ಲೇಖಕ: admin

ಸೋಮವಾರಪೇಟೆ ಫೆ.15 NEWS DESK :  ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸಿ.ಸಿ. ಕ್ಯಾಮೆರಾ ಕಡ್ಡಾಯವಾಗಿ ಅಳವಡಿಸಬೇಕು. ಬಯೋ ಮೆಟ್ರಿಕ್ ಅಳವಡಿಸಿ, ಬೆಳಿಗ್ಗೆ 9-45ರೊಳಗೆ ಕಚೇರಿಗೆ ಆಗಮಿಸಿ ತಂಬ್ ನೀಡಬೇಕು ಎಂದು ಲೋಕಾಯುಕ್ತ ಉಪಅಧೀಕ್ಷಕ ಎಂ.ಎಸ್.ಪವನ್‍ಕುಮಾರ್ ಸೂಚಿಸಿದರು. ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಅಧಿಕಾರಿಗಳು ಇಲ್ಲಿನ ತಾಲ್ಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ನಡೆದ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ಸ್ವೀಕಾರ ಮತ್ತು ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಅವರು ಮಾತನಾಡಿದರು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳ ವಿಳಂಬ ಹಾಗು ಇನ್ನಿತರ ತೊಂದರೆ ನೀಡುತ್ತಿರುವ ಅಧಿಕಾರಿ ಅಥವಾ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ತಮ್ಮ ಸಮಸ್ಯೆಗೆ ಸಂಬಂಧಿಸಿದಂತೆ ಯಾವುದೇ ದೂರು ನೀಡುವಾಗಲೂ ಒಂದು ಹಿಂಬರಹ ಪಡೆದಲ್ಲಿ ಅರ್ಜಿದಾರರ ಸಮಸ್ಯೆ ತಿಳಿಯಬಹುದು ಎಂದರು. ಸಾರ್ವಜನಿಕರು ಯಾವುದೇ ಅಧಿಕಾರಿಗಳಿಂದ ಸಮಸ್ಯೆಗೊಳಪಟ್ಟಲ್ಲಿ ತಮ್ಮ ಸಮಸ್ಯೆಗೆ ಸಂಬಂಧಿಸಿದಂತೆ, ಅರ್ಜಿ ಭರ್ತಿ ಮಾಡಿ, ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ದೂರಿನೊಂದಿಗೆ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ.08272-295297 ನ್ನು ಸಂಪರ್ಕಿಸಬಹುದು…

Read More

ಮಡಿಕೇರಿ ಫೆ.15 NEWS DESK : ಜನರ ಬಳಿ ಇರುವ ಪಾರಂಪರಿಕ ಅರಣ್ಯ ವಸ್ತುಗಳನ್ನು ಏಪ್ರಿಲ್ ತಿಂಗಳೊಳಗೆ ಸರ್ಕಾರದ ಅಧೀನಕ್ಕೆ ಒಪ್ಪಿಸಬೇಕು ಎನ್ನುವ ಅರಣ್ಯ ಇಲಾಖೆಯ ಆದೇಶ ಆತಂಕವನ್ನು ಸೃಷ್ಟಿಸಿದ್ದು, ಸರ್ಕಾರ ಈ ವಿಚಾರದಲ್ಲಿ ದುಡುಕದೆ ಜನಪರ ನಿರ್ಧಾರವನ್ನು ಕೈಗೊಳ್ಳಬೇಕೆಂದು ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ.ಚಂಗಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅರಣ್ಯ ಪ್ರಾಣಿಗಳ ಉತ್ಪನ್ನಗಳನ್ನು ಘೋಷಿಸಿಕೊಳ್ಳಬೇಕೆಂಬ ಕಾಯ್ದೆ 2003ರಲ್ಲಿ ಜಾರಿಯಾಗಿರುವ ವಿಚಾರ ಬಹುತೇಕರ ಗಮನಕ್ಕೆ ಬಂದಿರುವುದಿಲ್ಲ. ಈಗ ಏಕಾಏಕಿ ಪಾರಂಪರಿಕ ಅರಣ್ಯ ವಸ್ತುಗಳನ್ನು ಸರಕಾರಕ್ಕೆ ಹಿಂತಿರುಗಿಸಬೇಕೆಂದು ಆದೇಶಿಸಿರುವುದು ಸರಿಯಾದ ಕ್ರಮವಲ್ಲವೆಂದು ಅಭಿಪ್ರಾಯಪಟ್ಟಿದ್ದಾರೆ. ಸರಕಾರ ಜಿಲ್ಲೆಯ ಜನ ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ, ಜನಪರ ನಿಲುವು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಕೊಡಗಿನ ಜನರು ತಮ್ಮದೇ ಆದ ರೀತಿಯಲ್ಲಿ ಹಬ್ಬ ಹರಿದಿನಗಳನ್ನು ತಲೆ- ತಲಾಂತರಗಳಿಂದ ಆಚರಿಸುತ್ತಾ ಬರುತ್ತಿದ್ದು, ಇಲ್ಲಿಯ ಆಚರಣೆಗಳು ವಿಶಿಷ್ಟ ರೀತಿಯದ್ದಾಗಿದೆ. ಪ್ರಮುಖವಾಗಿ ಮಾರ್ಚ್ ಮತ್ತು ಏಪ್ರಿಲ್ ತಿಂಗಳುಗಳಲ್ಲಿ ಆಚರಿಸುವ ಸುಗ್ಗಿ ಹಬ್ಬ ಪ್ರಕೃತಿಯೊಂದಿಗೆ ರೈತ ಹೊಂದಿರುವ ಅವಿನಾಭಾವ…

Read More

ಮಡಿಕೇರಿ ಫೆ.15 NEWS DESK : ಇತ್ತೀಚೆಗೆ ಬೆಂಗಳೂರಿನ ಭಾರತಯೀಯ ಕ್ರೀಡಾ ಪ್ರಾಧಿಕಾರ(ಸಾಯಿ)ದಲ್ಲಿ ನಡೆದ ಆಲ್ ಇಂಡಿಯಾ ಇಂಟರ್ ಸಾಯಿ ಹಾಕಿ ಪಂದ್ಯಾವಳಿ-2024 ರಲ್ಲಿ ಮಡಿಕೇರಿ ನಗರದ ಭಾರತೀಯ ಕ್ರೀಡಾ ಪ್ರಾಧಿಕಾರ(ಸಾಯಿ)ದ 19 ವಿದ್ಯಾರ್ಥಿನಿಯರು ಪಾಲ್ಗೊಂಡು ಚಿನ್ನದ ಪದಕ ಪಡೆದಿದ್ದಾರೆ. ಈ ವಿದ್ಯಾರ್ಥಿನಿಯರಿಗೆ ಅಭಿನಂದಿಸುವ ಕಾರ್ಯಕ್ರಮವು ಫೆ.19 ರಂದು ಸಂಜೆ 4.30 ಗಂಟೆಗೆ ನಗರದ ಭಾರತೀಯ ಕ್ರೀಡಾ ಪ್ರಾಧಿಕಾರದ(ಸಾಯಿ) ವಿದ್ಯಾರ್ಥಿ ನಿಲಯದಲ್ಲಿ ನಡೆಯಲಿದೆ ಎಂದು ಸಾಯಿ ಮೇಲ್ವಿಚಾರಕಿ ಮಿನಿ ಉಣ್ಣಿರಾಜ್ ತಿಳಿಸಿದ್ದಾರೆ.

Read More

ಮಡಿಕೇರಿ ಫೆ.15 NEWS DESK :  ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಫ್‍ಎಸ್‍ಟಿ, ಎಸ್‍ಎಸ್‍ಟಿ, ವಿಎಸ್‍ಟಿ ಸೇರಿದಂತೆ ವಿವಿಧ ತಂಡಗಳಿಗೆ ಚುನಾವಣಾ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣಾ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದ್ದಾರೆ. ನಗರದ ಜಿ.ಪಂ.ಸಭಾಂಗಣದಲ್ಲಿ ಲೋಕಸಭಾ ಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆ ಪಾಲಿಸುವ ಬಗ್ಗೆ ನಡೆದ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ವಿವಿಧ ತಂಡದ ಅಧಿಕಾರಿಗಳು ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಲು ಈಗಿನಿಂದಲೇ ಸಿದ್ಧ್ದತೆ ಮಾಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ತಮ್ಮ ಕರ್ತವ್ಯ ವ್ಯಾಪ್ತಿಯಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದರು. ಲೋಕಸಭಾ ಚುನಾವಣೆ ಘೋಷಣೆಯಾದ ಕೂಡಲೇ ಸರ್ಕಾರಿ ಕಟ್ಟಡಗಳು, ಸಾರ್ವಜನಿಕ ಸ್ಥಳಗಳು ಸೇರಿದಂತೆ ವಿವಿಧೆಡೆ ಅಳವಡಿಸಲಾಗಿರುವ ಜಾಹೀರಾತು, ಪ್ರಕಟಣೆ, ಬ್ಯಾನರ್‍ಗಳನ್ನು ತೆರವುಗೊಳಿಸಿ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಚುನಾವಣಾ ಆಯೋಗದ ನಿರ್ದೇಶನವನ್ನು ಅಧಿಕಾರಿಗಳು ಪಾಲಿಸಬೇಕು. ಸಂಶಯಕ್ಕೆ ಅವಕಾಶ ಮಾಡಬಾರದು. ಮಾಹಿತಿ ತಿಳಿಯದಿದ್ದಲ್ಲಿ ಮೇಲಾಧಿಕಾರಿಗಳ…

Read More

ಮಡಿಕೇರಿ ಫೆ.15 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಾಯಕ ಶರಣರ ಜಯಂತಿ, ಶ್ರೀ ಸಂತ ಸೇವಾಲಾಲ್ ಜಯಂತಿ ಹಾಗೂ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವು ಫೆಬ್ರವರಿ, 16 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ. 

Read More

ಮಡಿಕೇರಿ ಫೆ.15 NEWS DESK : ಚಾಮಿಯಾಲ ಫೈಟರ್ಸ್ ಕ್ಲಬ್ ವತಿಯಿಂದ ಇದೇ ಪ್ರಥಮ ಬಾರಿಗೆ ಕೊಡವ ಮುಸ್ಲಿಂ ಕುಟುಂಬ ತಂಡಗಳ ನಡುವೆ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗುತ್ತಿದೆ. ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ತಂಡಗಳು ಮಾ.25ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಆಯೋಜಕ ಮುನೀರ್ ಚಾಮಿಯಾಲ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಏಪ್ರಿಲ್ 16 ರಿಂದ 21ರ ವರೆಗೆ ವಿರಾಜಪೇಟೆಯ ಚಾಮಿಯಾಲ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿ-2024 ನ್ನು ನಡೆಸಲು ನಿರ್ಧರಿಸಲಾಗಿದೆ. ವಿಜೇತ ತಂಡಕ್ಕೆ ರೂ.1 ಲಕ್ಷ ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ ರೂ.50 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ, ತೃತೀಯ ಆಕರ್ಷಕ ಟ್ರೋಫಿ ಮತ್ತು ನಾಲ್ಕನೇ ವಿಜೇತ ತಂಡಕ್ಕೆ ಬಹುಮಾನ ನೀಡಲಾಗುವುದು ಎಂದು ಹೇಳಿದ್ದಾರೆ. ಭಾಗವಹಿಸುವ ತಂಡಗಳು ಮಾ.25 ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಹಾಗೂ ಹೆಸರು ನೋಂದಾವಣೆಗಾಗಿ 7411110041, 7349064834 ನ್ನು ಸಂಪರ್ಕಿಸಬಹುದಾಗಿದೆ ಎಂದು ಮುನೀರ್ ಚಾಮಿಯಾಲ ತಿಳಿಸಿದ್ದಾರೆ.

Read More

ಮಡಿಕೇರಿ ಫೆ.15 : ಕೊಡವ ಭಾಷೆಯನ್ನು ಸಂವಿಧಾನದ 8 ನೇ ಶೆಡ್ಯೂಲ್‍ಗೆ ಸೇರಿಸಬೇಕು ಎಂದು ಒತ್ತಾಯಿಸಿ ವಿಶ್ವ ರಾಷ್ಟ್ರ ಸಂಸ್ಥೆಯ ಅಂತರರಾಷ್ಟ್ರೀಯ ಮಾತೃಭಾಷಾ ದಿನವಾದ ಫೆ.21 ರಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೆಳಗ್ಗೆ 10.30 ಗಂಟೆಗೆ ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುವುದು ಹೇಳಿದ್ದಾರೆ. ಯುನೇಸ್ಕೋದ 2024 ರ ಘೋಷವಾಕ್ಯದಂತೆ ಅಂತರ ಜನಾಂಗದ ತಿಳುವಳಿಕೆಗೆ ವಿಶ್ವದಾದ್ಯಂತ ಎಲ್ಲಾ ಮಾತೃಭಾಷೆಗಳನ್ನು ಶಿಕ್ಷಣ ಸಂಸ್ಥೆಗಳಲ್ಲಿ ಪ್ರಚುರ ಪಡಿಸುವುದು ಈ ಬಾರಿಯ ಮಹತ್ವವಾಗಿದೆ. ಕೊಡವ ಭಾಷೆ, ಪ್ರಕೃತಿಯ ಆರಾಧಕರಾಗಿರುವ ಆದಿಮ ಸಂಜಾತ ಕೊಡವರ ಮಾತೃಭಾಷೆಯಾಗಿದ್ದು, ಜೀವನದ ಆತ್ಮವಾಗಿದೆ. ಜನ್ಮ ನೀಡಿದ ತಾಯಿ, ಮಾತೃಭಾಷೆ ಕೊಡವ, ಮಾತೃಭೂಮಿ ಕೊಡವ ಲ್ಯಾಂಡ್, ಮಾತೆ ಕಾವೇರಿ ಮತ್ತು ಪ್ರಕೃತಿ ಮಾತೆಯಿಂದ ಕೊಡವ ಜನಜೀವನವನ್ನು ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.…

Read More

ನಾಪೋಕ್ಲು ಫೆ.15 NEWS DESK : ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಆಟೋ ಚಾಲಕರ ಹಾಗೂ ಮಾಲೀಕರ ಸಭೆ ನಡೆಯಿತು. ಸಭೆಯಲ್ಲಿ ಡಿ ವೈ ಎಸ್ ಪಿ ಮಹೇಶ್ ಕುಮಾರ್ ಮಾತನಾಡಿ, ವಾಹನ ಚಾಲಕರು ಸೂಕ್ತ ದಾಖಲಾತಿಗಳನ್ನು ಇರಿಸಿಕೊಳ್ಳತಕ್ಕದ್ದು, ದಾಖಲಾತಿ ಇಲ್ಲದೆ ವಾಹನ ಚಾಲನೆ ಮಾಡಿದಲ್ಲಿ ಪೊಲೀಸರು ವಾಹನಗಳನ್ನು ವಶಪಡಿಸಿಕೊಳ್ಳಲಿದ್ದಾರೆ ಎಂದು ಎಚ್ಚರಿಸಿದರು. ಪ್ರತಿಯೊಬ್ಬ ಚಾಲಕರು ಸಮವಸ್ತ್ರ ಧರಿಸಿ ಜೊತೆಗೆ ಸೂಕ್ತ ದಾಖಲೆಗಳನ್ನು ಹೊಂದಿರತಕ್ಕದ್ದು, ಇದಕ್ಕೆ ಒಂದು ವಾರಗಳ ಕಾಲಾವಕಾಶ ನೀಡಲಾಗಿದ್ದು ಅಷ್ಟರೊಳಗೆ ದಾಖಲಾತಿಗಳನ್ನು ಸರಿಪಡಿಸಿಕೊಳ್ಳಬೇಕು. ತಪ್ಪಿದಲ್ಲಿ ಕಟ್ಟು ನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು. ಪಟ್ಟಣದ ಅಂಗಡಿ ಮಾಲೀಕರು ತಮ್ಮ ವಾಹನಗಳನ್ನು ಅಂಗಡಿಗಳ ಮುಂದೆ ನಿಲ್ಲಿಸುವುದರಿಂದ ಪಾರ್ಕಿಂಗ್ ಸಮಸ್ಯೆ ಎದುರಾಗುತ್ತಿದೆ. ಅಂಗಡಿಗಳ ಮಾಲೀಕರು ತಮ್ಮ ವಾಹನಗಳನ್ನು ಅಂಗಡಿಗಳ ಮುಂದೆ ನಿಲ್ಲಿಸಿ ಸಮಸ್ಯೆ ತಂದೊಡಬಾರದು ಎಂದರು. ಈ ಸಂದರ್ಭ ಆಟೋ ಚಾಲಕರು ಆಟೋ ನಿಲುಗಡೆಗಾಗಿ ಮುಖ್ಯರಸ್ತೆಯಲ್ಲಿ ಸ್ಥಳಾವಕಾಶ ಕಲ್ಪಿಸುವಂತೆ ಕೋರಿದರು. ಈಗಾಗಲೇ ಬೇತು ರಸ್ತೆಯಲ್ಲಿ ಆಟೋ ನಿಲ್ದಾಣಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮುಖ್ಯ ರಸ್ತೆಯಲ್ಲಿ…

Read More

ಮಡಿಕೇರಿ ಫೆ.15 NEWS DESK : ವನ್ಯ ಜೀವಿಗಳಿಂದ ತಯಾರಿಸಿದ ವಸ್ತುಗಳ ಬಳಕೆಗೆ ಇರುವ ನಿಷೇಧದ ಬಗ್ಗೆ ಕೊಡಗಿನ ಜನತೆಗೆ ಆತಂಕ ಬೇಡ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ. ವಿಧಾನಸಭೆಯ ಮೊಗಶಾಲೆಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಪೊನ್ನಣ್ಣ, ಅರಣ್ಯ ಇಲಾಖೆಯು ಇಂತಹ ವಸ್ತುಗಳನ್ನು ಹಿಂದುರಿಗಸಲು ದಿನ ನಿಗದಿ ಪಡಿಸಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ಗಮನಿಸಿದ್ದು, ಇದರಿಂದ ಕೊಡಗಿನ ಜನತೆಗೆ ತೊಂದರೆಯಾಗಲಿದೆ. ಕೊಡಗಿನಲ್ಲಿ ಪಾರಂಪರಿಕವಾಗಿ ಮತ್ತು ಸಾಂಪ್ರಾದಾಯಿಕವಾಗಿ ಐನ್ ಮನೆಗಳಲ್ಲಿ, ದೇವಸ್ಥಾನಗಳಲ್ಲಿ ಹಾಗೂ ಪೀಚೆ ಕತ್ತಿ ಮುಂತಾದ ಆಭರಣಗಳಲ್ಲಿ ತಲತಲಾಂತರದಿಂದ ವನ್ಯ ಜೀವಿಯ ಉತ್ಪನ್ನಗಳನ್ನು ಬಳಕೆ ಮಾಡಲಾಗಿದ್ದು, ಇವುಗಳ ರಕ್ಷಣೆಯ ಜವಾಬ್ದಾರಿ ತಮ್ಮ ಮೇಲಿದೆ. ಈ ವಿಚಾರವನ್ನು ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿವರ ಗಮನಕ್ಕೆ ತರಲಾಗಿದೆ. ಸರ್ಕಾರದ ಮಟ್ಟದಲ್ಲಿ ಪರಿಹಾರ ಸಿಗದೇ ಇದ್ದಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿ ಪರಿಹಾರ ಒದಗಿಸಲು ತಾವು ಬದ್ದರಿದ್ದು ಯಾರು ಕೂಡ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಎ.ಎಸ್.ಪೊನ್ನಣ್ಣ ಭರವಸೆ…

Read More

ಮಡಿಕೇರಿ ಫೆ.15 NEWS DESK : ಜ್ಞಾನ ವ್ಯಾಪಿ ಮಸೀದಿ ಅತಿಕ್ರಮಣವಾಗಿದೆ ಎಂದು ಆರೋಪಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಡಿಕೇರಿ ಮುಸ್ಲಿಂ ಜಮಾತ್ ಗಳ ಒಕ್ಕೂಟ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ ಒಕ್ಕೂಟದ ಪದಾಧಿಕಾರಿಗಳು ಘೋಷಣೆಗಳನ್ನು ಕೂಗಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬರಹಗಾರರು ಹಾಗೂ ಚಿಂತಕರಾದ ಶಿವ ಸುಂದರ್ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಧರ್ಮದ ಹೆಸರಿನಲ್ಲಿ ರಾಜಕೀಯ ನಡೆಯುತ್ತಿದೆ. ಪ್ರತಿ ದೇವಾಲಯ ಇತಿಹಾಸ ತೆಗೆದು ನೋಡಿದರೆ 80 ದೇವಾಲಯಗಳು ಮಾತ್ರ ಹಾಳಾಗಿರಬಹುದು. ಪುರಾತನ ಕಾಲದ ದೇವಾಲಯಗಳನ್ನು ಅಗೆದರೆ ಜೈನ ಬಸದಿ, ಬೌದ್ಧ ಮಂದಿರಗಳು ಸಿಗುತ್ತವೆ. ಒಂದು ದೇವಾಲಯ, ಮಸೀದಿಯನ್ನು ಬೀಳಿಸುವುದು ಅಧರ್ಮ. ತ್ಯಾಗ ಬಲಿದಾನಕ್ಕೆ ಕರೆ ಕೊಟ್ಟವರ ಮಕ್ಕಳ್ಯಾರೂ ರಕ್ತ ಹರಿಸಿಲ್ಲ. ಬಡ ಹಿಂದೂಗಳನ್ನು ಜೈಲಿಗೆ ತಳ್ಳಿ ತಮಾಷೆ ನೋಡುತ್ತಿದ್ದಾರೆ. ಅವರ ಮಕ್ಕಳು ವಿದೇಶಗಳಲ್ಲಿ ಧರ್ಮವನ್ನೇ ಮರೆತು ಆರಾಮಾಗಿದ್ದಾರೆ. ಇದು ಕೇವಲ ಜನರನ್ನು ಒಡೆದು ಆಳುವ…

Read More