ಮಡಿಕೇರಿ ಫೆ.2 : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಫೆ.9 ರಂದು ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮತ್ತು ಫೆ.14 ರಂದು ಸೋಮವಾರಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಫೆ.2 : 10 ವರ್ಷಗಳಲ್ಲಿ ಕಾರ್ಯಗತ ಮಾಡಿರುವ ಪ್ರಮುಖ ಯೋಜನೆಗಳ “ರಿಪೋರ್ಟ್ ಕಾರ್ಡ್” ಅನ್ನು ಸಂಸದ ಪ್ರತಾಪ್ ಸಿಂಹ ಅವರು ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಮಲ್ಲೇಶ್ವರಂ ಕ್ಷೇತ್ರದ ಶಾಸಕರು ಹಾಗೂ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಪ್ರಭಾರಿ ಡಾ.ಅಶ್ವತ್ಥ್ ನಾರಾಯಣ್ ಅವರಿಗೆ ಹಸ್ತಾಂತರಿಸಿದರು.
ಮಡಿಕೇರಿ ಫೆ.2 NEWS DESK : ಸಂವಿಧಾನ ದಿನಾಚರಣೆಯ ಪ್ರಯುಕ್ತ ಹೊಸ್ಕೇರಿ ಗ್ರಾ.ಪಂ ವತಿಯಿಂದ ಸಂವಿಧಾನ ಜಾಗೃತಿ ರಥಕ್ಕೆ ಭವ್ಯ ಸ್ವಾಗತ ನೀಡಲಾಯಿತು. ಗ್ರಾಮದ ಯುವಕರು ಉಮೇಶ್ ಹಾಗೂ ಹರೀಶ್ ಮುಂದಾಳತ್ವದಲ್ಲಿ ಬೈಕ್ ಜಾಥಾ ಹಾಗೂ ಸಂಜೀವಿನಿ ಒಕ್ಕೂಟದದಿಂದ ಕಳಶದೊಂದಿಗೆ ಸಾರ್ವಜನಿಕರು, ವಿದ್ಯಾರ್ಥಿಗಳು ಭವ್ಯ ಸ್ವಾಗತ ನೀಡಿದರು. ನಂತರ ಭಾರತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಸಂವಿಧಾನ ಮಹತ್ವ ಕುರಿತು ಸಂಪನ್ಮೂಲ ವ್ಯಕ್ತಿ ಕೃಷ್ಣ ಮಾತನಾಡಿದರು. ಗ್ರಾ.ಪಂ ಅಧ್ಯಕ್ಷ ಬಡುವಂಡ್ರ ಕವಿತಾ ಮಾತನಾಡಿ ಸಂವಿಧಾನ ಜಾಥಾ ಮಹತ್ವದ ಕುರಿತು ಮಾಹಿತಿ ನೀಡಿದರು. ಸದಸ್ಯರಾದ ಜನಾರ್ಧನ, ಪಾರ್ವತಿ , ಅರೇಕಾಡು ಸಹಿಪ್ರ ಶಾಲೆ ಎಸ್. ಡಿ.ಎಂ. ಸಿ ಅಧ್ಯಕ್ಷ ಸಾಜಿದ, ಶಿಕ್ಷಕರಾದ ಮೀನಾಕ್ಷಿ, ಸುಷ್ಮಾ, ಅಶ್ರಫ್, ಕಾಲೇಜು ಪ್ರಾಂಶುಪಾಲ ಸುರೇಶ್ ನಾಯ್ಕ್ , ಮುಖೋಪಾಧ್ಯಾಯ ರವಿಕೃಷ್ಣಾ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಬಾಲಕೃಷ್ಣ ರೈ, ಪಿಡಿಒ ಅಬ್ದುಲ್ಲ, ಕಾರ್ಯದರ್ಶಿ ತೇಜಸ್ ಕುಮಾರ್, ಸಂಜೀವಿನಿ ಒಕ್ಕೂಟದ ಅಧ್ಯಕ್ಷ ಪವಿತ್ರ ಅಂಗನವಾಡಿ…
ಮಡಿಕೇರಿ ಫೆ.2 NEWS DESK : ಕೂರ್ಗ್ ಗಾಲ್ಫ್ ಲಿಂಕ್ಸ್ ವತಿಯಿಂದ ಐ.ಜಿ.ಯು-ಜಿ.ಜಿ.ಎಲ್ ದಕ್ಷಿಣ ವಲಯದ ಬಾಲಕರ ವಿಭಾಗದ ಗಾಲ್ಫ್ ಚಾಂಪಿಯನ್ಶಿಪ್ ನಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ಅಲ್ಹಾನ್ ಸ್ಪರ್ಧಿಸಿ ರನ್ನರ್ ಅಪ್ ಆಗಿ ಪದಕ ಹಾಗೂ ಪ್ರಶಸ್ತಿ ಪತ್ರವನ್ನು ಪಡೆದಿರುತ್ತಾರೆ. ಈ ವಿದ್ಯಾರ್ಥಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಸುದೇಶ್ ಬಿ .ಎಸ್, ಕಾರ್ಯದರ್ಶಿ ವಿನೋದ್ ಪಿ.ಎನ್, ಬೋಧಕ -ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿರುತ್ತಾರೆ. ಈ ಸಂದರ್ಭದಲ್ಲಿ ಪೂರ್ವ ಪ್ರಾಥಮಿಕ ಸಂಯೋಜಿಕಿ ಶ್ರೀಮತಿ ಅಮೃತ ಹಾಗೂ ದೈಹಿಕ ಶಿಕ್ಷಕಿ ಲಾವಣ್ಯ ಹಾಜರಿದ್ದರು.
ನಾಪೋಕ್ಲು ಫೆ.2 NEWS DESK : ಕೊಡಗು ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಹಿನ್ನೆಲೆಯಲ್ಲಿ ಹಾಕತ್ತೂರು ಗ್ರಾ.ಪಂ ವ್ಯಾಪ್ತಿಯ ಹಾಕತ್ತೂರು ಕುವೆಂಪು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಯಿತು. ಕಾರ್ಯಕ್ರಮದಲ್ಲಿ ಹಾಕತ್ತೂರು ಗ್ರಾ.ಪಂ ಅಧ್ಯಕ್ಷ ಬಿ.ಆರ್.ಯತೀಶ್, ಉಪಾಧ್ಯಕ್ಷ ಹೆಚ್.ಆರ್ ವಿಜಯಲಕ್ಷ್ಮಿ ಹಾಗೂ ಸರ್ವ ಸದಸ್ಯರು, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗೀತಾಂಜಲಿ ಹಾಗೂ ಸಿಬ್ಬಂದಿಗಳು, ಹಾಕತ್ತೂರು ಶಾಲೆಯ ಮುಖ್ಯ ಶಿಕ್ಷಕಿ ಭವಾನಿ, ಶಿಕ್ಷಕಿಯರಾದ ಚಂದ್ರಿಕಾ, ಜಯಶ್ರೀ ಶಾಲಾ ವಿದ್ಯಾರ್ಥಿಗಳು, ಸ್ವಸಹಾಯ ಸಂಘದ ಪದಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಾಲಕೃಷ್ಣ ರೈ, ಅಧಿಕಾರಿಗಳು ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಂಪಾಜೆ ಹೋಬಳಿಯ ನೋಡಲ್ ಅಧಿಕಾರಿ ಎನ್.ಪಿ.ಹೇಮ ಕುಮಾರ್ ಹಾಜರಿದ್ದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಗಣ್ಯರು ದಿನದ ಮಹತ್ವದ ಬಗ್ಗೆ ಮಾತನಾಡಿದರು. ಮಕ್ಕಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ವಿವಿಧ ವಿಭಾಗಗಳಲ್ಲಿ ನಡೆದ ಸ್ಪರ್ಧಾ…
ಮಡಿಕೇರಿ ಫೆ.2 NEWS DESK : ಕೂರ್ಗ್ ರಿಕ್ರಿಯೇಷನ್ ವತಿಯಿಂದ ಕೊಡಗಿನ ಹೋಂಸ್ಟೇ, ಹೊಟೇಲ್ ಮತ್ತು ರೆಸಾರ್ಟ್‍ಗಳ ಮಾಲೀಕರು ಹಾಗೂ ಸಿಬ್ಬಂದಿಗಳಿಗಾಗಿ “ಕೂರ್ಗ್ ಕ್ರಿಕೆಟ್ ಕ್ಲ್ಯಾಶ್-2024” ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ರಿಕ್ರಿಯೇಷನ್ ನ ಪ್ರಮುಖ ಕೆ.ಜಿ.ಮದನ್ ತಿಳಿಸಿದ್ದಾರೆ. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಫೆ.7, 8 ಮತ್ತು 9 ರಂದು ಬೌಂಡರಿ ಬ್ಯಾಟಲ್ ಬಾಕ್ಸ್ ಕ್ರಿಕೆಟ್ ಹಾಗೂ ಸ್ಮ್ಯಾಶ್ ಬ್ಯಾಷ್ ಎಂಬ ಎರಡು ವಿಭಾಗಗಳಲ್ಲಿ ಪಂದ್ಯಾವಳಿ ನಡೆಯಲಿದೆ. ಬೌಂಡರಿ ಬ್ಯಾಟಲ್ ಬಾಕ್ಸ್ ಕ್ರಿಕೆಟ್ ಪಂದ್ಯಾವಳಿ ಕೊಡಗಿನಲ್ಲಿ ಇದೇ ಪ್ರಥಮ ಬಾರಿಗೆ ನಡೆಸಲಾಗುತ್ತಿದ್ದು, ರೂ.800 ಪ್ರವೇಶ ಶುಲ್ಕ ಹಾಗೂ ಲೈಫ್ ಲೈನ್ ರೂ.1,600 ನಿಗಧಿ ಪಡಿಸಲಾಗಿದೆ. ವಿಜೇತ ತಂಡಕ್ಕೆ ರೂ.30 ಸಾವಿರ ಆಕರ್ಷಕ ನಗದು ಬಹುಮಾನ ನೀಡಲಾಗುವುದು. ಸ್ಮ್ಯಾಶ್ ಬ್ಯಾಷ್ ಟೆನ್ನಿಸ್ ಬಾಲ್ ಪಂದ್ಯಾವಳಿಗೆ ಪ್ರವೇಶ ಶೂಲ್ಕ ರೂ.2,500 ನಿಗಧಿಪಡಿಸಲಾಗಿದೆ. ವಿಜೇತ ತಂಡಕ್ಕೆ ರೂ.50 ಸಾವಿರ ಆಕರ್ಷಕ ನಗದು ಬಹುಮಾನ ನೀಡಲಾಗುವುದು. ಪಂದ್ಯಾವಳಿಯಲ್ಲಿ ಹೋಂಸ್ಟೇ, ಹೊಟೇಲ್ ಮತ್ತು ರೆಸಾರ್ಟ್‍ಗಳ ಪುರುಷ…
ಸುಂಟಿಕೊಪ್ಪ ಫೆ.2 NEWS DESK : ಸಂವಿಧಾನ ಜಾಗೃತಿ ಜಾತಾ ರಥಕ್ಕೆ ಸುಂಟಿಕೊಪ್ಪ ಗ್ರಾ.ಪಂ ವತಿಯಿಂದ ಭವ್ಯ ಸ್ವಗತ ಕೋರಿದರು. ಪಟ್ಟಣದಲ್ಲಿ ಸುಂಟಿಕೊಪ್ಪದ ಪ್ರಮುಖ ಬೀದಿಗಳಲ್ಲಿ ಗ್ರಾ.ಪಂ.ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ಹಾಗೂ ಅಧಿಕಾರಿಗಳು ಶಾಲಾ ಮಕ್ಕಳು ಘೋಷಣೆಯೊಂದಿಗೆ ಮೆರವಣಿಗೆಯಲ್ಲಿ ಸಾಗಿ ದೇಶದ ಸಂವಿಧಾನದ ಬಗ್ಗೆ ಅರಿವು ಮೂಡಿಸಿದರು. ಪಟ್ಟಣದ ಖಾಸಗಿ ಬಸ್‍ನಿಲ್ದಾಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಸುಂಟಿಕೊಪ್ಪ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಸಿ.ಯು.ಸರಳ, ಭಾರತದ ಸಂವಿಧಾನ ಜಗತ್ತಿನ ಶೇಷ್ಠ ಸಂವಿಧಾನಗಳಲ್ಲಿ ಒಂದಾಗಿದ್ದು, ಇದು ಲಿಖಿತ ಸಂವಿಧಾನವಾಗಿದೆ. ಮೂಲತಃ 395 ವಿಧಿಗಳು 8 ಪರಿಛೇದಿಗಳು ಮತ್ತು 22 ಭಾಗಗಳಲ್ಲಿ ಸಂವಿಧಾನವನ್ನು ಬರೆಯಲಾಗಿದ್ದು, ಕಾಲಕಾಲಕ್ಕೆ ಮಾಡಿದ ತಿದ್ದುಪಡಿಗಳ ಹಿನ್ನಲೆಯಲ್ಲಿ ಸಂವಿಧಾನ ಹೆಚ್ಚು ಪರಿಷ್ಕøತವು ಸ್ಪಷ್ಟತೆಯನ್ನು ಹೊಂದಿದೆ ಎಂದು ಅವರು ಬಣ್ಣಿಸಿದರು. ಸಂವಿಧಾನದಲ್ಲಿ ನಾಗರಿಕರ ಹಕ್ಕುಗಳು ಕರ್ತವ್ಯದ ಬಗ್ಗೆ ಸ್ಪಷ್ಟವಾಗಿ ಹೇಳಲಾಗಿದ್ದು, ನಾವೆಲ್ಲಾರೂ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸಂವಿಧಾನ ಆಶಯಗಳಿಗೆ ಅನುಗುಣವಾಗಿ ನಮ್ಮ ಹಕ್ಕು ಕರ್ತವ್ಯಗಳನ್ನು ನಿರ್ವಹಿಸಬೇಕೆಂದು ಕರೆ ನೀಡಿದರು. ಈ ಸಂದರ್ಭ…
ಮಡಿಕೇರಿ, ಫೆ.2 NEWS DESK : ವಿದ್ಯಾರ್ಥಿಗಳು ಕಥೆ ರಚನೆಯ ಸಂದರ್ಭದಲ್ಲಿ ತಾವು ಪ್ರಸ್ತುತಪಡಿಸುವ ವಿಚಾರದ ಬಗ್ಗೆ ಪೂರ್ಣ ಅರಿವನ್ನು ಹೊಂದಿದ್ದು, ಸರಳಭಾಷೆಯಲ್ಲಿ ಎಲ್ಲರ ಮನಸಿಗೆ ಮುಟ್ಟುವಂತೆ ಕಥೆ ಬರೆದರೆ ಅದು ಉತ್ಕೃಷ್ಟ ಸಾಹಿತ್ಯವಾಗುತ್ತದೆ. ಕಥೆಯ ಸಾರವು ಲೋಕಕ್ಕೆ ಉತ್ತಮ ಸಂದೇಶ ನೀಡುವಂತಿರಬೇಕು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ನುಡಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಮಡಿಕೇರಿಯ ಬ್ಲಾಸಮ್ ಶಾಲೆಯಲ್ಲಿ ನಡೆದ ಗೌರಮ್ಮ ದತ್ತಿ ನಿಧಿ ಕಥಾ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಜೀವನದಲ್ಲಿ ಶೈಕ್ಷಣಿಕ ಓದಿನೊಂದಿಗೆ ಕಥೆ, ಕಾದಂಬರಿ, ಸಾಹಿತ್ಯ ಓದುವುದರ ಮೂಲಕ ತಮ್ಮ ಸಾಮಾನ್ಯ ಜ್ಞಾನವನ್ನು ಬೆಳೆಸಿಕೊಳ್ಳಬೇಕು. ಈ ರೀತಿಯ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದರು. ಬ್ಲಾಸಂ ಶಾಲೆಯ ಮುಖ್ಯೋಪಾಧ್ಯಾಯನಿ ಅನುಸೂಯ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು, ಶಾಲಾ ವಿದ್ಯಾರ್ಥಿಗಳಿಗೆ ಈ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಒಲವು ಮೂಡಿಸುತ್ತಿರುವುದು ಶ್ಲಾಘನೀಯ.…
ಬೆಂಗಳೂರು ಫೆ.2 NEWS DESK : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಶ್ರೀ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡು ಪುಷ್ಪ ನಮನ ಸಲ್ಲಿಸಿದರು.
ಮಡಿಕೇರಿ ಫೆ.1 NEWS DESK : ಕೊಡಗು ಜಿಲ್ಲೆಯಲ್ಲಿನ ಸಂಸ್ಕೃತಿ ಉಳಿಸುವ ದೃಷ್ಟಿಯಿಂದ ಪೂರ್ವಜರು ಉಳಿಸಿ ಪೂಜೆಗೆ ಬಳಸುವ ಕಾಡು ಪ್ರಾಣಿಗಳ ವಸ್ತುಗಳನ್ನು ಇಟ್ಟುಕೊಳ್ಳಲು ಅವಕಾಶ ಕಲ್ಪಿಸುವಂತೆ ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಮನವಿ ಮಾಡಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ಜಿಲ್ಲೆಯ ಜನರು ಪ್ರಮುಖವಾಗಿ ರೈತರು ಮತ್ತು ಬೆಳೆಗಾರರು ಕಾಯಿದೆಯ ಅಸ್ತಿತ್ವಕ್ಕೆ ಮುಂಚೆಯೇ ಕಾಡುಪ್ರಾಣಿಗಳ ವಸ್ತುಗಳನ್ನು ತಮ್ಮಲ್ಲಿ ಸಂರಕ್ಷಿಸಿ ಇಟ್ಟುಕೊಂಡಿದ್ದಾರೆ ಮತ್ತು ಪೀಳಿಗೆಗೆ ರವಾನಿಸಿದ್ದಾರೆ. ಇವುಗಳಲ್ಲಿ ಹೆಚ್ಚಿನವು ಸ್ವಾತಂತ್ರ್ಯ ಪೂರ್ವದಲ್ಲಿ ಸಂಗ್ರಹಿಸಿದವು. ಆಗಿನ ಕಾಲದಲ್ಲಿ ಕಾಡು ಪ್ರಾಣಿಗಳಿಂದ ತಮ್ಮನ್ನು ಸಂರಕ್ಷಿಸಿಕೊಳ್ಳಲು ಬೇಟೆಯಾಡುವ ಅನಿವಾರ್ಯತೆ ಇತ್ತು. ಅಲ್ಲದೆ ಆಗಿನ ಬ್ರಿಟಿಷ್ ಬೆಳಗಾರರಿಗೆ ಬೇಟೆಯಾಡುವುದು ಒಂದು ಹವ್ಯಾಸವಾಗಿತ್ತು. ಹಾಗಾಗಿ ಈ ವನ್ಯಜೀವಿಗಳ ವಸ್ತುಗಳನ್ನು ಪರಂಪರೆಯ ಗುರುತಾಗಿ ಇರಿಸಲಾಗಿದೆ. ಮತ್ತು ಪಿತ್ರಾರ್ಜಿತವಾಗಿ ಪೀಳಿಗೆಗೆ ರವಾನಿಸಲಾಗಿದೆ. ಪ್ರಸ್ತುತ ಪೀಳಿಗೆಯು ಅದರ ಮೇಲೆ ಭಾವನಾತ್ಮಕ ಬಾಂಧವ್ಯವನ್ನು ಹೊಂದಿದೆ ಮತ್ತು ಇದನ್ನು ಕುಟುಂಬದ ಚರಾಸ್ತಿ ಎಂದು ಪರಿಗಣಿಸಲಾಗಿದೆ ಎಂದಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಜಿಂಕೆಯ…






