ಮಡಿಕೇರಿ ಫೆ.15 NEWS DESK : ಭಾರತೀಯ ಜನತಾ ಪಾರ್ಟಿಯ ಕೊಡಗು ಜಿಲ್ಲಾ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳನ್ನಾಗಿ ವಿರಾಜಪೇಟೆಯ ಕಾವಾಡಿ ಗ್ರಾಮದ ಪ್ರಸಾದ್ ಚಂಗಪ್ಪ ಹಾಗೂ ಮಡಿಕೇರಿಯ ಇಬ್ಬನಿವಳವಾಡಿ ಗ್ರಾಮದ ವಿನೋದ್ ಪಿ.ಎಂ ಅವರನ್ನು ಆಯ್ಕೆ ಮಾಡಿರುವುದಾಗಿ ಮೋರ್ಚಾದ ನೂತನ ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ ತಿಳಿಸಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷರ ಅನುಮೋದನೆ ಮೇರೆಗೆ ಪಕ್ಷ ಸಂಘಟನೆಯ ದೃಷ್ಟಿಯಿಂದ ಇವರಿಬ್ಬರನ್ನು ಪ್ರಧಾನ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ. ಜಿಲ್ಲೆಯಲ್ಲಿ ಯುವ ಸಮೂಹ ಬಿಜೆಪಿ ಪರವಾಗಿದ್ದು, ಮತ್ತಷ್ಟು ಯುವಬಲವನ್ನು ಹೆಚ್ಚಿಸಿ ಪಕ್ಷವನ್ನು ಬಲಿಷ್ಠಗೊಳಿಸಲಾಗುವುದು ಎಂದು ಮಹೇಶ್ ತಿಮ್ಮಯ್ಯ ಹೇಳಿದ್ದಾರೆ.
ಲೇಖಕ: admin
ನಾಪೋಕ್ಲು ಫೆ.15 NEWS DESK : ಮೂರ್ನಾಡಿನ ನಕ್ಷತ್ರ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಫೆ.18 ರಂದು ಮೂರ್ನಾಡುವಿನಲ್ಲಿ ಆಟೋ ಮಾಲೀಕರ ಹಾಗೂ ಚಾಲಕರ ಕುಟುಂಬಗಳ ಸಮ್ಮಿಲನ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಮೂರ್ನಾಡು ಪಾಂಡಾಣೆ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನ ನಕ್ಷತ್ರ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ಅಧ್ಯಕ್ಷ ಬಿ.ಡಿ ಉಮೇಶ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕಾಂತೂರು ಗ್ರಾ.ಪಂ ಅಧ್ಯಕ್ಷ ಬಿ.ಎಸ್.ಕುಶನ್ ರೈ, ತ್ರಿನೇತ್ರ ವಾಹನ ಮಾಲೀಕರ ಮತ್ತು ಚಾಲಕರ ಸಂಘದ ಅಧ್ಯಕ್ಷ ಕರವಂಡ ಸಜನ್ ಗಣಪತಿ , ಫ್ರೆಂಡ್ಸ್ ವಾಹನ ಮಾಲೀಕ ಮತ್ತು ಚಾಲಕರ ಸಂಘದ ಅಧ್ಯಕ್ಷ ರಿಯಾಜ್, ನಾಪೋಕ್ಲೂವಿನ ಆಟೋ ಮಾಲೀಕರ ಮತ್ತು ಚಾಲಕರ ಸಂಘದ ಅಧ್ಯಕ್ಷ ರಾಜೀವ್, ಅಮ್ಮತಿಯ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ಅಧ್ಯಕ್ಷ ಅಭಿಜಿತ್ , ಮೂರ್ನಾಡು ಪೋಲಿಸ್ ಉಪಟಾಲಯ ಪಿ.ಟಿ.ಶ್ರೀನಿವಾಸ್, ಮೂರ್ನಾಡು ಪೊಲೀಸ್ ಉಪಠಾಣೆ ಸಿಬ್ಬಂದಿ ರಾಜೇಂದ್ರ , ಕಾಂತೂರು ಗ್ರಾ.ಪಂ ಸದಸ್ಯ…
ಮಡಿಕೇರಿ ಫೆ.15 NEWS DESK : ಚೆಟ್ಟಳ್ಳಿ ಸಮೀಪದ ಕಂಡಕರೆ ಎಸ್‍ಕೆಎಸ್‍ಎಸ್‍ಎಫ್ 2024-26 ನೇ ಸಾಲಿನ ನೂತನ ಅಧ್ಯಕ್ಷರಾಗಿ ಸಿ.ಕೆ.ಸಂಶುದ್ದೀನ್,ಪ್ರಧಾನ ಕಾರ್ಯದರ್ಶಿಯಾಗಿ ಹಾರಿಸ್ ಬಾಖವಿ ಹಾಗೂ ಕೋಶಾಧಿಕಾರಿಯಾಗಿ ವಿ.ಪಿ.ಹಂಸ ಅವಿರೋಧ ಆಯ್ಕೆಯಾಗಿದ್ದಾರೆ. ಎಸ್.ಕೆ.ಎಸ್.ಎಸ್.ಎಫ್ ನಿಕಟಪೂರ್ವ ಅಧ್ಯಕ್ಷ ಕೆ.ಎಂ.ಮೊಹಮ್ಮದ್ ಅವರ ಅಧ್ಯಕ್ಷತೆಯಲ್ಲಿ ಕಂಡಕರೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಎಸ್.ಕೆ.ಎಸ್.ಎಸ್.ಎಫ್ ಜಿಲ್ಲಾ ಪ್ರತನಿಧಿ ಆರಿಫ್ ಫೈಝಿ ನೇತೃತ್ವದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕಾರ್ಯಾಧ್ಯಕ್ಷರಾಗಿ ಸಿ.ಎ.ಮೊಹಮ್ಮದ್ ಸಹಾದತ್, ಉಪಾಧ್ಯಕ್ಷರಾಗಿ ಸಿದ್ದೀಖ್ ಅಜ್ಹರಿ, ವಿ.ಪಿ.ಮುಸ್ತಫಾ ಮೌಲವಿ, ಸಹ ಕಾರ್ಯದರ್ಶಿಗಳಾಗಿ ಕೆ.ಎಂ.ಝೈನುದ್ದೀನ್ ಫೈಜಿ, ಉಸ್ತಾದ್ ರಹ್ಮಾನ್ ಶಾಫಿ ಆಯ್ಕೆಯಾಗಿದ್ದಾರೆ. ಸದಸ್ಯರಾಗಿ ಕೆ.ಎಂ.ಮೊಹಮ್ಮದ್, ಪಿ.ಎಂ.ಉಸೈನ್ ಅಜ್ಹರಿ, ಕೆ.ಎ.ಹುಸೇನ್, ಪಿ.ಕೆ.ಯೂಸುಫ್ , ಹಸನ್ ಕುಟ್ಟಿ, ಕೆ.ಎಂ.ಅಶ್ರಫ್ ಆಯ್ಕೆಯಾಗಿದ್ದಾರೆ. ಕೌನ್ಸಿಲರ್ ಗಳಾಗಿ ಯೂಸುಫ್ ಪಿ.ಕೆ, ಪಿ.ಎಂ.ಹುಸೈನ್ ಅಝ್ಹರಿ, ಪಿ.ಎ.ಯೂಸುಫ್ ಆಯ್ಕೆಯಾಗಿದ್ದಾರೆ.
ಮಡಿಕೇರಿ ಫೆ.15 NEWS DESK : ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ 2023-24ನೇ ಸಾಲಿನ ಜಿಲ್ಲಾ ಮಟ್ಟದ ನೋಂದಾಯಿತ ಕ್ಲಬ್ ನಡುವಿನ ಲೀಗ್ ಫುಟ್ಬಾಲ್ ಪಂದ್ಯವಾಳಿಯು ಮಾರ್ಚ್ 26 ರಿಂದ 31ರವರೆಗೆ ಅಮ್ಮತ್ತಿಯ ಫ್ರೌಡಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಕಾರ್ಯದರ್ಶಿ ಪಂದಿಕಂಡ ನಾಗೇಶ್ (ಈಶ್ವರ್) ತಿಳಿಸಿದ್ದಾರೆ. ಈ ಬಾರಿಯ 16 ತಂಡಗಳ ನಡುವೆ ಲೀಗ್ ಪಂದ್ಯವಾಳಿ ನಡೆಯಲಿದ್ದು, ಸಿ.ಆರ್.ಎಸ್ ನಲ್ಲಿ ಆಟಗಾರರನ್ನು ನೋಂದಾಯಿಸಿದ ತಂಡಗಳಿಗೆ ಮಾತ್ರ ಲೀಗ್ ಪಂದ್ಯಾವಳಿಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಇದೇ ಫೆಬ್ರವರಿ 24 ಮಧ್ಯಾಹ್ನ ಎರಡು ಗಂಟೆಗೆ ಎಲ್ಲಾ ಕ್ಲಬ್ ಗಳ ಪದಾಧಿಕಾರಿಗಳ ಸಭೆಯನ್ನು ಅಮ್ಮತ್ತಿಯ ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಕಛೇರಿಯಲ್ಲಿ ಕರೆಯಲಾಗಿದ್ದು, ಸಭೆಯಲ್ಲಿ ಜಿಲ್ಲಾ ಮಟ್ಟದ ಲೀಗ್ ಬಗ್ಗೆ ಮಾಹಿತಿ ನೀಡಲಾಗುವುದೆಂದು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಕಾರ್ಯದರ್ಶಿ ನಾಗೇಶ್ ಮಾಹಿತಿ ನೀಡಿದ್ದಾರೆ.
ಮಡಿಕೇರಿ ಫೆ.15 NEWS DESK : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಾಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ ‘ಯುವ ಸ್ಪಂದನ’ ಯೋಜನೆ-ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆ ಒದಗಿಸಲು ಹಾಗೂ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನದಯಡಿಯಲ್ಲಿ ಕಚೇರಿ ಕೆಲಸಕ್ಕೆ ಯುವ ಸಮಾಲೋಚಕರು ಹಾಗೂ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆದ್ದರಿಂದ 21 ರಿಂದ 35 ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟು ವಿದ್ಯಾಭ್ಯಾಸ ಮಾಡಿರುವ, ಕನ್ನಡವನ್ನು ಬರೆಯುವ ಹಾಗೂ ಸ್ಪಷ್ಟವಾಗಿ ಮಾತನಾಡುವ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸು, ಉತ್ತಮ ಅಂರ್ತವ್ಯಕ್ತಿತ್ವ, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯವನ್ನು ಹೊಂದಿರುವ, ಕೊಡಗು ಜಿಲ್ಲೆಯಲ್ಲಿ ಪ್ರಯಾಣಿಸುವಂತಹ, ಸೇವಾ ಮನೋಭಾವ ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವ ವಿವರಗಳು ಮತ್ತು ಅಂಕಪಟ್ಟಿಗಳೊಂದಿಗೆ ಫೆಬ್ರವರಿ, 28 ರಂದು ನೇರ ಸಂದರ್ಶನಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ…
ಮಡಿಕೇರಿ ಫೆ.15 : 2023-24 ನೇ ಸಾಲಿನ ಕೊಡಗು ಅರಣ್ಯ ವೃತ್ತದಲ್ಲಿ 16 ಅರಣ್ಯ ವೀಕ್ಷಕ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಲಾಖಾ ಅಂತರಜಾಲ www.aranya.gov.in ರಲ್ಲಿ ಪ್ರಕಟಿಸಲಾಗಿದೆ ಎಂದು ಕೊಡಗು ವೃತ್ತದ ಆಯ್ಕೆ ಪ್ರಾಧಿಕಾರ ಹಾಗೂ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅವರು ತಿಳಿಸಿದ್ದಾರೆ.
ಮಡಿಕೇರಿ ಫೆ.15 NEWS DESK : ವಿರಾಜಪೇಟೆಯಲ್ಲಿ ಫೆ.17 ರಂದು ಉದ್ಯೋಗ ಮೇಳ ನಡೆಯಲಿದೆ. ಕಲ್ಯಾಣಿ ಮೋಟಾರ್ಸ್ ನಲ್ಲಿ ಉದ್ಯೋಗಾವಕಾಶಗಳಿದ್ದು, ಆಸಕ್ತರು ಪಾಲ್ಗೊಳ್ಳಬಹುದು.
ಕುಶಾಲನಗರ ಫೆ.15 : ಕುಶಾಲನಗರ ಸಮೀಪದ ಕೊಪ್ಪ ಭಾರತ ಮಾತಾ ಪದವಿ ಕಾಲೇಜಿನ ವಿದ್ಯಾರ್ಥಿಗಳು ಪ್ರೇಮಿಗಳ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಿ ಪ್ರಕೃತಿ ಪ್ರೇಮ ಮೆರೆದ ಕಾರ್ಯಕ್ರಮ ಜನರ ಗಮನ ಸೆಳೆಯಿತು. ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಮತ್ತು ಭಾರತಮಾತಾ ಪದವಿ ಕಾಲೇಜು ಸಂಯುಕ್ತ ಆಶಯದಲ್ಲಿ ಕುಶಾಲನಗರ ಕೊಪ್ಪ ಗಡಿಭಾಗದ ಸೇತುವೆ ಕೆಳಭಾಗದಲ್ಲಿ ಕಾವೇರಿ ನದಿಯನ್ನು ಸ್ವಚ್ಛಗೊಳಿಸುವ ಮೂಲಕ ಐ ಲವ್ ಕಾವೇರಿ ಎಂಬ ಘೋಷವಾಕ್ಯದೊಂದಿಗೆ ವಿದ್ಯಾರ್ಥಿಗಳು ಸಂಘಟನೆಗಳ ಪ್ರಮುಖರು ನದಿಯನ್ನು ಸ್ವಚ್ಛಗೊಳಿಸಿದರು. ಈ ಸಂದರ್ಭ ಮಾತನಾಡಿದ ಭಾರತ್ ಮಾತಾ ಪದವಿ ಕಾಲೇಜಿನ ಪ್ರಾಂಶುಪಾಲರಾದ ಫಾ. ಎಬಿನ್ ಫೆ.14ರಂದು ಕೆಲವೆಡೆ ಯುವ ಪೀಳಿಗೆ ಪ್ರೇಮಿಗಳ ದಿನಾಚರಣೆ ಹೆಸರಿನಲ್ಲಿ ಕಾಲಹರಣ ಮಾಡುತ್ತಾರೆ. ಆದರೆ ನಮ್ಮ ವಿದ್ಯಾರ್ಥಿಗಳ ಮೂಲಕ ಆ ದಿನವನ್ನು ಕಾವೇರಿ ನದಿಯನ್ನು ಪ್ರೀತಿಸುವ ದಿನವಾಗಿಸಿ ಈ ಮೂಲಕ ನದಿ ಸ್ವಚ್ಛತೆ ಕಾರ್ಯಕ್ರಮ ಹಮ್ಮಿಕೊಂಡಿರುವುದು ಉತ್ತಮ ಕಾರ್ಯ ಎಂದು ಹೇಳಿದರು. ಸ್ವಚ್ಛ ಕಾವೇರಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು. ಇದೇ ಸಂದರ್ಭ…
ಮಡಿಕೇರಿ ಫೆ.15 : ಬೇಸಿಗೆ ಆರಂಭವಾಗಿದ್ದು, ಕುಡಿಯುವ ನೀರಿಗೆ ಯಾವುದೇ ರೀತಿ ಸಮಸ್ಯೆಯಾಗದಂತೆ ಕುಡಿಯುವ ನೀರು ಪೂರೈಕೆಗೆ ಕ್ರಮವಹಿಸಿ ಎಂದು ಕೊಡಗು ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿಯವರು ತಿಳಿಸಿದ್ದಾರೆ. ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾಕೋಟುಪರಂಬು ಗ್ರಾಮ ಪಂಚಾಯಿತಿಯ ಕುಂದು ಕೊರತೆ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮದ ಸ್ವಚ್ಚತೆಗೆ ಹೆಚ್ಚು ಆಧ್ಯತೆ ನೀಡಬೇಕು. ಯಾವುದೇ ಸಾರ್ವಜನಿಕ ದೂರಗಳು ಬಾರದ ರೀತಿಯಲ್ಲಿ ಕೆಲಸ ನಿರ್ವಹಿಸುವಂತೆ ಕಾಕೋಟುಪರಂಬು ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರಿಗೆ ತಿಳಿಸಿದರು. ಸಭೆಯಲ್ಲಿ ವಿದ್ಯುತ್ , ಜಲಜೀವನ್ ಮೀಷನ್, ಹಾಗೂ ಇನ್ನೀತರ ಯೋಜನೆಗಳ ಕುರಿತು ಚರ್ಚಿಸಲಾಯಿತು ನಂತರ ಮನರೇಗಾ ಯೋಜನೆಯ ಕಾಮಗಾರಿಗಳ ಕಡತಗಳನ್ನು ಪರಿಶೀಲಿಸಿ ಮನರೇಗಾ ಯೋಜನೆಯಡಿ ಅಭಿವೃದ್ದಿಗೊಂಡ ಕಾಮಗಾರಿಗಳನ್ನು ವೀಕ್ಷಿಸಿದರು. ಕಾಕೋಟುಪರಂಬು ಗ್ರಾ.ಪಂ.ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆರೋಗ್ಯ ಕೇಂದ್ರದ ಕುರಿತು ಮಾಹಿತಿ ಪಡೆದರು. ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳ ಆಹಾರದ ಗುಣಮಟ್ಟದ ಕುರಿತು ಖುದ್ದು ಪರಿಶೀಲಿಸಿದರು. ಸಭೆಯಲ್ಲಿ ಕಾಕೋಟುಪರಂಬು ಗ್ರಾ.ಪಂ.ಅಧ್ಯಕ್ಷರಾದ ಬಟ್ಟಕಾಳಂಡ ಕಾಮಿಸುರೇಶ್ ಗ್ರಾ.ಪಂ.ಸರ್ವಸದಸ್ಯರು…
ವಿರಾಜಪೇಟೆ ಫೆ.14 : ಜಮ್ಮು ಕಾಶ್ಮೀರ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ರಾಷ್ಟ್ರಮಟ್ಟದ ನೃತ್ಯ ಸ್ಪರ್ಧೆಯ ಫ್ರೀ ಸ್ಟೈಲ್ ವೈಯಕ್ತಿಕ ವಿಭಾಗದಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ 1ನೇ ತರಗತಿ ವಿದ್ಯಾರ್ಥಿ ಭವಿತ್ ವಿ.ಎಸ್ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದು ಭೂತಾನ್ ನಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟದ ನೃತ್ಯ ಚಾಂಪಿಯನ್ ಶಿಪ್‍ಗೆ ಆಯ್ಕೆಯಾಗಿದ್ದಾರೆ. ಇವನು ಕಾವೇರಿ ಶಾಲೆಯ ನೃತ್ಯ ಸಂಯೋಜಕ ವಿಷ್ಣು ಅವರಲ್ಲಿ ತರಬೇತಿ ಪಡೆದಿದ್ದು, ವಿದ್ಯಾರ್ಥಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಎಸ್.ಸುದೇಶ್, ಕಾರ್ಯದರ್ಶಿ ಬಿ.ಎನ್,ವಿನೋದ್, ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು, ಪೋಷಕರು ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸುತ್ತಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭ ಪೂರ್ವ ಪ್ರಾಥಮಿಕ ಸಂಯೋಜಕಿ ಅಮೃತ ಅರ್ಜುನ್ ಹಾಜರಿದ್ದರು.






