ಸಿದ್ದಾಪುರ ಜ.30 NEWS DESK : ವಿದ್ಯಾರ್ಥಿಗಳು ಶಾಲೆಗೆ ತಪ್ಪದೆ ಹಾಜರಾಗುವ ಮೂಲಕ ಶಿಕ್ಷಣದೊಂದಿಗೆ ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಮೂಕೊಂಡ ವಿಜು ಸುಬ್ರಮಣಿ ಕರೆ ನೀಡಿದರು. ಚೆನ್ನಂಗಿ ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ 43 ವಿದ್ಯಾರ್ಥಿಗಳಿಗೆ ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವೈಯಕ್ತಿಕವಾಗಿ ಗುಣಮಟ್ಟದ ಶಾಲಾ ಬ್ಯಾಗ್ ಗಳನ್ನ ವಿತರಿಸಿ ಮಾತನಾಡಿ, ಕಾಡು ಪ್ರಾಣಿಗಳ ಹಾವಳಿ ನಡುವೆ ಶಿಕ್ಷಣ ಕಲಿಯುತ್ತಿರುವ ಶಾಲಾ ವಿದ್ಯಾರ್ಥಿಗಳು ಶಿಕ್ಷಕರುಗಳ ಮಾರ್ಗದರ್ಶನವನ್ನು ಮೈಗೂಡಿಸಿಕೊಂಡು ಶಿಕ್ಷಣದೊಂದಿಗೆ ಸಮಾಜದ ಮುಖ್ಯ ವಾಹಿನಿಗೆ ಬಂದಲ್ಲಿ ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ. ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಉನ್ನತ ಶಿಕ್ಷಣದೊಂದಿಗೆ ಮುಂದೆ ಬರಬೇಕೆಂದರು. ಚೆನ್ನಯ್ಯನ ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೇಕೆರಿರಾ ಅರುಣ್ ಕುಮಾರ್ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚಾಗಿ ಕಲಿಯುತ್ತಿರುವ ಶಾಲೆಗೆ ದಾನಿಗಳು ಹಲವು ರೀತಿಯಲ್ಲಿ ಸಹಕಾರ ನೀಡುತ್ತಿರುವುದರೊಂದಿಗೆ ಇತ್ತೀಚೆಗೆ ನಡೆದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಹಕಾರ ನೀಡುವ ಭರವಸೆ ನೀಡಿದ ವಿಜು…
ಲೇಖಕ: admin
ಮಡಿಕೇರಿ ಜ.30 NEWS DESK : ಪ್ರಸಕ್ತ (2023-24) ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶೇ.90 ರ ರಿಯಾಯಿತಿಯಲ್ಲಿ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟೋವೇಟರ್, ಕಳೆ ಕೊಚ್ಚುವ ಯಂತ್ರಗಳು (ಪವರ್ ವೀಡರ್), ಪವರ್ ಸ್ಪ್ರೇಯರ್ಸ್, ಡೀಸೆಲ್ ಪಂಪ್‍ಸೆಟ್, ಪ್ಲೋರ್ ಮಿಲ್, ಮೊಟೋಕಾರ್ಟ್, ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣಗಳು ಮತ್ತು ಇತರೆ ಹೈಟೆಕ್ ಕೃಷಿ ಉಪಕರಣಗಳನ್ನು ವಿತರಿಸಲಾಗುತ್ತಿದೆ. ಆಸಕ್ತ ಮಡಿಕೇರಿ ತಾಲ್ಲೂಕು ವ್ಯಾಪ್ತಿಯ ರೈತರು ಪಹಣಿ (ಆರ್‌ಟಿಸಿ ), ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ಒಂದು ಭಾವಚಿತ್ರ, ರೂ.20 ರ ಛಾಪಾ ಕಾಗದದೊಂದಿಗೆ ಹೋಬಳಿಯಲ್ಲಿರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸುವಂತೆ ಮಡಿಕೇರಿ ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ ಜ.30 NEWS DESK : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ “ಯುವನಿಧಿ” ಯೋಜನೆಯನ್ನು ಡಿ.26 ರಂದು ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ. 2023 ರಲ್ಲಿ ಪದವಿ/ ಡಿಪ್ಲೋಮಾ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ/ಖಾಸಗಿ/ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮಒನ್, ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ http://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ “ಯುವನಿಧಿ” ಯೋಜನೆಗೆ ಅರ್ಜಿ ಸಲ್ಲಿಸಬಹುದು. ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ.ಗಳು ಹಾಗೂ ಡಿಪ್ಲೋಮಾ ಪದವೀಧರರಿಗೆ 1,500 ರೂ.ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 18005999918 / 9113935220 ಗೆ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹಾಗೂ ಜಿಲ್ಲಾ ಉದ್ಯೋಗಾಧಿಕಾರಿ ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ…
ಮಡಿಕೇರಿ ಜ.30 NEWS DESK : ಸಮಾಜದಲ್ಲಿ ಕ್ರೀಡಾಕೂಟಗಳಿಂದ ಸೌಹಾರ್ದತೆ ಬೆಳೆಯಲು ಸಹಕಾರಿಯಾಗಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಫುಟ್ಬಾಲ್ ಕಪ್ ಸೆಮಿಫೈನಲ್ ಪಂದ್ಯವನ್ನು ಉದ್ಘಾಟಿಸಿ ಶಾಸಕರು ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ವಿವಿಧ ಜನಾಂಗ ಹಾಗೂ ಸಮಾಜ ಬಾಂಧವರ ನಡುವೆ ಕ್ರೀಡಾಕೂಟಗಳು ನಡೆಯುತ್ತಿದೆ. ಇದೇ ಮೊದಲ ಬಾರಿಗೆ ಕೊಡಗು ಜಿಲ್ಲೆಯಲ್ಲಿ ಹಿಂದೂ ಮಲಯಾಳಿ ಫುಟ್ಬಾಲ್ ಕಪ್ ನಡೆಯುತ್ತಿರುವುದು ಶ್ಲಾಘನೀಯ ಎಂದರು. ಸಮಾಜ ಬಾಂಧವರನ್ನು ಕ್ರೀಡೆಯ ಮುಖಾಂತರ ಒಂದುಗೂಡಿಸುವುದು ಒಳ್ಳೆಯ ವಿಷಯವಾಗಿದೆ ಎಂದ ಶಾಸಕರು, ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಫುಟ್ಬಾಲ್ ಕಪ್ ಸಂಸ್ಥಾಪಕ ಮರಗೋಡುವಿನ ದರ್ಶನ್ ಸುಕುಮಾರ್ ಅವರನ್ನು ಅಭಿನಂದಿಸಿದರು. ಇದೇ ಸಂದರ್ಭ ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಫುಟ್ಬಾಲ್ ಕಪ್ ಸಮಿತಿ ವತಿಯಿಂದ ಶಾಸಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಫುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಸ್ಥಾಪಕ ದರ್ಶನ್ ಸುಕುಮಾರ್, ಕೊಡಗು ಜಿಲ್ಲಾ ಫುಟ್ಬಾಲ್…
ಮಡಿಕೇರಿ ಜ.30 NEWS DESK : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ಸರ್ವೋದಯ ಸಮಿತಿ ವತಿಯಿಂದ ‘ಹುತಾತ್ಮರ ದಿನಾಚರಣೆ’ಯು ನಗರದಲ್ಲಿ ಮಂಗಳವಾರ ಶ್ರದ್ಧಾಭಕ್ತಿಯಿಂದ ಜರುಗಿತು. ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆಯಲ್ಲಿರಿಸಲಾಗಿದ್ದ ಮಹಾತ್ಮ ಗಾಂಧೀಜಿಯವರ ‘ಚಿತಾಭಸ್ಮ’ವನ್ನು ಹೊರತೆಗೆದು ಪುಷ್ಪಮಾಲೆಗಳಿಂದ ಶೃಂಗರಿಸಿ ಗೌರವ ಸಮರ್ಪಣೆ ಮಾಡಲಾಯಿತು. ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ಸದಸ್ಯರ ನೇತೃತ್ವದಲ್ಲಿ ಪೊಲೀಸ್ ವಾದ್ಯದೊಂದಿಗೆ ನಗರದ ಮಂಗೇರಿರ ಮುತ್ತಣ್ಣ ಹಾಗೂ ಜನರಲ್ ತಿಮ್ಮಯ್ಯ ವೃತ್ತದ ಮುಖ್ಯ ರಸ್ತೆ ಮೂಲಕ ಗಾಂಧೀಜಿಯವರ ಚಿತಾಭಸ್ಮವನ್ನು ಕೊಂಡೊಯ್ದು ಗಾಂಧಿ ಮಂಟಪ ಬಳಿ(ಗಾಂಧಿ ಮೈದಾನ) ಇರಿಸಿ ಗಾಂಧೀ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ನಮನ ಸಮರ್ಪಿಸಲಾಯಿತು. ಇದೇ ವೇಳೆ ಪೊಲೀಸ್ ಮೀಸಲು ಪಡೆಯ ಸಬ್ ಇನ್ಸ್‌ಪೆಕ್ಟರ್ ಹನುಮಂತ ಕೌಜಲಗಿ ಮತ್ತು ತಂಡದವರು ಮೂರು ಸುತ್ತುಗಳ ಕುಶಾಲತೋಪು ಹಾರಿಸುವ ಮೂಲಕ ರಾಷ್ಟ್ರಪಿತರಿಗೆ ಪೊಲೀಸ್ ಗೌರವಾರ್ಪಣೆ ಸಲ್ಲಿಸಲಾಯಿತು. ನಂತರ ಮೌನಾಚರಣೆ ನಡೆಯಿತು. ಪೊಲೀಸ್ ವಾದ್ಯವು ಸಿದ್ದೇಶ್ ಅವರ ನೇತೃತ್ವದಲ್ಲಿ ಪೊಲೀಸ್ ತಂಡದವರು ರಾಷ್ಟ್ರಗೀತೆ ಹಾಡಿ…
ವಿರಾಜಪೇಟೆ ಜ.30 NEWS DESK : ಕುಶಾಲನಗರದ ರೈತ ಸಹಕಾರ ಭವನದಲ್ಲಿ ನಡೆದ ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ವಿರಾಜಪೇಟೆಯ ರೋಟರಿ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಎನ್.ಸಿ.ಚಿರಂತ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಈ ಹಿಂದೆ ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನವನ್ನು ಪಡೆದುಕೊಂಡಿರುವ ಎನ್.ಸಿ.ಚಿರಂತ್, ಗಾಂಧಿನಗರದ ನಿವಾಸಿ ಎನ್.ಜೆ. ಚಂದ್ರಶೇಖರ್ ಹಾಗೂ ಎನ್.ಎಂ. ಹೇಮಾವತಿ ದಂಪತಿಯ ಪುತ್ರ.
ಮಡಿಕೇರಿ ಜ.30 NEWS DESK : ಕೆಎಸ್‌ಆರ್‌ಟಿಸಿ ಬಸ್ ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ ಸಂಭವಿಸಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಡ್ಡೆಹೊಸೂರಿನಲ್ಲಿ ನಡೆದಿದೆ. ಸಿದ್ದಾಪುರದ ಲಲಿತಾ (53) ಎಂಬವರು ಮೃತ ದುರ್ದೈವಿ. ಅತ್ತೂರು ಕಡೆಯಿಂದ ಗುಡ್ಡೆಹೊಸೂರಿಗೆ ಬರುತ್ತಿದ್ದ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಮಡಿಕೇರಿಯಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡಿ ಸಿಲುಕಿದ ಪರಿಣಾಮ ಲಲಿತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಕೂಟಿ ಚಲಾಯಿಸುತ್ತಿದ್ದ ಲಲಿತಾ ಅವರ ಸಹೋದರಿ ಪುತ್ರಿ ಸಿಂಚನಾ ಗಂಭೀರ ಗಾಯಗೊಂಡಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಡಿಕೇರಿ ಜ.30 NEWS DESK : ಬೈತೂರು ಉತ್ಸವ ಹಿನ್ನೆಲೆ ದಕ್ಷಿಣ ಕೊಡಗಿನ ವಿರಾಜಪೇಟೆಯಿಂದ ಕೇರಳದ ಬೈತೂರಪ್ಪ ದೇವಾಲಯಕ್ಕೆ ಇಬ್ಬರು ಕೊಡವ ಯುವಕರಾದ ಚೆಟ್ಟೋಳಿರ ಶರತ್ ಸೋಮಣ್ಣ, ಮುರುವಂಡ ಸವನ್ ಸೋಮಣ್ಣ, ಪಾದಯಾತ್ರೆ ನಡೆಸಿದರು. ವಿರಾಜಪೇಟೆಯಿಂದ ಮಂಗಳವಾರ ಬೆಳಗ್ಗೆಪಾದಯಾತ್ರೆ ಪ್ರಾರಂಭಿಸಿದ ಇವರು ವೀರಾಜಪೇಟೆ, ಪೆರುಂಬಾಡಿ, ಮಾಕುಟ್ಟ, ಕೂಟುಪೊಳೆ,ಹುಲಿಕಲ್ ಮೂಲಕ ಪಾದಯಾತ್ರೆ ನಡೆಸಿ ಮಧ್ಯಾಹ್ನ ಹೊತ್ತಿಗೆ ಸುಮಾರು 40 ಕಿ.ಮಿ. ಕ್ರಮಿಸಿ ದೇವಾಲಯಕ್ಕೆ ತಲುಪಿದರು. ನಂತರ ಮೂರು ದಿನ ಅಲ್ಲಿಯೇ ತಂಗಿ ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸಿ, ವೀರಾಜಪೇಟೆಗೆ ಹಿಂತಿರುಗಿದರು.
ಮಡಿಕೇರಿ ಜ.29 : 2023-24ನೇ ಸಾಲಿನ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ವಿರಾಜಪೇಟೆಯ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿಯಾದ ಕ್ಷಮಾ ಕಾವೇರಮ್ಮ ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಅಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ರಸಪ್ರಶ್ನೆ ಸ್ಪರ್ಧಾ ವಿಭಾಗದಲ್ಲಿ 9ನೇ ತರಗತಿಯ ವಿದ್ಯಾರ್ಥಿಗಳಾದ ಪಿ.ಎಸ್. ದೇವಯ್ಯ ಹಾಗೂ ಎಂ.ನಿಶಾನ್ ತಾಲೂಕು ಮಟ್ಟದಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಇವರಿಗೆ ಶಾಲಾ ಆಡಳಿತ ಮಂಡಳಿಯವರು ಹಾಗೂ ಬೋಧಕ ಬೋಧಕೇತರ ವೃಂದದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ. ಈ ಸಂದರ್ಭದಲ್ಲಿ ಪ್ರೌಢಶಾಲಾ ವಿಭಾಗದ ಸಂಯೋಜಕರಾದ ಚೈತ್ರ ಹಾಗೂ ಸಹ ಶಿಕ್ಷಕಿ ಬಿ.ಪಿ.ಉಷಾ ಉಪಸ್ಥಿತರಿದ್ದರು.






