ಲೇಖಕ: admin

ಮಡಿಕೇರಿ ಡಿ.23 : ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ ದೇಶದಲ್ಲಿಯೇ ಮೊದಲ ಬಾರಿಗೆ ಜಾರಿಯಾಗಿರುತ್ತದೆ. ಎಲ್ಲಾ ಅರ್ಹ ಗಿಗ್ ಕಾರ್ಮಿಕರು ಸೇವಾಸಿಂಧು ಪೋರ್ಟಲ್‍ನಲ್ಲಿ ನೋಂದಾಯಿಸಿಕೊಳ್ಳುವುದು. ವಿಮಾ ಸೌಲಭ್ಯವು ಕರ್ತವ್ಯದಲ್ಲಿರುವಾಗ/ ಇಲ್ಲದಿರುವಾಗ ಸಂಭವಿಸುವ ಅಪಘಾತಗಳಿಗೂ ಅನ್ವಯ. ಯೋಜನೆಯು ಸಂಪೂರ್ಣ ಉಚಿತ, ಯಾವುದೇ ರೀತಿಯ ಪ್ರೀಮಿಯಂ ಪಾವತಿಸುವ ಅಗತ್ಯತೆ ಇಲ್ಲ. ಸ್ವಿಗ್ಗಿ, ಜೊಮಾಟೋಗಳಂತಹ ಸಂಸ್ಥೆಗಳಲ್ಲಿ ಫುಡ್ ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪ್ಲಿಪ್‍ಕಾರ್ಟ್, ಪೋರ್ಟರ್, ಫಾರ್ಮಸಿ, ಬ್ಲಿಂಕಿಟ್, ಜೆಪ್ಟೋ, ಬಿಗ್ ಬಾಸ್ಕೆಟ್, ಡಾಮಿನೋಸ್ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ ವೃತ್ತಿಯಲ್ಲಿ ತೊಡಗಿಸಿಕೊಂಡ ಎಲ್ಲಾ ಅಸಂಘಟಿತ ಗಿಗ್ ಕಾರ್ಮಿಕರು ಈ ಯೋಜನೆಯಡಿ ನೋಂದಾಯಿಸಲು ಅರ್ಹತೆ ಹೊಂದಿರುತ್ತಾರೆ. ಸೌಲಭ್ಯಗಳು: ಅಪಘಾತದಿಂದ ಮರಣ ಹೊಂದಿದಲ್ಲಿ ವಿಮಾ ಪರಿಹಾರ ರೂ. 2 ಲಕ್ಷ ಹಾಗೂ ಜೀವ ವಿಮಾ ರೂ. 2 ಲಕ್ಷ ಸೇರಿ ಒಟ್ಟು ರೂ. 4 ಲಕ್ಷಗಳು. ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ರೂ. 2 ಲಕ್ಷಗಳು. ಆಸ್ಪತ್ರೆ ವೆಚ್ಚ ಮರುಪಾವತಿ ರೂ.…

Read More

ಮಡಿಕೇರಿ ಡಿ.23 : ಪ್ರಸಕ್ತ(2023-24) ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‍ಡಿ ಅಧ್ಯಯನದಲ್ಲಿ ತೊಡಗಿರುವ (ದಿನಾಂಕ 30-01-203 ಮತ್ತು ಅದರ ನಂತರ ಪ್ರಥಮ ವರ್ಷದ ಪಿಎಚ್‍ಡಿ ಪ್ರಾರಂಭಿಸಿರಬೇಕು) ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ/ ಫೆಲೋಶಿಪ್‍ಗಾಗಿ ಅರ್ಜಿ ಆಹ್ವಾನಿಸಲಾಗಿದೆ. 2023-24ನೇ ಸಾಲಿನಲ್ಲಿ ಕರ್ನಾಟಕ ಶಾಸನಬದ್ಧ ವಿಶ್ವ ವಿದ್ಯಾಲಯಗಳಲ್ಲಿ/ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಎಚ್‍ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆಪ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜ.10 ಕೊನೆಯ ದಿನವಾಗಿದೆ.ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಮಾಸಿಕ ವ್ಯಾಸಂಗ ವೇತನ/ ಫೆಲೋಶಿಪ್‍ಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ನಿಗಧಿಪಡಿಸಿರುವ ವಾರ್ಷಿಕ ಆದಾಯ ಮಿತಿ ಪ್ರವರ್ಗ-1 ರೂ.4.50 ಲಕ್ಷ, ಪ್ರವರ್ಗ-2ಎ, 3ಎ, 3ಬಿ ರೂ.3.50 ಲಕ್ಷ, ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕಗಳನ್ನು ಪಡೆದಿರಬೇಕು. ಅಭ್ಯರ್ಥಿಗಳು ಪೂರ್ಣಾವಧಿ ಪಿಎಚ್‍ಡಿ ಅಧ್ಯಯನಕ್ಕಾಗಿ ಮಾಡಿರುವ ನೋಂದಣಿ…

Read More

ಮಡಿಕೇರಿ ಡಿ.22 : ರೂಪಾಂತರಿ ಕೋವಿಡ್ ಬಗ್ಗೆ ಎಚ್ಚರ ವಹಿಸುವಂತೆ ಸರ್ಕಾರ ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಗಳನ್ನು ವರ್ತಕರು ಹಾಗೂ ಸಾರ್ವಜನಿಕರು ಪಾಲಿಸಬೇಕು ಎಂದು ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ನ ಅಧ್ಯಕ್ಷ ಎಂ.ಧನಂಜಯ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ನೆರೆಯ ಕೇರಳ ರಾಜ್ಯದಲ್ಲಿ ರೂಪಾಂತರಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಆದ್ದರಿಂದ ಗಡಿ ಭಾಗದ ಕೊಡಗು ಜಿಲ್ಲೆಯಲ್ಲಿ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ. ವರ್ಷಾಂತ್ಯದ ರಜಾ ದಿನಗಳಲ್ಲಿ ಅಧಿಕ ಸಂಖ್ಯೆಯ ಪ್ರವಾಸಿಗರು ಮಡಿಕೇರಿ ನಗರಕ್ಕೆ ಬರುತ್ತಾರೆ. ಈ ಸಂದರ್ಭ ಮಾಸ್ಕ್ ಕಡ್ಡಾಯ ಮಾಡುವುದು ಮತ್ತು ಸ್ವಚ್ಛತೆಗೆ ಆದ್ಯತೆ ನೀಡುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳು ಚಿಂತನೆ ನಡೆಸಬೇಕಾಗಿದೆ. ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಬರುವ ಪ್ರವಾಸಿಗರ ಮೇಲೆ ಆರೋಗ್ಯ ಇಲಾಖೆ ನಿಗಾ ವಹಿಸಬೇಕು. ಅಲ್ಲದೆ ನಗರದ ವರ್ತಕರು ಕೂಡ ಪ್ರವಾಸಿಗರಲ್ಲಿ ಹಾಗೂ ಸಾರ್ವಜನಿಕರಲ್ಲಿ ಕೋವಿಡ್ ಕುರಿತು ಜಾಗೃತಿ ಮೂಡಿಸಬೇಕು ಎಂದು ಧನಂಜಯ ಹೇಳಿದ್ದಾರೆ. 60…

Read More

ಮಡಿಕೇರಿ ಡಿ.22 : ನಗರಸಭೆಯ ಪೌರಾಯುಕ್ತರು ಸಮಾನ್ಯ ಸಭೆಯಲ್ಲಿ ಮರಣದಂಡನೆಯ ಮಾತನಾಡಿದ್ದು, ಇದು ಅತ್ಯಂತ ವಿಷಾದಕರ ಬೆಳವಣಿಗೆಯಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಸದಸ್ಯರು ಹಾಗೂ ಅಧಿಕಾರಿಗಳು ಹೊಂದಾಣಿಕೆಯಿಂದ ಕಾರ್ಯನಿರ್ವಹಿಸಬೇಕೆ ಹೊರತು ಮಾನಸಿಕ ಒತ್ತಡ ನೀಡಬಾರದು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ನಗರದ ಅಭಿವೃದ್ಧಿಗೆ ಸದಸ್ಯರು ಹಾಗೂ ಅಧಿಕಾರಿಗಳು ಒಗ್ಗಟ್ಟಾಗಿ ಜೋಡೆತ್ತುಗಳಂತೆ ದುಡಿಯಬೇಕಾಗುತ್ತದೆ. ಆದರೆ ನಗರಸಭೆಯಲ್ಲಿ ಹೊಂದಾಣಿಕೆಯ ಕೊರತೆ ಎದ್ದು ಕಾಣುತ್ತಿದ್ದು, ಇದು ಸಾರ್ವಜನಿಕರ ಕೆಲಸ ಕಾರ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಮಡಿಕೇರಿ ನಗರಸಭೆಯ ಇತಿಹಾಸದಲ್ಲೇ ಈ ರೀತಿಯ ಅಸಹಾಯಕ ಆಡಳಿತವನ್ನು ಜನರು ನೋಡಿರಲಿಲ್ಲ. ಯಾವುದೇ ಪೌರಾಯುಕ್ತರು ಮರಣದಂಡನೆ ನೀಡಿ ಎಂದು ಹೇಳಿರಲಿಲ್ಲ. ಅಧಿಕಾರಿಯೊಬ್ಬರು ತುಂಬಿದ ಸಭೆಯಲ್ಲಿ ಈ ರೀತಿಯ ಹೇಳಿಕೆ ನೀಡಿದ್ದಾರೆ ಎಂದರೆ ಮಾನಸಿಕ ಒತ್ತಡದ ನಡುವೆ ಅವರು ಕಾರ್ಯನಿರ್ವಹಿಸುತ್ತಿದ್ದಾರೆ ಎನ್ನುವುದು ಸಾಬೀತಾಗಿದೆ. ಹಲವು ಅಧಿಕಾರಿಗಳು ಈಗಾಗಲೇ ವರ್ಗಾವಣೆ ಪಡೆದುಕೊಂಡು ತೆರಳಿದ್ದಾರೆ. ಉಳಿದ ಅಧಿಕಾರಿಗಳು ಕೂಡ ಇದೇ ದಾರಿ…

Read More

ಮಡಿಕೇರಿ ಡಿ.22 : ಕೊಡಗು ಮುಸ್ಲಿಂ ಸ್ಪೋಟ್ರ್ಸ್ ಟ್ರಸ್ಟ್ ವತಿಯಿಂದ ಏ.19 ರಿಂದ 28 ರವರೆಗೆ ಮೂರ್ನಾಡಿನಲ್ಲಿ 20ನೇ ವರ್ಷದ ಮುಸ್ಲಿಂ ಕಪ್ ಕ್ರಿಕೆಟ್ ಹಾಗೂ ಹಗ್ಗಜಗ್ಗಾಟ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಆದಂ ಕುಶಾಲನಗರ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರ್ನಾಡು ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದ್ದು, ಕ್ರಿಕೆಟ್ ಪಂದ್ಯಾವಳಿಯಲ್ಲಿ ಜಿಲ್ಲಾ ವ್ಯಾಪ್ತಿಯ ವಿವಿಧ ಜಮಾಅತ್‍ಗಳ 180 ತಂಡಗಳು ಭಾಗವಹಿಸುವ ನಿರೀಕ್ಷೆ ಇರುವುದಾಗಿ ತಿಳಿಸಿದರು. ಕ್ರಿಕೆಟ್ ಪಂದ್ಯಾವಳಿ ವಿಜೇತ ತಂಡಕ್ಕೆ 77,786 ರೂ. ನಗದು ಮತ್ತು ಆಕರ್ಷಕ ಟ್ರೋಫಿ, ದ್ವಿತೀಯ 37,786 ರೂ. ನಗದು ಮತ್ತು ಆಕರ್ಷಕ ಟ್ರೋಫಿ, ತೃತೀಯ 17,786 ರೂ. ನಗದು ಮತ್ತು ಆಕರ್ಷಕ ಟ್ರೋಫಿ ಹಾಗೂ 4ನೇ ಸ್ಥಾನ ಪಡೆಯುವ ತಂಡಕ್ಕೆ 7,786 ರೂ. ನಗದು ಬಹುಮಾನ ನೀಡಲಾಗುವುದು ಎಂದರು. ಟ್ರಸ್ಟ್ ಅಧ್ಯಕ್ಷ ಅಬ್ದುಲ್ ಖಾದರ್ ಹಾಕತ್ತೂರು ಮಾತನಾಡಿ, ಸಮುದಾಯ ಬಾಂಧವರಿಗಾಗಿ ಹಗ್ಗಜಗ್ಗಾಟ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, 120…

Read More

ಕುಶಾಲನಗರ ಡಿ.22 :  ಕುಶಾಲನಗರ ಸಮೀಪ ಚಿಕ್ಕ ಅಳುವಾರದಲ್ಲಿರುವ ಕೊಡಗು ವಿವಿ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ತಾತ್ಕಾಲಿಕ ಬೋಧಕೇತರ ಸಿಬ್ಬಂದಿಗಳ ಸೇವೆಯನ್ನು ಮುಂದುವರೆಸಲು ಒತ್ತಾಯಿಸಿ ಕಳೆದ 11 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ತೊರೆನೂರು ಗ್ರಾಪಂ ಜನಪ್ರತಿನಿಧಿಗಳು ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ‌ ವ್ಯಕ್ತಪಡಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಮಂಗಳೂರು ವಿವಿ ಅಧೀನದಲ್ಲಿ ಸ್ನಾತಕೋತ್ತರ ಕೇಂದ್ರ ಆರಂಭವಾದಾಗಿನಿಂದಲೂ ಸೇವೆಯಲ್ಲಿದ್ದ 24 ಮಂದಿ ಸಿಬ್ಬಂದಿಗಳನ್ನು ಸೇವೆಯಿಂದ ಕೈಬಿಡಲಾಗಿದೆ. ಇದರಿಂದಾಗಿ ನಮ್ಮ ಜೀವನ ಅತಂತ್ರವಾಗಿದೆ ಎಂದು ಸಿಬ್ಬಂದಿಗಳು ಕೇಂದ್ರದ ಹೊರ ಆವರಣದಲ್ಲಿ ಪ್ರತಿಭಟಿಸುತ್ತಿದ್ದು ಇವರ ಹೋರಾಟದಲ್ಲಿ ಕರ್ನಾಟಕ ಕಾವಲುಪಡೆ, ದಲಿತ ಹಿತರಕ್ಷಣಾ ಒಕ್ಕೂಟ, ಕರ್ನಾಟಕ ರಾಜ್ಯ ರೈತ ಸಂಘ‌ ಮತ್ತು ಹಸಿರು ಸೇನೆ ಪದಾಧಿಕಾರಿಗಳು ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದ್ದಾರೆ. 44 ಮಂದಿ ಬೋಧಕೇತರ ಸಿಬ್ಬಂದಿಗಳ ಪೈಕಿ 18 ಮಂದಿಯನ್ನು ‌ಮಾತ್ರ ಸೇವೆಯಲ್ಲಿ ಮುಂದುವರೆಸಿದ್ದು ಕಳೆದ 8-10 ವರ್ಷಗಳಿಂದ ಕೇಂದ್ರದ ಅಭಿವೃದ್ಧಿಗೆ ಶ್ರಮಿಸಿದ, ಎಲ್ಲಾ ಅರ್ಹತೆ ಹೊಂದಿರುವ ಇತರೆ ಸಿಬ್ಬಂದಿಗಳನ್ನು ಕೈಬಿಡಲಾಗಿದೆ. ಮುಂದಿನ ದಿನಗಳಲ್ಲಿ…

Read More

ಮಡಿಕೇರಿ ಡಿ.22 : ಜಿಲ್ಲೆಯ ನೆರೆ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಗಡಿ ಭಾಗದಲ್ಲಿಯೂ ಸಹ ಅಗತ್ಯ ಮುನ್ನೆಚ್ಚರ ವಹಿಸುವುದು, ಜೊತೆಗೆ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಸಲಹೆ ಮಾಡಿದ್ದಾರೆ. ವಿವಿಧ ಇಲಾಖೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪರಿಶೀಲನಾ ಸಂದರ್ಭದಲ್ಲಿ ಅವರು ಮಾತನಾಡಿದರು. ನೆರೆಯ ರಾಜ್ಯದಲ್ಲಿ ಕೆಲವು ದಿನಗಳಿಂದ ಕೋವಿಡ್-19 ಪ್ರಕರಣಗಳ ಸಂಖ್ಯೆ ಏರಿಕೆಯಾಗುವುದರಿಂದ ಜಿಲ್ಲೆಯಲ್ಲಿಯೂ ಸಹ ಅಗತ್ಯ ಎಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿದೆ ಎಂದು ಪ್ರಸಾದ್ ಹೇಳಿದರು. ಜಿಲ್ಲೆಯ ಕುಟ್ಟ, ಮಾಕುಟ್ಟ, ಕರಿಕೆ ಗ್ರಾಮದ ಗಡಿ ಪ್ರದೇಶದಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸುವುದರ ಜೊತೆಗೆ ಅಗತ್ಯ ತಪಾಸಣೆ ಕೈಗೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತಿಳಿಸಿದರು. ‘ನೆರೆಯ ರಾಜ್ಯ ಮಾತ್ರವಲ್ಲದೆ ವಿವಿಧ ಕಡೆಗಳಲ್ಲಿ ಜೆಎನ್.1 ಪ್ರಕರಣಗಳು ವರದಿಯಾಗಿವೆ. ಆದ್ದರಿಂದ ಅಗತ್ಯ ಮುನ್ನೆಚ್ಚರ ವಹಿಸುವುದು ಅತ್ಯಗತ್ಯ. ಆದರೆ ಆತಂಕ ಪಡುವ ಅಗತ್ಯವಿಲ್ಲ. ಆದರೂ ಎಲ್ಲರೂ ಮುನ್ನೆಚ್ಚರ…

Read More

ಮಡಿಕೇರಿ ಡಿ.22 : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಡೆಸುತ್ತಿರುವ ರಾಜ್ಯ ವಲಯದ ಕ್ರೀಡಾ ಶಾಲೆ/ ಕ್ರೀಡಾ ವಸತಿ ನಿಲಯಗಳಿಗೆ 2024-25ನೇ ಸಾಲಿಗೆ 8 ನೇ ತರಗತಿ ಹಾಗೂ ಪ್ರಥಮ ಪಿಯುಸಿಗೆ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆಯು ಡಿ.27 ರಂದು ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿಗೆ ಪೊನ್ನಂಪೇಟೆ ತಾಲ್ಲೂಕು ಮಿನಿ ಕ್ರೀಡಾಂಗಣದಲ್ಲಿ, ಡಿ.28 ರಂದು ಮಡಿಕೇರಿ ತಾಲ್ಲೂಕಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣ ಹಾಗೂ ಡಿ.29 ರಂದು ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿಗೆ ಕೂಡಿಗೆ ಸರ್ಕಾರಿ ಕ್ರೀಡಾ ಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಆಯ್ಕೆ ಪ್ರಕ್ರಿಯೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಭಾಗವಹಿಸುವಂತೆ ಕೋರಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ. 9902911353 ಮತ್ತು 9480032712 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.

Read More

ಮಡಿಕೇರಿ ಡಿ.22 : ಮಡಿಕೇರಿ ತಾಲ್ಲೂಕು ಭಾಗಮಂಡಲ ಹೋಬಳಿ ಭಾಗಮಂಡಲ ತೋಟಗಾರಿಕೆ ಇಲಾಖೆ ಸಭಾಂಗಣದಲ್ಲಿ ಡಿ.ರಂದು ಬೆಳಗ್ಗೆ 11 ಗಂಟೆಗೆ ಪಿಂಚಣಿ ದಿನಾಚರಣೆ ನಡೆಯಲಿದೆ. ಈ ದಿನದಂದು ಸಾಮಾಜಿಕ ಭದ್ರತಾ ಯೋಜನೆಯಡಿ ವಿವಿಧ ಮಾಸಾಶನಗಳ ಫಲಾನುಭವಿಗಳು ಕುಂದು ಕೊರತೆಗಳನ್ನು ನೊಂದಾಯಿಸುವಂತೆ ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಕೋರಿದ್ದಾರೆ.

Read More

ಸಿದ್ದಾಪುರ ಡಿ.22 :   3 ವೀಲರ್ಸ್ ಕ್ರಿಕೆಟರ್ಸ್ ಅಮ್ಮತ್ತಿ ಆಟೋ ಚಾಲಕರ ಸಂಘದ ವತಿಯಿಂದ ಆಟೋ ಚಾಲಕರಿಗಾಗಿ ಅಮ್ಮತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ ನಡೆಯಿತು. ಕ್ರಿಕೆಟ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಜಿ.ಪಂ ಮಾಜಿ ಸದಸ್ಯ ಮೂಕೊಂಡ ವಿಜು ಸುಬ್ರಮಣಿ ಮಾತನಾಡಿ, ಹಲವು ಸಂಕಷ್ಟಗಳ ನಡುವೆ ಬದುಕು ಸಾಗಿಸುತ್ತಿರುವ ಆಟೋ ಚಾಲಕರ ಬೇಡಿಕೆಗಳನ್ನು ಸರ್ಕಾರ ಈಡೇರಿಸುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಕೂಡಲೇ ನೀಡಬೇಕು. ಶಿಕ್ಷಣ ಕಲಿತರು ನಿರುದ್ಯೋಗ ಸಮಸ್ಯೆಯಿಂದ ಸಾಲ ಮಾಡಿ ಆಟೋ ಚಾಲನೆ ಮಾಡಿ ತಮ್ಮ ಕುಟುಂಬ ಜೀವನ ನಡೆಸುತ್ತಿದ್ದಾರೆ. ಸರ್ಕಾರದ ಉಚಿತ ಯೋಜನೆಯಿಂದ ಮತ್ತೆ ಆಟೋ ಚಾಲಕರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದು, ಜೀವನ ನಡೆಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬಹುತೇಕ ಆಟೋ ಚಾಲಕರ ಕುಟುಂಬಗಳು ನಿವೇಶನ ಸೂರು ಇಲ್ಲದೆ ಸಂಕಷ್ಟದಲ್ಲಿದ್ದಾರೆ ಎಂದರು. ಸರ್ಕಾರ ಆಟೋ ಚಾಲಕರಿಗೆ ಎಲ್ಲಾ ಸೌಲಭ್ಯಗಳನ್ನು ನೀಡುವುದರ ಮೂಲಕ ಚಾಲಕರ ಬೇಡಿಕೆಯನ್ನು ಕೂಡಲೇ ಈಡೇರಿಸಬೇಕು. ಆಟೋ ಚಾಲಕರು ಸಂಕಷ್ಟದ ಜೀವನದೊಂದಿಗೆ…

Read More