ಲೇಖಕ: admin

ಮಡಿಕೇರಿ ನ.22 : ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಪೊ ನ್ನಂಪೇಟೆ ತಾಲ್ಲೂಕಿನ ಕಿರುಗೂರು ಗ್ರಾಮದಲ್ಲಿ ನಡೆದಿದೆ. ಕೋತೂರು ಗ್ರಾಮದ ನಿವಾಸಿ ಶಶಿ(23) ಮೃತ ದುರ್ದೈವಿಯಾಗಿದ್ದಾರೆ. ಬೋಸ್ ಮಂದಣ್ಣ ಎಂಬುವವರಿಗೆ ಸೇರಿದ ಕಾರು ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ. ಗಾಯಾಳು ಶಶಿಯನ್ನು ಗೋಣಿಕೊಪ್ಪ ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಪೊನ್ನಂಪೇಟೆ ಕಡೆಯಿಂದ ಬಾಳೆಲೆಗೆ ಹೋಗುತ್ತಿದ ಬೈಕ್ ಹಾಗೂ ಬಾಳೆಲೆಯಿಂದ ಪೊನ್ನಂಪೇಟೆ ಗೆ ಹೋಗುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿತು. ಸ್ಥಳಕ್ಕೆ ವಿರಾಜಪೇಟೆ ಡಿವೈಎಸ್ಪಿ ಆರ್.ಮೋಹನ್ ಕುಮಾರ್ ಹಾಗೂ ಪೊನ್ನಂಪೇಟೆ ಪೊಲೀಸ್ ಠಾಣಾಧಿಕಾರಿ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ವಿರಾಜಪೇಟೆ ನ.22 : ವಿರಾಜಪೇಟೆ ಮಾಜಿ ಸೈನಿಕರ ಸಂಘದ ವತಿಯಿಂದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು. ಶಾಸಕರ ಕಚೇರಿಗೆ ಭೇಟಿ ನೀಡಿದ ಸಂಘದ ಪದಾಧಿಕಾರಿಗಳು, ಶಾಲು ಹೊದಿಸಿ, ಸನ್ಮಾನಿಸಿ ಗೌರವಿಸಿದರು. ಈ ಹಿಂದೆ ಸರಕಾರ ಕೊಡಗಿನ ಮಾಜಿ ಸೈನಿಕರಿಗೆ ಜಾಗ ಮಂಜೂರು ಮಾಡಿದ್ದರೂ ಇದುವರೆಗು ಜಿಲ್ಲಾಧಿಕಾರಿಗಳು ಜಾಗವನ್ನು ಮಾಜಿ ಸೈನಿಕರಿಗೆ ಹಸ್ತಾಂತಿಸಿರುವುದಿಲ್ಲ. ಈ ಸಂಬಂಧ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಮಾಜಿ ಸೈನಿಕರು ಶಾಸಕರಿಗೆ ಮನವಿ ಸಲ್ಲಿಸಿದರು. ಸನ್ಮಾನ ಸ್ವಿಕರಿಸಿದ ಮಾತನಾಡಿದ ಶಾಸಕ ಪೊನ್ನಣ್ಣ, ಮಾಜಿ ಸೈನಿಕರಿಗೆ ಜಾಗದ ಬಗ್ಗೆ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಮೇ.ಜ. ಕಾರ್ಯಪ್ಪ, ಮೇ.ಚಿಂಗಪ್ಪ, ವಿರಾಜಪೇಟೆ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಚಪ್ಪಂಡ ಹರಿಶ್, ಸಂಘದ ಸದಸ್ಯರಾದ ಕೊಂಗಂಡ ಭೀಮಯ್ಯ, ಪಟ್ರಪಂಡ ಕರುಂಬಯ್ಯ ಹಾಗೂ ಸೋಮೇಶ್, ತೊರೇರ ರಾಜ ಪೂವಯ್ಯ, ಸುಬ್ಬಯ್ಯ, ಮತ್ತು ಟಿ,ಶೆಟ್ಟಿಗೇರಿ ಸಂಘದ ಆಡಳಿತ ಮಂಡಳಿ ಸದಸ್ಯರು ಮನವಿ ನೀಡುವ ಸಂದರ್ಭ ಹಾಜರಿದ್ದರು.

Read More

ಮಡಿಕೇರಿ ನ.22 : ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯದ ಪ್ರಯುಕ್ತ ನವೆಂಬರ್, 23 ರಂದು ಮಧ್ಯಾಹ್ನ 2.30 ಗಂಟೆಯ ನಂತರ ಶ್ರೀ ತಲಕಾವೇರಿ ದೇವಾಲಯದ ಪ್ರವೇಶ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ಸಹಕರಿಸಬೇಕೆಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ಕೋರಿದ್ದಾರೆ.

Read More

ಮಡಿಕೇರಿ ನ.22 : ಕೊಡಗು ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ವತಿಯಿಂದ ನ.23 ರಂದು  ನಿರಂತರ ಕಲಿಕಾ ಕಾಯಾ೯ಗಾರ ಮತ್ತು ಔಷಧಿ ಕ್ಷೇತ್ರದಲ್ಲಿನ ಪ್ರಸಕ್ತ ವಿದ್ಯಮಾನಗಳ ಕುರಿತಂತೆ ವಿಚಾರಗೋಷ್ಠಿ  ನಡೆಯಲಿದೆ. ಬೆಳಗ್ಗೆ 10.30 ಗಂಟೆಗೆ ಮಡಿಕೇರಿ ಹೊರವಲಯದಲ್ಲಿನ ಆಹನ್ ಹಿಲ್ ಕಾಟೇಜ್ ನಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು  ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ರಾಮರಾಜನ್ ಉದ್ಘಾಟಿಸಲಿದ್ದಾರೆ ಎಂದು ಸಂಘದ ಜಿಲ್ಲಾಧ್ಯಕ್ಷ ಅಂಬೆಕಲ್ ಜೀವನ್ ಕುಶಾಲಪ್ಪ ತಿಳಿಸಿದ್ದಾರೆ. ವಿಚಾರಗೋಷ್ಟಿಯಲ್ಲಿ ಮೈಸೂರು ವೖತ್ತದ ಉಪಔಷಧ ನಿಯಂತ್ರಕ ಬಿ.ಪಿ. ಅರುಣ್, ಕೊಡಗು ಜಿಲ್ಲೆಯ ಸಹಾಯಕ ಔಷಧ ನಿಯಂತ್ರಕ ಗುರುನಾಥ್ ಮಾಗಣಗೇರಿ, ಜಿಲ್ಲಾ ಕಾಮಿ೯ಕ ಅಧಿಕಾರಿ ಎಸ್.ಎಲ್.ಹಷ೯ವಧ೯ನ್, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಂಕಿತ ಅಧಿಕಾರಿ ಡಾ. ಅನಿಲ್ ಧವನ್, ಕೊಡಗು ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಆನಂದ್, ರಾಜ್ಯ ಔಷಧಿ ವ್ಯಾಪಾರಿಗಳ ಸಂಘದ ಕಾನೂನು ಸಲಹೆಗಾರಕೆ.ಹರೀಶ್ , ಸಂಘದ ಜಿಲ್ಲಾ ಗೌರವ ಕಾಯ೯ದಶಿ೯ ಡಿ.ಐ. ಪುರುಷೋತ್ತಮ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ಜೀವನ್ ಮಾಹಿತಿ ನೀಡಿದ್ದಾರೆ.

Read More

ಮಡಿಕೇರಿ ನ.22 : ನೆಲ್ಯಾಹುದಿಕೇರಿಯ ಶ್ರೀ ಮುತ್ತಪ್ಪ ದೇವಾಲಯದಲ್ಲಿ ನ.27 ರಂದು ಶ್ರೀ ಮುತ್ತಪ್ಪನ ಪುತ್ತರಿ ವೆಳ್ಳಾಟಂ ನಡೆಯಲಿದೆ. ಅಂದು ಸಂಜೆ 6 ಗಂಟೆಗೆ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಮುತ್ತಪ್ಪನ ಪುತ್ತರಿ ವೆಳ್ಳಾಟಂ ಜರುಗಲಿದ್ದು, ರಾತ್ರಿ 8.30ಕ್ಕೆ ಕದಿರು ತೆಗೆಯಲಾಗುವುದು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲದ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದೆ.

Read More

ಮಡಿಕೇರಿ ನ.22 : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 07 ಫಲಾನುಭವಿ ಆಧಾರಿತ ಯೋಜನೆಗಳನ್ನು ಸುವಿಧಾ ಯೋಜನೆ ಇವರಿಂದ ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಆನ್‍ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿರುತ್ತದೆ. ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಬಹುಮಾನ ಹಣ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ 07 ಯೋಜನೆಗಳಿಗೆ 2023-24ನೇ ಸಾಲಿಗೆ ವಿಕಲಚೇತನ ಫಲಾನುಭವಿಗಳು ಆನ್‍ಲೈನ್ ಮೂಲಕ https://sevasindhu.karnataka.gov.in/Sevasindhu/DepartmentServicesKannada ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಡಿ.15 ರವರೆಗೆ ಅವಕಾಶ ನೀಡಲಾಗಿದೆ. ಜಿಲ್ಲೆಯ ವಿಕಲಚೇತನರು ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ 03 ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧೋದ್ಧೇಶ ಪುನರ್ವಸತಿ ಕಾರ್ಯಕರ್ತರಾದ ಮಡಿಕೇರಿ ತಾಲ್ಲೂಕಿನ ರಾಜೇಶ್ 8073192914, ಸೋಮವಾರಪೇಟೆ ತಾಲ್ಲೂಕಿನ ಹರೀಶ್ ಟಿ.ಆರ್ 9008685129 ಹಾಗೂ ವಿರಾಜಪೇಟೆ ತಾಲ್ಲೂಕಿನ ಪ್ರಥನ್ ಕುಮಾರ್ ಸಿ.ಬಿ. 9900883654 ನ್ನು ಸಂಪರ್ಕಿಸುವಂತೆ ಅಥವಾ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯ ದೂರವಾಣಿ…

Read More

ಸುಂಟಿಕೊಪ್ಪ ನ.22 :  ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಟ್ಯಾಂಕ್‍ರ್‍ವೊಂದು ರಸ್ತೆ ಬದಿಯ ಹೊಟೇಲ್‍ವೊಂದಕ್ಕೆ ನುಗ್ಗಿರುವ ಘಟನೆ ಗದ್ದೆಹಳ್ಳದಲ್ಲಿ  ಸಂಭವಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕುಶಾಲನಗರ ಕಡೆಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಟ್ಯಾಂಕರೊಂದು ರಾತ್ರಿ 1 ಗಂಟೆಯ ಸುಮಾರಿಗೆ ಸುಂಟಿಕೊಪ್ಪ ಬಳಿಯ ಗದ್ದೆಹಳ್ಳದ ಮಸೀದಿ ಸಮೀಪದ, ಹಂಸ ಎಂಬವರಿಗೆ ಸೇರಿದ ಹೋಟೆಲ್‍ಗೆ ಡಿಕ್ಕಿಯಾಗಿದೆ. ಇದರಿಂದ ಹೋಟೆಲ್ ಮುಂಭಾಗ ಸೇರಿದಂತೆ, ಅದರ ಒತ್ತಿನಲ್ಲಿರುವ ಕೆ.ಕೆ. ಸೌಂಡ್ಸ್ ಶಾಮಿಯಾನ ಅಂಗಡಿಗೆ ಹಾನಿಯಾಗಿದೆ. ಈ ಸಂದರ್ಭ ಹೋಟೆಲ್ ಮತ್ತು ಸೌಂಡ್ಸ್ ಮಳಿಗೆಯಲ್ಲಿ ಯಾರು ಇರಲಿಲ್ಲವಾದ್ದರಿಂದ, ಸಂಭವನೀಯ ಭಾರೀ ಅನಾಹುತ ತಪ್ಪಿದೆ. ಘಟನೆಗೆ ಸಂಬಂಧಿಸಿದಂತೆ ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಮಡಿಕೇರಿ ನ.21 :  ಕನ್ನಡ ರಾಜ್ಯೋತ್ಸವದ ಅಂಗವಾಗಿ  ಬಳ್ಳಾರಿಯ  ಸ್ಮಿಯಾಕ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಕೊಡಮಾಡುವ  “ಕರ್ನಾಟಕ ಸಾಧಕ ರತ್ನ” ರಾಜ್ಯೋತ್ಸವ ಪ್ರಶಸ್ತಿಗೆ ಆರ್.ಕೆ.ಬಾಲಚಂದ್ರ  ಆಯ್ಕೆಯಾಗಿದ್ದಾರೆ.  ಆರ್.ಕೆ.ಬಾಲಚಂದ್ರ ಅವರು ಬ್ಯಾಂಕಿಂಗ್ ಕ್ಷೇತ್ರದಲ್ಲಿ , ಅನ್ಯ ರಾಜ್ಯದ ಕನ್ನಡೇತರರಿಗೆ ಕನ್ಮಡ ಕಲಿಸುವಿಕೆ, ರಾಜ್ಯಾದ್ಯಂತ ಉಚಿತವಾಗಿ ಬ್ಯಾಂಕಿಂಗ್ ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷೆಗೆ ನೀಡಿದ ತರಬೇತಿಯ ಸೇವೆ ಮತ್ತು ಶಿಕ್ಷಣ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಗೌರವಿಸಲಾಗುವುದು. ನ.26 ರಂದು ನಡೆಯಲಿರುವ ಸನ್ಮಾನ ಕಾರ್ಯಕ್ರಮದಲ್ಲಿ  ಪ್ರಶಸ್ತಿ  ಪ್ರದಾನ ಮಾಡಲಾಗುವುದು.   

Read More

ನಾಪೋಕ್ಲು ನ.21 : ಕೈಕಾಡು ಗ್ರಾಮ ನಿವಾಸಿ, ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದ ಪಿ.ಸಿ. ಅಪ್ಪಾಜಿ(ಪೇರಿಯಂಡ-81) ನಿಧನರಾಗಿದ್ದಾರೆ. ಇವರು ಪ್ರಖ್ಯಾತ ಕೊಡವ ಆಂದೊಳತ ಪಾಟ್ ಅನ್ನು ಬರೆದ ಪೇರಿಯಂಡ ದಿವಂಗತ ಚೆಂಗಪ್ಪನವರ ಕಿರಿಯ ಪುತ್ರ. ಪ್ರಾರಂಭದಲ್ಲಿ ಪತ್ರಕರ್ತರಾಗಿ ಕೊಡಗು ದೈನಿಕ (ಕೊಡಗು ಪ್ರೆಸ್ಸ್) ದಲ್ಲಿ ತಮ್ಮ ವೃತ್ತಿ ಜೀವನವನ್ನು ಪ್ರಾರಂಭಿಸಿದ ಇವರು ತದನಂತರ ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಕೆಲಸ ಮಾಡಿ ಅoತಿಮವಾಗಿ ದಿ. ಮೈಸೂರ್ ಪ್ರಿಂಟರ್ಸ್ ಲಿಮಿಟೆಡ್ ನ ಪ್ರಜಾವಾಣಿ ಪತ್ರಿಕೆಯ ಕ್ರೀಡಾ ವಿಭಾಗದಲ್ಲಿ, ವಿಶೇಷವಾಗಿ ಕುದುರೆ ಓಟದ ಬರವಣಿಗೆಗಾರರಾಗಿ ಜನಮನ್ನಣೆ ಗಳಿಸಿದ್ದರು. ಇವರ ಅಂತ್ಯಕ್ರಿಯು ನ.22 ರಂದು ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆಯ ಸ್ವಂತ ನಿವಾಸದಲ್ಲಿ ಜರುಗಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ ನ.21 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ನ.26 ರಂದು ನಡೆಯುವ 33 ನೇ ಕೊಡವ ನ್ಯಾಷನಲ್ ಡೇ ಯಶಸ್ಸಿಗಾಗಿ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಹಾಗೂ ಪ್ರಮುಖರು ದೇವಟ್ ಪರಂಬುವಿನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕೊಡವ ನರಮೇಧದ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ ಪ್ರಮುಖರು ಗಾಳಿಯಲ್ಲಿ ಗುಂಡು ಹಾರಿಸಿ ಹಿರಿಯರನ್ನು ಸ್ಮರಿಸಿದರು. ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಗಾಗಿ ನಿರಂತರ ಹೋರಾಟಗಳನ್ನು ನಡೆಸಿಕೊಂಡು ಬರಲಾಗುತ್ತಿದ್ದು, ಕೊಡವ ನ್ಯಾಷನಲ್ ಡೇ ಸಂದರ್ಭ ಮತ್ತೊಮ್ಮೆ ಕೊಡವರ ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದು. ಅಂದು ಭಾರತೀಯ ಸಂವಿಧಾನದ ದಿನವನ್ನು ಕೂಡ ಸಿಎನ್‍ಸಿ ವತಿಯಿಂದ ಆಚರಿಸಲಾಗುವುದು ಎಂದು ನಾಚಪ್ಪ ಹೇಳಿದರು. ಪುತ್ತರಿ ಹಬ್ಬ ಸರ್ವರಿಗೂ ಧಾನ್ಯ, ಸಂಪತ್ತು, ಪ್ರಶಾಂತತೆ ಮತ್ತು ಸಮೃದ್ಧಿಯನ್ನು ತರಲಿ ಎಂದು ಹಾರೈಸಿದರು. ಸಿಎನ್‍ಸಿಯ ಸದಸ್ಯರಾದ ಕಲಿಯಂಡ ಪ್ರಕಾಶ್, ಅಲ್ಮಂಡ ಜೈ, ಪಟ್ಟಮಾಡ ಕುಶ, ಅರೆಯಡ ಗಿರೀಶ್, ಮಂದಪಂಡ ಮನೋಜ್ ಮತ್ತಿತರರು ವಿಶೇಷ ಪ್ರಾರ್ಥನೆ ಸಂದರ್ಭ ಹಾಜರಿದ್ದರು.

Read More