ಮಡಿಕೇರಿ ಡಿ.30 : ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಪತ್ರಿಕೆ ವಿತರಿಸುವ ಕಾರ್ಮಿಕರು ಅರೆಕಾಲಿಕ ವೃತ್ತಿ ನಿರ್ವಹಿಸುತ್ತಿದ್ದು, ಪ್ರತಿನಿತ್ಯ ಸಾರ್ವಜನಿಕರ ಮನೆ ಬಾಗಿಲಿಗೆ ಪತ್ರಿಕೆಗಳನ್ನು ವಿತರಿಸುತ್ತಾರೆ. ಈ ಕಾರ್ಮಿಕರಲ್ಲಿ ಬಹುತೇಕರು ದಿನಪತ್ರಿಕೆ ವಿತರಿಸಲು ದ್ವಿಚಕ್ರ ವಾಹನಗಳನ್ನು ಬಳಸುತ್ತಿದ್ದು, ಅಪಘಾತಕ್ಕೊಳಗಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ, ಈ ಕಾರ್ಮಿಕರಿಗೆ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ವಿತರಿಸುವ ಮೂಲಕ ಸಾಮಾಜಿಕ ಭದ್ರತೆ ಒದಗಿಸುವುದು ಯೋಜನೆಯ ಉದ್ದೇಶವಾಗಿದೆ. ಸೌಲಭ್ಯಗಳು: ಅಪಘಾತದಿಂದ ಮರಣ ಹೊಂದಿದಲ್ಲಿ ವಿಮಾ ಪರಿಹಾರ ರೂ. 2 ಲಕ್ಷ ಹಾಗೂ ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ರೂ. 2 ಲಕ್ಷಗಳವರೆಗೆ (ಶೇಕಡಾವಾರು ದುರ್ಬಲತೆ ಆಧಾರದ ಮೇಲೆ). ಅಪಘಾತ ಅಥವಾ ಮಾರಣಾಂತಿಕ ಕಾಯಿಲೆ ಅಥವಾ ಗಂಭೀರ ಅನಾರೋಗ್ಯಕ್ಕೆ ತುತ್ತಾದಲ್ಲಿ ಆಸ್ಪತ್ರೆ ವೆಚ್ಚ ಮರುಪಾವತಿ ರೂ. 1 ಲಕ್ಷಗಳವರೆಗೆ ದೊರೆಯುತ್ತದೆ. ಈ ಯೋಜನೆಯ ಸೌಲಭ್ಯ ಪಡೆಯಲು 16 ರಿಂದ 59 ವಯೋಮಾನದವರಾಗಿದ್ದು, ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು, ಆದಾಯ ತೆರಿಗೆ ಪಾವತಿದಾರರಾಗಿರಬಾರದು ಹಾಗೂ ಭವಿಷ್ಯನಿಧಿ ಮತ್ತು ಇ.ಎಸ್.ಐ ಫಲಾನುಭವಿಯಾಗಿರಬಾರದು. ಅಲ್ಲದೇ, ಕೇಂದ್ರ…
ಲೇಖಕ: admin
ಮಡಿಕೇರಿ ಡಿ.30 : ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯ ನಗರ ವಸತಿ ರಹಿತರಿಗೆ ಆಶ್ರಯ ಉಪ ಘಟಕದಡಿ ಆಶ್ರಯ ಕಲ್ಪಿಸಲು 3ನೇ ವ್ಯಕ್ತಿಯ (ಎನ್‍ಜಿಒ) ಮುಖಾಂತರ ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ಬರುವ ವಸತಿ ರಹಿತರ (ನಗರದಲ್ಲಿ ರಾತ್ರಿ ವೇಳೆ ನಿರ್ಗತಿಕರು, ರಸ್ತೆ ಬದಿ ಅಂಗಡಿಗಳ ಜಗುಲಿ/ ರೈಲ್ವೆ ನಿಲ್ದಾಣ/ ಬಸ್ ನಿಲ್ದಾಣ/ ಸಾರ್ವಜನಿಕ ಸ್ಥಳಗಳಲ್ಲಿ ಮಲಗುವ ಮಾನಸಿಕ ಅಸ್ವಸ್ಥರು, ವೃದ್ದರು, ಮಕ್ಕಳು, ಅಂಗವಿಕಲರು ಮತ್ತು ಇನ್ನಿತರ ವಸತಿ ರಹಿತರು, ಅನಾಥರುಗಳು) ಸಮೀಕ್ಷೆಯನ್ನು ಜ.3 ರವರೆಗೆ ಒಂದು ವಾರಗಳ ಕಾಲ ನಗರಸಭೆ ಹಾಗೂ ಸ್ನೇಹಾಶ್ರಯ ಯೂತ್ ಟ್ರಸ್ಟ್ ಇವರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಅಗತ್ಯ ಮಾಹಿತಿ ಇದ್ದಲ್ಲಿ ಕಚೇರಿಯನ್ನು ಸಂಪರ್ಕಿಸುವಂತೆ ನಗರಸಭೆ ಪೌರಾಯುಕ್ತ ವಿಜಯ್ ತಿಳಿಸಿದ್ದಾರೆ.
ಮಡಿಕೇರಿ ಡಿ.30 : 2024 ರ ಜೂ.21 ಕ್ಕೆ ಅವಧಿ ಪೂರ್ಣಗೊಳ್ಳಲಿರುವ ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಸಲು ಸಿದ್ಧತೆ ನಡೆದಿದ್ದು, ಆ ನಿಟ್ಟಿನಲ್ಲಿ ಇದುವರೆಗೆ ಹೆಸರು ನೋಂದಾಯಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು, ಚುನಾವಣಾ ಆಯೋಗದ ನಿರ್ದೇಶನದಂತೆ ಈಗಾಗಲೇ ನವೆಂಬರ್, 23 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ನವೆಂಬರ್, 23 ರಿಂದ ಡಿಸೆಂಬರ್, 09 ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗಿದೆ. ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಮೂನೆ-18 ಮತ್ತು 19 ರ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ನಿಯಮಾನುಸಾರ ಪರಿಶೀಲಿಸಿ ವಿಲೇವಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಈ ಅವಧಿಯಲ್ಲಿ (ನವೆಂಬರ್, 23 ರಿಂದ ಡಿಸೆಂಬರ್, 09 ರವರೆಗೆ) ಕೊಡಗು ಜಿಲ್ಲೆಯಲ್ಲಿ ಒಟ್ಟು 245…
ಮಡಿಕೇರಿ ಡಿ.30 : ವಿಶ್ವದಾದ್ಯಂತ ನೆಲೆಸಿರುವ ಕೊಡವ ಸಮುದಾಯ ಬಾಂಧವರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಮಡಿಕೇರಿಯಲ್ಲಿ ನಡೆದ ವಿಶ್ವ ಕೊಡವ ಸಮ್ಮೇಳನದ ದ್ವಿತೀಯ ದಿನದ ಕಾರ್ಯಕ್ರಮದಲ್ಲಿ ವಿವಿಧ ಪೈಪೋಟಿಗಳು ಕೊಡವ ಸಾಂಸ್ಕೃತಿಕ ವೈಭವವನ್ನು ಅನಾವರಣಗೊಳಿಸಿತು. ಕೊಡವರ ವಿಶಿಷ್ಟ ಸಂಸ್ಕೃತಿ ಸಂಪ್ರದಾಯ, ಆಚಾರ ವಿಚಾರಗಳನ್ನು ಆಧುನೀಕತೆಯ ಭರಾಟೆಯ ನಡುವೆಯೂ ಉಳಿಸಿ ಬೆಳೆಸುವ ಪಣ ತೊಡಲಾಯಿತು. ಕುಪ್ಯಚಾಲೆ ತೊಟ್ಟು, ಪೀಚೆ ಕತ್ತಿ ವಡಿಕತ್ತಿಯೊಂದಿಗೆ ಕಂಡು ಬಂದ ಕೊಡವ ಪುರುಷರು, ಆಕರ್ಷಕ ಕೊಡವ ಸಾಂಪ್ರದಾಯಿಕ ಧಿರಿಸಿನಲ್ಲಿ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡ ಮಹಿಳೆಯರಿಂದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಆವರಣಕ್ಕೆ ವಿಶೇಷ ಮೆರುಗು ಮೂಡಿತು. ಕನೆಕ್ಟಿಂಗ್ ಕೊಡವ ಸಂಸ್ಥೆಯಿಂದ ಆಯೋಜಿತ ವಿಶ್ವ ಕೊಡವ ಮೇಳದ ದ್ವಿತೀಯ ದಿನವಾದ ಶನಿವಾರ ಫೀ.ಮಾ.ಕಾರ್ಯಪ್ಪ ಕಾಲೇಜಿನ ಆವರಣದಲ್ಲಿ ಉಮ್ಮತ್ತಾಟ್, ಕೋಲಾಟ್, ಬೊಳಕಾಟ್ ಪೈಪೋಟಿ ಅತ್ಯಂತ ಉತ್ಸಾಹದಿಂದ ನೂರಾರು ಪ್ರೇಕ್ಷಕರ ಸಮ್ಮುಖದಲ್ಲಿ ಪ್ರದರ್ಶಿಸಲ್ಪಟ್ಟು ಗಮನ ಸೆಳೆಯಿತು. ದುಡಿಯ ನಾದಕ್ಕೆ ತಕ್ಕಂತೆ ಕೈಯಲ್ಲಿ ಬೆತ್ತವನ್ನು ಹಿಡಿದು, ಲಾಲಿತ್ಯ ಪೂರ್ಣವಾಗಿ ಮರದ ಸುತ್ತ ಹೆಜ್ಜೆ ಹಾಕುತ್ತಾ…
ಮಡಿಕೇರಿ ಡಿ.30 : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಟಿಕೆಟ್ ಸಿಗುವುದಿಲ್ಲ ಎನ್ನುವ ಕಾರಣಕ್ಕಾಗಿ ಹತಾಶಗೊಂಡಿರುವ ಮೈಸೂರು- ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಮಾರಿ ಎಂದು ಹೇಳುವ ಮೂಲಕ ಪ್ರತಾಪ್ ಸಿಂಹ ಅಗೌರವದಿಂದ ನಡೆದುಕೊಂಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಮೈಸೂರು- ಕೊಡಗು ಕ್ಷೇತ್ರದಲ್ಲಿ ಬಿಜೆಪಿಯಿಂದ ಪ್ರಧಾನಿ ನರೇಂದ್ರಮೋದಿ ಅವರು ಸ್ಪರ್ಧಿಸಿದರೂ ಕಾಂಗ್ರೆಸ್ ಗೆಲುವು ಖಚಿತವೆಂದರು. ಪ್ರತಾಪ್ ಸಿಂಹ ಅವರು ಮೊದಲು ಸುಳ್ಳು ಹೇಳುವುದನ್ನು ಬಿಡಬೇಕು. ಮೈಸೂರು- ಬೆಂಗಳೂರು ಹೆದ್ದಾರಿ ಅನುಮೋದನೆ ಸಂದರ್ಭ ಅವರು ಸಂಸದರೇ ಆಗಿರಲಿಲ್ಲ. ರಸ್ತೆಗೆಂದು ಕೇಂದ್ರ ಸರ್ಕಾರ ಹಣ ನೀಡಿದರೆ ರಾಜ್ಯ ಸರ್ಕಾರ ಜಾಗ ನೀಡಿದೆ. ಕೇಂದ್ರ ಪುಕ್ಕಟೆ ಹಣ ನೀಡಿಲ್ಲ, ಹೆದ್ದಾರಿಯಲ್ಲಿ 900 ರೂ. ಟೋಲ್ ಸಂಗ್ರಹಿಸಲಾಗುತ್ತಿದೆ. ಸಂಸದರಾಗಿ ಕೊಡಗು ಜಿಲ್ಲೆಗೆ ಪ್ರತಾಪ್ ಸಿಂಹ ಏನು…
ಮಡಿಕೇರಿ ಡಿ.30 : ಸರಕಾರಿ ಶಾಲೆಗಳೆಂದರೆ ಮೂಗು ಮುರಿಯುವವರೇ ಹೆಚ್ಚು, ಆದರೆ ಸರಕಾರಿ ಶಾಲೆಗೂ ಹೊಸ ಕಳೆಯನ್ನು ನೀಡಬಹುದೆಂದು ತೋರಿಸಿಕೊಡುವ ಮೂಲಕ ಸ್ಫೂರ್ತಿ ಯುವಕ ಸಂಘ ಮಾದರಿಯಾಗಿದೆ. ಮಾಸಿದ ಬಣ್ಣ, ಸುತ್ತಲು ಗಿಡಗಂಟಿಗಳು, ಕಳೆ ಗುಂದಿದ ತರಗತಿಗಳು, ನೋಡಲು ಬೇಸರ ಮೂಡಿಸುತ್ತಿದ್ದ ವಾತಾವರಣದಲ್ಲಿದ್ದ ಕರ್ಣಂಗೇರಿ ಗ್ರಾಮದ ಮೊಣಕಾಲ್ಮುರಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸ್ಥಿತಿಗತಿಯನ್ನು ಕಂಡು ಬೇಸರಗೊಂಡ ಸ್ಫೂರ್ತಿ ಯುವಕ ಸಂಘದ ಪದಾಧಿಕಾರಿಗಳು ಶ್ರಮದಾನ ಮಾಡಿದರು. ಗಿಡಗಂಟಿಗಳನ್ನು ತೆಗೆದು ಶಾಲೆಯ ಸುತ್ತಲು ಶುಚಿತ್ವದ ವಾತಾವರಣವನ್ನು ಮೂಡಿಸಿದರು. ಸ್ವಂತ ಹಣದಿಂದ ಸುಮಾರು 25 ಸಾವಿರ ರೂಪಾಯಿಗಳನ್ನು ಖರ್ಚು ಮಾಡಿ ಸುಣ್ಣಬಣ್ಣ ಬಳಿದು ಶಾಲೆಗೆ ಹೊಸ ಕಳೆ ತಂದುಕೊಟ್ಟರು. ವಿದ್ಯಾ ದೇಗುಲ ಎಂದೆಂದೂ ಸುಂದರವಾಗಿರಬೇಕು, ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯಗಳು ಸಿಗಬೇಕು ಎಂದು ಸಂಘದ ಪ್ರಮುಖರು ಅಭಿಪ್ರಾಯಪಟ್ಟರು. ::: ಧನ್ಯವಾದ ಅರ್ಪಣೆ :::: ಶ್ರಮದಾನದ ಮೂಲಕ ಶಾಲೆಗೆ ಹೊಸ ಕಳೆ ತಂದುಕೊಟ್ಟು ವಿದ್ಯಾರ್ಥಿಗಳಲ್ಲಿ ಸ್ಫೂರ್ತಿ ತುಂಬಿದ ಸ್ಫೂರ್ತಿ ಯುವಕ ಸಂಘದ ಯುವಕರಿಗೆ ಮೊಣಕಾಲ್ಮುರಿ…
ಮಡಿಕೇರಿ ಡಿ.30 : ಕೊಡವ ಕುಟುಂಬಗಳ ನಡುವೆ 2024ರಲ್ಲಿ ನಡೆಯಲಿರುವ ಹಾಕಿ ನಮ್ಮೆಯ ಲಾಂಛನ ಬಿಡುಗಡೆ ಸಮಾರಂಭವು ಡಿ.31 ರಂದು ನಡೆಯಲಿದೆ ಎಂದು ನಮ್ಮೆಯ ಸಂಚಾಲಕ ದಿನೇಶ್ ಕಾರ್ಯಪ್ಪ ತಿಳಿಸಿದ್ದಾರೆ. ನಾಪೋಕ್ಲುವಿನ ಕೊಡವ ಸಮಾಜದ ಅಪ್ಪಚ್ಚಕವಿ ಸಭಾಂಗಣದಲ್ಲಿ ಬೆಳಿಗ್ಗೆ 9.30 ಗಂಟೆಗೆ ಕುಂಡ್ಯೋಳಂಡ ಕುಟುಂಬದ ಪಟ್ಟೆದಾರ ಕುಂಡ್ಯೋಳಂಡ ನಾಣಿ ನಾಣಯ್ಯ ಹಾಗೂ ಹಾಕಿ ನಮ್ಮೆಯ ಅಧ್ಯಕ್ಷ ಕುಂಡ್ಯೋಳಂಡ ರಮೇಶ್ ಮುದ್ದಯ್ಯ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ಹಾಕಿ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಹಾಗೂ ಒಲಂಪಿಯನ್ ಡಾ.ಅಂಜಪರವಂಡ ಬಿ.ಸುಬ್ಬಯ್ಯ, ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ, ವೆಸ್ಟ್ ಕೊಳಕೇರಿ ಗ್ರಾಮಾಭಿವೃದ್ಧಿ ಸಂಘದ ಅಧ್ಯಕ್ಷ ಕೇಟೋಳಿರ ಎಸ್.ಕುಟ್ಟಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ದಿನೇಶ್ ಕಾರ್ಯಪ್ಪ ಮಾಹಿತಿ ನೀಡಿದ್ದಾರೆ.
ವಿರಾಜಪೇಟೆ ಡಿ.30 : ಮೈಸೂರಿನ ಶಾರದಾ ವಿಲಾಸ ಕಾಲೇಜು ಸಭಾಂಗಣದಲ್ಲಿ ನಡೆದ ವಲಯ ಮಟ್ಟದ ಸ್ಪೋಟ್ರ್ಸ್ ಡ್ಯಾನ್ಸ್ ಚಾಂಪಿಯನ್ ಶಿಪ್‍ನ ಶಾಸ್ತ್ರಿಯ ನೃತ್ಯ ಸ್ಪರ್ಧೆ ವಿಭಾಗದಲ್ಲಿ ವಿರಾಜಪೇಟೆಯ ಕೆದಮುಳ್ಳುರು ಗ್ರಾಮದ ಧನ್ಯಶ್ರಿ ಮೂರು ಚಿನ್ನದ ಪದಕ ಹಾಗೂ ಪ್ರಶಸ್ತಿ ಪತ್ರ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಧನ್ಯಶ್ರೀ ವಿರಾಜಪೇಟೆಯ ಎಸ್.ಎಂ.ಎಸ್ ಪಿಯುಸಿ ಕಾಲೇಜು ಅರಮೇರಿಯಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿನಿಯಾಗಿದ್ದು, ಈಕೆ ವಿರಾಜಪೇಟೆಯ ನಾಟ್ಯಾಂಜಲಿ ನೃತ್ಯ ಮತ್ತು ಸಂಗೀತ ಸಂಸ್ಥೆಯ ವಿದುಷಿ ಹೇಮಾವತಿ ಕಾಂತರಾಜ್ ಮತ್ತು ಕಾವ್ಯಶ್ರೀ ಅವರ ಬಳಿ ನೃತ್ಯಾಭ್ಯಾಸ ಮಾಡುತ್ತಿದ್ದಾಳೆ. ಮಣಿಕಂಟ ಹಾಗೂ ಕುಮಾರಿ ದಂಪತಿಗಳ ಪುತ್ರಿಯಾಗಿದ್ದಾರೆ.
ಮಡಿಕೇರಿ ಡಿ.29 : ವೃತ್ತಿಪರ ಕೋರ್ಸ್ 2023-24 ನೇ ಸಾಲಿನಲ್ಲಿ ಮೊದಲನೇ ವರ್ಷದಲ್ಲಿ ಓದುತ್ತಿರುವ ಮಾಜಿ ಸೈನಿಕರ ಮಕ್ಕಳಿಗೆ (ಸೈನ್ಯಾಧಿಕಾರಿಗಳ ಮಕ್ಕಳನ್ನು ಹೊರತುಪಡಿಸಿ) ಕೇಂದ್ರೀಯ ಸೈನಿಕ ಮಂಡಳಿಯಿಂದ ಪ್ರಧಾನ ಮಂತ್ರಿ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸಲು ಜ.1 ರಿಂದ ಜನವರಿ 05 ರವರೆಗೆ ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು (www.ksb.gov.in) ನಲ್ಲಿ ಸಲ್ಲಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ ಡಿ.29 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೊಡಗು ಜಿಲ್ಲಾ ವಿಶ್ವಕರ್ಮ ಒಕ್ಕೂಟ ಇವರ ಸಹಕಾರದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯು ಜ.1 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.






