ಮಡಿಕೇರಿ ನ.24 : ಕೊಡಗು ಜಿಲ್ಲಾ ಮೊಗೇರ ಸೇವಾ ಸಮಾಜದ ಸಭೆ ಸುಂಟಿಕೊಪ್ಪದ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪ ಸಭಾಂಗಣದಲ್ಲಿ ನಡೆಯಿತು. ಮೊಗೇರ ಸಮಾಜದ ಗೌರವ ಸಲಹೆಗಾರ ಪಿ.ಎಂ.ರವಿ ಮಾತನಾಡಿ, ಮೊಗೇರ ಜನಾಂಗದ ಸಂಸ್ಕೃತಿ, ಪದ್ಧತಿ, ಪರಂಪರೆಯನ್ನು ಉಳಿಸಿ ಬೆಳೆಸುವುದರೊಂದಿಗೆ ಜನಾಂಗದ ಅಭಿವೃದ್ಧಿಗೆ ಶ್ರಮಿಸಲು ಸಂಘಟನೆಯ ಅಗತ್ಯವಿದೆ, ಪ್ರತಿಯೊಬ್ಬರು ಸಂಘಟನೆಯೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಮೊಗೇರ ಜನಾಂಗಕ್ಕೆ ತನ್ನದೇ ಆದ ಇತಿಹಾಸವಿದ್ದು, ಎಲ್ಲಾ ಕ್ಷೇತ್ರದಲ್ಲೂ ಮೊಗೇರ ಸಮುದಾಯ ಗುರುತಿಸಿಕೊಳ್ಳುವಂತಾಗಬೇಕು. ಜಿಲ್ಲೆಯಾದ್ಯಂತ ಮೊಗೇರ ಸಮಾಜದ ಸಂಘಟನೆಯನ್ನು ಬಲಿಷ್ಠಗೊಳಿಸಲು ಸಮುದಾಯದ ಯುವಕ, ಯುವತಿಯರು ಮುಂದೆ ಬರಬೇಕು ಎಂದು ಕರೆ ನೀಡಿದರು. ಸಮಾಜದ ಜಿಲ್ಲಾ ಗೌರವಾಧ್ಯಕ್ಷ ಗೌತಮ್ ಶಿವಪ್ಪ ಮಾತನಾಡಿ, ಸಮಾಜದ ಬೆಳವಣಿಗೆಗೆ ಎಲ್ಲರೂ ಮುಂಚೂಣಿಯಲ್ಲಿ ನಿಲ್ಲಬೇಕು. ನಮ್ಮ ಸಮುದಾಯ ಆರ್ಥಿಕವಾಗಿ ಹಿಂದುಳಿದಿದ್ದು, ಸಮಾಜದ ಅಭಿವೃದ್ಧಿ ಆಗಬೇಕಾದರೆ ನಾವೆಲ್ಲರೂ ಒಗ್ಗಟ್ಟಾಗಿ ಸಂಘಟನೆಯನ್ನು ಬಲಪಡಿಸಬೇಕು ಮತ್ತು ಶೈಕ್ಷಣಿಕವಾಗಿ ಮುಂದೆ ಬರಬೇಕು ಎಂದರು. ಸಭೆಯ ಅಧ್ಯಕ್ಷ ವಹಿಸಿ ಮಾತನಾಡಿದ ಸಮಾಜದ ಜಿಲ್ಲಾಧ್ಯಕ್ಷ ಪಿ.ಬಿ.ಜನಾರ್ಧನ, ಮೊಗೇರ ಸಮಾಜದ ಅಧ್ಯಕ್ಷನಾಗಿ…
ಲೇಖಕ: admin
ಮಡಿಕೇರಿ ನ.24 : ರೀಬಿಲ್ಡ್ ಕೊಡಗು ಸಂಸ್ಥೆ ತನ್ನ 5ನೇ ವಾರ್ಷಿಕೋತ್ಸವದ ಹಿನ್ನೆಲೆ ವಿರಾಜಪೇಟೆ ನರ್ಸಿಂಗ್ ಹೋಮ್ ನ ರೋಗಿಗಳಿಗೆ ನಡೆದಾಡಲು ಪೂರಕವಾದ ಸ್ಟೀಲ್ ಸ್ಟಾಂಡ್ ವಾಕರ್, ವಾಕಿಂಗ್ ಸ್ಟಿಕ್, ವೀಲ್ ಚೇರ್ ಸೇರಿದಂತೆ ಅಗತ್ಯ ವೈದ್ಯಕೀಯ ಸಲಕರಣೆಗಳನ್ನು ವಿತರಿಸಿತು. ಸಂಸ್ಥೆಯ ಸ್ಥಾಪಕ ಕೆ.ಎ.ಕುಶಾಲಪ್ಪ ಅವರು ಸಲಕರಣೆಗಳನ್ನು ವಿತರಿಸಿ ಮಾತನಾಡಿ, ರೋಗಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಮ್ಮ ಸಂಸ್ಥೆ ವತಿಯಿಂದ ಇಂದು ಅಗತ್ಯ ವೈದ್ಯಕೀಯ ಸಾಧನ, ಸಲಕರಣೆಗಳನ್ನು ವಿತರಿಸಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಅಸಹಾಯಕ ರೋಗಿಗಳ ಸಮಸ್ಯೆಯನ್ನು ಮನಗಂಡು ನಮ್ಮ ತಂಡ ಸಹಾಯ ಮಾಡುತ್ತಿದೆ ಎಂದರು. ಕೊಡಗಿನಲ್ಲಿ ಈ ಹಿಂದೆ ಯಾರೂ ಕಂಡು ಕೇಳರಿಯದ ರೀತಿಯಲ್ಲಿ ಜಲಪ್ರಳಯ ಉಂಟಾಗಿತ್ತು. ಇಂತಹ ಸಂದರ್ಭದಲ್ಲಿ ಮನೆ, ಆಸ್ತಿ ಕಳೆದುಕೊಂಡು ಅಸಾಹಯಕ ಸ್ಥಿತಿಯಲ್ಲಿದ್ದ ಕೊಡಗಿನ ಜನತೆಯ ಸಂಕಷ್ಟಕ್ಕೆ ನಮ್ಮಿಂದ ಸಾಧ್ಯವಾದಷ್ಟು ರೀತಿಯಲ್ಲಿ ಸ್ಪಂದಿಸಿದ್ದೇವೆ. ದೇಶವನ್ನು ಕಾಡಿದ ಕೋವಿಡ್ ಸೋಂಕು ಸಂದರ್ಭದಲ್ಲಿಯೂ ಸಂಕಷ್ಟಕ್ಕೀಡಾದ ಜನರ ನೆರವಿಗೆ ಧಾವಿಸಿದ್ದೇವೆ ಎಂದು ಹೇಳಿದರು. ಸಂಸ್ಥೆ ಸ್ಥಾಪನೆಯಾಗಿ 5 ವರ್ಷಗಳಾಗಿದೆ, ಇಲ್ಲಿಯವರೆಗೆ ಹಲವು…
ಮಡಿಕೇರಿ ನ.24 : ಪೌರಾಣಿಕ ಹಿನ್ನೆಲೆಯ ಇತಿಹಾಸ ಪ್ರಸಿದ್ಧ ಮಡಿಕೇರಿ ಸಮೀಪದ ಬಿಳಿಗೇರಿ ಗ್ರಾಮದ ಶ್ರೀ ಪರದೇವರ ದೇವಸ್ಥಾನದ ಪುನರ್ ಪ್ರತಿಷ್ಠಾ ಕಾರ್ಯಕ್ರಮ ನೂರಾರು ಭಕ್ತಾದಿಗಳ ಸಮ್ಮುಖದಲ್ಲಿ, ವಿವಿಧ ಧಾರ್ಮಿಕ ಕೈಂಕರ್ಯಗಳೊಂದಿಗೆ ಸಮಾಪನಗೊಂಡಿತು. ಶ್ರೀ ಪರದೇವರ ದೇವಸ್ಥಾನದ ಪುನರ್ ಪ್ರತಿಷ್ಠಾ ಕಾರ್ಯಗಳು ಕ್ಷೇತ್ರದ ತಂತ್ರಿಗಳಾದ ಉದಯ ಕುಮಾರ್ ಹುಲಿತಾಳ ಅವರ ನೇತೃತ್ವದಲ್ಲಿ ಗುರುವಾರ ಮತ್ತು ಶುಕ್ರವಾರ ಸಾಂಗವಾಗಿ ನೆರವೇರಿತು. ಶ್ರೀ ಪರದೇವರ ದೇವಾಲಯವನ್ನು ಗ್ರಾಮಸ್ಥರ ಮತ್ತು ದಾನಿಗಳ ಸಹಕಾರದಿಂದ 20 ಲಕ್ಷ ರೂ. ವೆಚ್ಚದಲ್ಲಿ ಜೀರ್ಣೋದ್ಧಾರ ಮಾಡಲಾಗಿದೆ ಆರಂಭಿಕ ದಿನವಾದ ನ.23 ರಂದು ಸಂಜೆ ಸ್ಥಳ ಶುದ್ಧಿ, ಪಂಚಗವ್ಯ ಪುಣ್ಯಾಹಃ, ದೇವತಾ ಪ್ರಾರ್ಥನೆ, ವಾಸ್ತು ಪೂಜೆ, ವಾಸ್ತು ಬಲಿ, ವಾಸ್ತು ಹೋಮ, ರಾಕ್ಷೋಘ್ನ, ಸುದರ್ಶನ ಹೋಮ ನಡೆದು, ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು. ಪರದೇವರ ಮೊಗ ಪ್ರತಿಷ್ಠಾಪನೆ- ಶುಕ್ರವಾರ ಬೆಳಗ್ಗೆ ಗಣಪತಿ ಹೋಮ, ಸಪ್ತಶತಿ ಪಾರಾಯಣ, ನವಕ ಕಲಶ ಪ್ರತಿಷ್ಠೆ, ಕಲಶ ಪೂಜೆಗಳು ನಡೆದವು. ಬೆಳಗ್ಗೆ 8.50 ರಿಂದ 10.30 ರವರೆಗಿನ ಧನುರ್…
ಮಡಿಕೇರಿ ನ.24 : ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಔಷಧಿ ವ್ಯಾಪಾರಸ್ಥರ ಸಂಘದಿಂದ ಉದ್ದೇಶಿತ ಕೆಮಿಸ್ಟ್ ಭವನಕ್ಕೆ ಜನವರಿಯಲ್ಲಿ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು ಜಿಲ್ಲಾ ಔಷಧಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಅಂಬೆಕಲ್ ಜೀವನ್ ಹೇಳಿದ್ದಾರೆ. ನಗರದ ಹೊರವಲಯದಲ್ಲಿನ ಆಹನ್ ಹಿಲ್ ಕಾಟೇಜ್ ನಲ್ಲಿ ಸಂಘದ 24 ನೇ ವಾಷಿ೯ಕ ಮಹಾಸಭೆಯಲ್ಲಿ ಮಾತನಾಡಿದ ಜೀವನ್, ನಗರದ ಚೇನ್ ಗೇಟ್ ಬಳಿಯಲ್ಲಿನ ಸಂಘದ ನಿವೇಶನದಲ್ಲಿ ಸುಸಜ್ಜಿತವಾಗಿ 60 ಲಕ್ಷ ರು. ವೆಚ್ಚದಲ್ಲಿ ಕೆಮಿಸ್ಟ್ ಭವನ ನಿಮಾ೯ಣ ಮಾಡಲಾಗುತ್ತದೆ. ಮುಂದಿನ ಜನವರಿಯಲ್ಲಿ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು ತಿಳಿಸಿದರು. ಜಿಲ್ಲೆಯ ವಿವಿಧೆಡೆ 260 ಔಷಧಿ ವ್ಯಾಪಾರಿಗಳಿದ್ದಾರೆ. ಹೊಸ ಸದಸ್ಯರು ಸಂಘಕ್ಕೆ ಸೇಪ೯ಡೆಯಾಗುತ್ತಿದ್ದಾರೆ. ಜಿಲ್ಲಾ ಸಂಘದಿಂದ ರಾಜ್ಯ ಸಂಘದಲ್ಲಿಯೂ ನಿದೇ೯ಶಕರಾಗಿ ಕಾಯ೯ನಿವ೯ಹಿಸುವ ಮೂಲಕ ಕೊಡಗಿನ ಔಷಧಿ ವ್ಯಾಪಾರಿಗಳು ಗಮನ ಸೆಳೆದಿದ್ದಾರೆ ಎಂದು ಜೀವನ್ ಹಷ೯ ವ್ಯಕ್ತಪಡಿಸಿದರು. ಸಂಘದ ರಾಜ್ಯ ಕಾನೂನು ಸಲಹೆಗಾರ ಹರೀಶ್ ಮಾತನಾಡಿ, ಕೇಂದ್ರ ಸಕಾ೯ರ ಔಷಧಿ ರಂಗದಲ್ಲಿ ನಾನಾ ಬದಲಾವಣೆ ತರುತ್ತಿದೆ. ಶೀಘ್ರದಲ್ಲಿಯೇ 1948 ರ ಔಷಧಿ…
ಮಡಿಕೇರಿ ನ.24 : ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸಿ ಸಂಯುಕ್ತ ಹೋರಾಟ-ಕರ್ನಾಟಕ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ನ.26 ರಿಂದ 28ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯುವ 72 ಗಂಟೆಗಳ ಮಹಾಧರಣಿಗೆ ಎಐಟಿಯುಸಿ ಕೊಡಗು ಜಿಲ್ಲಾ ಸಮಿತಿಯ ಬೆಂಬಲವಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಎಐಟಿಯುಸಿ ಸಂಘಟನೆಯ ಕೊಡಗು ಜಿಲ್ಲಾ ಸಮಿತಿಯ ನೂರಕ್ಕೂ ಅಧಿಕ ಸದಸ್ಯರು ಬೆಂಗಳೂರಿನಲ್ಲಿ ನ.27 ರಂದು ನಡೆಯುವ ಧರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳ ಸಾವಿರಾರು ಕಾರ್ಯಕರ್ತರು ಮಹಾಧರಣಿಯಲ್ಲಿ ಪಾಲ್ಗೊಂಡು ಸುಮಾರು 26 ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲಿದ್ದಾರೆ ಎಂದು ಹೇಳಿದ್ದಾರೆ. ರೈತರ ಉತ್ಪನ್ನಗಳಿಗೆ ಎಂ.ಎಸ್.ಸ್ವಾಮಿನಾಥನ್ ಶಿಫಾರಸ್ಸಿನಂತೆ ಕನಿಷ್ಠ ಬೆಂಬಲ ಹಾಗೂ ಖರೀದಿ ಖಾತ್ರಿ ಒದಗಿಸುವ ಶಾಸನ ಜಾರಿ ಮಾಡಬೇಕು, ರೈತರಿಗೆ ನೀಡುವ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ವಿದ್ಯುತ್‌ಚ್ಛಕ್ತಿ ಮೇಲಿನ ಸಬ್ಸಿಡಿ ಮೊತ್ತ ಹೆಚ್ಚಳ ಮಾಡಬೇಕು, ರೈತರ ಆತ್ಮಹತ್ಯೆ ತಡೆಯಲು ಎಲ್ಲಾ…
ಮಡಿಕೇರಿ ನ.23 : ವಿಶ್ವ ಹಿಂದು ಪರಿಷದ್ ವತಿಯಿಂದ ನ.26 ರಂದು ಭಾಗಮಂಡಲದಲ್ಲಿ ಕಾವೇರಿ ಆರತಿ ನಡೆಯಲಿದೆ. ಸಂಜೆ 5 ಗಂಟೆಗೆ ಭಾಗಮಂಡಲದ ಕಾವೇರಿ, ಕನ್ನಿಕೆ ಹಾಗೂ ಸುಜ್ಯೋತಿ ನದಿಗಳ ತ್ರಿವೇಣಿ ಸಂಗಮದಲ್ಲಿ ಭಜನೆ, ವೇದಘೋಷಗಳೊಂದಿಗೆ ಕಾವೇರಿ ತಾಯಿಗೆ ಕಾವೇರಿ ಆರತಿ ನೆರವೇರಲಿದೆ. ಮುಖ್ಯ ಭಾಷಣಕಾರರಾಗಿ ಸುವರ್ಣ ನ್ಯೂಸ್ ಚಾನಲ್ ನ ಸಂಪಾದಕ ಹಾಗೂ ಸುದ್ದಿ ನಿರೂಪಕ ಅಜಿತ್ ಹನುಮಕ್ಕನವರ್ ಪಾಲ್ಗೊಳ್ಳಲಿದ್ದಾರೆ. ವಿಶ್ವ ಹಿಂದು ಪರಿಷದ್ ಕರ್ನಾಟಕ ದಕ್ಷಿಣ ಪ್ರಾಂತದ ಕಾರ್ಯದರ್ಶಿ ಜಗನ್ನಾಥ ಶಾಸ್ತ್ರಿ ಉಪಸ್ಥಿತರಿರುವರು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮಾತೆ ಕಾವೇರಿಗೆ ಆರತಿ ಬೆಳಗುವಂತೆ ವಿಶ್ವ ಹಿಂದು ಪರಿಷದ್ ನ ಕೊಡಗು ಜಿಲ್ಲಾ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದೆ.
ಮಡಿಕೇರಿ ನ.24 : ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ 2023-24ನೇ ಸಾಲಿಗೆ ವಿದ್ಯಾರ್ಥಿ ಸಂಘದ ಚುನಾವಣೆಯನ್ನು ಶ್ರೇಯಾಂಕದ ಆಧಾರದಲ್ಲಿ ನಡೆಸಲಾಯಿತು. ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ತೃತೀಯ ಬಿಎಸ್ಸಿಯ ವಿದ್ಯಾರ್ಥಿನಿ ತೀರ್ಥ ತಂಗಮ್ಮ, ಉಪಾಧ್ಯಕ್ಷರಾಗಿ ಮಾನಸ ಪಿ. ಪಿ, ಕಾರ್ಯದರ್ಶಿಯಾಗಿ ಪುಷ್ಯ ಪೂವಮ್ಮ ಕೆ.ಎನ್, ಜಂಟಿ ಕಾರ್ಯದರ್ಶಿಯಾಗಿ ದ್ವಿತೀಯ ಬಿ ಎ ವಿಭಾಗದ ಮಹೇಂದ್ರ ಎನ್. ವಿ ಹಾಗೂ ದ್ವಿತೀಯ ಬಿ ಎಚ್ ಆರ್ ಡಿ ಯ ಅಲೀನಾ ಜಸ್ಮ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ತೃತೀಯ ಬಿ ಎ ವಿಭಾಗದ ಅಭಿಷೇಕ್ ಎಂ.ಎಸ್ ಹಾಗೂ ಮಾನಸ ಬಿ.ಕೆ ಆಯ್ಕೆಯಾಗಿದ್ದಾರೆ. ಹಿಂದಿ ವಿಭಾಗದ ಮುಖ್ಯಸ್ಥರು ಹಾಗೂ ವಿದ್ಯಾರ್ಥಿ ಸಂಘದ ಸಂಚಾಲಕರಾದ ತಳವಾರ್ ಬಿ.ಎಚ್ ಅವರು ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಕಾಲೇಜು ಪ್ರಾಂಶುಪಾಲ ಮೇಜರ್ ಪ್ರೊ. ರಾಘವ ಬಿ. ಅವರ ನೇತೃತ್ವದಲ್ಲಿ ಅಧ್ಯಾಪಕರ ಸಹಕಾರದೊಂದಿಗೆ ಚುನಾವಣೆ ನಡೆಸಲಾಯಿತು. ತರಗತಿ ಪ್ರತಿನಿಧಿಗಳು ತಮ್ಮ ಮತಗಳನ್ನು ಮತಪೆಟ್ಟಿಗೆಗೆ ಹಾಕುವ ಮೂಲಕ ಕಾಲೇಜಿನ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಿದರು.…
ಮಡಿಕೇರಿ ನ.24 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ 33ನೇ ವರ್ಷದ ಕೊಡವ ನ್ಯಾಷನಲ್ ಡೇ ಮತ್ತು ಭಾರತೀಯ ಸಂವಿಧಾನ ದಿನದ ಆಚರಣೆ ನ.26 ರಂದು ಮಡಿಕೇರಿ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಂದು ಬೆಳಗ್ಗೆ 10.30 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಕೊಡವರ ಸಾಂವಿಧಾನಿಕ ಭದ್ರತೆಗಾಗಿ ಕೊಡವ ಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯ ಪ್ರಮುಖ ಬೇಡಿಕೆಯನ್ನು ಮುಂದಿಟ್ಟುಕೊಂಡು ಹಕ್ಕೊತ್ತಾಯ ಮಂಡಿಸಲಾಗುವುದು ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದ ದಿನವನ್ನು ಆಚರಿಸಲಾಗುವುದು ಎಂದು ಹೇಳಿದ್ದಾರೆ. ಕೊಡವ ಬುಡಕಟ್ಟಿನ ವಿಸ್ತಾರವಾದ ಭೂಮಿಯಾದ ಮರೆನಾಡ್, ಐವತ್ ನಾಡ್, ಪಾಕೇರಿ ನಾಡ್ ನಿಂದ ಸೂರ್ಲಬಿನಾಡ್ ವರೆಗೆ, ಬಡಿಗೇರಿನಾಡ್, ಮುತ್ತನಾಡ್, ತಾವುನಾಡ್ ನಿಂದ ಅರ್ಕೇರಿ ನಾಡ್ ವರೆಗೆ, ಬೇಂಗ್ ನಾಡ್, ಕುಯ್ಯಂಗೇರಿ ನಾಡ್ ನಿಂದ ಪತ್ಕಟ್ ನಾಡ್ ವರೆಗೆ, ಗಡಿನಾಡ್ ನಿಂದ ಕುರ್ಚಿನಾಡ್ ವರೆಗೆ, ಪಾಡಿನಾಡ್ ನಿಂದ ತೊಡನಾಡ್ ವರೆಗೆ, ಪೋರಮಲೆ ನಾಡ್,…
ಮಡಿಕೇರಿ ನ.23 : 2024 ರ ಜೂನ್, 21 ಕ್ಕೆ ಅವಧಿ ಪೂರ್ಣಗೊಳ್ಳಲಿರುವ ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಸಲು ಸಿದ್ಧತೆ ನಡೆಸಿದ್ದು, ಆ ನಿಟ್ಟಿನಲ್ಲಿ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಅವರು ಮಾತನಾಡಿ ಚುನಾವಣಾ ಆಯೋಗದ ನಿರ್ದೇಶನದಂತೆ ಈಗಾಗಲೇ ನ.6 ರ ವರೆಗೆ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಮೂನೆ-18 ಮತ್ತು 19 ರ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ನಿಯಮಾನುಸಾರ ಪರಿಶೀಲಿಸಿ ವಿಲೇವಾರಿ ಮಾಡಲಾಗಿದೆ ಎಂದು ಹೇಳಿದರು. ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯಲ್ಲಿ 2023 ನ.6 ಕ್ಕೆ 1395 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಇದರಲ್ಲಿ 992 ಅರ್ಜಿಗಳನ್ನು ಅಂಗೀಕರಿಸಲಾಗಿದೆ. 79 ಅರ್ಜಿಗಳು ವಿವಿಧ ಕಾರಣಗಳಿಂದ ತಿರಸ್ಕøತಗೊಂಡಿವೆ. 189 ಅರ್ಜಿಗಳನ್ನು ನೈರುತ್ಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಗೆ ವರ್ಗಾಯಿಸಲಾಗಿದೆ. 135 ಅರ್ಜಿಗಳನ್ನು ಬೇರೆ ಮತ ಕ್ಷೇತ್ರಕ್ಕೆ…
ಮಡಿಕೇರಿ ನ.23 : ಕೃಷಿಕರು ಸರ್ಕಾರದ ಸೌಲಭ್ಯವನ್ನು ಪಡೆಯಲು ಕಡ್ಡಾಯವಾಗಿ ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಾಯಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಕೋರಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು ಆಧಾರ್ ಕಾರ್ಡ್ ಜೊತೆಗೆ ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಾಯಿಸುವುದು ಕಡ್ಡಾಯವಾಗಿದೆ. ಆ ನಿಟ್ಟಿನಲ್ಲಿ ರೈತರು ಈ ಬಗ್ಗೆ ವಿಶೇಷ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಮನವಿ ಮಾಡಿದರು. ಜಿಲ್ಲೆಯಲ್ಲಿ 3,26,776 ಅದರಲ್ಲಿ 1,47,621 ಮಂದಿ ಫ್ರೂಟ್ಸ್ ತಂತ್ರಂಶದಲ್ಲಿ ಹೆಸರು ನೋಂದಾಯಿಸಿದ್ದಾರೆ. ಉಳಿದಂತೆ 1,29, 976 ಮಂದಿ ಫ್ರೂಟ್ಸ್ ತಂತ್ರಾಂಶದಡಿ ಹೆಸರು ನೋಂದಾಯಿಸಬೇಕಿದೆ. Farmer Registration and Unified Beneficiary Information System-fruits ಸರ್ಕಾರದ ವತಿಯಿಂದ ಅಭಿವೃದ್ದಿಗೊಳಿಸಲಾಗಿದ್ದು, ಸರ್ಕಾರದಿಂದ ಸವಲತ್ತುಗಳನ್ನು ಪಡೆಯಲು ಬಯಸುವ ಎಲ್ಲಾ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ನೊಂದಾಯಿಸಿಕೊಳ್ಳುವುದು ಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ರೈತರು ಜಮೀನಿಗೆ ಸಂಬಂಧಿಸಿದ ವಿವರಗಳನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಂಡು ಗುರುತಿನ ಸಂಖ್ಯೆ (ಎಫ್‍ಐಡಿ) ಪಡೆಯಬಹುದು ಎಂದು…






