ಲೇಖಕ: admin

ಮಡಿಕೇರಿ ಫೆ.16 NEWS DESK : ಯುವತಿಯೊಬ್ಬಳನ್ನು ಅತ್ಯಾಚಾರ ಮಾಡಿದ ಆರೋಪದಡಿ ಅರಣ್ಯ ಇಲಾಖೆಯ ಚಾಲಕನೊಬ್ಬನನ್ನು ಕುಟ್ಟ ಪೊಲೀಸರು ಬಂಧಿಸಿದ್ದಾರೆ. ಕೆ.ಬಾಡಗ ಗ್ರಾಮದ ನಾಣಚ್ಚಿ ನಿವಾಸಿ ಶ್ರೀಕಾಂತ್ (31) ಬಂಧಿತ ಆರೋಪಿಯಾಗಿದ್ದಾನೆ. ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಬಾಡಗ ಗ್ರಾಮದ ತೋಟದ ಲೈನುಮನೆಯಲ್ಲಿ ವಾಸವಿರುವ ಪಂಜರಿ ಎರವರ ದಂಪತಿಯ 17 ವರ್ಷದ ಪುತ್ರಿ ಇದೇ ಫೆ.12 ರಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಳು. ಫೆ.2 ರಂದು ಶ್ರೀಕಾಂತ್ ಯುವತಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ ಪರಿಣಾಮ ಆಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನುವ ಆರೋಪದಡಿ ಕುಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಘಟನೆ ಸ್ಥಳಕ್ಕೆ ಕುಟ್ಟ ಪೊಲೀಸ್ ಠಾಣೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಕೃತ್ಯಕ್ಕೆ ಸಂಬಂಧಿಸಿದ ಮಾಹಿತಿ ಮತ್ತು ಸಾಕ್ಷ್ಯಾಧಾರಗಳನ್ನು ಕಲೆಹಾಕಿ ಆರೋಪಿಯನ್ನು ಪತ್ತೆ ಹಚ್ಚಲು ವಿಶೇಷ ತಂಡ ರಚಿಸಿದರು. ವಿರಾಜಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ಮೋಹನ್ ಕುಮಾರ್, ಕುಟ್ಟ ಪೊಲೀಸ್ ಠಾಣೆಯ ಪಿಎಸ್‌ಐ ಇರ್ಶಾದ್.ಸಿ ಹಾಗೂ ಸಿಬ್ಬಂದಿಗಳ…

Read More

ಮಡಿಕೇರಿ ಫೆ.16 NEWS DESK : ಭಾರತೀಯ ಜನತಾ ಪಾರ್ಟಿಯ ಕೊಡಗು ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾಗಿ ಸಿದ್ದಾಪುರದ ಇಂಜಿಲಗೆರೆ ಗ್ರಾಮದ ವಿನೋದ್ ಪೂಜಾರಿ ಹಾಗೂ ಶನಿವಾರಸಂತೆಯ ಎಸ್.ಎನ್.ರಘು ಅವರನ್ನು ಆಯ್ಕೆ ಮಾಡಿರುವುದಾಗಿ ಹಿಂದುಳಿದ ವರ್ಗಗಳ ಮೋರ್ಚಾದ ನೂತನ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ಅವರು ತಿಳಿಸಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷರ ಅನುಮೋದನೆಯ ಮೇರೆಗೆ ಪಕ್ಷ ಸಂಘಟನೆಯ ದೃಷ್ಟಿಯಿಂದ ಇವರಿಬ್ಬರನ್ನು ಪ್ರಧಾನ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ. ಜಿಲ್ಲೆಯಲ್ಲಿ ಹಿಂದುಳಿದ ವರ್ಗ ಬಿಜೆಪಿ ಪರವಾಗಿದ್ದು, ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಲಾಗುವುದೆಂದು ಅಪ್ರು ರವೀಂದ್ರ ಹೇಳಿದ್ದಾರೆ.

Read More

ಮಡಿಕೇರಿ ಫೆ.16 NEWS DESK :  ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸುವಂತೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್, ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು. ಸಂಯುಕ್ತ ಹೋರಾಟ-ಕರ್ನಾಟಕ ಹಾಗೂ ಕಾರ್ಮಿಕರ ಸಂಘಟನೆಗಳ ಜಂಟಿ ಸಮಿತಿಗಳ ಸಂಯುಕ್ತಶ್ರಯದಲ್ಲಿ ನಗರದ ತಾಲೂಕು ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು. ಸಿಐಟಿಯು ಸಹಕಾರ್ಯದರ್ಶಿ ಕೆ.ಎಸ್.ರಮೇಶ್ ಮಾತನಾಡಿ, ಎನ್‍ಡಿಎ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಹತ್ತು ವರ್ಷಗಳಾಗಿದ್ದು, ಚುನಾವಣೆಗೂ ಮೊದಲು ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ತಿಳಿಸಿದಂತೆ 2 ಕೋಟಿ ಉದ್ಯೋಗದ ಸೃಷ್ಟಿ, ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ, ಡಾ.ಸ್ವಾಮಿನಾಥನ್ ಅವರ ಶಿಫಾರಸ್ಸಿನಂತೆ ಬೆಂಬಲ ಬೆಲೆಯ ಕಾನೂನು ರಚಿಸುವುದಾಗಿ ತಿಳಿಸಿತ್ತು. ಆದರೆ ಆಹಾರ, ಆರೋಗ್ಯ ಮತ್ತು ಶಿಕ್ಷಣಕ್ಕಾಗಿ ಅನುದಾನಗಳನ್ನು ಹೆಚ್ಚಳ ಮಾಡುವ ಬದಲಿಗೆ ಅನುದಾನ ಕಡಿತ ಮಾಡಿ ಆರೋಗ್ಯ ಮತ್ತು ಶಿಕ್ಷಣವನ್ನು ಸಂಪೂರ್ಣವಾಗಿ ಖಾಸಗೀಕರಣ ಮಾಡಲಾಗಿದೆ ಎಂದು ಆರೋಪಿಸಿದರು.…

Read More

ಮಡಿಕೇರಿ ಫೆ.16 NEWS DESK : ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಅಂಗವಾಗಿ ಕೊಡಗು ಜಿಲ್ಲಾಡಳಿತವು ಕೊಡಗು ಜಿಲ್ಲೆಯ ಸಾರ್ವಜನಿಕರಿಗೆ ಮುಕ್ತ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೇ ಏರ್ಪಡಿಸಿದೆ. `ಭಾರತ ಸಂವಿಧಾನ ರಚನೆಯಲ್ಲಿ ಮಹಿಳೆಯರ ಪಾತ್ರ’ ನಮ್ಮ ಸಂವಿಧಾನ ನಮ್ಮ ಹೆಮ್ಮೆ (ಭಾರತ ಸಂವಿಧಾನದಲ್ಲಿ ಕಲ್ಪಿಸಿರುವ ಹಕ್ಕು ಮತ್ತು ಕರ್ತವ್ಯಗಳ ಹಿನ್ನಲೆಯಲ್ಲಿ); ಸ್ಪರ್ಧೇಯು ಕೊಡಗು ಜಿಲ್ಲೆಯ ಸಾರ್ವಜನಿಕರಿಗೆ ಮುಕ್ತವಾಗಿ ನಡೆಯಲಿದೆ. ಪ್ರಬಂಧ ಸ್ಪರ್ಧೇಗೆ ನೀಡಿರುವ ವಿಷಯಗಳಲ್ಲಿ ಯಾವುದಾದರು ಒಂದು ವಿಷಯವನ್ನು ಆಯ್ಕೆ ಮಾಡಿ ಸ್ಪುಟವಾದ ಕೈ ಬರಹಗಳಲ್ಲಿ `ಎ4′ ಅಳತೆಯ ಕಾಗದಗಳಲ್ಲಿ 1,500 ಪದಗಳಿಗೆ ಮೀರದಂತೆ ಬರೆದು ಕಳುಹಿಸಬೇಕು. ಚಿತ್ರಕಲಾ ಸ್ಪರ್ಧೇಗೆ ಸಂಬಂಧಿಸಿದಂತೆ ನೀಡಿರುವ ವಿಷಯಗಳ ಬಗ್ಗೆ `ಎ3′ ಅಳತೆಯ ಡ್ರಾಯಿಂಗ್ ಶಿಟ್‍ನಲ್ಲಿ ಚಿತ್ರ ರಚನೆ ಮಾಡಿ ಸಲ್ಲಿಸಬೇಕು. ಪ್ರಬಂಧ ಸ್ಪರ್ಧೆಯ ಪ್ರಬಂಧಗಳನ್ನು ಹಾಗೂ ಚಿತ್ರಕಲಾ ಸ್ಪರ್ಧೇಯ ಚಿತ್ರಗಳನ್ನು ಫೆ.25 ರಂದು ಸಂಜೆ 4.30 ರ ಒಳಗೆ `ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತ…

Read More

ಬೆಂಗಳೂರು ಫೆ.16 NEWS DESK : ವಿದ್ಯಾರ್ಥಿಗಳಿಗೆ ಟೆಲಿಸ್ಕೋಪ್, ಸೈನ್ಸ್ ಸಿಟಿ ಸ್ಥಾಪನೆ, ನೀರಿನ ಸದ್ಬಳಕೆ ಹಾಗೂ ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡುವಂತಹ ಮತ್ತು ಎಲ್ಲಾ ವರ್ಗದ ಜನರ ಆಶೋತ್ತರಗಳಿಗೆ ಧ್ವನಿಯಾಗುವಂತಹ ಕ್ರಾಂತಿಕಾರಿ ಆಯವ್ಯಯವನ್ನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ್ದಾರೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ. ಸರ್ವೋದಯ ದೃಷ್ಟಿ ಮತ್ತು ಸಮನ್ವಯ ದೃಷ್ಟಿ ಎಲ್ಲೆಡೆ ತಾಂಡವವಾಡಬೇಕು, ನಿಷ್ಪಕ್ಷಪಾತ ಮತ್ತು ನ್ಯಾಯಯತ ಸಮಾಜ ನಿರ್ಮಾಣಕ್ಕಾಗಿ ಸಂಪತ್ತಿನ ಮರುಹಂಚಿಕೆ ಮಾಡುವುದು ಇಂದಿನ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರೆಂಟಿ ಯೋಜನೆಗಳನ್ನ ಚಾಚೂ ತಪ್ಪದೆ ಅನುಷ್ಠಾನಗೊಳಿಸಿ ಇಡೀ ದೇಶದಲ್ಲಿ ಮಾದರಿ ರಾಜ್ಯವಾಗಿದ್ದೇವೆ. ಬಸವಣ್ಣವರ ಆಶಯದಂತೆ ನುಡಿದಂತೆ ನಡೆದ ಸರಕಾರ ನಮ್ಮದಾಗಿದೆ. ಈ ಬಾರಿ ಬಜೆಟ್ ನಲ್ಲಿ 52 ಸಾವಿರ ಕೋಟಿ ಗ್ಯಾರೆಂಟಿ ಯೋಜನೆಗಳಿಗೆ ಅನುದಾನ ನೀಡಿದ್ದು, ಇಡೀ ದೇಶದಲ್ಲೆ ನಮ್ಮ ಸರಕಾರ ಮಾದರಿಯಾಗಿ ಹೊರಹೊಮ್ಮಿದೆ. ನಮ್ಮದು ಮುಂದಿನ 10…

Read More

ಮಡಿಕೇರಿ ಫೆ.16 NEWS DESK :  ಕಾಯಕ ಶರಣರು, ಸವಿತಾ ಮಹರ್ಷಿಯವರು ಹಾಗೂ ಸಂತ ಸೇವಾಲಾಲ್ ಅವರು ಸಮಾಜದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ನಗರಸಭೆ ಅಧ್ಯಕ್ಷರಾದ ನೆರವಂಡ ಅನಿತಾ ಪೂವಯ್ಯ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ  ನಡೆದ ಕಾಯಕ ಶರಣರ, ಶ್ರೀ ಸಂತ ಸೇವಾಲಾಲ್ ಹಾಗೂ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತಾಡಿದರು. ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಲು ಶರಣರು ಹಾಗೂ ಪವಾಡ ಪುರುಷರು ಶ್ರಮಿಸಿದ್ದು, ಈ ಮಹನೀಯರ ವಿಚಾರಧಾರೆಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ನಗರಸಭೆ ಅಧ್ಯಕ್ಷರು ನುಡಿದರು. ಸವಿತಾ ಸಮಾಜವನ್ನು ರಾಜ್ಯದ ವಿವಿಧ ಭಾಗಗಳಲ್ಲಿ ಬೇರೆ ಬೇರೆ ಹೆಸರುಗಳಿಂದ ಕರೆಯುತ್ತಿದ್ದಾರೆ. ರಾಷ್ಟ್ರಕೂಟ, ವಿಜಯನಗರ ಚಾಲುಕ್ಯರ ಶಾಸನದಲ್ಲಿ ಸವಿತಾ ಸಮಾಜದವರ ಬಗ್ಗೆ ಉಲ್ಲೇಖವಿದೆ. ಅನೇಕ ಶಾಸನಗಳ ಮೇಲೆ ಸವಿತಾ ಸಮಾಜದ ಸಾದನಗಳಾದ ಕತ್ತಿ, ಕನ್ನಡಿ ಮತ್ತು ಕತ್ತರಿಗಳನ್ನು ಕೆತ್ತಲಾಗಿದೆ ಎಂದು ಅನಿತಾ…

Read More

ಮಡಿಕೇರಿ ಫೆ.16 NEWS DESK :  ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘದಿಂದ ಫೆ.25 ರಂದು ಗೋಣಿಕೊಪ್ಪಲಿನಲ್ಲಿ ಜಿಲ್ಲೆಯ ಮಾಜಿ ಸೈನಿಕರ ಮತ್ತು ವಿಧವೆಯರ ಕುಂದುಕೊರತೆಯ ಅಹವಾಲು ಆಲಿಸುವ ಸಭೆ ನಡೆಯಲಿದ್ದು, ಭೂಸೇನಾಧಿಕಾರಿ ಲೆಫ್ಟಿನೆಂಟ್ ಜನರಲ್ ಎ.ಕೆ.ಸಿಂಗ್ ಭೇಟಿ ನೀಡಲಿದ್ದಾರೆ ಎಂದು ಸಂಘದ ಅಧ್ಯಕ್ಷ ನಿವೃತ್ತ ಮೇಜರ್ ಬಿ.ಎ.ಕಾರ್ಯಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಣಿಕೊಪ್ಪಲಿನ ಕಾವೇರಿ ಕಾಲೇಜಿನಲ್ಲಿ ಸಭೆ ನಡೆಯಲಿದ್ದು, ಜಿಲ್ಲೆಯ ಮಾಜಿ ಸೈನಿಕರ ಮತ್ತು ವಿಧವೆಯರ ಕುಂದುಕೊರತೆಯ ಅಹವಾಲನ್ನು ಭೂಸೇನಾಧಿಕಾರಿ ಲೆಫ್ಟಿನೆಂಟ್ ಜನರಲ್ ಎ.ಕೆ ಸಿಂಗ್ ಆಗಮಿಸಲಿದ್ದು, ಕೊಡಗಿನ ಎಲ್ಲಾ ಮಾಜಿ ಸೈನಿಕರು, ವಿಧವೆಯರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿ ತಮ್ಮ ಅಹವಾಲನ್ನು ನೀಡಿ ಕುಂದುಕೊರತೆಗಳನ್ನು ಬಗೆಹರಿಸಿಕೊಳ್ಳಲು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಪೆನ್ಷನ್‍ಗೆ ಸಂಬಂಧಿಸಿದಂತೆ ಇರುವ ಸಮಸ್ಯೆಗಳು, ಇಸಿಹೆಚ್‍ಸಿ ಸೇರಿದಂತೆ ತಮ್ಮ ಸಮಸ್ಯೆಗಳನ್ನು ಹೇಳಲು ಅವಕಾಶವಿದೆ. ಇದರೊಂದಿಗೆ ಕಾನ್ಸರ್ ಜಾಗೃತಿ ಕಾರ್ಯಕ್ರಮ, ಕಣ್ಣು ಹಾಗೂ ದಂತ ಪರೀಕ್ಷೆ ಸೇರಿದಂತೆ ವಿವಿಧ ರೀತಿಯ ಆರೋಗ್ಯ ತಪಾಸಣಾ ಕಾರ್ಯಕ್ರಮ ನಡೆಯಲಿದೆ ಎಂದರು.…

Read More

ಮಡಿಕೇರಿ ಫೆ.16 NEWS DESK :  ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿನ ಮೂಲ ಸೌಲಭ್ಯಗಳಿಗಾಗಿ ಹೆಚ್ಚಿನ ಅನುದಾನ ಮೀಸಲಿಡುವುದು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಸಿ.ಇ.ಟಿ ಹಾಗೂ ನೀಟ್ ತರಬೇತಿ ನೀಡುವ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುವುದಾಗಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ಸಂಘಟನೆಯ ಕೊಡಗು ಜಿಲ್ಲಾ ಸಂಚಾಲಕ ಸುಭಾಷ್ ತಿಳಿಸಿದ್ದಾರೆ. ಆದರೆ ಪ್ರತಿ ವರ್ಷ ಬಜೆಟ್ ನ ಶೇ.30 ನ್ನು ಶಿಕ್ಷಣಕ್ಕೆ ನೀಡಬೇಕೆಂಬ ಜನಸಾಮಾನ್ಯರ, ವಿದ್ಯಾರ್ಥಿಗಳ ಒಕ್ಕೊರಲಿನ ಬೇಡಿಕೆಯನ್ನು ಕಡೆಗಣಿಸಿ ಶೇ.11.9 ಮಾತ್ರವೇ ನೀಡಿರುವುದು ನಿರಾಶಾದಾಯಕ ಬೆಳವಣಿಗೆ ಎಂದು ಟೀಕಿಸಿದ್ದಾರೆ. ಸರ್ಕಾರಿ ಶಾಲಾ, ಕಾಲೇಜುಗಳನ್ನು ಅಭಿವೃದ್ಧಿ ಪಡಿಸಬೇಕೆಂಬ ಮಾತು ಬಜೆಟ್ ನಲ್ಲಿ ಕೇಳಿ ಬಂದರೂ ಶುಲ್ಕ ಏರಿಕೆಯ ಮೇಲೆ ನಿರ್ಬಂಧ ಹೇರುವುದರ ಕುರಿತು ಯಾವ ಉಲ್ಲೇಖವೂ ಇಲ್ಲ. ಎನ್.ಇ.ಪಿ ಶಿಫಾರಸ್ಸಿನಂತೆ ರಾಜ್ಯದ ಹಲವು ಕಾಲೇಜುಗಳನ್ನು ಸ್ವಹಣಕಾಸು ಸಂಸ್ಥೆಗಳನ್ನಾಗಿ ಮಾಡಿ ಅವುಗಳಲ್ಲಿನ ಶುಲ್ಕ ಕಳೆದ 2 ವರ್ಷಗಳಲ್ಲಿ 10ಪಟ್ಟು ಹೆಚ್ಚಿಸಿರುವುದರ ಕುರಿತಾಗಿ ಸರ್ಕಾರದ ಗಮನಕ್ಕೆ ತಂದಿದ್ದರೂ ಈ ಕುರಿತು ಕ್ರಮ ಕೈಗೊಳ್ಳುವ ಭರವಸೆ…

Read More

ಮಡಿಕೇರಿ ಫೆ.16 NEWS DESK : ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹುದ್ದೆಯ ನೇಮಕಾತಿಯಲ್ಲಿ ಬಿ.ಎಸ್ಸಿ ಅರಣ್ಯ ಶಾಸ್ತ್ರ ಪದವಿಯನ್ನೆ ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡುವಂತೆ ಕರ್ನಾಟಕ ಅರಣ್ಯ ಪದವೀಧರರು ಮತ್ತು ವಿದ್ಯಾರ್ಥಿಗಳ ಸಂಘ ಒತ್ತಾಯಿಸಿದೆ. ಕಳೆದ ಏಳು ದಿನಗಳಿಂದ ತರಗತಿ ಬಹಿಷ್ಕರಿಸಿರುವ ಪೊನ್ನಂಪೇಟೆ ಮಹಾವಿದ್ಯಾಲಯದ ವಿದ್ಯಾರ್ಥಿಗಳು, ನಗರದ ಹಳೆಯ ಖಾಸಗಿ ಬಸ್‍ನಿಲ್ದಾಣದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ಮೂಲಕ ಸಾಗಿ ಬೇಡಿಕೆಗಳ ಈಡೇರಿಗೆ ಆಗ್ರಹಿಸಿದರು. ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಮಾನವ ಸರಪಳಿ ರಚಿಸಿ, ಅಸಮಾಧಾನ ವ್ಯಕ್ತಪಡಿಸಿದರಲ್ಲದೇ, ಬೀದಿ ನಾಟಕದ ಮೂಲಕ ಅರಣ್ಯ ಶಿಕ್ಷಣದ ಮಹತ್ವ ಸಾರಿದರು. ಟಿ.ಎಮ್.ವಿಜಯ ಭಾಸ್ಕರ್ ಅವರು ಸಲ್ಲಿಸಿರುವ 6ನೇಯ ಆಡಳಿತ ಸುಧಾರಣೆ ವರದಿಯ ಅಧ್ಯಾಯ 4ರ ಅಧಿಸೂಚನೆ ಸಂಖ್ಯೆ 81ನ್ನು ಕೈಬಿಡುವಂತೆ ಒತ್ತಾಯಿಸಿದರು, ಅಣುಕು ಪ್ರದರ್ಶನದ ಮೂಲಕ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ವೃತ್ತಿಪರ (ಅರಣ್ಯಶಾಸ್ತ್ರ) ಪದವೀಧರರ ಸಾಮಥ್ರ್ಯ ಮತ್ತು ಅಗತ್ಯವನ್ನು ಅರಿತುಕೊಂಡ ಕರ್ನಾಟಕ ಸರ್ಕಾರವು 2003ರಲ್ಲಿ ಸಹಾಯಕ…

Read More

ಮಡಿಕೇರಿ ಫೆ.16 NEWS DESK :  ಕರ್ನಾಟಕದ ಇತಿಹಾಸದಲ್ಲೇ ಇದೊಂದು ನಿರಾಶಾದಾಯಕ ಬಜೆಟ್ ಆಗಿದೆ, ಕೊಡಗಿನಲ್ಲಿ ಇಬ್ಬರು ಕಾಂಗ್ರೆಸ್ ಶಾಸಕರಿದ್ದರೂ ವಿಶೇಷ ಅನುದಾನ ಅಥವಾ ಯೋಜನೆಗಳನ್ನು ಘೋಷಿಸದೇ ಇರುವುದು ನಿರಾಶೆಗೆ ಕಾರಣವಾಗಿದೆ ಎಂದು ಕೊಡಗು ಜಿಲ್ಲಾ ಬಿಜೆಪಿಯ ಸಾಮಾಜಿಕ ಜಾಲತಾಣದ ಜಿಲ್ಲಾ ಸಂಚಾಲಕ ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಜನರ ಕಿವಿಗೆ ಹೂ ಇಡುವ ಬಜೆಟ್ ಮಮಡಿಸಲಾಗಿದೆ ಎಂದು ಟೀಕಿಸಿದ್ದಾರೆ. ಕೊಡಗು ಜಿಲ್ಲೆ ಮತ್ತು ಕರ್ನಾಟಕ ರಾಜ್ಯದ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ಯಾವುದೇ ಕೊಡುಗೆ ನೀಡಿಲ್ಲ. ಕ್ರೀಡಾ ಪ್ರತಿಭೆಗಳ ಜಿಲ್ಲೆಯಾಗಿರುವ ಕೊಡಗಿನ ಕ್ರೀಡಾಕ್ಷೇತ್ರಕ್ಕೆ ಅನುದಾನ ಘೋಷಿಸುವ ನಿರೀಕ್ಷೆ ಇತ್ತಾದರೂ ಇದು ಹುಸಿಯಾಗಿದೆ. ವನ್ಯಜೀವಿ ಹಾಗೂ ಮಾನವ ಸಂಘರ್ಷ ತಡೆಗೆ ಯಾವುದೇ ಪರಿಹಾರ ಯೋಜನೆ ಘೋಷಿಸಿಲ್ಲ. ಗ್ಯಾರಂಟಿ ಯೋಜನೆಯ ಭರವಸೆಗಳನ್ನು ಈಡೇರಿಸಲು ಸುಮಾರು 60 ಸಾವಿರ ಕೋಟಿಗಿಂತ ಅಧಿಕ ಹಣ ಬೇಕು. ಪರಿಸ್ಥಿತಿ ಹೀಗಿರುವಾಗ ಅಭಿವೃದ್ಧಿ ಕಾರ್ಯಗಳಿಗೆ ಹಣ ಹೊಂದಿಸಲು ಹೇಗೆ ಸಾಧ್ಯ…

Read More