ಮಡಿಕೇರಿ ಜ.3 : ಕೊಡಗು ಜಿಲ್ಲೆಯ ವಿವಿಧ ಗ್ರಾಮಗಳನ್ನು ಕಾಡುತ್ತಿರುವ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿ ಸಮಗ್ರ ವರದಿ ಸಂಗ್ರಹಿಸುವ ಉದ್ದೇಶದಿಂದ “ಆಮ್ ಆದ್ಮಿ ಪಾರ್ಟಿ ನಡೆ ಹಳ್ಳಿಯ ಕಡೆ” ಎಂಬ ಗ್ರಾಮ ಸಂಪರ್ಕ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲೆಯ ಆಯ್ದ ಗ್ರಾಮಗಳಿಗೆ ಪಕ್ಷದ ಪ್ರಮುಖರು ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಮುಕ್ತ ಸಮಾಲೋಚನೆ ನಡೆಸಲಿದ್ದಾರೆ. ಅಂತಿಮವಾಗಿ ಸಂಗ್ರಹಿಸಿದ ಸಮಸ್ಯೆಗಳ ವಿವರವನ್ನು ಅವಲೋಕಿಸಿ ಮುಂಬರುವ ಲೋಕಸಭೆ, ಜಿ.ಪಂ ಮತ್ತು ತಾ.ಪಂ ಚುನಾವಣೆಗೆ ತಯಾರಿ ನಡೆಸಲಾಗುವುದು ಎಂದು ಹೇಳಿದ್ದಾರೆ. ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ಗ್ರಾಮ ಸಂಪರ್ಕ ಕಾರ್ಯಕ್ರಮದ ಮೂಲಕ ಪಕ್ಷಕ್ಕೆ ಮತ್ತಷ್ಟು ಬಲ ತುಂಬಲಾಗುವುದು. ಕೊಡಗಿನ ಜನಸಾಮಾನ್ಯರ ಧ್ವನಿಯಾಗಿ ಆಮ್ ಆದ್ಮಿ ಪಾರ್ಟಿ ಕಾರ್ಯ ನಿರ್ವಹಿಸಲಿದ್ದು, ಗ್ರಾಮ ಭೇಟಿ ಸಂದರ್ಭ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಚರ್ಚಿಸಿ ಎಂದು ಭೋಜಣ್ಣ ಸೋಮಯ್ಯ ಮನವಿ…
ಲೇಖಕ: admin
ಮಡಿಕೇರಿ ಜ.2 : ಸೋಮವಾರಪೇಟೆಯಲ್ಲಿ ಕ್ರೀಡಾ ವಸತಿ ನಿಲಯ ಆರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಸೋಮವಾರಪೇಟೆ ಚೌಡ್ಲು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ‘ಹಾಕಿ ಕ್ರೀಡಾಂಗಣ’ ಉದ್ಘಾಟಿಸಿ ಅವರು ಮಾತನಾಡಿದರು. ಕೊಡಗು ಜಿಲ್ಲೆ ಕ್ರೀಡೆಗೆ ಹೆಸರುವಾಸಿಯಾಗಿದೆ. ಇದನ್ನು ಮುಂದುವರೆಸಿಕೊಂಡು ಹೋಗಬೇಕು. ಇಲ್ಲಿನ ಕ್ರೀಡಾಂಗಣ ಬಳಿ ತಡೆಗೋಡೆ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗೆ ಇನ್ನಷ್ಟು ಅನುದಾನ ಬಿಡುಗಡೆಗೆ ಕ್ರೀಡಾ ಸಚಿವರ ಜೊತೆಗೆ ಚರ್ಚಿಸಲಾಗುವುದು ಎಂದರು. ಜಿಲ್ಲೆಯ ಅಭಿವೃದ್ಧಿಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದ ಸರ್ಕಾರ ಶಿಕ್ಷಣ, ಆರೋಗ್ಯ, ಕ್ರೀಡೆ ಸೇರಿದಂತೆ ಹೀಗೆ ವಿವಿಧ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದೆ ಎಂದರು. ಸೋಮವಾರಪೇಟೆಯಲ್ಲಿ ಹಾಕಿ ಕ್ರೀಡಾಂಗಣ ನಿರ್ಮಾಣಕ್ಕೆ ಹಿಂದಿನ ಕ್ರೀಡಾ ಸಚಿವರಾಗಿದ್ದ ಎಂ.ಪಿ.ಅಪ್ಪಚ್ಚುರಂಜನ್ ಅವರ ಕೊಡುಗೆ ಹೆಚ್ಚಿನದ್ದಾಗಿದೆ. ಜೊತೆಗೆ ಹೆಚ್ಚುವರಿ 40 ಲಕ್ಷ ರೂ. ಅನುದಾನ ಬಿಡುಗಡೆಗೆ ಶಾಸಕರಾದ…
ಮಡಿಕೇರಿ ಜ.3 : ವಕೀಲ ಮತ್ತು ನೋಟರಿ ಬಾಳೆಯಡ ಕಿಶನ್ ಪೂವಯ್ಯ ಹಾಗೂ ಸವಿತ ಪೂವಯ್ಯ ದಂಪತಿ ಪುತ್ರಿ ವಿಭ ರಾಜೇಶ್ವರಿ ಅವರ ವಿವಾಹ ಸಮಾರಂಭ ಮಡಿಕೇರಿಯ ಕಾವೇರಿ ಹಾಲ್ ನಲ್ಲಿ ಇಂದು (ಜ.3) ಮತ್ತು ನಾಳೆ (ಜ.4) ನಡೆಯಲಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಕಿಶನ್ ಪೂವಯ್ಯ ಮನೆಗೆ ಭೇಟಿ ನೀಡಿ ವಿಭ ರಾಜೇಶ್ವರಿಗೆ ಶುಭ ಹಾರೈಸಿದರು.
ನಾಪೋಕ್ಲು ಜ.3 : ಅಯೋದ್ಯೆಯ ಪವಿತ್ರ ಮಂತ್ರಾಕ್ಷತೆಯನ್ನು ಬಲಮುರಿಯ ಗ್ರಾಮದ ಶ್ರೀ ಅಗಸ್ತ್ಯೇಶ್ವರ ದೇವಸ್ಥಾನದಲ್ಲಿ ಪೂಜಾ ವಿಧಿ ವಿಧಾನಗಳೊಂದಿಗೆ ಗ್ರಾಮದ ಪ್ರಮುಖರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭ ಪಾರಣೆ ಗ್ರಾ.ಪಂ ಅಧ್ಯಕ್ಷ ಪಾಡೆಯಂಡ ಕಟ್ಟಿ ಕುಶಾಲಪ್ಪ, ಶಕ್ತಿಕೇಂದ್ರದ ಅಧ್ಯಕ್ಷ ಅಪ್ಪನೆರವಂಡ ರಾಜ, ಬಲಮುರಿ ಗ್ರಾ.ಪಂ ಸದಸ್ಯರಾದ ಬೊಳ್ಳಚೆಟ್ಟಿರ ಪ್ರಕಾಶ್ ಕಾಳಪ್ಪ, ಕಾರ್ಯಕರ್ತರಾದ ಆಂಗಿರ ಸಂತೋಷ್ ಮಾದಪ್ಪ, ಗುಡ್ಡೇರ ಲಕ್ಷು, ಬಿದ್ದಂಡ ಉಷಾದೇವಮ್ಮ, ಮಣಿಕಂಠ, ಬಿದ್ದಂಡ ಪ್ರಥ, ಕುಂದನ ದಯಾನಂದ ಸೇರಿದಂತೆ ಮುಖ್ಯ ಪಟ್ಟವರು ಹಾಜರಿದ್ದರು. ಬಳಿಕ ಗ್ರಾಮದ ಮನೆ ಮನೆಗಳಿಗೆ ತೆರಳಿ ಕುಟುಂಬ ಸದಸ್ಯರಿಗೆ ಪವಿತ್ರ ಮಂತ್ರಾಕ್ಷತೆಯನ್ನು ವಿತರಿಸಿ ಜ.22 ರಂದು ಅಯೋಧ್ಯೆಯಲ್ಲಿ ಶ್ರೀ ರಾಮನ ಮೂರ್ತಿಯ ಪ್ರತಿಷ್ಠಾಪನ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ಮನವಿ ಮಾಡಿದರು. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಜ.3 : ಇಂದಿನ ಮಕ್ಕಳೇ ದೇಶದ ಭವಿಷ್ಯ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ಚೆರಿಯಪರಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಶಾಲಾ ಕೊಠಡಿಯನ್ನು ಮತ್ತು ಶಾಲಾ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳೇ ನಮ್ಮ ದೇಶದ ಭವಿಷ್ಯ, ಆದರೆ ಮಕ್ಕಳ ಭವಿಷ್ಯವನ್ನು ರೂಪಿಸುವಂತಹ ಜವಾಬ್ದಾರಿ ನಾಗರಿಕರದ್ದಾಗಿದೆ. ಮಕ್ಕಳು ಉನ್ನತ ಶಿಕ್ಷಣವನ್ನು ಪಡೆಯಲು ಅವಕಾಶವನ್ನು ಕಲ್ಪಿಸಿಕೊಡುವುದು ನಮ್ಮ ಜವಾಬ್ದಾರಿ ಆಗಿದೆ ಎಂದು ಹೇಳಿದರು. ಮಕ್ಕಳು ಹೆಚ್ಚು ಓದಲು ಸ್ಪೂರ್ತಿಯನ್ನು ನೀಡಬೇಕು. ಯಾವುದೇ ರೀತಿಯ ಶಿಕ್ಷಣ ಪಡೆದರೆ ಯಾವ ರೀತಿ ಉಪಯೋಗವಾಗುತ್ತದೆ ಎಂಬ ಬಗ್ಗೆ ಪೂರಕವಾದ ಮಾಹಿತಿಯನ್ನು ನೀಡಬೇಕು ಎಂದು ಕಿವಿಮಾತು ಹೇಳಿದ ಪೊನ್ನಣ್ಣ ಅವರು, ವಿದ್ಯಾರ್ಥಿಗಳಿಗೆ ಸ್ನೇಹಿತರು ಮತ್ತು ಆಟದಷ್ಟೇ ಪಾಠ ಕೂಡ ಅತ್ಯವಶ್ಯಕ. ಒಳ್ಳೆಯ ಶಿಕ್ಷಣ ಪಡೆದು ಸಾರ್ಥಕವಾದ ಜೀವನ ನಡೆಸಿ ಎಂದು ಕರೆ ನೀಡಿದರು. ಪೋಷಕರು ಮಕ್ಕಳಿಗೆ ಸ್ವತಂತ್ರವಾಗಿ ಚಿಂತನೆ ಮಾಡುವ ಶಕ್ತಿಯನ್ನು ತುಂಬಬೇಕು. ಸ್ವತಂತ್ರವಾಗಿ ಜೀವಿಸುವ…
ಮಡಿಕೇರಿ ಜ.3 : ಕೊಡವ ಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಗಾಗಿ ಆಯೋಗ ರಚಿಸುವಂತೆ ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಜ.5 ರಂದು ಧರಣಿ ಸತ್ಯಾಗ್ರಹ ನಡೆಯಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಹೊಸ ವರ್ಷದಲ್ಲಿ ಮತ್ತೆ ಕೊಡವ ಲ್ಯಾಂಡ್ ಹೋರಾಟವನ್ನು ತೀವ್ರಗೊಳಿಸಲಿದ್ದು, ಶುಕ್ರವಾರ ಬೆಳಗ್ಗೆ 10.30 ಗಂಟೆಯಿಂದ 11.30 ರವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಧರಣಿ ನಡೆಸಿ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರತಿನಿಧಿಗಳಿಗೆ ಸಲ್ಲಿಸುವುದಾಗಿ ಹೇಳಿದ್ದಾರೆ. ಸಂವಿಧಾನದ ಆರ್ಟಿಕಲ್ 244 ಆರ್/ಡಬ್ಯ್ಲೂ 6ನೇ ಮತ್ತು 8ನೇ ಶೆಡ್ಯೂಲ್ ಅಡಿಯಲ್ಲಿ ಭೂ-ರಾಜಕೀಯ ಸ್ವಾಯತ್ತತೆಗಾಗಿ ಕೊಡವ ಕ್ವೆಸ್ಟ್‍ನ ಕಾನೂನುಬದ್ಧ ಆಕಾಂಕ್ಷೆಗಳನ್ನು ಪರಿಹರಿಸಲು 2 ನೇ ರಾಜ್ಯಗಳ ಮರು-ಸಂಘಟನೆ ಆಯೋಗವನ್ನು ರಚಿಸಬೇಕು. ಈ ಕುರಿತು ಖ್ಯಾತ ಅರ್ಥಶಾಸ್ತ್ರಜ್ಞ ಹಾಗೂ ಕೇಂದ್ರದ ಮಾಜಿ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಿಎನ್‍ಸಿ ಪರ ಕಾನೂನು ಹೋರಾಟ ಮಾಡುತ್ತಿದ್ದಾರೆ. ಸರ್ಕಾರಗಳು ಈ…
ಮಡಿಕೇರಿ ಜ.3 : ಕಾಡಾನೆ ದಾಳಿಯಿಂದ ಗಾಂಭೀರವಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕ ಮಹಿಳೆಯ ಆರೋಗ್ಯವನ್ನು ಮುಖ್ಯಮಂತ್ರಿ ಕಾನೂನು ಸಲಹೆಗಾರ, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ವಿಚಾರಿಸಿದರು. ನಗರದ ಜಿಲ್ಲಾಸ್ಪತ್ರೆಗೆ ಆಗಮಿಸಿದ ಪೊನ್ನಣ್ಣ ಅವರು, ವೈದ್ಯರಿಂದ ಮಹಿಳೆಯ ಆರೋಗ್ಯ ಸ್ಥಿತಿಯ ಕುರಿತು ಹಾಗೂ ಗಾಯಾಳು ಪಲ್ಲವಿ ಪತಿಯಿಂದ ಘಟನೆಯ ಕುರಿತು ಮಾಹಿತಿ ಪಡೆದುಕೊಂಡು ಕುಟುಂಬಕ್ಕೆ ಸ್ಥೈರ್ಯ ತುಂಬಿದರು. ಉನ್ನತ ಚಿಕಿತ್ಸೆಯ ಅಗತ್ಯವಿದ್ದಲ್ಲಿ ಕ್ರಮ ಕೈಗೊಳ್ಳುವುದಾಗಿ ಸೂಚಿಸಿದರು. ಈ ಸಂದರ್ಭ ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ ಹಾಜರಿದ್ದರು.
ನಾಪೋಕ್ಲು ಜ.3 : ಗುತ್ತಿಗೆದಾರರು ಉತ್ತಮ ಗುಣಮಟ್ಟದ ಕಾಮಗಾರಿಯನ್ನು ಕೈಗೊಳ್ಳಬೇಕು. ಕಳಪೆ ಕಾಮಗಾರಿ ಆಗಿದೆ ಎಂದು ಪ್ರತಿಷ್ಠೆ, ಪ್ರಚಾರಕ್ಕಾಗಿ ತಪ್ಪು ಸಂದೇಶ ನೀಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ 10 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಚೆರಿಯಪರಂಬು- ಕಲ್ಲುಮೊಟ್ಟೆ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ನನ್ನ ಅವಧಿಯಲ್ಲಿ ರಸ್ತೆ ಕಾಮಗಾರಿ ಕಳಪೆ ಆಗಲು ಬಿಡುವುದಿಲ್ಲ. ಗ್ರಾಮಸ್ಥರಿಗೆ ರಸ್ತೆ ಕಾಮಗಾರಿಯನ್ನು ಪರಿಶೀಲಿಸುವ ಅಧಿಕಾರ ಇದೆ. ಕಾಮಗಾರಿ ಕಳಪೆ ಆಗಿದ್ದರೆ ಇಲಾಖೆಯ ಇಂಜಿನಿಯರ್‍ಗಳು ಪರಿಶೀಲಿಸಿ ಮಾಹಿತಿ ನೀಡುತ್ತಾರೆ. ಏನೇ ಸಂಶಯಗಳಿದ್ದರು ನನ್ನ ಗಮನಕ್ಕೆ ತನ್ನಿ ಎಂದು ಹೇಳಿದರು. ಈ ಸಂದರ್ಭ ನಾಪೋಕ್ಲು ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾವತಿ ಅರುಣ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ. ಇಸ್ಮಾಯಿಲ್, ಕಾಂಗ್ರೆಸ್ ವಲಯ ಅಧ್ಯಕ್ಷ ಮಾಚೇಟಿರ ಕುಶ ಕುಶಾಲಪ್ಪ, ಕಾಂಗ್ರೆಸ್ ಬ್ಲಾಕ್ ಯೂತ್ ಅಧ್ಯಕ್ಷ…
ಮಡಿಕೇರಿ ಜ.3 : ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಹಾಗೂ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ನವೋದಯ ವಿದ್ಯಾಲಯದಲ್ಲಿ ನಡೆದ 2023-24 ನೇ ಸಾಲಿನ ರಾಜ್ಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಗೋಣಿಕೊಪ್ಪಲಿನ ಕಳತ್ಮಾಡು ಲಯನ್ಸ್ ಪ್ರೌಢ ಶಾಲಾ ವಿದ್ಯಾರ್ಥಿಗಳು ವಲಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ವಿದ್ಯಾರ್ಥಿಗಳಾದ 8ನೇ ತರಗರಿ ವಿದ್ಯಾರ್ಥಿ ಡೆರಿನ್ ಬ್ರೌನ್ ಸೈಮನ್, 9ನೇ ತರಗತಿ ವಿದ್ಯಾರ್ಥಿ ಶ್ವೇತನ್ ಜಿ.ರೈ ಭಾಗವಹಿಸಿ, ಜ.27 ರಂದು ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆಯಲಿರುವ ವಲಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಲಯನ್ಸ್ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.
ಮಡಿಕೇರಿ ಜ.3 : ಕಾಡಾನೆ ದಾಳಿ ಮಾಡಿದ ಪರಿಣಾಮ ಕಾರ್ಮಿಕ ಮಹಿಳೆಯೊಬ್ಬರು ಗಂಭೀರವಾಗಿ ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ ಅವರು ಆಸ್ಪತ್ರೆಗೆ ತೆರಳಿ ಮಹಿಳೆಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಕಾಡಾನೆಗಳ ದಾಳಿ ತಡೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದ್ದು, ಈ ಕುರಿತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಚರ್ಚಿಸಲಿದ್ದಾರೆ ಎಂದರು. ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಕಾಡಾನೆ ಹಾವಳಿ ತಡೆಗೆ ಶಾಶ್ವತ ಪರಿಹಾರ ಸೂಚಿಸುವಂತೆ ಗ್ರಾಮಸ್ಥರು ಹಾಗೂ ಕಾರ್ಮಿಕರು ಒತ್ತಾಯಿಸಿದರು.






