ಲೇಖಕ: admin

ಮಡಿಕೇರಿ ಫೆ.6 : NEWS DESK :   ರಾಜ್ಯದ ಎಲ್ಲಾ ಗ್ರಾಮೀಣ ಪತ್ರಕರ್ತರಿಗೆ ಬಸ್‌ ಪಾಸ್‌ ಸೌಲಭ್ಯ ನೀಡುವುದಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ಗ್ರಾಮೀಣ ಪತ್ರಕರ್ತರ ಬಸ್‌ ಪಾಸ್‌ ಬೇಡಿಕೆಗೆ ದಶಕಗಳ ಇತಿಹಾಸವೂ ಇದೆ. ಆದರೆ ಸರ್ಕಾರವು ಬಸ್‌ ಪಾಸ್‌ ನೀಡುವುದೇ ಆದಲ್ಲಿ ಗ್ರಾಮೀಣ ಅರ್ಹ ಪತ್ರಕರ್ತರನ್ನು ಗುರುತಿಸುವುದಕ್ಕೇ ಜಿಲ್ಲಾ ಮಟ್ಟದಲ್ಲಿ ಮಾನ್ಯತಾ ಸಮಿತಿಯನ್ನು ಮೊದಲು ರಚಿಸಬೇಕಾಗುತ್ತದೆ. ಈಗಾಗಲೇ ರಾಜ್ಯದಲ್ಲಿ ಮೊದಲಿನಿಂದ ಇರುವ ಕಾರ್ಯನಿರತ ಪತ್ರಕರ್ತರ ಸಂಘದ ಜತೆಗೇ ಇನ್ನೊಂದೆರಡು ಸಂಘಟನೆಗಳೂ ರಾಜ್ಯದಲ್ಲಿ ಸಕ್ರಿಯವಾಗಿ ಇವೆ. ಇತರ ಸಂಘಟನೆಗಳನ್ನು ಅನಧಿಕೃತ ಎಂದು ಹೇಳಲೂ ಸಾಧ್ಯವಿಲ್ಲ. ಇನ್ನು ಪಾಸ್‌ ಸಿಗುವ ವಿಚಾರ ಖಚಿತ ಆದ ಕೂಡಲೇ ಈಗಾಗಲೇ ಕೊನೆಯುಸಿರು ಎಳೆದಿರುವ ನವೀಕರಣ ಸಮಯದಲ್ಲಿ ಮಾತ್ರ ವರ್ಷಕ್ಕೊಮ್ಮೆ ಪ್ರಕಟಗೊಳ್ಳುವ ನೂರಾರು ಪತ್ರಿಕೆಗಳು ಮರು ಜೀವ ಪಡೆದುಕೊಳ್ಳುತ್ತವೆ. . ಇದರ ಜತೆಗೇ ಈಗಾಗಲೇ ಪತ್ರಕರ್ತರ ವೇಷ ಹಾಕಿಕೊಂಡಿರುವ ನೂರಾರು NRR (Non Reporting Reporters) ಗಳ ಜತೆಗೇ ನೂರಾರು NRR ಗಳೂ ಸೃಷ್ಟಿ…

Read More

ಕೊಡ್ಲಿಪೇಟೆ ಫೆ.6 NEWS DESK :  ಕೊಡ್ಲಿಪೇಟೆಯ ವಿವಿಧೆಡೆ ಸಂವಿಧಾನ ಜಾಗೃತಿ ಜಾಥಾ ನಡೆಯಿತು.   ಪಟ್ಟಣದ ವಿವಿಧೆಡೆ ಶಬ್ದ ಚಿತ್ರ ಮೆರವಣಿಗೆ ನಡೆಯಿತು. ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಹಾಗೂ ಸಾರ್ವಜನಿಕರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಜಾಗೃತಿ ಜಾಥವನ್ನು ಬರಮಾಡಿಕೊಂಡರು. ಕೊಡ್ಲಿಪೇಟೆ ಮತ್ತು ಬ್ಯಾಡ ಗೊಟ್ಟ ಪಂಚಾಯಿತಿ ಮತ್ತು ಬೆಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಸದಸ್ಯರು ಹಾಗು ಸಿಬ್ಬಂದಿ ವರ್ಗ, ಗ್ರಾಮಮಟ್ಟದ ಇಲಾಖೆ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು, ಸರ್ಕಾರಿ ನೌಕರರಗಳು ಶಾಲೆಗಳು ವಿದ್ಯಾರ್ಥಿಗಳು ಸಾರ್ವಜನಿಕರು  ಹಾಜರಿದ್ದರು.

Read More

ಮಡಿಕೇರಿ ಫೆ.5 NEWS DESK : ಜಮ್ಮಾಬಾಣೆ ಸಮಸ್ಯೆ ಇತ್ಯರ್ಥಕ್ಕೆ ಆಂದೋಲನದ ಮಾದರಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ, ಜಮ್ಮಾಬಾಣೆ ಸಮಸ್ಯೆ ಬಗೆಹರಿಯದೇ ನಾಲ್ಕಾರು ವರ್ಷಗಳಿಂದ ಹಾಗೇ ಉಳಿದಿದೆ. ಈ ಬಗ್ಗೆ ಜಿಲ್ಲೆಯ ಶಾಸಕದ್ವಯರು ಒತ್ತಾಯಿಸಿದ ಹಿನ್ನೆಲೆಯಲ್ಲಿ ಮತ್ತು ಜಿಲ್ಲಾಧಿಕಾರಿ ಅವರು ತಮ್ಮ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಜಮ್ಮಾಬಾಣೆ ಸಮಸ್ಯೆ ಬಗೆಹರಿಕೆಗೆ ಸುದೀರ್ಘ ಚರ್ಚೆ ನಡೆಸಲಾಗಿದೆ. ಯಾವ ಊರಿನಲ್ಲಿ ಜಮ್ಮಾಬಾಣೆ ಸಮಸ್ಯೆ ಇದೆಯೋ ಅಂತಹ ಊರುಗಳಲ್ಲಿ ತಹಶೀಲ್ದಾರ್ ಸೇರಿದಂತೆ ಕಂದಾಯ ಮತ್ತು ಸರ್ವೆ ಇಲಾಖೆ ಅಧಿಕಾರಿಗಳು ಗ್ರಾಮಸಭೆ ನಡೆಸುವ ಮೂಲಕ ತಕರಾರಿಲ್ಲದ ಕಡೆ ಸರ್ವೆ ನಡೆಸಿ ಯಾರು ಜಾಗ ಸಾಗುವಳಿ ಮಾಡುತ್ತಿದ್ದಾರೋ ಅಂತಹವರ ಹೆಸರಿಗೆ ಪ್ರತ್ಯೇಕವಾದ ಹಿಸ್ಸಾ ಪಹಣಿ ಮಾಡಿಕೊಡಬೇಕು. ತಕರಾರು ಇದ್ದ ಕಡೆಗಳಲ್ಲಿ ಅಧಿಕಾರಿಗಳಿಗೆ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಲಾಗಿದೆ. ಈ ಕಾರ್ಯ ಆಂದೋಲನ ಮಾದರಿಯಲ್ಲಿ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು…

Read More

ಮಡಿಕೇರಿ ಫೆ.5 NEWS DESK : ಜಮ್ಮಾಬಾಣೆ ಸಮಸ್ಯೆ ಇತ್ಯರ್ಥಕ್ಕೆ ಆಂದೋಲನದ ಮಾದರಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ, ಜಮ್ಮಾಬಾಣೆ ಸಮಸ್ಯೆ ಬಗೆಹರಿಯದೇ ನಾಲ್ಕಾರು ವರ್ಷಗಳಿಂದ ಹಾಗೇ ಉಳಿದಿದೆ. ಈ ಬಗ್ಗೆ ಜಿಲ್ಲೆಯ ಶಾಸಕದ್ವಯರು ಒತ್ತಾಯಿಸಿದ ಹಿನ್ನೆಲೆಯಲ್ಲಿ ಮತ್ತು ಜಿಲ್ಲಾಧಿಕಾರಿ ಅವರು ತಮ್ಮ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಜಮ್ಮಾಬಾಣೆ ಸಮಸ್ಯೆ ಬಗೆಹರಿಕೆಗೆ ಸುದೀರ್ಘ ಚರ್ಚೆ ನಡೆಸಲಾಗಿದೆ. ಯಾವ ಊರಿನಲ್ಲಿ ಜಮ್ಮಾಬಾಣೆ ಸಮಸ್ಯೆ ಇದೆಯೋ ಅಂತಹ ಊರುಗಳಲ್ಲಿ ತಹಶೀಲ್ದಾರ್ ಸೇರಿದಂತೆ ಕಂದಾಯ ಮತ್ತು ಸರ್ವೆ ಇಲಾಖೆ ಅಧಿಕಾರಿಗಳು ಗ್ರಾಮಸಭೆ ನಡೆಸುವ ಮೂಲಕ ತಕರಾರಿಲ್ಲದ ಕಡೆ ಸರ್ವೆ ನಡೆಸಿ ಯಾರು ಜಾಗ ಸಾಗುವಳಿ ಮಾಡುತ್ತಿದ್ದಾರೋ ಅಂತಹವರ ಹೆಸರಿಗೆ ಪ್ರತ್ಯೇಕವಾದ ಹಿಸ್ಸಾ ಪಹಣಿ ಮಾಡಿಕೊಡಬೇಕು. ತಕರಾರು ಇದ್ದ ಕಡೆಗಳಲ್ಲಿ ಅಧಿಕಾರಿಗಳಿಗೆ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಲಾಗಿದೆ. ಈ ಕಾರ್ಯ ಆಂದೋಲನ ಮಾದರಿಯಲ್ಲಿ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು…

Read More

ಮಡಿಕೇರಿ, ಫೆ. 5 NEWS DESK : ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ (ನೀಮಾ), ಕೊಡಗು ಸಂಘದ ವತಿಯಿಂದ ಆಯುರ್ವೇದ ವೈದ್ಯರಿಗೆ ನಿರಂತರ ಶಿಕ್ಷಣ ಕಾಯ೯ಕ್ರಮ  ನಡೆಯಿತು. ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಡಾ. ಕುಮಾರ್ “ಆಯುರ್ವೇದದಲ್ಲಿ ಮಧುಮೇಹದ ತಡೆಗಟ್ಟುವಿಕೆ ಮತ್ತು ಚಿಕಿತ್ಸೆ”ಯ ಬಗ್ಗೆ ಮಾಹಿತಿ ನೀಡಿದರು. ಹೊಸ ಯುಕ್ತಿ ಹಳೇ ತತ್ವಗಳನ್ನು ಒಳಗೂಡಿಸಿಕೊಂಡು ಹೇಗೆ ನಮ್ಮ ಸುತ್ತಲೂ ಲಭ್ಯವಿರುವ ಗಿಡಮೂಲಿಕೆಗಳನ್ನು ಸೂಕ್ತವಾಗಿ ಬಳಸುವುದರಿಂದ, ಸೂಕ್ತ ಯೋಗಾಭ್ಯಾಸದಿಂದ ಮಧುಮೇಹವನ್ನು  ಯಾವ ರೀತಿಯಲ್ಲಿ ನಿಯಂತ್ರಿಸಬಹುದು ಎಂದು ಅವರು  ತಿಳಿಸಿದರು. ನೀಮಾ ಕೊಡಗು ಅಧ್ಯಕ್ಷ  ಡಾ.ರಾಜಾರಾಮ್  ಅಧ್ಯಕ್ಶ್ಯತೆಯಲ್ಲಿ  ನಡೆದ ಕಾಯಾ೯ಗಾರದ ಪ್ರಯೋಜನವನ್ನು   ಕೊಡಗಿನ 30ಕ್ಕೂ ಹೆಚ್ಚು  ಆಯುಷ್ ವೈದ್ಯರು    ಪಡೆದುಕೊಂಡರು. ಡಾ. ಸೌಮ್ಯ ಸ್ವಾಗತಿಸಿ, ಸಂಪನ್ಮೂಲ ವ್ಯಕ್ತಿಯ ಪರಿಚಯ ಮಾಡಿಕೊಟ್ಟರು. ನೀಮಾ ಕೊಡಗು ಮಹಿಳಾ ಘಟಕದ ಅಧ್ಯಕ್ಷೆ ಡಾ. ಶೈಲಜಾ ರಾಜೇಂದ್ರ, ಹಿರಿಯ ವೈದ್ಯರಾದ  ಡಾ. ಉದಯಶಂಕರ್, ಡಾ. ಉದಯಕುಮಾರ್, ಡಾ. ಶೈಲಜಾ ಮುರಳೀಧರ, ಡಾ. ರಾಜೇಂದ್ರ, ಡಾ. ಷೆನೋಯ್, ಡಾ. ವಿವೇಕ್…

Read More

ಮಡಿಕೇರಿ ಫೆ.5 : ಮಡಿಕೇರಿ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಜಿ.ಟಿ.ರಸ್ತೆ ಫೀಡರ್‍ನ ವಿದ್ಯುತ್ ಮಾರ್ಗದಲ್ಲಿ ಜಿಒಎಸ್ ಅಳವಡಿಸುವ ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ಫೆ.6 ರಂದು ಬೆಳಗ್ಗೆ 9:30 ರಿಂದ ಸಂಜೆ 5.30 ಗಂಟೆವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಮೈಸೂರು ರಸ್ತೆ, ಅರಣ್ಯ ಭವನ, ಚೈನ್‍ಗೇಟ್, ಪುಟಾಣಿನಗರ, ದೇಚೂರು, ಮಂಗಳದೇವಿನಗರ ಮೂರ್ನಾಡು ರಸ್ತೆ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.

Read More

ಮಡಿಕೇರಿ ಫೆ.5 NEWS DESK : ಜಿಲ್ಲೆಯಲ್ಲಿ ಹಲವು ದಶಕಗಳಿಂದ ಜಮ್ಮಾಬಾಣೆ ಭೂಮಿ ಸರ್ವೆ ಮಾಡಲು ಬಾಕಿ ಇದ್ದು, ಆ ನಿಟ್ಟಿನಲ್ಲಿ ಸಾಗುವಳಿ ಮಾಡುವವರಿಗೆ ಆರ್‍ಟಿಸಿ(ಪಹಣಿ) ಮಾಡಿಕೊಡಲು ಮುಂದಾಗಿದ್ದು, ಆ ನಿಟ್ಟಿನಲ್ಲಿ ಅಧಿಕಾರಿಗಳು ಸರ್ವೆ ಕಾರ್ಯ ಕೈಗೊಳ್ಳಲು ಮುಂದಾಗುವಂತೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಸೂಚಿಸಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಹಲವು ಮಹತ್ವದ ವಿಷಯಗಳ ಕುರಿತು ಸುದೀರ್ಘವಾಗಿ ಸೋಮವಾರ ಪ್ರಗತಿ ಪರಿಶೀಲನೆ ನಡೆಸಿದರು. `ಜಮ್ಮಾ ಭೂಮಿ ಹಿಡುವಳಿದಾರರಿಗೆ ಆರ್‍ಟಿಸಿ ಇಲ್ಲದಿರುವುದರಿಂದ ಸಾಲ ಸೌಲಭ್ಯ ಹಾಗೂ ಸರ್ಕಾರದ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕೃಷಿ ಮಾಡುವ ಕುಟುಂಬದವರಿಗೆ ಆರ್‍ಟಿಸಿ ಮಾಡಿಕೊಡಬೇಕಿದ್ದು, ಆ ನಿಟ್ಟಿನಲ್ಲಿ ಸರ್ವೇ ಕಾರ್ಯವನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು.’ `ಕೊಡಗು ಜಿಲ್ಲೆಯಲ್ಲಿ 25 ಸಾವಿರ ಜನರು ಜಮ್ಮಬಾಣೆ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದು, ಪಟ್ಟೆದಾರ ಕುಟುಂಬದ ಒಬ್ಬರ ಹೆಸರಿಗೆ ಮಾತ್ರ ಭೂಮಿ ಇದ್ದು, ಆ ಕುಟುಂಬದ ಇತರರಿಗೂ ಆರ್‍ಟಿಸಿ ಮಾಡಬೇಕಿದೆ. ಆ ನಿಟ್ಟಿನಲ್ಲಿ ಸರ್ವೇ…

Read More

ಸೋಮವಾರಪೇಟೆ,ಫೆ.5 : ಭಾರತೀಯ ಜನತಾ ಪಾರ್ಟಿಯ ಸೋಮವಾರಪೇಟೆ ಮಂಡಲ ವತಿಯಿಂದ ಸೋಮವಾರಪೇಟೆ ಕೊಡವ ಸಮಾಜದಲ್ಲಿ ಗ್ರಾಮ ಚಲೋ ಉದ್ಘಾಟನೆ ಹಾಗೂ ನೂತನ ಬಿಜೆಪಿ ಜಿಲ್ಲಾಧ್ಯಕ್ಷ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಿಗೆ ಅಭಿನಂದನಾ ಸಮಾರಂಭ ನಡೆಯಿತು. ಸಮಾರಂಭದಲ್ಲಿ ಮಾತನಾಡಿದ ಮಾಜಿ ಶಾಸಕ ಅಪ್ಪಚ್ಚುರಂಜನ್, ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಪಣತೊಟ್ಟಿದ್ದಾರೆ. ಜನ್‍ಧನ್ ಯೋಜನೆಯಡಿ ಬ್ಯಾಂಕ್ ಖಾತೆ, ಉಜ್ವಲ ಯೋಜನೆಯ ಮೂಲಕ ಪ್ರತಿ ಮನೆಗೂ ಗ್ಯಾಸ್ ಸಿಲಿಂಡರ್ ವಿತರಣೆ, ದೀನ್‍ದಯಾಳ್ ಯೋಜನೆಯಡಿ ಕುಗ್ರಾಮಗಳಿಗೂ ವಿದ್ಯುತ್ ಸೌಕರ್ಯ, ರೈತ ಸಮ್ಮಾನ್ ನಿಧಿಯಡಿ ಪ್ರತಿ ರೈತನ ಖಾತೆಗೆ ವಾರ್ಷಿಕ 6 ಸಾವಿರ, ರೈಲ್ವೇ, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಅನುದಾನ ಕಲ್ಪಿಸಲಾಗಿದೆ ಎಂದರು. ಹಿಂದೂ ಸಮಾಜದ ಸ್ವಾಭಿಮಾನದ ಸಂಕೇತವಾಗಿದ್ದ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಮೋದಿ ಸರ್ಕಾರ ಪಣತೊಟ್ಟು ಪೂರ್ಣಗೊಳಿಸಿದೆ. ಆ ಮೂಲಕ ಹಿಂದು ಸಮಾಜದ ಗೌರವವನ್ನು ಎತ್ತಿ ಹಿಡಿದಿದೆ. ಕೇಂದ್ರ ಸರ್ಕಾರದ ಸಾಧನೆಗಳನ್ನು ಪ್ರತಿ ಮನೆಗೆ ತಲುಪಿಸುವ ಮೂಲಕ ಮತ್ತೊಮ್ಮೆ ಲೋಕಸಭಾ ಚುನಾವಣೆಯಲ್ಲಿ…

Read More

ಬೆಂಗಳೂರು ಫೆ.5 NEWS DESK : ನಮ್ಮ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ವಿರೋಧಿಸಿ ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಫೆಬ್ರವರಿ 07 ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಿಗ್ಗೆ 11.00 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದ ಜನತೆ ನಮಗೆ ಕೊಟ್ಟ ಅವಕಾಶಕ್ಕೆ ನ್ಯಾಯ ಒದಗಿಸಬೇಕಾದುದ್ದು ನಮ್ಮ ಕರ್ತವ್ಯ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ನ್ಯಾಯ ಒದಗಿಸಿಕೊಡಲಿದೆ ಎಂದು ಇಲ್ಲಿಯವರೆಗೂ ತಾಳ್ಮೆ ಯಿಂದ ಕಾಯುತ್ತಿದ್ದೆವು. ಕಳೆದ ಸಾಲಿನ ಬಜೆಟ್ ನಲ್ಲಿ ಹೇಳಿದಂತೆ ನಡೆದುಕೊಳ್ಳುತ್ತಾರೆ ಎಂದು ಕಾದಿದ್ದೆವು. ಆದರೆ ಇದುವರೆಗೂ ಅನ್ಯಾಯ ಸರಿ ಪಡಿಸಿಲ್ಲ. ಇದರ ವಿರುದ್ಧ ಧ್ವನಿ ಎತ್ತಲೇಬೇಕಾಗಿದೆ. ಹೋರಾಟಕ್ಕೆ ಜೊತೆ ನೀಡಲು ಇಡೀ ಸರ್ಕಾರ ಪಕ್ಷ ಭೇದ ಮರೆತು ಆಹ್ವಾನ ನೀಡಿದ್ದೇವೆ. ಕನ್ನಡಿಗರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕಿದೆ. ಕೇಂದ್ರದ ಕಿವಿಯನ್ನು…

Read More

ಮಡಿಕೇರಿ ಫೆ.5  NEWS DESK : ಜಿಲ್ಲಾ ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಆಯೋಜಿತ 2ನೇ ವರ್ಷದ ವಿಪ್ರ ಕ್ರೀಡಾಕೂಟದ ಅಂಗವಾಗಿ ಬ್ರಾಹ್ಮಣ ಸಮಾಜದ ಬಾಂಧವರಿಗೆ ಬ್ಯಾಡ್ಮಿಂಟನ್ ಹಾಗೂ ಟೇಬಲ್ ಟೆನ್ನಿಸ್ ಪಂದ್ಯಾವಳಿಗಳು ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದವು. ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ಸಮಾಜದ ಬಾಂಧವರು ಕ್ರೀಡಾಕೂಟದಲ್ಲಿ ಪಾಲ್ಗೊಂಡರು. ಕ್ರೀಡಾಕೂಟ ಉದ್ದೇಶಿಸಿ ಮಾತನಾಡಿದ ನಿಧಿಯ ಅಧ್ಯಕ್ಷೆ ಗೀತಾ ಗಿರೀಶ್, ಕ್ರೀಡಾಕೂಟ ಆಯೋಜನೆ ಮೂಲಕ ಸಮಾಜದವರು ಒಂದು ವೇದಿಕೆಯಡಿಯಲ್ಲಿ ಸೇರುವುದರಿಂದ ಸಮಾಜದ ಸಂಘಟನೆಗೆ ಸಹಕಾರಿಯಾಗುತ್ತದೆ. ಕಳೆದ ಬಾರಿ ಕ್ರೀಡಾಕೂಟದ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದು, ಉತ್ತಮ ಪ್ರತಿಕ್ರಿಯೆ ದೊರಕಿತ್ತು. ಈ ಬಾರಿ ಹೊಸ ಪ್ರಯೋಗ ಮೂಲಕ ಬ್ಯಾಡ್ಮಿಂಟನ್ ಹಾಗೂ ಟಿ.ಟಿ ಪಂದ್ಯಾವಳಿ ಆಯೋಜನೆಗೊಂಡಿದ್ದು, ಇದಕ್ಕೂ ಉತ್ತಮ ಪ್ರತಿಕ್ರಿಯೆ ದೊರಕಿದೆ. ಮುಂದಿನ ಬಾರಿ ಇನ್ನೂ ಹೆಚ್ಚಿನ ಕ್ರೀಡೆಗಳನ್ನು ಕ್ರೀಡಾಕೂಟದ ಅಂಗವಾಗಿ ಆಯೋಜನೆಗೊಳಿಸುವ ಚಿಂತನೆ ಇದೆ ಎಂದರು. ದಿನನಿತ್ಯದ ಒತ್ತಡದ ಜೀವನದಿಂದ ಹೊರಬರಲು ಕ್ರೀಡೆ ಸಹಕಾರಿಯಾಗಿದ್ದು, ಕ್ರೀಡಾಕೂಟದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಈ…

Read More