ಬೆಂಗಳೂರು ಫೆ.20 NEWS DESK : ವೈದ್ಯಕೀಯ ಶಿಕ್ಷಣ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರ ಅದ್ಯಕ್ಷತೆಯಲ್ಲಿ ಮಂಗಳವಾರ ವಿಕಾಸಸೌಧದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜು ಆಡಳಿತ ಮಂಡಳಿಯ ಸಭೆ ನಡೆಸಲಾಯಿತು. ಸಭೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ, ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಮೊಹಮ್ಮದ್ ಮೋಸಿನ್, ಕಾರ್ಯದರ್ಶಿ(ಹಣಕಾಸು) ಆರ್.ವಿಶಾಲ್, ಸಂಸ್ಥೆಯ ನಿದೇರ್ಶಕ ಡಾ. ವಿಶಾಲ್ ಕುಮಾರ್, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕಿ ಡಾ.ಸುಜಾತಾ ರಾಥೋಡ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಲೇಖಕ: admin
ಮಡಿಕೇರಿ ಫೆ.20 NEWS DESK : ರಾಷ್ಟ್ರೀಯ ಆಯುಷ್ ಅಭಿಯಾನ ಯೋಜನೆಯಡಿ ಸಮುದಾಯ ಆರೋಗ್ಯ ಅಧಿಕಾರಿ ಹಾಗೂ ಮಲ್ಟಿಪರ್ಪಸ್ ವರ್ಕರ್ ಹುದ್ದೆಗಳ ನೇಮಕಾತಿ ಸಂಬಂಧ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಜಿಲ್ಲಾ ಆಯುಷ್ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಆಯ್ಕೆಪಟ್ಟಿ ಕುರಿತಂತೆ ಆಕ್ಷೇಪಣೆಗಳು ಇದ್ದಲ್ಲಿ ಫೆ.26 ರ ಸಂಜೆ 4 ಗಂಟೆಯೊಳಗೆ ಜಿಲ್ಲಾ ಆಯುಷ್ ಅಧಿಕಾರಿ, ಆಯುಷ್ ಇಲಾಖೆ, ಮಹದೇವಪೇಟೆ, ಮಡಿಕೇರಿ ಕೊಡಗು ಜಿಲ್ಲೆ ಇವರಿಗೆ ಮನವಿ ಮೂಲಕ ಸಲ್ಲಿಸಬಹುದಾಗಿದೆ. ಈ ಅವಧಿಯ ನಂತರ ಸ್ವೀಕೃತವಾದ ಆಕ್ಷೇಪಣೆಗಳನ್ನು ತಿರಸ್ಕರಿಸಲಾಗುವುದು ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾದೇವಿ ತಿಳಿಸಿದ್ದಾರೆ.
ಕುಶಾಲನಗರ, ಫೆ 20 NEWS DESK : ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಹೆಬ್ಬಾಲೆ ಕ್ಲಸ್ಟರ್ ವತಿಯಿಂದ ಕ್ಲಸ್ಟರ್ ವ್ಯಾಪ್ತಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಹಯೋಗದೊಂದಿಗೆ ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆದ ಸರಳ ಸಮಾರೋಪ ಸಮಾರಂಭದಲ್ಲಿ ಶಿಕ್ಷಕ ಸೇವೆಯಿಂದ ನಿವೃತ್ತಗೊಂಡ ಶಿಕ್ಷಕರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿ ಬೀಳ್ಕೊಡಲಾಯಿತು. ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಅಭಿನಂದನಾ ಪತ್ರ ನೀಡಿ ಮಾತನಾಡಿದ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ , ನಿವೃತ್ತ ಶಿಕ್ಷಕರು ಸೇವೆಯಿಂದಷ್ಟೇ ನಿವೃತ್ತಿಗೊಂಡಿದ್ದರೂ ಅವರು ನಿವೃತ್ತಿ ನಂತರವೂ ಪ್ರವೃತ್ತಿಯಲ್ಲಿ ಶಿಕ್ಷಕರಾಗಿಯೇ ಇದ್ದು, ತಮ್ಮನ್ನು ಶಿಕ್ಷಣ ಕ್ಷೇತ್ರ ಹಾಗೂ ಸಮಾಜದ ವಿವಿಧ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ತಮ್ಮ ಆರೋಗ್ಯ ರಕ್ಷಣೆ ಕಡೆ ಹೆಚ್ಚಿನ ಗಮನಹರಿಸಬೇಕು ಎಂದರು. ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತ ಗೊಂಡ ಸಹ ಶಿಕ್ಷಕ ಹೆಚ್.ಈ. ರಮೇಶ್ ಹಾಗೂ ಶಿರಂಗಾಲ ಪ್ರೌಢಶಾಲೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸಿ ನಿವೃತ್ತಗೊಂಡ ವಿಜಯ್…
ಮಡಿಕೇರಿ ಫೆ.20 NEWS DESK : ರಾಮನಗರದಲ್ಲಿ ವಕೀಲರ ಮೇಲೆ ಪೊಲೀಸರು ಅನವಶ್ಯಕವಾಗಿ ಮೊಕದ್ದಮೆ ದಾಖಲಿಸಿದ್ದಾರೆ ಎಂದು ಆರೋಪಿಸಿ ಮಡಿಕೇರಿ ವಕೀಲರ ಸಂಘ ಇಂದು ನ್ಯಾಯಾಲಯ ಕಲಾಪ ಬಹಿಷ್ಕರಿಸಿತು. ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ರಾಮನಗರದಲ್ಲಿ 32 ವಕೀಲರ ವಿರುದ್ಧ ಪೊಲೀಸರು ಮೊಕದ್ದಮೆ ದಾಖಲಿಸಿರುವುದು ಖಂಡನೀಯವೆಂದು ಸಂಘದ ಪ್ರಮುಖರು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದ ವಕೀಲರ ಸಂಘಟನೆಗಳಿಂದ ನಡೆಯವ ವಿಧಾನಸೌಧ ಚಲೋ ಸಂದರ್ಭ ಮಡಿಕೇರಿ ವಕೀಲರ ಸಂಘದಿಂದ ಕೂಡ ಸದಸ್ಯರು ತೆರಳಿದ್ದಾರೆ ಎಂದು ಮಡಿಕೇರಿ ವಕೀಲರ ಸಂಘದ ಉಪಾಧ್ಯಕ್ಷ ನಾಗರಾಜ್ ಮಾಹಿತಿ ನೀಡಿದರು. ವಕೀಲರ ವಿರುದ್ಧದ ಮೊಕದ್ದಮೆಯನ್ನು ತಕ್ಷಣ ಕೈಬಿಡಬೇಕು ಎಂದು ಒತ್ತಾಯಿಸಿದರು. ಸಂಘದ ಪದಾಧಿಕಾರಿಗಳು ಈ ಸಂದರ್ಭ ಹಾಜರಿದ್ದರು.
ಮಡಿಕೇರಿ ಫೆ.20 NEWS DESK : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೋಟಾರ್ ರಿವೈಂಡಿಂಗ್ ಮತ್ತು ರಿಪೇರಿ ಕುರಿತ 30 ದಿನಗಳ ಉಚಿತ ತರಬೇತಿಯು 15 ಮಾರ್ಚ್ 2024 ರಿಂದ 30 ದಿನಗಳ ಕಾಲ ಆಯೋಜಿಸಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್‍ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಮಾರ್ಚ್ 10 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ…
ಮಡಿಕೇರಿ ಫೆ.20 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕೊಡಗು ಜಿಲ್ಲಾ ಶಾಖೆ, ಸೋಮವಾರಪೇಟೆ ತಾಲ್ಲೂಕು ಶಾಖೆಯ ಸಂಯುಕ್ತಾಶ್ರಯದಲ್ಲಿ ಫೆ.24 ಮತ್ತು 25 ರಂದು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೂಡಿಗೆ ಸರ್ಕಾರಿ ಕ್ರೀಡಾ ಶಾಲಾ ಮೈದಾನದಲ್ಲಿ ಫೆ.24 ರಂದು ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ದೊರೆಯಲಿದ್ದು, ಆಸಕ್ತ ಸರ್ಕಾರಿ ಖಾಯಂ ನೌಕರರು ಫೆ.22 ರೊಳಗೆ https://forms.gle/3arj7sBogh2kieAKA ಲಿಂಕ್ ಬಳಸಿ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದರು. ಫೆ.24 ರಂದು ಬೆಳಗ್ಗೆ 10.30 ಗಂಟೆಗೆ ಶಾಸಕ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಕ್ರೀಡಾಕೂಟಕ್ಕೆ ಚಾಲನೆ…
ಮಡಿಕೇರಿ ಫೆ.20 NEWS DESK : ಭಾರತೀಯ ಕ್ರೀಡಾ ಪ್ರಾಧಿಕಾರದ ಚಿನ್ನದ ಪದಕ ವಿಜೇತ 19 ಹಾಕಿ ಕ್ರೀಡಾಪಟುಗಳಿಗೆ ಭಾರತೀಯ ಕ್ರೀಡಾ ಪ್ರಾಧಿಕಾರದಿಂದ ಆತ್ಮೀಯವಾಗಿ ಗೌರವಿಸಲಾಯಿತು. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಚಿನ್ನದ ಪದಕ ವಿಜೇತ ಕ್ರೀಡಾಪಟುಗಳಿಗೆ ಸನ್ಮಾನಿಸಿದರು. ಇತ್ತೀಚೆಗೆ ಬೆಂಗಳೂರಿನ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ(ಸಾಯಿ) ನಡೆದ ಅಖಿಲ ಭಾರತ ಮಟ್ಟದ ಅಂತರ್ ಸಾಯಿ ಹಾಕಿ ಪಂದ್ಯಾವಳಿಯಲ್ಲಿ ಮಡಿಕೇರಿ ಕ್ರೀಡಾ ಪ್ರಾಧಿಕಾರದ ವಿದ್ಯಾರ್ಥಿನಿಯರು ಪಾಲ್ಗೊಂಡು ಚಿನ್ನದ ಪದಕ ಪಡೆದಿರುವುದು ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಕೊಡಗು ಜಿಲ್ಲೆಯಲ್ಲಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ಇಲ್ಲಿನ ಕ್ರೀಡಾಪಟುಗಳು ರಾಷ್ಟ್ರ ಮತ್ತು ಅಂತರ ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುತ್ತಿರುವುದು ಕೊಡಗು ಜಿಲ್ಲೆಗೆ ಹೆಮ್ಮೆ ತರುತ್ತದೆ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ, ಕೊಡಗು ಜಿಲ್ಲೆಯ ವಿದ್ಯಾರ್ಥಿಗಳು ಹಾಕಿ ಕ್ರೀಡೆಯಲ್ಲಿ ಮತ್ತಷ್ಟು ಸಾಧನೆ ಮಾಡುವಂತಾಗಬೇಕು ಎಂದು ಸಲಹೆ ಮಾಡಿದರು. ಭಾರತೀಯ…
ಮಡಿಕೇರಿ ಫೆ.20 NEWS DESK : ಈಗಾಗಲೇ 29ನೇ ಕೊಲ್ಕತ್ತಾ ಅಂತರ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಇಂಡಿಯನ್ ಕಾಂಪಿಟೀಷನ್ ವಿಭಾಗದಲ್ಲಿ ಅಧಿಕೃತವಾಗಿ ಆಯ್ಕೆಗೊಂಡು ಹೆಸರು ಮಾಡಿರುವ ಸ್ವಸ್ತಿಕ್ ಎಂಟರ್ಟೈನ್ಮೆಂಟ್ ನ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರ ನಿರ್ದೇಶನದ “ಕಂದೀಲು” ಕನ್ನಡ ಸಿನಿಮಾ 15ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಇದೇ ಫೆ.29 ರಿಂದ ಮಾರ್ಚ್ 7ರವರೆಗೆ ಬೆಂಗಳೂರಿನ ಒರಿಯಾನ್ ಮಾಲ್‍ನಲ್ಲಿ ನಡೆಯುವ ಚಲನಚಿತ್ರೋತ್ಸವದ ಕನ್ನಡ ಸ್ಪರ್ಧಾತ್ಮಕ ವಿಭಾಗದಲ್ಲಿ ಪ್ರದರ್ಶನಗೊಳ್ಳಲಿದೆ. ಮೊದಲನೆಯ ನಿರ್ದೇಶನದ “ರಂಗ ಪ್ರವೇಶ” ಕೊಡಗಿನ ಕನ್ನಡ ಸಿನಿಮಾದ ಮೊದಲನೇಯ ನಿರ್ದೇಶಕಿ ಎಂಬ ಹೆಗ್ಗಳಿಕೆ ಪಡೆದಿರುವ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರ ನಿರ್ದೇಶನ ಮತ್ತು ನಿರ್ಮಾಣದಲ್ಲಿ ಮೂಡಿ ಬಂದಿರುವ 2ನೇ ಚಿತ್ರ “ಕಂದೀಲು” ಈಗಾಗಲೇ ಮಾನ್ಯತೆ ಪಡೆದಿರುವ ಎರಡು ಫೆಸ್ಟಿವಲ್‍ಗೆ ಆಯ್ಕೆಯಾಗಿರುವುದು ಕೊಡಗಿಗೆ ಹೆಮ್ಮೆ. ಅಲ್ಲದೇ ಈ ಬಾರಿಯ ಚಿತ್ರೋತ್ಸವದ ಕರ್ನಾಟಕದಿಂದ ಸುಮಾರು 15 ಚಿತ್ರಗಳು ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದು, ಯಶೋಧಪ್ರಕಾಶ್ ಕೊಟ್ಟುಕತ್ತಿರ ಒಬ್ಬರೇ ಮಹಿಳಾ ನಿರ್ದೇಶಕಿಯಾಗಿರುವುದು ಕೊಡಗಿಗೆ ಹೆಗ್ಗಳಿಕೆಯ ವಿಚಾರ. ವಿಭಿನ್ನ ಕಥಾ…
ಮಡಿಕೇರಿ ಫೆ.20 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಂತಕವಿ ಸರ್ವಜ್ಞ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ನಗರದ ಗಾಂಧಿ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಮಾತನಾಡಿ, ಸಂತಕವಿ ಸರ್ವಜ್ಞ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿ ಸಂತ ಕವಿ ಶ್ರೇಷ್ಠ ದಾರ್ಶನಿಕ ಕವಿ ಸರ್ವಜ್ಞ ಅವರು ಕನ್ನಡದಲ್ಲಿ ತ್ರಿಪದಿ ಸಾಲುಗಳ ಪದ್ಯ ಬರೆಯುವ ಮೂಲಕ ಮನೆ ಮಾತಾಗಿದ್ದಾರೆ ಎಂದು ತಿಳಿಸಿದರು. ಛತ್ರಪತಿ ಶಿವಾಜಿ ಮಹಾರಾಜರು ಮಹಾರಾಷ್ಟ್ರದ ಪುಣೆ ಬಳಿಯ ಶಿವನೇರಿ ಗ್ರಾಮದಲ್ಲಿ ಜನಿಸಿ ಭಾರತದ ರಾಷ್ಟ್ರ ನಿರ್ಮಾಣಕ್ಕೆ ಹೋರಾಡಿದ್ದಾರೆ ಎಂದು ತಿಳಿಸಿದರು. ಕವಿ ಸರ್ವಜ್ಞ ಮತ್ತು ಛತ್ರಪತಿ ಶಿವಾಜಿ ಮಹಾರಾಜರು ಜನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಈ ಎಲ್ಲಾ ಮಹನೀಯರ ಜೀವನ ಸಂದೇಶಗಳನ್ನು ತಿಳಿದುಕೊಂಡು ಮುಖ್ಯವಾಹಿನಿಗೆ ಬರುವಂತಾಗಬೇಕು ಎಂದು ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಹೇಳಿದರು. ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಅಧ್ಯಾಪಕರಾದ ವೆಂಕಟನಾಯಕ್…
ಗೋಣಿಕೊಪ್ಪ ಫೆ.20 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಸದಸ್ಯರಾಗಿ ಆಯ್ಕೆಯಾದ ತೆರೇಸಾ ವಿಕ್ಟರ್, ಗೋಣಿಕೊಪ್ಪ ಗ್ರಾ.ಪಂ ಅಧ್ಯಕ್ಷರಾಗಿ ಆಯ್ಕೆಯಾದ ಕುಲ್ಲಚಂಡ ಪ್ರಮೋದ್ ಗಣಪತಿ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಎಂ.ಮಂಜುಳ ಅವರನ್ನು ಹಾತೂರು ವಲಯ ಕಾಂಗ್ರೆಸ್ ವತಿಯಿಂದ ಸನ್ಮಾನಿಸಲಾಯಿತು. ಹಾತೂರು ವಲಯ ಕಾಂಗ್ರೆಸ್ ಅಧ್ಯಕ್ಷ ಕೊಕ್ಕಂಡ ರೋಶನ್ ಅವರ ಅಧ್ಯಕ್ಷತೆಯಲ್ಲಿ ಸಿಲ್ವರ್ ಸ್ಕೈ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರಾದ ಕೊಳ್ಳಿಮಾಡ ಅಜಿತ್ ಅಯ್ಯಪ್ಪ ಹಾಗೂ ಕೊಕ್ಕಂಡ ಕಾವೇರಪ್ಪ ಅವರು ಮಾತನಾಡಿ ಪಕ್ಷ ನಿಷ್ಠೆಗೆ ಫಲ ಸಿಗುತ್ತದೆ ಎಂದರು. ತಾಲ್ಲೂಕು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆಲೀರ ಸಾದಲಿ, ಹಿರಿಯರಾದ ವಿ.ಟಿ.ವಾಸು, ದೊಡ್ಮನೆ ವಿಠಲ ಗೌಡ, ಗೋಣಿಕೊಪ್ಪ ಗ್ರಾ.ಪಂ ಸದಸ್ಯ ಚೆಪ್ಪುಡೀರ ಧ್ಯಾನ್ ಸುಬ್ಬಯ್ಯ, ಮಾಜಿ ಸದಸ್ಯ ರಾಜಶೇಖರ್, ಪ್ರಮುಖರಾದ ಶಿವಾಜಿ, ನೂರೇರ ಧನ್ಯ, ಬೇಬಿ, ಪುಲಿಯಂಡ ರೋಷನ್, ಶ್ರೇಯಸ್ಸ್, ಬೊಳ್ಳಿ, ಸುರೇಶ್, ಅಮ್ಜು, ಸುರೇಶ್, ಮಧುಸೂದನ್ ಬೂತ್ ಅಧ್ಯಕ್ಷರು ಹಾಗೂ ಕಾರ್ಯಕರ್ತರು…






