ಮಡಿಕೇರಿ ಫೆ.22 NEWS DESK : 2024-25 ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 6 ನೇ ತರಗತಿಗೆ ಉಚಿತ (ಸಿಬಿಎಸ್‍ಇ) (ಆಂಗ್ಲ ಮಾಧ್ಯಮ) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ಸಿಖ್, ಬೌದ್ಧ, ಜೈನ್, ಕ್ರಿಶ್ಚಿಯನ್, ಮುಸ್ಲಿಂ ಮತ್ತು ಪಾರ್ಸಿ ಶೇ.75 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ (ಒಬಿಸಿ) ಶೇ.25 ಸೀಟು ಲಭ್ಯವಿರುತ್ತದೆ. ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯವಿದ್ದು, 5ನೇ ತರಗತಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು https://sevasindhuservices.karnataka.gov.in ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಅರ್ಜಿ ಸಲ್ಲಿಸಲು ಮಾರ್ಚ್, 15 ಕೊನೆಯ ದಿನವಾಗಿದೆ. ವಸತಿ ಶಾಲೆಯಲ್ಲಿ ಪ್ರತಿ ವಿದ್ಯಾರ್ಥಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯದೊಂದಿಗೆ ಉಚಿತ ಶಿಕ್ಷಣ, ಉಚಿತವಾಗಿ ವರ್ಷಕ್ಕೆ ಸಮವಸ್ತ್ರ, ಬೂಟು,…
ಲೇಖಕ: admin
ಮಡಿಕೇರಿ ಫೆ.22 NEWS DESK : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮವಾಗಿರುವ “ಸಂವಿಧಾನ ಜಾಗೃತಿ ಜಾಥಾ” ಅಭಿಯಾನದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ Online ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದ ಅಂಗವಾಗಿ ಭಾರತ ಸಂವಿಧಾನದ ಕುರಿತಂತೆ ಪ್ರಶ್ನಾವಳಿಯ ಸರಣಿಯ ಮೂರನೇ ಹಂತದ ಪ್ರಶ್ನಾವಳಿಗಳನ್ನು ಸಿದ್ಧಪಡಿಸಲಾಗಿದೆ. ಈ ಸಂವಿಧಾನ ಜಾಗೃತಿ ಜಾಥ ಕುರಿತಾದ ಮೂರನೇ ಹಂತದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಗೂಗಲ್ ಫಾರ್ಮ್‍ನಲ್ಲಿ ಕೋರಿರುವ ಮಾಹಿತಿಯನ್ನು ಭರ್ತಿ ಮಾಡಿ ನೀಡಲಾಗಿರುವ ಬಹುಆಯ್ಕೆ ಮಾದರಿಯ ಪ್ರಶ್ನಾವಳಿಗಳಿಗೆ ಉತ್ತರಿಸುವ ಮೂಲಕ ಕೊಡಗು ಜಿಲ್ಲಾ ಆಡಳಿತ ವತಿಯಿಂದ ಆಯೋಜಿಸಲಾಗಿರುವ ವಿಶೇಷ ಅಭಿಯಾನ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿನ ಎಲ್ಲಾ ವಿದ್ಯಾರ್ಥಿಗಳು, ಸಾರ್ವಜನಿಕರು, ಸರ್ಕಾರಿ ನೌಕರರು, ವಿಶೇಷವಾಗಿ ಶಾಲಾ ಶಿಕ್ಷಕರು, ವಿವಿಧ ಸಂಘ-ಸಂಸ್ಥೆಗಳು, ಭಾಗಿಯಾಗಲು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಕೋರಿದ್ದಾರೆ. Link : https://docs.google.com/forms/d/e/1FAIpQLScvYfxL3dz6FBu54FaDKZIXE_aN_m_bqKaDFibqCSyKSBI8XQ/viewform?usp=sf_link
ಮಡಿಕೇರಿ ಫೆ.22 NEWS DESK : ಸಂವಿಧಾನ ದಿನಾಚರಣೆ ಪ್ರಯುಕ್ತ ಕೊಡಗು ಜಿಲ್ಲೆಯಲ್ಲಿ ಕಳೆದ 27 ದಿನಗಳಿಂದ ಹಮ್ಮಿಕೊಂಡಿರುವ ಜಾಗೃತಿ ಜಾಥಾ ಅಭಿಯಾನದ ‘ಸ್ತಬ್ಧಚಿತ್ರ’ ಒಳಗೊಂಡ ವಾಹನವನ್ನು ನಗರದ ರಾಜಾಸೀಟಿನಲ್ಲಿ ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ನಗರದ ರಾಜಾಸೀಟು ಉದ್ಯಾನವನ ಬಳಿಯಿಂದ ಹೊರಟ ಸಂವಿಧಾನ ಜಾಗೃತಿ ಅಭಿಯಾನದ ಸ್ತಬ್ಧಚಿತ್ರ ಒಳಗೊಂಡಂತೆ ಮೆರವಣಿಗೆಯಲ್ಲಿ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಯ ಪ್ರತಿನಿಧಿಗಳು, ವಿದ್ಯಾರ್ಥಿಗಳು, ಆಟೋ ಚಾಲಕರು, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಸಂತ ಮೈಕಲರ ಶಾಲೆಯ ವಿದ್ಯಾರ್ಥಿಗಳು, ಸ್ತ್ರೀಶಕ್ತಿ ಗುಂಪುಗಳು ಇತರರು ಪಾಲ್ಗೊಂಡಿದ್ದರು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶೇಖರ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಪೌರಾಯುಕ್ತರಾದ ವಿಜಯ್, ಸ್ಕೌಟ್ಸ್ ಮತ್ತು ಗೈಡ್ಸ್‍ನ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ, ಸ್ಕೌಟ್ಸ್ ಮತ್ತು ಗೈಡ್ಸ್‍ನ ಕಾರ್ಯದರ್ಶಿ ಬೊಳ್ಳಜಿರ ಅಯ್ಯಪ್ಪ, ದಲಿತ ಸಂಘರ್ಷ ಸಮಿತಿಯ ಸಂಘಟಕರಾದ ಎಚ್.ಎಲ್.ದಿವಾಕರ, ನಿರ್ವಾಣಪ್ಪ, ಹೊನ್ನಪ್ಪ ವಿವಿಧ ಇಲಾಖೆ ಅಧಿಕಾರಿಗಳು ಇತರರು…
ಮಡಿಕೇರಿ ಫೆ.21 : ಕೃಷಿಗಾಗಿ ಅಳವಡಿಸಿರುವ ರೈತರ 10 ಹೆಚ್.ಪಿ ಪಂಪ್‌ಸೆಟ್‌ಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಚೆಸ್ಕಾಂ ಕಚೇರಿ ಎದುರು ಜಮಾಯಿಸಿದ ಸಂಘದ ಪ್ರಮುಖರು ಹಾಗೂ ರೈತರು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ರೈತ ಮುಖಂಡ ಹೇರೂರು ಚಂದ್ರಶೇಖರ್ ಮಾತನಾಡಿ ಈ ಹಿಂದೆ ಮೂರು-ನಾಲ್ಕು ಬಾರಿ ಕೊಡಗಿನ ರೈತರು ಚೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸದಂತೆ ವಿವರವಾದ ಮನವಿಯನ್ನು ಸಲ್ಲಿಸಿದ್ದರು. ಇತರ ಬೆಳೆಗಳಿಗೆ ನೀಡುತ್ತಿರುವಂತೆಯೇ 10 ಹೆಚ್‌ಪಿ ಒಳಗಿನ ವಿದ್ಯುತ್ ಮೋಟಾರುಗಳಿಗೆ ಸಂಬAಧಿಸಿದAತೆ ಕೊಡಗಿನ ರೈತರಿಗೂ ವಿನಾಯಿತಿ ವಿಸ್ತರಿಸಿಕೊಬೇಕೆಂದು ಹಲವು ಬಾರಿ ಕೋರಿಕೊಳ್ಳಲಾಗಿತ್ತು. ಸರ್ಕಾರಿ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿಗಳು ಕೂಡ ಭರವಸೆ ನೀಡಿದ್ದರು. ಆದರೆ ಕೊಡಗಿನ ರೈತರ ಪರವಾದ ಯಾವುದೇ ಕ್ರಮವಾಗಿಲ್ಲ. ಬಾಕಿ ವಿದ್ಯುತ್ ಬಿಲ್ ಪಾವತಿ ಮಾಡಿದರೆ ಆ ಹಣವನ್ನು ಬ್ಯಾಂಕ್ ಖಾತೆ ಮೂಲಕ ಹಿಂತಿರುಗಿಸುವ ಇಲಾಖೆಯ ಪ್ರಸ್ತಾಪ…
ಮಡಿಕೇರಿ ಫೆ.22 NEWS DESK : ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರವು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರು ಮಾಹಿತಿ ನೀಡಿದರು. ಮಾದರಿ ನೀತಿ ಸಂಹಿತೆ ಜಾರಿ ಸಂಬಂಧಿಸಿದ ಅಧಿಕಾರಿಗಳು ಚುನಾವಣಾ ಆಯೋಗ ನಿಗದಿಪಡಿದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಹೇಳಿದರು. ಮಾದರಿ ನೀತಿ ಸಂಹಿತೆ ಜಾರಿ ಅವಧಿಯಿಂದ ಫಲಿತಾಂಶ ಪ್ರಕಟಿಸುವವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರಲಿದ್ದು, ಅದರಂತೆ ಸಂಬಂಧಪಟ್ಟ ನೋಡಲ್ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದರು. ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ, ಈ ಬಗ್ಗೆ ವರದಿ ನೀಡಬೇಕು. ಸಾಕ್ಷ್ಯಗಳನ್ನು ಸಂಗ್ರಹಿಸಬೇಕು ಎಂದರು. ಮಾದರಿ ನೀತಿ ಸಂಹಿತೆ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ತರಬೇತಿ ನೀಡಬೇಕು ಎಂದರು. ಸ್ವೀಪ್ ನೋಡಲ್ ಅಧಿಕಾರಿಗಳು ಸ್ವೀಪ್ ಯೋಜನೆಯನ್ನು ಸಿದ್ದಪಡಿಸಬೇಕು. ಮತದಾರರ ಜಾಗೃತಿ ಸಂಬಂಧಿಸಿದಂತೆ ಸೃಜನಾತ್ಮಕ ಚಟುವಟಿಕೆ ಹಮ್ಮಿಕೊಳ್ಳಬೇಕು. ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳ…
ಮಡಿಕೇರಿ ಫೆ.21 NEWS DESK : ಇಡೀ ವಿಶ್ವದಲ್ಲಿ ಭಾರತವು ಶ್ರೇಷ್ಠ ಸಂವಿಧಾನವನ್ನು ಹೊಂದಿದ್ದು, ಭಾರತ ಸಂವಿಧಾನದಲ್ಲಿ ಪ್ರತಿಯೊಬ್ಬರೂ ಸಮಾನರು ಎಂಬುದನ್ನು ಪ್ರತಿಪಾದಿಸಲಾಗಿದೆ. ಅದರಂತೆ ಪ್ರತಿಯೊಬ್ಬರೂ ನಡೆದುಕೊಳ್ಳುವಂತಾಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ. ಸಂವಿಧಾನ ಜಾಗೃತಿ ಜಾಥ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಹಾಗೂ ನಗರಸಭೆ ವತಿಯಿಂದ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಬುಧವಾರ ಏರ್ಪಡಿಸಿದ್ದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಭಾರತದ ಪ್ರಜೆಗಳಾದ ಪ್ರತಿಯೊಬ್ಬರೂ ಸಮನಾಗಿ ಬದುಕುವ ಹಕ್ಕು ಹೊಂದಿದ್ದಾರೆ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹೀಗೆ ಪ್ರತಿ ಕ್ಷೇತ್ರದಲ್ಲೂ ಸಹ ಸಮಾನ ಅವಕಾಶವನ್ನು ಹೊಂದಿದ್ದಾರೆ ಎಂದು ಹೇಳಿದರು. ಸಂವಿಧಾನದಡಿ ಪ್ರತಿಯೊಬ್ಬರೂ ಸಮಾನರಾಗಿದ್ದು, ಬಡವ-ಬಲ್ಲಿದ, ಮೇಲು-ಕೀಲು ಎಂಬುದಿಲ್ಲ. ರಾಷ್ಟ್ರದಲ್ಲಿ ಯಾರೂ ಸಹ ಅಸಮಾನತೆ ಹೊಂದಿರಬಾರದು ಎಂದು ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ ಎಂದು ಕೆ.ರಾಮರಾಜನ್ ಅವರು ನುಡಿದರು. ಭಾರತ ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ತಿಳಿಸಲಾಗಿದೆ. ಹಾಗೆಯೇ ರಾಜ್ಯ ನಿರ್ದೇಶಕ ತತ್ವಗಳನ್ನು ಸಹ ಒಳಗೊಂಡಿದೆ. ಆ…
ಮಡಿಕೇರಿ ಫೆ.21 NEWS DESK : ನಾಗರಹೊಳೆ ಅರಣ್ಯ ಪ್ರದೇಶ ವ್ಯಾಪ್ತಿಯ ಲೈನ್ ಮನೆಗಳಲ್ಲಿ ವಾಸವಿರುವ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಾಗಿದೆ ಎಂದು ಆರೋಪಿಸಿರುವ ಕರ್ನಾಟಕ ಅರಣ್ಯ ಬುಡಕಟ್ಟು ಒಕ್ಕೂಟದ ಮೈಸೂರು ಜಿಲ್ಲಾ ಪ್ರಮುಖ ಶೈಲೇಂದ್ರ ಕುಮಾರ್, ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಪ್ರಾಪ್ತ ಹೆಣ್ಣು ಮಕ್ಕಳನ್ನು ಪ್ರೀತಿ, ಪ್ರೇಮದ ವಿಚಾರದಲ್ಲಿ ನಂಬಿಸಿ ಮೋಸ ಮಾಡುತ್ತಿರುವ ಪ್ರಕರಣಗಳು ಮತ್ತು ಒಂಟಿಯಾಗಿರುವ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ನಡೆಸಿ, ಸಂತ್ರಸ್ತರಿಗೆ ಹಣ ಕೊಟ್ಟು ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು. ಹಣ ನೀಡಿದರೆ ಎಲ್ಲವೂ ಸಾಧ್ಯ ಎನ್ನುವ ಮನೋಸ್ಥಿತಿ ಹಲವರಲ್ಲಿದೆ. ದೌರ್ಜನ್ಯ ಪ್ರಕರಣಗಳು ನಡೆಯದಂತೆ ಪೊಲೀಸ್ ಇಲಾಖೆ ಎಚ್ಚರ ವಹಿಸಬೇಕು. ಬಾಲಕಿಯರು ಹಾಗೂ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಆಗ್ರಹಿಸಿದರು. ಇತ್ತೀಚೆಗೆ ದಕ್ಷಿಣ ಕೊಡಗಿನ ಗ್ರಾಮವೊಂದರಲ್ಲಿ ಅತ್ಯಾಚಾರಕ್ಕೊಳಗಾಗಿ ಆತ್ಮಹತ್ಯೆಗೊಳಗಾದ ಅಪ್ರಾಪ್ತ ಬಾಲಕಿಯ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಲು ಹೋದ ಸಂದರ್ಭ ಕೆಲವು…
ಮಡಿಕೇರಿ ಫೆ.21 NEWS DESK : ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಮಹಿಳೆಯರಿಗೆ ನೀಡುವ “ಗೃಹಲಕ್ಷ್ಮಿ”ಯ ಮಾಸಿಕ ರೂ.2 ಸಾವಿರ ಅನೇಕರಿಗೆ ಇಲ್ಲಿಯವರೆಗೆ ತಲುಪಿಲ್ಲ ಎಂದು ಆರೋಪಿಸಿರುವ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ನ ಜಿಲ್ಲಾ ಕೋಶಾಧಿಕಾರಿ ಕೆ.ಎಂ.ಯೂಸುಫ್, ಸೌಲಭ್ಯಗಳನ್ನು ತ್ವರಿತವಾಗಿ ಫಲಾನುಭವಿಗಳಿಗೆ ತಲುಪಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಕುರಿತು ಅಂಚೆ ಮೂಲಕ ಶಾಸಕರು ಹಾಗೂ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿರುವ ಅವರು, ಯೋಜನೆಗಳು ಜಾರಿಯಾಗಿ 6 ತಿಂಗಳು ಕಳೆದಿದ್ದರೂ ಸರಕಾರದ ಸೌಲಭ್ಯಕ್ಕಾಗಿ ಜನರು ಪರದಾಡುವುದು ತಪ್ಪಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅನೇಕ ಮಹಿಳೆಯರು ದಾಖಲೆಗಳಿಗಾಗಿ ಬ್ಯಾಂಕ್, ತಾಲ್ಲೂಕು ಕಚೇರಿ, ಆಧಾರ್ ಸೆಂಟರ್, ಸೈಬರ್ ಸೆಂಟರ್‍ಗಳಿಗೆ ಅಲೆದಾಡುತ್ತಿದ್ದಾರೆ. ಇದರಿಂದ ಕೆಲವೊಂದು ಮನೆಗಳಲ್ಲಿ ಕಲಹ ಏರ್ಪಡುತ್ತಿದೆ. ಸರಕಾರ ಮನೆ ಬಾಗಿಲಿಗೆ ಸೌಲಭ್ಯ ತಲುಪಿಸುವ ಕ್ರಮ ಕೈಗೊಂಡಿದ್ದರೆ ಅಥವಾ ಎಲ್ಲಾ ದಾಖಲೆಗಳನ್ನು ಪರಿಪೂರ್ಣಗೊಳಿಸುವಂತೆ ಆದೇಶಿಸಿ, ಆ ನಂತರ ಯೋಜನೆಯನ್ನು ನೀಡಿದ್ದರೆ ಸಮಸ್ಯೆ ಎದುರಾಗುತ್ತಿರಲಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಗೃಹಲಕ್ಷ್ಮಿ…
ಮಡಿಕೇರಿ ಫೆ.21 NEWS DESK : ವಿಶ್ವರಾಷ್ಟ್ರ ಸಂಸ್ಥೆಯ ಅಂತರ ರಾಷ್ಟ್ರೀಯ ಮಾತೃಭಾಷಾ ದಿನವಾದ ಇಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿತು. 2024ರ ವಿಶ್ವ ಮಾತೃಭಾಷಾ ದಿನದಂದು ಯುನೆಸ್ಕೋ “ಜಗತ್ತಿನಾದ್ಯಂತ ಮಾತೃಭಾಷೆಗಳಲ್ಲಿ ವೈವಿಧ್ಯ ಭಾಷೆಗಳ ಶಿಕ್ಷಣ ಕಲಿಕೆಗೆ ಆದ್ಯತೆ” ಎಂಬ ಘೋಷವಾಕ್ಯವನ್ನು ಮೊಳಗಿಸಿದ್ದು, ಕೊಡವ ಭಾಷೆಯನ್ನು ಸಂವಿಧಾನದ 8ನೇ ಶೆಡ್ಯೂಲ್ ಗೆ ಸೇರಿಸಬೇಕೆಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದರು. ಕೊಡವ ಭಾಷೆಯನ್ನು ವಿಶ್ವ ರಾಷ್ಟ್ರ ಸಂಸ್ಥೆಯ ಅಧಿಕೃತ ಭಾಷೆಗಳಲ್ಲೊಂದಾಗಿ ಪರಿಗಣಿಸಬೇಕು. ಪ್ರತೀ ವರ್ಷ ಆಕ್ಸ್ಫರ್ಡ್ ಡಿಕ್ಷನರಿಯೂ ಜಗತ್ತಿನ ವಿವಿಧ ಭಾಷೆಗಳ 15 ಸಾವಿರ ಹೊಸ ಪದಗಳನ್ನು ಆಯ್ಕೆ ಮಾಡಿ ಅಳವಡಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ಈ ಆಕ್ಸ್ಫರ್ಡ್ ಡಿಕ್ಷನರಿಯಲ್ಲಿ ಕೊಡವ ಭಾಷೆಯ ಪದಗಳನ್ನು ಸೇರಿಸುವುದರ ಮೂಲಕ ಕೊಡವ ಭಾಷೆ ಮತ್ತು ಆಕ್ಸ್ಫರ್ಡ್ ಡಿಕ್ಷನರಿ ಎರಡನ್ನು ಕೂಡ ಸಮೃದ್ಧ ಮತ್ತು ಶ್ರೀಮಂತಗೊಳಿಸಬೇಕು ಎಂಬ ಬೇಡಿಕೆಯೊಂದಿಗೆ ಒಟ್ಟು 27 ಹಕ್ಕೊತ್ತಾಯಗಳನ್ನ ಮಂಡಿಸಿದರು. ಕೊಡವ ಲ್ಯಾಂಡ್ ಭೂ ರಾಜಕೀಯ…
ಮಡಿಕೇರಿ ಫೆ.21 NEWS DESK : ಗುಜರಾತ್ ನಲ್ಲಿ ನಡೆದ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿಯ ಬ್ರೈನೋ ಬ್ರೈನ್ ಸಂಸ್ಥೆಯ ವಿದ್ಯಾರ್ಥಿ 6 ವರ್ಷದ ಆಹಾನ್ ಬನ್ವಾಲ್ ಚಾಂಪಿಯನ್ನಾಗಿ ಹೊರಹೊಮ್ಮಿದ್ದಾನೆ. ಗುಜರಾತ್ ರಾಜ್ಯ ಉದಯಪುರದ ಮೂಲ ನಿವಾಸಿಗಳಾಗಿರುವ ಅಭಿಷೇಕ್ ಕುಮಾರ್ ಬನ್ವಾಲ್ ಮತ್ತು ಸ್ಮಿತಾ ಶೇಖರ್ ದಂಪತಿಗಳ ಪುತ್ರ ಆಹಾನ್ ಬನ್ವಾಲ್ ಮಡಿಕೇರಿ ಬ್ರೈನೋಬ್ರೈನ್ ಸಂಸ್ಥೆಯ ತರಬೇತುದಾರರಾದ ಮಾಪಂಗಡ ಕವಿತಾ ಕರುಂಬಯ್ಯ ಅವರಿಂದ ಅಬಾಕಸ್ ತರಬೇತಿ ಪಡೆಯುತ್ತಿದ್ದಾನೆ. ಗುಜರಾತ್ ರಾಜ್ಯ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಒಟ್ಟು 700 ಮಕ್ಕಳು ಭಾಗಿಯಾಗಿದ್ದು, ಈ ಸ್ಪರ್ಧೆಯಲ್ಲಿ ಆಹಾನ್ ಬನ್ವಾಲ್ ಚಾಂಪಿಯನ್ನಾಗಿರುವುದು ಪ್ರಶಂಷನೀಯ ಹಾಗೂ ಹೆಮ್ಮೆಯ ವಿಷಯವಾಗಿದೆ ಎಂದು ತರಬೇತುದಾರರಾದ ಮಾಪಂಗಡ ಕವಿತಾ ಕರುಂಬಯ್ಯ ಹರ್ಷ ವ್ಯಕ್ತಪಡಿಸಿದ್ದಾರೆ.






