡ್’ ವಿತರಿಸುವ ಮೂಲಕ ಚಾಲನೆ ನೀಡಿದರು. ನಗರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ‘ರಾಗಿ ಮಾಲ್ಟ್’ ವಿತರಿಸಿ ಮಾತನಾಡಿದ, ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಶಶಿಕಲಾ, ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಒಟ್ಟು 474 ಶಾಲೆಯ 29,584 ವಿದ್ಯಾರ್ಥಿಗಳಿಗೆ ರಾಗಿ ಮಾಲ್ಟ್ ವಿತರಿಸಲಾಗುತ್ತದೆ ಎಂದು ಹೇಳಿದರು. ಬೆಳಗ್ಗೆ ಕೆನೆ ಭರಿತ ಸಕ್ಕರೆ ಹಾಕಿದ ಹಾಲು, ಪೂರಕ ಪೌಷ್ಠಿಕ ಆಹಾರವಾಗಿ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ಹಾಗೂ ಸಕ್ಕರೆ ಮಿಶ್ರಿತ ಹಾಲಿಗೆ ರಾಗಿ ಹೆಲ್ತ್ ಮಿಕ್ಸ್ ಒಳಗೊಂಡ ಮಾಲ್ಟ್‍ನ್ನು ವಿತರಿಸಲಾಗುತ್ತದೆ. ಜೊತೆಗೆ ಮಧ್ಯಾಹ್ನದ ಬಿಸಿಊಟ ನೀಡಲಾಗುತ್ತದೆ ಎಂದು ಹೇಳಿದರು.…

Read More

ಮಡಿಕೇರಿ ಫೆ.22 NEWS DESK : ಸೋಮವಾರಪೇಟೆ ಹೋಂಸ್ಟೇ ಅಸೋಸಿಯೇಷನ್, ಆಯಾತನ ರೆಸಾರ್ಟ್ ಹಾಗೂ ಬೆಟ್ಟದಹಳ್ಳಿ ಗ್ರಾಮ ಪಂಚಾಯಿತಿ ಸಹಭಾಗಿತ್ವದಲ್ಲಿ ಮಲ್ಲಳ್ಳಿ ಜಲಪಾತದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಜಲಪಾತದ ಸುತ್ತಾಮುತ್ತಾ ಬಿದ್ದಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಶುಚಿಗೊಳಿಸಲಾಯಿತು. ಸ್ವಚ್ಛತಾ ಆಂದೋಲನದಲ್ಲಿ ಸಂಗ್ರಹಿಸಿದ ಕಸವನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವರಿ ಮಾಡಿದರು. ನಂತರ ಮಾತನಾಡಿದ ಸೋಮವಾರಪೇಟೆ ಹೋಂಸ್ಟೇ ಅಸೋಸಿಯೇಷನ್ ಅಧ್ಯಕ್ಷ ಸಿ.ಕೆ.ರೋಹಿತ್, ಮುಂದಿನ ದಿನಗಳಲ್ಲಿ ಇದೇ ರೀತಿ ಸ್ವಚ್ಛತಾ ಆಂದೋಲನವನ್ನು ಪ್ರವಾಸಿ ಸ್ಥಳಗಳಲ್ಲಿ ನಡೆಸಲಾಗುವುದು ಮತ್ತು ಸೋಮವಾರಪೇಟೆ ತಾಲೂಕು ಪ್ರವಾಸಿಗರ ಸ್ಥಳಗಳನ್ನು ಅಭಿವೃದ್ಧಿಪಡಿಸಲು ನಿರಂತರವಾಗಿ ಶ್ರಮಿಸುವುದಾಗಿ ತಿಳಿಸಿದರು. ಕಳೆದ ಬಾರಿ ಕೋವರ್ ಕೊಲ್ಲಿ ಜಂಕ್ಷನ್ ಬಳಿ ರೂ.25 ಸಾವಿರ ವೆಚ್ಚದ ಪ್ರವಾಸಿಗ ಸೂಚನಾ ಫಲಕವನ್ನು ಸೋಮವಾರಪೇಟೆ ಹೋಂಸ್ಟೇ ಅಸೋಸಿಯೇಷನ್ ವತಿಯಿಂದ ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದರು. ಶ್ರಮದಾನದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ವಿಮಲಾಕ್ಷಿ, ಸೋಮವಾರಪೇಟೆ ಹೋಂಸ್ಟೇ ಅಸೋಸಿಯೇಷನ್ ಉಪಾಧ್ಯಕ್ಷ ಯೋಗೇಶ್ ಪಟೇಲ್, ಕಾರ್ಯದರ್ಶಿ ಎಸ್.ಎಲ್.ಅಭಿನಂದ್, ಖಜಾಂಚಿ ಪ್ರೀತಮ್, ಹಾಗೂ ಸದಸ್ಯರುಗಳು, ಆಯತನ ರೆಸಾರ್ಟ್ ಸಿಬ್ಬಂದಿ…

Read More

ಮಡಿಕೇರಿ ಫೆ.22 NEWS DESK :  ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘ ಮತ್ತು ಹಾಸನ ಜಿಲ್ಲಾ ಆದಿ ದ್ರಾವಿಡ ಸಮಾಜ ಸೇವಾ ಸಂಘ ಬೆಂಗಳೂರಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವ ಹೆಚ್.ಸಿ.ಮಹದೇವಪ್ಪ, ಹಾಸನದ ಉಸ್ತುವಾರಿ ಸಚಿವ ರಾಜಣ್ಣ ಹಾಗೂ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರಿಗೆ ಮನವಿ ಸಲ್ಲಿಸಿದೆ. ಸಕಲೇಶಪುರ ತಾಲ್ಲೂಕಿನ ಹೆಬ್ಸಲೆ ಗ್ರಾಮದ ಆದಿ ದ್ರಾವಿಡ (ತುಳು) ಸಮಾಜದ ಜನಾಂಗದವರಿಗೆ ವಿದ್ಯುತ್, ನೀರು, ಹಕ್ಕು ಪತ್ರ ಹಾಗೂ ಮೂಲಭೂತ ಸೌಕರ್ಯ ನೀಡಬೇಕು, ಕೊಡಗು ಸೇರಿದಂತೆ 4 ಜಿಲ್ಲೆಗಳಲ್ಲಿರುವ ಆದಿ ದ್ರಾವಿಡ ಸಮಾಜದ ಮಂದಿಗೆ ಸಮರ್ಪಕ ರೀತಿಯ ಜಾತಿ ಪ್ರಮಾಣಪತ್ರ ಮತ್ತು ಅನುದಾನ ಒದಗಿಸಬೇಕೆಂದು ಸಂಘದ ರಾಜಾಧ್ಯಕ್ಷ ಹೆಚ್.ಎಂ.ಸೋಮಪ್ಪ ಮನವಿ ಮಾಡಿದರು. ಪ್ರಧಾನ ಕಾರ್ಯದರ್ಶಿ ಪಿ.ವಿ.ಜಯಪ್ರಕಾಶ್, ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷ ಸಂಜೀವ ಪಾಂಡೇಶ್ವರ, ಪ್ರಧಾನ ಕಾರ್ಯದರ್ಶಿ ಆನಂದ ಅತ್ತಾವರ, ಖಜಾಂಚಿ ಈಶ್ವರ್, ಚೈತನ್ಯ ಸಹಕಾರಿ ಸಂಘದ ಅಧ್ಯಕ್ಷ…

Read More

ಮಡಿಕೇರಿ ಫೆ.22 NEWS DESK :  ಗೋಣಿಕೋಪ್ಪಲಿನ ಕಾವೇರಿ ಕಾಲೇಜಿನಲ್ಲಿ ಫೆ.25 ರಂದು ಬೆಳಗ್ಗೆ 08 ಗಂಟೆಯಿಂದ ಮುಖ್ಯಾಲಯ ಕರ್ನಾಟಕ ಮತ್ತು ಕೇರಳ ಸಬ್ ಏರಿಯಾ ಬೆಂಗಳೂರು ಇವರ ವತಿಯಿಂದ ಮಾಜಿ ಸ್ಯೆನಿಕರ ರ‍್ಯಾಲಿ  ನಡೆಯಲಿದೆ. ಕೊಡಗು ಜಿಲ್ಲೆಯ ಎಲ್ಲಾ ಮಾಜಿ ಸ್ಯೆನಿಕರು ಮತ್ತು ಅವರ ಅವಲಂಬಿತರು ಕುಂದುಕೊರತೆಗಳು ಹಾಗೂ ಇತರೆ ಪಿಂಚಣಿ ಸಂಬಂಧಿತ ಸಮಸ್ಯೆಗಳ ಪರಿಹಾರಕ್ಕಾಗಿ ತಮ್ಮ ಮೂಲ ಸೇನಾ ದಾಖಲಾತಿಗಳೊಂದಿಗೆ ಆಧಾರ್ ಕಾರ್ಡ್, ಪಿಂಚಣಿ ಪಡೆಯುತ್ತಿರುವ ಬ್ಯಾಂಕ್ ಖಾತೆಯ ಪಾಸ್ ಪುಸ್ತಕ, ಪಾನ್ ಕಾರ್ಡ ಹಾಗೂ ಬ್ಯಾಂಕ್ ಖಾತೆ, ಸ್ಪರ್ಶ್ ಮತ್ತು ಆಧಾರ್‍ಗೆ ನೋಂದಣಿಯಾದ ಮೊಬೈಲ್ ಸಂಖ್ಯೆ ಹಾಗೂ ಎಲ್ಲಾ ದಾಖಲಾತಿಗಳ ನೆರಳಚ್ಚು ಪ್ರತಿಗಳೊಂದಿಗೆ ಫೆ.16 ರೊಳಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮುಖ್ಯ ರಸ್ತೆ, ಮಡಿಕೇರಿ ಇವರಲ್ಲಿ ತಮ್ಮ ತಮ್ಮ ಕುಂದುಕೂರತೆಗಳನ್ನು ನೋಂದಾಯಿಸಿಕೊಳ್ಳಬೇಕು. ತಮ್ಮ ಎಲ್ಲಾ ದಾಖಲಾತಿಗಳನ್ನು ರ್ಯಾಲಿಯ ದಿನದಂದು ತರುವುದು. ಕೊಡಗು ಜಿಲ್ಲೆಯ ಎಲ್ಲಾ ಮಾಜಿ ಸ್ಯೆನಿಕರು ಮತ್ತು ಅವರ ಅವಲಂಬಿತರು ಇದರ ಸದುಪಯೂಗ…

Read More

ಮಡಿಕೇರಿ ಫೆ.22 NEWS DESK :  ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹುದ್ದೆಯ ನೇಮಕಾತಿಯಲ್ಲಿ ಬಿ.ಎಸ್ಸಿ ಅರಣ್ಯ ಶಾಸ್ತ್ರ ಪದವಿಯನ್ನೆ ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡುವಂತೆ ಒತ್ತಾಯಿಸಿ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ ಪ್ರತಿಭಟನಾ ನಿರತ ಸ್ಥಳಕ್ಕೆ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿದರು. ಈ ಸಂದರ್ಭ ವಿದ್ಯಾರ್ಥಿಗಳು ಮಾತನಾಡಿ, ಅರಣ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಾದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹುದ್ದೆಗಳಿಗೆ ಬಿ.ಎಸ್ಸಿ ಅರಣ್ಯ ಶಾಸ್ತ್ರ ಪದವೀಧರರನ್ನೇ ನೇರ ನೇಮಕಾತಿ ಮಾಡುವುದರ ಮೂಲಕ (ಅರಣ್ಯಶಾಸ್ತ್ರ)ದಲ್ಲಿ ವಿಷೇಶ ಪರಿಣತಿ ಹೊಂದಿರುವ ಪದವೀಧರರ ಜ್ಞಾನ ಮತ್ತು ಅನುಭವವನ್ನು ರಚನಾತ್ಮಕವಾಗಿ ಬಳಸಿಕೊಳ್ಳಬೇಕೆಂದು ಒತ್ತಾಯಿಸಿದರು. ಪದವೀಧರರನ್ನ ತಮ್ಮ ತಮ್ಮ ಇಲಾಖೆಗಳಲ್ಲಿನ ಹುದ್ದೆಗಳಗೆ ನೇಮಿಸುತ್ತಿವೆ. ಆದರೆ ಬಿ.ಎಸ್ಸಿ (ಅರಣ್ಯಶಾಸ್ತ್ರ) ಪದವೀಧರರನ್ನು ಅರಣ್ಯ ಇಲಾಖೆಯು ತನ್ನ ಹುದ್ದೆಗಳಿಗೆ ಶೇ.100ರಷ್ಟನ್ನು ಪರಿಗಣಿಸುತ್ತಿಲ್ಲ. ಆಙಖಈಔ ಹುದ್ದೆಗಳಿಗೆ ಹಾಲಿ ಇರುವ ನೇರ ನೇಮಕಾತಿಯನ್ನು ರದ್ದು ಗೊಳಿಸಿದರೆ ಬಿ.ಎಸ್ಸಿ (ಅರಣ್ಯಶಾಸ್ತ್ರ) ಮತ್ತು…

Read More

ಮಡಿಕೇರಿ ಫೆ.22 NEWS DESK :  ಕೊಡಗು ಜಿಲ್ಲೆಯ ಕಾಫಿ ಬೆಳೆಗಾರರ 10 ಹೆಚ್.ಪಿ ಪಂಪ್ ಸೆಟ್ ಗಳ ವಿದ್ಯುತ್ ಸಂಪರ್ಕ ಕಡಿತವನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕ ಧರಣಿ ಸತ್ಯಾಗ್ರಹವನ್ನು ಮುಂದುವರೆಸಿದೆ. ನಗರದ ಚೆಸ್ಕಾಂ ಕಚೇರಿಯ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ರೈತರು ಬೇಡಿಕೆ ಈಡೇರುವವರೆಗೆ ಇಲ್ಲಿಂದ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ರೈತ ಸಂಘದ ಜಿಲ್ಲಾಧ್ಯಕ್ಷ ಮನು ಸೋಮಯ್ಯ ಮಾತನಾಡಿ, ಸರ್ಕಾರ ಕಾಫಿ ಬೆಳೆಗಾರರ ಬಗ್ಗೆ ಮಲತಾಯಿ ಧೋರಣೆ ತೋರುತ್ತಿದೆ. ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಲವಾರು ಬಾರಿ ಸರ್ಕಾರದ ಗಮನ ಸೆಳೆಯಲಾಗಿತ್ತು. ಆದರೆ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರ ರೈತಪರವಾದ ನಿರ್ಧಾರ ತೆಗೆದುಕೊಳ್ಳುತ್ತಿಲ್ಲವೆಂದು ಆರೋಪಿಸಿದರು. ಸರ್ಕಾರ ಬೆಳೆಗಾರರನ್ನು ಬೀದಿಗೆ ಎಳೆಯುವುದು ಬೇಡ, ಈಗಾಗಲೇ ಪ್ರಾಣಿ ಮಾನವ ಸಂಘರ್ಷದಿಂದ ಸಾಕಷ್ಟು ಕಷ್ಟ ನಷ್ಟಗಳು ಎದುರಾಗಿದೆ. ಅಲ್ಲದೆ ಅಕಾಲಿಕ ಮಳೆ, ಬೆಳೆಹಾನಿಯಿಂದಾಗಿಯೂ ರೈತರು ಕಂಗಾಲಾಗಿದ್ದಾರೆ. ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿದ್ದರೆ ತೀವ್ರ ರೀತಿಯ ಹೋರಾಟದ…

Read More