ಲೇಖಕ: admin

ಮಡಿಕೇರಿ NEWS DESK ಮಾ.9 : ವನ್ಯಜೀವಿಗಳ ಚಲನವಲನ ಮತ್ತು ವನ್ಯಜೀವಿಗಳ ದಾಳಿಯಿಂದ ಆಗುತ್ತಿರುವ ಕಷ್ಟನಷ್ಟದ ಕುರಿತು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಅರಣ್ಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ಕೊಡಗು ಅರಣ್ಯ ವೃತ್ತದ ಮಡಿಕೇರಿಯಲ್ಲಿರುವ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಇರುವ ಕಂಟ್ರೋಲ್ ಅಂಡ್ ಕಮಾಂಡ್ ರೂಮ್ ನಲ್ಲಿ ಶಾಸಕರು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ವನ್ಯಜೀವಿಗಳಿಂದಾಗುತ್ತಿರುವ ಬೆಳೆಹಾನಿಯ ಬಗ್ಗೆ ಆನ್ ಲೈನ್ ನಲ್ಲಿರುವ ಮಾಹಿತಿ ಮತ್ತು ವನ್ಯಜೀವಿಗಳ ಚಲನವಲನದ ಮಾಹಿತಿಯನ್ನು ಗ್ರಾಮಸ್ಥರಿಗೆ ನೀಡುವ ಕುರಿತು ಇರುವ ಅಪ್ಲಿಕೇಶನ್ ನ ವಿವರವನ್ನು ಅರಣ್ಯ ಅಧಿಕಾರಿಗಳು ಸಮಗ್ರವಾಗಿ ವಿವರಿಸಿದರು.

Read More

ಮಡಿಕೇರಿ NEWS DESK ಮಾ.9 : ಕಾಡಾನೆ ದಾಳಿಗೆ ಸಿಲುಕಿ ಗ್ರಾ.ಪಂ ಮಾಜಿ ಸದಸ್ಯರೊಬ್ಬರು ಮೃತಪಟ್ಟಿರುವ ಘಟನೆ ಕುಶಾಲನಗರ ತಾಲ್ಲೂಕಿನ ವಾಲ್ನೂರು ಗ್ರಾಮದಲಿ ನಡೆದಿದೆ. ನಂಜರಾಯಪಟ್ಟಣ ಗ್ರಾ.ಪಂ ಮಾಜಿ ಸದಸ್ಯೆ, ಬಾಳೆಗುಂಡಿ ಹಾಡಿ ನಿವಾಸಿ ಜಲಜಾಕ್ಷಿ (53) ಎಂಬುವವರೇ ಮೃತ ದುರ್ದೈವಿ. ಇಂದು ಬೆಳಿಗ್ಗೆ ರಸ್ತೆಯಲ್ಲಿ ತೆರಳುತ್ತಿದ್ದಾಗ ಕಾಡಾನೆ ಏಕಾಏಕಿ ದಾಳಿ ಮಾಡಿದ್ದು, ಜಲಜಾಕ್ಷಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಸ್ಥಳೀಯ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Read More

ಮಡಿಕೇರಿ NEWS DESK ಮಾ.8 : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಕೊಡವ ಮಹಿಳೆಯರ ಸಬಲೀಕರಣಕ್ಕಾಗಿ ಒತ್ತಾಯಿಸಿ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸಿತು. ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗದ ಮಹಿಳೆಯರಿಗೆ ಸಂವಿಧಾನದತ್ತವಾದ ಹಕ್ಕುಗಳನ್ನು ನೀಡಬೇಕು. ದೇಶಾದ್ಯಂತ ಕೊಡವ ಮಹಿಳೆಯರಿಗೆ ಶೇ.33 ಮೀಸಲಾತಿ ಆಂತರಿಕ ಕೋಟಾದಡಿ ನೀಡಬೇಕು. ಸ್ವಾಯತ್ತ ಕೊಡವ ಲ್ಯಾಂಡ್ ಘೋಷಿಸಬೇಕು, ನೆಲ, ಜಲ, ಭಾಷೆ, ಸಂಸ್ಕೃತಿ, ಪರಪಂಪರೆ, ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ‍್ಯದೊಂದಿಗೆ ಸಾಂವಿಧಾನಿಕ ಭದ್ರತೆಯನ್ನು ಖಾತ್ರಿ ಪಡಿಸಬೇಕು. ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳನ್ನು ನೀಡಬೇಕು. ಕೊಡವರ ಜನ್ಮಸಿದ್ಧ ಹಕ್ಕಾಗಿರುವ ಕೋವಿ ಹೊಂದುವ ವಿನಾಯಿತಿಯನ್ನು ಶಾಶ್ವತಗೊಳಿಸಬೇಕು. ಕೊಡವರಿಗೆ ಎಸ್‌ಟಿ ಟ್ಯಾಗ್ ನೀಡಬೇಕು, ಕೊಡವ ಭಾಷೆಯನ್ನು ಸಂವಿಧಾನದ 8ನೇ ಶೆಡ್ಯೂಲ್ ಗೆ ಸೇರಿಸಬೇಕು, ಸಂಸತ್ ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಎನ್.ಯು.ನಾಚಪ್ಪ ಒತ್ತಾಯಿಸಿದರು. ಕೊಡವ ಮಹಿಳೆಯರು ಉತ್ತಮ ಕೃಷಿಕರಾಗಿರುವುದರಿಂದ ವಿಶೇಷ ಕಾಳಜಿಯಾಗಿ…

Read More

ಕುಶಾಲನಗರ ಮಾ.8 NEWS DESK  : ಶಾಲಾ ಶಿಕ್ಷಣ ಇಲಾಖೆಯಡಿಯಲ್ಲಿ ಸಮಗ್ರ ಶಿಕ್ಷಣ – ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶನಾಲಯದ ಹೊಸ ಪರಿಕಲ್ಪನೆಯಡಿಯಲ್ಲಿ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್ ) ಯಲ್ಲಿ ಜಿಲ್ಲಾ ವೃತ್ತಿಪರ ಮತ್ತು ವೃತ್ತಿ ಮಾರ್ಗದರ್ಶನ ಘಟಕವನ್ನು ಸ್ಥಾಪಿಸುವ ಸಂಬಂಧವಾಗಿ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್ ) ಯಲ್ಲಿ ಸಂಸ್ಥೆಯ ಪ್ರಾಂಶುಪಾಲರೂ ಆದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ( ಅಭಿವೃದ್ಧಿ ) ರಾಮಚಂದ್ರರಾಜೇ ಅರಸ್ ಅವರ ಅಧ್ಯಕ್ಷತೆಯಲ್ಲಿ ಡಯಟ್ ಸಂಸ್ಥೆಯಲ್ಲಿ ಘಟಕದ ಪ್ರಥಮ ಸಭೆಯನ್ನು ನಡೆಸಲಾಯಿತು. ವಿದ್ಯಾರ್ಥಿಗಳಿಗೆ ವೃತ್ತಿಪರ ಮತ್ತು ವೃತ್ತಿ ಮಾರ್ಗದರ್ಶನ ನೀಡುವ ಸಲುವಾಗಿ ಜಿಲ್ಲಾಹಂತದ ಈ ಘಟಕವನ್ನು ಸ್ಥಾಪಿಸಿದ್ದು, ಸರ್ಕಾರದ ಯೋಜನೆ ಮತ್ತು ಕಾರ್ಯಕ್ರಮಗಳಿಗೆ ಅನುಗುಣವಾಗಿ ವಿವಿಧ ತರಬೇತಿ ನೀಡುವ ಕುರಿತು ಸಮಾಲೋಚನೆ ನಡೆಸಲಾಯಿತು. ಸಭೆಯಲ್ಲಿ ಜಿಲ್ಲಾ ವೃತ್ತಿಪರ ಮತ್ತು ವೃತ್ತಿ ಮಾರ್ಗದರ್ಶನ ಘಟಕದ ರೂಪುರೇಷೆಗಳ ಕುರಿತು ಮಾಹಿತಿ ನೀಡಿದ ಘಟಕದ…

Read More

ಮಡಿಕೇರಿ ಮಾ.8 NEWS DESK : ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಕೇವಲ ಒಂದು ಆಚರಣೆಯಾಗಿ ಉಳಿಯದೆ ಇದನ್ನು ಪ್ರತಿಯೊಬ್ಬ ಮಹಿಳೆಯು ತನ್ನ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ತಾನು ಸಬಲೇ ಎಂಬುದನ್ನು ಸಾಬೀತುಪಡಿಸಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಕರೆ ನೀಡಿದರು. ಗೋಣಿಕೊಪ್ಪಲು ಉಮಾಮಹೇಶ್ವರಿ ದೇವಾಲಯದ ಸಭಾಂಗಣದಲ್ಲಿ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ನಿರ್ವಹಣಾ ಘಟಕದವರು ಆಯೋಜಿಸಿದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಆಚರಣೆಯು ಕೇವಲ ಒಂದು ದಿನಕ್ಕೆ ಸೀಮಿತವಾದರೂ ಇದರ ಅಳವಡಿಕೆ ದಿನನಿತ್ಯದ ಜೀವನದಲ್ಲಿ ಮಾಡಿಕೊಂಡರೆ ಸಮ ಸಮಾಜದ ನಿರ್ಮಾಣ ಆಗೋದರಲ್ಲಿ ಯಾವುದೇ ಸಂದೇಹ ಇಲ್ಲ ಎಂದು ಶಾಸಕರು ಬಣ್ಣಿಸಿದರು. ಆಧುನಿಕ ಯುಗದಲ್ಲಿ ಮಹಿಳೆಯರ ಪಾತ್ರವೂ ಎಲ್ಲಾ ಕ್ಷೇತ್ರಗಳಲ್ಲೂ ಪ್ರಮುಖವಾಗಿದೆ. ನಮ್ಮ ನಾಡಿನ ಮಹಿಳೆಯರು ಈ ನಿಟ್ಟಿನಲ್ಲಿ ತಮ್ಮನ್ನು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ಸರ್ವತೋಮುಖ ಅಭಿವೃದ್ಧಿಗೆ ಕೊಡುಗೆಯಾಗಿ ಮೂಡಿ ಬರಬೇಕು ಎಂದು ಆಶಯ…

Read More

ಮಡಿಕೇರಿ ಮಾ.8 NEWS DESK : ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯವೊಂದೇ ಸಾಲದು, ಅದರೊಂದಿಗೆ ಆರ್ಥಿಕ ಜ್ಞಾನ, ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ, ಆತ್ಮವಿಶ್ವಾಸ ಮತ್ತು ಸಾಮಾಜಿಕ ಬೆಂಬಲ ಅತ್ಯಗತ್ಯ ಎಂದು ಖ್ಯಾತ ಕವಯತ್ರಿ ಸ್ಮಿತಾ ಅಮೃತಾರಾಜ್ ಅವರು ಹೇಳಿದರು. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಡಿಕೇರಿ ತಾಲ್ಲೂಕು ಪಂಚಾಯತ್ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಅವರು ಮಾತನಾಡಿದರು. ಮಹಿಳೆಯರ ಸಾಧನೆಯನ್ನು ಗುರುತಿಸಿ, ಗೌರವಿಸುವ ದಿನವಾಗಿದ್ದು, ಇದು ಕೇವಲ ಆಚರಣೆಯಲ್ಲ, 20ನೇ ಶತಮಾನದ ಆರಂಭದಲ್ಲಿ ಮಹಿಳಾ ಕಾರ್ಮಿಕರು ಉತ್ತಮ ವೇತನ, ಕಡಿಮೆ ಕೆಲಸದ ಅವಧಿ ಮತ್ತು ಮತದಾನದ ಹಕ್ಕಿಗಾಗಿ ನಡೆಸಿದ ಬೃಹತ್ ಹೋರಾಟಗಳ ಫಲವಾಗಿದೆ ಎಂದರು. ಅನಾದಿ ಕಾಲದಿಂದಲೂ ಮಹಿಳೆಯರನ್ನು ಎರಡನೇ ದರ್ಜೆಯ ನಾಗರಿಕರಂತೆ ಪರಿಗಣಿಸಿ ಕಡೆಗಣಿಸಲಾಗುತ್ತಿದೆ. ಆದರೂ ಪ್ರಸ್ತುತ ದಿನಗಳಲ್ಲಿ ಶಿಕ್ಷಣ ಹಾಗೂ ಆರ್ಥಿಕ ಸ್ವಾತಂತ್ರ್ಯದಿಂದ ಸಬಲೀಕರಣಗೊಳ್ಳುತ್ತಿರುವುದು ಶ್ಲಾಘನೀಯ ಎಂದರು. ಪ್ರತಿಯೊಬ್ಬ ಯಶಸ್ವಿ ಪುರುಷನ ಹಿಂದೆ ಒಬ್ಬ ಮಹಿಳೆ ಇರುತ್ತಾಳೆ. ಭಾರತದಲ್ಲಿ…

Read More

ಮಡಿಕೇರಿ ಮಾ.7 NEWS DESK : ಮಹತ್ವಾಕಾಂಕ್ಷೆಯ ಗುಣಮಟ್ಟ ವಿದ್ಯುತ್ ಪೂರೈಕೆ ಯೋಜನೆಯ ಭಾಗವಾಗಿ ಬಾಳೆಲೆಯಲ್ಲಿ ರೂ. 27.23 ಕೋಟಿ ವೆಚ್ಚದಲ್ಲಿ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಸ್ಥಾಪನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಶಾಸಕರು, ಕ್ಷೇತ್ರಾದ್ಯಂತ ಗುಣಮಟ್ಟದ ವಿದ್ಯುತ್ ಪೂರೈಕೆ ಕೈಗೊಳ್ಳಲು ಸುಮಾರು  ರೂ.200 ಕೋಟಿಗೊ ಅಧಿಕ ಅನುದಾನವನ್ನು ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರ ನೀಡಿದ್ದು, ಹಂತ ಹಂತವಾಗಿ ಕ್ಷೇತ್ರಾದ್ಯಂತ ಈ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಬಾಳಲೆಯಲ್ಲಿ ಸ್ಥಾಪನೆಗೊಳ್ಳಲಿರುವ ಈ ವಿದ್ಯುತ್ ವಿಚಾರಣಾ ಕೇಂದ್ರದಿಂದ ಈ ಭಾಗದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ಹಾಗೂ ನಿರಂತರ ವಿದ್ಯುತ್ ಪೂರೈಕೆ ಆಗಲು ಸಹಕಾರಿಯಾಗಲಿದೆ ಎಂದು ವಿವರಿಸಿದರು. ಈ ಸಂದರ್ಭ ರಾಜ್ಯ ಕ್ರೀಡಾಪ್ರಾಧಿಕಾರದ ಉಪಾಧ್ಯಕ್ಷರಾದ  ಅರುಣ್ ಮಾಚಯ್ಯ, ಚೀಫ್ ಎಲೆಟ್ರಿಕಲ್ ಆಫೀಸರ್ ರೋಷನ್ ಅಪ್ಪಚ್ಚು, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್…

Read More

ಮಡಿಕೇರಿ ಮಾ.7 NEWS DESK : ಆಧುನಿಕ ಸಮಾಜದಲ್ಲಿ ಮಹಿಳೆಯರಿಗೆ ಅತ್ಯಂತ ಪ್ರಮುಖವಾದ ಸ್ಥಾನವಿದೆ. ಮಹಿಳೆಯರು ಸಮಾಜದ ಮುನ್ನೆಲೆಗೆ ಬಂದಲ್ಲಿ ಆ ಸಮಾಜದ ಏಳಿಗೆ ಶತಸಿದ್ಧ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಹೇಳಿದರು. ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ ಗ್ರಾಮದ ಸ್ಥಳೀಯ ಮಹಿಳಾ ಸಂಘಟನೆ ವತಿಯಿಂದ  ಶ್ರೀಮಂಗಲ ಕೊಡವ ಸಮಾಜದಲ್ಲಿ ನಡೆದ ಆಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ, ಅವರು ಮಾತನಾಡಿದರು. ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯವಾಗಿದ್ದು, ಮಹಿಳೆಯರ ದಿನಾಚರಣೆ ಕೇವಲ ಒಂದು ಕಾರ್ಯಕ್ರಮವಾಗಿರದೆ ಇದು ಆಚರಣೆಗೆ ಬಂದಲ್ಲಿ ಮಾತ್ರ ಸಮಾಜಕ್ಕೆ ಒಳಿತಾಗಲಿದೆ ಎಂದು ಹೇಳಿದರು.  ಶಾಸಕರ ಪತ್ನಿ ಕಾಂಚನ್ ಪೊನ್ನಣ್ಣ ಅವರು ಮಾತನಾಡಿ  ಆಧುನಿಕ ಜಗತ್ತಿನಲ್ಲಿ ಪುರುಷರಿಗೆ ಸಮಾನವಾಗಿ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಹೆಸರು ಮಾಡುತ್ತಿದ್ದಾರೆ. ಸೇನೆಯಲ್ಲಿ ಕ್ರೀಡೆಯಲ್ಲಿ ಸಾರ್ವಜನಿಕ ಬದುಕಿನಲ್ಲಿ ಹಾಗೂ ಸಮಾಜದ ಎಲ್ಲಾ ರೀತಿಯ ಚಟುವಟಿಕೆಗಳಲ್ಲೂ ಮಹಿಳೆಯರು ಪ್ರಮುಖವಾಗಿ ಕಾಣಿಸಿಕೊಳ್ಳುತ್ತಿರುವುದು ಮಹಿಳಾ ಸಬಲೀಕರಣಕ್ಕೆ ಸಾಕ್ಷಿಯಾಗಿದೆ. ಇದೇ ರೀತಿ ಮಹಿಳೆಯರು,…

Read More

ಮಡಿಕೇರಿ ಮಾ.7 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಡಿಕೇರಿ ತಾಲ್ಲೂಕು ಪಂಚಾಯತ್ ಸಹಯೋಗದಲ್ಲಿ ಮಾರ್ಚ್, 8 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಲಿದೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಎಸ್.ಎಲ್.ಬೋಜೇಗೌಡ, ಡಾ.ಧನಂಜಯ ಸರ್ಜಿ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಅರುಣ್ ಮಾಚಯ್ಯ, ಮಡಿಕೇರಿ ನಗರಸಭೆ ಅಧ್ಯಕ್ಷರಾದ ಕಲಾವತಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಮಂದ್ರಿರ ಮೋಹನ್‍ದಾಸ್, ಕೊಡಗು…

Read More

ವಿರಾಜಪೇಟೆ ಮಾ.7 NEWS DESK : ನ್ಯಾಷನಲ್ ಮೆಡಿಕೋಸ್ ಆರ್ಗನೈಸೇಶನ್, ಸೇವಾ ಭಾರತಿ ಕೊಡಗು ಸಂಯುಕ್ತ ಆಶ್ರಯದಲ್ಲಿ ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಬಿಟ್ಟಂಗಾಲದ ವಿಜಯಾ ಬ್ಯಾಂಕ್ ಕಟ್ಟಡದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಶಿಬಿರ ನಡೆಯಲಿದೆ. ಶಿಬಿರದಲ್ಲಿ ರಕ್ತದೊತ್ತಡ ತಪಾಸಣೆ, ಮಧುಮೇಹ ತಪಾಸಣೆ, ಬಿಎಂಐ ಮೌಲ್ಯಮಾಪನ, ಉಚಿತ ಔಷಧಿಗಳ ವಿತರಣೆ, ಸೇರಿದಂತೆ ಆಯುಷ್ಮಾನ್ ಕಾರ್ಡ್ ಮಾಡಿ ಕೊಡಲಾಗುತ್ತದೆ. ಶಿಬಿರಕ್ಕೆ ಬರುವಾಗ ಆಧಾರ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಆಗಿರುವ ಮೊಬೈಲ್ ತರುವಂತೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Read More