ಲೇಖಕ: admin

ಮಡಿಕೇರಿ ಜ.4 :  ಎಸ್‍ವೈಎಸ್ ಕೊಡಗು ಜಿಲ್ಲಾ ಸಮಿತಿಯ ವತಿಯಿಂದ ಜ.5 ರಂದು ನಾಪೋಕ್ಲುವಿನಲ್ಲಿ ಜಿಲ್ಲಾ ಕಹ್ಫುಲ್ ವರಾ ಮಜ್ಲಿಸುನ್ನೂರ್ ಬೃಹತ್ ಆಧ್ಯಾತ್ಮಿಕ ಸಂಗಮ ನಡೆಯಲಿದೆ ಎಂದು ಸಮಿತಿಯ ಸಂಘಟನಾ ಕಾರ್ಯದರ್ಶಿ ಸಿ.ಎಂ.ಹಮೀದ್ ಮುಸ್ಲಿಯಾರ್ ಸುಂಟಿಕೊಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 5 ಗಂಟೆಯಿಂದ ನಾಪೋಕ್ಲು ಮಾರ್ಕೆಟ್ ಮುಂಭಾಗದಲ್ಲಿ ಜಿಲ್ಲಾ ಕಹ್ಫುಲ್ ವರಾ ಮಜ್ಲಿಸುನ್ನೂರ್ ಬೃಹತ್ ಆಧ್ಯಾತ್ಮಿಕ ಸಂಗಮ ನಡೆಯಲಿದೆ ಎಂದರು. ಸಮಸ್ತ ಎಂಬ ಆಧ್ಯಾತ್ಮಿಕ ಉಲಮಾ ಒಕ್ಕೂಟದ ಯುವಜನ ಘಟಕವಾದ ಸುನ್ನಿ ಯುವಜನ ಸಂಘ (ಎಸ್‍ವೈಎಸ್) ಕಳೆದ 70 ವರ್ಷಗಳಿಂದ ಧಾರ್ಮಿಕ ಮತ್ತು ಶೈಕ್ಷಣಿಕ ಹಾಗೂ ಜನಪರ ಸಮಾಜಮುಖಿ ಕಾರ್ಯಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಸಂಘಟನೆಯಾಗಿದ್ದು, ಶಾಂತಿ ಹಾಗೂ ಸಮಾಧಾನ ಮತ್ತು ಸಹಬಾಳ್ವೆಯನ್ನು ಸಾರುವ ಧರ್ಮದ ವಿಶ್ವಾಸ ವಿಚಾರಗಳನ್ನು ಸಮಾಜಕ್ಕೆ ಅರ್ಥೈಸಿ ಕೊಡುವುದರೊಂದಿಗೆ ಆಧ್ಯಾತ್ಮಿಕವಾಗಿ ಜನರ ಮನಸ್ಸುಗಳನ್ನು ಶುಚೀಕರಿಸುವುದರ ಮೂಲಕ ಉತ್ತಮ ಸಮಾಜದ ನಿರ್ಮಾಣ ಎಂಬ ವಿಶ್ವಾಸದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಜ.5 ರಂದು ಅಸರ್…

Read More

ಮಡಿಕೇರಿ ಜ.3 : ಸೋಮವಾರಪೇಟೆಯಲ್ಲಿ ನೂತನವಾಗಿ ನಿರ್ಮಿಸಿರುವ ‘ಸಿಂಥೆಟಿಕ್ ಹಾಕಿ ಟರ್ಫ್’ ಮೈದಾನದ ಉದ್ಘಾಟನೆ ಸಂದರ್ಭ ಶಿಷ್ಟಾಚಾರ ಪಾಲಿಸಿಲ್ಲ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಹಿಂದಿನ ಬಿಜೆಪಿ ಸರಕಾರದಲ್ಲಿ ಕ್ರೀಡಾ ಸಚಿವರಾಗಿದ್ದ ಎಂ.ಪಿ.ಅಪ್ಪಚ್ಚುರಂಜನ್ ಅವರ ಪ್ರಯತ್ನದಿಂದ ಸೋಮವಾರಪೇಟೆಯಲ್ಲಿ ನೂತನವಾಗಿ ಟರ್ಫ್ ಮೈದಾನ ನಿರ್ಮಾಣವಾಗಿದೆ. ಆದರೆ ಮೈದಾನದ ಉದ್ಘಾಟನಾ ಸಮಾರಂಭಕ್ಕೆ ಅವರನ್ನು ಆಹ್ವಾನಿಸಿಲ್ಲ. ಸಂಸದ ಪ್ರತಾಪ್ ಸಿಂಹ, ಎಂಎಲ್‌ಸಿ ಸುಜಾ ಕುಶಾಲಪ್ಪ ಹಾಗೂ ಚೌಡ್ಲು ಗ್ರಾಮ ಪಂಚಾಯ್ತಿ ಅಧ್ಯಕ್ಷರನ್ನು ಆಹ್ವಾನಿಸದೇ ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಮೈದಾನ ಉದ್ಘಾಟನೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರ ಕಾರನ್ನು ತಡೆಯಲು ಯತ್ನಿಸಿದರು. ಈ ಸಂದರ್ಭ ಪೊಲೀಸರು ಪ್ರತಿಭಟನಾಕಾರರನ್ನು ತಡೆದರು. ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್ಪಿ ಗಂಗಾಧರಪ್ಪ ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿಯೂ ನಡೆಯಿತು. ಬಿಜೆಪಿ ತಾಲೂಕು ಅಧ್ಯಕ್ಷ ಮನುಕುಮಾರ್, ನಗರ ಅಧ್ಯಕ್ಷ ಸೋಮೇಶ್, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ದೀಪಕ್, ತಾಲೂಕು ಪಂಚಾಯ್ತಿ ಮಾಜಿ ಸದಸ್ಯ…

Read More

ವಿರಾಜಪೇಟೆ ಜ.3 : ವಿರಾಜಪೇಟೆಯ ಅರಮೇರಿಯಲ್ಲಿರುವ ಎಸ್.ಎಂ.ಎಸ್ ಅಕಾಡೆಮಿಯಲ್ಲಿ ‘ಏಕ ಭಾರತ ಶ್ರೇಷ್ಠ ಭಾರತ’ ಎಂಬ ದ್ಯೇಯವಾಕ್ಯದಡಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಪ್ರೇಕ್ಷಕರ ಗಮನ ಸೆಳೆಯಿತು. ಶಾಲಾ-ಕಾಲೇಜುಗಳ ವಿದ್ಯಾರ್ಥಿ ಯುವ ಪ್ರತಿಭೆಗಳು ಭಾಗವಹಿಸಿ ತಮ್ಮಲ್ಲಿ ಅಡಗಿದ್ದ ಪ್ರತಿಭೆಯನ್ನು ವೇದಿಕೆಯಲ್ಲಿ ಸಾದರಪಡಿಸಿದರು. ನಾನಾ ಕಲಾ ತಂಡಗಳು ಪ್ರದರ್ಶನ ನೀಡಿದ ಜಾನಪದ ನೃತ್ಯಗಳಾದ ಸಿ.ಬಿ.ಎಸ್.ಇ.ಯ ವಿವಿಧ ವಲಯಗಳಿಗೆ ಒಳಪಟ್ಟ ಡೋಗ್ರಿ, ಭಾಂಗ್ಡ, ಹರಿಯಾಣ, ಲೆಪ್ಚ, ನಾಗ, ಚೆರಾವು, ಥೌಗೋಲ್ ಜಗೋಯಿ, ದುನೋಚಿ, ಉತ್ತರಖಂಡ್ ಪಹಾಡಿ, ಗರ್ಭಾ, ಕರ್ನಾಟಕ ತಮಿಳುನಾಡು ಕೇರಳ ಜನಪದ ನೃತ್ಯಗಳು, ಕೋಲಾಟ, ಕಂಸಾಳೆ, ಪೂಜಾ ಕುಣಿತ, ಡೊಳ್ಳು ಕುಣಿತ, ವೀರಗಾಸೆ, ವೀರಭದ್ರ ಕುಣಿತ, ನಂದಿ ಧ್ವಜಾದ ಕುಣಿತ ಆವರಣದಲ್ಲಿ ಹೊಸದೊಂದು ಜಾನಪದ ಲೋಕವನ್ನೇ ಸೃಷ್ಟಿಸಿತು. ನಿರ್ದಿಷ್ಟ ಕಥಾ ವಸ್ತುಗಳನ್ನಾಧರಿಸಿದ ನೃತ್ಯ ಪ್ರಕಾರಗಳು ವೇದಿಕೆ ಮೇಲೆ ಅಚ್ಚಕಟ್ಟಾಗಿ ಮೂಡಿ ಬಂದವು. ಎಸ್.ಎಂ.ಎಸ್ ಅಕಾಡೆಮಿಯ ಪುಟ್ಟಮಕ್ಕಳಾದಿಯಾಗಿ 900 ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ತಂಡೋಪತಂಡವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಪಡಿಸಿದರು. ಕೇರಳ ಶೈಲಿಯ ಮೋಹಿನಿಯಾಟ್ಟಂ, ಶಿವತಾಂಡವ…

Read More

ಮಡಿಕೇರಿ ಜ.3 : ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರು ದಿನಾಂಕ 31-12-2023ರ ಒಳಗೆ ತಮ್ಮ ಅಡುಗೆ ಅನಿಲ ಗ್ರಾಹಕರ ಸಂಖ್ಯೆಗೆ ಇ-ಕೆವೈಸಿಯನ್ನು ಮತ್ತು ಬ್ಯಾಂಕ್ ಖಾತೆ ಮಾಹಿತಿಯನ್ನು ಗ್ಯಾಸ್ ಏಜೆನ್ಸಿಯಲ್ಲಿ ಸಲ್ಲಿಸಬೇಕು. ತಪ್ಪಿದ್ದಲ್ಲಿ ಅಂತಹ ಗ್ರಾಹಕರಿಗೆ ಸಹಾಯಧನ ನಿಲ್ಲಿಸಲಾಗುತ್ತದೆ. ಗೃಹ ಬಳಕೆ ಅಡುಗೆ ಅನಿಲ ವಾಣಿಜ್ಯ ಬಳಕೆಯಾಗಿ ಪರಿವರ್ತನೆಯಾಗುತ್ತದೆ ಮತ್ತು ಅನಿಲ ಸಂಪರ್ಕ ಕಡಿತವಾಗುತ್ತದೆ ಹಾಗೂ ಇ-ಕೆವೈಸಿ ಕಾರ್ಯಕ್ಕೆ ಹಣ ನೀಡಬೇಕೆಂಬ ವದಂತಿ ಸಾರ್ವಜನಿಕರ ವಲಯದಲ್ಲಿ ಗೊಂದಲ ಸೃಷ್ಟಿಗೆ ಕಾರಣವಾಗಿರುತ್ತದೆ. ಅಡುಗೆ ಅನಿಲ ಗ್ರಾಹಕರಿಗೆ ತಿಳಿಯಪಡಿಸುವುದೇನೆಂದರೆ ಈ ವಿಷಯಗಳು ಕೇವಲ ವದಂತಿಯಾಗಿದ್ದು, ಗ್ರಾಹಕರು ಇ-ಕೆವೈಸಿ ಮಾಡಿಸಲು ಕೇಂದ್ರ ಸರ್ಕಾರವು/ ಅನಿಲ ಕಂಪನಿಗಳು ಯಾವುದೇ ಕೊನೆಯ ದಿನಾಂಕವನ್ನು ನಿಗಧಿಪಡಿಸಿರುವುದಿಲ್ಲ ಹಾಗೂ ಇ-ಕೆವೈಸಿ ಮಾಡಿಸುವುದಕ್ಕೆ ಯಾವುದೇ ಶುಲ್ಕ ನಿಗಧಿಯಾಗಿರುವುದಿಲ್ಲ. ಇಕೆವೈಸಿ ಪ್ರಕ್ರಿಯೆ ಸಂಪೂರ್ಣ ಉಚಿತವಾಗಿರುತ್ತದೆ. ಇ-ಕೆವೈಸಿ ಮಾಡಿಸುವುದು ನಿರಂತರ ಪ್ರಕ್ರಿಯೆಯಾಗಿದ್ದು, ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಂಪರ್ಕ ಪಡೆದಿರುವವರು ಮತ್ತು ಸಹಾಯಧನ ಪಡೆಯುವ ಗ್ರಾಹಕರು ಮಾತ್ರ ಇ-ಕೆವೈಸಿಯನ್ನು ಆದ್ಯತೆ ಮೇಲೆ…

Read More

ಮಡಿಕೇರಿ ಜ.3 : ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಡಿಕೇರಿ ಕೈಮಗ್ಗ ಮತ್ತು ಜವಳಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜ.5 ರಿಂದ 12 ರವರೆಗೆ ‘ಕಾವೇರಿ ವಸ್ತ್ರಸಿರಿ’ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ. ಜನವರಿ, 05 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ‘ಕಾವೇರಿ ವಸ್ತ್ರಸಿರಿ’ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದ ಉದ್ಘಾಟನಾ ಸಮಾರಂಭ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಕೊಡಗು ಜಿಲ್ಲಾ ಪಂಚಾಯತ್…

Read More

ಮಡಿಕೇರಿ ಜ.3 : ಕೊಡಗು ಜಿಲ್ಲಾ ಛಾಯಾಗ್ರಾಹಕರ ಸಂಘದ 2024ರ ಹೊಸ ಕ್ಯಾಲೆಂಡರ್ ಬಿಡುಗಡೆಗೊಂಡಿತು. ನಗರದ ಖಾಸಗಿ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ಬೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ವಿರಾಜಪೇಟೆ ಶಾಸಕರಾದ ಎ.ಎಸ್.ಪೊನ್ನಣ್ಣ ಮತ್ತು ಕೊಡಗಿನ ಜಿಲ್ಲಾಧಿಕಾರಿ ವೆಂಕಟರಾಜು, ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್, ಎಸಿ ವಿಕಾಸ್ ಬಿಡುಗಡೆಗೊಳಿಸಿ, ಶುಭಹಾರೈಸಿದರು. ಈ ಸಂದರ್ಭ ಕೊಡಗು ಜಿಲ್ಲಾ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಎಸ್.ಆರ್. ವಸಂತ್, ರಾಜ್ಯ ಸಂಘದ ನಿರ್ದೇಶಕರಾದ ದೀಪಕ್ ಕುಮಾರ್, ಗೌರವಾಧ್ಯಕ್ಷ ಸುರೇಶ್ ಮಾವಟ್ಕರ್, ಉಪಾಧ್ಯಕ್ಷ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಸೋಲೋಮನ್ ಡೇವಿಡ್, ಸಹ ಕಾರ್ಯದರ್ಶಿ ರಂಜಿತ್, ಸಂಘಟನಾ ಕಾರ್ಯದರ್ಶಿ ಆವರ್ತಿ ಮಹದೇವಪ್ಪ, ಶ್ರೀ ಕಾವೇರಿ ಛಾಯಾಗ್ರಹಕರ ಸಂಘದ ಅಧ್ಯಕ್ಷ ವಿಜಯಕುಮಾರ್, ಪುಷ್ಪಗಿರಿ ಛಾಯಾಗ್ರಾಹಕರ ಸಂಘದ ಅಧ್ಯಕ್ಷರಾದ ವಿನಯ್, ಜಿಲ್ಲಾ ನಿರ್ದೇಶಕರಾದ ಲವ, ಛಾಯಾಗ್ರಹಕರುಗಳಾದ ವಿನೋದ್, ಜಯರಾಮ್ ಮತ್ತು ಹೇಮಂತ್ ಹಾಜರಿದ್ದರು.

Read More

ಮಡಿಕೇರಿ ಜ.3 : ಕಾಡಾನೆ ದಾಳಿ ಮಾಡಿದ ಪರಿಣಾಮ ಕಾರ್ಮಿಕ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿದ್ದಾಪುರ ಸಮೀಪ ಘಟ್ಟದಳ್ಳದಲ್ಲಿ ನಡೆದಿದೆ. ಪಿ.ಜೆ.ಪಲ್ಲವಿ ಎಂಬುವವರೇ ಗಾಯಗೊಂಡಿರುವ ಮಹಿಳೆಯಾಗಿದ್ದು, ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಕಾರ್ಮಿಕರು ತೋಟದ ಕೆಲಸಕ್ಕೆ ತೆರಳುತ್ತಿದ್ದ ಸಂದರ್ಭ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಕಾಡಾನೆ ಹಾವಳಿ ತಡೆಗೆ ಶಾಶ್ವತ ಪರಿಹಾರ ಸೂಚಿಸುವಂತೆ ಗ್ರಾಮಸ್ಥರು ಹಾಗೂ ಕಾರ್ಮಿಕರು ಒತ್ತಾಯಿಸಿದರು. ::: ಶಾಸಕರ ಭೇಟಿ ::: ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಆಸ್ಪತ್ರೆಗೆ ತೆರಳಿ ಕಾಡಾನೆ ದಾಳಿ ಕುರಿತು ಮಾಹಿತಿ ಪಡೆದರು. ಗಾಯಾಳು ಪಲ್ಲವಿ ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಮಹಿಳೆಯ ಆರೋಗ್ಯ ಸ್ಥಿತಿ ಸಹಜವಾಗಿದೆ. ಹೆಚ್ಚಿನ ಚಿಕಿತ್ಸೆ ಬೇಕಾದಲ್ಲಿ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು. ತಜ್ಞರ ಸಲಹೆ…

Read More

ಮಡಿಕೇರಿ ಜ.3 :  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ  ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರ ಮಟ್ಟದ 17 ವರ್ಷ ವಯೋಮಿತಿಯ ಬಾಲಕಿಯರ ಹಾಕಿ ಪಂದ್ಯಾವಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ  ಎನ್.ಎಸ್.ಭೋಸರಾಜು   ಕೂಡಿಗೆಯ ಕ್ರೀಡಾ ಶಾಲೆ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಜ.8 ರವರೆಗೆ ರಾಷ್ಟ್ರ ಮಟ್ಟದ ಹಾಕಿ ಪಂದ್ಯಾವಳಿಯು ಕೊಡಗು ಜಿಲ್ಲೆಯ ಕೂಡಿಗೆ, ಸೋಮವಾರಪೇಟೆ, ಮಡಿಕೇರಿ ಮತ್ತು ಪೊನ್ನಂಪೇಟೆಯ ಹಾಕಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ  ಎ.ಎಸ್.ಪೊನ್ನಣ್ಣ, ಕೂಡುಮಂಗಳೂರು ಗ್ರಾ.ಪಂ. ಅಧ್ಯಕ್ಷರಾದ ಭಾಸ್ಕರ ನಾಯ್ಕ ಕೂಡಿಗೆ ಗ್ರಾ.ಪಂ. ಅಧ್ಯಕ್ಷರಾದ ಗಿರೀಶ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪ ವಿಭಾಗಾಧಿಕಾರಿ ವಿನಾಯಕ್ ನರ್ವಾಡೆ, ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯದ ಆಯುಕ್ತರ ಕಚೇರಿಯ ನಿರ್ದೇಶಕರಾದ ಬಿ.ಎಸ್.ರಘುವೀರ್, ಜಂಟಿ ನಿರ್ದೇಶಕರಾದ(ದೈಹಿಕ ಶಿಕ್ಷಣ)…

Read More

ಮಡಿಕೇರಿ ಜ.3 : ಮೂರು ದಶಕಗಳ ಹಿಂದಿನ ಶ್ರೀರಾಮ ಜನ್ಮಭೂಮಿ ಹೋರಾಟದ ಘಟನೆಯನ್ನು ಆಧರಿಸಿ ಹುಬ್ಬಳ್ಳಿಯಲ್ಲಿ ಕರಸೇವಕರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿ ನಗರದ ಸ್ಕ್ವಾಡ್ರರ್ನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿತು. ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಪ್ರಮುಖರು ಒಂದು ಸಮುದಾಯವನ್ನು ಓಲೈಸಿಕೊಳ್ಳುವುದಕ್ಕಾಗಿ ಸರ್ಕಾರ ಈ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಆರೋಪಿಸಿದರು. ಮಾಜಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಸುಮಾರು ಐದು ನೂರು ವರ್ಷಗಳ ಹೋರಾಟದ ಫಲವಾಗಿ ರಾಮಮಂದಿರದ ಕನಸು ನನಸಾಗಿದೆ ಎಂದರು. ರಾಮಮಂದಿರದ ಉದ್ಘಾಟನೆ ಜ.22 ರಂದು ನಡೆಯಲಿದೆ. “ನಾವೂ ರಾಮ ಭಕ್ತರೆ” ಎಂದು ಬಾಯಿಯಲ್ಲಿ ಮಾತ್ರ ಹೇಳಿಕೊಂಡ ಕಾಂಗ್ರೆಸ್ಸಿಗರು  ಸುಮಾರು 32 ವರ್ಷಗಳ ಹಳೆಯ ಪ್ರಕರಣದ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ ಮೂಲಕ ರಾಮ ಭಕ್ತ ಕರಸೇವಕರ ಬಂಧನಕ್ಕೆ ಕಾರಣಕರ್ತರಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮೂರು ದಶಕಗಳಷ್ಟು ಹಳೆಯ ಪ್ರಕರಣದ ಆರೋಪ…

Read More

ಮಡಿಕೇರಿ ಜ.3 : ಕೇಂದ್ರ ಸರ್ಕಾರದ ಜನಪರ ಕಾರ್ಯಕ್ರಮಗಳ ಕುರಿತು ಜನ ಸಾಮಾನ್ಯರಿಗೆ ಅರಿವು ಮೂಡಿಸುವ ‘ನಮ್ಮ ಸಂಕಲ್ಪ ವಿಕಸಿತ ಭಾರತ’ ಕಾರ್ಯಕ್ರಮ  ನಗರದ ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಅವರು, ಸಮಾಜದ ಎಲ್ಲಾ ವರ್ಗಗಳ ಅಭ್ಯುದಯಕ್ಕೆ ಪೂರಕವಾದ ಹತ್ತು ಹಲವಾರು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೊಳಿಸಿದ್ದಾರೆ. ಇದರ ಸದುಪಯೋಗವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಕೇಂದ್ರ ಸರ್ಕಾರ ರೈತರ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಪಿಎಂ ಕಿಸಾನ್ ಯೋಜನೆ ಮೂಲಕ ವಾರ್ಷಿಕ 6 ಸಾವಿರ ರೂ.ಗಳನ್ನು ನೇರವಾಗಿ ರೈತರ ಖಾತೆಗೆ ವರ್ಗಾಯಿಸುವ ಮಹತ್ವದ ಕಾರ್ಯ ಮಾಡಿದ್ದಾರೆ. ಆಹಾರ ಭದ್ರತೆಯನ್ನು ಖಾತ್ರಿ ಪಡಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ರಾಜ್ಯದ ಜನತೆಗೆ ಉಚಿತ ಆಹಾರ ಧಾನ್ಯವನ್ನು ವಿತರಿಸಲಾಗಿದೆ ಎಂದರು. ಮಡಿಕೇರಿ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ, ಕೇಂದ್ರ ಸರ್ಕಾರ ವಿವಿಧ ಯೋಜನೆಗಳ ಮೂಲಕ…

Read More