ಲೇಖಕ: admin
ಮಡಿಕೇರಿ ಜ.31 NEWS DESK : ದಕ್ಷಿಣದ ಕಾಶ್ಮೀರವೆಂದೇ ಖ್ಯಾತಿ ಗಳಿಸಿರುವ ಕಾವೇರಿನಾಡು ಕೊಡಗು ಜಿಲ್ಲೆಗೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಮೂರು ಪಟ್ಟು ಹೆಚ್ಚಾಗುತ್ತಲೇ ಇದೆ. ರಾಜ್ಯದ ಆಕರ್ಷಕ ಚಾರಣತಾಣ ಸೋಮವಾರಪೇಟೆ ಮತ್ತು ಸುಬ್ರಹ್ಮಣ್ಯ ಪುಷ್ಪಗಿರಿ ವಲಯದ ಕುಮಾರಪರ್ವತಕ್ಕೆ ಕಳೆದವಾರ ಮಿತಿ ಮೀರಿ ಪ್ರವಾಸಿಗರು ಆಗಮಿಸಿದ್ದಾರೆ. ಚಾರಣಿಗರ ಸಂಖ್ಯೆ ಹೆಚ್ಚಳವಾದ ಕುರಿತು ವಿಡಿಯೋ ವೈರಲ್ ಆಗಿ ಅರಣ್ಯ ಇಲಾಖೆಯನ್ನು ಎಚ್ಚೆತ್ತುಕೊಳ್ಳುವಂತೆ ಮಾಡಿದೆ. ಇದೇ ಕಾರಣದಿಂದ ಫೆ.1ರಿಂದ ಕುಮಾರಪರ್ವತಕ್ಕೆ ಪ್ರವೇಶಾವಕಾಶ ಬಂದ್ ಮಾಡಿ ಮುಂದಿನ ಅಕ್ಟೋಬರ್‍ನಿಂದ ಆನ್‍ಲೈನ್ ಬುಕಿಂಗ್ ಆರಂಭಿಸಲು ಅರಣ್ಯ ಅಧಿಕಾರಿಗಳು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಪ್ರತಿನಿತ್ಯ ಸುಬ್ರಮಣ್ಯ ಮತ್ತು ಪುಷ್ಪಗಿರಿ ವನ್ಯಜೀವಿ ವಲಯದ ಕಡೆಯಿಂದ ತೆರಳಲು ತಲಾ 300 ಮಂದಿ ಚಾರಣಿಗರಿಗೆ ಮಾತ್ರ ಅವಕಾಶ ಕಲ್ಪಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಜ.26ರಿಂದ ಸರಣಿ ರಜೆ ಇದ್ದುದರಿಂದ ಕುಕ್ಕೆ ಸುಬ್ರಮಣ್ಯ ವನ್ಯಜೀವಿ ಗೇಟ್‍ನಲ್ಲಿ ಸುಮಾರು 1200ಕ್ಕೂ ಅಧಿಕ ಚಾರಣಿಗರು ಟ್ರಕ್ಕಿಂಗ್ ಗೆ ಬಂದಿದ್ದರು. ಈ ಹಿನ್ನೆಲೆಯಲ್ಲಿ ತಪಾಸಣಾ ಗೇಟ್‍ನಲ್ಲಿ…
ಕುಶಾಲನಗರ ಜ.31 NEWS DESK : ನೈಸರ್ಗಿಕ ಸಂಪನ್ಮೂಲಗಳ ರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದು ಸೀಕೋ ಸಂಸ್ಥೆಯ ಮುಖ್ಯಸ್ಥರಾದ ಡಾ.ಹರೀಶ್ ಕುಮಾರ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಇಂಧನ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ವತಿಯಿಂದ ದೇಶದಾದ್ಯಂತ ವಿದ್ಯಾರ್ಥಿಗಳಿಗೆ ಮತ್ತು ಯುವ ಜನತೆಗೆ ಇಂಧನ ಉಳಿತಾಯ ಕುರಿತು ವಿವಿಧ ಜಾಗೃತಿ ಕಾರ್ಯಕ್ರಮ ಅಂಗವಾಗಿ ರಾಜ್ಯದಲ್ಲಿ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಸಹಯೋಗದಲ್ಲಿ ಕುಶಾಲನಗರದ ಸರ್ಕಾರಿ ಪಾಲಿಟೆಕ್ನಿಕ್ ಮತ್ತು ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಯುವ ಜನತೆಯ ಜೊತೆಗೆ ಇಂಧನ ಉಳಿತಾಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ನೈಸರ್ಗಿಕ ಸಂಪನ್ಮೂಲಗಳ ದುರ್ಬಳಕೆಯಿಂದಾಗಿ ಮುಂದಿನ ಪೀಳಿಗೆಗೆ ಒಂದು ಹನಿ ಶುದ್ಧ ಗಾಳಿ, ಸ್ವಚ್ಛ ನೀರು ಸಿಗದಂತಹ ಪರಿಸರ ನಿರ್ಮಾಣವಾಗುತ್ತಿದೆ. ಕಳೆದ ಮೂರು ದಶಕಗಳಲ್ಲಿ ವಾಯು ಮಾಲಿನ್ಯ ಅತಿಯಾಗಿದೆ. ಆಮ್ಲಜನಕದ ಸಿಲಿಂಡರ್ ಬಳಸಿ ಉಸಿರಾಡುವ ದಿನಗಳು ಮಾರ್ಪಾಡಾಗುತ್ತಿದೆ. ಶುದ್ಧ ನೀರು ಹರಿಯುತ್ತಿರುವ ನದಿಗಳು ಕಣ್ಮರೆಯಾಗುತ್ತಿದೆ. ಜಾಗತಿಕ ತಾಪಮಾನದ ಏರಿಕೆಯಿಂದಾಗಿ ಅತಿವೃಷ್ಠಿ, ಅನಾವೃಷ್ಠಿ ಉಂಟಾಗುತ್ತಿವೆ. ಇಂಗಾಲದ ನಿಯಂತ್ರಣ ತಡೆಯುವಲ್ಲಿ ಪ್ರತಿಯೊಬ್ಬರೂ ಎಚ್ಚರವಹಿಸಬೇಕು.…
ಮಡಿಕೇರಿ ಜ.31 NEWS DESK : ಪ್ರಸಕ್ತ (2023-24) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ‘ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಫೆ.15 ರವರೆಗೆ ಅವಧಿ ವಿಸ್ತರಿಸಲಾಗಿದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ https://ssp.postmatric.karnataka.gov.in ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗೆ ಇಲಾಖಾ ವೆಬ್‍ಸೈಟ್ https://bcwd.karnataka.gov.in ನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ಸಂಖ್ಯೆ 8050770005, ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್:postmatrichelp@karnataka.gov.in ದೂ.ಸಂ.080-35254757 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
ಮಡಿಕೇರಿ ಜ.31 NEWS DESK : ಕೊಡಗು ಜಿಲ್ಲೆ ಕೃಷಿ ಇಲಾಖೆಯ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ (ಎಟಿಎಂಎ) ಯೋಜನೆಯಡಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ 2 ಹುದ್ದೆಗಳಿಗೆ ಒಪ್ಪಂದದ ಆಧಾರದ ಮೇಲೆ 2023-24ನೇ ಸಾಲಿನ ಸೀಮಿತ ಅವಧಿಗೆ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸೋಮವಾರಪೇಟೆ ತಾಲ್ಲೂಕು ಹಾಗೂ ವಿರಾಜಪೇಟೆ ತಾಲ್ಲೂಕುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಷರತ್ತಿಗೆ ಒಳಪಟ್ಟು ಅರ್ಜಿಗಳನ್ನು ಆಹ್ವಾನಿಸಿದೆ. ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ವಿದ್ಯಾರ್ಹತೆ ಎಂ.ಎಸ್ಸಿ(ಕೃಷಿ/ ತೋಟಗಾರಿಕೆ/ಮೀನುಗಾರಿಗೆ/ ಅರಣ್ಯ/ ರೇಷ್ಮೆ). ಕನಿಷ್ಟ 2 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹಾಗೂ ಎಮ್‍ಎಸ್ ಆಫಿಸ್‍ನಲ್ಲ್ಲಿ ಪರಿಣಿತಿ ಹೊಂದಿರಬೇಕು. ಗರಿಷ್ಠ 45 ವರ್ಷದೊಳಗಿರಬೇಕು. ಮಾಸಿಕ ರೂ.30 ಸಾವಿರ ಗೌರವ ಧನ ನೀಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಹರಿರುವ ಆಭ್ಯರ್ಥಿಗಳು ಫೆಬ್ರವರಿ, 15 ರೊಳಗೆ ಕಚೇರಿ ವೇಳೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ಅರ್ಜಿಗಳನ್ನು ಸಲ್ಲಿಸುವಂತೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಜಂಟಿ…
ಮಡಿಕೇರಿ ಜ.30 NEWS DESK : 2023-24 ಸಾಲಿನ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದ ಪ್ರಯುಕ್ತ ನಗರದ ಜಿಲ್ಲಾ ಸ್ಕೌಟ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆಯ ಸಹಯೋಗದೊಂದಿಗೆ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಆಚರಿಸಲಾಯಿತು. ಸ್ಕೌಟ್ ಗೈಡ್ ಭವನ ಸಭಾಂಗಣದಲ್ಲಿ ನಡೆದ “ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು ಹಾಗೂ ಜಿಲ್ಲಾ ಗೈಡ್ ಆಯುಕ್ತರಾದ ರಾಣಿ ಮಾಚಯ್ಯ ಉದ್ಘಾಟಿಸಿ ಹೆಣ್ಣು ಮಕ್ಕಳು ಹೆಚ್ಚಾಗಿ ವಿದ್ಯಾವಂತರಾಗಬೇಕು ಎಂದು ಕಿವಿಮಾತು ಹೇಳಿದರು. ಶಾಲಾ ಶಿಕ್ಷಣ ಇಲಾಖೆಯ ದೈಹಿಕ ಪರಿವೀಕ್ಷಕರಾದ ಸದಾಶಿವಯ್ಯ ಪಲ್ಲೆದ್ ಅವರು ಮಾತನಾಡಿ ಹೆಣ್ಣು ಮಕ್ಕಳು ವಿದ್ಯಾವಂತರಾಗಿ ಧೈರ್ಯವಂತರಾಗಿ ಇದ್ದರೆ ಒಂದು ಸಮಾಜವು ಉನ್ನತ ಮಟ್ಟಕ್ಕೆ ಹೋಗಲು ಯಾವುದೇ ಸಂಶಯವಿಲ್ಲ ಎಂದು ತಿಳಿಸಿದರು. ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯು ಅವರು ಮಾತನಾಡಿ ಈಗ…
ಮಡಿಕೇರಿ ಜ.30 NEWS DESK : ಪೆರಾಜೆ ಗ್ರಾ.ಪಂ.ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್‍ಪೊನ್ನಣ್ಣ ಚಾಲನೆ ನೀಡಿದರು. ಕೆ.ಪೆರಾಜೆ, ಆಲೆಟ್ಟಿ-ಕಾಪುಮಲೆ-ಕುಂದಲ್ಪಾಡಿ-ಕುಂಬಳಚೇರಿ ವಿ.ಎಸ್.ಎಸ್.ಎನ್. ಸುಮಾರು 170 ಲಕ್ಷ ರೂ. ವೆಚ್ಚದ ಕಾಮಗಾರಿಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ಸುಮಾರು 400 ಲಕ್ಷ ರೂ. ವೆಚ್ಚದ ಕೆ.ಪೆರಾಜೆ-ಆಲೆಟ್ಟಿ-ಕಾಪುಮಲೆ-ಕುಂದಲ್ಪಾಡಿ-ಕುಂಬಳಚೇರಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. 10 ಲಕ್ಷ ರೂ. ವೆಚ್ಚದ ಪೆರಾಜೆ ಗ್ರಾಮ ಪಂಚಾಯಿತಿ ಬಂಗಾರುಕೋಡಿ ರಸ್ತೆ ಯಾಪರೆ ಕುಟುಂಬಸ್ಥರ ರಸ್ತೆ ಹತ್ತಿರ ಕಾಲು ಸೇತುವೆ ಕಾಮಗಾರಿಗೆ ಚಾಲನೆ ಒಟ್ಟು 580 ಲಕ್ಷ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.
ಮಡಿಕೇರಿ ಜ.30 NEWS DESK : ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಪೆರಾಜೆ ಗ್ರಾಮದ ಅನ್ನಪೂರ್ಣೇಶ್ವರಿ ಸಭಾಂಗಣದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯಿತು. ಜನಸ್ಪಂದನಾ ಕಾರ್ಯಕ್ರಮದಲ್ಲಿ ಗ್ರಾಮಿಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ ಕುಡಿಯುವ ನೀರು, ರಸ್ತೆ ಮತ್ತು ಸೇತುವೆ ನಿರ್ಮಾಣ, ವಿದ್ಯುತ್ ದೀಪ ಅಳವಡಿಸುವುದು ಮತ್ತಿತರ ಸಂಬಂಧ 24 ಅರ್ಜಿಗಳು ಸಲ್ಲಿಕೆಯಾದವು. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ 17 ಅರ್ಜಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದಂತೆ 5 ಅರ್ಜಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ 4 ಅರ್ಜಿಗಳು, ಸೆಸ್ಕ್, ಅರಣ್ಯ, ಕೆಎಸ್‍ಆರ್‍ಟಿಸಿ ವಿಭಾಗಕ್ಕೆ ತಲಾ 2 ಅರ್ಜಿಗಳು, ಪೊಲೀಸ್, ಆಹಾರ, ಉದ್ಯೋಗ ವಿನಿಮಯ, ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ತಲಾ 1 ಅರ್ಜಿಗಳು ಒಟ್ಟು 60 ಅರ್ಜಿಗಳು ಸಾರ್ವಜನಿಕರಿಂದ ಸಲ್ಲಿಕೆಯಾದವು. ಜನಸ್ಪಂದನಾ ಸಭೆಯ ಆರಂಭದಲ್ಲಿ ಮಾತನಾಡಿದ ಶಾಸಕ ಎ.ಎಸ್.ಪೊನ್ನಣ್ಣ ಅವರು ಸರ್ಕಾರ ಜನರ ಬಾಗಿಲಿಗೆ ಬಂದು…
ಮಡಿಕೇರಿ ಜ.30 NEWS DESK : ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಹಲವು ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು. ಸಭೆಯ ಆರಂಭದಲ್ಲಿ ಮಾಹಿತಿ ನೀಡಿದ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್, ಹೋಂ ಸ್ಟೇ ಮಾಲೀಕರು ಹಾಗೂ ಟ್ಯಾಕ್ಸಿ ಮಾಲಿಕರಿಗೆ ತರಬೇತಿ ಕಾರ್ಯಗಾರ ಏರ್ಪಡಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು. ಜಿಲ್ಲೆಯ ಪ್ರವಾಸಿ ಕೇಂದ್ರಗಳಲ್ಲಿ ಹೆದ್ದಾರಿ ಫಲಕ ಹಾಗೂ ಸೈನೇಜ್ ಬೋರ್ಡ್‍ಗಳನ್ನು ಅಳವಡಿಸಲು ಉದ್ದೇಶಿಸಲಾಗಿದ್ದು, ಆ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಲು ಮುಂದಾಗಲಾಗಿದೆ ಎಂದು ಅವರು ಸಭೆಯ ಗಮನಕ್ಕೆ ತಂದರು. ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿಯಮಾನುಸಾರ ಅಗತ್ಯ ಕ್ರಮವಹಿಸಬೇಕು. ಪ್ರವಾಸಿಗರಿಗೆ ಹೆಚ್ಚಿನ ಮಾಹಿತಿ ದೊರೆಯುವಂತಾಗಬೇಕು ಎಂದು ಸೂಚಿಸಿದರು. ಜಿಲ್ಲೆಯಲ್ಲಿ 4 ಸಾವಿರ ಹೋಂ ಸ್ಟೇಗಳಿದ್ದು, ಸುಮಾರು 1900 ರಷ್ಟು ಹೋಂ ಸ್ಟೇಗಳು ನೋಂದಣಿಯಾಗಿವೆ. ಉಳಿದ ಹೋಂ ಸ್ಟೇಗಳನ್ನು…
ಸುಂಟಿಕೊಪ್ಪ ಜ.30 NEWS DESK : ಬೋಯಿಕೇರಿ ಗ್ರಾಮದ ಶ್ರೀ ಸಿದ್ಧಿ-ಬುದ್ಧಿ ವಿನಾಯಕ ದೇವಾಲಯದ 8ನೇ ವರ್ಷದ ವಾರ್ಷಿಕ ಪ್ರತಿಷ್ಠಾಪನಾ ಮಹೋತ್ಸವದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆಯಿತು. ದೇವಾಲಯದಲ್ಲಿ ಮುಂಜಾನೆಯಿಂದಲೇ ಸ್ಥಳ ಶುದ್ಧಿ, ಪುತ್ಸಾಹ ವಾಚನ, ನವ ಕಲಶ, 108 ತೆಂಗಿನ ಕಾಯಿ, ಗಣಪತಿ ಹೋಮ ಹಾಗೂ ಮಹಾಪೂಜೆಯ ನಂತರ ಮಹಾ ಮಂಗಳಾರತಿ ನೇರವೇರಿತು. ನಂತರ ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗ ಹಾಗೂ ಅನ್ನದಾನ ನೆರವೇರಿತು.






