ಮಡಿಕೇರಿ ಜ.16 : ಮಡಿಕೇರಿಯ ಮಂಗಳಾದೇವಿ ನಗರದಲ್ಲಿರುವ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಶ್ರೀ ರಾಜರಾಜೇಶ್ವರಿ, ಮಹಾಗಣಪತಿ ಹಾಗೂ ನಾಗದೇವರುಗಳ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು. ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ಎರಡು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿದವು. ಜ.14 ರಂದು ಸಂಜೆಯಿಂದಲೇ ಪ್ರಾರ್ಥನೆ, ಪುಣ್ಯಾಹ, ಸಪ್ತಶುದ್ಧಿ, ಪ್ರಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಪೂಜೆ, ವಾಸ್ತುಹೋಮ, ದಿಶಾಬಲಿ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಜ.15 ರಂದು ಪುಣ್ಯಾಹ, ಗಣಪತಿ ಹೋಮ, ಚಂಡಿಕಾ ಹೋಮ, ನವಕಲಶ ಪೂಜೆ, ಪ್ರಧಾನ ಹೋಮ, ನಾಗದೇವರಿಗೆ ತಂಬಿಲ ಪೂಜೆ, ಆಶ್ಲೇಷ ಬಲಿ, ಕಳಶಾಭಿಷೇಕ ಮಹಾಪೂಜೆ ನೆರವೇರಿತು. ನಂತರ ಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ ನಡೆಯಿತು. ಸಂಜೆ ಸಾಯಂಪೂಜೆ, ರಂಗಪೂಜೆ, ಬಲಿ ಉತ್ಸವ, ರಾಜಾಂಗಣ ಪ್ರಸಾದ, ಪೀಠಪೂಜೆ, ಶುದ್ಧಿಕಲಶಾಭಿಷೇಕ, ಮಂತ್ರಾಕ್ಷತೆ ಹಾಗೂ ಅನ್ನಸಂತರ್ಪಣೆ ನೆರವೇರಿತು. ನಗರದ ವಿವಿಧ ಬಡಾವಣೆಗಳಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ದೇವಿಗೆ…
ಲೇಖಕ: admin
ಬೆಂಗಳೂರು ಜ 16: ಕರ್ನಾಟಕ ನಾಮಕರಣಗೊಂಡು, ಏಕೀಕರಣದ 50 ವರ್ಷದ ನೆನಪಿಗಾಗಿ ಸುವರ್ಣ ಪೊಲೀಸ್ ಭವನ ಕಟ್ಟಡ ನಿರ್ಮಾಣಕ್ಕೆ ಬಜೆಟ್ ನಲ್ಲಿ ಹಣ ನೀಡಲಾಗುವುದು. ಖಾಲಿ ಇರುವ ಪೊಲೀಸ್ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದರು. ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು. ಹಾಗೆ ಮಾಡಬೇಡಿ. ನಮ್ಮದು ಜಾತ್ಯತೀತ ರಾಷ್ಟ್ರ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು ಎಂದು ಹೇಳಿದರು. ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಸಾಧ್ಯವಿದೆ ಎಂದರು. ಗೃಹ ಸಚಿವ ಜಿ.ಪರಮೇಶ್ವರ್, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು ನಸೀರ್ ಅಹಮದ್ ಉಪಸ್ಥಿತರಿದ್ದರು.
ಮಡಿಕೇರಿ ಜ.16 : ನಗರದ ಕೊಹಿನೂರ್ ರಸ್ತೆಯಲ್ಲಿರುವ ಲಾಡ್ಜ್ ವೊಂದರಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮೈಸೂರು ಮೂಲದ ಸಂದೇಶ್ (35) ಮೃತಪಟ್ಟ ಯುವಕ. ಐಟಿ ಉದ್ಯೋಗಿಯಾಗಿದ್ದ ಸಂದೇಶ್ ಕಳೆದ 3 ದಿನಗಳ ಹಿಂದೆ ಮಡಿಕೇರಿಗೆ ಬಂದಿದ್ದ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ನಾಪೋಕ್ಲು ಜ.16 : ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೇಲಾವರ ಗ್ರಾಮದಲ್ಲಿ ಟ್ರಾನ್ಸ್ ಫಾರ್ಮರ್ ಒಂದು ದುರಸ್ತಿಗೆ ಒಳಗಾಗಿ ಗ್ರಾಮಕ್ಕೆ ಸಮರ್ಪಕ ವಿದ್ಯುತ್ ಪೂರೈಕೆ ಆಗುತ್ತಿಲ್ಲ ಎಂದು ಆರೋಪಿಸಿರುವ ಗ್ರಾಮಸ್ಥರು ನೂತನ ಟ್ರಾನ್ಸ್ ಫಾರ್ಮರ್ ಅಳವಡಿಸಿ ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಚೇಲಾವರ ಗ್ರಾಮದ ಮನೆಯಪಂಡ ಧೀರಜ್ ತಿಮ್ಮಯ್ಯ ಅವರ ಕಾಫಿ ತೋಟದಲ್ಲಿ ಅಳವಡಿಸಲಾಗಿರುವ ಟ್ರಾನ್ಸ್ ಫಾರ್ಮರ್ ಕಳೆದ ಎರಡು ವರ್ಷಗಳಿಂದ ದುಸ್ಥಿತಿಯಲ್ಲಿದೆ. ಟ್ರಾನ್ಸ್ ಫಾರ್ಮರ್ ನಲ್ಲಿರುವ ದ್ರವರೂಪದ ವಸ್ತುಗಳು ಸೊರುತ್ತಿದ್ದು, ಇದರಿಂದಾಗಿ ಗ್ರಾಮಕ್ಕೆ ವಿದ್ಯುತ್ ಸಮಸ್ಯೆ ಎದುರಾಗಿದೆ. ಪದೇ ಪದೇ ವಿದ್ಯುತ್ ಕಡಿತಗೊಳ್ಳುವುದು, ವಿದ್ಯುತ್ ಪೂರೈಕೆಯಾದರೂ ಲೋ ವೋಲ್ಟೇಜ್ ಕೊರತೆಯಿಂದ ಸಮಸ್ಯೆ ಅನುಭವಿಸುವಂತಾಗಿದೆ ಎಂದರು. ಮೂರ್ನಾಡಿನ ಚೆಸ್ಕಾಂ ಇಲಾಖೆಗೆ ಮನವಿ ಸಲ್ಲಿಸಿದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ನೂತನ ಟ್ರಾನ್ಸ್ ಫಾರ್ಮರ್ ಅಳವಡಿಸಿ ಗ್ರಾಮದ ವಿದ್ಯುತ್ ಸಮಸ್ಯೆಯನ್ನು ಪರಿಹರಿಸಿ ಕೊಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ವರದಿ : ದುಗ್ಗಳ ಸದಾನಂದ
ಮಡಿಕೇರಿ ಜ.16 : ತಮಿಳು ಭಾಷೆಯ ಪ್ರಾಚೀನ ಕವಿ ತಿರುವಳ್ಳುವರ್ ಅವರ ತಿರುಕ್ಕುರಳ್ ಕೃತಿಯ ಕೊಡವ ಅನುವಾದ ಕೃತಿಯು ಇತ್ತೀಚೆಗೆ ಜರುಗಿದ ‘ಕಾಶಿ ತಮಿಳ್ ಸಂಗಮಂ’ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಂದ ಬಿಡುಗಡೆಗೊಂಡಿತು. ತಮಿಳು ಭಾಷೆಯಲ್ಲಿದ ಈ ಕೃತಿಯನ್ನು ಕೊಡವ ಭಾಷೆಗೆ ಗೋಣಿಕೊಪ್ಪ ಕಾವೇರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಮುಲ್ಲೇಂಗಡ ರೇವತಿ ಪೂವಯ್ಯ ಅನುವಾದ ಮಾಡಿದ್ದರು.
ಮಡಿಕೇರಿ ಜ.16 : ಕರಿಕೆಯಲ್ಲಿ ಪೊಟಂತೆಯ್ಯಂ, ವಿಷ್ಣು ಮೂರ್ತಿ, ಕರಿಂಚಾಮಂಡಿ ಮತ್ತು ಉಪದೈವಗಳ ಕೋಲಗಳು ಶ್ರದ್ಧಾಭಕ್ತಿಯಿಂದ ಜರುಗಿತು. ಕರಿಕೆ ಹಾಗೂ ವಿವಿಧ ಜಿಲ್ಲೆಯ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು.
ಬೆಂಗಳೂರು ಜ.16 : ವೈಚಾರಿಕ-ವೈಜ್ಞಾನಿಕ ಸಮ ಸಮಾಜ ನಿರ್ಮಾಣಕ್ಕೆ ಬಸವಾದಿ ಶರಣರು ಹೋರಾಡಿದ್ದರು. ಶರಣರು ನುಡಿದಂತೆ ನಡೆದರು. ಹೇಳಿದಂತೆಯೇ ತಮ್ಮ ಬದುಕನ್ನು ಆಚರಿಸಿದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ರವೀಂದ್ರ ಕಲಾಕ್ಷೇತ್ರದಲ್ಲಿ ಕಾಯಕಯೋಗಿ ಸಿದ್ದರಾಮೇಶ್ವರ ಜಯಂತಿ ಮತ್ತು ಸಿದ್ದರಾಮೇಶ್ವರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ ಮಾತನಾಡಿದರು. ಬಸವಾದಿ ಶರಣರು ಜಾತಿ-ಧರ್ಮ ಆಧಾರದಲ್ಲಿ ಮನುಷ್ಯರನ್ನು ವಿಭಜಿಸಲಿಲ್ಲ. ಮನುಷ್ಯರನ್ನು ಜಾತಿ-ಧರ್ಮದ ಆಧಾರದಲ್ಲಿ ದ್ವೇಷಿಸುವುದು ಅಮಾನವೀಯವಾದದ್ದು. ಮೌಡ್ಯ, ಕಂದಾಚಾರ, ಕರ್ಮ ಸಿದ್ಧಾಂತವನ್ನು ಒಪ್ಪಬಾರದು. ಅವಕಾಶ ಸಿಕ್ಕವರು ಮುಂದೆ ಬಂದರು, ಅವಕಾಶ ಇಲ್ಲದವರು ಹಿಂದುಳಿದರು. ಹಣೆಬರಹ ಎನ್ನುವುದೆಲ್ಲಾ ಬೋಗಸ್. ನಮ್ಮ ಊರಿನ ಶಾನುಬೋಗರು ನಮ್ಮ ಜಾತಿಯವರು ಕಾನೂನು ಓದಬಾರದು ಎಂದು ನನ್ನ ಅಪ್ಪನಿಗೆ ಒಪ್ಪಿಸಿಬಿಟ್ಟಿದ್ದರು. ಆದರೆ ನಾನು ಹಠ ತೊಟ್ಟು ಕಾನೂನು ಪದವಿ ಪಡೆದೆ. ಈಗ ಮುಖ್ಯಮಂತ್ರಿ ಕೂಡ ಆಗಿದ್ದೇನೆ. ಶಾನುಬೋಗರ ಮಾತು ಕೇಳಿದ್ದರೆ ನಾನು ಕುರಿ ಕಾಯ್ಕೊಂಡು ಇರಬೇಕಾಗಿತ್ತು. ಇಂಥವರು ನಿಮ್ಮ ದಾರಿ ತಪ್ಪಿಸಿತ್ತಾರೆ. ಈ ಬಗ್ಗೆ ಎಚ್ಚರದಿಂದಿರಿ. ಕಲ್ಲು ಒಡೆಯೋರು ನೀವು,…
ಮಡಿಕೇರಿ ಜ.16 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ತನ್ನ 2024 ನೇ ಜನವರಿ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಾತಿಗೆ ಈಗಾಗಲೇ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕೇಂದ್ರದ ಪ್ರಾದೇಶಿಕ ಅಧಿಕಾರಿಯಾದ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ . ಮುಕ್ತ ವಿಶ್ವವಿದ್ಯಾಲಯವು ನಿಮ್ಮ ಮನೆಯೇ ನಿರಂತರ ಪಾಠಶಾಲೆ ಎಂಬ ಧ್ಯೆಯವಾಕ್ಯದೊಂದಿಗೆ ಯು ,ಜಿ .ಸಿ ಅನುಮೋದಿತ ಶಿಕ್ಷಣ ಕ್ರಮಗಳ ಅಧ್ಯಯನದ ಅವಕಾಶವನ್ನು ವಿದ್ಯಾರ್ಥಿಗಳಿಗೆ ಈಗಾಗಲೇ ಹಲವು ವರ್ಷಗಳಿಂದ ನೀಡುತ್ತಾ ಬಂದಿದೆ . ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯವು ರಾಜ್ಯದಲ್ಲಿ ಮುಕ್ತ ಶಿಕ್ಷಣ ನೀಡುವ ಏಕೈಕ ವಿದ್ಯಾಲಯವಾಗಿದೆ . ಸ್ನಾತಕ ಶಿಕ್ಷಣ ಕಾರ್ಯಕ್ರಮಗಳ ಅಡಿಯಲ್ಲಿ ಬರುವ ಎಲ್ಲ ಡಿಗ್ರಿ ಪ್ರವೇಶಾತಿಗೆ ಪಿ.ಯು.ಸಿ. ಮಾರ್ಕ್ಸ್ ಕಾರ್ಡ್ ,ಡಿಪ್ಲೋಮ ಕೋರ್ಸಗಳಿಗೆ ಹತ್ತನೆಯ ತರಗತಿಯ ಅಂಕ ಪಟ್ಟಿ ಹಾಗೂ ಸ್ನಾತಕೋತ್ತರ ಪಿ .ಜಿ . ಕೋರ್ಸ್ ಗಳಿಗೆ ಡಿಗ್ರಿ ಸರ್ಟಿಫಿಕೇಟ್ ಕಡ್ಡಾಯವಾಗಿರುತ್ತದೆ. ಜೊತೆಯಲ್ಲಿ (ಟಿ .ಸಿ )ವರ್ಗಾವಣೆ ಪ್ರಮಾಣ ಪತ್ರ , ಆದರ್ ಕಾರ್ಡ್ ,…
ಕಡಂಗ ಜ.16 : ಎಸ್‍ವೈಎಸ್ 30ನೇ ವಾರ್ಷಿಕ ಮಹಾ ಸಮ್ಮೇಳನ ಪ್ರಯುಕ್ತ ಎಸ್‍ವೈಎಸ್ ಕಡಂಗ ಯೂನಿಟ್ ವತಿಯಿಂದ ಎಸ್‍ಬಿಎಸ್ ವಿದ್ಯಾರ್ಥಿಗಳ ಸೈಕಲ್ ಜಾಥಾ ಕಾರ್ಯಕ್ರಮ ನಡೆಯಿತು. ಜಾಥಾಕ್ಕೆ ಬದ್ರಿಯಾ ಸುನ್ನಿ ಮಸೀದಿಯ ಅಧ್ಯಕ್ಷ ಕೆ.ಇ.ಉಸ್ಮಾನ್ ಚಾಲನೆ ನೀಡಿದರು. ಜಾಥಾವು ಕೊಕ್ಕಂಡಬಾಣೆ ದರ್ಗಾಷರೀಫ್ ನಿಂದ ಕಡಂಗದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬದ್ರಿಯಾ ಮಸೀದಿಯಲ್ಲಿ ಸಮಾಪ್ತಿ ಗೊಂಡಿತು. ಈ ಸಂದರ್ಭ ಎಸ್ ವೈ ಎಸ್ ಅಧ್ಯಕ್ಷ ಅಶ್ರಫ್ ಮಾತನಾಡಿ, 30ನೇ ಮಹಾ ಸಮ್ಮೇಳದ ಪ್ರಚಾರಾರ್ಥ ಕಡಂಗ ಯೂನಿಟ್ ವತಿಯಿಂದ ಎಸ್ ಬಿ ಎಸ್ ವಿದ್ಯಾರ್ಥಿಗಳ ಸೈಕಲ್ ಜಾಥಾ ಹಮ್ಮಿಕೊಂಡಿದ್ದು, ಜಾಥಾ ಯಶಸ್ವಿಯಾಗಿದೆ ಎಂದರು. ಸದರ್ ಮುಹಲಿಮ್ ಶಿಯಾಬುದ್ದೀನ್ ಚೌಹರಿ ಮಾತನಾಡಿ ಮಂಗಳೂರಿನಲ್ಲಿ ನಡೆಯಲಿರುವ ಎಸ್‍ವೈಎಸ್ 30ನೇ ಮಹಾ ಸಮ್ಮೇಳನದಲ್ಲಿ ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು. ಬದ್ರಿಯಾ ಮಸೀದಿಯ ಉಮ್ಮರ್ ಮುಸ್ಲಿಯಾರ್, ಎಸ್ ವೈ ಎಸ್ ಕಡಂಗ ಸರ್ಕಲ್ ಕಾರ್ಯದರ್ಶಿ ಸಿ.ಎ.ರಜಾಕ್, ಯೂನಿಟ್ ಸಹ ಕಾರ್ಯದರ್ಶಿ ಶಂಸುದ್ದಿನ್, ಸರ್ಕಲ್ ಇಶಾಬ ಕಾರ್ಯದರ್ಶಿ ಕಬೀರ್, ರಾಝಿಕ್…
ಮಡಿಕೇರಿ ಜ.15 : ನಿಟ್ಟೂರು ಗ್ರಾ.ಪಂ ವತಿಯಿಂದ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಯಿತು. ಗ್ರಾ.ಪಂ ಸಭಾಂಗಣದಲ್ಲಿ ವಿಷೇಶ ಪೂಜೆ ನೆರವೇರಿಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭ ಮಾತನಾಡಿ ಗ್ರಾ.ಪಂ ಉಪಾಧ್ಯಕ್ಷ ಚಕ್ಕೇರ ಸೂರ್ಯ ಅಯ್ಯಪ್ಪ, ಸೂರ್ಯ ತನ್ನ ಪಥವನ್ನು ಬದಲಾಯಿಸುತ್ತದೆ ಇದರ ಮೂಲಕ ಬೆಳಕು ಹೆಚ್ಚಾಗುತ್ತಾ ಹೋಗುತ್ತೆ ಹಾಗೆ ನಮ್ಮಲ್ಲಿ ಇರುವಂತಹ ಅಂಧಕಾರ, ಅಹಂಕಾರವನ್ನು ಮರೆತು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಬದುಕಬೇಕೆಂದು ಕರೆ ನೀಡಿದರು. ಗ್ರಾ.ಪಂ ಸದಸ್ಯರಾದ ಕಾಟಿಮಾಡ ಶರೀನ್ ಮುತ್ತಣ್ಣ, ಪಡಿಞರಂಡ ಕವಿತಾ ಪ್ರಭು, ಕುಂಬಾರಕಟ್ಟೆ ಅಪ್ಪಣ್ಣ, ಅಮ್ಮಯ್ಯ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುರೇಶ್, ಸಿಬ್ಬಂದಿ ವರ್ಗದವರು ಮತ್ತು ಗ್ರಾಮಸ್ಥರು ಹಾಜರಿದ್ದರು.






