ಮಡಿಕೇರಿ ಫೆ.14 NEWS DESK : ರೋಟರಿ ಮಡಿಕೇರಿಯ ಅಧ್ಯಕ್ಷರಾಗಿ ಪಿಹೆಚ್‍ಎಫ್ ರೋಟರಿಯನ್ ಎನ್.ಡಿ.ಅಚ್ಚಯ್ಯ ಅವರು ಆಯ್ಕೆಯಾಗಿದ್ದಾರೆ. ರೋಟರಿ ಸಭಾಂಗಣದಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಅಚ್ಚಯ್ಯ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. 2024-25 ನೇ ಸಾಲಿನ ಅಧ್ಯಕ್ಷರನ್ನಾಗಿ ಈಗಾಗಲೇ ರೋಟರಿಯನ್ ಸುದಯ್ ನಾಣಯ್ಯ ಅವರನ್ನು ಆಯ್ಕೆ ಮಾಡಲಾಗಿದೆ.
ಲೇಖಕ: admin
ಮಡಿಕೇರಿ ಫೆ.14 NEWS DESK : ವಾಹನಗಳಿಗೆ ಹೆಚ್‍ಎಸ್‍ಆರ್‍ಪಿ ಅಳವಡಿಸಲು ನಿಗಧಿ ಪಡಿಸಿದ ಶುಲ್ಕ ಕಡಿತಗೊಳಿಸುವಂತೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ನ ಕೊಡಗು ಜಿಲ್ಲಾ ಘಟಕ ಒತ್ತಾಯಿಸಿದೆ. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ಯೂನಿಯನ್ ನ ಪದಾಧಿಕಾರಿಗಳು, ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಆದೇಶದಂತೆ ವಾಹನಗಳಿಗೆ ಗರಿಷ್ಠ ಭದ್ರತೆ ಹಾಗೂ ಸುರಕ್ಷತೆ ದೃಷ್ಟಿಯಿಂದ ರಾಜ್ಯದಲ್ಲಿ ಹೆಚ್‍ಎಸ್‍ಆರ್‍ಪಿ ಅಳವಡಿಸಲು ಶುಲ್ಕ ನಿಗಧಿಪಡಿಸಲಾಗಿದೆ. ಇದು ಆಟೋರಿಕ್ಷಾ, ಟ್ಯಾಕ್ಸಿ ಮತ್ತಿತರ ವಾಹನಗಳ ಚಾಲಕ, ಮಾಲೀಕರಿಗೆ ಹೊರೆಯಾಗಲಿದೆ ಎಂದರು. ಚಾಲಕರ ಒಂದು ದಿನದ ಗಳಿಕೆಯ ಹಣ ಇದಕ್ಕಾಗಿ ವ್ಯಯ ಮಾಡಬೇಕಾದ ಅನಿವಾರ್ಯತೆ ಎದುರಾಗಲಿದೆ. ದಿನ ಬಳಕೆಯ ಅಗತ್ಯ ವಸ್ತುಗಳ ದುಬಾರಿ ಬೆಲೆಯ ಹೊರೆಯೊಂದಿಗೆ ಹೆಚ್‍ಎಸ್‍ಆರ್‍ಪಿಗಾಗಿ ಹಣ ವ್ಯಯ ಮಾಡಲು ಶ್ರಮಿಕ ವರ್ಗದ ಚಾಲಕರಿಗೆ ಅಸಾಧ್ಯವಾಗಲಿದೆ ಎಂದು ಗಮನ ಸೆಳೆದರು. ಹೆಚ್‍ಎಸ್‍ಆರ್‍ಪಿ ಬಗ್ಗೆ ಸಾಕಷ್ಟು ಮಾಹಿತಿಯ ಕೊರತೆ ಇರುವುದರಿಂದ ಜಾಗೃತಿ ಮೂಡಿಸುವ ಅಗತ್ಯವಿದೆ. ಈಗ ನೀಡಿರುವ ಅವಧಿಯನ್ನು ಮತ್ತಷ್ಟು ವಿಸ್ತರಿಸಬೇಕು…
ಸುಂಟಿಕೊಪ್ಪ ಫೆ.14 NEWS DESK : ನೂತನವಾಗಿ ಬಿಜೆಪಿ ಮಂಡಲ ಅಧ್ಯಕ್ಷರಾಗಿ ಆಯ್ಕೆಯಾದ ಗೌತಮ್ ಅವರನ್ನು ಬಿಜೆಪಿ ಪ್ರಮುಖರು ಸನ್ಮಾನಿಸಿ, ಗೌರವಿಸಿದರು. ಸುಂಟಿಕೊಪ್ಪ ಹೋಟೆಲ್ ದ್ವಾರಕ ಸಂಭಾಗಣದಲ್ಲಿ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್, ಸುಂಟಿಕೊಪ್ಪ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್, ಶಕ್ತಿಕೇಂದ್ರದ ಅಧ್ಯಕ್ಷ ಪ್ರಶಾಂತ್ ಸನ್ಮಾನಿಸಿ ಗೌರವಿಸಿದರು. ಗೌತಮ್ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿದರು. ಈ ಸಂದರ್ಭ ಪ್ರಮುಖರಾದ ಧನು ಕಾವೇರಪ್ಪ, ಬಿ.ಕೆ.ಮೋಹನ್, ತಾಲೂಕು ಪಂಚಾಯಿತಿ ಮಾಜಿಸದಸ್ಯ ವಿಮಲಾವತಿ, ಗ್ರಾ.ಪಂ. ಸದಸ್ಯರುಗಳಾದ ಬಿ.ಎಂ.ಸುರೇಶ್, ಸೋಮನಾಥ್, ಮಂಜುನಾಥ್, ಶಾಂತಿ, ಮಂಜುಳಾ (ರಾಸತಿ), ಗೀತಾ, ವಸಂತಿ ಯುವ ಮೋರ್ಚಾ ಅಧ್ಯಕ್ಷ ವಿಘ್ನೇಶ್ ಹಾಗೂ ಕಾರ್ಯಕರ್ತರು ಮತ್ತಿತರರು ಇದ್ದರು.
ನಾಪೋಕ್ಲು ಫೆ.14 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಷೇತ್ರದ ಕೂರುಳಿ ಸುಭಾಷ್ ನಗರ ಪರಮೇಶ್ವರಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವವನ್ನು ಸುಭಾಷ್ ನಗರ ಭವನದಲ್ಲಿ ನಡೆಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಪುರುಷೋತ್ತಮ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದೀಪ ಬೆಳಗಿಸುವುದರ ಮೂಲಕ ವಾರ್ಷಿಕೋತ್ಸವವನ್ನು ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಮೇಲ್ವಿಚಾರಕರು ಸದಸ್ಯರಿಗೆ ಜ್ಞಾನ ವಿಕಾಸ, ಸುರಕ್ಷಾ ಆರೋಗ್ಯ, ರಕ್ಷಾ ಹಿಡುವಳಿ ಯೋಜನೆ ಬಗ್ಗೆ ಉತ್ತಮವಾದ ಮಾಹಿತಿ ನೀಡಿದರು. ಸಭಾ ಕಾರ್ಯಕ್ರಮದ ನಂತರ ವಿವಿಧ ಕ್ರೀಡಾ ಕೂಟಗಳು ನಡೆಯಿತು. ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಸದಸ್ಯರಿಗೆ ಬಹುಮಾನವನ್ನು ವಿತರಿಸಿ ಶುಭ ಹಾರೈಸಿದರು. ಈ ಸಂದರ್ಭ ಕಾರ್ಯಕ್ರಮದಲ್ಲಿ ಜ್ಞಾನ ವಿಕಾಸ ಸಮನ್ವಯಧಿಕಾರಿ ಮಾಲಿನಿ, ಸೇವಾಪ್ರತಿನಿಧಿ ಉಮಾಲಕ್ಷ್ಮಿ ಹಾಗೂ ಪರಮೇಶ್ವರಿ ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಫೆ.14 NEWS DESK : ಭಾರತೀಯ ಜನತಾ ಪಾರ್ಟಿಯ ಮಡಿಕೇರಿ ನಗರ ಮಂಡಲದ ಅಧ್ಯಕ್ಷರಾಗಿ ಉಮೇಶ್ ಸುಬ್ರಮಣಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಗಳನ್ನಾಗಿ ಬಿ.ಕೆ.ಜಗದೀಶ್ ಹಾಗೂ ಪಿ.ಯು.ಕವನ್ ಕಾವೇರಪ್ಪ ಅವರನ್ನು ನೂತನ ಅಧ್ಯಕ್ಷರು ನೇಮಕ ಮಾಡಿದ್ದಾರೆ. ಜಿಲ್ಲಾಧ್ಯಕ್ಷರ ಅನುಮೋದನೆ ಮೇರೆಗೆ ಪಕ್ಷದ ಮುಂದಿನ ಸಂಘಟನ್ಮಾತಕ ಚಟುವಟಿಕೆಗಳನ್ನು ಚುರುಕುಗೊಳಿಸುವ ದೃಷ್ಟಿಯಿಂದ ಪಕ್ಷಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಇವರಿಬ್ಬರನ್ನು ಪ್ರಧಾನ ಕಾರ್ಯದರ್ಶಿಗಳನ್ನಾಗಿ ಆಯ್ಕೆ ಮಾಡಿರುವುದಾಗಿ ಉಮೇಶ್ ಸುಬ್ರಮಣಿ ತಿಳಿಸಿದ್ದಾರೆ. ನಗರದಲ್ಲಿ ಬಿಜೆಪಿ ಬಲವನ್ನು ಮತ್ತಷ್ಟು ಹೆಚ್ಚಿಸುವ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗೆ ಅತ್ಯಧಿಕ ಮತಗಳನ್ನು ಗಳಿಸಿಕೊಡಲಾಗುವುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಫೆ.14 NEWS DESK : ಕರ್ನಾಟಕ ಸ್ಪೋರ್ಟ್ಸ್ ಡ್ಯಾನ್ಸ್ ಅಸೋಸಿಯೇಷನ್ ವತಿಯಿಂದ ಜಮ್ಮುವಿನಲ್ಲಿ ನಡೆದ ರಾಷ್ಟ್ರಮಟ್ಟದ ಸಮೂಹ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಕೌಶಿ ಕಾವೇರಮ್ಮ ಚಿನ್ನದ ಪದಕ ಪಡೆಯುವ ಮೂಲಕ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಕೆದಮುಳ್ಳೂರು ಗ್ರಾಮದ ವಿ.ಡಿ.ಡಾಲಿ ಮತ್ತು ವಿ.ಡಿ.ಸೀಮ ದಂಪತಿಯ ಪುತ್ರಿಯಾಗಿರುವ ವಿದುಷಿ ಹೇಮಾವತಿ ಕಾಂತರಾಜ್ ಹಾಗೂ ಕಾವ್ಯಶ್ರೀ ಅವರ ಬಳಿ ನೃತ್ಯ ತರಬೇತಿ ಪಡೆಯುತ್ತಿದ್ದಾಳೆ. ಅಂತರಾಷ್ಟ್ರೀಯ ಮಟ್ಟದ ನೃತ್ಯ ಸ್ಪರ್ಧೆ ಭೂತಾನ್ ನಲ್ಲಿ ನಡೆಯಲಿದೆ.
ಮಡಿಕೇರಿ ಫೆ.14 NEWS DESK : ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ (ಎಸ್ ಎಸ್ ಎಫ್) ಆಶ್ರಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದ ರಾಜ್ಯಮಟ್ಟದ ಸಾಹಿತ್ಯೋತ್ಸವದಲ್ಲಿ ಪಾಲಿಬೆಟ್ಟ ಮುಹಿಮ್ಮಾತುದ್ದೀನ್ ಅರಬಿ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಬಿ.ಎ.ಆದಿಲ್ ರಸ ಪ್ರಶ್ನೆ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಪಾಲಿಬೆಟ್ಟದ ಲೂರ್ಡ್ಸ್ ಶಾಲೆಯ 7ನೇ ತರಗತಿ ವಿದ್ಯಾರ್ಥಿಯಾಗಿರುವ ಆದಿಲ್, ಪಾಲಿಬೆಟ್ಟದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಯು.ಕೆ.ಅಶ್ರಫ್ ಹಾಗೂ ಅತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸಲೀನಾ ದಂಪತಿಗಳ ಪುತ್ರ.
ಮಡಿಕೇರಿ ಫೆ.14 NEWS DESK : ಅಲ್ ಅಮೀನ್ ಕೊಡಗು ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಜಿಲ್ಲೆಯ ಮುಸ್ಲಿಂ ಸಮಾಜದ ಬಡ ಹಾಗೂ ಅನಾಥ ಹೆಣ್ಣು ಮಕ್ಕಳ ಉಚಿತ ಸಾಮೂಹಿಕ ವಿವಾಹಕ್ಕೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. 18 ವರ್ಷ ಮೇಲ್ಪಟ್ಟ ಬಡ ಹಾಗೂ ಅನಾಥ ಹೆಣ್ಣು ಮಕ್ಕಳ ಪರವಾಗಿ ಪೋಷಕರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಗಳ ಮಾಹಿತಿಗಾಗಿ 9480 2385 35, 99640 76698, 94485 0 4282 7019095426 ಸಂಪರ್ಕಿಸ ಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಫೆ.20ರ ಒಳಗೆ ಮಡಿಕೇರಿಯ ಅಲ್ ಅಮೀನ್ ಕಚೇರಿಗೆ ತಲುಪಿಸುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ವಿರಾಜಪೇಟೆ ಫೆ.14 NEWS DESK : ವಿರಾಜಪೇಟೆಯ ಸರ್ಕಾರಿ ಬಿ.ಸಿ ಪ್ರೌಢಶಾಲೆ ದೇವಣಗೆರೆಯಲ್ಲಿ ಜಸ್ಟ್ ರೊಬೋಟಿಕ್ಸ್ ಹಾಗೂ ಓಜಸ್ವಿ ಫೌಂಡೇಶನ್ ಸಹಭಾಗಿತ್ವದಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ 8ನೇ ತರಗತಿಯ ರೋಬೋಟಿಕ್ ಸೈನ್ಸ್ ತರಬೇತಿ ಪಡೆದ ವಿದ್ಯಾರ್ಥಿಗಳ ವತಿಯಿಂದ “ಓಜಸ್ವಿ ಚೈತನ್ಯ” ಎಂಬ ಕಾರ್ಯಕ್ರಮ ನಡೆಯಿತು. ಬಿ.ಸಿ ಪ್ರೌಢಶಾಲೆ ದೇವಣಗೆರೆಯ ಮುಖ್ಯ ಶಿಕ್ಷಕ ಲೋಕೇಶ್ ಮಾತನಾಡಿ, ಮಕ್ಕಳಿಗೆ ಉತ್ತೇಜನ ನೀಡಿದರು. ಓಜಸ್ವಿ ಟ್ರಸ್ಟಿ ಕವಿತಾ ಹಾಗೂ ಜಸ್ಟ್ ರೋಬೋಟಿಕ್ಸ್ ಸಿ.ಇ.ಒ ಬ್ರಿಜೇಶ್ ಹೊಸ ತಂತ್ರಜ್ಞಾನದ ಬಗ್ಗೆ ವಿದ್ಯಾರ್ಥಿಗಳ ಊಹೆಗೂ ಮೀರಿದ ಕುತೂಹಲಕಾರಿಯಾದ ವಿಷಯಗಳನ್ನು ಪ್ರಸ್ತಾಪಿಸಿದರು. ನಂತರ ಕಾವೇರಿಶಾಲೆಯ ವಿದ್ಯಾರ್ಥಿಗಳು ತಾವು ಕಲಿತು ಕೊಂಡ ಮೋಟಾರ್ ಕಾರ್ ತಯಾರಿಸುವ ಹಾಗೂ ಚಲಾಯಿಸುವ ವಿಧಾನವನ್ನು ಅಲ್ಲಿನ ವಿದ್ಯಾರ್ಥಿಗಳಿಗೆ ಆಸಕ್ತಿದಾಯಕವಾಗಿ ಕಲಿಸಿ, ಆ ವಿಧ್ಯಾರ್ಥಿಗಳು ಪ್ರಾಯೋಗಿಕವಾಗಿ ಮಾಡಿ ತೋರಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳು ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಕಾರ್ಯಕ್ರಮದಲ್ಲಿ ಸರಕಾರಿ ಬಿ.ಸಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಲೋಕೇಶ್, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಸರಸ್ವತಿ, ಕಾವೇರಿ…
ಮಡಿಕೇರಿ ಫೆ.14 : ರಾಜ್ಯ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ ಬಡ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ಸಂಘಟನೆಯ ಕೊಡಗು ಜಿಲ್ಲಾ ಘಟಕ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಎಐಡಿಎಸ್‌ಒ ಸಂಘಟನೆಯ ಜಿಲ್ಲಾ ಸಂಚಾಲಕ ಸುಭಾಷ್, ರಾಜ್ಯ ಬಜೆಟ್ ಮಂಡನೆ ಸಂದರ್ಭ ಸರ್ಕಾರ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಗೆ ಸಂಬಂಧಿಸಿದ ಪ್ರಮುಖ ಸಮಸ್ಯೆಗಳ ನಿವಾರಣೆಗೆ ಕಾರ್ಯಕ್ರಮಗಳನ್ನು ರೂಪಿಸಬೇಕೆಂದು ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಬಡ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರಿಗೆ ನೆರವಾಗಬಲ್ಲ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ತಿಳಿಸಿದ್ದಾರೆ. ::: ಬೇಡಿಕೆಗಳು ::: ಕಳೆದ ಸರ್ಕಾರ ರಾಜ್ಯದಲ್ಲಿ ಹೇರಿದ ಎನ್‌ಇಪಿ-2020 ರ ನಿಯಮದ ಎಲ್ಲಾ ಶಿಫಾರಸ್ಸುಗಳನ್ನು ಹಿಂಪಡೆಯಬೇಕು. ಕಟ್ಟಡ ಕಾರ್ಮಿಕರ ಮಕ್ಕಳ ಶಿಷ್ಯ ವೇತನ ಹಿಂದಿನ ಮೊತ್ತವನ್ನೇ ಮುಂದುವರೆಸಬೇಕು. ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನದ ಹಣವನ್ನು ಅವರ ಬ್ಯಾಂಕ್ ಖಾತೆಗೆ ಹಾಕುವ ಪದ್ಧತಿಯನ್ನು ಹಿಂಪಡೆಯಬೇಕು. ರಾಜ್ಯದ…






