ಲೇಖಕ: admin

ಸೋಮವಾರಪೇಟೆ ಫೆ.3 NEWS DESK : ನಿರಂತರ ಕಲಿಕೆಯಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಬಹುದು ಎಂದು ಶಾಸಕ ಡಾ.ಮಂತರ್ ಗೌಡ ಅಭಿಪ್ರಾಯಿಸಿದರು. ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು, ಮಾತನಾಡಿದರು. ಪ್ರತಿಯೊಬ್ಬರಲ್ಲೂ ನಾನಾ ತರಹದ ಪ್ರತಿಭೆಯಿರುತ್ತದೆ. ತಮ್ಮ ಪ್ರತಿಭೆಯನ್ನು ತೋರಿಸಲು ವಿವಿಧ ವಿಭಾಗಗಳಲ್ಲಿ ನಡೆಯುವ ಸ್ಪರ್ಧಾ ಕಾರ್ಯಕ್ರಮಗಳನ್ನು ಉಪಯೋಗಿಸಿಕೊಳ್ಳಬೇಕು. ವಿದ್ಯಾರ್ಥಿಗಳು ತಮ್ಮಲ್ಲೇ ಕೀಳರಿಮೆ ಬೆಳೆಸಿಕೊಂಡರೆ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಲು ಕಷ್ಟವಾಗುತ್ತದೆ ಎಂದು ಕಿವಿಮಾತು ಹೇಳಿದರು. ವಿದ್ಯಾರ್ಥಿ ಜೀವನದಲ್ಲಿ ಧೂಮಪಾನ, ಡ್ರಗ್ಸ್ ಸೇವನೆಯಂತಹ ದುಶ್ಚಟಗಳಿಗೆ ವಿದ್ಯಾರ್ಥಿಗಳು ಬಲಿಯಾಗಬಾರದು. ಪೋಷಕರು ನಿಮ್ಮ ಮೇಲೆ ಕನಸು ಕಟ್ಟಿಕೊಂಡಿರುತ್ತಾರೆ. ಅವರ ಕನಸು ನನಸ್ಸು ಮಾಡುವ ಕರ್ತವ್ಯ ವಿದ್ಯಾರ್ಥಿಗಳದ್ದು ಎಂದು ಹೇಳಿದರು. ಪೋಷಕರು ಮತ್ತು ಶಿಕ್ಷಕರು ಸಮಾನವಾಗಿ ವಿದ್ಯಾರ್ಥಿಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಬುದ್ದಿಹೇಳುವುದರಿಂದ ಎಷ್ಟೋ ಮಕ್ಕಳನ್ನು ಸರಿ ದಾರಿಗೆ ತರಬಹುದು. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಭವನ ನಿರ್ಮಾಣದ ಕಾಮಗಾರಿ ನೆನೆಗುದಿಗೆ ಬಿದ್ದಿದ್ದು, ಮುಂದುವರಿದ ಕಾಮಗಾರಿಗೆ ಅನುದಾನಕ್ಕಾಗಿ…

Read More

ಬೆಂಗಳೂರು ಫೆ.3 NEWS DESK : ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರತಿನಿಧಿ ಶ್ರೀನಿವಾಸಾಚಾರ್ಯ ದಿನೇಶ್ ಕುಮಾರ್ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಮುಖ್ಯ ನ್ಯಾಯಮೂರ್ತಿಗಳಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Read More

ದಾವಣಗೆರೆ ಫೆ.3 NEWS DESK : ಮೌಢ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ದಾವಣಗೆರೆಯಲ್ಲಿ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ಆರ್ಥಿಕ ಶಕ್ತಿ ಹೆಚ್ಚಿಸುವ ಗ್ಯಾರಂಟಿ ಯೋಜನೆಗಳನ್ನು ಪತ್ರಕರ್ತರು ಬಿಟ್ಟಿ ಗ್ಯಾರಂಟಿ ಎಂದು ಕರೆಯಬಾರದು. ಪಕ್ಷಾತೀತವಾಗಿ, ಜಾತ್ಯತೀತವಾಗಿ, ಧರ್ಮಾತೀತವಾಗಿ ಇರುವ ಈ ಯೋಜನೆಯನ್ನು ಬಿಟ್ಟಿ ಗ್ಯಾರಂಟಿ ಎಂದು ಕರೆಯದೆ, ನೀವೇ ಪರಿಶೀಲಿಸಿ ಬರೆಯಿರಿ. ಏನನ್ನಾದರೂ ಪ್ರಕಟಿಸುವ ಮೊದಲು ಪರಿಶೀಲನೆ ನಡೆಸಿ ಎಂದು ಸಲಹೆ ನೀಡಿದರು. ಪಟ್ಟಭದ್ರರನ್ನು ಗುರುತಿಸಿ ಮಟ್ಟ ಹಾಕುವ ನಿಷ್ಠುರತೆಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು. ಗಂಡ-ಹೆಂಡತಿ ಜಗಳವನ್ನು ಇಡೀ ದಿನ ತೋರಿಸುವುದಕ್ಕಿಂತ, ಸಮಾಜದ ಬೆಳೆವಣಿಗೆಗೆ ಅಡ್ಡಿ ಆಗಿರುವ ಪಟ್ಟ ಭದ್ರರನ್ನು ಗುರುತಿಸಿ ಬರೆಯಿರಿ. ಇದರಿಂದ ಸಮಾಜಮುಖಿ ಪತ್ರಕೋದ್ಯಮ ಸಾಧ್ಯ ಎಂದರು. ಹಣವಂತರು, ಅತೀ ಶ್ರೀಮಂತರ ಕೈಯಲ್ಲಿ…

Read More

ಮಡಿಕೇರಿ ಫೆ.3 NEWS DESK :  ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆದ ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳ ಮತ್ತು ಮಾಹಿತಿ ಹಕ್ಕು ಘಟಕದ ಪದಾಧಿಕಾರಿಗಳ ಸಭೆಯಲ್ಲಿ  ಮಂತ್ರಿಯವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಶಾಸಕ  ಎ.ಎಸ್.ಪೊನ್ನಣ್ಣ ಭಾಗವಹಿಸಿದರು.

Read More

ಮಡಿಕೇರಿ ಫೆ.3 NEWS DESK : ಕಂದಾಯ ಸಚಿವ ಕೃಷ್ಣ ಬೈರೇಗೌಡ  ಅವರು ಫೆ.5 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ಬೆಳಿಗ್ಗೆ 11 ಗಂಟೆಗೆ ಜಿ.ಪಂ ಸಭಾಂಗಣದಲ್ಲಿ ಕೊಡಗು ಜಿಲ್ಲೆಯ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದು, ಮಧ್ಯಾಹ್ನ 3 ಗಂಟೆಗೆ ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ರವಿ ಎಂ.ತಿರ್ಲಾಪೂರ ತಿಳಿಸಿದ್ದಾರೆ.

Read More

ಮಡಿಕೇರಿ ಫೆ.3 NEWS DESK : ರಾಜ್ಯದ ಎಲ್ಲೆಡೆ ಮಾದಿಗ ಸಮಾಜವನ್ನು ಸಂಘಟಿಸಿ, ಆರ್ಥಿಕವಾಗಿ, ಸಾಮಾಜಿಕವಾಗಿ ಸದೃಢಗೊಳಿಸಿ, ಸಮಾಜದಲ್ಲಿ ಮುಂಚೂಣಿಗೆ ತರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ “ಮಾದಿಗ ಮುನ್ನಡೆ” ಮಾದಿಗರ ಆತ್ಮಗೌರವ ಸಮಾವೇಶವನ್ನು ಕೈಗೊಳ್ಳಲಾಗಿದ್ದು, ಕೊಡಗಿನಲ್ಲಿ ಫೆ.4 ರಂದು ನಡೆಯಲಿದೆ. ಅಂದು ಬೆಳಿಗ್ಗೆ 11 ಗಂಟೆಗೆ ಮಡಿಕೇರಿಯ ರೋಟರಿ ಹಾಲ್ ಸಭಾಂಗಣದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮಿಜಿ ಹಾಗೂ ಕಗ್ಗುಂಡಿ ಶ್ರೀಗುರು ಹರಳಯ್ಯ ಗುರುಮಠದ ಶ್ರೀ ರುದ್ರಪ್ಪ ಸ್ವಾಮಿಗಳ ದಿವ್ಯ ಸಾನಿಧ್ಯ ವಹಿಸಲಿದ್ದು, ಕೋಟೆ ಎಂ.ಶಿವಣ್ಣ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಜಿ.ಶ್ರೀನಿವಾಸ್ ವಹಿಸಿಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಗದೀಶ್ ಬೆಟ್ಟಹಳ್ಳಿ, ನಾಗೇಂದ್ರ ಹರಕಲವಾಡಿ, ಹೆಚ್.ಕೆ.ಭಾಗ್ಯ, ಬಿ.ಎನ್.ಗಂಗಾಧರಪ್ಪ, ಹೂಡಿ ಮಂಜುನಾಥ್, ಡಾ.ಲಕ್ಷ್ಮೀಕಾಂತ್ ತುಮಕೂರು, ಪಿಳ್ಳಾ ಮುನಿಶಾಮಪ್ಪ, ವಿ.ಕೇಶವ, ಸತ್ಯೇಂದ್ರ ಕುಮಾರ್, ಶ್ರೀನಿವಾಸ್ ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಫೆ.3 NEWS DESK : ಅಪಘಾತ ಸೇರಿದಂತೆ ವಿವಿಧ ಕಾರಣಗಳಿಂದ ‘ಬೆನ್ನು ಹುರಿ’ ಹಾನಿಯಿಂದ ಉಂಟಾಗುವ ವಿಕಲತೆಯಿಂದ ಬಳಲುತ್ತಿರುವರಿಗೆ ತಾವೇ ತಮ್ಮ ಕೆಲಸಗಳನ್ನು ಮಾಡಿಕೊಳ್ಳುವುದಕ್ಕೆ ಪ್ರೇರಣೆಯನ್ನು ನೀಡುವ ನಿಟ್ಟಿನಲ್ಲಿ ಫೆ.7 ರಿಂದ 9 ರವರೆಗೆ ನಗರದ ಅಶ್ವಿನಿ ಆಸ್ಪತ್ರೆಯಲ್ಲಿ ‘ಪುನಶ್ಚೇತನ ಶಿಬಿರ’ವನ್ನು ಆಯೋಜಿಸಲಾಗಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಕ್ಷಿಣ ಕನ್ನಡದ ಬೆಳ್ತಂಗಡಿಯ ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕರು ಹಾಗೂ ಹಾಲಿ ಖಜಾಂಚಿಗಳಾದ ವಿನಾಯಕ ರಾವ್ ಸ್ವತಃ ಬೆನ್ನುಹುರಿಗೆ ಅಪಘಾತದಿಂದ ಉಂಟಾದ ಹಾನಿಯಿಂದ ಪುನಶ್ಚೇತನಗೊಂಡಿರುವ ವಿನಾಯಕ ರಾವ್ ಮಡಿಕೇರಿಯ ವಿಕಾಸ ಜನಸೇವಾ ಟ್ರಸ್ಟ್‌ನ  ಸಹಕಾರದೊಂದಿಗೆ ಶಿಬಿರವನ್ನು ಆಯೋಜಿಸಲಾಗಿದೆ ಎಂದರು. ಸೇವಾಭಾರತಿ ಸಂಸ್ಥೆ 2004 ರಲ್ಲಿ ಆರೋಗ್ಯ, ಮಹಿಳಾ ಸಬಲೀಕರಣ ಮತ್ತು ದಿವ್ಯಾಂಗರ ಕ್ಷೇತ್ರದಲ್ಲಿ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬಂದಿದ್ದರು, 2018 ರ ಬಳಿಕ ಅಪಘಾತದಿಂದ ಬೆನ್ನುಹುರಿಗೆ ಪೆಟ್ಟಾಗಿ ಶಾಶ್ವತ ಅಂಗ ವಿಕಲತೆಯ ಸಂಕಷ್ಟಕ್ಕೆ ಒಳಗಾದವರಿಗೆ ಪುನಶ್ಚೇತನವನನ್ನು ನೀಡುವ ಕೆಲಸವನ್ನು ಮಾಡುತ್ತಾ ಬರುತ್ತಿದೆ. ಸೇವಾಭಾರತಿ ಪ್ರಸ್ತುತ ಏಳು ಜಿಲ್ಲೆಗಳಲ್ಲಿ ತನ್ನ ಸೇವಾ ಕಾರ್ಯವನ್ನು ವಿಸ್ತರಿಸಿದೆ.…

Read More

ಬೆಂಗಳೂರು, ಫೆ.3 NEWS DESK : ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸು ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ಬಗ್ಗೆ ದೂರು ನೀಡಿದರೆ ತನಿಖೆ ಕೈಗೊಂಡು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸು ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ಬಗ್ಗೆ 10 ಜಿಲ್ಲೆಗಳ ಗುತ್ತಿಗೆದಾರರು ಆರೋಪಿಸಿರುವ ಬಗ್ಗೆ ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ಎಲ್ಲರ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುವುದು ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಗಳ ಪಟ್ಟಿ ಆದಷ್ಟು ಶೀಘ್ರದಲ್ಲಿಯೇ ಸಿದ್ಧವಾಗಲಿದೆ ಎಂದರು. ಸಮೀಕ್ಷೆ ನಡೆಯುತ್ತಿದೆ ಎಂದರು. ಪಟ್ಟಿಯನ್ನು ಅಂತಿಮ ಲೋಕಸಭಾ ಚುನಾವಣೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮಗನಿಗೆ ಟಿಕೆಟ್ ಕೊಡಿವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ಕೂಡ ಒಬ್ಬ ಟಿಕೆಟ್ ಆಕಾಂಕ್ಷಿಯಾಗಿ ಕೇಳುತ್ತಾರೆ. ಕಾಂಗ್ರೆಸ್ ನಲ್ಲಿ ಟಿಕೆಟ್ ಕೇಳುವವರೇ ಸಂಖ್ಯೆ ಜಾಸ್ತಿಯಿರುತ್ತದೆ. ಸ್ಥಳೀಯ ನಾಯಕರು, ಬ್ಲಾಕ್ ಸಮಿತಿ ಅಧ್ಯಕ್ಷ ರು, ಶಾಸಕರು, ಸಂಸದರ ಅಭಿಪ್ರಾಯ ಪಡೆದು ಪಟ್ಟಿಯನ್ನು…

Read More

ಮಡಿಕೇರಿ ಫೆ.3 NEWS DESK : ಆಮ್ ಆದ್ಮಿ ಪಾರ್ಟಿಯ ನಡೆ ಹಳ್ಳಿಯ ಕಡೆ ಅಭಿಯಾನದಡಿ ಪಕ್ಷದ ಕೊಡಗು ಜಿಲ್ಲಾ ಘಟಕ ಕುಶಾಲನಗರ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿತು. ಕಲುಷಿತಗೊಳ್ಳುತ್ತಿರುವ ಕಾವೇರಿ ನದಿ, ಅಶುಚಿತ್ವದ ವಾತಾವರಣ, ಕುಡಿಯುವ ನೀರಿನ ಕೊರತೆ ಸೇರಿದಂತೆ ಮೂಲಭೂತ ಸಮಸ್ಯೆಗಳ ವಿರುದ್ಧ ಹೋರಾಟ ರೂಪಿಸುವುದಾಗಿ ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಅವರು ಇದೇ ಸಂದರ್ಭ ಎಚ್ಚರಿಕೆ ನೀಡಿದ್ದಾರೆ. ಕುಶಾಲನಗರ ತಾಲ್ಲೂಕಿನ ವಾಲ್ನೂರು, ತ್ಯಾಗತ್ತೂರು, ನಂಜರಾಯಪಟ್ಟಣ, ಗುಡ್ಡೆಹೊಸೂರು, ಶಿರಾಂಗಾಲ, ಹೆಬ್ಬಾಲೆ, ತೊರೆನೂರು, ಕೂಡ ಮಂಗಳೂರು, ಕೂಡಿಗೆ, ಸುಂಟಿಕೊಪ್ಪ, ಕೆದಕಲ್ಲು, ನೆಲ್ಲಿಹುದಿಕೇರಿ, ಕೊಡಗರಹಳ್ಳಿ ಮತ್ತು ಚೆಟ್ಟಳ್ಳಿ ಗ್ರಾಮಗಳಿಗೆ ಆಪ್ ನಿಯೋಗ ಭೇಟಿ ನೀಡಿ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಪಡೆಯಿತು. ಸರ್ಕಾರಿ ಶಾಲೆ ಹಾಗೂ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಕಟ್ಟಡದ ಸ್ಥಿತಿಗತಿ, ವಿದ್ಯಾರ್ಥಿಗಳ ಸಂಖ್ಯೆ, ಶಿಕ್ಷಕರ ಕೊರತೆ, ಶೌಚಾಲಯ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳ ಕುರಿತು ಸ್ಥಳೀಯರೊಂದಿಗೆ ಚರ್ಚಿಸಿತು. ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಯುಜಿಡಿ ಕಾಮಗಾರಿ…

Read More

ಮಡಿಕೇರಿ ಫೆ.3 NEWS DESK : ಕೊಡಗು ಗೌಡ ನಿವೃತ್ತ ನೌಕರರ ಸಂಘದ ವತಿಯಿಂದ ಅರೆಭಾಷಿಕ ಗೌಡ ಜನಾಂಗ ಬಾಂಧವರ ವಧು-ವರರ ಸಮಾವೇಶ ಫೆ.11 ರಂದು ನಡೆಯಲಿದೆ. ಅಂದು ಬೆಳಗ್ಗೆ 9.30 ಗಂಟೆಗೆ ಮಡಿಕೇರಿಯ ಕೊಡಗು ಗೌಡ ವಿದ್ಯಾ ಸಂಘದ ಸಭಾಂಗಣದಲ್ಲಿ ಸಮಾವೇಶ ನಡೆಯಲಿದ್ದು, ಆಸಕ್ತರು ತಮ್ಮ ಭಾವಚಿತ್ರ ಮತ್ತು ಇತರ ಎಲ್ಲಾ ಮಾಹಿತಿಗಳೊಂದಿಗೆ ಖುದ್ದಾಗಿ ಭಾಗವಹಿಸಬೇಕು. ಬರುವಾಗ ಅಪೇಕ್ಷಿತ ವಧು, ವರರನ್ನು ಕರೆದುಕೊಂಡು ಬರಬೇಕೆಂದು ಸಂಘದ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊ.ಸಂ 9379213818, 9739495381, 9449476171, 9449086589 ನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

Read More