ಮಡಿಕೇರಿ ಡಿ.29 : ರಾಷ್ಟ್ರಕವಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಕುವೆಂಪು ಅವರು ಕನ್ನಡ ನಾಡು-ನುಡಿಗೆ ನೀಡಿರುವ ಕೊಡುಗೆಯನ್ನು ಪ್ರತಿಯೊಬ್ಬರೂ ತಿಳಿದುಕೊಂಡು, ನಾಡಿನ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರಸಭೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾ ಘಟಕ ಹಾಗೂ ಕೊಡಗು ಜಿಲ್ಲಾ ಜಾನಪದ ಪರಿಷತ್ತು ಇವರ ಸಹಕಾರದಲ್ಲಿ ನಗರದ ಗಾಂಧಿ ಭವನದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಪ್ರಯುಕ್ತ ನಡೆದ ‘ವಿಶ್ವಮಾನವ ದಿನಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸೋಮವಾರಪೇಟೆ ಪಟ್ಟಣದ ಜಿಎಂಪಿ ಶಾಲೆಯ ಚೆನ್ನಬಸಪ್ಪ ಸಭಾಂಗಣ ಬಳಿ ರಾಷ್ಟ್ರಕವಿ ಕುವೆಂಪು ಅವರ ಪ್ರತಿಮೆ/ ಪುತ್ಥಳಿಯನ್ನು ಸ್ಥಾಪಿಸಲು…
ಲೇಖಕ: admin
ಮಡಿಕೇರಿ ಡಿ.29 : ಕೊಡವರ ಹಕ್ಕುಗಳಿಗಾಗಿ ಸಾಮೂಹಿಕ ಹೋರಾಟದ ಅಗತ್ಯವಿದೆ, ರಾಜಕೀಯ ಪ್ರಾತಿನಿಧ್ಯ ಇಲ್ಲವಾದಲ್ಲಿ ಹಕ್ಕುಗಳನ್ನು ಕೇಳಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಕೊಡವರು ರಾಜಕೀಯ ಇಚ್ಚಾಶಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಕರೆ ನೀಡಿದ್ದಾರೆ. ಕನೆಕ್ಟಿಂಗ್ ಕೊಡವಾಸ್ ಸಂಘಟನೆ ವತಿಯಿಂದ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಎರಡು ದಿನಗಳ ಕಾಲ ಆಯೋಜಿಸಿರುವ “ವಿಶ್ವ ಕೊಡವ ಸಮ್ಮೇಳನ” ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೊಡವ ಸಮುದಾಯ ಜನಸಂಖ್ಯೆಯಲ್ಲಿ ಚಿಕ್ಕದಾಗಿದ್ದರೂ ದೇಶಕ್ಕೆ ಸಾಕಷ್ಟು ಕೊಡುಗೆ ನೀಡಿದೆ. ಜಮ್ಮಾ ಬಾಣೆಗೆ ಕಂದಾಯ ನಿಗಧಿ, ಪಟ್ಟೆದಾರರಿಂದ ಹಕ್ಕು ಬದಲಾವಣೆ, ಪೌತಿ ಖಾತೆ, ಕೋವಿ ಹಕ್ಕು ಸೇರಿದಂತೆ ಹಲವಾರು ಸಮಸ್ಯೆಗಳು ಕೊಡವ ಸಮುದಾಯವನ್ನು ಕಾಡುತ್ತಿದೆ. ಇವುಗಳಿಗೆ ಪರಿಹಾರವನ್ನೂ ಕಾಣುವಂತಾಗಬೇಕು, ಈ ಕಾರ್ಯಕ್ರಮ ಕೊಡವರ ಹಕ್ಕುಗಳ ಪ್ರತಿಪಾದನೆಗೆ ವೇದಿಕೆಯಾಗಬೇಕು ಎಂದು ಆಶಿಸಿದರು.ಕೊಡವರ ಕುಲಶಾಸ್ತ್ರ ಅಧ್ಯಯನದ ಕಡತ ಸರಕಾರದ ಬಳಿ ಇದ್ದು, ಅದು ಜಾರಿಗೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ…
ಕುಶಾಲನಗರ ಡಿ.29 : ಕುಶಾಲನಗರ ತಾಲ್ಲೂಕು ಒಕ್ಕಲಿಗರ ಸಂಘದ ವತಿಯಿಂದ ವಿಶ್ವ ಮಾನವ ಕುವೆಂಪು ಅವರ 120ನೇ ಜನ್ಮ ದಿನಾಚರಣೆಯನ್ನು ಕುಶಾಲನಗರದ ನಾಡ ಪ್ರಭು ಸಹಕಾರ ಸಂಘದ ಆವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಒಕ್ಕಲಿಗ ಮುಖಂಡ ವಿ.ಪಿ.ಶಶಿಧರ್, ವಿಶ್ವ ಮಾನವ ಕುವೆಂಪು ಅವರ ಜನ್ಮದಿನದಂದು ಎಲ್ಲರೂ ಅವರನ್ನು ಸ್ಮರಿಸಿಕೊಳ್ಳುವುದರ ಜೊತೆಗೆ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು. ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಂ.ಕೆ.ದಿನೇಶ್ ಮಾತನಾಡಿ, ಕುವೆಂಪು ಅವರತ ಸಮಾಜಕ್ಕೆ ಬಹಳಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಇವರ ಸಾಧನೆಗಳಿಂದ ಪ್ರತಿಯೊಬ್ಬ ಕನ್ನಡಿಗನೂ ಹೆಮ್ಮೆ ಪಡುವಂತಾಗಿದೆ. ಕುವೆಂಪು ಅವರ ಜೀವನ ಶೈಲಿ, ಅವರು ನಡೆದುಬಂದ ಹಾದಿಯನ್ನು ಪ್ರತಿಯೊಬ್ಬರು ತಿಳಿದುಕೊಳ್ಳಬೇಕಾಗಿದೆ ಎಂದರು. ಈ ಸಂದರ್ಭ ತಾಲ್ಲೂಕು ಒಕ್ಕಲಿಗರ ಸಂಘದ ಪ್ರಮುಖರಾದ ಕೃಷ್ಣೇಗೌಡರು, ಮುಳ್ಳುಸೋಗೆ ಗ್ರಾ.ಪಂ ಮಾಜಿ ಸದಸ್ಯ ಜಿ.ಬಿ.ಜಗದೀಶ್, ಸಣ್ಣೇಗೌಡರು, ಭರತ್, ಪ್ರಕಾಶ್ ಇನ್ನಿತರರು ಹಾಜರಿದ್ದರು.
ಮಡಿಕೇರಿ ಡಿ.29 : ಸ್ವಾಗತ ಯುವಕ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಉತ್ತಮ ಆಡಳಿತ ದಿನದ ಪ್ರಯುಕ್ತ ಮೇಕೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 12ನೇ ವರ್ಷದ ಗ್ರಾಮೀಣ ಮಟ್ಟದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು. 12 ವರ್ಷದಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ಮಂದಿ ರಕ್ತದಾನಿಗಳು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ಗಮನಸೆಳೆದರು. ಮೇಕೇರಿ, ಕಗ್ಗೋಡ್ಲು, ಬಿಳಿಗೇರಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಒಟ್ಟು 73 ಮಂದಿ ರಕ್ತದಾನಿಗಳು ರಕ್ತದಾನ ಮಾಡಿದರು.ಸಭಾ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಅತಿಥಿಗಳು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸುಂದರ್ ರಾಜ್ ಪಾಲ್ಗೊಂಡಿದ್ದರು. ಇದೇ ಸಂದರ್ಭ 50ನೇ ಬಾರಿಗೆ ರಕ್ತದಾನ ಮಾಡಿದ ಕೊಡಗು ಜಿಲ್ಲಾ ಪೊಲೀಸ್ ಸಿಬ್ಬಂದಿ ಬಿ.ಎಂ.ರಾಮಪ್ಪ, ಎಲ್‌ಎಲ್‌ಬಿ ಪದವಿ ಪೂರೈಸಿದ ಗ್ರಾಮದ ಪದವಿದರರಾದ ಪಿ.ಆರ್.ಪ್ರಜೀತ ರಾಜನ್, ವಿ.ಬಿ.ಹರ್ಷಿತಾ, ಸಿ.ವೈ. ಲಿಖಿತ್ ಹಾಗೂ 1974ರಲ್ಲಿ ಮೇಕೇರಿ ಗ್ರಾಮದಲ್ಲಿ ಸ್ವಾಗತ ಯುವಕ…
ಮಡಿಕೇರಿ ಡಿ.29 : ಎಲ್ಲಾ ಕೊಡವ ಸಮುದಾಯದವರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಕನೆಕ್ಟಿಂಗ್ ಕೊಡವಾಸ್ ಟ್ರಸ್ಟ್ ವತಿಯಿಂದ ಮಡಿಕೇರಿಯಲ್ಲಿ ವಿಶ್ವ ಕೊಡವ ಸಮ್ಮೇಳನ (“ಗ್ಲೋಬಲ್ ಕೊಡವ ಸಮ್ಮಿಟ್”) ನಡೆಯಿತು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.ಯುವ ಪೀಳಿಗೆಗೆ ಸಂಸ್ಕೃತಿ, ಆಚಾರ, ವಿಚಾರದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಸಮ್ಮೇಳನದ ಆವರಣದಲ್ಲಿ ಮಾದರಿ ಗ್ರಾಮದ ಮೂಲಕ ಕೊಡವರ ಪ್ರಮುಖ ಸ್ವತ್ತಾದ ಐನ್‍ಮನೆ, ಮಂದ್, ಪತ್ತಾಯ, ಕೈಮಡ ಇತ್ಯಾದಿಗಳು ಗಮನ ಸೆಳೆಯಿತು. ಕಾರ್ಯಕ್ರಮಕ್ಕೂ ಮುನ್ನ ನಗರದ ನೂತನ ಖಾಸಗಿ ಬಸ್ ನಿಲ್ದಾಣದಿಂದ ಸಾವಿರಾರು ಸಂಖ್ಯೆಯ ಕೊಡವ ಕೊಡವತಿಯರು ತಮ್ಮ ಕುಟುಂಬದ ಹೆಸರಿರುವ ಧ್ವಜ ಹಿಡಿದು ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜುವರೆಗೆ ಬೃಹತ್ ಮೆರವಣಿಗೆ ಸಾಗಿದರು. ಕೊಡವರ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ, ಕೊಡವರು ಎದುರಿಸುತ್ತಿರುವ ಸಮಸ್ಯೆಗಳು, ಕೊಡವರ ಸಂಸ್ಕೃತಿ, ಸಂಪ್ರದಾಯ ಹಾಗೂ ಕೊಡವರ ವಿನೂತನ ಆಚರಣೆಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಸಲುವಾಗಿ ಮತ್ತು ಮುಂದಿನ ನಡೆಯ…
ಮಡಿಕೇರಿ ಡಿ.29 : ನಗರದ ಹೊಸಬಡಾವಣೆಯಲ್ಲಿರುವ ಶ್ರೀ ಪ್ರಸನ್ನ ಗಣಪತಿ ದೇವಾಲಯದ 23ನೇ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯದಲ್ಲಿ ಮುಂಜಾನೆಯಿಂದಲೇ ಶ್ರೀ ಪ್ರಸನ್ನ ಗಣಪತಿಗೆ ಎಳನೀರು ಅಭಿಷೇಕ, ಪಂಚಾಮೃತ ಅಭಿಷೇಕ, ಕ್ಷೇರಾಭಿಷೇಕ, ಅಲಂಕಾರ ಪೂಜೆ, ಮಹಾಗಣಪತಿ ಹೋಮ, ನಮಕ ಕಳಸ ಪೂಜೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು. ಮಧ್ಯಾಹ್ನ ಮಹಾಪೂಜೆಯ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ ನಡೆಯಿತು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸಂಜೆ 6 ಗಂಟೆಗೆ ಶನೇಶ್ವರ ವ್ರತ ಕಥೆ, 7 ಗಂಟೆಗೆ ರಂಗಪೂಜೆ, 7.30 ಗಂಟೆಗೆ ಮಹಾಪೂಜೆ, 8 ಗಂಟೆಗೆ ಪ್ರಸಾದ ವಿತರಣೆ ನಡೆಯಲಿದೆ.
ಶನಿವಾರಸಂತೆ ಡಿ.29 : ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಮಠಗಳ ಪಾತ್ರ ಅತ್ಯಂತ ಮಹತ್ವದ್ದು, ಅಂತಹ ಮಹತ್ತರ ಪಾತ್ರದೊಂದಿಗೆ ಸಮಾಜಕ್ಕೆ ತನ್ನದೇ ಆದ ಕಾಣಿಕೆಯನ್ನು ಮನೆಹಳ್ಳಿ ಮಠ ನೀಡುತ್ತಿದೆ, ಹಿಂದೂ ಸಂಸ್ಕೃತಿಯಲ್ಲಿ ಗುರು-ಶಿಷ್ಯ ಪರಂಪರೆಗೆ ದೊಡ್ಡ ಇತಿಹಾಸವೇ ಇದೆ ಗುರುವು ಶಿಷ್ಯನನ್ನುದ್ಧರಿಸುವ ಕಾರ್ಯ ಮಾಡಿದರೆ, ಶಿಷ್ಯ ಗುರುವಿನ ಸೇವೆ ಮಾಡಿ ತನ್ನ ಜನ್ಮವನ್ನು ಸಾರ್ಥಕಪಡಿಸಿಕೊಳ್ಳುತ್ತಾನೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಹೇಳಿದರು. ಶನಿವಾರಸಂತೆ ಸಮೀಪದ ಶ್ರೀ ತಪೋಕ್ಷೇತ್ರ ಮನೆಹಳ್ಳಿ ಮಠದಲ್ಲಿ ಹುಣ್ಣಿಮೆ ರಾತ್ರಿ ನಡೆದ ಸಹಸ್ರ ಕಾರ್ತಿಕ ದೀಪೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಕೊಡಗಿನ ಮಠಗಳಿಗೆ ಸರ್ಕಾರದಿಂದ ಅಥವಾ ವೈಯಕ್ತಿಕವಾಗಿ ನನ್ನಿಂದ ಸಾಮಾನ್ಯ ಭಕ್ತರ ಸರದಿ ಸಾಲಿನಲ್ಲೇ ಸೇವೆ ಮಾಡಲು ಸದಾ ಸಿದ್ದನಿದ್ದೇನೆ ಎಂದರು. ಹಿರಿಯ ವಕೀಲ ಚಂದ್ರಮೌಳಿ ಮಾತನಾಡಿ, ಆಧ್ಯಾತ್ಮಿಕತೆಯ ಜತೆಗೆ ಜೀವನದಲ್ಲಿ ಮುನ್ನಡೆದಾಗ ಪ್ರಜ್ಞಾವಂತ ಸಮಾಜ ನಿರ್ಮಾಣ ಆಗಲು ಸಾಧ್ಯ. ಧರ್ಮ ಮರೆತ ರಾಷ್ಟ್ರಕ್ಕೆ ಅಥವಾ ವ್ಯಕ್ತಿಗೆ ಸುಖ ಇರುವುದಿಲ್ಲ…
ಗೋಣಿಕೊಪ್ಪ ಡಿ.29 : ನಿವೃತ್ತ ಸೈನಿಕರ ಜಾಗ ಮಂಜೂರಾತಿಗೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಸಾರ್ವಜನಿಕ ಹಿತರಕ್ಷಣಾ ಸಮಿತಿ ವತಿಯಿಂದ ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಅವರನ್ನು ಒತ್ತಾಯಿಸಲಾಯಿತು. ಪೊನ್ನಂಪೇಟೆ ಆಡಳಿತ ಕಚೇರಿಯಲ್ಲಿ ತಹಶೀಲ್ದಾರ್ ಪ್ರಶಾಂತ್ ಅವರಿಗೆ ಹಿತರಕ್ಷಣಾ ಸಮಿತಿ ಅಧ್ಯಕ್ಷ ಎ.ಎಸ್. ಕಟ್ಟಿ ಮಂದಯ್ಯ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.ಕಳೆದ 10 ವರ್ಷಗಳಿಂದ ನಿವೃತ್ತ ಸೈನಿಕ ಕಾಳಿಮಾಡ ಬಿ.ಕುಶಾಲಪ್ಪ ಅವರು ಬೀರುಗ ಗ್ರಾಮದಲ್ಲಿರುವ ಜಾಗದ ಕಾಫಿ ತೋಟವನ್ನು ಹೆಸರಿಗೆ ನೋಂದಾಯಿಸುವಂತೆ ಅರ್ಜಿ ಸಲ್ಲಿಸಿದರೂ, ಅರ್ಜಿ ವಿಲೇವಾರಿಗೊಂಡಿಲ್ಲ. ಇಲಾಖೆಯ ಸಿಬ್ಬಂದಿಗಳು ಈ ವಿಚಾರವಾಗಿ ಸತಾಯಿಸಲಾಗುತ್ತಿದೆ ಎಂದು ಆರೋಪಿಸಿದ ಸಮಿತಿ ಜಾಗವನ್ನು ತಕ್ಷಣ ಮಂಜೂರು ಮಾಡಿಸಿ ನಿವೃತ್ತ ಸೈನಿಕರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಕಚೇರಿಯಲ್ಲಿರುವ ಕಡತವನ್ನು ವಿಲೇವಾರಿ ಮಾಡಿಕೊಡಬೇಕೆಂದು ಮನವಿ ಸಲ್ಲಿಸಿತು. ಇದೇ ಸಂದರ್ಭ ತಾಲೂಕು ಆಡಳಿತ ಕಚೇರಿ ಸುತ್ತ ಬೆಳೆದು ನಿಂತಿರುವ ಗಿಡಘಂಟಿಗಳನ್ನು ತೆರವುಗೊಳಿಸಿ ಶುಚಿತ್ವದ ಕಡೆಗೂ ಗಮನ ಹರಿಸಬೇಕು ಎಂದು ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು ಸಲಹೆ ನೀಡಿದರು. ಕಾರ್ಯಾಧ್ಯಕ್ಷ ಬಿ.ಎಸ್. ಕಾರ್ಯಪ್ಪ, ಕಾರ್ಯದರ್ಶಿ…
ಮಡಿಕೇರಿ ಡಿ.29 : ಅತ್ಯಂತ ಸೂಕ್ಷ್ಮ ಮತ್ತು ವಿಶಿಷ್ಟ ಜನಾಂಗವಾಗಿರುವ ಕೊಡವರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಕನೆಕ್ಟಿಂಗ್ ಕೊಡವಾಸ್ ಟ್ರಸ್ಟ್ ಮಡಿಕೇರಿಯಲ್ಲಿ ವಿಶ್ವ ಕೊಡವ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸುತ್ತಿದೆ. ಈ ರೀತಿಯ ಕೊಡವ ಸಮ್ಮೇಳನಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ವಯಂ ಪ್ರೇರಿತವಾಗಿ ಅನುದಾನವನ್ನು ಬಿಡುಗಡೆ ಮಾಡುವ ಮೂಲಕ ಸಣ್ಣ ಸಮುದಾಯದ ಬೆಳವಣಿಗೆಗೆ ನೈತಿಕ ಬೆಂಬಲ ಸೂಚಿಸಬೇಕು ಎಂದು ಹಿರಿಯ ರಾಜಕಾರಣಿ ಬ್ರಿಜೇಶ್ ಕಾಳಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ದೇಶ ವಿದೇಶಗಳಲ್ಲಿ ನೆಲೆಸಿರುವ ಕೊಡವರನ್ನು ಒಗ್ಗೂಡಿಸಿ ಪಾರಂಪರಿಕ, ಸಾಂಸ್ಕೃತಿಕ, ಸಾಂಪ್ರದಾಯಿಕ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಮತ್ತು ಧಾರ್ಮಿಕ ವಿಚಾರಗಳ ಕುರಿತು ಸಮಾಲೋಚನೆ ನಡೆಸಿ ಜನಾಂಗದ ಅಭ್ಯುದಯದ ನಿಟ್ಟಿನಲ್ಲಿ ಚಿಂತನೆ ನಡೆಸಲು “ಕೊಡವ ಸಮ್ಮೇಳನ”ಗಳಂತಹ ವಿಶಿಷ್ಟ ಕಾರ್ಯಕ್ರಮಗಳು ಸಹಕಾರಿಯಾಗಿವೆ. ಈ ರೀತಿಯ ಕಾರ್ಯಕ್ರಮಗಳಿಗೆ ಅನುದಾನ ನೀಡಲು ಸರ್ಕಾರಗಳೇ ಮುಂದೆ ಬರಬೇಕು ಎಂದು ತಿಳಿಸಿದ್ದಾರೆ. ಕೊಡಗು ಅತ್ಯಂತ ಪುಟ್ಟ ಜಿಲ್ಲೆಯಾಗಿದ್ದು, ಕೇವಲ ಐದೂವರೆ ಲಕ್ಷ ಜನಸಂಖ್ಯೆ ಹೊಂದಿದೆ. ಇಲ್ಲಿನ ಮೂಲ ನಿವಾಸಿ ಕೊಡವರ…
ಮಡಿಕೇರಿ ಡಿ.29 : ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಹಾಗೂ ಯುವ ಸಪ್ತಾಹದ ಅಂಗವಾಗಿ ಕೊಡಗು ಜಿಲ್ಲೆಯ ಯುವ ಜನರಿಗಾಗಿ “ಸ್ವಾಮಿ ವಿವೇಕಾನಂದರ ಆದರ್ಶಗಳಲ್ಲಿ ಇಂದಿನ ಯುವ ಜನಾಂಗ ಅಳವಡಿಸಿಕೊಳ್ಳಬೇಕಾದ ಅಂಶಗಳು” ಎಂಬ ವಿಷಯದ ಕುರಿತು ಜಿಲ್ಲಾ ಮಟ್ಟದ ಲೇಖನ ಸ್ಪರ್ಧೆ ನಡೆಯಲಿದೆ ಎಂದು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಡಗು, ನೆಹರು ಯುವ ಕೇಂದ್ರ ಮಡಿಕೇರಿ, ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ ಹಾಗೂ ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು 30 ವರ್ಷದೊಳಗಿನವರಾಗಿರಬೇಕು, ಲೇಖನದೊಂದಿಗೆ ಆಧಾರ್ ಕಾರ್ಡ್ ಪ್ರತಿಯನ್ನು ಲಗತ್ತಿಸಿರಬೇಕು. ಟೈಪ್ ಮಾಡಿದ ಲೇಖನ “ಎ4” ಕಾಗದದ ಒಂದೇ ಭಾಗದಲ್ಲಿರಬೇಕು ಮತ್ತು ನಾಲ್ಕು ಪುಟಗಳನ್ನು ಮೀರಬಾರದು. ಲೇಖನಗಳನ್ನು ಜ.10 ರಂದು ಮಧ್ನಾಹ್ನ 3 ಗಂಟೆಯೊಳಗೆ ತಲುಪಿಸಬೇಕು. ವಿಜೇತರಿಗೆ ಆಕರ್ಷಕ ಟ್ರೋಫಿ, ನಗದು ಬಹುಮಾನ ಹಾಗೂ ದೃಢೀಕರಣ ಪತ್ರವನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗೆ…






