ಲೇಖಕ: admin

ನಾಪೋಕ್ಲು ಫೆ.5 : ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ರೈತರ ತೋಟಗಳಲ್ಲಿ ಕೊಕ್ಕೋ ಪ್ರೂನಿಂಗ್ (ಸವರುವಿಕೆ) ಮತ್ತು ತೋಟದ ನಿರ್ವಹಣೆ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಕಾರ್ಯಾಗಾರದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಡಿ.ಬಿ.ನಾಗೇಶ್ ಕುಂದಲ್ಪಾ ವಹಿಸಿ “ಅಡಿಕೆ ಹಳದಿ ರೋಗದಿಂದ ಸಮಸ್ಯೆಗೊಳಗಾದ ನಾವುಗಳು ಪ್ರಮುಖ ಪರ್ಯಾಯ ಬೆಳೆಯಾದ ಕೊಕ್ಕೋವನ್ನು ಕ್ರಮಬದ್ಧವಾಗಿ ಬೆಳೆಸಿ ಅಧಿಕ ಇಳುವರಿ ಪಡೆಯುವಲ್ಲಿ ಈ ಕಾರ್ಯಕ್ರಮ ಸಹಕಾರಿಯಾಗಲಿದೆ” ಎಂದು ಹೇಳಿದರು. ಕ್ಯಾoಪ್ಕೋ ಸಂಸ್ಥೆಯ ಸಿಬ್ಬಂದಿ ಕೆ.ಚಂದ್ರಶೇಖರ್ ವಿಷಯದ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಪಿ.ಎಂ.ಅಶೋಕ, ಗ್ರಾ.ಪಂ ಅಧ್ಯಕ್ಷರಾದ ಚಂದ್ರಕಲಾ ಬಳ್ಳಡ್ಕ, ಉಪಾಧ್ಯಕ್ಷ ನಂಜಪ್ಪ ನಿಡ್ಯಮಲೆ, ಸಂಘದ ನಿರ್ದೇಶಕರುಗಳಾದ ದೀನರಾಜ ದೊಡ್ಡಡ್ಕ, ಧನಂಜಯ ಕೋಡಿ, ಜಯರಾಮ ನಿಡ್ಯಮಲೆ ಬಿ, ಪಿ.ಟಿ.ಜಯರಾಮ, ಶೇಷಪ್ಪ ನಾಯ್ಕ ನಿಡ್ಯಮಲೆ, ಕಿರಣ ಬಂಗಾರಕೋಡಿ, ಹೊನ್ನಪ್ಪ ಅಮಚೂರು, ಸೀತಾರಾಮ ಕದಿಕಡ್ಕ, ಪುಷ್ಪಾವತಿ ವ್ಯಾಪಾರೆ, ಕೆ.ಎಂ.ಪ್ರದೀಪ, ಪ್ರಮೀಳಾ ಎನ್ ಬಂಗಾರಕೋಡಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಸುಭಾಷ್ಚಂದ್ರ…

Read More

ಮಡಿಕೇರಿ ಫೆ.5 : ಮೂರ್ನಾಡು ವಿದ್ಯಾಸಂಸ್ಥೆಯ ಪದವಿ ಪೂರ್ವ ಕಾಲೇಜಿನಲ್ಲಿ 1998 ರಿಂದ 2000 ಶೈಕ್ಷಣಿಕ ವರ್ಷದಲ್ಲಿ ಕಲಾವಿಭಾಗದಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳು, ವಿದ್ಯಾಸಂಸ್ಥೆಯ ಮೈದಾನದಲ್ಲಿ ನೂತನವಾಗಿ ನಿರ್ಮಿಸಿರುವ ಶೌಚಾಲಯಗಳನ್ನು ಆಡಳಿತ ಮಂಡಳಿಗೆ ಹಸ್ತಾಂತರಿಸುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಾಚೆಟ್ಟಿರ ಶ್ರೀಮಾದಪ್ಪ, ಉಪಾಧ್ಯಕ್ಷರಾದ ಪುದಿಯೋಕ್ಕಡ ಸುಬ್ರಮಣಿ, ಖಜಾಂಚಿ ಬಡುವಂಡ ಶ್ರೀಸುಬ್ರಮಣಿ ಅವರು ಸೇರಿದಂತೆ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ಹಾಗೂ ಹಳೆಯ ವಿದ್ಯಾರ್ಥಿ ಮತ್ತು ಪ್ರಸಕ್ತ ಕಾಂತೂರು-ಮೂರ್ನಾಡು ಗ್ರಾ.ಪಂ ಅಧ್ಯಕ್ಷರಾಗಿರುವ ಕುಶಾಲಪ್ಪ ಸೇರಿದಂತೆ ಹಳೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಹಳೆಯ ವಿದ್ಯಾರ್ಥಿ ಸತೀಶ್ ಮಾತನಾಡಿ ಈ ವಿದ್ಯಾಸಂಸ್ಥೆಯಲ್ಲಿ ಓದಿದ ಹೆಮ್ಮೆ ನಮಗಿದೆ. ಸ್ವಚ್ಚ ಭಾರತ ಕಲ್ಪನೆಯಡಿ ಈಶೌಚಾಲಯ ನಿರ್ಮಿಸಲಾಗಿದೆ. ಭವಿಷ್ಯದ ದಿನಗಳಲ್ಲಿ ಇನ್ನಷ್ಟು ಕೊಡುಗೆಗಳನ್ನು ನೀಡುವ ಶಕ್ತಿ ನಮಗೆ ಲಭ್ಯವಾಗಲಿ ಎಂದು ನುಡಿದರು. ವಿದ್ಯಾಸಂಸ್ಥೆಯ ಅಧ್ಯಕ್ಷರು ಮಾತನಾಡಿ ಹಳೆಯ ವಿದ್ಯಾರ್ಥಿಗಳು ಒಂದು ಸಣ್ಣ ಆರಂಭವನ್ನು ಮಾಡಿದ್ದೀರಿ. ವಿದ್ಯಾಸಂಸ್ಥೆಯ ಮೇಲಿನ ಅಭಿಮಾನ ಮೆಚ್ಚುವಂತದ್ದು. ಮುಂದೆ ಇನ್ನಷ್ಟು ಕೊಡುಗೆಗಳು ಬಂದು ವಿದ್ಯಾಸಂಸ್ಥೆಯ ಸರ್ವತೋಮುಖ…

Read More

ಮಡಿಕೇರಿ ಫೆ.4 NEWS DESK : ನಿಷೇಧಿತ ಮಾದಕ ವಸ್ತು ಹ್ಯಾಶಿಷ್ ಆಯಿಲ್(ಗಾಂಜಾದಿAದ ತೆಗೆಯುವ ಎಣ್ಣೆ) ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳಿಗೆ ಮಡಿಕೇರಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ತಲಾ 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ನಿವಾಸಿಗಳಾದ ಅಹಮದ್ ಕಬೀರ್(37), ಅಬ್ದುಲ್ ಖಾದರ್(37) ಹಾಗೂ ಮೊಹಮ್ಮದ್ ಮುಜಮಿಲ್(37) ಎಂಬುವವರೇ ಶಿಕ್ಷೆಗೆ ಒಳಗಾದವರು. ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2022ರ ಅಕ್ಟೋಬರ್ 29ರಂದು ಭಾಗಮಂಡಲ-ಮಡಿಕೇರಿ ಜಂಕ್ಷನ್‌ನಲ್ಲಿರುವ ಐ.ಬಿ ರಸ್ತೆಯಲ್ಲಿ ಕೆ.ಎಲ್.33-ಎಫ್.6825 ಮಾರುತಿ ಸೆಲೇರಿಯೋ ಕಾರಿನಲ್ಲಿ ಮೂವರು ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡುವ ಸಲುವಾಗಿ ಸಾಗಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಹಿನ್ನೆಲೆ ಭಾಗಮಂಡಲ ಠಾಣಾಧಿಕಾರಿ ಪ್ರಿಯಾಂಕ, ಎಎಸ್‌ಐ ಬೆಳ್ಳಿಯಪ್ಪ ಎಂ.ಸಿ, ಮಹದೇವ ಸ್ವಾಮಿ ಹಾಗೂ ಸಿಬ್ಬಂದಿಗಳು ದಾಳಿ ಮಾಡಿ ಕಾರನ್ನು ಪರಿಶೀಲನೆ ನಡೆಸಿದ ಸಂದರ್ಭ ಕಾರಿನಲ್ಲಿ 1 ಕೆ.ಜಿ. 160 ಗ್ರಾಂ ಹ್ಯಾಶಿಷ್…

Read More

ಮಡಿಕೇರಿ ಫೆ.4 NEWS DESK : ಪ್ರವಾಸಕ್ಕೆಂದು ಬಂದಿದ್ದ ಯುವಕನೊಬ್ಬ ನೀರುಪಾಲಾದ ಘಟನೆ ಚೆಯ್ಯಂಡಾಣೆ ಸಮೀಪದ ಚೇಲಾವರ ಫಾಲ್ಸ್ ನಲ್ಲಿ ಭಾನುವಾರ ನಡೆದಿದೆ. ಮೃತನನ್ನು ಕೇರಳದ ಮಟ್ಟನ್ನೂರು ನಿವಾಸಿ, ಮಹಮ್ಮದ್ ಅಶ್ರಫ್ ಎಂಬುವವರ ಪುತ್ರ ರಾಶೀದ್ (25) ಎಂದು ಗುರುತಿಸಲಾಗಿದೆ. ತನ್ನ ಮೂವರು ಸ್ನೇಹಿತರೊಂದಿಗೆ ಕೊಡಗಿನ ಪ್ರವಾಸಿತಾಣಗಳ ವೀಕ್ಷಣೆಗೆ ಬಂದಿದ್ದ ರಾಶೀದ್, ಚೇಲಾವರ ಜಲಪಾತದಲ್ಲಿ ಸ್ನಾನಕ್ಕೆಂದು ಇಳಿದಾಗ ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವುದಾಗಿ ಹೇಳಲಾಗಿದೆ. ಜಲಪಾತದಿಂದ ಮೃತದೇಹವನ್ನು ಮೇಲೆತ್ತುವಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಯಶಸ್ವಿಯಾಗಿದ್ದು, ನಾಪೋಕ್ಲು ಪೊಲೀಸ್ ಠಾಣೆಯ ಅಪರಾಧ ವಿಭಾಗದ ಠಾಣಾಧಿಕಾರಿ ಶ್ರೀಧರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಗೆ ಸಂಬಂಧಿಸಿದಂತೆ ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಡಿಕೇರಿ ಫೆ.4 NEWS DESK : ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ (ಎಸ್ ಎಸ್ ಎಫ್) ಆಶ್ರಯದಲ್ಲಿ ಇತ್ತೀಚೆಗೆ ನೆಲ್ಲಿಹುದಿಕೇರಿಯಲ್ಲಿ ನಡೆದ ಜಿಲ್ಲಾಮಟ್ಟದ ಸಾಹಿತ್ಯೋತ್ಸವದಲ್ಲಿ ಪಾಲಿಬೆಟ್ಟ ಮುಹಿಮ್ಮಾತುದ್ದೀನ್ ಅರಬಿ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಆದಿಲ್ ಬಿ.ಎ.  ರಸ ಪ್ರಶ್ನೆ ವಿಭಾಗದಲ್ಲಿ ವಿಜೇತನಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಪಾಲಿಬೆಟ್ಟದ ಲೂರ್ಡ್ಸ್ ಶಾಲೆಯ 7ನೇ ತರಗತಿ ವಿದ್ಯಾರ್ಥಿಯಾಗಿರುವ ಆದಿಲ್, ಈ ತಿಂಗಳ ತಾ. 9 ರಿಂದ 11ರವರೆಗೆ ಉತ್ತರ ಕರ್ನಾಟಕದ ಭಟ್ಕಳದಲ್ಲಿ ನಡೆಯಲಿರುವ ರಾಜ್ಯಮಟ್ಟದ ಸಾಹಿತ್ಯೋತ್ಸವ  ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದಾನೆ. ಪ್ರತಿಭಾವಂತವಿದ್ಯಾರ್ಥಿಯಾಗಿರುವ ಆದಿಲ್ ಪಾಲಿಬೆಟ್ಟದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಯು.ಕೆ. ಅಶ್ರಫ್ ಹಾಗೂ ಅತ್ತೂರು ಸರ್ಕಾರಿ  ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸಲೀನಾ ದಂಪತಿಗಳ ಪುತ್ರ.

Read More

ಮಡಿಕೇರಿ ಫೆ.4 NEWS DESK : ಮಾನವ ಕಲ್ಯಾಣಕ್ಕಾಗಿ ಅನೇಕ ಕಾರ್ಯಗಳನ್ನು ಕೈಗೊಳ್ಳುತ್ತಿರುವ, “ಲಜ್ಞಾ ಇಮಾಇಲ್ಲಾ” ಎಂಬ ಹೆಸರಿನಿಂದ ಕರೆಯಲ್ಪಡುವ ಅಹ್ಮದಿಯಾ ಮುಸ್ಲಿಮ್ ಸಂಘಟನೆಯ ಮಹಿಳಾ ವಿಭಾಗದ ವತಿಯಿಂದ ಮಡಿಕೇರಿಯ ಅಬ್ದುಲ್ ಕಲಾಂ ಲೇಔಟ್ ನಲ್ಲಿರುವ ವಿಕಾಸ್ ಜನ ಸೇವಾ ಟ್ರಸ್ಟ್ ಆಶ್ರಮದ ಹಿರಿಯ ನಾಗರಿಕರಿಗೆ ದಂತಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿತ್ತು. “ಲಜ್ನಾ ಇಮಾಇಲ್ಲಾ’ ಅಧ್ಯಕ್ಷರಾದ ರೂಮಾನ್ ರಿಜ್ವಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಶಿಬಿರದ ನೇತೃತ್ವವನ್ನು ಸರಕಾರಿ ಆಸ್ಪತ್ರೆಯ ದಂತ ವ್ಯೆದ್ಯ ಡಾ.ಅಫ್ರೀನ್ ಹಾಗೂ ಡಾ.ಮೆಲ್ವಿನ್ ವಹಿಸಿದ್ದರು. ಸುಮಾರು 35 ಮಂದಿಗೆ ದಂತ ಚಿಕಿತ್ಸೆ ಮಾಡಲಾಯಿತು, ಅಲ್ಲದೆ ದಂತದ ಆರೋಗ್ಯಕ್ಕೆ ಬೇಕಾದ ವಸ್ತುಗಳು ಮತ್ತು ಔಷಧಿಯನ್ನು ವಿತರಿಸಲಾಯಿತು. ಆಶ್ರಮಕ್ಕೆ ಅಗತ್ಯವಾಗಿದ್ದ ಟೇಬಲ್ ಗಳು ಹಾಗೂ ಫ್ಯಾನ್ ಗಳನ್ನು ಇದೇ ಸಂದರ್ಭ ವಿತರಿಸಲಾಯಿತು. ಲಜ್ನಾ ಇಮಾಇಲ್ಲಾಹ್ ವಿಭಾಗದ ಮಹಿಳಾ ಸದಸ್ಯರು, ಅಹ್ಮದಿಯಾ ಮುಸ್ಲಿಮ್ ಜಮಾಅತ್ ನ ಹಲವು ಸದಸ್ಯರು, ಆಶ್ರಮದ ಮುಖ್ಯಸ್ಥ ಮಂಜುನಾಥ್ ಹಾಗೂ ಸಿಬ್ಬಂದಿಗಳು ಶಿಬಿರದ ಯಶಸ್ಸಿಗಾಗಿ ಕೈಜೋಡಿಸಿದರು.

Read More

ಪೊನ್ನಂಪೇಟೆ ಫೆ.4 NEWS DESK : 2023-24ನೇ ಸಾಲಿನ ಮಾಯಾಮುಡಿ ಗ್ರಾಮ ಪಂಚಾಯಿತಿ ಗ್ರಾಮ ಸಭೆ ಅಧ್ಯಕ್ಷ  ಎ.ಎಸ್.ಟಾಟು ಮೊಣ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ಫೆ.19 ರಂದು ನಡೆಯಲಿದೆ. ಪೊನ್ನಂಪೇಟೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರೀತಿ ಚಿಕ್ಕಮಾದಯ್ಯ ಅವರು ನೋಡಲ್ ಅಧಿಕಾರಿಯಾಗಿ ಉಪಸ್ಥಿತರಿರುವರು.  ಮಾಯಮುಡಿಯ ಕಂಗಳತ್ತುನಾಡು ಮಹಿಳಾ ಸಮಾಜದ ಸಭಾಂಗಣದಲ್ಲಿ ಸಭೆ ನಡೆಯಲಿದೆ ಎಂದು  ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಫೆ.3 NEWS DESK : `ಸ್ಪರ್ಶ್ ಕುಷ್ಠರೋಗ ಜಾಗೃತಿ ಆಂದೋಲನಾ ಕಾರ್ಯಕ್ರಮ’ ಅನುಷ್ಠಾನದ ಬಗ್ಗೆ ಸಭೆಯು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಿ.ಧನರಾಜು ಅವರ ಉಪಸ್ಥಿತಿಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಿತ್ತಿಪತ್ರಗಳು, ಕರಪತ್ರಗಳು ಹಾಗೂ ಬ್ಯಾನರ್ ಬಿಡುಗಡೆಗೊಳಿಸಿದರು. ಕರಪತ್ರ ಬಿಡುಗಡೆ ಮಾಡಿದ ನಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಎಂ.ಕೆ ಅವರು ಮಾತನಾಡಿ ಕುಷ್ಠರೋಗದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಸಲುವಾಗಿ ಕಾರ್ಯಕ್ರಮ ನಡೆಸಲಾಯಿತು. ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಕುಷ್ಠರೋಗದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದು ಅಗತ್ಯ ಎಂದು ತಿಳಿಸಿದರು. ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ ಅಧಿಕಾರಿ ಡಾ.ಎನ್.ಆನಂದ್ ಅವರು ಮಾತನಾಡಿ ಜನವರಿ 30 ರಿಂದ ಫೆಬ್ರವರಿ 13 ರವರೆಗೆ ಜಿಲ್ಲಾದ್ಯಂತ “ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ” ಕಾರ್ಯಕ್ರಮ ನಡೆಯಲಿದೆ. ಪ್ರತಿ ಗ್ರಾಮಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಈ ಬಗ್ಗೆ ಅರಿವು ಮೂಡಿಸಲಾಗುತ್ತಿದೆ, ಹಾಗೂ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ…

Read More

ಮಡಿಕೇರಿ ಫೆ.3 NEWS DESK : ಕೊಡಗು ಜಿಲ್ಲೆಯ 5 ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದು ಪ್ರಕಟಿಸಿರುವ ಹಿನ್ನೆಲೆ, ಬೆಳೆ ನಷ್ಟವಾಗಿರುವ ಕೃಷಿಕರಿಗೆ ಫ್ರೂಟ್ಸ್ ಆಪ್ ನಡಿ ನೋಂದಣಿ ಆಗಿರುವ ರೈತರಿಗೆ ಸರ್ಕಾರದ ಬೆಳೆ ನಷ್ಟ ಪರಿಹಾರವನ್ನು ನೇರವಾಗಿ ಪಾವತಿ ಮಾಡಿದ್ದು, ಈ ಸಂಬಂಧ ತೊಂದರೆ ಇದ್ದಲ್ಲಿ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದಿಂದ ಆರಂಭಿಸಲಾಗಿರುವ ಸಹಾಯವಾಣಿ ಕೇಂದ್ರಕ್ಕೆ ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಸಹಾಯವಾಣಿ ಕೇಂದ್ರ ಸಂಖ್ಯೆ 08272-221077, ಮಡಿಕೇರಿ ತಾಲ್ಲೂಕು ಕಚೇರಿ 08272-228396, ಕುಶಾಲನಗರ ತಾಲ್ಲೂಕು ಕಚೇರಿ 08276-200198, ಸೋಮವಾರಪೇಟೆ ತಾಲ್ಲೂಕು ಕಚೇರಿ 08276-282045, ವಿರಾಜಪೇಟೆ ತಾಲ್ಲೂಕು ಕಚೇರಿ 08274-257328 ಹಾಗೂ ಪೊನ್ನಂಪೇಟೆ ತಾಲ್ಲೂಕು ಕಚೇರಿ 08274-249700 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Read More

ಮಡಿಕೇರಿ ಫೆ.3  NEWS DESK :  ಮುಂದಿನ ದಿನಗಳಲ್ಲಿ ನಗರ, ಪಟ್ಟಣ, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಸಮಸ್ಯೆ ಬರದಂತೆ ಅಗತ್ಯ ಮುನ್ನೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅವರು, ಕುಡಿಯುವ ಪೂರೈಕೆ, ಜಾನುವಾರುಗಳಿಗೆ ಮೇವು ಒದಗಿಸುವಲ್ಲಿ ವ್ಯತ್ಯಯ ಉಂಟಾಗಬಾರದು. ತಹಶೀಲ್ದಾರರು ಮತ್ತು ತಾ.ಪಂ.ಇಒ ಜೊತೆ ಒಟ್ಟುಗೂಡಿ ಸಮನ್ವಯತೆ ಸಾಧಿಸಿ ಕುಡಿಯುವ ನೀರು ಪೂರೈಕೆಗೆ ಮುಂದಾಗಬೇಕು. ಜಲಮೂಲ, ತೆರೆದ ಬಾವಿ, ಬೋರ್‍ವೆಲ್ ಹೀಗೆ ಕುಡಿಯುವ ನೀರಿನ ಸಂಪನ್ಮೂಲವನ್ನು ಸರಿಯಾಗಿ ಬಳಸಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು. ಜಾನುವಾರುಗಳಿಗೆ ಮೇವು ಪೂರೈಕೆ ಸಂಬಂಧಿಸಿದಂತೆ ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ ಅವರು ಮಾಹಿತಿ ನೀಡಿದರು. ಹಾಗೆಯೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇಇ ಸುರೇಶ್ ಕುಮಾರ್ ಅವರು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸೋಮಸುಂದರ,…

Read More