ಲೇಖಕ: admin

ಮಡಿಕೇರಿ ಫೆ.5 NEWS DESK : ಕಂದಾಯ ಕಚೇರಿಗಳಲ್ಲಿ ಅರ್ಜಿಗಳ ವಿಲೇವಾರಿ ಮತ್ತು ಪ್ರಕರಣಗಳನ್ನು ಇತ್ಯರ್ಥ ಪಡಿಸುವ ಕಾರ್ಯ ವಿಳಂಬವಾಗುತ್ತಿದ್ದು, ಸಮಸ್ಯೆ ಜಟಿಲವಾಗುತ್ತಿದೆ. ಜನಸಾಮಾನ್ಯರು ಕಂದಾಯ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿಯನ್ನು ತಪ್ಪಿಸಲು ಅಧಿಕಾರಿಗಳು ಅಗತ್ಯ ಸಹಕಾರ ನೀಡಿ ಜನಪರವಾಗಿ ಕಾರ್ಯನಿರ್ವಹಿಸಬೇಕು. ಕರ್ನಾಟಕ ರಾಜ್ಯ ಸರ್ಕಾರ ಇಂದಿನಿಂದ ಎಲ್ಲಾ ಸರ್ವೇ, ತಾಲ್ಲೂಕು ಕಚೇರಿ ಮತ್ತು ಸಬ್ ರಿಜಿಸ್ಟಾçರ್ ಕಚೇರಿಗಳ ದಾಖಲೆಗಳನ್ನು ಡಿಜಿಟಲೀಕರಣಕ್ಕೆ ಒಳಪಡಿಸಿದೆ ಎಂದು ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ಮಡಿಕೇರಿಯ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖಾ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಂದಾಯ ಇಲಾಖೆಯಲ್ಲಿ ಅಗತ್ಯ ಕೆಲಸ ಕಾರ್ಯಗಳು ನಿಗದಿತ ವೇಳೆಯಲ್ಲಿ ನಡೆಯದೆ ಉಂಟಾಗುತ್ತಿರುವ ಸಮಸ್ಯೆಗಳ ಬಗೆಹರಿಕೆಗೆ ರಾಜ್ಯ ಸರ್ಕಾರ ಕಳೆದ ಎಂಟು ತಿಂಗಳ ಅವಧಿಯಲ್ಲಿ ಸಾಕಷ್ಟು ಪ್ರಯತ್ನಗಳನ್ನು ಮಾಡಿದೆ. ಇದರ ಪರಿಣಾಮ ಅರ್ಜಿಗಳ ವಿಲೇವಾರಿ ಮತ್ತು ಪ್ರಕರಣಗಳ ಇತ್ಯರ್ಥ ಪ್ರಸ್ತುತ ಚುರುಕುಗೊಂಡಿದೆ ಎಂದರು. ಜನರ ಕೆಲಸ ಕಾರ್ಯಗಳನ್ನು ಮಾಡಿಕೊಡುವ ಮನಸ್ಥಿತಿಯನ್ನು…

Read More

ಕುಂದಾಪುರ, ಇದು ಜಿಲ್ಲಾ ಕೇಂದ್ರವಾದ ಉಡುಪಿಯಿಂದ 36 ಕಿಲೋ ಮೀಟರ್ ದೂರದಲ್ಲಿ ಇರುವ ತಾಲ್ಲೂಕು ಪಟ್ಟಣವಾಗಿದೆ. ಪಶ್ಚಿಮ ದಿಕ್ಕಿನಲ್ಲಿರುವ ಸಮುದ್ರ ತೀರವು ಕುಂದಾಪುರ ತಾಲ್ಲೂಕಿನ ಪ್ರಮುಖ ಆಕರ್ಷಣೆಗಳಲ್ಲೊಂದು. ಈ ತಾಲ್ಲೂಕಿನ ಗಂಗೊಳ್ಳಿಯಲ್ಲಿರುವ ಸೇತುವೆಯು ಉಡುಪಿ ಜಿಲ್ಲೆಯಲ್ಲೇಅತೀ ದೊಡ್ಡದು ಎಂಬ ಖ್ಯಾತಿ ಪಡೆದಿದೆ. ಬಡಗುತಿಟ್ಟು ಯಕ್ಷಗಾನ ಕಲೆಯನ್ನು ಬೆಳೆಸುವಲ್ಲಿ ಕುಂದಾಪುರದ ಪಾತ್ರ ಬಹಳ ಪ್ರಮುಖ. ಕುಂದಾಪುರದ ಮತ್ತೊಂದು ವಿಶೇಷವೆಂದರೆ, ಇದೊಂದು ಪರ್ಯಾಯ ದ್ವೀಪದ ರೂಪದಲ್ಲಿ- ಉತ್ತರ, ಪಶ್ಚಿಮ ಮತ್ತು ಪೂರ್ವ ದಿಕ್ಕಿನಲ್ಲಿ ನೀರಿದೆ- (ಸಮುದ್ರ, ಗಂಗೊಳ್ಳಿ ಹೊಳೆ ಮತ್ತು ಹಾಲಾಡಿ ಹೊಳೆ ಹಾಗೂ ಕೋಣಿ ಹಿನ್ನೀರು ಪ್ರದೇಶ) ಮತ್ತು ದಕ್ಷಿಣದಲ್ಲಿ ಮಾತ್ರ ನೆಲವಿರುವ ಪ್ರದೇಶವಾಗಿರುತ್ತದೆ. ಇಂತಹ ಒಂದು ವೈಚಿತ್ರ್ಯದ ಪ್ರಚಾರವಾಗಿಲ್ಲ ಮತ್ತು ಈ ನೀರಿನ ಇರವನ್ನು ಪ್ರವಾಸೋದ್ಯಮಕ್ಕೂ ಬಳಸುವ ಪ್ರಯತ್ನ ಹೆಚ್ಚಾಗಿ ನಡೆದಿಲ್ಲ. ಕುಂದಾಪುರ ಸಂತೆಯು ಸುತ್ತಲಿನ ನೂರಾರು ಹಳ್ಳಿಗಳ ವ್ಯಾಪಾರಕ್ಕೆ ಮತ್ತು ‘ಕೃಷಿ ಉತ್ಪನ್ನ ಮಾರಲು’ ಅನುಕೂಲ ಮಾಡಿಕೊಡುತ್ತಿದೆ. ಪ್ರೇಕ್ಷಣೀಯ ಸ್ಥಳಗಳು ::  ಬೈಂದೂರು ಕುಂದಾಪುರದಿಂದ ಸುಮಾರು 32 ಕಿ. ಮೀ…

Read More

ಮಡಿಕೇರಿ ಫೆ.5 NEWS DESK : ದಕ್ಷಿಣ ಭಾರತದ ರಾಜ್ಯಗಳಿಗೆ ಬಜೆಟ್ ನಲ್ಲಿ ಅಗತ್ಯ ಅನುದಾನ ಮೀಸಲಿಡದೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ, ರಾಜ್ಯಗಳ ಶಕ್ತಿಯನ್ನು ಕುಂದಿಸುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ, ರಾಜ್ಯಗಳ ಶಕ್ತಿ ಕುಂದಿದರೆ ರಾಷ್ಟ್ರದ ಶಕ್ತಿ ಕುಂದುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರದ ಶಕ್ತಿ ವೃದ್ಧಿಗೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಅಗತ್ಯ ನೆರವು ನೀಡುವ ಅಗತ್ಯವಿದೆ ಎಂದರು. ಕರ್ನಾಟಕ ರಾಜ್ಯ ಆದಾಯ ಗಳಿಕೆಯಲ್ಲಿ ಮೊದಲ ಸ್ಥಾನದಲ್ಲಿದೆ, ತೆರಿಗೆ ಪಾವತಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಆದರೂ ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಸೇರಬೇಕಾದ ಆರ್ಥಿಕ ಪಾಲನ್ನು ನೀಡುತ್ತಿಲ್ಲವೆಂದು ಆರೋಪಿಸಿದರು. 2017 ರ ಬಜೆಟ್ ನಲ್ಲಿ 52 ಸಾವಿರ ಕೋಟಿ ರೂ.ಗಳನ್ನು ರಾಜ್ಯಕ್ಕೆ ನೀಡಿದ್ದ ಕೇಂದ್ರ ಸರ್ಕಾರ ಈ ಬಾರಿಯೂ ಅಷ್ಟೇ ಮೊತ್ತವನ್ನು ನೀಡಿದೆ. ಆದರೆ ಬಜೆಟ್ ನ ಗಾತ್ರ ಎರಡು ಪಟ್ಟು ಹೆಚ್ಚಾಗಿದೆ, ಗಾತ್ರ ಹೆಚ್ಚಾದಂತೆ ನಮ್ಮ…

Read More

ಮಡಿಕೇರಿ ಜ.5 NEWS DESK : ಗೋಣಿಕೊಪ್ಪ ನಾಟ್ಯ ಮಯೂರಿ ನೃತ್ಯ ಸಂಸ್ಥೆಯಿಂದ ಕೊಡಗಿನ ಸಮಾಜ ಸೇವಕ ಕರವೇ ಪ್ರಾನ್ಸಿಸ್ ಡಿಸೋಜ ಅವರಿಗೆ ಸುವರ್ಣ ಸಂಭ್ರಮ ಕನ್ನಡಿಗ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ವಿದುಷಿ ಪ್ರೇಮಾಂಜಲಿ ಹಾಗೂ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.  

Read More

ಬೆಂಗಳೂರು ಫೆ.5 NEWS DESK : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್ ಟಿಸಿ) ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ “100 ಹೊಸ ವಿನ್ಯಾಸದ ಕರ್ನಾಟಕ ಸಾರಿಗೆ ಬಸ್ಸು( ಅಶ್ವಮೇಧ – ಪಾಯಿಂಟ್ ಟು ಪಾಯಿಂಟ್ ಎಕ್ಸ್‌ಪ್ರೆಸ್)ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಬಣ್ಣ ಬಣ್ಣದ ಬಗೆ ಬಗೆಯ ಹೂವುಗಳಿಂದ ಸಿಂಗಾರಗೊಂಡಿರುವ ಅಶ್ವಮೇಧ – ಪಾಯಿಂಟ್ ಟು ಪಾಯಿಂಟ್ ಎಕ್ಸ್‌ಪ್ರೆಸ್ ಬಸ್​ಗಳಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಧಾನಸೌಧದ ಮುಂಭಾಗ ಚಾಲನೆ ನೀಡಿದರು. ಈ ವೇಳೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಹ ಹಾಜರಿದ್ದರು.

Read More

ಮಡಿಕೇರಿ ಫೆ.5 NEWS DESK : ಗೋಣಿಕೊಪ್ಪಲಿನ ಎಂ.ಎಂ.ಲೇಔಟ್ ನಲ್ಲಿ ನಿರ್ಮಾಣವಾಗುತ್ತಿರುವ ಲಯನ್ಸ್ ಕ್ಲಬ್ ನ ನೂತನ ಕಟ್ಟಡ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು.

Read More

ಮಡಿಕೇರಿ ಫೆ.5 NEWS DESK : ಕಂದಾಯ ಇಲಾಖೆಗೆ ಅರ್ಜಿದಾರರು ವಿನಾಕಾರಣ ಅಲೆಯುವುದನ್ನು ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದ್ದಾರೆ. ಮಡಿಕೇರಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳು ಕಂದಾಯ ಇಲಾಖೆಯ ಕೆಲಸ ಕಾರ್ಯಗಳಿಗೆ ವೇಗ ನೀಡಬೇಕು ಮತ್ತು ಜನಪರವಾಗಿ ಕಾರ್ಯನಿರ್ವಹಿಸಬೇಕು. ಜನರು ತಮ್ಮ ಕೆಲಸ ಬಿಟ್ಟು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಇದೆ, ಇದು ನಿಲ್ಲಬೇಕು, ಸಮಯ ವ್ಯರ್ಥ ಆಗಬಾರದು. ಈ ಉದ್ದೇಶದಿಂದ ಕಂದಾಯ ಇಲಾಖೆಯಲ್ಲಿರುವ ಬಹಳ ವರ್ಷಗಳ ಸಮಸ್ಯೆಯನ್ನು ಅರ್ಥ ಮಾಡಿಕೊಂಡು ಪರಿಹಾರವನ್ನು ನೀಡುವ ನಿಟ್ಟಿನಲ್ಲಿ ಕಂದಾಯ ಇಲಾಖೆಯ ಕಾರ್ಯಗಳು ಚುರುಕಾಗುವಂತೆ ನೋಡಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆ ನಡೆಸಿ ಜನಪರವಾಗಿ ಕಾರ್ಯನಿರ್ವಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ತಹಶೀಲ್ದಾರ್ ನ್ಯಾಯಾಲಯದ ಪ್ರಕರಣಗಳು 3 ತಿಂಗಳಲ್ಲಿ ಪೂರ್ಣಗೊಳ್ಳಬೇಕು, ಆದರೆ ವರ್ಷಾನುಗಟ್ಟಲೆಯಿಂದ ಬಾಕಿ ಉಳಿದಿರುವ ಪ್ರಕರಣಗಳಿವೆ. ನಮ್ಮ ಸರಕಾರ ಬಂದ ಮೇಲೆ ಇದನ್ನು ಗಂಭೀರವಾಗಿ ಪರಿಗಣಿಸಿ, ಮೂರು ತಿಂಗಳೊಳಗೆ ವಿಲೇವಾರಿಯಾಗುವಂತೆ…

Read More

ಮಡಿಕೇರಿ ಫೆ.5 NEWS DESK : ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಇಂದು ಅಧಿಕಾರಿಗಳ ಸಭೆ ನಡೆಸಲು ಮಡಿಕೇರಿಗೆ ಭೇಟಿ ನೀಡಿದರು. ಜಿ.ಪಂ ಸಭಾಂಗಣಕ್ಕೆ ಆಗಮಿಸಿದ ಸಚಿವರನ್ನು ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಹಾಗೂ ಜಿಲ್ಲಾಧಿಕಾರಿ ವೆಂಕಟರಾಜ ಅವರು ಹೂಗುಚ್ಛ ನೀಡಿ ಬರ ಮಾಡಿಕೊಂಡರು. ಈ ಸಂದರ್ಭ ಕೊಡಗಿನ ಶಾಸಕರುಗಳಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಉಪಸ್ಥಿತರಿದ್ದರು.

Read More

ನಾಪೋಕ್ಲು ಫೆ.5 : ತುಳುನಾಡಿನ ಯಕ್ಷಗಾನ ಕಲೆಯನ್ನು ನಾಡಿನಾದ್ಯಂತ ಪ್ರಚುರಪಡಿಸುವ ಸದುದ್ದೇಶದಿಂದ ಮೂರ್ನಾಡಿನ “ಆಪ್ತಮಿತ್ರ ಬಳಗದ” ವ್ಯಾಟ್ಪ್ ಗ್ರೂಪ್ ವತಿಂಯಿದ ಮೂರ್ನಾಡಿನ ಪಾಂಡಾಣೆ ಮೈದಾನದಲ್ಲಿ ನಡೆಸಿದ ಉಚಿತ ಯಕ್ಷಗಾನ ಬಯಲಾಟ ಯಕ್ಷೋತ್ಸವ ಗಮನ ಸೆಳೆಯಿತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ `ಗಜಮೇಳ” ಎಂದೇ ಪ್ರಖ್ಯಾತಿ ಪಡೆದ ಹನುಮಗಿರಿಯ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಖ್ಯಾತ ಕಲಾವಿದರು `ಇಂದ್ರಪ್ರಸ’ ಎಂಬ ಯಕ್ಷ ಪ್ರಸಂಗವನ್ನು ನಡೆಸಿಕೊಟ್ಟರು. ನಾಪೋಕ್ಲು, ಮೂರ್ನಾಡು ಸೇರಿದಂತೆ ವಿವಿಧ ಭಾಗಗಗಳಿಂದ ಬಂದಿದ್ದ ಸಾವಿರಾರು ಪ್ರೇಕ್ಷಕರಿಗೆ ಸಂಜೆ ಲಘು ಉಪಾಹಾರ ಮತ್ತು ರಾತ್ರಿ ವೇಳೆ ಊಟದ ವ್ಯವಸ್ಥೆಯನ್ನೂ ಮಾಡಲಾಗಿತ್ತು. ನುರಿತ ಕಲಾವಿದರ ವೇಷ-ಭೂಷಣಗಳು, ಭಾಗವತಿಕೆ, ನೃತ್ಯ, ತಾಳ- ಮೇಳ ಹಾಗೂ ಮಾತುಗಾರಿಕೆಗೆ ಮಾರು ಹೋದ ಜನರು, ಚಪ್ಪಾಳೆ, ವಿಷಲ್ಗಳ ಸರಿಮಳೆಯೊಂದಿಗೆ ಕಲಾವಿದರಿಗೆ ಹಾಗೂ ಮೇಳಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಬಳಗದ ಪರವಾಗಿ ವಿಘ್ನೇಶ್ ಭಟ್ ಎಲ್ಲರನ್ನು ಸ್ವಾಗತಿಸಿ ವಂದಿಸಿದರು. ಆಪ್ತಮಿತ್ರ ಬಳಗ ಎಂಬ ವಾಟ್ಸಪ್ ಗ್ರೂಪ್ ವಿವಿಧ ಸಮಾಜ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಐದು…

Read More