ಮಡಿಕೇರಿ,ಡಿ.31: ಹೊಸ ವರ್ಷಾಚರಣೆ ಸಂಭ್ರಮಿಸಲು ಕೊಡಗು ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದಾರೆ. ಹೀಗಾಗಿ ಜಿಲ್ಲೆಯ ಬಹುತೇಕ ಎಸ್ಟೇಟ್ ಸ್ಟೇ, ಹೋಂ ಸ್ಟೇ, ರೆಸಾರ್ಟ್, ಲಾಡ್ಜ್ಗಳು ಪ್ರವಾಸಿಗರಿಂದ ತುಂಬಿದ್ದು ಕಂಡು ಬಂತು. ಅಬ್ಬಿಫಾಲ್ಸ್, ಮಾಂದಲ್ ಪಟ್ಟಿ, ದುಬಾರೆ, ನಿಸರ್ಗ ಧಾಮದಲ್ಲಿಯೂ ಪ್ರವಾಸಿಗರ ಸಂಖ್ಯೆ ಎಂದಿಗಿಂತ ಹೆಚ್ಚಿತ್ತು. ಭಾರೀ ಸಂಖ್ಯೆಯ ವಾಹನಗಳಲ್ಲಿ ಪ್ರವಾಸಿಗರು ಜಿಲ್ಲೆಯ ಕಡೆಗೆ ಆಗಮಿಸಿದ್ದ ಹಿನ್ನೆಲೆಯಲ್ಲಿ ಜಿಲ್ಲೆಯ ಬಹುತೇಕ ರಸ್ತೆಗಳಲ್ಲಿ ವಾಹನ ದಟ್ಟಣೆ ಅಧಿಕವಾಗಿತ್ತು. ಇನ್ನು ಜಿಲ್ಲಾ ಕೇಂದ್ರ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಿಂದ ರಾಜಾಸೀಟು ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಯಂತ್ರಿಸಲು ಸಂಚಾರಿ ಪೊಲೀಸರು ಹರ ಸಾಹಸ ಪಡಬೇಕಾಯಿತು. ಇನ್ನು ಮಡಿಕೇರಿಯ ಪ್ರಸಿದ್ದ ಪ್ರವಾಸಿ ತಾಣ ರಾಜಾಸೀಟಿನಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಪ್ರವಾಸಿಗರು ವರ್ಷಾಂತ್ಯದ ಸೂರ್ಯಾಸ್ಥಮಕ್ಕಾಗಿ ಕಾದು ಕುಳಿತಿದ್ದರು. ಕೆಂಬಣ್ಣ ಚೆಲ್ಲುತ್ತಾ ಬೆಟ್ಟ ಶ್ರೇಣಿಗಳ ನಡುವೆ ನೇಸರ ಮರೆಯಾಗುವ ಸಂದರ್ಭ ಪ್ರವಾಸಿಗರು ಏಕಕಾಲದಲ್ಲಿ ಇಂದಿನ ವರ್ಷಕ್ಕೆ ಗುಡ್ ಬೈ ಹೇಳುವ ಮೂಲಕ ವರ್ಷಾಂತ್ಯದ ನೇಸರನನ್ನು ಬೀಳ್ಕೊಟ್ಟರು. ಮಾತ್ರವಲ್ಲದೇ ಪ್ರಕೃತಿಯ…
ಲೇಖಕ: admin
ಮಡಿಕೇರಿ,ಡಿ.31: ಕೊಡವ ಕುಟುಂಬಗಳ ನಡುವೆ 2024ರಲ್ಲಿ ನಡೆಯಲಿರುವ ಕುಂಡ್ಯೋಳಂಡ ಹಾಕಿ ನಮ್ಮೆಯ ಲಾಂಛನ ಬಿಡುಗಡೆ ಸಮಾರಂಭ ನಾಪೋಕ್ಲುವಿನ ಕೊಡವ ಸಮಾಜದ ಅಪ್ಪಚ್ಚಕವಿ ಸಭಾಂಗಣದಲ್ಲಿ ನಡೆಯಿತು. ಕುಂಡ್ಯೋಳಂಡ ಕುಟುಂಬದ ಪಟ್ಟೆದಾರ ಕುಂಡ್ಯೋಳಂಡ ನಾಣಿ ನಾಣಯ್ಯ ಹಾಗೂ ಹಾಕಿ ನಮ್ಮೆಯ ಅಧ್ಯಕ್ಷ ಕುಂಡ್ಯೋಳಂಡ ರಮೇಶ್ ಮುದ್ದಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಬೋಪಣ್ಣ ಹಾಗೂ ಹಾಕಿ ಕರ್ನಾಟಕದ ಪ್ರಧಾನ ಕಾರ್ಯದರ್ಶಿ ಹಾಗೂ ಒಲಂಪಿಯನ್ ಡಾ.ಅಂಜಪರವಂಡ ಬಿ.ಸುಬ್ಬಯ್ಯ ಕುಂಡ್ಯೋಳಂಡ ಹಾಕಿ ನಮ್ಮೆಯ ಲಾಂಛನ ಬಿಡುಗಡೆ ಮಾಡಿದರು. ಹಾಕಿ ಉತ್ಸವದ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ, ಈ ವರ್ಷ ನಡೆಯುವ ಹಾಕಿ ಹಬ್ಬ ಕೂಡ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಹಾಕಿ ಹಬ್ಬಕ್ಕೆ ನಮ್ಮ ಸರಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಸಂದರ್ಭ 1 ಕೋಟಿ ರೂ. ಅನುದಾನ ಒದಗಿಸಿಕೊಟ್ಟಿದೆ. ಈ ಬಾರಿ ನಮ್ಮ ಸರಕಾರ ಅಧಿಕಾರದಲ್ಲಿ ಇಲ್ಲದಿದ್ದರೂ ಒರ್ವ ಸಂಸದನಾಗಿ ದಾನಿಗಳಿಂದ ಹಾಗೂ ಸಂಸದರ ಕ್ಷೇತ್ರಾಭಿವೃದ್ಧಿ ನಿಧಿಯಿಂದ…
ಮಡಿಕೇರಿ ಡಿ.31 : ಶಿಕ್ಷಣ ಸಚಿವರು ಚೆಕ್ ಅಮಾನ್ಯ ಪ್ರಕರಣದಲ್ಲಿ ತಪ್ಪಿತಸ್ಥರಾಗಿದ್ದಾರೆ. ಈ ಪ್ರಕರಣದ ಪ್ರಚಾರ ತಡೆಯಲು ನನ್ನ ತಮ್ಮನ ಪ್ರಕರಣಕ್ಕೆ ಸರಕಾರ ಗಮನ ನೀಡಿದೆ ಎಂದು ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ನಾಪೋಕ್ಲುವಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ ಮರ ಕಳ್ಳತನ ಪ್ರಕರಣದಲ್ಲಿ ಎಫ್‌ಐಆರ್‌ನಲ್ಲಿ ಸಹೋದರನ ಹೆಸರು ಇಲ್ಲದಿದ್ದರೂ ಆತನನ್ನು ವಶಕ್ಕೆ ಪಡೆಯಲಾಗಿದೆ. ನನ್ನನ್ನು ಹಣಿಯಲು ನನ್ನ ಕುಟುಂಬವನ್ನು ಟಾರ್ಗೆಟ್ ಮಾಡಿದ್ದಾರೆ. ಇದೆಂತಹ ದ್ವೇಷ ರಾಜಕಾರಣ ಎಂದು ಪ್ರತಾಪ್ ಸಿಂಹ ಸಿಂಹ ಪ್ರಶ್ನಿಸಿದರು. ಕೊಡಗು- ಮೈಸೂರು ಕ್ಷೇತ್ರದಲ್ಲಿ ನನ್ನನ್ನು ಸೋಲಿಸಿ ಪುತ್ರ ಯತೀಂದ್ರನನ್ನು ಗೆಲ್ಲಿಸಲು ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ. ಆದ್ರೆ ಈ ಷಡ್ಯಂತ್ರ ಫಲಿಸುವುದಿಲ್ಲ. ಕಾವೇರಿ ಮಾತೆ ಆಶೀರ್ವಾದ ಮತ್ತು ಕೊಡಗು-ಮೈಸೂರು ಮತದಾರರ ನಂಬಿಕೆ ನನ್ನ ಮೇಲಿದೆ. ಹೀಗಾಗಿ ಅತ್ಯಧಿಕ ಮತಗಳಿಂದ ಗೆಲ್ಲುವೆ. ಇದು ಗೊತ್ತಿದ್ದೇ ತನ್ನ ವಿರುದ್ದ ಕಾಂಗ್ರೆಸ್ ಷಡ್ಯಂತ್ರ ಹೂಡಿ ಇಲ್ಲಸಲ್ಲದ ಆರೋಪ ಮಾಡುತ್ತಿದೆ ಎಂದು ಪ್ರತಾಪ್ ಸಿಂಹ ಆರೋಪಿಸಿದರು.
ಮಡಿಕೇರಿ ಡಿ.31 : ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಕಾರಣಕ್ಕಾಗಿ ಸಂಸದ ಪ್ರತಾಪ್ ಸಿಂಹ ಅವರ ಬಗ್ಗೆ ಆತಂಕಗೊಂಡು ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಕೊಡಗು ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮುಖ್ ಸುಬ್ರಮಣ್ಯ ಉಪಾಧ್ಯಾಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡಿದಾಗಲೆಲ್ಲ ಪ್ರತಾಪ್ ಸಿಂಹರನ್ನು ಟೀಕಿಸುವುದನ್ನೇ ಕಾಯಕ ಮಾಡಿಕೊಂಡಿರುವ ಲಕ್ಷ್ಮಣ್ ಅವರು ಕಾಂಗ್ರೆಸ್ ಟಿಕೆಟ್ ನಿರೀಕ್ಷೆಯಿಂದ ಈ ರೀತಿ ವರ್ತಿಸುತ್ತಿದ್ದಾರೆ. ಟಿಕೆಟ್ ಪಡೆಯುವುದು ಹಗಲುಗನಸಾಗಿದ್ದು, ಒಂದು ವೇಳೆ ಸ್ಪರ್ಧೆಗೆ ಅವಕಾಶ ದೊರೆತರೂ ಹೀನಾಯ ಸೋಲು ಅನುಭವಿಸುವುದು ಖಚಿತ. ಇದೇ ಆತಂಕದಿಂದ ಮತ್ತು ಹತಾಶೆಯಿಂದ ಪ್ರತಾಪ್ ಸಿಂಹ ಅವರನ್ನು ಟೀಕಿಸುತ್ತಾ ಜಿಲ್ಲೆಯ ಜನರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ತಮ್ಮ ಅವಧಿಯಲ್ಲಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಿ ಜನಪ್ರಿಯತೆ ಗಳಿಸಿರುವ ಸಂಸದ ಪ್ರತಾಪ್ ಸಿಂಹರ ಮೇಲೆ ಗೂಬೆ ಕೂರಿಸುವುದನ್ನು ಬಿಟ್ಟು ಕಾಂಗ್ರೆಸ್ ಸರ್ಕಾರದಿಂದ ಕೊಡಗು ಜಿಲ್ಲೆಗೆ…
ಮಡಿಕೇರಿ ಡಿ.31 : ಯುವ ಜನರು ದೇಶದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಗಾಗಿ ಮತ್ತು ಪ್ರಜಾಪ್ರಭುತ್ವ ಮತ್ತು ಅಭಿವೃದ್ಧಿಯನ್ನು ಬಲಪಡಿಸುವ ಜೊತೆಗೆ ಪ್ರಮುಖ ಮಾನವ ಸಂಪನ್ಮೂಲಗಳಾಗಿದ್ದಾರೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಕಾಶ್ಮೀರಿ ಯುವ ವಿನಿಮಯ ಕಾರ್ಯಕ್ರಮದ ಸಮಾರೋಪ ಸಮಾರಂಭ “ವತನ್ ಕೋ ಜಾನೋ” ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಭಾರತ ಯುವಕರ ದೇಶ. ಭಾರತದ ಜನಸಂಖ್ಯೆಯ ಸುಮಾರು 65 ಪ್ರತಿಶತದಷ್ಟು ಜನರು 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ ಮತ್ತು ಯುವಕರು ದೇಶದ ಭವಿಷ್ಯ ಮತ್ತು ದೇಶದ ಅಭಿವೃದ್ಧಿಯ ಪ್ರಮುಖ ಭಾಗವಾಗಿದ್ದಾರೆ ಎಂದರು. ಸ್ವಾತಂತ್ರ್ಯದ 75 ವರ್ಷಗಳಲ್ಲಿ ದೇಶವು ಎಲ್ಲಾ ಕ್ಷೇತ್ರಗಳಲ್ಲಿ ಅಭೂತಪೂರ್ವ ಪ್ರಗತಿಯನ್ನು ಸಾಧಿಸಿದೆ. ಸ್ವಾವಲಂಬಿ ಭಾರತವನ್ನು ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇಂದು ನಮ್ಮ ಆರ್ಥಿಕತೆಯು ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಯಾಗಿದೆ ಮತ್ತು ವಿಶ್ವದ 3 ನೇ ಅತಿದೊಡ್ಡ ಆರ್ಥಿಕತೆಯತ್ತ ಸಾಗುತ್ತಿದೆ. 2047 ರವರೆಗಿನ ಸ್ವಾತಂತ್ರ್ಯದ ಶತಮಾನವು ಭವ್ಯವಾದ ಮತ್ತು…
ಮಡಿಕೇರಿ ಡಿ.31 : ಪಂಜಾಬ್ ನ ಲುಧಿಯಾನದಲ್ಲಿ ಜ.5 ರಿಂದ 11 ರವರೆಗೆ ನಡೆಯಲಿರುವ 19 ವರ್ಷದೊಳಗಿನ ಬಾಲಕಿಯರ ರಾಷ್ಟ್ರ ಮಟ್ಟದ ಫುಟ್ಬಾಲ್ ಪಂದ್ಯಾವಳಿಗೆ ಕೊಡಗು ಜಿಲ್ಲೆ ಮಾದಾಪುರದ ಶ್ರೀಮತಿ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ದೀಕ್ಷಿತಾ.ಆರ್ ಆಯ್ಕೆಯಾಗಿದ್ದಾಳೆ. ಈಕೆ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲಿದ್ದಾಳೆ ಎಂದು ಪ್ರಾಂಶುಪಾಲ ಮಂದಪ್ಪ ತಿಳಿಸಿದ್ದಾರೆ. ದೈಹಿಕ ಶಿಕ್ಷಣ ಉಪನ್ಯಾಸಕ ನಾಚಪ್ಪ ಅವರು ದೀಕ್ಷಿತಾಗೆ ತರಬೇತಿ ನೀಡಿದ್ದಾರೆ.
ಮಡಿಕೇರಿ ಡಿ.31 : ಅಯೋಧ್ಯೆಯ ಮಂತ್ರಾಕ್ಷತೆ ಸ್ವೀಕರಿಸಲು ಯಾವುದೇ ಷರತ್ತು, ನಿರ್ಬಂಧಗಳಿಲ್ಲ, ವೃತಾಚರಣೆಯ ಅಗತ್ಯವಿಲ್ಲ ಮತ್ತು ಸೂತಕದ ಅಡ್ಡಿ ಇಲ್ಲವೆಂದು ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಹಾಗೂ ವಿಶ್ವ ಹಿಂದೂ ಪರಿಷತ್ ನ ಕೊಡಗು ಜಿಲ್ಲಾ ಘಟಕ ಸ್ಪಷ್ಟಪಡಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಟ್ರಸ್ಟ್ ಮತ್ತು ವಿಹೆಚ್‌ಪಿ, ಅಯೋಧ್ಯೆಯ ಮಂತ್ರಾಕ್ಷತೆ ಸ್ವೀಕಾರದ ಕುರಿತು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿಯನ್ನು ನೀಡಿದ್ದಾರೆ. ಈ ಬಗ್ಗೆ ಯಾರೂ ಗೊಂದಲಕ್ಕೀಡಾಗದೆ ಭಕ್ತಿಯಿಂದ ಮಂತ್ರಾಕ್ಷತೆಯನ್ನು ಸ್ವೀಕರಿಸಿ ಎಂದು ಮನವಿ ಮಾಡಿದೆ. ಮಂತ್ರಾಕ್ಷತೆ ವಿತರಿಸುವ ಸಂದರ್ಭ ಮನೆಯವರಿಂದ ಹಣ ಅಥವಾ ಯಾವುದೇ ವಸ್ತುವನ್ನು ದಾನವಾಗಿ ಪಡೆಯಬಾರದು. ಹಿರಿಯರನ್ನು ಗೌರವಿಸಬೇಕು ಮತ್ತು ಮನೆಯವರಿಗೆ ಅಕ್ಷತೆ ಬಗ್ಗೆ ಮಾಹಿತಿ ನೀಡಬೇಕು. ಮಂತ್ರಾಕ್ಷತೆಯನ್ನು ಕೊಡಗು ಜಿಲ್ಲೆಗೆ ತಂದು ಓಂಕಾರೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಂತರ ತಾಲ್ಲೂಕು ಮಟ್ಟದಲ್ಲಿ ವಿತರಣೆ ಮಾಡಲಾಗಿದೆ. ಪ್ರಸ್ತುತ ಗ್ರಾಮ ಗ್ರಾಮಗಳ ದೇವಾಲಯಗಳಲ್ಲಿ ಇರಿಸಲಾಗಿದ್ದು, ಜನವರಿ ಒಂದರಿoದ 15 ರವರೆಗೆ ವಿತರಣೆ ಮಾಡಲು ಸಮಯ ನಿಗದಿಪಡಿಸಲಾಗಿದೆ. ಜ.7ರಂದು…
ಮಡಿಕೇರಿ ಡಿ.30 : ಮೂವರು ವಿದ್ಯಾರ್ಥಿಗಳು ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಬೇಗೂರು ಗ್ರಾಮದ ಬರಪೊಳೆ(ಕೊಂಕಣ ಹೊಳೆ) ನದಿಯಲ್ಲಿ ನಡೆದಿದೆ. ಪೊನ್ನಂಪೇಟೆ ಕೂರ್ಗ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಸಿಐಟಿ) ಇಂಜಿನಿಯರಿಂಗ್ ಕಾಲೇಜ್ ನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದ ಶ್ರೀಮಂಗಲ ನೆಮ್ಮಲೆ ಗ್ರಾಮದ ನಿವಾಸಿ ಕುಂಞಗಡ ರಶಿಕ್ ಕುಶಾಲಪ್ಪ(20), ಜೋಡುಬೀಟಿ ಗ್ರಾಮದ ಮಂಗೇಟಿರ ಪಿ.ಆಕಾಶ್ ಬಿದ್ದಪ್ಪ(20) ಹಾಗೂ ಶ್ರೀಮಂಗಲ ಗ್ರಾಮದ ಉಳುವಂಗಡ ಸುದೇಶ್ ಅಯ್ಯಪ್ಪ(20) ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ಪೊನ್ನಂಪೇಟೆ ಸಿಐಟಿ ಕಾಲೇಜ್ ನ ನಾಲ್ವರು ವಿದ್ಯಾರ್ಥಿಗಳು ಕಾಲೇಜ್ ನಿಂದ 5 ಕಿ.ಮೀ ದೂರದಲ್ಲಿರುವ ಬರಪೊಳೆಗೆ ತೆರಳಿದ್ದು, ಈ ಪೈಕಿ ಮೂವರು ನೀರಿಗೆ ಇಳಿದಿದ್ದರು ಎಂದು ಹೇಳಲಾಗಿದೆ. ಈ ವೇಳೆ ನೀರಿನ ಆಳಕ್ಕೆ ಸಿಲುಕಿ ಮೂವರು ಕೂಡ ಮೃತಪಟ್ಟಿದ್ದಾರೆ. ಓರ್ವ ವಿದ್ಯಾರ್ಥಿ ಕಾಲು ನೋವಿನ ಕಾರಣದಿಂದ ನೀರಿಗೆ ಇಳಿಯದೆ ದಡದಲ್ಲಿ ಉಳಿದಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತೀತಿಮಾಡ ಪವಿ, ಕಡೇಮಾಡ ಅನಿಲ್ ಕಾಳಪ್ಪ, ತೀತಿಮಾಡ ಸದನ್…
ಮಡಿಕೇರಿ ಡಿ.30 : ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಕುಡಿಯುವ ನೀರು ಸಮರ್ಪಕವಾಗಿ ಪೂರೈಸುವುದು, ಜಾನುವಾರುಗಳಿಗೆ ಮೇವು ಸರಬರಾಜು ಮಾಡುವುದು, ಸಂಬಂಧಪಟ್ಟ ಇಲಾಖೆಗಳು ಕಂದಾಯ, ಪಂಚಾಯತ್ ರಾಜ್ ಹಾಗೂ ಸ್ಥಳೀಯ ಸಂಸ್ಥೆಗಳ ಜೊತೆ ಸಮನ್ವಯ ಸಾಧಿಸಿ ಬರ ಪರಿಸ್ಥಿತಿಯನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡುವಂತೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಸೂಚಿಸಿದರು. ನಗರದ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ ಬರ ನಿರ್ವಹಣೆ ಸಂಬಂಧ ನಡೆದ ಟಾಸ್ಕ್ ಫೋರ್ಸ್ ತಾಲ್ಲೂಕು ಮಟ್ಟದ 2 ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಂಬರುವ ದಿನಗಳಲ್ಲಿ ಮುಂಜಾಗ್ರತ ಕ್ರಮವಹಿಸಲು ತಮ್ಮ ತಮ್ಮ ಇಲಾಖೆಗಳಲ್ಲಿ ಅಗತ್ಯ ಕ್ರಮಕೈಗೊಳ್ಳುವ ಸಲುವಾಗಿ ಕ್ರಿಯಾಯೋಜನೆಯ ಅಂದಾಜು ಪಟ್ಟಿ ತಯಾರಿಸುವಂತೆ ಸೂಚಿಸಿದರು. ಮುಂದುವರೆದು ಸೆಸ್ಕ್ ವತಿಯಿಂದ ಕುಡಿಯುವ ನೀರಿಗೆ ತೊಂದರೆಯಾಗದಂತೆ ವಿದ್ಯುತ್ ಸಂಪರ್ಕ ಕಡಿತಗೊಳಿಸದಿರುವಂತೆ ತಿಳಿಸಿದರು. ವಿವಿಧ ಇಲಾಖೆಗಳು ಯಾವುದೇ ಸಂದರ್ಭ ಬಂದರೂ ಕೂಡ ಅದನ್ನ ಸಮರ್ಥವಾಗಿ ಎದುರಿಸಲು ಬೇಕಾದ ಅಗತ್ಯ ಕ್ರಮವನ್ನು ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು. ಈ…
ಮಡಿಕೇರಿ ಡಿ.30 : ಪ್ರಸಕ್ತ (2023) ಸಾಲಿನಲ್ಲಿ ವಿತರಿಸಲಾಗಿದ್ದ ವಿಕಲಚೇತನರ ರಿಯಾಯಿತಿ ದರದ ಬಸ್‍ಪಾಸ್‍ಗಳನ್ನು ಫೆ.28 ರವರೆಗೆ ಮಾನ್ಯ ಮಾಡಲಾಗಿದೆ. ಪ್ರಸ್ತುತ ಸಾಲಿನಲ್ಲಿ ವಿಕಲಚೇತನರ ಪಾಸುದಾರರ ನವೀಕರಣ/ ಹೊಸ ಪಾಸು ಪಡೆಯುವ ಫಲನುಭವಿಗಳೆಲ್ಲರೂ ಅರ್ಜಿಯನ್ನು ಸೇವಾ ಸಿಂಧುಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಬೇಕಿದೆ. ಸೇವಾಸಿಂಧು ಪೋರ್ಟಲ್ https://sevasinduservices.karnataka.gov.in ನಲ್ಲಿ ಅರ್ಜಿಯನ್ನು ಸಲ್ಲಿಸುವಾಗ ವಿಕಲಚೇತನರು ವಾಸ್ತವ್ಯದ ದೃಢೀಕರಣ, ಆಧಾರ್ ಕಾರ್ಡ್ ಪ್ರತಿ, ಪಾಸಪೋರ್ಟ್ ಸೈಜಿನ ಫೋಟೋ ಹಾಗೂ ಯು.ಡಿ.ಐ.ಡಿ/ ಗುರುತಿನ ಚೀಟಿಯನ್ನು ಆನ್‍ಲೈನ್‍ನಲ್ಲಿ ಅಪ್‍ಲೋಡ್ ಮಾಡುವುದು. ಆಯಾಯ ತಾಲ್ಲೂಕಿನ ಘಟಕದಲ್ಲಿ ಪಾಸುಗಳನ್ನು ಪಡೆಯುವುದು. ಹೊಸದಾಗಿ ಪಾಸ್ ಪಡೆಯುವವರು ವಿಭಾಗೀಯ ಕಚೇರಿ ಪುತ್ತೂರಿನಲ್ಲಿ ಪಡೆಯುವುದು. ಪಾಸು ಪಡೆಯುವ ಸಮಯದಲ್ಲಿ ಸಲ್ಲಿಸಿದ ಅರ್ಜಿಯ ಪ್ರತಿ ವಾಸ್ತವ್ಯದ ದೃಢೀಕರಣ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ಯು.ಡಿ.ಐ.ಡಿ ಚೀಟಿಯ ಜೆರಾಕ್ಸ್ ಪ್ರತಿ ಮತ್ತು ಮೂಲ ಪ್ರತಿ, ಪಾಸ್ ಪೋರ್ಟ್ ಸೈಜಿನ 2 ಫೊಟೋ, ಅಂಚೆ ಚೀಟಿ ಗಾತ್ರದ 1 ಫೊಟೋ ಹಾಗೂ ಯು.ಡಿ.ಐ.ಡಿ ಚೀಟಿಯ ಮಾನ್ಯತಾ ಅವಧಿಯನ್ನು ಪರಿಶೀಲನೆ ಮಾಡುವ…






