ಗೋಣಿಕೊಪ್ಪ ಡಿ.28 : ಪ್ರೋ. ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲಾ ಘಟಕದ ಸಂಚಾಲಕರಾಗಿ ಸತೀಶ್ ಸಿಂಗಿ ಹೆಚ್.ಆರ್. ಅವರನ್ನು ನೇಮಕ ಮಾಡಲಾಗಿದೆ. ಬೆಂಗಳೂರಿನ ವಿಕಾಸ ಸೌಧ ಸಮೀಪದ ಕ.ದ.ಸ.ಸಂ. ಕಚೇರಿಯಲ್ಲಿ ರಾಜ್ಯ ಸಂಚಾಲಕ ಡಿ.ಆರ್.ಪಾಡುರಂಗ ಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ತುರ್ತು ಕಾರ್ಯನಿರ್ವಾಹಕ ಸಮಿತಿ ಸಭೆಯಲ್ಲಿ ನೇಮಕಾತಿಯ ಆದೇಶವನ್ನು ನೀಡಲಾಗಿದೆ. ರಾಜ್ಯ ಸಂಘಟನಾ ಸಂಚಾಲಕರಾಗಿ ಟಿ.ಎನ್.ಗೋವಿಂದಪ್ಪ, ತಾಲೂಕು ಸಂಚಾಲಕರಾಗಿ ಚಂದ್ರ ಮತ್ತು ಮಹಿಳಾ ಘಟಕಕ್ಕೆ ಲಕ್ಷ್ಮಿ ಇವರುಗಳನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಆತಂರಿಕ ಶಿಸ್ತು ಮತ್ತು ತರಬೇತಿ ವಿಭಾಗದ ಸಂಚಾಲಕ ತೆರಿಕೇರಿ ವೆಂಕಟೇಶ್ ತಿಳಿಸಿದ್ದಾರೆ. ಫೆ.4 ರಂದು ನೂತನವಾಗಿ ಆಯ್ಕೆಯಾದವರ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ ಎಂದು ರಾಜ್ಯ ಸಂಚಾಲಕ ಡಿ.ಆರ್.ಪಾಡುರಂಗ ಸ್ವಾಮಿ ಮಾಹಿತಿ ನೀಡಿದ್ದಾರೆ. ರಾಜ್ಯ ಸಂಘಟನಾ ಸಂಚಾಲಕ ಕೊಡಿಗಲ್ ರಮೇಶ್, ಹಿಂದುಳಿದ ಅಲ್ಪಸಂಖ್ಯಾತರ ವಿಭಾಗದ ಮಾರುತಿ ಬಿ.ಹೊಸಮನಿ, ಗುಲ್ಬರ್ಗ ಅಂಗಸಂಸ್ಥೆ ವಿಭಾಗದ ಶಿವನಂದ ಎಂ.ಸವಂಗಿ, ಕೋಲಾರ ಕುಂದುಕೊರತೆ ವಿಭಾಗದ ಡಾ. ಎಂ. ಸೋಮಶೇಖರ್,…
ಲೇಖಕ: admin
ಕುಶಾಲನಗರ ಡಿ.28 : ಭಗವದ್ಗೀತೆ ಜಾಗತಿಕ ಹಾಗೂ ಜಾತ್ಯತೀತ ಗ್ರಂಥವೆಂದು ಉಡುಪಿ ಭಾವಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶ ಶ್ರೀ ಡಾ. ಸುಗುಣೇಂದ್ರ ತೀರ್ಥ ಶ್ರೀಪಾದರು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಕುಶಾಲನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಕೋಟಿ ಗೀತಾ ಲೇಖನ ಯಜ್ಞ ದೀಕ್ಷ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ, ತಾವು ಮಾಡುವ ಯಾವುದೇ ವೃತ್ತಿಯಲ್ಲಿ ಅಥವಾ ಜೀವನದಲ್ಲಿ ತೃಪ್ತಿ ಇಲ್ಲದೆ ಗೊಂದಲದಲ್ಲಿ ಸಿಲುಕಿರುವ ವೇಳೆ ಮನ ಶಾಂತಿಗಾಗಿ ಭಗವದ್ಗೀತೆ ಗ್ರಂಥ ಅಧ್ಯಯನ ಪ್ರಚಾರ ಹಾಗೂ ಬರವಣಿಗೆ ಸ್ವಯಂ ತೃಪ್ತಿ ತಂದುಕೊಡಲಿದೆ ಎಂದು ಶ್ರೀಗಳು ವ್ಯಾಖ್ಯಾನಿಸಿದರು. ದೇಶ ವಿದೇಶಗಳಲ್ಲಿ ಭಗವದ್ಗೀತೆ ಅಭಿಯಾನ ನಡೆಯುತ್ತಿದ್ದು ವಿಶ್ವದಲ್ಲಿ ಗರಿಷ್ಠ ವ್ಯಾಖ್ಯಾನ ಹೊಂದಿರುವ ಗ್ರಂಥ ಭಗವದ್ಗೀತೆ ಪುಸ್ತಕ ವಾಗಿದ್ದು ಜಗತ್ತಿನ ಯಾವುದೇ ಗ್ರಂಥಗಳಿಗೆ ಈ ರೀತಿಯ ವ್ಯಾಖ್ಯಾನ ದೊರಕಿಲ್ಲ ಎಂದು ಶ್ರೀಗಳು ಹೇಳಿದರು. ಜಾತಿ ಧರ್ಮ ಭೇದವಿಲ್ಲದ ಜಾಗತಿಕ ಗ್ರಂಥವಾದ ಭಗವದ್ಗೀತೆ ಜಗತ್ತಿಗೆ ಸತ್ಯವನ್ನೇ ಬೋಧಿಸಿದೆ ಎಂದರು. ಪ್ರತಿಯೊಬ್ಬರೂ ಜೀವನದ ಉದ್ದೇಶ ಅರಿತು ಬಾಳಬೇಕು ಶ್ರೀ ಕೃಷ್ಣ ಅಂದರೆ ಭಕ್ತರಿಗೆ…
ಕುಶಾಲನಗರ ಡಿ.28 : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲತೆಯನ್ನು ಮೈಗೂಡಿಸಿಕೊಳ್ಳುವ ಮೂಲಕ ತಮ್ಮ ನಿರ್ಧಿಷ್ಟ ಗುರಿ ಸಾಧಿಸಬೇಕು ಎಂದು ಕೊಡಗು ಸೇವಾ ಭಾರತಿ ಜಿಲ್ಲಾಧ್ಯಕ್ಷ ಟಿ.ಸಿ.ಚಂದ್ರನ್ ಸಲಹೆ ನೀಡಿದರು. ಕುಶಾಲನಗರ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಜೀವನದಲ್ಲಿ ಮಹತ್ತರವಾದ ಗುರಿ ಇಟ್ಟು ಕೊಂಡು ಪರಿಶ್ರಮಪೂರಕವಾಗಿ ಗುರಿ ಸಾಧಿಸುವತ್ತ ವಿದ್ಯಾರ್ಥಿಗಳು ಮುನ್ನಡೆಯಬೇಕು ಎಂದರು. ವಿಕಸಿತ ಭಾರತ ನಿರ್ಮಾಣದಲ್ಲಿ ಮಹತ್ತರ ಜವಾಬ್ದಾರಿ ಯುವ ಪೀಳಿಗೆಗೆ ಇದೆ. ರಾಷ್ಟ್ರಭಕ್ತಿ, ರಾಷ್ಟ್ರೀಯ ಜಾಗೃತಿಯೊಂದಿಗೆ ತಮ್ಮ ಬದುಕು ಸಾಧಿಸಬೇಕಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಯುವಜನಾಂಗದಲ್ಲಿ ದೇಶ ಭಕ್ತಿಯ ಕೊರತೆ ಕಂಡು ಬರುತ್ತಿದೆ. ಜೊತೆಗೆ ಸ್ವಾರ್ಥ ಚಿಂತನೆ ಎಲ್ಲಾ ಕ್ಷೇತ್ರಗಳಲ್ಲಿ ಮನೆ ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದರು. ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಪಿ.ಆರ್.ವಿಜಯ್ ಮಾತನಾಡಿ, ಪದವಿ ಪೂರ್ವ ಕಾಲೇಜು ಶಿಕ್ಷಣ ವಿದ್ಯಾರ್ಥಿಗಳ ಜೀವನ, ಭವಿಷ್ಯ ರೂಪಿಸುತ್ತದೆ ಎಂದರು. ಪೋಷಕರು ತಮ್ಮ ಮಕ್ಕಳ ಸ್ವೇಚ್ಛಾಚಾರದ ಬಗ್ಗೆ ಸೂಕ್ಷ್ಮ ಗಮನವಿರಲಿ…
ವಿರಾಜಪೇಟೆ ಡಿ.28 : ವಿರಾಜಪೇಟೆ ಸಮೀಪದ ಆರ್ಜಿ ಗ್ರಾಮದ ಪೆರುಂಬಾಡಿ ಶ್ರೀ ಅಯ್ಯಪ್ಪ ದೇವಾಲಯದಲ್ಲಿ ಅಯ್ಯಪ್ಪ ಮಂಡಲ ಪೂಜೆ ಅಂಗವಾಗಿ ವಿವಿಧ ಪೂಜಾ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ನಡೆಯಿತು. ಮುಂಜಾನೆಯಿಂದಲೇ ಗಣಪತಿ ಹೋಮ, ಎಳನೀರು ಅಭಿಷೇಕ, ಚಂಡೇಮೇಳ ಶ್ರೀ ಅಯ್ಯಪ್ಪ ಸ್ವಾಮಿಗೆ ಪಂಚಾಮೃತ ಅಭಿಷೇಕ, ಲಕ್ಷಾರ್ಚನೆ, ಪಲ್ಲಕ್ಕಿ ಪೂಜೆ ಮತ್ತು ಮಹಾಪೂಜೆಗಳು ಜರುಗಿತು. ನೆರೆದಿದ್ದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ನೆರವೇರಿತು. ಅರ್ಚಕ ಸುರೇಶ್ ಅವರ ನೇತೃತ್ವದಲ್ಲಿ ವಿಶೇಷ ಪೂಜೆಗಳು ನಡೆಯಿತು. ಈ ಸಂದರ್ಭ ಆಡಳಿತ ಮಂಡಳಿಯ ಸದಸ್ಯರುಗಳು ಮತ್ತು ಇತರರು ಇದ್ದರು. ದೇವಾಲಯವನ್ನು ತಳಿರು ತೋರಣ, ವಿವಿಧ ಬಗೆಯ ಬಣ್ಣದ ಹೂವು ಮತ್ತು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.
ಮಡಿಕೇರಿ ಡಿ.28 : ಶ್ರೀ ಅಯ್ಯಪ್ಪ ದೀಪಾರಾಧನಾ ಸಮಿತಿ ವತಿಯಿಂದ ಡಿ.30 ರಂದು ಮಡಿಕೇರಿಯ ಶ್ರೀ ಮುತ್ತಪ್ಪ ದೇವಾಲಯದಲ್ಲಿ ಶ್ರೀ ಅಯ್ಯಪ್ಪ ದೀಪಾರಾಧನಾ ಉತ್ಸವ ನಡೆಯಲಿದೆ ಎಂದು ಸಮಿತಿಯ ಗೌರವಾಧ್ಯಕ್ಷ ಚಂದ್ರಶೇಖರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮುಂಜಾನೆಯಿಂದಲೇ ವಿವಿಧ ಪೂಜಾ ಕೈಂಕರ್ಯಗಳು ಜರುಗಲಿದೆ ಎಂದು ಮಾಹಿತಿ ನೀಡಿದರು. ಬೆಳಿಗ್ಗೆ 6 ಗಂಟೆಗೆ ನಡೆ ತೆಗೆಯುವುದು, 6.5ಕ್ಕೆ ನಿರ್ಮಲ್ಯ ಪೂಜೆ, 6.0ಕ್ಕೆ ಗಣಪತಿ ಹೋಮ, 8 ಗಂಟೆಗೆ ಅಷ್ಟಾಭಿಷೇಕ ಸೇವೆ, 10.30 ಗಂಟೆಗೆ ತುಳಸಿ ಸಹಸ್ರನಾಮಾರ್ಚನೆ, ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಪಾಲಕೊಂಬು ಪ್ರತಿಷ್ಠಾಪನೆ, 1.30 ಗಂಟೆಗೆ ತಾಯಂಬಲಂ (ಚಂಡೆಸೇವೆ) ನಡೆಯಲಿದ್ದು, ಸಂಜೆ 4 ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿಯ ಉತ್ಸವ ಮೂರ್ತಿಯನ್ನು ಅಲಂಕೃತ ಮಂಟಪದಲ್ಲಿ ಕುಳ್ಳಿರಿಸಿ ಚಂಡೆ, ಮೇಳದೊಂದಿಗೆ ನಗರದ ಅಶ್ವಿನಿ ಗಣಪತಿ ದೇವಾಯಲಯದಿಂದ…
ಮಡಿಕೇರಿ ಡಿ.28 : ಮುಸ್ಲಿಂ ಮಹಿಳೆಯರ ಬಗ್ಗೆ ಅಗೌರವದಿಂದ ಮಾತನಾಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕ ಮಡಿಕೇರಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಪಿ.ಎ.ಹನೀಫ್ ಮಾತನಾಡಿ ಮಂಡ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಪ್ರಭಾಕರ್ ಭಟ್ ಅವರು ಮುಸ್ಲಿಂ ಮಹಿಳೆಯರ ಕುರಿತು ಕೀಳು ಮಟ್ಟದ ಭಾಷೆ ಬಳಸಿದ್ದಾರೆ. ಇದರಿಂದ ಇಡೀ ಮಹಿಳಾ ಸಮುದಾಯಕ್ಕೆ ಅವಮಾನವಾಗಿದ್ದು, ಇವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸುವುದಾಗಿ ಅಸಮಾಧಾನ ವ್ಯಕ್ತಪಡಿಸಿದರು. ಕಾಲೇಜು ವಿದ್ಯಾರ್ಥಿನಿಯೊಬ್ಬಳ ವಿರುದ್ಧ ಬೆದರಿಕೆಯ ಮಾತುಗಳನ್ನಾಡಿದ್ದು, ಇದು ಕೂಡ ಕಾನೂನಿಗೆ ವಿರುದ್ಧವಾಗಿದೆ. ಕೋಮು ದ್ವೇಷ ಹರಡುವುದು ಸಂವಿಧಾನ ವಿರೋಧಿ ನಡೆಯಾಗಿದೆ. ಆದ್ದರಿಂದ ಪೊಲೀಸರು ತಕ್ಷಣ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಪ್ರಭಾಕರ್ ಭಟ್ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿದರು. ಮನವಿ ಸಲ್ಲಿಸುವ ಸಂದರ್ಭ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಪ್ರಮುಖರಾದ ಕೆ.ಎಂ.ಸಯ್ಯದ್ ಭಾವ…
ಆಯಾ ಕಾಲಕ್ಕೆ ಸಿಗುವ ಹಣ್ಣಿನ ರಸ ಸೇವಿಸುವುದು ಆರೋಗ್ಯಕ್ಕೆ ಉತ್ತಮ ಎನ್ನುವುದನ್ನು ಕೇಳಿದ್ದೇವೆ. ಆದರೆ ಪ್ರತಿದಿನವೂ ಹಣ್ಣಿನ ರಸ ಸೇವಿಸುವುದರಿಂದ ರಕ್ತದೊತ್ತಡ ಹೆಚ್ಚಬಹುದು ಮತ್ತು ಇದರಿಂದ ಹೃದಯದ ಆರೋಗ್ಯಕ್ಕೂ ತೊಂದರೆಯಾಗಬಹುದು ಎನ್ನುತ್ತದೆ ಇತ್ತೀಚಿನ ಒಂದು ಸಂಶೋಧನೆ. ಹಣ್ಣಿನ ರಸದಲ್ಲಿರುವ ಅತಿ ಹೆಚ್ಚಿನ ಸಕ್ಕರೆ ಅಂಶ ಮತ್ತು ಅತಿಕಡಿಮೆ ಫೈಬರ್ ಅಂಶ ರಕ್ತದೊತ್ತಡವನ್ನು ಹೆಚ್ಚಿಸುತ್ತದೆ. ಅವುಗಳಲ್ಲಿ ಸಾಕಷ್ಟು ವಿಟಾಮಿನ್‌ಗಳು ಮತ್ತು ದೇಹಕ್ಕೆ ಅಗತ್ಯವಾದ ಪೋಷಕಾಂಶಗಳಿದ್ದರೂ ಅಷ್ಟೇ ಪ್ರಮಾಣದ ಸಕ್ಕರೆ ಅಂಶ ಮತ್ತು ಕಡಿಮೆ ಫೈಬರ್ ಅಂಶ ಇರುತ್ತದೆ. ಆದ್ದರಿಂದ ಎರಡು ದಿನಕ್ಕೊಮ್ಮೆಯೋ, ವಾರಕ್ಕೊಮ್ಮೆಯೋ ಹಣ್ಣಿನ ರಸ ಸೇವಿಸುವುದು ಒಳ್ಳೆಯದು ಎನ್ನುತ್ತಾರೆ ತಜ್ಞರು. ಹಣ್ಣಿನ ರಸ ಸಾಕಷ್ಟು ಉತ್ತಮ ಗುಣಗಳನ್ನು ಹೊಂದಿದ್ದರೂ ಇದರ ನಿಯಮಿತ ಸೇವನೆ ಮಾತ್ರ ಒಳ್ಳೆಯದಲ್ಲ ಎಂಬುದು ತಜ್ಞರ ಅಭಿಪ್ರಾಯ. ದಣಿದಾಗ ದೇಹಕ್ಕೆ ಶಕ್ತಿಯನ್ನು ನೀಡುವ ಹಣ್ಣಿನ ರಸ ದೇಹದ ಆರೋಗ್ಯವನ್ನೇ ಹದಗೆಡಿಸುವ ಗುಣವನ್ನೂ ಹೊಂದಿದೆ ಎಂದರೆ ಅಚ್ಚರಿಯಾಗಬಹುದು. ಆದರೆ ಕೆಲವರಿಗೆ ಪ್ರತಿದಿನವೂ ಒಂದಿಲ್ಲೊಂದು ಹಣ್ಣಿನ ರಸ ಕುಡಿದು ಅಭ್ಯಾಸವಿರುವುದು ಸುಳ್ಳಲ್ಲ.…
ಬೇಕಾಗುವ ಪದಾರ್ಥಗಳು : ನೀರು-ಒಂದು ಬಟ್ಟಲು, ಕಾಳು ಮೆಣಸಿನ ಪುಡಿ-ಒಂದು ಚಿಟಿಕೆ, ಏಲಕ್ಕೆ ಪುಡಿ- ಒಂದು ಚಿಟಿಕೆ, ಪುದೀನಾ ಎಲೆ-15 ರಿಂದ 20, ತುಳಸಿ ಎಲೆ- 15 ರಿಂದ 20, ನಿಂಬೆರಸ- ಒಂದು ಚಮಚ, ಜೇನುತುಪ್ಪ ಅಥವಾ ಸಕ್ಕರೆ- ಒಂದು ಚಮಚ. ಮಾಡುವ ವಿಧಾನ :: ಟೀ ತಯಾರಿಸುವ ಪಾತ್ರೆಯಲ್ಲಿ ಒಂದು ಕಪ್ ನೀರು ಹಾಕಿ. ಕುದಿ ಬಂದ ನಂತರ ಚಿಟಿಕೆ ಕಾಳು ಮೆಣಸಿನ ಪುಡಿ ಮತ್ತು ಏಲಕ್ಕಿ ಪುಡಿಯನ್ನು ಹಾಕಿ ಚೆನ್ನಾಗಿ ಕುದಿಸಿ. ಬಳಿಕ ಪುದೀನಾ ಎಲೆ ಹಾಗೂ ತುಳಸಿ ಎಲೆಗಳನ್ನು ಹಾಕಿ. ಪ್ಲೇಟ್ ಮುಚ್ಚಿ. ಸಣ್ಣ ಉರಿಯಲ್ಲಿ ಎರಡು ನಿಮಿಷಗಳ ಕಾಲ ಕಾಯಿಸಿ. ನಂತರ ಒಲೆ ಮೇಲಿಂದ ಇಳಿಸಿ ನಿಂಬೆರಸ ಬೆರೆಸಿ. ರುಚಿಗೆ ತಕ್ಕಷ್ಟು ಸಕ್ಕರೆ ಅಥವಾ ಜೇನುತುಪ್ಪ ಹಾಕಿ. ಬಳಿಕ ಕುದಿಸಿ, ಸೋಸಿ. ಇದೀಗ ಆರೋಗ್ಯಕರವಾದ ಹರ್ಬಲ್ ಗ್ರೀನ್ ಟೀ ಸವಿಯಲು ಸಿದ್ಧ.
ವಿರಾಜಪೇಟೆ ಡಿ.28 : ಹೆಗ್ಗಳ ಗ್ರಾಮದ ಎಡಮಕ್ಕಿಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಂಡಲ ಪೂಜೆಯನ್ನು ಭಕ್ತಿಯಿಂದ ಜರುಗಿತು. ಶ್ರೀ ಅಯ್ಯಪ್ಪ ಸ್ವಾಮಿಗೆ ತುಪ್ಪದ ಅಭಿಷೇಕ, ಹಾಲು ಹಾಗೂ ಎಳನೀರಿನ ಅಭಿಷೇಕ ನೆರವೇರಿಸಿ ಭಸ್ಮಾರ್ಚನೆಯನ್ನು ಮಾಡಲಾಯಿತು. ಮಂಡಲ ಪೂಜೆಯ ಪ್ರಧಾನ ಆಚರಣೆಯಾದ ದೀಪಾರಾಧನೆ ನಡೆಸಿ ದೇವಸ್ಥಾನದೆಲ್ಲೆಡೆಗಳಲ್ಲಿ ದೀಪಗಳನ್ನು ಬೆಳಗಿ ವಿಶೇಷ ಅರ್ಚನೆ ನಡೆಯಿತು. ಭಕ್ತರು ಧರ್ಮ ಶಾಸ್ತನಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ಮಹಾಪೂಜೆ ಹಾಗೂ ಮಂಗಳಾರತಿಯ ಬಳಿಕ ಭಕ್ತಾಧಿಗಳಿಗೆ ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನದಾನ ನೆರವೇರಿತು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯವರು, ಸಮೀಪದ ಹೆಗ್ಗಳ, ತೋರ, ಬೂದಿಮಾಳ, ರಾಮನಗರ ಗ್ರಾಮಗಳ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ದೇವಾಲಯದ ಪ್ರಧಾನ ಅರ್ಚಕ ವೇಣುಗೋಪಾಲ್ ಭಟ್ ಪೂಜಾ ಕೈಂಕರ್ಯಗಳನ್ನು ನಡೆಸಿಕೊಟ್ಟರು.
ಕುಶಾಲನಗರ ಡಿ.28 : ಕಲ್ಲಡ್ಕ ಪ್ರಭಾಕರ್ ಅವರು ಮುಸ್ಲಿಂ ಮಹಿಳೆಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಕುಶಾಲನಗರ ತಾಲ್ಲೂಕು ಮುಸ್ಲಿಂ ಒಕ್ಕೂಟ ಪ್ರತಿಭಟನೆ ನಡೆಸಿತು. ಕುಶಾಲನಗರದ ಕಾರ್ಯಪ್ಪ ವೃತ್ತದಲ್ಲಿ ಜಮಾಯಿಸಿದ ಪ್ರಮುಖರು ಹಾಗೂ ಪದಾಧಿಕಾರಿಗಳು ಕಲ್ಲಡ್ಕ ಪ್ರಭಾಕರ್ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಕುಶಾಲನಗರ ತಾಲ್ಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಅಬ್ದುಲ್ ಕರೀಂ ಹಾಗೂ ಕುಶಾಲನಗರ ಎಸ್.ಡಿ.ಪಿ.ಐ ಅಧ್ಯಕ್ಷ ಜ಼ಕರಿಯಾ ಮಾತನಾಡಿ, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಮುಸ್ಲಿಂ ಒಕ್ಕೂಟದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಜಮೀರ್, ಉಪಾಧ್ಯಕ್ಷ ಪಾಷಾ, ಪ್ರಮುಖರಾದ ಅನ್ವರ್, ಅಕ್ಬರ್, ಖಲೀಲ್, ಶರೀಫ್, ಸಲೀಂ, ಮೊಯ್ದೀನ್, ಸಮಿ, ಅಶ್ರಫ್, ಜ಼ರೀನಾ, ಹಮೀದ್, ಸಾಹುಲ್ ಹಾಗೂ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.






