ಲೇಖಕ: admin

ಮಡಿಕೇರಿ ಜ.13 : “ಬೇರ್” (ದಿ ರೂಟ್) ಕೊಡವ ಸಿನಿಮಾ ಬಾಂಗ್ಲಾ ದೇಶದ ಢಾಕಾದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವರ್ಲ್ಡ್ ಪ್ರೀಮಿಯರ್ ನಲ್ಲಿ ಮೊದಲ ಬಾರಿಗೆ ಪ್ರದರ್ಶನಗೊಳ್ಳುತ್ತಿದೆ. ಇದು ಕೊಡವ ಸಿನಿಮಾ ರಂಗದಲ್ಲಿ ಬಹುದೊಡ್ಡ ಸಾಧನೆಯಾಗಿದೆ ಎಂದು ಚಿತ್ರತಂಡ ಹರ್ಷವ್ಯಕ್ತಪಡಿಸಿದೆ. ಇದಕ್ಕೂ ಮೊದಲು ನಡೆದ ಹಲವು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ವಿವಿಧ ವಿಭಾಗಗಳಲ್ಲಿ ಆಯ್ಕೆಗೊಂಡು ಪ್ರಶಸ್ತಿಗಳನ್ನು ಪಡೆದ ಕೊಡವ ಮತ್ತು ಕನ್ನಡ ಸಿನಿಮಾಗಳನ್ನು ನಿರ್ದೇಶಿಸಿರುವ ಖ್ಯಾತ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರ ನಿರ್ಮಾಣ, ನಿರ್ದೇಶನದಲ್ಲಿ “ಬೇರ್” ಕೊಡವ ಸಿನಿಮಾ ಮೂಡಿ ಬಂದಿದೆ. ಬಾಂಗ್ಲಾದೇಶದಲ್ಲಿ ಫೆಬ್ರವರಿ ತಿಂಗಳಿನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವರ್ಲ್ಡ್ ಪ್ರೀಮಿಯರ್ ಪ್ರದರ್ಶನಕ್ಕೆ “ಬೇರ್” ಆಯ್ಕೆಯಾಗುವ ಮೂಲಕ ಕೊಡವ ಸಿನಿಮಾವೊಂದು ಮೊದಲ ಬಾರಿಗೆ ಅವಕಾಶ ಗಿಟ್ಟಿಸಿಕೊಂಡ ಹೆಮ್ಮೆಗೆ ಪಾತ್ರವಾಗಿದೆ. ಕೂರ್ಗ್ ಕಾಫಿ ವುಡ್ ಮೂವೀಸ್ ಬ್ಯಾನರ್ ಅಡಿಯಲ್ಲಿ ತಯಾರಾದ ಈ ಚಿತ್ರ ಪ್ರಪ್ರಥಮ ಇಂಟಲೆಕ್ಚುವಲ್ ಕೊಡವ ಸಿನಿಮಾವಾಗಿದೆ. ಕೆಲವೇ ಪಾತ್ರದಾರಿಗಳ ನಟನೆ ಇದ್ದು, ಯುವ ಪೀಳಿಗೆಗೆ ಸಂದೇಶವನ್ನು ನೀಡುವ ವಿಭಿನ್ನ…

Read More

ಮಡಿಕೇರಿ ಜ.13 :  ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ವಿರಾಜಪೇಟೆ ನಗರದಲ್ಲಿ “ಮಾದಕ ವಸ್ತು-ದ್ರವ್ಯಗಳ ನಿರ್ಮೂಲನೆ’ ಕುರಿತು ಜನಜಾಗೃತಿ ಜಾಥಾ ನಡೆಯಿತು. ಜಾಥಾಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿ, ಯುವ ಜನತೆ ದುಶ್ಚಟಗಳಿಂದ ದೂರ ಇದ್ದು, ಸಮಾಜಕ್ಕೆ ಉತ್ತಮ ಪ್ರಜೆಯಾಗಬೇಕು ಎಂದರು. ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸೇರಿದಂತೆ,   ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಯವರು, ವಿರಾಜಪೇಟೆಯ ಶಾಲಾ-ಕಾಲೇಜು ವಿದ್ಯಾರ್ಥಿಗಳು, ರೋಟರಿ ಕ್ಲಬ್, ಡೆಂಟಲ್ ಕಾಲೇಜು, ಆಟೋ ಚಾಲಕರು ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಪ್ರಮುಖರು ಮತ್ತು ಸಾರ್ವಜನಿಕರು ಜಾಥಾದಲ್ಲಿ ಪಾಲ್ಗೊಂಡು ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ  ಜಾಗೃತಿ ಮೂಡಿಸಿದರು.

Read More

ಮಡಿಕೇರಿ ಜ.13 : ಶುಕ್ರವಾರ 12-01-2024 ರಂದು  ಅಸ್ತಮಿಸಿದ ಶನಿವಾರ ರಾತ್ರಿ ರಜಬ್ ತಿಂಗಳ ಪ್ರಥಮ ಚಂದ್ರದರ್ಶನವಾಗಿರುತ್ತದೆ ಎಂದು  ಜಿಲ್ಲಾ ಖಾಝಿಗಳಾದ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್  ತೀರ್ಮಾನಿಸಿದ್ದಾರೆ ಇದೇ ಬರುವ ದಿನಾಂಕ 07-02-2024 ಬುಧವಾರ ಅಸ್ತಮಿಸಿದ ಗುರುವಾರ ರಾತ್ರಿ ರಜಬ್ – 27 ಇಸ್ರಾಹ್ – ಮಿಹ್ರಾಜ್ ರಾತ್ರಿಯಾಗಿರುತ್ತದೆ.

Read More

ಮಡಿಕೇರಿ ಜ.13 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.25 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ. ಮುಖ್ಯಮಂತ್ರಿಗಳಾದ ಬಳಿಕ ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಜ.25 ಗುರುವಾರದಂದು ಸಿಎಂ ಮಡಿಕೇರಿ ಮತ್ತು ವಿರಾಜಪೇಟೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Read More

ಕುಶಾಲನಗರ, ಜ.13 : ವಚನಕಾರರ ಪರಂಪರೆಯ ಮರೆತು ಹೋದ ಮೌಲ್ಯಗಳನ್ನು ಪುನಃ ಸ್ಮರಣೆ ಮಾಡುವ ಕೆಲಸ ವಚನಗಳ ಪಠನ ಹಾಗೂ ಮನನದಿಂದ ಆಗಬೇಕೆಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ್ ಸಂಗಪ್ಪ ಆಲೂರ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ವತಿಯಿಂದ ಬಸವನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶುಕ್ರವಾರ ಜಿಲ್ಲೆಯ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ” ವಚನ ಗಾಯನ ಸ್ಪರ್ಧಾ ಕಾರ್ಯಕ್ರಮ” ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿರುವ ವಚನ ಸಾಹಿತ್ಯ ವಿಶ್ವದ ಮೇರು ಸಾಹಿತ್ಯವಾಗಿದೆ. ಹನ್ನೆರಡನೇ ಶತಮಾನದಲ್ಲಿ ಸಮಾಜದಲ್ಲಿದ್ದ ಕಂದಾಚಾರ ಹಾಗೂ ಮೂಢನಂಬಿಕೆಗಳ ವಿರುದ್ದ ಸಮರವನ್ನು ಸಾರಿ ಕ್ರಾಂತಿ ಉಂಟು ಮಾಡಿದ ಶರಣರ ವಚನಗಳು ಆಧ್ಯಾತ್ಮದ ನೆಲೆಯೊಳಗೆ ಬದುಕಿನ ಸಾರ ತತ್ಬವನ್ನು ಸಾರಿ ಜಟಿಲವಾಗಿದ್ದ ಮನುಷ್ಯನ ಬದುಕನ್ನು ಸರಳಗೊಳಿಸಿದ ದೀವಿಗೆಗಳು ಎಂದು ಕುಲಪತಿಗಳು ಆಶಿಸಿದರು. ಹನ್ನೆರಡನೇ ಶತಮಾನದ ಆಯ್ದಕ್ಕಿ ಲಕ್ಕಮ್ಮ ಹಾಗೂ ಆಯ್ದಕ್ಕಿ ಮಾರಯ್ಯನ ಆದರ್ಶಗಳು ಇಂದಿನ ಲಂಚಕೋರರು ಹಾಗೂ ಭ್ರಷ್ಟರಿಗೆ…

Read More

ಮಡಿಕೇರಿ ಜ.13 : ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಜ.15 ರಂದು 34ನೇ ವರ್ಷದ ಮಕರ ಸಂಕ್ರಾಂತಿ ಮಹೋತ್ಸವ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀ ಮುತ್ತಪ್ಪ ದೇವಾಲಯ ಸಮಿತಿಯ ಅಧ್ಯಕ್ಷ ಟಿ.ಕೆ.ಸುಧೀರ್, ಉತ್ಸವದ ಪ್ರಯುಕ್ತ ಜ.14 ರಂದು ಬೆಳಗ್ಗೆ 8 ಗಂಟೆಗೆ ಗಣಪತಿ ಹೋಮ, ಪಂಚಾಮೃತ ಅಭಿಷೇಕ, ತುಪ್ಪಾಭಿಷೇಕ ಸೇರಿದಂತೆ ವಿವಿಧ ಸೇವೆಗಳು ನಡೆಯಲಿದೆ ಎಂದು ತಿಳಿಸಿದರು. ಮಕರ ಸಂಕ್ರಾಂತಿ ಮಹೋತ್ಸವದ ದಿನವಾದ ಜ.15 ರಂದು ಬೆ.6.30 ಕ್ಕೆ ನಿರ್ಮಾಲ್ಯ ವಿಸರ್ಜನೆ, ಉಷಾ ಪೂಜೆ, 7 ಕ್ಕೆ ಶ್ರೀ ಮುತ್ತಪ್ಪ ಮತ್ತು ಶ್ರೀ ಸುಬ್ರಹ್ಮಣ್ಯ ದೇವರ ಪೂಜೆ, 7.30 ರಿಂದ ಪಂಚಾಮೃತ ಅಭಿಷೇಕ, ತುಪ್ಪಾಭಿಷೇಕ, ಕ್ಷೀರಾಭಿಷೇಕ, ಭಸ್ಮಾಭಿಷೇಕ, ಎಳನೀರು ಅಭಿಷೇಕ, ಪುಷ್ಪಾರ್ಚನೆ, 8.30ಕ್ಕೆ ಶ್ರೀ ಕುಟ್ಟಿಚಾತನ್ ದೇವರ ವೆಳ್ಳಾಟಂ, 9 ಕ್ಕೆ ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ, ಬೆ.10 ಕ್ಕೆ ಶ್ರೀ ಗುಳಿಗ ದೇವರ ವೆಳ್ಳಾಟಂ, 10.30 ಕ್ಕೆ ಶ್ರೀ ಅಯ್ಯಪ್ಪನ ಅಲಂಕಾರ ಪೂಜೆ,…

Read More

ವಿರಾಜಪೇಟೆ ಜ.13 : ಕರ್ನಾಟಕ ಸ್ಪೋರ್ಟ್ಸ್ ಡ್ಯಾನ್ಸ್ ಅಸೋಸಿಯೇಷನ್ ವತಿಯಿಂದ ಮಂಡ್ಯದ ಡಾ. ಬಿ.ಆರ್. ಅಂಬೇಡ್ಕರ್ ಭವನದ ಸಭಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಸ್ಪೋಟ್ರ್ಸ್ ಡಾನ್ಸ್ ಚಾಂಪಿನ ಶಿಪ್ ಸ್ಪರ್ಧೆಯಲ್ಲಿ ಮಗ್ಗುಲದ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಯು.ಕೆ.ಜಿ ವಿದ್ಯಾರ್ಥಿ ವಿಹಾ ಮುತ್ತಮ್ಮ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಫ್ರೀ ಸ್ಟೈಲ್ ನೃತ್ಯದಲ್ಲಿ ಕಂಚಿನ ಪದಕ ಮತ್ತು ಸಾಮೂಹಿಕ ನೃತ್ಯದಲ್ಲಿ ಚಿನ್ನದ ಪದಕವನ್ನು ಗೆದ್ದು, ಜಮ್ಮುವಿನಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿರಾಜಪೇಟೆ ನಿವಾಸಿ ಐತಿಚಂಡ ರಕ್ಷಿತ ಅವರ ಪುತ್ರಿಯಾಗಿರುವ ವಿಹಾ ಮುತ್ತಮ್ಮ, ವಿರಾಜಪೇಟೆಯ ವಿಷ್ಣು ಅವರ ಟೀಮ್ ಇಂಟೊಪೀಸ್ ನೃತ್ಯ ಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದಾರೆ.

Read More

ವಿರಾಜಪೇಟೆ ಜ.13 : ಸ್ವಾಮಿ ವಿವೇಕಾನಂದರು ಯುವ ಜನರಿಗೆ ಮಾದರಿಗಳಾಗಿದ್ದು, ಯುವ ಜನಾಂಗದ ಕನಸನ್ನು ಕಂಡ ಮಹಾನ್ ಚೇತನರಾಗಿದ್ದಾರೆ ಎಂದು ಸೆಂಟ್ ಆನ್ಸ್ ಪದವಿ ಕಾಲೇಜು ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಅಭಿಪ್ರಾಯಪಟ್ಟರು. ಸೆಂಟ್ ಆನ್ಸ್ ಪದವಿ ಕಾಲೇಜಿನ ಸ್ನಾತಕೋತ್ತರ ಎಂ.ಕಾಂ. ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಸಿ ಅವರು ಮಾತನಾಡಿದರು. ಸ್ವಾಮಿ ವಿವೇಕಾನಂದರ ತತ್ವಗಳು ಇಂದಿಗೂ ಪ್ರಸ್ತುತವಾಗಿದ್ದು, ವಿಶೇಷವಾಗಿ ಆದ್ಯಾತ್ಮಿಕ ಕ್ಷೇತ್ರಕ್ಕೆ ತನ್ನದೆಯಾದ ಕೊಡುಗೆಯನ್ನು ನೀಡಿದ್ದಾರೆ. ಶಿಸ್ತು, ಏಕಾಗ್ರತೆ, ಧ್ಯಾನ, ತಾಳ್ಮೆಗಳೆಂಬ ಅಂಶಗಳನ್ನು ಇಡೀ ವಿಶ್ವಕ್ಕೆ ಸಾರಿದ್ದಾರೆ ಎಂದರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಅರ್ಜುನ್ ಮಾತನಾಡಿ, ಸ್ವಾಮಿ ವಿವೇಕಾನಂದರು ಭಾರತೀಯ ಸಮಾಜಕ್ಕೆ ತನ್ನದೆಯಾದ ಕೊಡುಗೆಯನ್ನು ನೀಡಿದ್ದು, ನವ ಸಮಾಜದ ನಿರ್ಮಾತೃರಾಗಿದ್ದಾರೆ. ಅವರು ಸಾಮಾಜಿಕ ಮತ್ತು ಆಧ್ಯಾತ್ಮಿಕ ಚಿಂತಕರಾಗಿದ್ದು, ಯುವಕರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸವನ್ನು ಮಾಡಿದ್ದಾರೆ ಎಂದು ನುಡಿದರು. ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ, ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು. ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಎಂ.ಕಾಂ. ವಿದ್ಯಾರ್ಥಿಗಳು…

Read More

ಮಡಿಕೇರಿ ಜ.13 : “ದ್ವೇಷ ಬಿಟ್ಟು ದೇಶ ಕಟ್ಟು” ಪರಿಕಲ್ಪನೆಯೊಂದಿಗೆ ಮಡಿಕೇರಿ ಮುಸ್ಲಿಂ ಒಕ್ಕೂಟ ರಚನೆಗೊಂಡಿದೆ. ಒಕ್ಕೂಟದ ಸಂಚಾಲಕರಾಗಿ ಲಿಯಾಖತ್ ಆಲಿ ಆಯ್ಕೆಯಾಗಿದ್ದಾರೆ. ಒಕ್ಕೂಟ ರಚನೆಯಾದ ಕುರಿತು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಲಿಯಾಖತ್ ಆಲಿ, ಭಾವೈಕ್ಯತೆಯ ಬೀಡು ಕೊಡಗು ಜಿಲ್ಲೆಯಲ್ಲಿ ಎಲ್ಲರೂ ಸೌಹಾರ್ಧತೆಯಿಂದ ಜೀವನ ಸಾಗಿಸಬೇಕು ಎನ್ನುವುದು ಒಕ್ಕೂಟದ ಉದ್ದೇಶ ಎಂದರು. ಅಲ್ಪಸಂಖ್ಯಾತ ಸಮುದಾಯ ಶೈಕ್ಷಣಿಕವಾಗಿ ಹಿಂದುಳಿದಿದೆ, ಆದ್ದರಿಂದ ಒಕ್ಕೂಟ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಲಿದೆ. ರಾಜಕೀಯ ರಹಿತವಾದ ಈ ಸಂಘಟನೆ ವಿಚಾರವಂತಿಕೆಯಿಂದ ಕಾರ್ಯನಿರ್ವಹಿಸಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಮುಸ್ಲಿಂ ಮಹಿಳೆಯರ ಬಗ್ಗೆ ನೀಡಿರುವ ಹೇಳಿಕೆ ನಮಗೆ ನೋವುಂಟು ಮಾಡಿದೆ. ಆದರೆ ಶಾಂತಿಯುತ ಬದುಕಿಗೆ ಪೂರಕವಾಗಿ ನಡೆದುಕೊಳ್ಳುವುದೇ ಒಕ್ಕೂಟದ ಗುರಿಯಾಗಿದ್ದು, ಈ ರೀತಿಯ ಹೇಳಿಕೆಗಳಿಗೆ ಪ್ರತಿ ಹೇಳಿಕೆ ನೀಡುವುದು ನಮ್ಮ ಉದ್ದೇಶವಲ್ಲ ಎಂದು ಸ್ಪಷ್ಟಪಡಿಸಿದರು. ರಾಜಕೀಯ ರಹಿತವಾದ ಈ ಸಂಘಟನೆ ಅಲ್ಪಸಂಖ್ಯಾತರು ಮಾತ್ರವಲ್ಲದೆ ಎಲ್ಲಾ ಅಸಹಾಯಕರಿಗೂ ಸಹಾಯ ಮಾಡಲಿದೆ. ಶಿಕ್ಷಣ ಮತ್ತು ಸರ್ಕಾರದ ಸೌಲಭ್ಯಗಳ…

Read More

ನಾಪೋಕ್ಲು ಜ.13 : ಅಯೋಧ್ಯೆಯ ಶ್ರೀ ರಾಮಮಂದಿರದಲ್ಲಿ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಜ.22 ರಂದು ಕಕ್ಕುಂದ ಕಾಡು ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ದೀಪೋತ್ಸವ ನಡೆಯಲಿದೆ. ದೇವಾಲಯದಲ್ಲಿ ಮಧ್ಯಾಹ್ನ 1 ಗಂಟೆಗೆ ವಿಶೇಷ ಪೂಜೆ, ಸಂಜೆ 7.30ಕ್ಕೆ ಪೂಜೆ ಹಾಗೂ ದೀಪೋತ್ಸವ ಜರುಗಲಿದೆ ಮಧ್ಯಾಹ್ನ ವಿಶೇಷ ಪೂಜೆ ಹಾಗೂ ಸಾಯಂಕಾಲ ದೀಪೋತ್ಸವ ನಡೆಯಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಕೋರಿದೆ. ವರದಿ : ದುಗ್ಗಳ ಸದಾನಂದ. 

Read More