ಲೇಖಕ: admin

ಮಡಿಕೇರಿ ಫೆ.19 NEWS DESK : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪ್ರಾಪ್ತ ಯುವತಿಯ ಮೇಲೆ ಅತ್ಯಾಚಾರವೆಸಗಿ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಸಿಐಡಿ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ದಲಿತರಿಗೆ ರಕ್ಷಣೆ ನೀಡುವಲ್ಲಿ ವಿಫಲರಾಗಿರುವ ರಾಜ್ಯ ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಕರ್ನಾಟಕ ಅಹಿಂದ ಸಂಘಟನೆಗಳ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳು ಪೊನ್ನಂಪೇಟೆಯಲ್ಲಿ ಪ್ರತಿಭಟನೆ ನಡೆಸಿದವು. ಗೃಹ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿ ನ್ಯಾಯಕ್ಕಾಗಿ ಒತ್ತಾಯಿಸಿದ ಪ್ರತಿಭಟನಾಕಾರರು ಪೊನ್ನಂಪೇಟೆ ಬಸ್ ನಿಲ್ದಾಣದಿಂದ ತಾಲ್ಲೂಕು ತಹಶೀಲ್ದಾರ್ ಕಚೇರಿವರೆಗೆ ಮೆರವಣಿಗೆ ನಡೆಸಿದರು. ತಹಶೀಲ್ದಾರ್ ಕಚೇರಿ ಎದುರು ಮಾತನಾಡಿದ ಅಹಿಂದ ಸಂಘಟನೆಗಳ ಒಕ್ಕೂಟದ ಮುಖಂಡ ಹರಿರಾಮ್ ಯುವತಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರಾಥಮಿಕ ಹಂತದಲ್ಲಿ ಪೊಲೀಸರು ಸೂಕ್ತ ರೀತಿಯಲ್ಲಿ ಸ್ಪಂದನೆ ನೀಡಿಲ್ಲ. ಆದ್ದರಿಂದ ಕರ್ತವ್ಯ ಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ಕಾಂಗ್ರೆಸ್…

Read More

ಮಡಿಕೇರಿ ಫೆ.19 NEWS DESK : ವಾರ್ತಾ ಕಮ್ಯುನಿಕೇಶನ್ಸ್ ಪ್ರಸ್ತುತ ಪಡಿಸುವ ಪತ್ರಕರ್ತ ಅನಿಲ್ ಹೆಚ್‌.ಟಿ ಅವರು ಬರೆದಿರುವ “ಅಯೋಧ್ಯೆ” ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಫೆಬ್ರವರಿ 23ರಂದು ಸಂಜೆ 6 ಗಂಟೆಗೆ ಮಡಿಕೇರಿಯ ರೆಡ್ ಬ್ರಿಕ್ಸ್ ಸತ್ಕಾರ ಸಭಾಂಗಣದಲ್ಲಿ ನಡೆಯಲಿದೆ. ಹಿರಿಯ ಸಾಹಿತಿ ಗಜಾನನ ಶರ್ಮ ಅವರು ಪುಸ್ತಕವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಕ್ತಿ ದಿನ ಪತ್ರಿಕೆಯ ಸಂಪಾದಕ ಜಿ.ಚಿದ್ವಿಲಾಸ್ ಪಾಲ್ಗೊಳ್ಳಲಿದ್ದಾರೆ.  ಸರ್ವರೂ ಪಾಲ್ಗೊಳ್ಳುವಂತೆ ವಾರ್ತಾ ಕಮ್ಯುನಿಕೇಶನ್ ನ ಪ್ರಮುಖರಾದ ರೀನಾ ಅನಿಲ್ ಹೆಚ್. ಮನವಿ ಮಾಡಿದ್ದಾರೆ.

Read More

ಮಡಿಕೇರಿ ಫೆ.19 NEWS DESK : ರಾಮನಗರದಲ್ಲಿ ವಕೀಲರ ವಿರುದ್ಧ ಪೊಲೀಸರು ವಿನಾಕಾರಣ ಮೊಕದ್ದಮೆ ದಾಖಲಿಸಿದ್ದು, ಇದನ್ನು ತೀವ್ರವಾಗಿ ಖಂಡಿಸುವುದಾಗಿ ಮಡಿಕೇರಿ ವಕೀಲರ ಸಂಘ ತಿಳಿಸಿದೆ. ಕ್ಷುಲ್ಲಕ ವಿಚಾರಕ್ಕೆ ನಡೆದ ಘಟನೆಗೆ ಸಂಬಂಧಿಸಿದಂತೆ 40 ವಕೀಲರ ಮೇಲೆ ರಾಮನಗರ ಪೊಲೀಸರು ಮೊಕದ್ದಮೆ ದಾಖಲಿಸಿದ್ದಾರೆ. ಪೊಲೀಸರ ಈ ಕ್ರಮವನ್ನು ರಾಜ್ಯವ್ಯಾಪಿ ವಕೀಲರು ಖಂಡಿಸಿದ್ದಾರೆ. ರಾಮನಗರ ನ್ಯಾಯಾಲಯದ ಕಲಾಪಗಳನ್ನು ಅಲ್ಲಿನ ವಕೀಲರು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ. ರಾಮನಗರದ ವಕೀಲ ಸಮುದಾಯಕ್ಕೆ ಬೆಂಬಲ ವ್ಯಕ್ತಪಡಿಸಿ, ಪೊಲೀಸರ ನಿಲುವು ಖಂಡಿಸಿ ಮಡಿಕೇರಿ ವಕೀಲರ ಸಂಘ ನಿರ್ಣಯ ಕೈಗೊಂಡಿದೆ ಎಂದು ತಿಳಿಸಿರುವ ಮಡಿಕೇರಿ ವಕೀಲರ ಸಂಘದ ಉಪಾಧ್ಯಕ್ಷ ಎಂ.ಪಿ.ನಾಗರಾಜ್, ವಕೀಲರ ವಿರುದ್ಧದ ಮೊಕದ್ದಮೆಯನ್ನು ತಕ್ಷಣ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.

Read More

ಮಡಿಕೇರಿ ಫೆ.19 NEWS DESK : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ಫೆ.26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯಲಿದ್ದು, ಉದ್ಯೋಗಾಕಾಂಕ್ಷಿಗಳು ಹೆಸರು ನೋಂದಣಿಗೆ ಶ್ರಮವಹಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಸಲಹೆ ಮಾಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಅವಕಾಶ’ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಮಟ್ಟದ ಯುವ ಸಮೃದ್ಧಿ ಸಮ್ಮೇಳನ, ಬೃಹತ್ ಉದ್ಯೋಗ ಮೇಳ ಸಂಬಂಧಿಸಿದಂತೆ ಶಾಲಾ ಕಾಲೇಜುಗಳು ಸೇರಿದಂತೆ ಎಲ್ಲೆಡೆ ಮಾಹಿತಿ ನೀಡುವಂತಾಗಬೇಕು ಎಂದು ಸೂಚಿಸಿದರು. ಬೃಹತ್ ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತಾಗಲು ಜಿಲ್ಲೆಯ ಎಲ್ಲಾ ವಿದ್ಯಾಸಂಸ್ಥೆಗಳಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಸೇರಿದಂತೆ ಎಲ್ಲಾ ವಿದ್ಯಾರ್ಹತೆ ಹೊಂದಿರುವವರ ಜೊತೆ ಸಮಾಲೋಚನೆ ಮತ್ತು ಪೂರ್ವ ಸಂದರ್ಶನ ಏರ್ಪಡಿಸುವಂತೆ…

Read More

ಕಡಂಗ ಫೆ.19 NEWS DESK : ಎಸ್.ಕೆ.ಎಸ್.ಎಸ್.ಎಫ್ ಕಡಂಗ ಶಾಖೆ ವತಿಯಿಂದ ಕಡಂಗದಲ್ಲಿ ಎಸ್.ಕೆ.ಎಸ್.ಎಸ್.ಎಫ್ ಸ್ಥಾಪಕ ದಿನವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಸಮಸ್ತ ಕೇಂದ್ರ ಮುಶಾವರ ಸದಸ್ಯ ಶೈಖುನಾ ಅಬ್ದುಲ್ಲಾ ಫೈಝಿ ಮಾಡಿದರು. ಕೊಡಗು ಜಿಲ್ಲಾ ಸಮಿತಿ ನೂತನ ಅಧ್ಯಕ್ಷ ಸುಹೈಬ್ ಫೈಝಿ ಸಂದೇಶವನ್ನು ನೀಡಿದರು. ಕಾರ್ಯಕ್ರಮದಲ್ಲಿ ಎಂ.ಜೆ.ಎಂ ಕಡಂಗ ಉಪಾಧ್ಯಾಕ್ಷ ಸಿ.ಎ.ಸಲಾಂ, ಎಸ್.ಕೆ.ಎಸ್.ಎಸ್.ಎಫ್ ಕಡಂಗ ಶಾಖೆ ಅಧ್ಯಕ್ಷ ಸಿ.ಇ.ಇಸ್ಹಾಕ್ , ಕಾರ್ಯದರ್ಶಿ ಇಕ್ಬಾಲ್, ಸದಸ್ಯರಾದ ಶಮೀರ್, ಶಿಹಾಬ್ ಹಾಗೂ ಎಂ.ಯು.ಎಂ ಮುಅಲ್ಲಿಂ ಹನೀಫ್ ಮುಸ್ಲಿಯಾರ್ ಹಾಗೂ ಸಮದ್ ಫೈಝಿ ಮತ್ತು ವಿದ್ಯಾರ್ಥಿಗಳು  ಹಾಜರಿದ್ದರು. ವರದಿ : ನೌಫಲ್ ಕಡಂಗ   

Read More

ಬೆಂಗಳೂರು ಫೆ.19 NEWS DESK :  ಅನಾರೋಗ್ಯದಿಂದ ಅಕಾಲಿಕ ಮರಣಕ್ಕೆ ತುತ್ತಾದ ಈ ಬಡತಾಯಿಯ ಮಗನ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ‘ಗೃಹಲಕ್ಷ್ಮಿ ಯೋಜನೆ ದುಡ್ಡು ನಿನಗೆ ಬರುತ್ತೆ, ನಾನಿಲ್ಲ ಎಂದು ಚಿಂತಿಸಬೇಡ’ ಎಂದು ಮಗನ ಮಾತನ್ನು ನೆನಪು ಮಾಡಿಕೊಂಡು ಆತನ ಶವದೆದುರು ತಾಯಿ ರೋದಿಸುತ್ತಿರುವುದನ್ನು ನೋಡಿ ಎದೆ ಭಾರವಾಯಿತು. ಯಾವ ತಾಯಿಗೂ ಎದೆಯೆತ್ತರಕ್ಕೆ ಬೆಳೆದ ಮಗನ ಚಿತೆಗೆ ಅಗ್ನಿಸ್ಪರ್ಶ ಮಾಡುವ ಸ್ಥಿತಿ ಬಾರದಿರಲಿ. ನಾವು ಗೃಹಲಕ್ಷ್ಮಿ ಯೋಜನೆ ಘೋಷಣೆ ಮಾಡಿದ ದಿನದಿಂದ ಇಂದಿನ ವರೆಗೆ ಕೆಲವರಿಂದ ಅಪಪ್ರಚಾರ, ಟೀಕೆ, ವ್ಯಂಗ್ಯಗಳು ವ್ಯಕ್ತವಾಗುತ್ತಲೇ ಇದೆ, ಇದಾವುದಕ್ಕೂ ನಾನು ತಲೆಕೆಡಿಕೊಂಡಿಲ್ಲ. ಕಾರಣ ಇಂತಹ ಲಕ್ಷಾಂತರ ಬಡತಾಯಂದಿರಿಗೆ ನಮ್ಮ ಯೋಜನೆ ಮೂರು ಹೊತ್ತು ನೆಮ್ಮದಿಯ ಅನ್ನ ನೀಡಿ ಬದುಕಿಗೆ ಆಧಾರವಾಗಿದೆ. ಬಡತನ, ಹಸಿವು, ಅನಾಥಭಾವ ಅನುಭವಿಸಿದವರಿಗಷ್ಟೇ ಅದರ ನೋವು, ಹತಾಶೆ ಅರಿವಾಗಲು ಸಾಧ್ಯ. ಈ ತಾಯಿಯ ಜೊತೆ ನಮ್ಮ ಸರ್ಕಾರ ಇದೆ, ಮಗನ ಸಾವಿನ ದುಃಖದಿಂದ ಆದಷ್ಟು ಬೇಗ ಹೊರಬರಲಿ ಎಂದು ಹಾರೈಸುತ್ತೇನೆ. (- ಮುಖ್ಯಮಂತ್ರಿ…

Read More

ಮಡಿಕೇರಿ ಫೆ.19 NEWS DESK : ಕೊಡವ ಕುಟುಂಬ ತಂಡಗಳ ನಡುವೆ ನಡೆಯಲಿರುವ 24ನೇ ವರ್ಷದ ಹಾಕಿ ಪಂದ್ಯಾವಳಿ ‘ಕುಂಡ್ಯೋಳಂಡ ಹಾಕಿ ನಮ್ಮೆ-2024’ ಕ್ಕಾಗಿ ಪೂರ್ವಭಾವಿ ತಯಾರಿ ನಡೆಸಲು ಇಂದು ಕೊಡವ ಹಾಕಿ ಅಕಾಡೆಮಿಯ ಪದಾಧಿಕಾರಿಗಳು ಹಾಗೂ ಕುಂಡ್ಯೋಳಂಡ ಕುಟುಂಬದ ಪ್ರಮುಖರು ನಾಪೋಕ್ಲುವಿನ ಮೈದಾನವನ್ನು ಪರಿಶೀಲಿಸಿದರು. ಈ ಸಂದರ್ಭ ಮಾತನಾಡಿದ ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಬೋಪಣ್ಣ ಅವರು ಹಾಕಿ ನಮ್ಮೆಗೆ ಹಾಕಿ ಅಕಾಡೆಮಿ ಸಂಪೂರ್ಣ ಸಹಕಾರ ನೀಡಲಿದೆ ಎಂದರು. ಅಕಾಡೆಮಿ ಉಪಾಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ, ಜಂಟಿ ಕಾರ್ಯದರ್ಶಿ ಚೆಯ್ಯಂಡ ಸತ್ಯ, ನಿರ್ದೇಶಕರುಗಳಾದ ಕುಲ್ಲೇಟಿರ ಬೇಬ, ಕಂಬೀರಣ್ಣ ರಾಖಿ ಪೂವಣ್ಣ, ಕುಂಡ್ಯೋಳಂಡ ಕುಟುಂಬಸ್ಥರಾದ ಕಾಶಿ ತಮ್ಮಯ್ಯ, ಬಿಪಿನ್ ಬೆಳ್ಯಪ್ಪ ಮತ್ತಿತರ ಪ್ರಮುಖರು ಹಾಜರಿದ್ದರು.

Read More

ವಿರಾಜಪೇಟೆ ಫೆ.19 NEWS DESK :  ತಾಲೂಕು ಆಡಳಿತ, ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪುರಸಭೆಯ ಸಹಯೋಗದೊಂದಿಗೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನದ ಕುರಿತು ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಅಕ್ಷರ ಸಂತೋಷ್ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾಳೆ. ಸಂವಿಧಾನ ಜಾತದ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು. ವಿದ್ಯಾರ್ಥಿಯ ಸಾಧನೆಗೆ ಕಾವೇರಿ ಶಾಲೆಯ ಅಧ್ಯಕ್ಷ ಬಿ.ಎಸ್.ಸುದೇಶ್, ಕಾರ್ಯದರ್ಶಿ ಪಿ.ಎನ್.ವಿನೋದ್, ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಾಥಮಿಕ ವಿಭಾಗದ ಸಂಯೋಜಕಿ ಬಿ.ಡಿ.ಭಾಗ್ಯ ಹಾಜರಿದ್ದರು.

Read More

ಮಡಿಕೇರಿ ಫೆ.19 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಂತ ಕವಿ ಸರ್ವಜ್ಞ ಜಯಂತಿ ಮತ್ತು ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮವು ಫೆಬ್ರವರಿ, 20 ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಫೆ.19 NEWS DESK :  ಜಿಲ್ಲಾಡಳಿತದ ವತಿಯಿಂದ ಕೊಡಗು ಜಿಲ್ಲೆಯಲ್ಲಿ ನಡೆಯುತ್ತಿರುವ ‘ಸಂವಿಧಾನ ಜಾಗೃತಿ ಜಾಥಾ’ ಫೆ.21 ರಂದು ಮಡಿಕೇರಿಗೆ ಆಗಮಿಸಲಿದೆ. ಜಾಥಾದಲ್ಲಿ ಭಾಗಿಯಾಗಿರುವ ಸ್ತಬ್ದಚಿತ್ರಕ್ಕೆ ಸ್ವಾಗತ ಕೋರಿ, ಕಾವೇರಿ ಕಲಾಕ್ಷೇತ್ರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತ ವಿಜಯ್ ತಿಳಿಸಿದ್ದಾರೆ.

Read More