ಲೇಖಕ: admin

ಸೋಮವಾರಪೇಟೆ ಜ.2 : ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ ಆಂಗ್ಲ ಮಾಧ್ಯಮ ಶಾಲೆ ಹಾಗೂ ಸುಂಟಿಕೊಪ್ಪ ಕೊಡಗರಹಳ್ಳಿ ಶಾಲೆಗೆ ಒಕ್ಕಲಿಗರ ಸಂಘದ ನಿರ್ದೇಶಕ, ದಾನಿ ಹರಪಳ್ಳಿ ರವೀಂದ್ರ ಆರ್ಥಿಕ ಸಹಾಯ ನೀಡಿದರು. ಶಾಂತಳ್ಳಿ ಕುಮಾರಲಿಂಗೇಶ್ವರ ಶಾಲೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಪೋಷಕರ ಸಭೆಯಲ್ಲಿ ಒಟ್ಟು 30 ಲಕ್ಷ ಮೌಲ್ಯದ ಚೆಕ್‍ನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಕೆ.ಗೋಪಾಲ್ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಕೊಡಗರಹಳ್ಳಿ ಶಾಲೆಯನ್ನೂ ಅಭಿವೃದ್ಧಿಗೊಳಿಸುವ ಚಿಂತನೆಯಿದ್ದು, ಆ ಶಾಲೆಗೆ 3 ಲಕ್ಷ ಅನುದಾನ ನೀಡುವ ಬಗ್ಗೆ ಕ್ರಮ ವಹಿಸುವುದಾಗಿ ಹರಪಳ್ಳಿ ರವೀಂದ್ರ ಹೇಳಿದರು. ಮಾತೃಭಾಷೆಯಾಗಿರುವ ಕನ್ನಡವನ್ನು ದೈನಂದಿನ ಜೀವನದಲ್ಲಿ ಬಳಸಲೇಬೇಕಿದೆ. ಆದರೆ ವ್ಯಾವಹಾರಿಕವಾಗಿ ಆಂಗ್ಲ ಭಾಷೆಯ ಅನಿವಾರ್ಯವಿದೆ. ಸ್ಪರ್ಧಾತ್ಮಕ ಮತ್ತು ತಂತ್ರಜ್ಞಾನದ ಯುಗದಲ್ಲಿ ಬದುಕು ಕಟ್ಟಿಕೊಳ್ಳಲು ಇಂಗ್ಲೀಷ್‍ನ ಅಗತ್ಯತೆ ಹೆಚ್ಚಿದ್ದು, ಈ ನಿಟ್ಟಿನಲ್ಲಿ ಶಾಂತಳ್ಳಿಯಂತಹ ಗ್ರಾಮೀಣ ಭಾಗದಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಲಾಗಿದೆ ಎಂದರು. ಶ್ರೀ ಕುಮಾರಲಿಂಗೇಶ್ವರ ಶಾಲೆಯಲ್ಲಿ ಹೆಚ್ಚುವರಿಯಾಗಿ 4 ಕೊಠಡಿ, ಕಂಪ್ಯೂಟರ್ ಶಿಕ್ಷಣ, ಸ್ಮಾರ್ಟ್ ಕ್ಲಾಸ್, ಯೋಗ, ಸಂಗೀತ,…

Read More

ನಾಪೋಕ್ಲು ಜ.2 : ಸಂಘಟನೆಯನ್ನು ಆರಂಭಿಸುವುದು ಸುಲಭ ಅದನ್ನು ಯಶಸ್ವಿ ಸಂಘಟನೆಯಾಗಿ ಮಾರ್ಪಡಿಸಲು ಕಾರ್ಯಕರ್ತರು ಸಾಕಷ್ಟು ಶ್ರಮವಹಿಸಬೇಕು ಎಂದು ಮಡಿಕೇರಿ ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ.ಎಸ್ ರಮೇಶ್ ಹೇಳಿದರು. ನಾಪೋಕ್ಲುವಿನ ಪೊನ್ನಮ್ಮ ಕಾವೇರಪ್ಪ ಕಾಂಪ್ಲೆಕ್ಸ್ ನಲ್ಲಿ ನಡೆದ ಹಿಂದೂ ಮಲಯಾಳಿ ಸಂಘದ ಕಚೇರಿ ಉದ್ಘಾಟನಾ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಉತ್ತಮ ಸದಸ್ಯರಿಂದ ಸಂಘಟನೆ ಬಲವರ್ಧನೆಗೊಳ್ಳುತ್ತದೆ. ಸಂಘಟನೆ ಆರಂಭಿಸುವಾಗ ಇರುವ ಆಸಕ್ತಿ ಚಿರಕಾಲ ಉಳಿಯಬೇಕು. ತಿಂಗಳಿಗೊಮ್ಮೆ ಸಭೆ ನಡೆಸುವುದರ ಮೂಲಕ ಆಗು ಹೋಗುಗಳನ್ನು ಚರ್ಚಿಸಿ ಸಂಘದ ಅಭಿವೃದ್ಧಿಗೆ ಶ್ರಮಿಸಬೇಕು. ಪ್ರತಿ ಸಭೆಯಲ್ಲಿ ಸದಸ್ಯರು ಪಾಲ್ಗೊಂಡು ಒಮ್ಮತದ ಅಭಿಪ್ರಾಯವನ್ನು ಹೊಂದಿ ತೀರ್ಮಾನ ಕೈಗೊಂಡಾಗ ಯಶಸ್ಸಿಗೆ ಸಹಕಾರಿಯಾಗುತ್ತದೆ ಎಂದರು. ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಸಂಘದ ಕಚೇರಿ ಉದ್ಘಾಟಿಸಿ ಮಾತನಾಡಿ, ಸಂಘದಿಂದ ಸದಸ್ಯರಿಗೆ ಉಪಯೋಗವಾಗಲಿ. ಸಂಘದ ಕಾರ್ಯಕ್ರಮಗಳನ್ನು ಸದಸ್ಯರು ಸದುಪಯೋಗಪಡಿಸಿಕೊಳ್ಳಬೇಕು. ಮುಂದಿನ ಪೀಳಿಗೆಗೆ ಜವಾಬ್ದಾರಿ ಸಂಘವನ್ನು ನಿರ್ಮಿಸಿ ಕೊಡಬೇಕು ಎಂದು ಸಲಹೆ ನೀಡಿದರು. ಕಾಫಿ ಬೆಳೆಗಾರ ಅಪ್ಪಚೆಟ್ಟೋಳಂಡ ನವೀನ್…

Read More

ಸಂಪಾಜೆ ಜ.2 :   ಚೆಡಾವು-ಸಂಪಾಜೆ ಸ್ವಾಮಿ ಕೊರಗಜ್ಜ ದೈವದ ಸನ್ನಿಧಿಯ  ನೇಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಪೆರಾಜೆ ಶಾಸ್ತಾವು ದೇವಾಲಯದ ಮಾಜಿ ಧರ್ಮದರ್ಶಿ ಸುರೇಶ್ ಪೆರುಮುಂಡ  ಬಿಡುಗಡೆ ಮಾಡಿದರು.  ಕಾರ್ಯಕ್ರಮದಲ್ಲಿ ದೈವಸ್ಥಾನದ ಧರ್ಮದರ್ಶಿ ಹೆಚ್.ಎಂ.ಬಾಬು,  ನೇಮೋತ್ಸವ ಸಮಿತಿಯ ಅಧ್ಯಕ್ಷ  ಹುದೇರಿ ಶಿವಯ್ಯ (ರವಿ), ಸಮಾಜ ಸೇವಕರಾದ ಕೆ.ಕೆ.ರಾಜೇಶ್ವರಿ, ಸ್ವಾಮಿ ಕೊರಗಜ್ಜ ಸೇವಾ ಸಮಿತಿಯ ಅಧ್ಯಕ್ಷ  ಹೆಚ್.ಸಿ.  ಗಣೇಶ್, ಸದಸ್ಯರಾದ ಶಶಿಕುಮಾರ್,  ಸುಂದರ,  ನಾರಾಯಣ,  ಕೆ.ಟಿ.ಸತೀಶ್ , ಹುಕ್ರಪ್ಪ,  ಮೋಹನ,  ನಾಗೇಶ್,  ಸಚಿನ್,  ವಸಂತ, ಸಂತೋಷ್, ಶರತ್,  ಅಶ್ವಥ್, ನಿತಿನ್,  ಗೌರಿ, ಸುಮಿತ್ರಾ,  ಸರೋಜ , ಹೆಚ್.ಎಂ. ನಾರಾಯಣ, ವಿತಿನ್ ಭಾಗವಹಿಸಿದ್ದರು.

Read More

ಮಡಿಕೇರಿ ಜ.2 :  ಅನಾದಿ ಕಾಲದಿಂದಲೂ ಕೊಡವ ಸಂಸ್ಕೃತಿಯನ್ನು ಆಚರಿಸುತ್ತ, ಕೊಡಗಿನ ಮೂಲನಿವಾಸಿಗಳಾಗಿ ಬಾಳುತ್ತಿರುವ ಕೊಡವ ಪಾಲೆ ಜನಾಂಗದ ಸರ್ವತೋಮುಖ ಅಭಿವೃದ್ದಿಗೆ ಕಟಿಬದ್ದನಾಗಿದ್ದು, ಹಿಂದೆ ಪರಿಶಿಷ್ಟ ಪಂಗಡಕ್ಕೆ ಸೇರಿದ್ದು, ಇದೀಗ ಪರಿಶಿಷ್ಟ ಜಾತಿ ಎಂದು ತಪ್ಪಾಗಿ ಪರಿಗಣನೆ ಆಗಿರುವುದು ತನ್ನ ಗಮನಕ್ಕೆ ಬಂದಿದ್ದು, ಕೆಲವೇ ದಿನಗಳಲ್ಲಿ ಆಗಿರುವ ತಾಂತ್ರಿಕ ಅಡಚಣೆಯನ್ನು ಸರಿಪಡಿಸಿ, ಅಧಿಕೃತವಾಗಿ ಪರಿಶಿಷ್ಟ ಪಂಗಡ ಎಂದು ಮರು ಆದೇಶ ಮಾಡಿಸಲಾಗುವುದು ಎಂದು  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಶಾಸಕ  ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ  ಭರವಸೆ ನೀಡಿದರು. ಮೂರ್ನಾಡಿನಲ್ಲಿ ನಡೆದ ಕೊಡವ ಪಾಲೆ ಜನಾಂಗದ ವಾರ್ಷಿಕ  ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಕೊಡವ ಪಾಲೆ ಅಥವಾ ಅರಮನೆಪಾಲೆ ಜನಾಂಗವು ಕೊಡವ ಸಂಸ್ಕೃತಿಯನ್ನು ಪಾಲಿಸುತ್ತಿದ್ದು, ಅವರದ್ದೇ ಶೈಲಿಯ ಶ್ರಮದಿಂದ ಶಾಂತಿಯುತವಾಗಿ ಬಾಳುತ್ತಿರುವ ಜನಾಂಗವಾಗಿದೆ ಎಂದರು. ಪ್ರಸ್ತುತ ದಿನಗಳಲ್ಲಿ ಜನಸಂಖ್ಯೆ ಕುಸಿತ  ಕಾಣುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಅವರು,  ಈ ಜನಾಂಗದ ರಕ್ಷಣೆ ನಮ್ಮ ಸರ್ಕಾರದ ಹೊಣೆಯಾಗಿದೆ ಅದನ್ನು ತಾವು ಪಾಲಿಸುತ್ತೇನೆ ಎಂದರು.  ಈ…

Read More

ಮಡಿಕೇರಿ ಜ.2 : ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಗರಸಭೆ, ಪಟ್ಟಣ ಪಂಚಾಯ್ತಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ನಗರ ಪುನರ್ವಸತಿ ಕಾರ್ಯಕರ್ತರು ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಜನವರಿ, 25 ರೊಳಗೆ ಸಲ್ಲಿಸಬೇಕು. ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಮಾಸಿಕ ಗೌರವಧನ ರೂ. 9 ಸಾವಿರ. ಎಸ್‍ಎಸ್‍ಎಲ್‍ಸಿ ಉತ್ತೀರ್ಣ/ ಅನುತ್ತೀರ್ಣ ಶೇ.40 ಕ್ಕಿಂತ ಮೇಲ್ಪಟ್ಟು ಶೇ.75 ಕ್ಕಿಂತ ಕಡಿಮೆ ಇರಬೇಕು. 18 ರಿಂದ 45 ವರ್ಷದ ವಯೋಮಾನದವರಾಗಿರಬೇಕು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಮಾಸಿಕ ಗೌರವಧನ ರೂ.9 ಸಾವಿರ, ಎಸ್‍ಎಸ್‍ಎಲ್‍ಸಿ ಉತ್ತೀರ್ಣ / ಅನುತ್ತೀರ್ಣ ಶೇ.40ಕ್ಕಿಂತ ಮೇಲ್ಪಟ್ಟು ಶೇ.75ಕ್ಕಿಂತ ಕಡಿಮೆ ಇರಬೇಕು. 18 ರಿಂದ 45 ವರ್ಷದ ವಯೋಮಾನದವರಾಗಿರಬೇಕು. ಹುದ್ದೆಗಳು ಖಾಲಿ ಇರುವ ವಿವರ: ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಯು ನಗರಸಭೆ ಮಡಿಕೇರಿ-3 ಕುಶಾಲನಗರ ಪಟ್ಟಣ ಪಂಚಾಯಿತಿ-1, ಸೋಮವಾರಪೇಟೆ ಪಟ್ಟಣ ಪಂಚಾಯಿತಿ- 1 ಮತ್ತು ವಿರಾಜಪೇಟೆ ಪಟ್ಟಣ ಪಂಚಾಯಿತಿ-1. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಯು…

Read More

ಮಡಿಕೇರಿ ಜ.1 :NEWS DESKಕರ್ನಾಟಕದ ಹೆಮ್ಮೆಯ ಶಿಲ್ಪಿ ಅರುಣ್ ಯೋಗಿರಾಜ್ ಅವರ ಕೆತ್ತನೆಯ ಶ್ರೀ ರಾಮನ ಪ್ರತಿಮೆ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲು ಆಯ್ಕೆಯಾಗಿದೆ. ಮೈಸೂರು ಮೂಲದ ಪ್ರಖ್ಯಾತ ಶಿಲ್ಪಿ ಶ್ರೀ @yogiraj_arun ಅವರು  ಆಯೋಧ್ಯೆಯ ಶ್ರೀರಾಮ ಜನ್ಮಭೂಮಿಯ ರಾಮಮಂದಿರದ ವಿಗ್ರಹದ ಕೆತ್ತನೆಯನ್ನು ನೆರವೇರಿಸಿರುವುದು  ನಿಜಕ್ಕೂ ಹೆಮ್ಮೆಯ ಸಂಗತಿ. (ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ)

Read More

ಮಡಿಕೇರಿ ಜ.1 : ಮಡಿಕೇರಿ ತಾಲ್ಲೂಕು ಹೆರವನಾಡು ಗ್ರಾಮದ ಅಪ್ಪಂಗಳ ನಿವಾಸಿ ಮೊಟ್ಟನ ಡಾಲು ಜ್ಯೋತಿ ಶಂಕರ್ ( ಹಿರಿಯ ವಕೀಲರು) (59) ಇಂದು ಸಂಜೆ ನಿಧನರಾದರು. ಕೊಡಗು ಗೌಡ ವಿದ್ಯಾಸಂಘದ ನಿರ್ದೇಶಕರು, ಭಾಗಮಂಡಲ ಕಾವೇರಿ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ನಿರ್ದೇಶಕರು, ಕಾವೇರಿ ಜನ್ಮಭೂಮಿ ಟ್ರಸ್ಟ್ ನ ನಿರ್ದೇಶಕರು ಆಗಿರುವ ಮೊಟ್ಟನ ಡಾಲು ಜ್ಯೋತಿಶಂಕರ್ ಅವರ ಅಂತ್ಯಕ್ರಿಯೆ ಜ.2 ರಂದು ಮಧ್ಯಾಹ್ನ 2 ಗಂಟೆಗೆ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Read More

ಕುಶಾಲನಗರ ಜ.1 : ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಜಿಲ್ಲೆಯ  ಕುಶಾಲನಗರದ ವಿವೇಕಾನಂದ ಕಾಲೇಜು ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಎನ್ .ಎನ್. ಶಂಭುಲಿಂಗಪ್ಪ ಅವರಿಗೆ ರಾಯಚೂರಿನಲ್ಲಿ ಡಾ ಹೆಚ್. ಎನ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.  ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಹಯೋಗದೊಂದಿಗೆ ರಾಯಚೂರಿನ ಲಿಂಗಸಗೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಪರಿಷತ್ತಿನ ಮೂರನೇ ರಾಜ್ಯಮಟ್ಟದ ವೈಜ್ಞಾನಿಕ ಸಮ್ಮೇಳನದಲ್ಲಿ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷರಾದ ಡಾ. ಹುಲಿಕಲ್ ನಟರಾಜ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಮ್ಮೇಳನ ಅಧ್ಯಕ್ಷರಾದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಹಲವು  ಗಣ್ಯರ ಉಪಸ್ಥಿತಿಯಲ್ಲಿ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿಗಳಾದ ಡಾ ಎಂ  ಹನುಮಂತಪ್ಪ ಅವರು ಪ್ರಶಸ್ತಿ ನೀಡಿ  ಸನ್ಮಾನಿಸಿದರು.  ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷೆ ವನಿತಾ ಚಂದ್ರಮೋಹನ್ ಮತ್ತಿತರರು ಇದ್ದರು.

Read More

ಮಡಿಕೇರಿ ಜ.1 : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಜ.2 ಮತ್ತು 3 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಸಚಿವರು ಜ.2 ರಂದು ಬೆಳಗ್ಗೆ 11 ಗಂಟೆಗೆ ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯುವ ಕೊಡಗು ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಜ.3 ರಂದು ಸೋಮವಾರಪೇಟೆ ತಾಲ್ಲೂಕು ಕೂಡಿಗೆ ಕ್ರೀಡಾಶಾಲೆಯಲ್ಲಿ ನಡೆಯುವ 2023-24ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ 17 ರ ವಯೋಮಿತಿಯ ಬಾಲಕಿಯರ ರಾಷ್ಟ್ರಮಟ್ಟದ ಹಾಕಿ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ತಿಳಿಸಿದ್ದಾರೆ.

Read More

ಮಡಿಕೇರಿ ಜ.1 : ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಹೆಚ್.ಡಿ.ಸಿಂಚನ ಜಾರ್ಖಾಂಡ್‍ ನಲ್ಲಿ ನಡೆಯಲಿರುವ 41ನೇ ರಾಷ್ಟ್ರ ಮಟ್ಟದ ಥ್ರೋಬಾಲ್ ಚಾಂಪಿಯನ್‍ಶಿಪ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.

Read More