ಲೇಖಕ: admin

ಸೋಮವಾರಪೇಟೆ ಜ.1 : ಕರ್ನಾಟಕ ರಾಜ್ಯ ಟ್ಯಾಕ್ಷಿ ಡ್ರೈವರ್ಸ್ ಅಸೋಶಿಯೇಷನ್‍ನ ತಾಲ್ಲೂಕು ಘಟಕದ ವತಿಯಿಂದ ಗಣರಾಜ್ಯೋತ್ಸವದ ಪ್ರಯುಕ್ತ ಎರಡನೇ ವರ್ಷದ ಮುಕ್ತ ನೃತ್ಯ ಸ್ಪರ್ಧೆ ನಡೆಸಲಾಗುವುದು ಎಂದು ಅಧ್ಯಕ್ಷ ಬಿ.ವಿ. ರವಿ ತಿಳಿಸಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜ.26ರಂದು ಖಾಸಗಿ ಬಸ್ ನಿಲ್ದಾಣದಲ್ಲಿ ವೇದಿಕೆಯನ್ನು ನಿರ್ಮಿಸಿ, ಕಾರ್ಯಕ್ರಮ ಮಾಡಲಾಗುವುದು. ಮಧ್ಯಾಹ್ನ 1ಕ್ಕೆ ವಿಶ್ವರೂಪ ಕಲಾತಂಡದ ವತಿಯಿಂದ ರಸಮಂಜರಿ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ನಂತರ ಸಾರ್ವಜನಿಕರಿಗೆ ಅನ್ನದಾನ ಕಾರ್ಯಕ್ರಮ ನಡೆಯುವುದು ಎಂದು ತಿಳಿಸಿದರು. ಮಧ್ಯಾಹ್ನ 3ಕ್ಕೆ 14 ವರ್ಷದೊಳಗಿನ ಮಕ್ಕಳಿಗೆ ನೃತ್ಯ ಸ್ಪರ್ಧೆ ನಡೆಸಲಾಗುವುದು. ವಿಜೇತ ತಂಡಕ್ಕೆ ರೂ. 6 ಸಾವಿರ ರೂ, ದ್ವಿತೀಯ ಸ್ಥಾನಗಳಿಸಿದ ತಂಡಕ್ಕೆ ರೂ. 5 ಸಾವಿರ ಹಾಗೂ ತೃತೀಯ ಸ್ಥಾನ ಗಳಿಸಿದ ತಂಡಕ್ಕೆ ರೂ. 4 ಸಾವಿರ ನಗದಿನೊಂದಿಗೆ ಆಕರ್ಷಕ ಟ್ರೋಫಿ ಹಾಗೂ ಭಾಗವಹಿಸಿದ ಎಲ್ಲ ತಂಡಕ್ಕೂ ಸಮಾದಾನಕರ ಬಹುಮಾನ ನೀಡಲಾಗುವುದು ಎಂದರು. ಸಂಜೆ 6 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ತಾಲ್ಲೂಕು…

Read More

ವಿರಾಜಪೇಟೆ ಜ.1 : ಲಕ್ಸೋಟಿಕ್ ಫೌಂಡೇಶನ್ ವತಿಯಿಂದ ಒನ್ ಸೈಟ್ ಎಂಬ ಕಾರ್ಯಕ್ರಮದಡಿ ವಿರಾಜಪೇಟೆಯ ಜೆ.ಪಿ.ಎನ್.ಎಂ. ಶಾಲೆಯಲ್ಲಿ ಉಚಿತ ಕಣ್ಣಿನ ತಪಾಸಣೆ ನಡೆಯಿತು. ಸರಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತವಾಗಿ ಕಣ್ಣಿನ ತಪಾಸಣೆಯನ್ನು ನಡೆಸಿ, ಕಾಲ ಕಾಲಕ್ಕೆ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳುವಂತೆ ಹೇಳಿದರು. ಕಣ್ಣಿನ ಸಮಸ್ಯೆ ಇರುವ ವಿದ್ಯಾರ್ಥಿಗಳಿಗೆ ಇದೇ ಸಂದರ್ಭ ಕನ್ನಡಕವನ್ನು ವಿತರಿಸಿದರು. ಈ ಸಂದರ್ಭ ಲಕ್ಸೋಟಿಕ್ ಫೌಂಡೇಶನ್ ಸಂಸ್ಥೆಯ ಅಧ್ಯಕ್ಷರಾದ ಕಣ್ಣು ದೇವರಾಜ್, ಅಗ್ನಿ ಮೋಹನ್, ದಿವ್ಯ ಮುತ್ತಣ್ಣ, ಶ್ವೇತಾ ಅಯ್ಯಪ್ಪ, ಡಾ.ಸಿದ್ದರಾಜು, ಮುಖ್ಯ ಶಿಕ್ಷಕರಾದ ಲಾಲ್ ಕುಮಾರ್, ಬಿಆರ್‍ಸಿ ಸಿಬ್ಬಂದಿಗಳಾದ ಅಜಿತ, ವಿಠಲ್ ಕೇಶವಮೂರ್ತಿ ಹಾಜರಿದ್ದರು. ವಿವಿಧ ಶಾಲೆಗಳಿಂದ ಆಗಮಿಸಿದ್ದ ಸುಮಾರು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಪೋಷಕರು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.

Read More

ನಾಪೋಕ್ಲು ಜ.1 : ಯವಕಪಾಡಿ ನಿವಾಸಿ ಆದಿವಾಸಿ ಹೋರಾಟಗಾರ ಕುಡಿಯರ ಮುತ್ತಪ್ಪ ಅವರಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಂಡ್ಯ ಜಿಲ್ಲಾ ಕುಳುವ ಸಮಾಜ ಹಾಗೂ ಡ್ರೀಮ್ ಫೌಂಡೇಶನ್ ಟ್ರಸ್ಟ್ ಸಂಯುಕ್ತಶ್ರಯದಲ್ಲಿ ಮಂಡ್ಯದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ಸಂಸ್ಕೃತಿ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಂಡ್ಯ ಕುಳುವ ಸಮಾಜದ ಅಧ್ಯಕ್ಷ ಕೃಷ್ಣ ಕುಮಾರು ಗಂಗೂರು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭಾ ಉಪಾಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಂಬಾಣಿ ,ಶ್ರೀರಂಗ ಪಟ್ಟಣದ ಚಂದ್ರ ವನ ಆಶ್ರಮದ ಡಾ.ತ್ರಿನೇತ್ರ ಮಹಂತ ಶಿವಯೋಗಿ ಮಹಾಸ್ವಾಮಿ, ಸಾಂಸ್ಕೃತಿಕ ಚಿಂತಕರಾದ ಜಿ.ಸಿದ್ದರಾಮಯ್ಯ ಸೇರಿದಂತೆ ಇನ್ನಿತರರು ಹಾಜರಿದ್ದರು. ಕುಡಿಯರ ಮುತ್ತಪ್ಪ ಕುಡಿಯ ಜನಾಂಗಕ್ಕೆ ಸರ್ಕಾರದಿಂದ ಇರುವ ಸೌಲಭ್ಯಗಳನ್ನು ತಲುಪಿಸುವ ವ್ಯವಸ್ಥೆಯನ್ನು ಕೈಗೊಂಡಿದ್ದರು. ಕೊಡಗು ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಕ್ರೀಡೆ, ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಇವರ ಸೇವೆಯನ್ನು ಪರಿಗಣಿಸಿ ವಿವೇಕಾನಂದ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಗ್ರಾ.ಪಂ ವತಿಯಿಂದ ಉತ್ತಮ ಸಮಾಜ ಸೇವಕ ಪ್ರಶಸ್ತಿ…

Read More

ನಾಪೋಕ್ಲು ಜ.1 : ಸತತ ಪರಿಶ್ರಮದಿಂದ ಯಶಸ್ಸು ಗಳಿಸಲು ಸಾಧ್ಯ ಎಂದು ಎಸ್.ಎ.ಪಿ ಲ್ಯಾಬ್ ಇಂಡಿಯಾದ ಪ್ರಾಡಕ್ಟ್ ಮಾಲೀಕ ಕೇಟೋಳಿರ ಕರುಣ್ ಅಪ್ಪಯ್ಯ ಹೇಳಿದರು. ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ವತಿಯಿಂದ ನಡೆದ ಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಜೀವನದ ಪ್ರತಿಯೊಂದು ಚಟುವಟಿಕೆಯಲ್ಲೂ ನಯ, ವಿನಯತೆಯನ್ನು ವಿದ್ಯಾರ್ಥಿಗಳು ರೂಡಿಸಿಕೊಳ್ಳಬೇಕು ನಾವು ಗಳಿಸಿದ ಜ್ಞಾನ ಇತರರ ಜೀವನದ ಮೇಲೆ ಪ್ರಭಾವ ಬೀರುವಂತಾಗಬೇಕು ಎಂದರು.ಧನಾತ್ಮಕವಾಗಿ ಯೋಚಿಸುವುದು ಅಗತ್ಯ ಇದರಿಂದ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯ ಎಂದರು. ಸಂಸ್ಥೆಯ ಉಪಾಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಸ್ಥೆಯ ಶ್ರೇಯಾಭಿವೃದ್ಧಿಗೆ ಶ್ರಮಿಸಿದವರನ್ನು ನೆನೆಸಿಕೊಂಡು ಸಂಸ್ಥೆ ನಡೆದುಬಂದ ದಾರಿಯ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ದತ್ತಿನಿದಿ ಹಾಗೂ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಾದವರಿಗೆ ಅತಿಥಿಗಳು ಬಹುಮಾನ ವಿತರಿಸಿ ಶುಭ ಹಾರೈಸಿದರು . ನಿರ್ದೇಶಕರಾದ ನಿವೃತ್ತ ಪ್ರಾಂಶುಪಾಲ ಕಲ್ಯಾಟಂಡ…

Read More

ನಾಪೋಕ್ಲು ಜ.1 : ಪರಿಸರ, ಅನುಭ, ನಮ್ಮ ಸಹವಾಸಗಳಿಂದ, ಕಲಿತವಿದ್ಯೆ ಮಾತ್ರ ನಮಗೆ ಜೀವನ ಪರ್ಯಂತ ಉಪಯೋಗಕ್ಕೆ ಬರುತ್ತದೆ ಎಂದು ಲೇಖಕ, ಸಾಹಿತಿ ನಾಗೇಶ್ ಕಾಲೂರು ಹೇಳಿದರು. ಹೊದವಾಡ ಗ್ರಾಮದ ರಾಫೆಲ್ಸ್ ಇಂಟರ್ ನ್ಯಾಷನಲ್ ಪಿಯು ಕಾಲೇಜ್ ವತಿಯಿಂದ ಕಾಲೇಜ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಕೃತಿಯಲ್ಲಿರುವ ಗಾಳಿ ,ನೀರು, ಬೆಳಕು ವಾತಾವರಣ ಎಲ್ಲವೂ ಜೀವಿಗಳ ಬದುಕಿಗೆ ಅತ್ಯವಶ್ಯಕ. ಪ್ರಕೃತಿಯ ಪಾಠಗಳನ್ನು ಮಕ್ಕಳಿಗೆ ಹೇಳಿಕೊಡುವುದು ಶಿಕ್ಷಣದ ಒಂದು ಭಾಗವಾಗಿರಬೇಕು. ಇನ್ನೊಬ್ಬರನ್ನು ನಾವು ನೋಯಿಸದೆ ಇರುವಂತಹ ಗುಣಗಳನ್ನು ಮಕ್ಕಳಿಗೆ ಹೇಳಿಕೊಡಬೇಕು ಎಂದ ಅವರು ಕಲಿಕೆ ಎನ್ನುವುದು ನಿರಂತರ. ಪೋಷಕರಿಗೆ ಅಧ್ಯಾಪಕರಿಗೆ ಗೌರವ ಕೊಡುವಂತಹ ತಿಳುವಳಿಕೆಯನ್ನು ಮಕ್ಕಳಿಗೆ ಕೊಡಬೇಕು, ಭಾಷೆ, ಜಾತಿ, ಜನಾಂಗವನ್ನು ಮೀರಿ ತಾಯಂದಿರಲು ಗೌರವಿಸುವಂತಹ ಕೆಲಸ ಮಕ್ಕಳಿಂದ ಆಗಬೇಬೇಕಾಗಿದೆ, ನಮ್ಮ ಶರೀರ ಇರುವುದೇ ಇನ್ನೊಬ್ಬರಿಗೆ ಉಪಕಾರ ಮಾಡಲು ಎಂಬ ಅಂಶವನ್ನು ಮನವರಿಕೆ ಮಾಡಿಕೊಡಬೇಕೆಂದು ಕಿವಿಮಾತು ಹೇಳಿದರು. ಮಂಗಳೂರಿನ ಮೋಟಿವೇಶನ್ ಸ್ಪೀಕರ್ ರಫೀಕ್ ಮಾಸ್ಟರ್ ಮಾತನಾಡಿ, ಈ ದೇಶಕ್ಕೆ ಶಕ್ತಿ…

Read More

ಮಡಿಕೇರಿ ಜ.1 : ಬೆಂಗಳೂರಿನ ಶಿಕ್ಷಣ ಜ್ಞಾನ ಮಾಸ ಪತ್ರಿಕೆಯ 21ನೇ ವಾರ್ಷಿಕೋತ್ಸವದ ಪ್ರಯುಕ್ತ ನೀಡಲಾಗುವ ರಾಜ್ಯ ಮಟ್ಟದ ಅತ್ಯುತ್ತಮ ಪ್ರಶಸ್ತಿಗೆ ಆಯ್ಕೆಯಾದ ಕೊಡಗು ಜಿಲ್ಲೆಯ ವಿವಿಧ ಶಿಕ್ಷಕರಿಗೆ ಶಿವಮೊಗ್ಗದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾಲೇಜು ವಿಭಾಗದಲ್ಲಿ ಮಡಿಕೇರಿಯ ಸಂತಜೋಸೇಫರ ಕಾಲೇಜಿನ ಉಪನ್ಯಾಸಕಿ ಕೆ.ಕೆ. ಜಯಲಕ್ಷ್ಮಿ ಕುಮಾರ್ ಅವರಿಗೆ ಜ್ಞಾನ ಸಂಜೀವಿನಿ ಪ್ರಶಸ್ತಿ . ಅತ್ಯುತ್ತಮ ಶಾಲೆಯಾಗಿ ಮಡಿಕೇರಿ ತಾಲೂಕಿನ ಸರಕಾರಿ ಪ್ರೌಢ ಶಾಲೆ ಹಾಕತ್ತೂರು ಸಕಾ೯ರಿ ಶಾಲೆ ಆಯ್ಕೆ ಆಗಿದ್ದು,  ಶಾಲೆಯ ಮುಖ್ಯ ಶಿಕ್ಷಕಿ ಬಿ.ಎಸ್.ನೀತಕುಮಾರಿ ಪ್ರಶಸ್ತಿ ಪಡೆದಿದ್ದಾರೆ. ಗೋಣಿಕೊಪ್ಪದ ಹರಿಶ್ಚಂದ್ರಪುರ ವಿಭಾಗದ ಅಂಗನವಾಡಿ ಶಿಕ್ಷಕಿ ಆರ್.ಲತಾ ಅವರಿಗೆ ಜ್ಞಾನ ಚಿಗುರು ಕವಚ ಪ್ರಶಸ್ತಿ., ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಮತ್ತು ಪೊನ್ನಂಪೇಟೆ ಕ್ಲಸ್ಟರ್ ನ ನಿಯೋಜಿತ ಸಮೂಹ ಸಂಪನ್ಮೂಲ ವ್ಯಕ್ತಿ ತಿರುನೆಲ್ಲಿಮಡ ಜೀವನ್ ಅವರಿಗೆ ” ಜ್ಞಾನ ಜ್ಯೋತಿ ” ಪ್ರಶಸ್ತಿ. ಶಿರಂಗಾಲದ ಸರಕಾರಿ ಪ್ರೌಢ ಶಾಲೆ ಶಿಕ್ಷಕ ಆರ್.ಡಿ.ಲೋಕೇಶ್ ಅವರಿಗೆ ” ಜ್ಞಾನ ಸಿಂಧು “…

Read More

ಮಡಿಕೇರಿ ಜ.1 : ಕೊಡಗರಹಳ್ಳಿಯ ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದ ಪುನರ್ ಪ್ರತಿಷ್ಠಾ 12ನೇ ವಾರ್ಷಿಕೋತ್ಸವವು ಜ.15 ರಂದು ನಡೆಯಲಿದೆ. ದೇವಾಲಯದಲ್ಲಿ ಮುಂಜಾನೆಯಿಂದಲೇ ವಿವಿಧ ಪೂಜಾ ಕೈಂಕರ್ಯಗಳು ಜರುಗಲಿದ್ದು, ಪೂರ್ವಾಹ್ನ 7 ಗಂಟೆಗೆ ಮಹಾ ಗಣಪತಿ ಹೋಮ, 8 ಗಂಟೆಯಿಂದ ಶ್ರೀ ಏಕಾದಶ ರುದ್ರಾಭಿಷೇಕ ಆರಂಭಗೊಳ್ಳಲಿದೆ. ಬೆಳಿಗ್ಗೆ 9 ಗಂಟೆಗೆಯಿಂದ ಶ್ರೀ ದೇವಿಗೆ ನವಕಲಶಾಭಿಷೇಕ ಪೂಜೆ, 11 ಗಂಟೆಗೆ ನವಗ್ರಹಗಳಿಗೆ ವಿಶೇಷ ಕಲಶಾಭಿಷೇಕ ಪೂಜೆ, 11.30 ಗಂಟೆಗೆ ನಾಗದೇವರಿಗೆ ವಿಶೇಷ ಪೂಜೆ ಜರುಗಲಿದೆ. ಮಧ್ಯಾಹ್ನ 12 ಗಂಟೆಗೆ ಮಹಾ ಪೂಜೆ ಹಾಗೂ ತೀರ್ಥಪ್ರಸಾದ ವಿತರಣೆ ನಡೆಯಲಿದ್ದು, ಅಪರಾಹ್ನ 1 ಗಂಟೆಗೆ ಅನ್ನ ಸಂತರ್ಪಣೆ ನೆರವೇರಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯ ಟ್ರಸ್ಟ್‌ನ ಪ್ರಮುಖರು ಕೋರಿದ್ದಾರೆ.

Read More

ಮಡಿಕೇರಿ ಡಿ.28 : ಕನ್ನಡ ನಾಡಿನ ಕೋಟ್ಯಾಂತರ ಜನರಿಗೆ ನೀರು ಒದಗಿಸುವ ಕಾವೇರಿ ನದಿಯ ತವರು ಜಿಲ್ಲೆ ಕೊಡಗು ಅಕಾಲಿಕ ಮಳೆ, ಬರಗಾಲ, ವನ್ಯಜೀವಿ ದಾಳಿ, ಜೀವಹಾನಿ, ಬೆಳೆ ನಷ್ಟ, ಆರ್ಥಿಕ ಮುಗ್ಗಟ್ಟು, ಬಗೆಹರಿಯದ ಸಮಸ್ಯೆಗಳ ನಡುವೆಯೇ ರಾಜಕೀಯ ಇತಿಹಾಸ ಸೃಷ್ಟಿಯ ವರ್ಷ 2023 ನ್ನು ಪೂರ್ಣಗೊಳಿಸಿದೆ. ಕೊಡಗು ಜಿಲ್ಲೆಯಲ್ಲಿ ಮಳೆ ಕೈಕೊಟ್ಟ ಪರಿಣಾಮ ಕಾವೇರಿ ತುಂಬಿ ಹರಿಯದೆ ರಾಜ್ಯದ ಬಹುತೇಕ ಭಾಗಗಳಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಯಿತು. 2022 ರಲ್ಲಿ 140 ಇಂಚು ಮಳೆ ಕಂಡಿದ್ದ ಕೊಡಗು, 2023 ರಲ್ಲಿ ಕೇವಲ 80 ಇಂಚು ಮಳೆಗಷ್ಟೇ ತೃಪ್ತಿಪಟ್ಟುಕೊಂಡಿದೆ. ಇದರ ಪರಿಣಾಮ ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ, ಪೊನ್ನಂಪೇಟೆ ಮತ್ತು ಕುಶಾಲನಗರ ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಯಿತು. ಅಲ್ಲದೆ ರಾಜ್ಯ ಕೂಡ ಬರದ ಛಾಯೆಯನ್ನು ಅನುಭವಿಸಿತು. ಜಿಲ್ಲೆಯ ಕೃಷಿಕ ವರ್ಗವನ್ನು ಮಳೆಯ ಕೊರತೆ ಮಾತ್ರವಲ್ಲದೆ ಅಕಾಲಿಕ ಮಳೆಯೂ ಕಾಡಿತು. ಅನಿರೀಕ್ಷಿತ ಮಳೆಯಿಂದ ಕಾಫಿ ಮತ್ತು ಭತ್ತದ ಬೆಳೆಗಾರರು ನಷ್ಟ ಅನುಭವಿಸಿದರು. ಮಳೆ ಕೊರತೆಯಿಂದ 9791…

Read More

ಮಡಿಕೇರಿ ಜ.1 : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಾಲುಗುಂದ ಗ್ರಾಮಸ್ಥರು, ಹಳೆಯ ವಿದ್ಯಾರ್ಥಿ ಸಂಘ, ಭಗವತಿ ಯೂತ್ ಕ್ಲಬ್ ಹಾಗೂ ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಸಂಯುಕ್ತಾಶ್ರಯದಲ್ಲಿ ಹಾಲುಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಾಲ್ಕು ದಿನಗಳ‌ ಕಾಲ ನಡೆದ ಜಿಲ್ಲಾ ಮಟ್ಟದ ಮುಕ್ತ 7+2 ಜನರ ಕಾಲ್ಚೆಂಡು ಪಂದ್ಯಾವಳಿಯಲ್ಲಿ ಕ್ಯಾಪ್ಟನ್ಸ್ 11 ಪಾಲಿಬೆಟ್ಟ ತಂಡ ಚಾಂಪಿಯನ್ ತಂಡವಾಗಿ ಹೊರಹೊಮ್ಮಿದೆ. ದ್ವಿತೀಯ ಸ್ಥಾನವನ್ನು ಚಾಮುಂಡಿ ಯುನೈಟೆಡ್ ಒಂಟಿಯಂಗಡಿ ತಂಡ ಪಡೆದುಕೊಂಡಿದೆ. ಜಿದ್ದಾಜಿದ್ದಿನಿಂದ ಕೂಡಿದ್ದ ಅಂತಿಮ ಹಣಾಹಣಿಯಲ್ಲಿ ಕ್ಯಾಪ್ಟನ್ಸ್ ‌11 ಪಾಲಿಬೆಟ್ಟ ಹಾಗೂ ಚಾಮುಂಡಿ ಯುನೈಟೆಡ್ ಒಂಟಿಯಂಗಡಿ ತಂಡವು ನಿಗದಿತ ಸಮಯದಲ್ಲಿ 2-2 ಗೋಲುಗಳಿಸಿ ಸಮಬಲ ಸಾಧಿಸಿತು. ಪೆನಾಲ್ಟಿ ಶೂಟೌಟ್ ನಲ್ಲಿ ಕ್ಯಾಪ್ಟನ್ಸ್ ‌11 ತಂಡದ ಗೋಲ್ ಕೀಪರ್ ಮಣಿ ಅವರು ಎರಡು ಪೆನಾಲ್ಟಿ ಹೊಡೆತವನ್ನು ತಡೆಯುವುದರ ಮೂಲಕ ಕ್ಯಾಪ್ಟನ್ಸ್ 11 ಪಾಲಿಬೆಟ್ಟ ತಂಡವು 5-3 ಗೋಲುಗಳ ಅಂತರದಿಂದ ಪೆನಾಲ್ಟಿ ಶೂಟೌಟ್ ನಲ್ಲಿ ಗೆಲುವು ಸಾಧಿಸಿ ಭಗವತಿ ಕಪ್ ಚಾಂಪಿಯನ್…

Read More

ಮೂರ್ನಾಡು ಜ.1 : :ಕರ್ನಾಟಕ ರಾಜ್ಯ ವೃತ್ತಿ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ 2023-24ನೇ ಸಾಲಿನ ಜಿಲ್ಲಾ ಮಟ್ಟದ ಶೈಕ್ಷಣಿಕ ಮತ್ತು ಮಕ್ಕಳ ವೃತ್ತಿ ಶಿಕ್ಷಣ ಕಲಿಕೋತ್ಸವದ ವಸ್ತು ಪ್ರದರ್ಶನದಲ್ಲಿ ಮೂರ್ನಾಡು ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಕೊಂಡಿದ್ದಾರೆ. ಮೂರ್ನಾಡು ಪ್ರೌಢಶಾಲೆಯ ವೃತ್ತಿ ಶಿಕ್ಷಕ ಹೆಚ್.ಬಿ. ಕೃಷ್ಣಪ್ಪ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿರುತ್ತಾರೆ. ವರದಿ : ಟಿ.ಸಿ.ನಾಗರಾಜ್, ಮೂರ್ನಾಡು 

Read More