ಲೇಖಕ: admin

ವಿರಾಜಪೇಟೆ ಫೆ.22 NEWS DESK : 88ನೇ ತ್ರಿಮೂರ್ತಿ ಶಿವ ಜಯಂತಿ ಮಹೋತ್ಸವದ ಪ್ರಯುಕ್ತ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಹಾಗೂ ವಿರಾಜಪೇಟೆ  ಜ್ಞಾನ ಗಂಗಾ ಭವನದ ವತಿಯಿಂದ ಫೆ.25 ರಿಂದ ಮಾ.1 ರ ತನಕ  ವಿರಾಜಪೇಟೆಯಲ್ಲಿ ಭಾರತದ ಪ್ರಸಿದ್ಧ ದ್ವಾದಶ ಜ್ಯೋತಿರ್ಲಿಂಗಗಳ ಪುಣ್ಯ ದರ್ಶನ ಮತ್ತು ಆಧ್ಯಾತ್ಮಿಕ ಚಿತ್ರಗಳ ಪ್ರದರ್ಶನ ನಡೆಯಲಿದೆ. ವಿರಾಜಪೇಟೆ ನಗರದ ತಾಲೂಕು ಮೈದಾನದಲ್ಲಿ  ಫೆ.25 ರಂದು  ಬೆಳಿಗ್ಗೆ 10-30ಕ್ಕೆ  ನಡೆಯುವ ಜ್ಯೋತಿರ್ಲಿಂಗಗಳ ಪುಣ್ಯದರ್ಶನ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಲಿದ್ದಾರೆ. ಮೈಸೂರು ಬ್ರಹ್ಮಾಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯದ ಮುಖ್ಯ ಸಂಚಾಲಕರಾದ ರಾಜಯೋಗಿನಿ ಬಿ.ಕೆ.ಲಕ್ಷ್ಮೀಜಿ ದಿವ್ಯ ಸಾನ್ನಿಧ್ಯ ವಹಿಲಿದ್ದು, ವಿರಾಜಪೇಟೆ ಸಮೀಪದ ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿ ಅಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಾಲೂಕು ಡಿವೈಎಸ್‍ಪಿ ಆರ್.ಮೋಹನ್ ಕುಮಾರ್ ಮತ್ತು ವೃತ್ತನಿರೀಕ್ಷಕ ಬಿ.ಎಸ್.ಶಿವರುದ್ರ ಭಾಗವಹಿಸಲಿದ್ದಾರೆ. ಆರು ದಿನಗಳ ಕಾಲ ಪ್ರವಚನ, ಜೀವನದಲ್ಲಿ ಸುಖ ಶಾಂತಿ, ನೆಮ್ಮದಿ ಮತ್ತು ಉತ್ತಮ ಆರೋಗ್ಯ ದೊರಕಲೆಂದು…

Read More

ನಾಪೋಕ್ಲು ಫೆ.22 NEWS DESK :  ಹೋದವಾಡ ಗ್ರಾಮದ ಕೇಮಾಟ್ ಕಾಳಪ್ಪ ಮಾಡು ಎಂಬಲ್ಲಿ ಹುಲಿದಾಳಿಯಿಂದ ಹಸು ಚಿಂತಜನಕಗೊಂಡಿದ್ದು, ನಾಲ್ಕು ಹಸುಗಳು ನಾಪತ್ತೆಯಾಗಿದೆ. ಅಲ್ಲದೇ ಎರಡು ಹಸುವಿನ ಹಳೇಬರಹ ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ. ಗ್ರಾಮದ ಯೂಸುಫ್ ಹಾಜಿ ಎಂಬವರು ಪಶು ಸಂಗೋಪನೆ ಮಾಡುತ್ತಿದ್ದು, ಮೇಯಲು ಬಿಟ್ಟ ಹಸು ಒಂದು ತೀವ್ರವಾದ ಗ್ರಾಯಗೊಂಡಿದೆ. ಹಸುವಿನ ಮೇಲೆ ಮೂರು ನಾಲ್ಕು ಕಡೆಗಳಲ್ಲಿ ಹುಲಿ ಪಂಜಗಳಿಂದ ತೀವ್ರ ಗಾಯ ಮಾಡಿರುವ ಗುರುತು ಕಂಡುಬಂದಿದ್ದು, ಹಾಲು ಕರೆಯುವ ಹಸು ತೀವ್ರ ಅಸ್ವಸ್ಥಗೊಂಡಿದೆ. ಕಳೆದ ಒಂದು ವಾರದ ಈ ಕಡೆ 4 ಹಸುಗಳು ನಾಪತ್ತೆಯಾಗಿದ್ದು, ಹುಡುಕಲು ತೆರಳಿದ ಯೂಸುಫ್ ಅವರಿಗೆ (ಹುಲಿ) ಚಿರತೆಯ ಹೆಜ್ಜೆ ಗುರುತು ಕಾವೇರಿ ನದಿ ದಡದಲ್ಲಿ ಕಂಡಿದೆ. ಮಾತ್ರವಲ್ಲ ಒಂದು ಹಸುವಿನ ಕಲೆಬರಹ ಕೂಡ ಕಂಡು ಬಂದಿದೆ ಎಂದು ಯೂಸುಫ್ ತಿಳಿಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪಶು ಇಲಾಖೆ ಸಿಬ್ಬಂದಿಗಳು ಹಸುಗೆ ಸೂಕ್ತ ಚಿಕಿತ್ಸೆಯನ್ನು ನೀಡಿದ್ದಾರೆ.…

Read More

ಮಡಿಕೇರಿ ಫೆ.22 NEWS DESK : ಕೊಡಗು ಜಿಲ್ಲಾ‌ ಫುಟ್ಬಾಲ್ ಅಸೋಸಿಯೇಷನ್ ನಲ್ಲಿ ನೋಂದಣಿಯಾಗಿರುವ ಫುಟ್ಬಾಲ್ ಕ್ಲಬ್ ಗಳ ಪದಾಧಿಕಾರಿಗಳ ಸಭೆ ಫೆ.24 ರಂದು ನಡೆಯಲಿದೆ. ಅಮ್ಮತ್ತಿಯ ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಕಚೇರಿಯಲ್ಲಿ ಮಧ್ಯಾಹ್ನ 2 ಗಂಟೆಗೆ  ನಡೆಯಲಿದೆ ಎಂದು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಕಾರ್ಯದರ್ಶಿ ಪಿ.ಎ.ನಾಗೇಶ್ (ಪಂದಿಕಂಡ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ 2023-24ನೇ ಸಾಲಿನ ಲೀಗ್ ಪಂದ್ಯಾವಳಿಯ ಮಾಹಿತಿ ನೀಡಲು ಎಲ್ಲಾ ಕ್ಲಬ್ ಗಳ ಪದಾಧಿಕಾರಿಗಳ ಸಭೆಯನ್ನು ಕರೆದಿದ್ದು, ಎಲ್ಲಾ ಕ್ಲಬ್ ಗಳಿಂದ ಅಧ್ಯಕ್ಷ ಅಥವಾ ವ್ಯವಸ್ಥಾಪಕರು ಕಡ್ಡಾಯವಾಗಿ ಪಾಲ್ಗೊಳ್ಳಬೇಕೆಂದು ಪಿ.ಎ.ನಾಗೇಶ್ ತಿಳಿಸಿದ್ದಾರೆ.

Read More

ನಾಪೋಕ್ಲು ಫೆ.22 NEWS DESK : ಮೂರ್ನಾಡಿನ ನಕ್ಷತ್ರ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಆಟೋ ಮಾಲೀಕರ ಹಾಗೂ ಚಾಲಕರ ಕುಟುಂಬಗಳ ಸಮ್ಮಿಲನ ಕಾರ್ಯಕ್ರಮ ಮೂರ್ನಾಡು ಪಾಂಡಾಣೆ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಶುಭಹಾರೈಸಿದರು. ನಕ್ಷತ್ರ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ಅಧ್ಯಕ್ಷ ಬಿ.ಡಿ.ಉಮೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂತೂರು ಗ್ರಾ.ಪಂ ಅಧ್ಯಕ್ಷ ಬಿ.ಎಸ್.ಕುಶನ್ ರೈ, ತ್ರಿನೇತ್ರ ವಾಹನ ಮಾಲೀಕರ ಮತ್ತು ಚಾಲಕರ ಸಂಘದ ಅಧ್ಯಕ್ಷ ಕರವಂಡ ಸಜನ್ ಗಣಪತಿ ,ಫ್ರೆಂಡ್ಸ್ ವಾಹನ ಮಾಲೀಕ ಮತ್ತು ಚಾಲಕರ ಸಂಘದ ಅಧ್ಯಕ್ಷ ರಿಯಾಜ್, ನಾಪೋಕ್ಲುವಿನ ಆಟೋ ಮಾಲೀಕರ ಮತ್ತು ಚಾಲಕರ ಸಂಘದ ಅಧ್ಯಕ್ಷ ರಾಜೀವ್, ಅಮ್ಮತಿಯ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ಅಧ್ಯಕ್ಷ ಅಭಿಜಿತ್, ಮೂರ್ನಾಡು ಪೋಲಿಸ್ ಉಪಠಾಣೆಯ ಪಿ.ಟಿ.ಶ್ರೀನಿವಾಸ್ ,ಮೂರ್ನಾಡು ಪೊಲೀಸ್ ಉಪಠಾಣೆ ಸಿಬ್ಬಂದಿ ರಾಜೇಂದ್ರ ,ಕಾಂತೂರು ಗ್ರಾ.ಪಂ ಸದಸ್ಯ ಎಚ್.ಎನ್.ರಘು,ನಕ್ಷತ್ರ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ಗೌರವ ಅಧ್ಯಕ್ಷ ತಿಮ್ಮಪ್ಪ…

Read More

ವಿರಾಜಪೇಟೆ ಫೆ.22 NEWS DESK :  ಅಯೋಧ್ಯೆಯಲ್ಲಿ ದೇವಾಲಯದ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದ ನಂತರ, ರಾಮ್ ಲಲ್ಲಾನನ್ನು ನೋಡಲು ರಾಷ್ಟ್ರದಾದ್ಯಂತ ಲಕ್ಷಾಂತರ ಭಕ್ತರು ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ. ಕೊಡಗು ಜಿಲ್ಲೆಯ ಎಲ್ಲಾ ತಾಲೂಕು ಹಾಗೂ ಬೂತ್ ಮಟ್ಟದಿಂದ ಕಾರ್ಯಕರ್ತರೆಲ್ಲರೂ ಸೇರಿಕೊಂಡು ಭಕ್ತರು ಆಸ್ಥಾ ವಿಶೇಷ ರೈಲಿನಲ್ಲಿ ಜೈ ಶ್ರೀರಾಮ ಘೋಷಣೆಯೊಂದಿಗೆ ಯಾತ್ರಿಕರು ಪ್ರಯಾಣ ಮಾಡಿ ಅಯೋಧ್ಯೆ ಶ್ರೀರಾಮನ ದರ್ಶನ ಪಡೆದರು.

Read More

ಕುಶಾಲನಗರ ಫೆ.22 NEWS DESK :   ದೇವಾಲಯಗಳು ಮತ್ತು ಸಂಸ್ಕೃತಿಯ ರಕ್ಷಣೆಗಾಗಿ ಫೆ.23ರಂದು ಕುಶಾಲನಗರದಲ್ಲಿ ಕೊಡಗು ಜಿಲ್ಲಾ ಮಟ್ಟದ ದೇವಸ್ಥಾನಗಳ ಪರಿಷತ್ತು ಸಮಾವೇಶ ನಡೆಯಲಿದೆ ಎಂದು ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಪ್ರಮುಖರಾದ ಚಂದ್ರ ಮೊಗವೀರ ತಿಳಿಸಿದ್ದಾರೆ. ಕುಶಾಲನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೇವಸ್ಥಾನಗಳ ಸರಕಾರೀಕರಣ, ದೇವಸ್ಥಾನಗಳನ್ನು ಅಪವಿತ್ರಗೊಳಿಸುವುದು, ಮೂರ್ತಿಭಂಜನ ಆನೇಕ ದೇವಸ್ಥಾನಗಳನ್ನು ಅನಧಿಕೃತವೆಂದು ಧ್ವಂಸಗೊಳಿಸುವುದು, ದೇವಸ್ಥಾನಗಳ ಜಮೀನುಗಳನ್ನು ವಶಪಡಿಸಿಕೊಳ್ಳುವುದು, ದೇವನಿಧಿ ಅಪವ್ಯಯ ಈ ರೀತಿಯ ಆನೇಕ ಸಮಸ್ಯೆಗಳು ಮುಗಿಲು ಮುಟ್ಡಿದೆ ಎಂದು ಅವರು ಹೇಳಿದರು. ಈ ಎಲ್ಲಾ ಕಾರಣಗಳಿಂದ ದೇವಸ್ಥಾನಗಳಲ್ಲಿನ ದೇವತಾ ತತ್ವನ್ನು ಕಾಪಾಡಲು, ದೇವಸ್ಥಾನಗಳಲ್ಲಿ ಧರ್ಮಪ್ರಸಾರ ಮಾಡಲು . ಭಕ್ತಾದಿಗಳಿಗೆ ಮೂಲ ಸೌಕರ್ಯ ಕಲ್ಪಿಸಲು , ದೇವಸ್ಥಾನಗಳ ಸಂಘಟನೆಯನ್ನು ಮಾಡುವ ಅನಿವಾರ್ಯತೆ ಬಂದಿದೆ. ದೇವಾಲಯಗಳಿಗೆ ಆಗಮಿಸುವ ಭಕ್ತಾದಿಗಳಿಗೆ ವಸ್ತ್ರಸಂಹಿತೆಯನ್ನು ಅಳವಡಿಸಲು ಕುಶಾಲನಗರ ದೇವಸ್ಥಾನಗಳ ಒಕ್ಕೂಟ ಮತ್ತು ಹಿಂದೂ ಜನಜಾಗೃತಿ ಆಶ್ರಯದಲ್ಲಿ 23 ರಂದು ಕುಶಾಲನಗರ ರೈತ ಸಹಕಾರ ಭವನದಲ್ಲಿ…

Read More

ಮಡಿಕೇರಿ ಫೆ.22 NEWS DESK : ಅರಣ್ಯ ಹಕ್ಕು ಕಾಯ್ದೆ 2012 ರ ತಿದ್ದುಪಡಿ ಕಾಯ್ದೆ ಪ್ರಕಾರ ಒಂದೊಂದು ಕುಟುಂಬಕ್ಕೆ ತಲಾ 5 ಎಕರೆ ಕೃಷಿ ಭೂಮಿಯನ್ನು ಮಂಜೂರು ಮಾಡುವಂತೆ  ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ  ಕೊಡಗು ಜಿಲ್ಲಾ ಜೇನು ಕುರುಬರ ಸಂಘ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸಂಘದ ಪ್ರಮುಖರು, ಜೇನು ಕುರುಬರ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ. ಸ್ವತಂತ್ರ ಪೂರ್ವದಿಂದಲೂ ನಮ್ಮ ಸಮುದಾಯವು ತುಳಿತಕ್ಕೆ ಒಳಗಾಗಿದೆ. ಪ್ರಮುಖವಾಗಿ ನಮ್ಮ ಸಮುದಾಯಕ್ಕೆ ಉತ್ತಮ ಗುಣಮಟ್ಟದ ಶಿಕ್ಷಣ, ಹುಣಸೂರು ತಾಲ್ಲೂಕಿನಲ್ಲಿ ಜೇನುಕುರುಬರ ಕಚೇರಿಯನ್ನು ಮರುಸ್ಥಾಪಿಸಿ P.V.T.G ಅನುದಾನವನ್ನು ಜಿ.ಕೆ ಕಚೇರಿಯ ಮೂಲಕವೇ ನಮ್ಮ ಸಮುದಾಯಕ್ಕೆ ತಲುಪಿಸುವುದು. ಅರಣ್ಯ ಹಕ್ಕು ಕಾಯ್ದೆ 2012 ರ ತಿದ್ದುಪಡಿ ಕಾಯ್ದೆ ಪ್ರಕಾರ ಒಂದೊಂದು ಕುಟುಂಬಕ್ಕೆ ತಲಾ 5 ಎಕರೆ…

Read More

ಮಡಿಕೇರಿ ಫೆ.22 NEWS DESK : ಗೋಣಿಕೊಪ್ಪ ಕೊಡವ ಸಮಾಜದ ಸಮುದಾಯ ಭವನಕ್ಕೆ ಅನುದಾನ ನೀಡುವಂತೆ ಗೋಣಿಕೊಪ್ಪ ಕೊಡವ ಸಾಂಸ್ಕೃತಿಕ ಕೇಂದ್ರದ ಆಡಳಿತ ಮಂಡಳಿಯ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮನವಿ ಮಾಡಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ  ಗೋಣಿಕೊಪ್ಪ ಕೊಡವ ಸಾಂಸ್ಕೃತಿಕ ಕೇಂದ್ರದ ಆಡಳಿತ ಮಂಡಳಿಯ ಪ್ರಮುಖರು ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದರು. ಕೊಡಗಿನ ಪ್ರತಿಷ್ಠಿತ ಪಟ್ಟಣವಾದ ಗೋಣಿಕೊಪ್ಪಲ್ಲಿನಲ್ಲಿ ಕೊಡವ ಕಲೆ, ಸಂಸ್ಕೃತಿ, ಆಚಾರ, ವಿಚಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕೊಡವ ಸಮಾಜ ಸಂಸ್ಥೆಯನ್ನು ಸ್ಥಾಪಿಸಲಾಗಿದೆ. ಇಲ್ಲಿ ಕೊಡವ ಜನಾಂಗದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಮುದಾಯ ಭವನವನ್ನು ನಿರ್ಮಿಸಲಾಗುತ್ತಿದೆ. ಇಷ್ಟರವರೆಗೆ ಈ ಸಮುದಾಯ ಭವನದ ಕಾಮಗಾರಿಗಳಿಗೆ ಸುಮಾರು 1 ಕೋಟಿ 50 ಲಕ್ಷ ರೂ. ಗಳನ್ನು ವೆಚ್ಚ ಮಾಡಲಾಗಿದೆ. ಅಂದಾಜು 8.50 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕಟ್ಟಡಕ್ಕೆ ಹಣಕಾಸಿನ ತೊಂದರೆಯಿಂದ ಕಾಮಗಾರಿಯು ಸದ್ಯಕ್ಕೆ ನಿಂತುಹೋಗಿದೆ ಎಂದು…

Read More

ಮಡಿಕೇರಿ ಫೆ.22 NEWS DESK : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ “ಯುವನಿಧಿ” ಯೋಜನೆಯನ್ನು 2023 ರ ಡಿಸೆಂಬರ್, 26 ರಂದು ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ. 2023 ರಲ್ಲಿ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ, ಖಾಸಗಿ, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ http://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ “ಯುವನಿಧಿ” ಯೋಜನೆಗೆ ಅರ್ಜಿ ಸಲ್ಲಿಸಬಹುದು. ಪದವೀಧರರಿಗೆ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ.ಗಳು ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ರೂ.ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 1800 599 9918 ಗೆ ಕರೆ ಮಾಡುವ ಮೂಲಕ ಅಥವಾ…

Read More

ಮಡಿಕೇರಿ ಫೆ.22 NEWS DESK :  ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಫೆ.24 ರಂದು ಸಂಜೆ 4 ಗಂಟೆಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾಧಿಗಳು ದೇವಾಲಯದಲ್ಲಿ ನಡೆಯುವ ಸಾಮೂಹಿಕ ಸತ್ಯನಾರಾಯಣ ಪೂಜೆಯಲ್ಲಿ ಭಾಗವಹಿಸುವಂತೆ ದೇವಾಲಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ತಿಳಿಸಿದ್ದಾರೆ.

Read More