ಲೇಖಕ: admin

ವಿರಾಜಪೇಟೆ ಜ.3 : ಆಧುನಿಕ ಜಗತ್ತಿನಲ್ಲಿ ವಿದ್ಯಾರ್ಥಿಗಳ ಶಿಕ್ಷಣವು ಕೇವಲ ತರಗತಿಯ ನಾಲ್ಕು ಗೋಡೆಗೆ, ಸೀಮಿತವಾಗದೆ ಬದುಕಿನ ಎಲ್ಲಾ ಆಯಾಮದ ಕ್ಷೇತ್ರಗಳಲ್ಲಿ ಶಿಕ್ಷಣ ನೀಡಬೇಕಾಗಿದೆ. ಆ ನಿಟ್ಟಿನಲ್ಲಿ ಬದುಕಿನ ಶಿಕ್ಷಣ ನೀಡುವುದರಲ್ಲಿ ಎಸ್.ಎಂ.ಎಸ್. ಶಾಲೆ ಯಶಸ್ಸನ್ನು ಕಂಡಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆಯ ಅರಮೇರಿಯಲ್ಲಿರುವ ಎಸ್.ಎಂ.ಎಸ್ ಅಕಾಡೆಮಿಯಲ್ಲಿ’ಏಕ ಭಾರತ ಶ್ರೇಷ್ಠ ಭಾರತ’ ಎಂಬ ದ್ಯೇಯವಾಕ್ಯದಡಿಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಣವಿಲ್ಲದೆ ನಾವು ಯಶಸ್ವಿಯಾಗಲು ಸಾಧ್ಯವಿಲ್ಲ. ಜ್ಞಾನವು ನಮ್ಮನ್ನು ಉತ್ತುಂಗಕ್ಕೆ ಕೊಂಡೊಯ್ಯಲು ಸಹಾಯ ಮಾಡುತ್ತದೆ. ನೀವು ಉತ್ತಮ ಶಿಕ್ಷಣವನ್ನು ಹೊಂದಿದ್ದರೆ, ಜೀವನದಲ್ಲಿ ಹೆಚ್ಚು ಯಶಸ್ವಿಯಾಗುತ್ತೀರಿ. ಶಿಕ್ಷಣವು ನಮ್ಮ ಜೀವನಕ್ಕೆ ಹೆಚ್ಚಿನ ಮೌಲ್ಯವನ್ನು ನೀಡುತ್ತದೆ. ಇದು ನಮಗೆ ವಿವಿಧ ವಿಷಯಗಳನ್ನು ಕಲಿಯಲು ಸಹಾಯ ಮಾಡುತ್ತದೆ ಮತ್ತು ನಮಗೆ ಹೆಚ್ಚು ಜ್ಞಾನವನ್ನು ನೀಡುತ್ತದೆ. ನಾವು ಹೆಚ್ಚು ಕಲಿಯುತ್ತೇವೆ, ನಮ್ಮ ಸುತ್ತಲಿನ ವಿಷಯಗಳನ್ನು ನಾವು ಚೆನ್ನಾಗಿ ಅರ್ಥಮಾಡಿಕೊಳ್ಳುತ್ತೇವೆ ಮತ್ತು ಸಂದರ್ಭಗಳನ್ನು ನಿಭಾಯಿಸಲು ಕಲಿಯುತ್ತೇವೆ ಆದ್ದರಿಂದ…

Read More

ಸುಂಟಿಕೊಪ್ಪ ಜ.3 :  ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮತ್ತು ಕೊಡಗು ಜಿಲ್ಲಾ ಅಕ್ಷರ ಫೌಂಡೇಷನ್ ಸಂಯುಕ್ತ ಆಶ್ರಯದಲ್ಲಿ  ಸರಕಾರಿ ಪ್ರಾಥಮಿಕ ಶಾಲೆಗಳ 4 ರಿಂದ 6ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಗ್ರಾ.ಪಂ ಮಟ್ಟದ ಗಣಿತ ಸ್ಪರ್ಧೆ  ನಡೆಯಿತು. ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದ  ಅಧ್ಯಕ್ಷತೆಯನ್ನು ಪಂಚಾಯಿತಿ ಅಧ್ಯಕ್ಷರಾದ ಪಿ.ಆರ್. ಸುನಿಲ್ ಕುಮಾರ್ ಅವರು ವಹಿಸಿದ್ದರು. ಪಂಚಾಯಿತಿ ಅಧ್ಯಕ್ಷರಾದ ಪಿ.ಆರ್. ಸುನಿಲ್ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭ ಉಪಾಧ್ಯಕ್ಷರಾದ ಶಿವಮ್ಮ ಮಹೇಶ್, ಸದಸ್ಯರಾದ ಹೆಚ್.ಯು. ರಫೀಕ್ ಖಾನ್, ಐ. ಸೋಮನಾಥ್, ಎ. ಶಬೀರ್, ಕೆ.ಕೆ. ಪ್ರಸಾದ್, ಕೆ.ಎಂ. ಆಲಿಕುಟ್ಟಿ, ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಗೀತಾ, ಗದ್ದೆಹಳ್ಳ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಹೇಮಕುಮಾರಿ ಹಾಗೂ ಶಿಕ್ಷಕಿಯರು ಹಾಗೂ ಇತರರು ಉಪಸ್ಥಿತರಿದ್ದರು. ಪಂಚಾಯಿತಿ ಅಭಿವೃದ್ಧಿಅಧಿಕಾರಿಗಳಾದ ವಿ.ಜಿ. ಲೋಕೇಶ್ ಅವರು ಸ್ವಾಗತಿಸಿ ನಿರೂಪಿಸಿದರು. ವಿದ್ಯಾರ್ಥಿನಿಯರಾದ ಹಂಸಿಕಾ ಉದಯ ಮತ್ತು ಭುವನೇಶ್ವರಿ ಪ್ರಾರ್ಥಿಸಿದರು. ಫಲಿತಾಂಶ: 4ನೇ…

Read More

ಮಡಿಕೇರಿ ಜ.3 :  ಗೋಣಿಕೊಪ್ಪಲಿನ ಒಂದನೇ ವಿಭಾಗ ನಿವಾಸಿ ದಿ.ಒಕ್ಕಲಿಗರ ವಿ.ತಿಮ್ಮಯ್ಯ ರವರ ಜೇಷ್ಠ ಪುತ್ರ ಶ್ರೀನಿವಾಸ ನೃತ್ಯ ಶಾಲೆಯ ಸಂಸ್ಥಾಪಕರು ಹಾಗೂ ಸಂಗೀತ ಕಲಾವಿದ ವಿ.ಟಿ.ಶ್ರೀನಿವಾಸ್ (63) ಇಂದು ಮುಂಜಾನೆ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಸಹೋದರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಇಂದು ಸಂಜೆ ಗೋಣಿಕೊಪ್ಪಲಿನ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Read More

ಮಡಿಕೇರಿ ಜ.2 : ಪ್ರಸಕ್ತ(2023-24) ಸಾಲಿನ ವಿಶ್ವ ಕೌಶಲ್ಯ ಸ್ಪರ್ಧೆಯು 2024 ರಲ್ಲಿ ಪ್ರಾನ್ಸ್ ದೇಶದ ಲಿಯಾನ್‍ನಲ್ಲಿ ನಡೆಯಲಿದೆ. ಜಗತ್ತಿನಾದ್ಯಂತ 75 ಕ್ಕಿಂತಲೂ ಹೆಚ್ಚು ದೇಶಗಳು ಸ್ಪರ್ಧೆಯಲ್ಲಿ ಭಾಗವಹಿಸುತ್ತಿವೆ. 22 ವರ್ಷದೊಳಗಿನ ಒಂದು ಸಾವಿರಕ್ಕೂ ಹೆಚ್ಚಿನ ಯುವಜನತೆ 59 ಕ್ಕೂ ಹೆಚ್ಚು ಕೌಶಲ್ಯದ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಅತಿದೊಡ್ಡ ವೃತ್ತಿಪರ ಶಿಕ್ಷಣ ಮತ್ತು ಕೌಶಲ್ಯ ಶ್ರೇಷ್ಟತೆಯ ಕಾರ್ಯಕ್ರಮವಾಗಿದೆ. ಈ ಸ್ಪರ್ಧೆಗೆ ಪೂರಕವಾಗಿ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ‘ಇಂಡಿಯಾ ಸ್ಕಿಲ್ ಕರ್ನಾಟಕ 2024’ ಸ್ಪರ್ಧೆಯನ್ನು ಪ್ರಾರಂಭಿಸಿದೆ. ಜಿಲ್ಲಾ, ವಲಯ, ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಗೆಲವು ಸಾಧಿಸಿದವರಿಗೆ ನಿರಂತರ ತರಬೇತಿ ಒದಗಿಸಿ ಪ್ರಾದೇಶಿಕ ಮತ್ತು ರಾಷ್ಟ್ರ ಮಟ್ಟದಲ್ಲಿ ಗೆಲುವು ಸಾಧಿಸಲು ಹಾಗೂ ಭಾರತವನ್ನು ಜಾಗತಿಕ ಮಟ್ಟದಲ್ಲಿ ಪ್ರತಿನಿಧಿಸಲು ವೇದಿಕೆ ಕಲ್ಪಿಸಿಕೊಡುವುದು ಇಂಡಿಯಾ ಸ್ಕಿಲ್ ಕರ್ನಾಟಕ 2024 ಸ್ಪರ್ಧೆಯ ಮುಖ್ಯ ಗುರಿಯಾಗಿದೆ. ಸ್ಪರ್ಧೆಗೆ ನೋಂದಾಯಿಸಿಕೊಳ್ಳಲು ಜ.7 ಕೊನೆಯ ದಿನವಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು www.skillindiadigital.gov.in ಲಿಂಕ್ ಅಥವಾ ಕ್ಯೂಆರ್ ಕೋಡ್ ಸ್ಕ್ಯಾನ್ ಬಳಸುವ ಮೂಲಕ ಜನವರಿ, 07…

Read More

ಮಡಿಕೇರಿ ಜ.2 : ನಗರದ ಜಿ.ಪಂ.ಸಭಾಂಗಣದಲ್ಲಿ ನಡೆದ ಕೊಡಗು ಜಿಲ್ಲಾ ಮಟ್ಟದ 31ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಜಿಲ್ಲಾ ಬಾಲ ವಿಜ್ಞಾನಿ ಪ್ರಶಸ್ತಿ ಪುರಸ್ಕೃತ ವಿದ್ಯಾರ್ಥಿನಿ ಕೊಡಗರಹಳ್ಳಿ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಎ.ಎಸ್.ಶ್ರೀಶಾಳನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜ್ ಸನ್ಮಾನಿಸಿದರು. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಜಿಲ್ಲಾಡಳಿತ, ಜಿ.ಪಂ., ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿಯ ವತಿಯಿಂದ ಮಡಿಕೇರಿ ನಗರದ ಕೊಡಗು ವಿದ್ಯಾಲಯದಲ್ಲಿ ಈಚೆಗೆ ಏರ್ಪಡಿಸಿದ್ದ ಕೊಡಗು ಜಿಲ್ಲಾಮಟ್ಟದ 31 ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: 2023 ರಲ್ಲಿ “ಕಲುಷಿತಗೊಳ್ಳುತ್ತಿರುವ ನದಿ ತೀರಗಳು” ಎಂಬ ವಿಷಯದ ಕುರಿತು ವೈಜ್ಞಾನಿಕ ಯೋಜನಾ ಪ್ರಬಂಧ ಮಂಡಿಸಿದ ಕೊಡಗರಹಳ್ಳಿ ಸುಂಟಿಕೊಪ್ಪನಾಡು ಪ್ರೌಢಶಾಲೆಯ ವಿದ್ಯಾರ್ಥಿನಿ ಎ.ಎಸ್.ಶ್ರೀಶಾಳಿಗೆ ಶುಭ ಹಾರೈಸಿದ ಸಚಿವರು, ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ದೇಶದ ಪ್ರಗತಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಮಕ್ಕಳ ವಿಜ್ಞಾನ ಸಮಾವೇಶದ ಮಹತ್ವ…

Read More

ಮಡಿಕೇರಿ ಜ.2 : ಮುಂದಿನ ಆರು ತಿಂಗಳಲ್ಲಿ ಜಿಲ್ಲೆಯ ಗ್ರಾಮೀಣ, ಪಟ್ಟಣ ಹಾಗೂ ನಗರ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಗಮನಹರಿಸಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿ.ಪಂ.ಸಭಾಂಗಣದಲ್ಲಿ ಮಂಗಳವಾರ ನಡೆದ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕುಡಿಯುವ ನೀರು ಪೂರೈಕೆಗೆ ಪ್ರಥಮ ಆದ್ಯತೆ ನೀಡಬೇಕು. ಜಿಲ್ಲೆಯ ಯಾವ ಭಾಗದಲ್ಲಿಯೂ ಕುಡಿಯುವ ನೀರು ಸರಬರಾಜಿನಲ್ಲಿ ಸಮಸ್ಯೆ ಇದೆ ಎಂದು ಕೇಳಿ ಬರಬಾರದು. ಹಾಗೆಯೇ ಜಾನುವಾರುಗಳಿಗೆ ಅಗತ್ಯ ಮೇವು ಪೂರೈಕೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಬರ ನಿರ್ವಹಣೆಯಲ್ಲಿ ಉದಾಸೀನ ಮಾಡಬಾರದು. ಪಂಚಾಯತ್ ರಾಜ್ ಎಂಜಿನಿಯರ್‍ಗಳು, ತಹಶೀಲ್ದಾರರು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಪಿಡಿಒಗಳು ಕುಡಿಯುವ ನೀರು ಪೂರೈಕೆಗೆ ವಿಶೇಷ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಎಚ್ಚರಿಸಿದರು. ಮಡಿಕೇರಿ ನಗರಕ್ಕೆ ಕುಡಿಯುವ ನೀರು ಪೂರೈಸುವ…

Read More

ವಿರಾಜಪೇಟೆ ಜ.2 : ಗ್ರಾಮೀಣ ಕ್ರೀಡಾ ಪ್ರತಿಭೆಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸುವುದರ ಮೂಲಕ ನಮ್ಮ ನಾಡಿನ ಕೀರ್ತಿ ಪತಾಕೆಯನ್ನು ಹಾರಿಸಬೇಕು ಎಂದು ಅಂತರಾಷ್ಟ್ರೀಯ ಅಥ್ಲೇಟ್ ಮಾರಮಾಡ ಮಾಚಮ್ಮ ಹೇಳಿದರು. ವಿರಾಜಪೇಟೆಯ ರೋಟರಿ ಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದ ಕ್ರೀಡಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಕ್ರೀಡಾ ಜ್ಯೋತಿಯನ್ನು ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಗ್ರಾಮೀಣ ಪರಿಸರವೇ ವಿದ್ಯಾರ್ಥಿಗಳು ಕ್ರೀಡಾ ಪ್ರತಿಭೆ ಮೆರೆಯಲು ಪೂರಕ. ದೈಹಿಕವಾಗಿ ಸಮರ್ಥರಿರುವ ಇವರಿಗೆ ಸೂಕ್ತ ತರಬೇತಿ, ಮಾರ್ಗದರ್ಶನ ನೀಡಿದರೆ ಅದ್ವಿತೀಯ ಸಾಧನೆ ಮಾಡಬಲ್ಲರು. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಅನುಕೂಲಕರ ವಾತಾವರಣ ಇದೆ. ಅಲ್ಲದೇ, ದೈಹಿಕ ಶಿಕ್ಷಣ, ಶಿಕ್ಷಕರು ಅತ್ಯಂತ ಆಸಕ್ತಿ, ಶ್ರದ್ಧೆಯಿಂದ ಕಲಿಸುತ್ತಿದ್ದಾರೆ. ಗ್ರಾಮೀಣ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೋಷಕರು ಹೆಚ್ಚು ಪ್ರೋತ್ಸಾಹ ನೀಡಬೇಕು. ಮಕ್ಕಳಿಗೆ ಸೌಲಭ್ಯದ ಕೊರತೆಯಾಗದಂತೆ ಶಿಕ್ಷಕರು ಅಗತ್ಯ ಕ್ರಮ ವಹಿಸಬೇಕು ಎಂದು ತಿಳಿಸಿದರು. ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ವನಜಾಕ್ಷಿ ಮಾತನಾಡಿ, ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ…

Read More

ಮಡಿಕೇರಿ ಜ.2 : ಕಾನೂನಿನ ಅರಿವಿಲ್ಲದವರು ಕಾನೂನು ಪ್ರಕ್ರಿಯೆಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ, ಇದು ಸರಿಯಾದ ಕ್ರಮವಲ್ಲ. ಹಳೆಯ ಪ್ರಕರಣಗಳ ಇತ್ಯರ್ಥಕ್ಕಾಗಿ ಸಾಮಾನ್ಯ ಸುತ್ತೋಲೆಯನ್ನು ಅಧಿಕಾರಿಗಳ ಮಟ್ಟದಲ್ಲಿ ಕಳುಹಿಸಲಾಗಿದೆ. ರಾಮಮಂದಿರ ಉದ್ಘಾಟನೆಗೆ ನಮ್ಮ ವಿರೋಧವಿಲ್ಲದಿರುವಾಗ ದ್ವೇಷ ರಾಜಕಾರಣ ಮಾಡುವ ಅಗತ್ಯವೇನಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಮಮಂದಿರ ಉದ್ಘಾಟನೆಗೆ ನಮ್ಮ ವಿರೋಧವಿಲ್ಲವೆಂದು ಈಗಾಗಲೇ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. ನಾನು ಕೂಡ ರಾಮಮಂದಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ಶುಭ ಕೋರುತ್ತೇನೆ ಎಂದರು. ನಾಲ್ಕು ವರ್ಷ ಇವರದ್ದೇ ಸರ್ಕಾರವಿದ್ದರೂ ಹಳೆಯ ಪ್ರಕರಣ ಇತ್ಯರ್ಥ ಪಡಿಸದೆ ಮಲಗಿದ್ದರೇ ಎಂದು ಪ್ರಶ್ನಿಸಿದ ಪೊನ್ನಣ್ಣ, ಕಾನೂನು ವ್ಯಾಪ್ತಿಯ ಸುತ್ತೋಲೆಗೂ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು. ರಾಮಮಂದಿರಕ್ಕೆ ನಮ್ಮ ವಿರೋಧವಿದಿದ್ದರೆ ನಾವು ದ್ವೇಷ ರಾಜಕಾರಣ ಮಾಡುತ್ತಿದ್ದೇವೆ ಎಂದು ಹೇಳಬಹುದಿತ್ತು. ಆದರೆ ಈಡಿ, ಸಿಬಿಐಯನ್ನು ಕಪಿ ಮುಷ್ಠಿಯಲ್ಲಿಟ್ಟುಕೊಂಡು ರಾಜಕೀಯ ದ್ವೇಷ ಮಾಡುತ್ತಿರುವವರು ಇವರು ಎಂದು ಆರೋಪಿಸಿದರು. ನನ್ನನ್ನು ರಾಜಕೀಯವಾಗಿ ಮುಗಿಸಲು…

Read More

ಮಡಿಕೇರಿ ಜ.2 : ಕನೆಕ್ಟಿಂಗ್ ಕೊಡವಾಸ್ ಸಂಘಟನೆ ವತಿಯಿಂದ ಕೊಡವ ಮಕ್ಕಡ ಕೂಟದ ಸ್ಥಾಪಕ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರನ್ನು ಸನ್ಮಾನಿಸಲಾಯಿತು. ಕೊಡವ ಮಕ್ಕಡ ಕೂಟದ ವತಿಯಿಂದ ಕೊಡವ ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಪುಸ್ತಕ ಪ್ರಕಟಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನಡೆಸುತ್ತಿರುವ ಸಲುವಾಗಿ ಕನೆಕ್ಟಿಂಗ್ ಕೊಡವಾಸ್ ಸಂಘಟನೆ ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ನಡೆದ “ವಿಶ್ವ ಕೊಡವ ಸಮ್ಮೇಳನ” ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಕನೆಕ್ಟಿಂಗ್ ಕೊಡವಾಸ್ ಸಂಘಟನೆ ಅಧ್ಯಕ್ಷ ಶಾಂತೆಯಂಡ ನಿರನ್ ನಾಚಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಗ್ರೀನ್ ಸಿಟಿ ಫೋರಂ ನಿರ್ದೇಶಕ ಕುಕ್ಕೇರ ಜಯ ಚಿಣ್ಣಪ್ಪ, ತಲಕಾವೇರಿ ಮತ್ತು ಭಾಗಮಂಡಲ ದೇವಾಲಯದ ಮಾಜಿ ಅಧ್ಯಕ್ಷರು ಹಾಗೂ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಬಿದ್ದಟಂಡ ಎಸ್.ತಮ್ಮಯ್ಯ ಹಾಜರಿದ್ದರು.

Read More

ಮಡಿಕೇರಿ ಜ.2 : ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಎದುರು ನಿಂತು ಕರ್ನಾಟಕ ರಾಜ್ಯಕ್ಕೆ ಏನು ಬೇಕು ಎಂದು ಕೇಳಲಾಗದ ಬಿಜೆಪಿ ಮಂದಿ, ಜನರ ಹಾದಿ ತಪ್ಪಿಸುವುದಕ್ಕಾಗಿ ಧರ್ಮದ ರಾಜಕಾರಣ ಮಾಡುತ್ತಿದ್ದಾರೆ ಎಂದು ಸಣ್ಣ ನೀರಾವರಿ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಆರೋಪಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೊಳ್ಳುತ್ತಿರುವುದಕ್ಕೂ, ಗಲಭೆ ಸಂಬಂಧ ಹಳೆಯ ಪ್ರಕರಣಗಳ ಕುರಿತು ರಾಜ್ಯದಲ್ಲಿ ವಿಚಾರಣೆ ನಡೆಯುತ್ತಿರುವುದಕ್ಕೂ ಯಾವುದೇ ಸಂಬಂಧವಿಲ್ಲ, ಈ ಬಗ್ಗೆ ಈಗಾಗಲೇ ಗೃಹ ಸಚಿವರು ಸ್ಪಷ್ಟೀಕರಣ ನೀಡಿದ್ದಾರೆ, ಕಾನೂನು ರೀತಿಯ ಕ್ರಮಗಳು ನಡೆಯುತ್ತಿದೆ ಅಷ್ಟೇ ಎಂದರು. ದೇಶದ ಇತಿಹಾಸದಲ್ಲೇ ಕಾಂಗ್ರೆಸ್ ಸರ್ಕಾರ ದ್ವೇಷ ರಾಜಕಾರಣ ಮಾಡಿಲ್ಲ, ವಿರೋಧ ಪಕ್ಷದಲ್ಲಿದ್ದ ವಾಜಪೇಯಿ, ಅಡ್ವಾಣಿ ಅವರನ್ನು ಅತ್ಯಂತ ಗೌರವಯುತವಾಗಿ ನಡೆಸಿಕೊಂಡಿದೆ. ಆದರೆ ಈಗಿನ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಚಿವ ಅಮಿತ್ ಶಾ ಅವರುಗಳು ಸಿಬಿಐ, ಈಡಿ, ಚುನಾವಣಾಧಿಕಾರಿಗಳನ್ನು ಬಳಸಿಕೊಂಡು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ.…

Read More