ಲೇಖಕ: admin

ಬೆಂಗಳೂರು, ಫೆ 16 NEWS DESK : ಹಲವು ದಿನಗಳ  ಬೇಡಿಕೆಯಂತೆ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಇನ್ನಷ್ಟು ದಕ್ಷತೆ ತರುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿರುವುದಕ್ಕೆ  ವೈದ್ಯಕೀಯ ಶಿಕ್ಷಣ ಜೀವನೋಪಾಯ  ಹಾಗೂ ಕೌಶಲ್ಯಾಭಿವೃಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅಭಿನಂದನೆ ಸಲ್ಲಿಸಿದ್ದಾರೆ. ಕೊಡಗು ವೈದ್ಯಕೀಯ ಸಂಸ್ಥೆಯಲ್ಲಿ ಅಪಾಯಕಾರಿ ಸಾಂಕ್ರಾಮಿಕ ರೋಗ, ಸೋಂಕುಗಳನ್ನು ಪತ್ತೆ ಹಚ್ಚಲು ವೈರಲ್ ರಿಸರ್ಚ್ ಮತ್ತು ಡಯಾಗ್ನಸ್ಟಿಕ್ ಲ್ಯಾಬರೋಟರಿ ನಿರ್ಮಾಣ, ಚಿತ್ರದುರ್ಗ ವೈದ್ಯಕೀಯ ವಿಜ್ಞಾನ  ಸಂಸ್ಥೆಯಲ್ಲಿ ಅಗತ್ಯವಿರುವ ಹೊಸ ವೈದ್ಯಕೀಯ ಕಟ್ಟಡ, ವಿದ್ಯಾರ್ಥಿ ವಸತಿ ನಿಲಯ, ಸಿಬ್ಬಂದಿ, ವಸತಿ ಗೃಹ ನಿರ್ಮಾಣ ಕಾರ್ಯ ಪೂರ್ಣಗೊಳಿಸುತ್ತೇವೆ ಎಂದು ಹೇಳಿದ್ದಾರೆ. ವೈದ್ಯಕೀಯ ಶಿಕ್ಷಣ ಕ್ಷೇತ್ರವು ಸರ್ಕಾರಿ ವಲಯವೆಂದು ವ್ಯಾಪಕ ಬೆಳವಣಿಗೆ ಹೊಂದಿದ್ದು, ಇಲಾಖೆ ಕಾರ್ಯ ನಿರ್ವಹಣೆಯಲ್ಲಿ ಇನ್ನಷ್ಟು ದಕ್ಷತೆ ತರುವ  ಕಾರಣಕ್ಕಾಗಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಿಸಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ  ಮತ್ತು…

Read More

ನಾಪೋಕ್ಲು ಫೆ.16 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕೊಡಗು ಜಿಲ್ಲಾ ಘಟಕದ ವತಿಯಿಂದ ಕೊಡಗು ಜಿಲ್ಲೆಯ ಪಾನಮುಕ್ತ ನವಜೀವನ ಸಮಿತಿ ಸದಸ್ಯರಿಗೆ ತರಬೇತಿ ಕಾರ್ಯಾಗಾರ ನಡೆಯಿತು. ನಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ನಡೆಯದ ಕಾರ್ಯಕ್ರಮವನ್ನು ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಉದ್ಘಾಟಿಸಿ, ನಮ್ಮ ಜೀವನದಲ್ಲಿ ಸೇವಾ ಮನೋಭಾವನೆಯನ್ನು ರೂಡಿಸಿಕೊಂಡರೆ ನಮ್ಮ ಜನ್ಮ ಸಾರ್ಥಕವಾಗಲೂ ಸಾಧ್ಯ. ಜೊತೆಗೆ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಪಾನಮುಕ್ತರನ್ನು ನಿರಂತರವಾಗಿ ಅನುಪಾಲನೆ ಮಾಡುವುದು ಒಂದು ಪುಣ್ಯದ ಕೆಲಸ ಎಂದರು. ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಮಾತನಾಡಿ, ಮಗುವನ್ನು ತಾಯಿಯು ಕೈಹಿಡಿದು ಪೋಷಿಸಿದಂತೆ ನವ ಜೀವನ ಸಮಿತಿ ಸದಸ್ಯರನ್ನು ಪೋಷಣೆ ಮಾಡಿದಾಗ ಜನಜಾಗೃತಿ ಕಾರ್ಯಕ್ರಮ ಯಶಸ್ವಿಯಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗು ಜಿಲ್ಲೆಯಲ್ಲಿ ಒಟ್ಟು ಇದುವರೆಗೆ 55 ಮದ್ಯವರ್ಜನ ಶಿಬಿರಗಳನ್ನ ಅತ್ಯುತ್ತಮವಾಗಿ ಆಯೋಜಿಸಲಾಗಿದೆ. ಶಿಬಿರಗಳಲ್ಲಿ…

Read More

ಬೆಂಗಳೂರು ಫೆ.16 NEWS DESK *ಅಲ್ಪಸಂಖ್ಯಾತರ ಕಲ್ಯಾಣ* 184. ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಅವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು; • 50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು. • 100 ಸಂಖ್ಯಾಬಲವುಳ್ಳ 100 ಮೆಟ್ರಿಕ್‌ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು. • 100 ಹೊಸ ಮೌಲಾನಾ ಆಜಾದ್‌ ಶಾಲೆಗಳನ್ನು ತೆರೆಯಲಾಗುವುದು. • ಸ್ವಂತ ಕಟ್ಟಡವನ್ನು ಹೊಂದಿರುವ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪ್ರಾರಂಭಿಸಲಾಗುವುದು. 185. ಸರ್ಕಾರಿ/ಖಾಸಗಿ ಕಾಲೇಜುಗಳಲ್ಲಿ ಬಿ.ಎಸ್ಸಿ. ನರ್ಸಿಂಗ್‌/ ಜಿ.ಎನ್‌.ಎಂ ನರ್ಸಿಂಗ್‌ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಶುಲ್ಕ ಭರಿಸುವ ಯೋಜನೆಯನ್ನು ಪುನಃ ಪ್ರಾರಂಭ ಮಾಡಲಾಗುವುದು. 186. ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಉದ್ಯಮಶೀಲರು ಸ್ಥಾಪಿಸುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಹೊಸ ಘಟಕಗಳನ್ನು ಸ್ಥಾಪಿಸಲು ಹಾಗೂ ಅಸ್ತಿತ್ವದಲ್ಲಿರುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳ ಉನ್ನತೀಕರಣಕ್ಕೆ KSFC ಮೂಲಕ ಪಡೆಯುವ 10…

Read More

ಬೆಂಗಳೂರು ಫೆ.16 NEWS DESK : *ತೋಟಗಾರಿಕೆ* 43. ತೋಟಗಾರಿಕೆಗೆ ಸಂಬಂಧಿಸಿದ ತಾಂತ್ರಿಕ ಸಲಹೆ, ಮಾರುಕಟ್ಟೆ ಸಂಪರ್ಕ, ಬೇಸಾಯ ಪರಿಕರಗಳು ಮತ್ತು ಉತ್ಪನ್ನಗಳನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ಆಯ್ದ ಜಿಲ್ಲೆಗಳಲ್ಲಿ ಕಿಸಾನ್ ಮಾಲ್ಗಳನ್ನು ಸ್ಥಾಪಿಸಲಾಗುವುದು. 44. ರಾಜ್ಯದಲ್ಲಿ 40,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುತ್ತಿರುವ ಪುಷ್ಪ ಬೆಳೆಗಳ ಮಾರಾಟ ಮತ್ತು ರಫ್ತನ್ನು ಉತ್ತೇಜಿಸಲು ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು. 45. ತೋಟಗಾರಿಕೆ ಬೆಳೆಗಳ ಸಂಸ್ಕರಣೆ ಮತ್ತು ರಫ್ತಿನ ಪ್ರಮಾಣ ಹೆಚ್ಚಿಸಲು ಕೊಯ್ಲೋತರ ನಿರ್ವಹಣಾ ಕೇಂದ್ರ (Packhouse) ಹಾಗೂ ಮೌಲ್ಯವರ್ಧನ ಸಂಸ್ಕರಣಾ ಘಟಕಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು. 46. ರಾಜ್ಯದಲ್ಲಿ ಅಡಿಕೆ ಬೆಳೆಯಲ್ಲಿ ಕಂಡು ಬರುವ ಮಾರಕ ರೋಗಗಳನ್ನು ನಿಯಂತ್ರಿಸಲು ಪೂರಕವಾದ ಸಂಶೋಧನೆ ಹಾಗೂ ಸಸ್ಯ ಸಂರಕ್ಷಣೆ ಚಟುವಟಿಕೆಗಳನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಕೈಗೊಳ್ಳಲಾಗುವುದು. 47. ತೋಟಗಾರಿಕೆ ಬೆಳೆಗಳಲ್ಲಿ ಹೆಚ್ಚು ಇಂಗಾಲವನ್ನು ಹಿಡಿದಿಟ್ಟುಕೊಳ್ಳುವ ಬೆಳೆಗಳನ್ನು ಗುರುತಿಸಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ Carbon Credit…

Read More

ಮಡಿಕೇರಿ ಫೆ.16 NEWS DESK : ಪೊನ್ನಂಪೇಟೆ ತಾಲೂಕು ಬಾಡಗರಕೇರಿಯ ಶ್ರೀ ಮೃತ್ಯುಂಜಯ ದೇವಾಲಯದಲ್ಲಿ ಫೆ.19 ರಿಂದ 29 ರವರೆಗೆ ವಾರ್ಷಿಕೋತ್ಸವ ನಡೆಯಲಿದೆ. ಪ್ರತಿ ದಿನ ಬೆಳಿಗ್ಗೆ 5 ಗಂಟೆಯಿಂದ ವಿಶೇಷ ಪೂಜೆಗಳು, ಅಭಿಷೇಕ, ಇರುಬೆಳಕು, ನಿತ್ಯ ಪೂಜೆ ತುಲಭಾರ ನಡೆಯಲಿದ್ದು, ಸಂಜೆ 7 ರ ನಂತರ ತುಚಂಬಲಿ, ಉತ್ಸವ ಮೂರ್ತಿಯ ಪ್ರದಕ್ಷಿಣೆ, ದರ್ಶನ ಜರಗಲಿದೆ. ವಾರ್ಷಿಕೋತ್ಸವದ ಕೊನೆಯ ದಿನವಾದ ಫೆ.29ರಂದು ವಿಶೇಷ ಪೂಜೆಗಳೊಂದಿಗೆ ಮಧ್ಯಾಹ್ನ 3 ಗಂಟೆಗೆ ಶಾಸ್ತ್ರೋತ್ತವಾಗಿ 12 ತೆಂಗಿನಕಾಯಿಗೆ ಗುಂಡು ಹೊಡೆಯುವ ಕಾರ್ಯಕ್ರಮ ನಡೆಯಲಿದೆ. ಸಂಜೆ 5 ಗಂಟೆಗೆ ಉತ್ಸವ ಮೂರ್ತಿಯ ದರ್ಶನ, ಅವಬ್ರತ್ ಸ್ಥಾನ, ರಾತ್ರಿ 8.30 ಗಂಟೆಗೆ ಊರಿನ ಎಲ್ಲಾ ಮಹಿಳೆಯರು ಸಾಂಪ್ರದಾಯಿಕ ಉಡುಗೆಯೊಂದಿಗೆ ಉತ್ಸವ ಮೂರ್ತಿಯನ್ನು ಸ್ವಾಗತಿಸುವ ಕಾರ್ಯಕ್ರಮ ಜರಗಲಿದೆ. ಸಂಜೆ 6 ಗಂಟೆಯಿಂದ ಶ್ರೀನಿವಾಸ ತಂಡದವರಿಂದ ಭಕ್ತಿಗೀತೆಗಳ ಕಾರ್ಯಕ್ರಮ, ವಿಶೇಷ ಅಲಂಕಾರ ಪೂಜೆ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ. ಪ್ರತಿದಿನ ಭಕ್ತಾದಿಗಳಿಗೆ ಬೆಳಿಗ್ಗೆ ಮಧ್ಯಾಹ್ನ ಹಾಗೂ ರಾತ್ರಿ ತೀರ್ಥ ಪ್ರಸಾದ ಹಾಗೂ ಅನ್ನದಾನ…

Read More

ಬೆಂಗಳೂರು ಫೆ.16 NEWS DESK : ಸನ್ಮಾನ್ಯ ಸಭಾಧ್ಯಕ್ಷರೆ, 1. ನಾನು 2024-25ನೇ ಸಾಲಿನ ಆಯವ್ಯಯವನ್ನು ಸದನದ ಮುಂದೆ ಮಂಡಿಸುತ್ತಿದ್ದೇನೆ. 2. ಭಾರತ ದೇಶ ಗಣರಾಜ್ಯವಾಗಿ 75ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಸುಸಂದರ್ಭದಲ್ಲಿ ನನ್ನ 1೫ನೇ ಆಯವ್ಯಯವನ್ನು ಮಂಡಿಸಲು ಹರ್ಷಿಸುತ್ತೇನೆ. 3. ಡಾ|| ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ರೂಪಿಸಿದ ಸಂವಿಧಾನದ ಆಶಯದಂತೆ ನ್ಯಾಯ, ಸಮಾನತೆ ಹಾಗೂ ಭ್ರಾತೃತ್ವದ ತಳಹದಿಯ ಮೇಲೆ ಕರ್ನಾಟಕ ಮಾದರಿ ಅಭಿವೃದ್ಧಿಯ ಹೊಸ ದೃಷ್ಟಾಂತವನ್ನು ರೂಪಿಸಲು ನಾವು ಹೆಜ್ಜೆಯಿಟ್ಟಿದ್ದೇವೆ. 4. ಸಾಮಾಜಿಕ ನ್ಯಾಯ ಎನ್ನುವುದು ನಮ್ಮ ನಂಬಿಕೆ ಮಾತ್ರವಲ್ಲ; ಅದು ಉದಾತ್ತ ಜೀವನ ದೃಷ್ಟಿಕೋನ. ಸಮ ಸಮಾಜ ನಿರ್ಮಾಣದಲ್ಲಿ ಬಸವಾದಿ ಶರಣರ ಕಾಯಕ ಮತ್ತು ದಾಸೋಹ ತತ್ವಗಳು ನಮಗೆ ಪ್ರೇರಣೆಯಾಗಿದೆ. ದುಡಿಮೆಯ ಒಂದು ಭಾಗವನ್ನು ದಾಸೋಹಕ್ಕೆ ಬಳಸಬೇಕೆಂಬ ಶರಣರ ಚಿಂತನೆ, ಸಮಾಜದಲ್ಲಿ ಸಂಪತ್ತಿನ ನ್ಯಾಯಯುತ ಹಂಚಿಕೆ ಮಾಡುವ ನಮ್ಮ ಆಶಯಕ್ಕೆ ಆಧಾರವಾಗಿದೆ. ಆಗದು ಎಂದು; ಕೈಲಾಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ ಮನಸೊಂದಿದ್ದರೆ ಮಾರ್ಗವು…

Read More

ಬೆಂಗಳೂರು ಫೆ.16 NEWS DESK : ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು,  ದಶಕಗಳ ಕನಸು ನನಸಾಗಿದೆ. ದಾವಣಗೆರೆಯಲ್ಲಿ ಇದೇ ಫೆ.3 ಮತ್ತು 4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಧನ್ಯವಾದ ಸಲ್ಲಿಸಿದ್ದಾರೆ. ಮಂಡ್ಯ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿಯೂ ಉಚಿತ ಬಸ್ ಪಾಸ್ ಬಗ್ಗೆ ಕೆಯುಡಬ್ಲ್ಯುಜೆ ಮಂಡಿಸಿದ್ದ ಹಕ್ಕೊತ್ತಾಯ ಬಗ್ಗೆ ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ನಡೆದುಕೊಂಡಿರುವುದನ್ನು ಕೆಯುಡಬ್ಲ್ಯುಜೆ ಸ್ಮರಿಸಿದ್ದು, ಅಭಿನಂದನೆ ಸಲ್ಲಿಸಿದೆ. ಬಸ್ ಪಾಸ್ ಬೇಡಿಕೆ ಈಡೇರಿಸಲು ಸ್ಪಂದಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಎಲ್ಲಾ ಹಂತದಲ್ಲಿಯೂ ಸಹಕಾರ ನೀಡಿದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೂ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ವಿಶೇಷವಾಗಿ ಸ್ಮರಿಸಿ ಅಭಿನಂದಿಸಿದೆ. ಬಜೆಟ್ ನಲ್ಲಿ ಘೋಷಣೆ ಮಾಡಿರುವ ಬಸ್ ಪಾಸ್ ಯೋಜನೆಯನ್ನು…

Read More

ಬೆಂಗಳೂರು  ಫೆ.16  : ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಗುತ್ತಿಗೆ ಪದ್ದತಿ ರದ್ದುಪಡಿಸಿ ಸ್ಥಳೀಯ ಸಂಸ್ಥೆಗಳಿಂದಲೆ ನೇರವಾಗಿ ವೇತನ ಪಾವತಿಸಲು ಒಪ್ಪಿಗೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊರಗುತ್ತಿಗೆ ನೌಕರರ ಸಂಘ ಅಭಿನಂದಿಸಿದೆ. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಪೌರಚಾಲಕರು, ನೀರುಗಂಟಿಗಳು, ಬೀದಿ ದೀಪ ನಿರ್ವಾಹಕರು, ಲೋಡರ್ಸ್ ಕ್ಲೀನರ್ಸ್, ಯೂಜಿಡಿ ಕಾರ್ಮಿಕರು, ಸ್ಯಾನಿಟರಿ ಸೂಪರ್ ವೈಸರು ಸೇರಿದಂತೆ ಹತ್ತು ಸಾವಿರಕ್ಕು ಹೆಚ್ಚು ಮಂದಿ ದುಡಿಯುತ್ತಿದ್ದು.ಈ ನೌಕರರನ್ನು ನೇರಪಾವತಿಗೆ ತರುವಂತೆ ಕರ್ನಾಟಕ ರಾಜ್ಯ ನಗರಪಾಲಿಕೆ ನಗರಸಭೆ ಪುರಸಭೆ ಪಟ್ಟಣ ಪಂಚಾಯತಿ ಹೊರಗುತ್ತಿಗೆ ನೌಕರರ ಸಂಘ ಫೆ.13 ರಿಂದ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಂಡು ಫೆ.15 ರಂದು ಹೊರಗುತ್ತಿಗೆ ನೌಕರರ ನಡಿಗೆ ಮುಖ್ಯಮಂತ್ರಿಗಳ ಮನೆ ಕಡೆಗೆ ಎಂಬ ಕಾರ್ಯಕ್ರಮ ರೂಪಿಸಿತ್ತು. ಈ ಹಿನ್ನೆಲೆಯಲ್ಲಿ ಸಂಘದ ರಾಜ್ಯ ಅಧ್ಯಕ್ಷ ಎಂ.ಬಿ.ನಾಗಣ್ಣಗೌಡ ಸೇರಿದಂತೆ ರಾಜ್ಯ ಸಮಿತಿಯೊಂದಿಗೆ ಚರ್ಚಿಸಿದ ಮುಖ್ಯಮಂತ್ರಿಗಳು ಹೊರಗುತ್ತಿಗೆ ನೌಕರರಿಗೆ ನೇರಪಾವತಿ ಜಾರಿಗೊಳಿಸಲಾಗುವುದು.ಶೀಘ್ರವಾಗಿ ಸಂಪುಟದಲ್ಲಿ ಅನುಮೋದಿಸಲಾಗುವುದು ಹೋರಾಟವನ್ನು ಹಿಂಪಡೆಯುವಂತೆ ಸೂಚಿಸಿದ್ದರು. ಈ…

Read More

ಸುಂಟಿಕೊಪ್ಪ ಫೆ.16 : ಜೆಸಿಐ ವಲಯ 14ರ ವತಿಯಿಂದ ಸುಂಟಿಕೊಪ್ಪ ಜೆಸಿಐ ಸಂಸ್ಥೆಯ ಪ್ರಸಕ್ತ ಅಧ್ಯಕ್ಷರು ಸೇರಿದಂತೆ ಸದಸ್ಯರುಗಳಿಗೆ (ಪ್ರಗತಿ) ವಿಚಾರ ಸಂಕಿರಣ ತರಬೇತಿ ಕಾರ್ಯಾಗಾರ ನಡೆಯಿತು. ಕುಶಾಲನಗರದ ಸಿರಿ ಅಂಬಾರಿ ಸಭಾಂಗಣದಲ್ಲಿ ನಡೆದ ತರಬೇತಿ ಕಾರ್ಯಾಗಾರವನ್ನು ಜೆಸಿಐ ವಲಯ 14ರ ಅಧ್ಯಕ್ಷೆ ಆಶಾ ಜೈನ್ ಉದ್ಘಾಟಿಸಿದರು. ತರಬೇತುದಾರರಾದ ಜೆಸಿಐ ಪ್ರಮೋದ್ ಕುಮಾರ್, ಕುನಾಲ್ ಮಾನಿಕ್‍ಚಂದ್, ನವೀನ್ ಜೆಸಿಐ ಸಂಸ್ಥೆಯ ಉದ್ದೇಶವನ್ನು, ಸಮಾಜ ಸೇವೆ, ನಾಯಕತ್ವ ನಡುವಳಿಕೆಗಳ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸುಂಟಿಕೊಪ್ಪ ಜೇಸಿ ಅಧ್ಯಕ್ಷ ಸಂಪತ್ ಕುಮಾರ್, ಕಾರ್ಯಕ್ರಮ ನಿರ್ದೇಶಕರಾದ ಜೆಸಿ ಸತೀಶ್, ವಿಶೇಷ ಅತಿಥಿಗಳಾಗಿ ಜೆಸಿ ವಿಕಾಸ್ ಗೂಗ್ಲಿಯ, ಎಂ.ನವೀನ್, ಎಸ್.ಪ್ರಜ್ವಲ್, ನವೀನ್ ಕಾರ್ಯಪ್ಪ, ಯಶಸ್ವಿನಿ, ವಲಯ ಕಾರ್ಯದರ್ಶಿ ಮಾಯ, ಸುಂಟಿಕೊಪ್ಪ ಘಟಕದ ದೇವಿ ಪ್ರಸಾದ್, ಕಾಯರ್ ಮಾರ್, ಡೆನ್ನಿಸ್ ಡಿಸೋಜ, ಪೆಲ್ಸಿ ಡೆನ್ನಿಸ್, ಜಾಯಿದ್ ಆಹ್ಮದ್, ಮನು ಅಚ್ಚಮ್ಮಯ್ಯ, ಸರ್ವ ಸದಸ್ಯರು ಹಾಜರಿದ್ದರು.

Read More

ವಿರಾಜಪೇಟೆ ಫೆ.15 NEWS DESK : ವಿರಾಜಪೇಟೆಯ “ಚೋಟಾ ಚಾಂಪ್ಸ್” ಗುರುಕುಲಂ ಮಾದರಿ ಶಾಲೆಯ ಶಾಲಾ ವಾರ್ಷಿಕೋತ್ಸವ “ಸಂಭ್ರಮ-2023-24” ವಿರಾಜಪೇಟೆ ಗೋಣಿಕೊಪ್ಪ ಮುಖ್ಯ ರಸ್ತೆಯಲ್ಲಿರುವ ರಾಜೇಶ್ವರಿ ಮಿನಿ ಕನ್ವೆನ್ಸನ್ ಹಾಲ್’ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಅಖಿಲ ಕೊಡವ ಸಮಾಜ ಯೂತ್ ವಿಂಗ್ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪೋಷಕರು ಮಕ್ಕಳಿಗೆ ಆಚಾರ ವಿಚಾರ, ಸಂಸ್ಕೃತಿ ಸಂಸ್ಕಾರವನ್ನು ಕಲಿಸುವಂತಾಗಬೇಕು. ಮಕ್ಕಳನ್ನು ರೀತಿಯ ದುಶ್ಚಟಗಳಿಂದ ದೂರವಿರುವಂತೆ ನೋಡಿಕೊಳ್ಳಬೇಕು. ಪುಟ್ಟ ಮಕ್ಕಳು ತಂದೆ ತಾಯಿ ಹಾಗೂ ತಮ್ಮ ಸುತ್ತಮುತ್ತ ಎನೇನು ನಡೆಯುತ್ತದೆಯೋ ಅದನ್ನೇ ಕಲಿತು ಅನುಸರಿಸುತ್ತಾರೆ. ಪುಟ್ಟ ಮಕ್ಕಳು ತನ್ನದೆಯಾದ ವಿಭಿನ್ನ ಕೌಶಲ್ಯಗಳನ್ನು ಹೊಂದಿರುತ್ತಾರೆ. ಅವರನ್ನು ನಾವು ಪ್ರೋತ್ಸಾಹಿಸಬೇಕು. ಮಕ್ಕಳ ಮನಸ್ಸು ಬಹಳ ಮೃದುವಾಗಿದ್ದು ನಾವು ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತಾಗ ಅವರ ಭವನೆಗಳನ್ನು ಅರಿತುಕೊಳ್ಳಲು ಸಾಧ್ಯ. ಹಾಗೇ ಮಾಡುವುದರಿಂದ ಅವರ ಸುಪ್ತ ಪ್ರತಿಭೆ ಹೊರಬರಲು ಸಾಧ್ಯವಾಗುತ್ತದೆ. ಅವರಲ್ಲಿ ಹುದುಗಿದ ಅನೇಕ ಪ್ರತಿಭೆಗಳು ಹೊರಬರುತ್ತವೆ. ಅದಕ್ಕೆ ಪೋಷಕರು ಕಾರಣ ಕರ್ತರಾಗಬೇಕು ಎಂದು…

Read More