ಮಡಿಕೇರಿ ಜ.4 : ನಗರದ ಗಾಂಧಿ ಮೈದಾನದಲ್ಲಿ ನಿರ್ಮಾಣವಾಗುತ್ತಿರುವ ರಾಷ್ಟ್ರಪಿತ ಮಹಾತ್ಮ ‘ಗಾಂಧೀಜಿಯವರ ಸ್ಮಾರಕ ಉದ್ಯಾನವನ’ ಕಾಮಗಾರಿಯನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಪರಿಶೀಲಿಸಿದರು. ಆದಷ್ಟು ಶೀಘ್ರ ಗುಣಮಟ್ಟದೊಂದಿಗೆ ಕಾಮಗಾರಿ ಪೂರ್ಣಗೊಳಿಸುವಂತೆ ಸಚಿವರು ನಿರ್ದೇಶನ ನೀಡಿದರು. ಗಾಂಧಿ ಸ್ಮಾರಕ ಉದ್ಯಾನವನ ನಿರ್ಮಾಣಕ್ಕೆ ಸರ್ಕಾರದಿಂದ ಈಗಾಗಲೇ 50 ಲಕ್ಷ ರೂ. ಬಿಡುಗಡೆಯಾಗಿದ್ದು, ವಿಧಾನ ಪರಿಷತ್ ಅನುದಾನದಿಂದಲೂ ಸಹ 5 ಲಕ್ಷ ರೂ. ಅನುದಾನ ನೀಡಲಾಗುವುದು ಎಂದು ಇದೇ ಸಂದರ್ಭ ಭರವಸೆ ನೀಡಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಮಾತನಾಡಿ ಕಾಮಗಾರಿ ತ್ವರಿತವಾಗಿ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಸೂಚಿಸಿದರು. ಶಾಸಕರ ಅನುದಾನದಡಿ ಸಾಧ್ಯವಾದಷ್ಟು 10 ಲಕ್ಷ ರೂ. ವರೆಗೆ ಹಣ ಬಿಡುಗಡೆಗೆ ಕ್ರಮವಹಿಸಲಾಗುವುದು. ಸರ್ಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದು ಹೇಳಿದರು. ಸರ್ವೋದಯ ಸಮಿತಿ ನಿಕಟಪೂರ್ವ ಅಧ್ಯಕ್ಷ ಟಿ.ಪಿ.ರಮೇಶ್ ಅವರು ಮಾತನಾಡಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ನಿಧಿಯಿಂದ ಅನುದಾನ…
ಲೇಖಕ: admin
ಮಡಿಕೇರಿ ಜ.4 : ಸ್ವಾತಂತ್ರ್ಯದ 100 ನೇ ವರ್ಷಕ್ಕೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯಾಗಿದೆ. ಈ ದೃಷ್ಟಿಕೋನವು ಆರ್ಥಿಕ ಬೆಳವಣಿಗೆ, ಸಾಮಾಜಿಕ ಪ್ರಗತಿ, ಪರಿಸರ ಸುಸ್ಥಿರತೆ ಮತ್ತು ಸೇರಿದಂತೆ ಅಭಿವೃದ್ಧಿಯ ವಿವಿಧ ಅಂಶಗಳನ್ನು ಒಳಗೊಂಡಿದೆ ಉತ್ತಮ ಆಡಳಿತ. ಈ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ಭಾರತದ ಯುವಕರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಅವರು ಭಾರತದಲ್ಲಿನ ಅತಿದೊಡ್ಡ ಜನಸಂಖ್ಯಾ ಗುಂಪು, ಮತ್ತು ಅವರು ಸಾಮಥ್ರ್ಯ ಮತ್ತು ಶಕ್ತಿಯಿಂದ ತುಂಬಿದ್ದಾರೆ. ವಿಕ್ಷಿತ್ ಭಾರತ್@ 2047 ಅಭಿಯಾನಕ್ಕಾಗಿ ಯುವಕರಿಂದ ಆಲೋಚನೆಗಳನ್ನು ಒಳಗೊಂಡಂತೆ ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಯುವಕರನ್ನು ತೊಡಗಿಸಿಕೊಳ್ಳಲು ಸರ್ಕಾರವು ಹಲವಾರು ಉಪಕ್ರಮಗಳನ್ನು ಪ್ರಾರಂಭಿಸಿದೆ. ನಮ್ಮ ಭಾರತ ವೀಕ್ಷಿತ್ ಭಾರತ್@2047 ಕುರಿತ ಭಾಷಣ ಸ್ಪರ್ಧೆಯನ್ನು ಜಿಲ್ಲೆ, ರಾಜ್ಯ ಆಯೋಜಿಸಲು ಕೇಂದ್ರ ಸರ್ಕಾರವು ನಿರ್ಧರಿಸಿದ್ದು, ಈ ಸ್ಪರ್ಧೆಗಳನ್ನು ಸಂಘಟಿಸುವ ಜವಾಬ್ದಾರಿಯನ್ನು ನೆಹರು ಯುವ ಕೇಂದ್ರಕ್ಕೆ ನೀಡಿದೆ. ಭಾಷಣ ಸ್ಪರ್ಧೆಯು ಹಿಂದಿ, ಇಂಗ್ಲೀಷ್, ಕನ್ನಡ ಭಾಷೆಗಳಲ್ಲಿ ಇರಲಿದ್ದು,ಭಾಷಣದ ಅವಧಿ 7 ನಿಮಿಷ ರಾಜ್ಯ ಮಟ್ಟದ…
ಮಡಿಕೇರಿ ಜ.4 : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಎಲ್ಲಾ 28 ಸ್ಥಾನಗಳಲ್ಲೂ ಸ್ಪರ್ಧಿಸಲಿದ್ದು, ಆಸಕ್ತ ಸ್ಪರ್ಧಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಿದೆ ಎಂದು ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಕೇಶವಮೂರ್ತಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂದರ್ಶನವು ಜ.6 ಮತ್ತು 7 ರಂದು ಪಕ್ಷದ ಬೆಂಗಳೂರಿನ ಕಚೇರಿಯಲ್ಲಿ ನಡೆಯಲಿದೆ. ಈ ವಿಚಾರದ ಕುರಿತು ಪಕ್ಷದ ಕೇಂದ್ರ ಕಚೇರಿಯಲ್ಲಿ ಈಗಾಗಲೇ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಆಸಕ್ತರು ಸಂದರ್ಶನಕ್ಕೆ ಹಾಜರಾಗಬಹುದೆಂದು ತಿಳಿಸಿದರು. ಆಕಾಂಕ್ಷಿಗಳು ಯಾವುದೇ ರಾಜಕೀಯ ಪಕ್ಷದಲ್ಲಿ ಗುರುತಿಸಿಕೊಂಡಿರಬಾರದು. ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿರಬಾರದು. ಪಕ್ಷದ ಸಿದ್ದಾಂತಗಳಿಗೆ ಬದ್ದರಾಗಿರಬೇಕು. ಜನಪರ ಕಾಳಜಿ, ಸಂವಿಧಾನದಲ್ಲಿ ನಂಬಿಕೆ, ರಾಜ್ಯದ ಅಭಿವೃದ್ಧಿಯ ಚಿಂತನೆ ಇರುವವರು ಆಕಾಂಕ್ಷಿಗಳ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು ಹೆಚ್ಚಿನ ಮಾಹಿತಿಗಾಗಿ 9611720802 ಸಂಪರ್ಕಿಸಬಹುದಾಗಿದೆ ಎಂದ ಅವರು, ಸಂದರ್ಶನದ ನಂತರ ರಾಜ್ಯ ಸಮಿತಿಯು ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಸಂಭಾವ್ಯ ಅಭ್ಯಾರ್ಥಿಗಳೆಂದು ಘೋಷಿಸುತ್ತದೆ ಎಂದರು. ಕೆಆರ್‍ಎಸ್ ಪಕ್ಷವು ಪಕ್ಷದ ಆರಂಭದಿಂದಲೂ…
ಮಡಿಕೇರಿ ಜ.4 : ವಾಲ್ನೂರು-ತ್ಯಾಗತ್ತೂರು ಗ್ರಾಮ ಪಂಚಾಯಿತಿಯ 2023-24ನೇ ಸಾಲಿನ ಗ್ರಾಮ ಸಭೆಯು ಜ.6 ರಂದು ಗ್ರಾ.ಪಂ ಅಧ್ಯಕ್ಷರಾದ ಮಂಜುಳಾ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಅಂದು ಪೂರ್ವಾಹ್ನ 11 ಗಂಟೆಗೆ ವಾಲ್ನೂರು ವಿಎಸ್‍ಎಸ್‍ಎನ್ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ನೋಡಲ್ ಅಧಿಕಾರಿಯಾಗಿ ಚೆಟ್ಟಳ್ಳಿ ಪಶು ವೈದ್ಯಾಧಿಕಾರಿ ಡಾ.ಸಂಜೀವ್ ಕುಮಾರ್ ಆರ್.ಸಿಂದೆ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಗ್ರಾ.ಪಂ ಉಪಾಧ್ಯಕ್ಷರು ಹಾಗೂ ಎಲ್ಲಾ ಸದಸ್ಯರು ಭಾಗವಹಿಸಲಿದ್ದು, ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟ ಗ್ರಾಮಸ್ಥರು, ಮಹಿಳೆಯರು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳುವಂತೆ ಕೋರಿದೆ.
ಮಡಿಕೇರಿ ಜ.4 : ನಾಪೋಕ್ಲು ಸಮೀಪದ ಬಲಮುರಿ ಸೇತುವೆ ಬಳಿಯ ಹೊಳೆಮುಡಿ ಮೈದಾನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊದ್ದೂರು ಗ್ರಾಮದ ಮುಜೀಬ್ ರೆಹಮಾನ್(28), ಬಲಮುರಿ ನಿವಾಸಿಗಳಾದ ಅಮೀರ್ ಕೆ.ಎಂ(29) ಹಾಗೂ ಇರ್ಫಾನ್ ಎಸ್.ಎ.(29) ಬಂಧಿತ ಆರೋಪಿಗಳು. ಇವರ ಬಳಿಯಲ್ಲಿದ್ದ 275 ಗ್ರಾಂ ಗಾಂಜಾ, 3 ಮೊಬೈಲ್, ಒಂದು ಆಟೋ ಮತ್ತು ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಡಿವೈಎಸ್‍ಪಿ ಆರ್.ವಿ. ಗಂಗಾಧರಪ್ಪ, ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಅವರ ಮಾರ್ಗದರ್ಶನದಲ್ಲಿ ನಾಪೋಕ್ಲು ಎಸ್‍ಐ ಮಂಜುನಾಥ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.
ಪುತ್ತೂರು ಜ.4 : ಮೂರು ಹೊತ್ತು ಊಟ, ತಲೆಯ ಮೇಲೊಂದು ಸೂರು, ಅಗತ್ಯ ಬಟ್ಟೆ ಬರೆ ಇವು ಮಾನವನ ಜೀವನದ ಮೂಲ ಆವಶ್ಯಕತೆಗಳು. ಇದನ್ನೇ ಹೊಂದಿಸಿಕೊಳ್ಳುವುದಕ್ಕೆ ಅಸಾಧ್ಯವಾದ ಅನೇಕ ಕುಟುಂಬಗಳು ನಮ್ಮ ಸುತ್ತಮುತ್ತಲಿವೆ. ಅವರನ್ನು ಗುರುತಿಸಿ ಅವಶ್ಯಕತೆಗನುಗುಣವಾಗಿ ಸಹಾಯ ಮಾಡುವುದು ನಮ್ಮ ಆದ್ಯ ಕರ್ತವ್ಯ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಸಂಚಾಲಕ ಟಿ.ಎಸ್.ಸುಬ್ರಮಣ್ಯ ಭಟ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಗ್ರಾಮ ವಿಕಾಸ ಯೋಜನೆಯ ಆಶ್ರಯದಲ್ಲಿ ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿಗಳು, ಕುಳ ಗ್ರಾಮ ಪಂಚಾಯತ್ ಹಾಗೂ ಇತರ ದಾನಿಗಳ ಸಹಕಾರದೊಂದಿಗೆ ಕುಳ ಗ್ರಾಮದ ಸೆಕೆಹಿತ್ಲುವಿನಲ್ಲಿ ನಿರ್ಮಿಸಿದ ಮನೆಯನ್ನು ಫಲಾನುಭವಿಗಳಾದ ಗೀತಾ ಈಶ್ವರ ನಲಿಕೆ ಅವರಿಗೆ ಹಸ್ತಾಂತರಿಸುವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ನಾವು ಪಡೆದ ಒಂದಶವನ್ನಾದರೂ ಸಮಾಜಕ್ಕೆ ನೀಡುವ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದರು. ಪುತ್ತೂರಿನ ಮಾಸ್ಟರ್ ಪ್ಲಾನರಿಯ ಆಕಾಶ್…
ಮಡಿಕೇರಿ ಜ.4 : ಬೆಂಗಳೂರು ವಕೀಲರ ಸಂಘದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ವಿಭಾಗದಿಂದ ಮುಖ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ. ಎಸ್.ಪೊನ್ನಣ್ಣ ಅವರನ್ನು ಬೆಂಗಳೂರು ವಕೀಲರ ಸಂಘದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ವಿಭಾಗದಿಂದ ಸನ್ಮಾನಿಸಲಾಯಿತು.
ಮಡಿಕೇರಿ ಜ.4 : ಕೋರ್ಬಿವ್ಯಾಕ್ಸ್ ಲಸಿಕೆಯು ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ 100(ಡೋಸ್), ತಾಲ್ಲೂಕು ಆಸ್ಪತ್ರೆ, ಸೋಮವಾರಪೇಟೆ 60(ಡೋಸ್) ಮತ್ತು ಸಾರ್ವಜನಿಕ ಆಸ್ಪತ್ರೆ, ವಿರಾಜಪೇಟೆ 60(ಡೋಸ್) ಲಭ್ಯವಿದ್ದು, ಲಸಿಕೆಯನ್ನು ಉಚಿತವಾಗಿ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ.ಸತೀಶ್ ತಿಳಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ಲಸಿಕಾಕರಣವನ್ನು ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಆದರೆ ಇತ್ತೀಚೆಗೆ ಕೆಲವು ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿದ್ದು, ಇನ್ನೂ ಕೋವಿಡ್-19 ಲಸಿಕೆಯ ಮುನ್ನೆಚ್ಚರಿಕೆ ಡೋಸ್ ಪಡೆಯದೆ ಉಳಿದಿರುವವರಿಗಾಗಿ ಕೊಡಗು ಜಿಲ್ಲೆಗೆ 220 ಡೋಸ್ ಕೋರ್ಬಿವ್ಯಾಕ್ಸ್ ಕೋವಿಡ್-19 ಲಸಿಕೆ ಸರಬರಾಜಾಗಿದೆ. ಮುನ್ನೆಚ್ಚರಿಕೆ ಡೋಸ್ ಆಗಿ ಬಳಸಲು ಈಗಾಗಲೇ ಆರೋಗ್ಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿ ಉಳ್ಳವರು, ಆರೋಗ್ಯ ಕಾರ್ಯಕರ್ತೆಯರು, ಮುಂಚೂಣಿ ಕಾರ್ಯಕರ್ತೆಯರು ಕೋವಿಡ್-19 ಸೋಂಕಿಗೆ ತುತ್ತಾಗುವ ಸಾಧ್ಯತೆಗಳಿದೆ. ಆದ್ದರಿಂದ ಮುನ್ನೆಚ್ಚರಿಕೆ ಡೋಸ್ ಲಸಿಕಾಕರಣಕ್ಕೆ ಬಾಕಿ ಇರುವ ಫಲಾನುಭವಿಗಳು ಕೋರ್ಬಿವ್ಯಾಕ್ಸ್ ಲಸಿಕೆಯನ್ನು ಪಡೆಯಬಹುದು.…
ಕಡಂಗ ಜ.4 : ಅರಪಟ್ಟು ಗ್ರಾಮದಲ್ಲಿ ಅಯೋಧ್ಯೆಯ ಮಂತ್ರಾಕ್ಷತೆಯನ್ನು ಮನೆಗಳಿಗೆ ತೆರಳಿ ವಿತರಿಸಲಾಯಿತು. ಜ.15ವರೆಗೆ ಮಂತ್ರಾಕ್ಷತೆ ವಿತರಣೆ ಅಭಿಯಾನ ನಡೆಯಲಿದ್ದು, ಇದರ ಅಂಗವಾಗಿ ಅರಪಟ್ಟು ಭಗವತಿ ದೇವಾಲಯದಲ್ಲಿ ಮಂತ್ರಾಕ್ಷತೆ ಯನ್ನು ದೇವರ ಮುಂದೆ ಇಟ್ಟು ಪೂಜೆ ಸಲ್ಲಿಸಲಾಯಿತು. ಈ ಪವಿತ್ರ ಮಂತ್ರಾಕ್ಷತೆ ಯನ್ನು ಊರಿನ ಪ್ರತಿ ಮನೆಗಳಿಗೆ ವಿತರಿಸಲಾಯಿತು. ಈ ಸಂದರ್ಭ ನೆರಪಂಡ ಹರ್ಷ ಮಂದಣ್ಣ, ನೆರಪಂಡ ದೀನಾ, ಕೋಡಿರ ಪ್ರಸನ್ನ, ಪಾಂಡಂಡ ಕಿಶನ್, ಅಂನಂಬಿರ ಸತೀಶ್ ಉಪಸ್ಥಿತರಿದ್ದರು. ವರದಿ : ನೌಫಲ್ ಕಡಂಗ
ವಿರಾಜಪೇಟೆ ಜ.4 : ಕೇರಳದ ಕಣ್ಣನೂರಿನ ಪೆರಿಂತಟ್ಟ ಊರಿನ ಕಾಲಕಟ್ಟಿಲಂ ದೇವಾಲಯದಲ್ಲಿ ಜ.11 ರಿಂದ 13ರ ವರೆಗೆ ಕಾಳೇಘಾಟ್ ಕಳಿಯಾಟ್ ಮಹೋತ್ಸವವು ಜರುಗಲಿದೆ ಎಂದು ಆಡಳಿತ ಮಂಡಳಿಯು ತಿಳಿಸಿದೆ. ಜ.11 ರಂದು ಬೆಳಿಗ್ಗೆ ಗಣಹೋಮ , ಉಷಾಪೂಜೆ , ಉಚ್ಚಪೂಜೆ , ದೀಪಾರಾಧನೆ , ಅತ್ತಾಳಪೂಜೆ ಹಾಗೂ ಮಧ್ಯರಾತ್ರಿ 12 ಗಂಟೆಗೆ ಮಹಾಗುರುತಿ ಪೂಜೆ ನಡೆಯಲಿದೆ. ಜ.12 ರಂದು ಕರಿಕುಟ್ಟಿಚಾತನ್ ತೆರೆ ಹಾಗೂ ಜ.13 ರಂದು ಸಮಾರೋಪ ಪೂಜೆಯೊಂದಿಗೆ ಉತ್ಸವ ತೆರೆಕಾಣಲಿದೆ. ಈ ಉತ್ಸವವು ಒಟ್ಟು ಹದಿನೈದು ವಿಧದ ತೆರೆಗಳಿಂದ ಕೂಡಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊ. ಸಂ. 9947213899 ನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.






