ಮಡಿಕೇರಿ ಜ.1 : ರಾಜ್ಯ ಸರ್ಕಾರದ ಖಜಾನೆ ಇಲಾಖೆಯಲ್ಲಿ ಸುದೀರ್ಘ ಕಾರ್ಯನಿರ್ವಹಿಸಿದ್ದ ನಗರದ ನಿವಾಸಿ ಎಂ.ಬಾಲಕೃಷ್ಣ ಅವರು ವಯೋನಿವೃತ್ತಿಯಾಗಿದ್ದು, ಇವರನ್ನು ಸುಳ್ಯದಲ್ಲಿ ವಿವಿಧ ಇಲಾಖೆಗಳ ವತಿಯಿಂದ ಸನ್ಮಾನಿಸಲಾಯಿತು. ಮಡಿಕೇರಿ ಜಯನಗರ ಬಡಾವಣೆ ನಿವಾಸಿಯಾಗಿರುವ ಬಾಲಕೃಷ್ಣ 33 ಗಳ ಕಾಲ ನಗರದ ಜಿಲ್ಲಾ ಖಜಾನೆಯಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ಮಂಗಳೂರಿನಲ್ಲಿ ಒಂದೂವರೆ ವರ್ಷ ಕಾರ್ಯನಿರ್ವಹಿಸಿದ, ಬಳಿಕ ಸಹಾಯಕ ಖಜಾನೆ ಅಧಿಕಾರಿಯಾಗಿ ಸುಳ್ಯದಲ್ಲಿ 2 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರು. ಇದೀಗ ವಯೋನಿವೃತ್ತಿಯಾಗಿರುವ ಬಾಲಕೃಷ್ಣ ಅವರಿಗೆ ಸುಳ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಸರ್ಕಾರಿ ಇಲಾಖಾಧಿಕಾರಿಗಳು, ಸಿಬ್ಬಂದಿಗಳು ಸನ್ಮಾನಿಸಿ ಗೌರವಿಸಿದರು. ಬಾಲಕೃಷ್ಣ ಅವರ ಪತ್ನಿ ಮಡಿಕೇರಿ ವಿಜಯ ಬ್ಯಾಂಕ್ ಅಧಿಕಾರಿ ಸರಸ್ವತಿ ಕೂಡ ಈ ಸಂದರ್ಭ ಹಾಜರಿದ್ದರು.
ಲೇಖಕ: admin
ಮಡಿಕೇರಿ ಜ.1 : ಅಧಿಕಾರಿಗಳು ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಧಿಕಾರಿಗಳಿಗೆ ಹೊಸ ವರ್ಷ ಆಚರಣೆಯ ಶುಭಾಶಯ ತಿಳಿಸಿ ಮಾತನಾಡಿದ ಅವರು, ಸರ್ಕಾರಿ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಲು ಅಧಿಕಾರಿಗಳಿಗೆ ಸೂಚಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಮಾತನಾಡಿ ಹಿಂದಿನ ಸಭೆಯಲ್ಲಿ ಚರ್ಚಿಸಲಾದ ಹತ್ತು ಪ್ರಕರಣಗಳ ಮಾಹಿತಿಯನ್ನು ಜಿಲ್ಲಾಧಿಕಾರಿಗಳಿಗೆ ಒದಗಿಸಿದರು. ಮುಂದಿನ ಸಭೆಗೆ ಮುನ್ನ ಇತ್ಯರ್ಥವಾಗದ ಪ್ರಕರಣ ಸರಿಪಡಿಸಲು ತಿಳಿಸಿದರು. ಸಫಾಯಿ ಕರ್ಮಚಾರಿಗಳ ಸಮಿತಿಯ ಸದಸ್ಯರಾದ ರಂಗಸ್ವಾಮಿ ಮಾತನಾಡಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಸಫಾಯಿ ಕರ್ಮಚಾರಿಗಳ ಸಭೆ ನಡೆಸಲಾಗಿದ್ದು, ಸ್ವಚ್ಛತಾಗಾರರನ್ನು ಖಾಯಂಗೊಳಿಸಲು, ನಿವೇಶನದ ಹಕ್ಕುಪತ್ರ ಒದಗಿಸಲು, ಸಫಾಯಿ ಕರ್ಮಚಾರಿಗಳಿಗೆ ಭದ್ರತೆ ನೀಡಲು ಜಿಲ್ಲಾಧಿಕಾರಿಗಳ ಬಳಿ ಮನವಿ ಮಾಡಿದರು. ಸಫಾಯಿ…
ಮಡಿಕೇರಿ ಜ.1 : ನಗರದ ಬ್ರಹ್ಮಕುಮಾರೀಸ್ ಲೈಟ್ ಹೌಸ್ ನಲ್ಲಿ ಹೊಸ ವರ್ಷದ ಆಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಹಿರಿಯ ಸಹೋದರರಾದ ಬ್ರಹ್ಮ ಕುಮಾರ್ ಪ್ರಾಣೇಶ್ ಅವರು ಹೊಸ ವರ್ಷವೂ ಪ್ರತಿಯೊಬ್ಬರಿಗೂ ನವ ಚೈತನ್ಯವನ್ನು ತುಂಬಿ ಬರುವಂತಹ ಎಲ್ಲಾ ವಿಘ್ನಗಳನ್ನು ಎದುರಿಸಿ, ಜೀವನದಲ್ಲಿ ಮುಂದುವರಿಯಲು ನಮಗೆ ಪರಮಾತ್ಮನ ಶಕ್ತಿ ಬಹಳ ಅವಶ್ಯಕತೆ ಇದೆ. ಹಾಗಾಗಿ ದಿನಕ್ಕೆ ಒಂದು ಗಂಟೆಯಾದರೂ ನಾವು ಆಧ್ಯಾತ್ಮ ಚಿಂತನೆಗೆ ಮತ್ತು ಪರಮಾತ್ಮನ ಧ್ಯಾನಕ್ಕೆ ಮೀಸಲಿಡುವುದು ಅತಿ ಉತ್ತಮ ವೆಂದು ಕಿವಿ ಮಾತು ಹೇಳಿದರು. ಹಿರಿಯ ಸಹೋದರಿ ರಾಜಯೋಗಿನಿ ಬ್ರಹ್ಮಕುಮಾರಿ ಗಾಯತ್ರಿಜಿ ಅವರು ಎಲ್ಲರಿಗೂ ಆಶೀರ್ವಚನ ನೀಡಿ ಶುಭ ಹಾರೈಸಿದರು. ಡಾ.ಸೆಂತಿಲ್ ಕುಮಾರ್, ಡಾ.ಧಾರಿಣಿ ಹೊಸ ವರ್ಷದ ಶುಭಾಶಯ ತಿಳಿಸಿದರು. ನೆರೆದಿದ್ದ ಎಲ್ಲ ಸಹೋದರ, ಸಹೋದರಿಯರು ಹೊಸ ವರ್ಷಕ್ಕಾಗಿ ಈ ವರ್ಷವನ್ನು ಇಯರ್ ಆಫ್ ಬ್ಲೆಸ್ಸಿಂಗ್ಸ್ ಎಂದು ಬ್ರಹ್ಮಕುಮಾರಿ ಸಂಸ್ಥೆಯ ವತಿಯಿಂದ ಆಚರಿಸಲಾಗುತ್ತಿದೆ ಹಾಗಾಗಿ ಸರ್ವರು ಆಶೀರ್ವಾದ ಪಡೆಯುವುದು ಹಾಗೂ ಆಶೀರ್ವಾದ ಕೊಡುವುದು ತಮ್ಮ ಧರ್ಮವಾಗಿ ಮಾಡಿ ಮಾಡಿಕೊಂಡು ಸಮತೋಲನ…
ಮಡಿಕೇರಿ ಜ.1 : ಕೊಡಗು ಜಿಲ್ಲಾ ವಿಷ್ಣುಸೇನಾ ಸಮಿತಿ ವತಿಯಿಂದ ನಗರದ ತ್ಯಾಗರಾಜ್ ಕಾಲೋನಿಯ ಶ್ರೀ ಶಕ್ತಿ ವೃದ್ಧಾಶ್ರಮದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟ ದಿ.ಡಾ.ವಿಷ್ಣುವರ್ಧನ್ ಅವರ 14ನೇ ವರ್ಷದ ಪುಣ್ಯ ಸ್ಮರಣೆಯನ್ನು ಆಚರಿಸಲಾಯಿತು. ನಟ ಡಾ.ವಿಷ್ಣುವರ್ಧನ್ ಅವರ ಭಾವಚಿತ್ರಕ್ಕೆ ಸಮಿತಿ ಪ್ರಮುಖರು ಹಾಗೂ ಪದಾಧಿಕಾರಿಗಳು ಪುಷ್ಪ ನಮನ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು. ಇದೇ ಸಂದರ್ಭ ಕೋಟಿಗೊಬ್ಬ ಹೊಸ ವರ್ಷದ ಕ್ಯಾಲೆಂಡರನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಮಿತಿಯ ಜಿಲ್ಲಾಧ್ಯಕ್ಷ ರಫೀಕ್ ( ದಾದಾ ), ವಿಷ್ಣುಸೇನಾ ಸಮಿತಿಯ ವತಿಯಿಂದ ಹಲವಾರು ಯಶಸ್ವಿ ಕಾರ್ಯಕ್ರಮಗಳ ಳನ್ನು ನಡೆಸಿಕೊಂಡು ಬರಲಾಗಿದ್ದು, ಮುಂದಿನ ದಿನಗಳಲ್ಲಿಯೂ ವಿಷ್ಣುವರ್ಧನ್ ಅವರ ಹೆಸರಿಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು. ಈ ಸಂದರ್ಭ ಕೊಡಗು ಹಿತರಕ್ಷಣ ವೇದಿಕೆಯ ಜಿಲ್ಲಾಧ್ಯಕ್ಷ ರವಿ ಗೌಡ, ಲಿಲ್ಲಿ ರವಿ ಗೌಡ, ಫೀಲ್ಡ್ ಮಾರ್ಷಲ್ ಕೆಎಂ ಕಾರ್ಯಪ್ಪ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಮುನಿರ್ ಮಾಚರ್, ಆಶ್ರಮದ ವ್ಯವಸ್ಥಾಪಕ ಸತೀಶ್, ರೀನಾ ಸತೀಶ್,…
ಕಡಂಗ ಜ.1 : ಸಮಸ್ತ ಕೇರಳ ಜಮ್‍ಇಯ್ಯತುಲ್ ಉಲಮಾದ 100ನೇ ವಾರ್ಷಿಕ ಸಮ್ಮೇಳನವು 2026ರಲ್ಲಿ ನಡೆಯಲಿದೆ ಎಂದು ಸಮಸ್ತ ಪ್ರಧಾನ ಕಾರ್ಯದರ್ಶಿ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಘೋಷಿಸಿದರು. ಕಾಸರಗೋಡು ಜಿಲ್ಲೆಯಲ್ಲಿ ನಡೆದ ಮಹಾ ಸಮ್ಮೇಳನದಲ್ಲಿ ಸಮಸ್ತ ಸಂಘಟನೆಯ ಶತಮಾನೋತ್ಸವ ಘೋಷಣೆ ದಿನವನ್ನು ಘೋಷಣೆ ಮಾಡಿದರು. ಕಾರ್ಯಕ್ರಮದ ಧ್ವಜಾರೋಹಣದಲ್ಲಿ ರಾಜ್ಯ ವಿಧಾನ ಸಭಾಧ್ಯಕ್ಷ ರಾದ ಯು.ಟಿ.ಖಾದರ್ ಪಾಲ್ಗೊಂಡಿದ್ದರು. ಈ ಸಭೆಯಲ್ಲಿ ಸಮಸ್ತ ಸಂಘಟನೆಯ 40 ಮುಶಾವರ ಸದಸ್ಯರು ಭಾಗಿಯಾಗಿದ್ದು ವಿಶೇಷವಾಗಿತ್ತು. ಈ ಕಾರ್ಯಕ್ರಮದ ಮೂಲಕ ಶೈಕ್ಷಣಿಕ, ಆರೋಗ್ಯ, ಸಾಮಾಜಿಕ ರಂಗ ಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ತಿಳಿಸಿದರು. ವರದಿ : ನೌಫಲ್ ಕಡಂಗ
ಮಡಿಕೇರಿ ಜ.1 : ಕೆದಮುಳ್ಳೂರುವಿನ ಶ್ರೀ ಮಹಾದೇವರ ದೇವಾಲಯದಲ್ಲಿ ಅಯೋಧ್ಯೆಯ ಮಂತ್ರಾಕ್ಷತೆಗೆ ಪೂಜೆ ಸಲ್ಲಿಸಲಾಯಿತು. ಹಿಂದೂ ಸಂಘಟನೆಯ ಪ್ರಮುಖರು ಕಳೆದ ಒಂದು ವಾರಗಳ ಕಾಲ ದೇವಾಲಯದಲ್ಲಿ ಮಂತ್ರಾಕ್ಷತೆ ಹಾಗೂ ಕಳಶವನ್ನು ಇಟ್ಟು ಪೂಜೆ ಸಲ್ಲಿಸಿದರು. ಅಲ್ಲದೇ ಮಹಾದೇಶ್ವರನಿಗೆ ಅಭಿಷೇಕ ಹಾಗೂ ವಿಶೇಷ ಪೂಜೆಯನ್ನು ನೆರವೇರಿಸಿದರು. ನಂತರ ಗ್ರಾಮದ ಎಲ್ಲ ಮನೆಗಳಿಗೆ ಮಂತ್ರಾಕ್ಷತೆಯನ್ನು ವಿತರಿಸಲು ಸಜ್ಜುಗೊಳಿಸಿದರು. ಈ ಸಂದರ್ಭ ಸಂಘ ಪರಿವಾರದ ಪ್ರಮುಖರು ಹಾಗೂ ಬಿಜೆಪಿಯ ಸ್ಥಳೀಯ ಪ್ರಮುಖರು, ಮಹಾದೇವ ದೇವಾಲಯದ ಅರ್ಚಕರಾದ ರಾಧಕೃಷ್ಣ ಹಾಜರಿದ್ದರು.
ಸೋಮವಾರಪೇಟೆ ಜ.1 : ಬೆಸೂರು ಗ್ರಾಮ ಸಭೆಯು ಜ.4 ರಂದು ಗ್ರಾ.ಪಂ ಅಧ್ಯಕ್ಷೆ ಕಮಲಮ್ಮ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 10.30 ಗಂಟೆಗೆ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆಯಲಿರುವ ಸಭೆಯಲ್ಲಿ ನೋಡೆಲ್ ಅಧಿಕಾರಿಯಾಗಿ ಬೆಸೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಶಶಿಕಲಾ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೋಮವಾರಪೇಟೆ ಜ.1 : ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಪಡೆದವರು ದೊಡ್ಡ ಹುದ್ದೆ ಗಳಲ್ಲಿದ್ದು, ಸರ್ಕಾರಿ ಶಾಲೆ ಎಂಬ ಕೀಳರಿಮೆ ಬೇಡ ಎಂದು ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಅಭಿಪ್ರಾಯಿಸಿದರು. ಶಾಲಾ ಮೈದಾನದಲ್ಲಿ ಆಯೋಜಿಸಿದ್ದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳಿಗೆ ಮೌಲ್ಯಧಾರಿತ ಶಿಕ್ಷಣ ಸಿಗದಿದ್ದರೆ, ಸಮಾಜದ ಆಸ್ತಿ ಆಗುವುದಿಲ್ಲ. ಸಮಾಜದಲ್ಲಿ ದುರಾಸೆಯಿಂದ ಹಣ ಸಂಪಾದಿಸಲು ಪ್ರಾರಂಭಿಸುತ್ತಾರೆ. ಒತ್ತಡದಿಂದ ಆರೋಗ್ಯವನ್ನು ಕಳೆದುಕೊಳ್ಳುತ್ತಾರೆ. ಸುಖ ಅನುಭವಿಸಲು ಸಾಧ್ಯವಾಗುವುದಿಲ್ಲ. ಶಿಕ್ಷಣ ಪಡೆಯುವುದರೊಂದಿಗೆ ನಮ್ಮ ಆರೋಗ್ಯವನ್ನು ಸರಿಯಾಗಿ ಇಟ್ಟುಕೊಂಡಲ್ಲಿ ಮಾತ್ರ ಉತ್ಸಾಹಭರಿತ ಜೀವನ ನಡೆಸಲು ಸಾಧ್ಯ ಎಂದರು. ಮಕ್ಕಳಲ್ಲಿ ಕಲೆ, ಸಂಸ್ಕೃತಿ, ಆಚಾರ ವಿಚಾರಗಳನ್ನು ಬೆಳೆಸುವ ಕೆಲಸವನ್ನು ಪೋಷಕರು ಮಾಡಬೇಕು. ಶಿಕ್ಷಕರು ತಮ್ಮ ಮಕ್ಕಳಂತೆ ವಿದ್ಯಾರ್ಥಿಗಳನ್ನು ಕಾಣುವ ಮೂಲಕ ಉತ್ತಮ ಶಿಕ್ಷಣ ನೀಡಬೇಕೆಂದರು. ಶಾಲಾ ಹಳೆಯ ವಿದ್ಯಾರ್ಥಿ ನಿವೃತ್ತ ಪ್ರಾಂಶುಪಾಲರಾದ ಧರ್ಮಪ್ಪ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಓದುತಿರುವ ಬಗ್ಗೆ ಪೋಷಕರಿಗೆ ಮತ್ತು ವಿದ್ಯಾರ್ಥಿಗಳಲ್ಲಿ ಕೀಳರಿಮೆ ಬೇಡ. ನಾನೂ ಸರ್ಕಾರಿ ಶಾಲೆಯಲ್ಲಿ…
ಸೋಮವಾರಪೇಟೆ ಜ.1 : ಪಟ್ಟಣದ ಶ್ರೀ ಮುತ್ತಪ್ಪ ಸ್ವಾಮಿ ಮತ್ತು ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಮಂಡಲ ಪೂಜೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಅಯ್ಯಪ್ಪ ವೃತಧಾರಿಗಳು ದೀಪವನ್ನು ಹೊತ್ತು ಪೂಜೆ ಸಲ್ಲಿಸಿದರು. ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ ನಡೆಯಿತು. ಅಚಕರಾದ ಜಗದೀಶ್ ಉಡುಪ, ಚಂದ್ರಶೇಖರ್ ಹೊಳ್ಳ, ವೆಂಕಟೇಶ್‍ಹೊಳ್ಳ, ಶ್ರೀರಂಗಚಾರಿ, ಪ್ರಸಾದ್ ಭಟ್, ಚಂದ್ರಹಾಸ್ ಭಟ್, ವೆಂಕಟೇಶ್ ಹೊಳ್ಳ ಪೂಜಾ ಪೂಜಾ ಕಾರ್ಯ ನೆರವೇರಿಸಿಕೊಟ್ಟರು.
ಮಡಿಕೇರಿ ಜ.1 : ಸಂಪಾಜೆ-ಕಾಟಕೇರಿ 21.6 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣ ಕಾಮಗಾರಿಗೆ ಸಂಸದ ಪ್ರತಾಪ್ ಸಿಂಹ ಚಾಲನೆ ನೀಡಿದರು. ಸಂಪಾಜೆಯ ಗೇಟ್ ಬಳಿ ಚಾಲನೆ ನೀಡಿ ಮಾತನಾಡಿದ ಅವರು ಸುಮಾರು 14.16 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದ್ದು, 6 ತಿಂಗಳೊಳಗೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು. ಸಂಪಾಜೆಯಿಂದ ಸುಂಟಿಕೊಪ್ಪದವರೆಗೆ 21 ಕಡೆಗಳಲ್ಲಿ ತಡೆಗೋಡೆ ನಿರ್ಮಾಣ ಮಾಡಲು ಈಗಾಗಲೇ ಸರ್ಕಾರಕ್ಕೆ ಅಂದಾಜುಪಟ್ಟಿ ಸಲ್ಲಿಸಲಾಗಿದ್ದು, ಅನುಮೋದನೆ ದೊರೆಯಬೇಕಿದೆ ಎಂದು ಸಂಸದರು ಮಾಹಿತಿ ನೀಡಿದರು. ಹಾಗೆಯೇ ಕುಶಾಲನಗರ ದಿಂದ ಸಂಪಾಜೆಯವರೆಗೆ ಅಪಘಾತ ವಲಯವನ್ನು ಗುರುತಿಸಲಾಗಿದ್ದು, ಪ್ರಮುಖವಾಗಿ ಬೋಯಿಕೇರಿ ಮತ್ತು ಆನೆಕಾಡು ಬಳಿ ರಸ್ತೆ ಸರಿಪಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ಇದಕ್ಕಾಗಿ 500 ಲಕ್ಷ ರೂ. ಕಾಮಗಾರಿಗೆ ಸರ್ಕಾರದಿಂದ ಅನುಮೋದನೆ ದೊರೆತಿದೆ ಎಂದು ಪ್ರತಾಪ್ ಸಿಂಹ ತಿಳಿಸಿದರು. ಕೊಡಗು ಜಿಲ್ಲೆಯ ಕುಶಾಲನಗರ ದಿಂದ ಸಂಪಾಜೆವರೆಗೆ ಹೆದ್ದಾರಿ ಭಾಗದಲ್ಲಿ ಸುಮಾರು 1.3 ಕಿ.ಮೀ. ಮಳೆ ನೀರು ನಿಲ್ಲುವ ಪ್ರದೇಶವನ್ನು ಗುರುತಿಸಲಾಗಿದ್ದು, ಈ ಪ್ರದೇಶವನ್ನು ವಿಸ್ತರಿಸಿ ರಸ್ತೆ…






