ಮಡಿಕೇರಿ ಫೆ.15 : 2023-24 ನೇ ಸಾಲಿನ ಕೊಡಗು ಅರಣ್ಯ ವೃತ್ತದಲ್ಲಿ 16 ಅರಣ್ಯ ವೀಕ್ಷಕ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಲಾಖಾ ಅಂತರಜಾಲ www.aranya.gov.in ರಲ್ಲಿ ಪ್ರಕಟಿಸಲಾಗಿದೆ ಎಂದು ಕೊಡಗು ವೃತ್ತದ ಆಯ್ಕೆ ಪ್ರಾಧಿಕಾರ ಹಾಗೂ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅವರು ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಫೆ.15 NEWS DESK : ವಿರಾಜಪೇಟೆಯಲ್ಲಿ ಫೆ.17 ರಂದು ಉದ್ಯೋಗ ಮೇಳ ನಡೆಯಲಿದೆ. ಕಲ್ಯಾಣಿ ಮೋಟಾರ್ಸ್ ನಲ್ಲಿ ಉದ್ಯೋಗಾವಕಾಶಗಳಿದ್ದು, ಆಸಕ್ತರು ಪಾಲ್ಗೊಳ್ಳಬಹುದು.
ಕುಶಾಲನಗರ ಫೆ.15 : ಕುಶಾಲನಗರ ಸಮೀಪದ ಕೊಪ್ಪ ಭಾರತ ಮಾತಾ ಪದವಿ ಕಾಲೇಜಿನ ವಿದ್ಯಾರ್ಥಿಗಳು ಪ್ರೇಮಿಗಳ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಿ ಪ್ರಕೃತಿ ಪ್ರೇಮ ಮೆರೆದ ಕಾರ್ಯಕ್ರಮ ಜನರ ಗಮನ ಸೆಳೆಯಿತು. ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಮತ್ತು ಭಾರತಮಾತಾ ಪದವಿ ಕಾಲೇಜು ಸಂಯುಕ್ತ ಆಶಯದಲ್ಲಿ ಕುಶಾಲನಗರ ಕೊಪ್ಪ ಗಡಿಭಾಗದ ಸೇತುವೆ ಕೆಳಭಾಗದಲ್ಲಿ ಕಾವೇರಿ ನದಿಯನ್ನು ಸ್ವಚ್ಛಗೊಳಿಸುವ ಮೂಲಕ ಐ ಲವ್ ಕಾವೇರಿ ಎಂಬ ಘೋಷವಾಕ್ಯದೊಂದಿಗೆ ವಿದ್ಯಾರ್ಥಿಗಳು ಸಂಘಟನೆಗಳ ಪ್ರಮುಖರು ನದಿಯನ್ನು ಸ್ವಚ್ಛಗೊಳಿಸಿದರು. ಈ ಸಂದರ್ಭ ಮಾತನಾಡಿದ ಭಾರತ್ ಮಾತಾ ಪದವಿ ಕಾಲೇಜಿನ ಪ್ರಾಂಶುಪಾಲರಾದ ಫಾ. ಎಬಿನ್ ಫೆ.14ರಂದು ಕೆಲವೆಡೆ ಯುವ ಪೀಳಿಗೆ ಪ್ರೇಮಿಗಳ ದಿನಾಚರಣೆ ಹೆಸರಿನಲ್ಲಿ ಕಾಲಹರಣ ಮಾಡುತ್ತಾರೆ. ಆದರೆ ನಮ್ಮ ವಿದ್ಯಾರ್ಥಿಗಳ ಮೂಲಕ ಆ ದಿನವನ್ನು ಕಾವೇರಿ ನದಿಯನ್ನು ಪ್ರೀತಿಸುವ ದಿನವಾಗಿಸಿ ಈ ಮೂಲಕ ನದಿ ಸ್ವಚ್ಛತೆ ಕಾರ್ಯಕ್ರಮ ಹಮ್ಮಿಕೊಂಡಿರುವುದು ಉತ್ತಮ ಕಾರ್ಯ ಎಂದು ಹೇಳಿದರು. ಸ್ವಚ್ಛ ಕಾವೇರಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು. ಇದೇ ಸಂದರ್ಭ…
ಮಡಿಕೇರಿ ಫೆ.15 : ಬೇಸಿಗೆ ಆರಂಭವಾಗಿದ್ದು, ಕುಡಿಯುವ ನೀರಿಗೆ ಯಾವುದೇ ರೀತಿ ಸಮಸ್ಯೆಯಾಗದಂತೆ ಕುಡಿಯುವ ನೀರು ಪೂರೈಕೆಗೆ ಕ್ರಮವಹಿಸಿ ಎಂದು ಕೊಡಗು ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿಯವರು ತಿಳಿಸಿದ್ದಾರೆ. ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾಕೋಟುಪರಂಬು ಗ್ರಾಮ ಪಂಚಾಯಿತಿಯ ಕುಂದು ಕೊರತೆ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮದ ಸ್ವಚ್ಚತೆಗೆ ಹೆಚ್ಚು ಆಧ್ಯತೆ ನೀಡಬೇಕು. ಯಾವುದೇ ಸಾರ್ವಜನಿಕ ದೂರಗಳು ಬಾರದ ರೀತಿಯಲ್ಲಿ ಕೆಲಸ ನಿರ್ವಹಿಸುವಂತೆ ಕಾಕೋಟುಪರಂಬು ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರಿಗೆ ತಿಳಿಸಿದರು. ಸಭೆಯಲ್ಲಿ ವಿದ್ಯುತ್ , ಜಲಜೀವನ್ ಮೀಷನ್, ಹಾಗೂ ಇನ್ನೀತರ ಯೋಜನೆಗಳ ಕುರಿತು ಚರ್ಚಿಸಲಾಯಿತು ನಂತರ ಮನರೇಗಾ ಯೋಜನೆಯ ಕಾಮಗಾರಿಗಳ ಕಡತಗಳನ್ನು ಪರಿಶೀಲಿಸಿ ಮನರೇಗಾ ಯೋಜನೆಯಡಿ ಅಭಿವೃದ್ದಿಗೊಂಡ ಕಾಮಗಾರಿಗಳನ್ನು ವೀಕ್ಷಿಸಿದರು. ಕಾಕೋಟುಪರಂಬು ಗ್ರಾ.ಪಂ.ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆರೋಗ್ಯ ಕೇಂದ್ರದ ಕುರಿತು ಮಾಹಿತಿ ಪಡೆದರು. ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳ ಆಹಾರದ ಗುಣಮಟ್ಟದ ಕುರಿತು ಖುದ್ದು ಪರಿಶೀಲಿಸಿದರು. ಸಭೆಯಲ್ಲಿ ಕಾಕೋಟುಪರಂಬು ಗ್ರಾ.ಪಂ.ಅಧ್ಯಕ್ಷರಾದ ಬಟ್ಟಕಾಳಂಡ ಕಾಮಿಸುರೇಶ್ ಗ್ರಾ.ಪಂ.ಸರ್ವಸದಸ್ಯರು…
ವಿರಾಜಪೇಟೆ ಫೆ.14 : ಜಮ್ಮು ಕಾಶ್ಮೀರ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ರಾಷ್ಟ್ರಮಟ್ಟದ ನೃತ್ಯ ಸ್ಪರ್ಧೆಯ ಫ್ರೀ ಸ್ಟೈಲ್ ವೈಯಕ್ತಿಕ ವಿಭಾಗದಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ 1ನೇ ತರಗತಿ ವಿದ್ಯಾರ್ಥಿ ಭವಿತ್ ವಿ.ಎಸ್ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದು ಭೂತಾನ್ ನಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟದ ನೃತ್ಯ ಚಾಂಪಿಯನ್ ಶಿಪ್‍ಗೆ ಆಯ್ಕೆಯಾಗಿದ್ದಾರೆ. ಇವನು ಕಾವೇರಿ ಶಾಲೆಯ ನೃತ್ಯ ಸಂಯೋಜಕ ವಿಷ್ಣು ಅವರಲ್ಲಿ ತರಬೇತಿ ಪಡೆದಿದ್ದು, ವಿದ್ಯಾರ್ಥಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಎಸ್.ಸುದೇಶ್, ಕಾರ್ಯದರ್ಶಿ ಬಿ.ಎನ್,ವಿನೋದ್, ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು, ಪೋಷಕರು ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸುತ್ತಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭ ಪೂರ್ವ ಪ್ರಾಥಮಿಕ ಸಂಯೋಜಕಿ ಅಮೃತ ಅರ್ಜುನ್ ಹಾಜರಿದ್ದರು.
ಕಡಂಗ ಫೆ.14 NEWS DESK : ಕಡಂಗ ಅರಪಟ್ಟು ಗ್ರಾಮಕ್ಕೆ ಸೇರಿರುವ ಪುರಾತನ ಶ್ರೀ ಉಮಾಮಹೇಶ್ವರ ದೇವಾಲಯದ ದೇವರ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಉತ್ಸವದ ಅಂಗವಾಗಿ ಮುಂಜಾನೆ ಗಣಪತಿ ಹೋಮ ನೆಡೆಸಲಾಯಿತು. ನಂತರ ಸಾಮೂಹಿಕ ರುದ್ರಾಭಿಷೇಕ, ಎತ್ತು ಪೋರಾಟ ಹಾಗೂ ಮಹಾಪೂಜೆ ನೆಡೆಯಿತು ನೆರವೇರಿತು. ನಂತರ ನೆರೆದಿದ್ದ ಭಕ್ತರಿಗೆ ಪ್ರಸಾದ ವಿತರಣೆ ಹಾಗೂ ಅನ್ನದಾನ ನಡೆಯಿತು. ವಿವಿಧ ಗ್ರಾಮಗಳಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಉತ್ಸವದಲ್ಲಿ ದೇವಾಲಯದ ಅಧ್ಯಕ್ಷರಾದ ನೆರಪಂಡ ಚಿತ್ರ ಬೆಳ್ಳಿಪ್ಪ ಹಾಗೂ ಆಡಳಿತ ಮಂಡಳಿ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು. ವರದಿ : ನೌಫಲ್ ಕಡಂಗ
ಮಡಿಕೇರಿ ಫೆ.14 NEWS DESK : ‘ಕೊಡವ ತಕ್ಕ್ ಎಳ್ತ್‌ಕಾರಡ ಕೂಟ’ ಹಾಗೂ ವೀರಾಜಪೇಟೆ ‘ರೋಟರಿ ಸಂಸ್ಥೆ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಫೆ.17 ರಂದು ‘ಕೊಡವ ತಕ್ಕ್ ಎಳ್ತ್‌ಕಾರಡ ಕೂಟದ’ ‘ಜನಪ್ರಿಯ ಕೊಡವ ಸಾಹಿತ್ಯ ಮಾಲೆ’ ಯೋಜನೆಯಲ್ಲಿ ಚೊಟ್ಟೆಯಾಂಡಮಾಡ ಲಲಿತ ಕಾರ್ಯಪ್ಪರವರು ಬರೆದ 188ನೆ ಹೆಜ್ಜೆಯ ಹಾಗೂ ನೂರೇರ ಸರಿತ ಉತ್ತಯ್ಯ ಬರೆದ 189ನೇ ಹೆಜ್ಜೆಯ ಎರಡು ನೂತನ ಪುಸ್ತಕ ನಡೆಯಲಿದೆ. ಕೂಟ’ದ ಅಧ್ಯಕ್ಷ ಚೆಟ್ಟಂಗಡ ರವಿ ಸುಬ್ಬಯ್ಯ ಅಧ್ಯಕ್ಷತೆಯಲ್ಲಿ ಪೂರ್ವಾಹ್ನ 10 ಗಂಟೆಗೆ ವಿರಾಜಪೇಟೆಯ ರೋಟರಿ ವಿದ್ಯಾಸಂಸ್ಥೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ‘ರೋಟರಿ ಸಂಸ್ಥೆಯ ಅಧ್ಯಕ್ಷ ಮುಕ್ಕಾಟಿರ ಬನ್ಸಿ ಪೂವಣ್ಣ, ಕಾರ್ಯದರ್ಶಿ ಬಲ್ಯಮಂಡ ಮಧು ಮಾದಪ್ಪ, ಖಜಾಂಚಿ ಅಮ್ಮಣಕುಟ್ಟಂಡ ಸರೋಜ ಕಾರ್ಯಪ್ಪ, ರೋಟರಿ ವಿದ್ಯಾಸಂಸ್ಥೆಯ ಪ್ರಿನ್ಸಿಪಾಲ್ ಹೆಚ್.ಜೆ. ವಿಶಾಲಾಕ್ಷಿ, ದಾನಿಗಳಾದ ಬಾದುಮಂಡ ಚಿಮ್ಮ ಉತ್ತಯ್ಯ, ಬೊಪ್ಪಂಡ ತಾರ ಕರ್0ಬಯ್ಯ ಲೇಖಕಿಯರಾದ ಚೊಟ್ಟೆಯಾಂಡಮಾಡ ಲಲಿತ ಕಾರ್ಯಪ್ಪ ಹಾಗೂ ನೂರೇರ ಸರಿತ ಉತ್ತಯ್ಯ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿಪ್ರಾಥಮಿಕ ಶಾಲಾ ಮಕ್ಕಳಿಗೆ ಕೊಡವ ಭಾಷೆಯ…
ಮಡಿಕೇರಿ ಫೆ.14 NEWS DESK : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಕೊಡಗು ಇವರ ವತಿಯಿಂದ 2023-24 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತರ ಸಮುದಾಯದ ಜನರಿಗೆ ವ್ಯಾಪಾರ, ಸಣ್ಣ ಪ್ರಮಾಣದ ಗುಡಿ ಕೈಗಾರಿಕೆ, ಸೇವಾ ಕ್ಷೇತ್ರ, ಕೃಷಿ ಆಧಾರಿತ ಮುಂತಾದ ಚಟುವಟಿಕೆಗಳನ್ನು ಪ್ರಾರಂಭಿಸಲು ಸಾಲ ಮತ್ತು ಸಹಾಯಧನ ಒದಗಿಸಲಾಗುವುದು. ಘಟಕ ವೆಚ್ಚ ಶೇ.33 ಅಥವಾ ಗರಿಷ್ಠ ಮಿತಿ ರೂ.1 ಲಕ್ಷದ ಸಹಾಯಧನ ನೀಡಲಾಗುವುದು ಸಾಲ ಹಾಗೂ ಸಹಾಯಧನವನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ವೆಬ್‍ಸೈಟ್: https://kmdconline.karnataka.gov.in/ ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು. ಆನ್‍ಲೈನ್ ಅರ್ಜಿ ಸಲ್ಲಿಸಿದ ನಂತರ ಸೂಕ್ತ ದಾಖಲಾತಿಗಳ ಪ್ರತಿಗಳನ್ನು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ,…
ವಿರಾಜಪೇಟೆ ಫೆ.14 NEWS DESK : ಜಮ್ಮುವಿನಲ್ಲಿ ನಡೆದ ರಾಷ್ಟ್ರಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಕೂರ್ಗ್ ವ್ಯಾಲಿ ಶಾಲೆಯ ವಿದ್ಯಾರ್ಥಿನಿ ಗಗನಶ್ರೀ ಹಾಗೂ ಆರ್.ವಿನಿಷ ಕಪಲ್ ಮತ್ತು ಗುಂಪು ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಭೂತಾನ್‍ನಲ್ಲಿ ನಡೆಯುವ ಅಂತರಾಷ್ಟ್ರೀಯ ನೃತ್ಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಗಗನಶ್ರೀ ವಿರಾಜಪೇಟೆಯ ವಿಜಯನಗರದ ನಿವಾಸಿ ಶಶಿಕುಮಾರ್ ಮತ್ತು ದಿವ್ಯ ಅವರ ಪುತ್ರಿ. ವಿರಾಜಪೇಟೆ ಸುಭಾಷ್ ನಗರದ ನಿವಾಸಿ ಕೆ.ರಜನಿಕಾಂತ್ ಮತ್ತು ಆರ್.ಅರ್ಪಿತಾ ಅವರ ಪುತ್ರಿ. ವಿನಿಷ ಆರ್ ಇವರಿಬ್ಬರು ವಿದ್ಯಾರ್ಥಿಗಳು ವಿರಾಜಪೇಟೆಯ ಟೀಂ ಇಂಟೋಪೀಸ್ ನೃತ್ಯ ಶಾಲೆಯಲ್ಲಿ ನೃತ್ಯ ಅಭ್ಯಾಸ ಮಾಡುತ್ತಿದ್ದು, ವಿಷ್ಣು ಅವರು ತರಬೇತಿ ನೀಡುತ್ತಿದ್ದಾರೆ.
ವಿರಾಜಪೇಟೆ ಫೆ.14 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಬಾಪೂಜಿ ಪ್ರಭಂದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುವ ಪಟ್ಟಣದ ಸಂತ ಅನ್ನಮ್ಮ ಪ್ರೌಢ ಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿ ಅನಿರುಧ್ ಮನೋಜ್ ಅನ್ನು ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು. ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕರಾದ ರೆ. ಫಾ. ಐಸಾಕ್ ರತ್ನಾಕರ್ ರವರು ವಿದ್ಯಾರ್ಥಿ ಅನಿರುಧ್ ನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಮಾತನಾಡಿದ ವ್ಯವಸ್ಥಾಪಕರು, ವಿದ್ಯಾರ್ಥಿಯು ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ವಿದ್ಯಾಸಂಸ್ಥೆಯ ಕೀರ್ತಿಯನ್ನು ರಾಜ್ಯಮಟ್ಟಕ್ಕೆ ಪಸರಿಸಿದ್ದಾನೆ. ಮಾತ್ರವಲ್ಲದೆ ಗುರುಗಳು ಹಾಗೂ ಪೋಷಕರಿಗೂ ಹೆಮ್ಮೆಯ ವಿದ್ಯಾರ್ಥಿಯಾಗಿದ್ದಾನೆ ಎಂದರು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಬೆನ್ನಿ ಜೋಸೆಫ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿಯರಾದ ಸಿಸ್ಟರ್ ರೋಸಿ, ಸಿಸ್ಟರ್ ಐಡಾ, ಸಂತ ಅನ್ನಮ್ಮ ಪ್ರೌಢ ಶಾಲಾ ಶಿಕ್ಷಕಿ ಹಾಗೂ ಬಹುಮಾನ ಪುರಸ್ಕೃತ ಅನಿರುಧ್ ನ ತಾಯಿ ಕವಿತಾ ಮನೋಜ್ ಹಾಜರಿದ್ದರು.






