ಮಡಿಕೇರಿ ಜ.4 :NEWS DESK ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಭಾಗಮಂಡಲ ಮೇಲು ಸೇತುವೆ ಕಾಮಗಾರಿಯನ್ನು ಈ ತಿಂಗಳಾಂತ್ಯಕ್ಕೆ ಪೂರ್ಣಗೊಳಿಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ. ಮುಂದಿನ ತಿಂಗಳ ಮೊದಲ ವಾರ ಮುಖ್ಯಮಂತ್ರಿಗಳಿಂದ ಉದ್ಘಾಟನೆಗೊಳ್ಳುವಂತೆ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ತಿಳಿಸಿದ್ದಾರೆ. ಕುಶಾಲನಗರ ಕಾವೇರಿ ನೀರಾವರಿ ನಿಗಮ ಅಧೀಕ್ಷಕ ಅಭಿಯಂತರರ ಕಚೇರಿಯ ಸಭಾಂಗಣದಲ್ಲಿ ಜಿಲ್ಲೆಯ ಶಾಸಕರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಸಚಿವರು ಮಾತನಾಡಿದರು. ಮುಂದಿನ ತಿಂಗಳು ಮಡಿಕೇರಿಯಲ್ಲಿ ಸರ್ಕಾರದ ಉಚಿತ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭ ಭಾಗಮಂಡಲದ ಸೇತುವೆ ಉದ್ಘಾಟನೆಗೊಳ್ಳಲಿದೆ ಎಂದರು. ಆಡಳಿತಕ್ಕೆ ಚುರುಕು ನೀಡುವ ನಿಟ್ಟಿನಲ್ಲಿ ಅಧಿಕಾರಿಗಳ ಸಭೆ ನಡೆಸಲಾಗಿದೆ. ಜಿಲ್ಲೆಯಲ್ಲಿ ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ನಮ್ಮ ಸರ್ಕಾರ ಆದ್ಯತೆ ನೀಡಲಿದೆ ಎಂದು ಸಚಿವ…
ಲೇಖಕ: admin
ಮಡಿಕೇರಿ ಜ.4 : ಕೊಡಗು ಜಿಲ್ಲೆಯ ವಿವಿಧೆಡೆ ಅಕಾಲಿಕ ಮಳೆಯಾಗುತ್ತಿದೆ. ಬಹುತೇಕ ಕಡೆ ಸಾಧಾರಣ ಮಳೆ ನಿರಂತರವಾಗಿ ಸುರಿಯುತ್ತಿದೆ. ಕಾಫಿ ಮತ್ತು ಭತ್ತದ ಕೃಷಿಕರು ಬೆಳೆ ಹಾನಿಯ ಆತಂಕ ಎದುರಿಸುತ್ತಿದ್ದಾರೆ. ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ, ಕುಶಾಲನಗರ ಮತ್ತು ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯ ಹಲವೆಡೆ ಮಳೆಯಾಗಿದೆ. ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿ ನಗರದಲ್ಲಿ ಮಳೆ, ಮೈಕೊರೆಯುವ ಚಳಿ ಮತ್ತು ಮಂಜು ಮುಸುಕಿದ ವಾತಾವರಣವಿದೆ. ಜಿಲ್ಲೆಯಲ್ಲಿ ಕಾಫಿ ಫಸಲು ಹಣ್ಣಾಗಿದ್ದು, ಬಹುತೇಕ ಕಡೆಗಳಲ್ಲಿ ಕೊಯ್ಲು ಕಾರ್ಯ ಆರಂಭಗೊoಡಿದೆ. ಮಳೆ ಮತ್ತು ಮೋಡ ಕವಿದ ವಾತಾವರಣದಿಂದ ಕಾಫಿಯ ಗುಣಮಟ್ಟ ಕುಸಿಯುವ ಭೀತಿ ಎದುರಾಗಿದೆ. ಕೊಯ್ಲು ಮಾಡದೆ ಇರುವ ಕಾಫಿ ಕೊಳೆತು ಉದುರಲಿವೆ. ಮಾತ್ರವಲ್ಲದೆ ಈಗಾಗಲೇ ಕೊಯ್ಲು ಮಾಡಿರುವ ಕಾಫಿಯನ್ನು ಕಣಗಳಲ್ಲಿ ಒಣಗಿಸುವುದೇ ಸವಾಲಾಗಿ ಪರಿಣಮಿಸಿದೆ. ಮತ್ತೊಂದೆಡೆ ಭತ್ತದ ಫಸಲು ಕೂಡ ಕಟಾವಿಗೆ ಬಂದಿದ್ದು, ಬೆಳೆ ನಷ್ಟವಾಗುವ ಆತಂಕ ರೈತರಲ್ಲಿದೆ. ಕಟಾವು ಮಾಡಲಾಗಿರುವ ಭತ್ತದ ಫಸಲನ್ನು ಗದ್ದೆಯಲ್ಲೇ ಒಣಗಲು ಬಿಡಲಾಗಿದ್ದು, ಮಳೆ ನೀರು ಮತ್ತು ಮಂಜಿನಿಂದಾಗಿ ಹಾನಿಯಾಗುವ ಸಂಭವ…
ಬೆಂಗಳೂರು ಜ.4 : ಕೊಡಗು ಜಿಲ್ಲೆಯಲ್ಲಿ ಏರ್ ಸ್ಟ್ರಿಪ್ ನಿರ್ಮಾಣಕ್ಕೆ ಅಗತ್ಯವಿರುವ ಜಾಗವನ್ನ ಜಿಲ್ಲಾಡಳಿತಕ್ಕೆ ವರ್ಗಾವಣೆ ಮಾಡುವ ನಿಟ್ಟಿನಲ್ಲ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವರು ಭರವಸೆ ನೀಡಿದ್ದಾರೆ. ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್ ಬೊಸರಾಜು ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ವಿಸ್ತ್ರುತವಾಗಿ ಚರ್ಚೆ ನಡೆಸಲಾಯಿತು. ಕೆಲವು ದಿನಗಳ ಹಿಂದೆ ಕೊಡಗು ಜಿಲ್ಲೆಯಲ್ಲಿ ನಡೆಸಿದ ಕೆಡಿಪಿ ಸಭೆಯಲ್ಲಿ ಕಂದಾಯ ಇಲಾಖೆಗೆ ಸಂಬಂದಿಸಿದಂತೆ ಹಲವಾರು ಸಮಸ್ಯೆಗಳ ಬಗ್ಗೆ ನನ್ನ ಗಮನ ಸೆಳೆಯಲಾಗಿತ್ತು. ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಇಂದು ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರೊಂದಿಗೆ ಇಂದು ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಜಿಲ್ಲೆಯಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ತಾಲ್ಲೂಕುಗಳಲ್ಲಿ ಮಿನಿ ವಿಧಾನಸೌಧ ಹಾಗೂ ಆಡಳಿತ ಭವನ ನಿರ್ಮಾಣಕ್ಕೆ ಅಗತ್ಯ ಅನುದಾನ ಹಾಗೂ ಅನುಮತಿಯನ್ನು ದೊರಕಿಸಿಕೊಡುವ ಬಗ್ಗೆ ಚರ್ಚಿಸಲಾಯಿತು.…
ಮಡಿಕೇರಿ ಜ.4 : ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಬಲಮುರಿಯಲ್ಲಿ ಕಾವೇರಿ ನದಿಯಿಂದ ಅಕ್ರಮವಾಗಿ ಹೊರ ತೆಗೆಯಲಾಗಿದ್ದ ಮರಳು ಹಾಗೂ ಮರಳು ಗಣಿಗಾರಿಕೆಗೆ ಬಳಸಿದ್ದ 2 ಕಬ್ಬಿಣದ ತೆಪ್ಪಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೆ.ಸಿ.ಬಿ ಯಂತ್ರದ ಮೂಲಕ ಹೊಳೆದಂಡೆಗೆ ಹೋಗುವ ಕಚ್ಚಾ ರಸ್ತೆಗೆ ಚರಂಡಿಯನ್ನು ತೋಡುವ ಮೂಲಕ ಅಕ್ರಮ ಮರಳುಗಾರಿಕೆ ನಡೆಯದಂತೆ ನಾಪೋಕ್ಲು ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಕ್ರಮ ಕೈಗೊಂಡಿದ್ದಾರೆ. ಬಲಮುರಿಯಿಂದ 3 ಕಿ.ಮೀ. ದೂರದ ಕಚ್ಚಾ ರಸ್ತೆಯ ಮೂಲಕ ರಾತ್ರಿ ವೇಳೆ ಅಕ್ರಮ ಮರಳುಗಾರಿಕೆ ನಡೆಯುತ್ತಿತ್ತು ಎಂದು ಆರೋಪಿಸಲಾಗಿದೆ. ನಾಪೋಕ್ಲು ವ್ಯಾಪ್ತಿಯಲ್ಲಿ ನಿರಂತರವಾಗಿ ಅಕ್ರಮ ಮರಳು ದಂಧೆ ನಡೆಯುತ್ತಿದ್ದು, ಜಿಲ್ಲೆಯ ಶಾಸಕರು ಈ ಬಗ್ಗೆ ಗಮನ ಹರಿಸಿ ಕಡಿವಾಣ ಹಾಕಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ವಿರಾಜಪೇಟೆ ಜ.4 : ಕನ್ನಡ ಭಾಷೆಯನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಸರಕಾರಿ ಪ್ರೌಢಶಾಲೆಯ ಮುಖ್ಯೋಪಧ್ಯಾಯರಾದ ಜೆ.ಸಿ.ಜಯಂತಿ ಮೆಚ್ಚುಗೆ ವ್ಯಕ್ತಪಡಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕೊಂಡಂಗೇರಿ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಶ್ರೀಮತಿ ವಿಜಯ ವಿಷ್ಣುಭಟ್ ದತ್ತಿನಿಧಿಯ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡದ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳ ಅಗತ್ಯವಿದೆ. ಅಂತಹ ಕಾರ್ಯಕ್ರಮವನ್ನು ಹಮ್ಮಿಕೊಂಡು ಸಾಹಿತ್ಯ ಪರಿಷತ್ ಉತ್ತಮ ಕಾರ್ಯ ಮಾಡುತ್ತಿದೆ. ಪ್ರತಿಯೊಬ್ಬರು ಸಾಹಿತ್ಯದ ಅಭಿರುಚಿ ಮೂಡಿಸಿಕೊಂಡು ಸಾಹಿತ್ಯವನ್ನು ಉಳಿಸಲು ಕೈಜೋಡಿಸಬೇಕೆಂದು ಮನವಿ ಮಾಡಿದರು. ಕೊಡಗಿನ ಮಹಿಳಾ ಸಾಹಿತಿಗಳು ಎಂಬ ವಿಷಯದ ಕುರಿತು ಸೋಮೆಯಂಡ ಕೌಶಲ್ಯ ಸತೀಶ್ ಉಪನ್ಯಾಸ ನೀಡಿ ಮಾತನಾಡಿ, ಶತಮಾನಗಳಿಂದ ನಮ್ಮ ಕವಿಗಳು ಕನ್ನಡ ಭಾಷೆಯನ್ನು ಅತ್ಯಂತ ಜತನದಿಂದ ಕಾಪಾಡಿಕೊಂಡು ಬಂದಿದ್ದಾರೆ. ಆ ಕಾಲದ ಕವಿಗಳು ಕೇವಲ ಕವಿತೆ ಬರೆಯುವುದು ಮಾತ್ರವಲ್ಲದೇ ತಮ್ಮ ರಾಜ್ಯವನ್ನು ಕಾಪಾಡುವ ಕಾರ್ಯ ಮಾಡುತ್ತಿದ್ದರು…
ಮಡಿಕೇರಿ ಜ.4 : ಸ್ವಾತಂತ್ರ್ಯದ 100 ನೇ ವರ್ಷಕ್ಕೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯಾಗಿದೆ. ಈ ದೃಷ್ಟಿಕೋನವು ಆರ್ಥಿಕ ಬೆಳವಣಿಗೆ, ಸಾಮಾಜಿಕ ಪ್ರಗತಿ, ಪರಿಸರ ಸುಸ್ಥಿರತೆ ಮತ್ತು ಸೇರಿದಂತೆ ಅಭಿವೃದ್ಧಿಯ ವಿವಿಧ ಅಂಶಗಳನ್ನು ಒಳಗೊಂಡಿದೆ. ಉತ್ತಮ ಆಡಳಿತ. ಈ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ಭಾರತದ ಯುವಕರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಅವರು ಭಾರತದಲ್ಲಿನ ಅತಿದೊಡ್ಡ ಜನಸಂಖ್ಯಾ ಗುಂಪು, ಮತ್ತು ಅವರು ಸಾಮಥ್ರ್ಯ ಮತ್ತು ಶಕ್ತಿಯಿಂದ ತುಂಬಿದ್ದಾರೆ. ವಿಕ್ಷಿತ್ ಭಾರತ್@ 2047 ಅಭಿಯಾನಕ್ಕಾಗಿ ಯುವಕರಿಂದ ಆಲೋಚನೆಗಳನ್ನು ಒಳಗೊಂಡಂತೆ ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಯುವಕರನ್ನು ತೊಡಗಿಸಿಕೊಳ್ಳಲು ಸರ್ಕಾರವು ಹಲವಾರು ಉಪಕ್ರಮಗಳನ್ನು ಪ್ರಾರಂಭಿಸಿದೆ. ನಮ್ಮ ಭಾರತ ವೀಕ್ಷಿತ್ ಭಾರತ್@2047 ಕುರಿತ ಭಾಷಣ ಸ್ಪರ್ಧೆಯನ್ನು ಜಿಲ್ಲೆ, ರಾಜ್ಯ ಆಯೋಜಿಸಲು ಕೇಂದ್ರ ಸರ್ಕಾರವು ನಿರ್ಧರಿಸಿದ್ದು, ಈ ಸ್ಪರ್ಧೆಗಳನ್ನು ಸಂಘಟಿಸುವ ಜವಾಬ್ದಾರಿಯನ್ನು ನೆಹರು ಯುವ ಕೇಂದ್ರಕ್ಕೆ ನೀಡಿದೆ. ಭಾಷಣ ಸ್ಪರ್ಧೆಯು ಹಿಂದಿ, ಇಂಗ್ಲೀಷ್, ಕನ್ನಡ ಭಾಷೆಗಳಲ್ಲಿ ಇರಲಿದ್ದು,ಭಾಷಣದ ಅವಧಿ 7 ನಿಮಿಷ ರಾಜ್ಯ ಮಟ್ಟದ…
ಮಡಿಕೇರಿ ಜ.4 : ಕುಶಾಲನಗರ 220/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್2 ಕಾವೇರಿ ಮತ್ತು ಎಫ್6 ಇಂಡಸ್ಟ್ರಿಯಲ್ ಏರಿಯಾ ಫೀಢರ್‍ಗಳ ಮಾರ್ಗದಲ್ಲಿ ತುರ್ತಾಗಿ ಹೊಸ ಅಭಿವೃದ್ದಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.6 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಕೂಡ್ಲೂರು, ಕೂಡುಮಂಗಳೂರು, ಇಂಡಸ್ಟ್ರಿಯಲ್ ಏರಿಯಾ, ಚಿಕ್ಕತ್ತೂರು, ದೊಡ್ಡತ್ತೂರು, ಕೂಡಿಗೆ, ಸುಂದರನಗರ, ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಕೋರಿದ್ದಾರೆ.
ಮಡಿಕೇರಿ ಜ.4 : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಜ.10 ರಂದು ವಿರಾಜಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮತ್ತು ಜನವರಿ, 12 ರಂದು ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಮಡಿಕೇರಿ ಜ.4 : ಕರ್ನಾಟಕ ಸರ್ಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಾಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ “ಯುವ ಸ್ಪಂದನ” ಯೋಜನೆ-ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲು ಹಾಗೂ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನದಡಿಯಲ್ಲಿ ಕಚೇರಿ ಕೆಲಸಕ್ಕೆ ಯುವ ಸಮಾಲೋಚಕರು ಹಾಗೂ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆದ್ದರಿಂದ 21 ರಿಂದ 35 ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟು ವಿದ್ಯಾಭ್ಯಾಸ ಮಾಡಿರುವ, ಕನ್ನಡವನ್ನು ಬರೆಯುವ ಹಾಗೂ ಸ್ಪಷ್ಟವಾಗಿ ಮಾತನಾಡುವ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸು, ಉತ್ತಮ ಅಂರ್ತವ್ಯಕ್ತಿತ್ವ, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯವನ್ನು ಹೊಂದಿರುವ, ಕೊಡಗು ಜಿಲ್ಲೆಯಲ್ಲಿ ಪ್ರಯಾಣಿಸುವಂತಹ, ಸೇವಾ ಮನೋಭಾವ ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವ ವಿವರಗಳು ಮತ್ತು ಅಂಕಪಟ್ಟಿಗಳೊಂದಿಗೆ ಜ.17 ರಂದು ನೇರ ಸಂದರ್ಶನಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,…
ಮಡಿಕೇರಿ ಜ.4 : ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಮಂತ್ರಾಲಯ, ಮಂಗಳೂರು ಭಾರತ ಸರ್ಕಾರದ ಅಧೀನದಲ್ಲಿ, ಒಂದು ದಿನದ ಪಿ.ಎಂ.ವಿಶ್ವಕರ್ಮ ಯೋಜನೆಯ ಅರಿವು ಕಾರ್ಯಕ್ರಮವು ನಡೆಯಿತು. ಸೆಮಿನಾರ್ ಕಂ ಅವೆರ್‌ನೆಸ್ ಪ್ರೋಗ್ರಾಂ ನಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಮಾತನಾಡಿ ಭಾಗವಹಿಸಿದ ಕುಶಲಕರ್ಮಿಗಳು, ಟೈಲರ್‌ಗಳು ಇವರುಗಳು ಈ ಯೋಜನೆಯಡಿಯಲ್ಲಿ ನೋಂದಾಯಿಸಿ ಈ ಯೋಜನೆಯ ಪ್ರಯೋಜನವನ್ನು ಪ್ರತಿಯೊಂದು ಕುಶಲಕರ್ಮಿಗಳು ಸದುಪಯೋಗ ಪಡೆದುಕೊಳ್ಳುವಂತಾಗಬೇಕು ಎಂದು ತಿಳಿಸಿದರು. ಮಂಗಳೂರು, ಎಂಎಸ್‍ಎಂಇ. ಡಿ.ಎಫ್.ಒ, ಜಂಟಿ ನಿರ್ದೇಶಕರಾದ ಕೆ.ದೇವರಾಜ್ ಅವರು ಈ ಯೋಜನೆಯ ಬಗ್ಗೆ ಸವಿವರವಾಗಿ ಮಾತನಾಡಿ, ಯೋಜನೆಯ ಲಾಭ ಪಡೆದುಕೊಳ್ಳುವ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಟಿ.ದಿನೇಶ್ ಅವರು ಈ ಯೋಜನೆಯ ಅನುಷ್ಠಾನದ ಸ್ಥಿತಿಗತಿಗಳ ಬಗ್ಗೆ ತಿಳಿಸಿದರು. ಅಧಿವೇಶನದ ಸಮಯದಲ್ಲಿ ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕರಾದ ಗಂಗಾಧರ್ ನಾಯಕ್, ಲೀಡ್ ಬ್ಯಾಂಕ್‍ನ ದಯಾವತಿ ಅವರು ಹಣಕಾಸಿನ ಶಿಸ್ತಿನ ಬಗ್ಗೆ, ಯೋಜನೆಗೆ ಸಂಬಂಧಿಸಿದಂತೆ ಸಾಲ ಬಿಡುಗಡೆಗಾಗಿ ದಾಖಲಾತಿಗಳನ್ನು ಹೇಗೆ ಹೊಂದಾಣಿಕೆ ಮಾಡಿಕೊಳ್ಳಬೇಕು…






