ಲೇಖಕ: admin

ಮಡಿಕೇರಿ ಜ.25 NEWS DESK :  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆ ಸಮಾರಂಭವು ಜನವರಿ, 28 ರಂದು ಬೆಳಗ್ಗೆ 11 ಗಂಟೆಗೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆ ಬಳಿ ಗೌರವ ಸಮರ್ಪಣೆ ಬಳಿಕ ನಗರದ ಗಾಂಧಿ ಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಏರ್ ಮಾರ್ಷಲ್ ಕೆ.ಸಿ.ಕಾರ್ಯಪ್ಪ(ನಿ), ಸೈನಿಕರ ಸಂಘದ ಮಾಜಿ ಅಧ್ಯಕ್ಷರಾದ ಜನರಲ್ ಬಿ.ಎ.ಕಾರ್ಯಪ್ಪ(ನಿ), ಕೂಡಿಗೆ ಸೈನಿಕ ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಅಮರ್‍ಜಿತ್ ಸಿಂಗ್, ಎನ್‍ಸಿಸಿ ಕಮಾಂಡಿಂಗ್ ಅಧಿಕಾರಿ ಕರ್ನಲ್…

Read More

ಮಡಿಕೇರಿ ಜ.25 NEWS DESK : ಗ್ಯಾರಂಟಿಗಳ ಜಾರಿಯಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಪ್ರಧಾನಿ ನರೇಂದ್ರಮೋದಿ ಟೀಕಿಸಿದ್ದರು, ಆದರೆ ನಾವು ನೀಡಿದ ಭರವಸೆಯಂತೆ ಗ್ಯಾರಂಟಿಗಳನ್ನು ಜಾರಿ ಮಾಡಿದ್ದು, ರಾಜ್ಯ ದಿವಾಳಿಯಾಗಿಲ್ಲ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಹಣ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ. ವಿರಾಜಪೇಟೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಬಿಜೆಪಿ, ಪ್ರಧಾನಿ ಮೋದಿ ಹಾಗೂ ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ಧಾಳಿ ನಡೆಸಿದರು. ಕಾಂಗ್ರೆಸ್ ಪಕ್ಷ 5 ಗ್ಯಾರಂಟಿಗಳನ್ನು ಘೋಷಿಸಿದಾಗ ರಾಜಸ್ಥಾನದಲ್ಲಿ ಪ್ರಧಾನಿ ಮೋದಿ ಅವರು ರಾಜ್ಯ ದಿವಾಳಿಯಾಗುತ್ತದೆ ಎಂದಿದ್ದರು. ನಾವು ಗ್ಯಾರಂಟಿಗಳನ್ನು ಜಾರಿ ಮಾಡಿ ಯಶಸ್ವಿಯಾಗಿದ್ದೇವೆ, ಈಗ ರಾಜ್ಯ ದಿವಾಳಿಯಾಯಿತೇ. ಯುವನಿಧಿ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದೆ. ರಾಜ್ಯದ ಏಳು ಕೋಟಿ ಜನರಲ್ಲಿ ಅರ್ಧದಷ್ಟು ಇರುವ ಮಹಿಳೆಯರು ಶಕ್ತಿ ಯೋಜನೆ ಮೂಲಕ ಬಸ್ ಗಳಲ್ಲಿ ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಇದನ್ನೆಲ್ಲ ಬಿಜೆಪಿಯವರು ಮಾಡಿದ್ದರೇ ಎಂದು ಪ್ರಶ್ನಿಸಿದರು. ನಾವು ಜನಪರ ಸರ್ಕಾರ ನಡೆಸುತ್ತಾ…

Read More

ಮಡಿಕೇರಿ ಜ.25  NEWS DESK : ವಿರಾಜಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಬಳಿಕ ಶಾಸಕ ಪೊನ್ನಣ್ಣ ಅವರು ಕೊಡಗಿನ ವಿಶೇಷ ತಿನಿಸುಗಳನ್ನು ಮುಖ್ಯಮಂತ್ರಿಗಳಿಗೆ ತಾವೇ ಸ್ವತಃ ಬಡಿಸಿದರು. ಇದಕ್ಕೂ ಮೊದಲು ಹೆಲಿಪ್ಯಾಡ್ ನಿಂದ ಶಾಸಕ ಪೊನ್ನಣ್ಣ ಅವರು ಸ್ವತಃ ಕಾರು ಡ್ರೈವ್ ಮಾಡಿ ಸಿಎಂ ಸಿದ್ದರಾಮಯ್ಯ ಅವರನ್ನು ಕರೆದುಕೊಂಡು ಬಂದರು.

Read More

ಮಡಿಕೇರಿ ಜ.25 NEWS DESK : ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ತೊರೆದು ಮರಳಿ ಬಿಜೆಪಿ ಸೇರುವ ವಿಚಾರ ತನ್ನ ಗಮನಕ್ಕೆ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ. ವೀರಾಜಪೇಟೆ ಸಮೀಪದ ಬಿಟ್ಟಂಗಾಲದ ಕೂರ್ಗ್ ಗಾಲ್ಫ್ ಲಿಂಕ್ ಹೆಲಿಪ್ಯಾಡ್’ನಲ್ಲಿ ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು. ಬಿಜೆಪಿಯಲ್ಲಿದ್ದ ಜಗದೀಶ್ ಶೆಟ್ಟರ್ ಅವರಿಗೆ ಆ ಪಕ್ಷದವರು ಟಿಕೆಟ್ ನೀಡದೆ ಅವಮಾನ ಮಾಡಿದ್ದಾರೆ ಎಂದು ಕಾಂಗ್ರೆಸ್’ಗೆ ಬಂದಿದ್ದರು. ಕಳೆದ ಚುನಾವಣೆಯಲ್ಲಿ ಅವರಿಗೆ ಪಕ್ಷದಿಂದ ಟಿಕೆಟ್ ನೀಡಲಾಯಿತಾದರೂ, ಅವರು ತಮ್ಮ ಕ್ಷೇತ್ರದಲ್ಲಿ ಸೋಲು ಅನುಭವಿಸಿದರು. ಆದರೂ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡುವುದರೊಂದಿಗೆ ಕಾಂಗ್ರೆಸ್ ಪಕ್ಷ ಅವರನ್ನು ಗೌರವಯುತವಾಗಿ ನಡೆಸಿಕೊಂಡಿದೆ, ಅವರಿಗೆ ಯಾವುದೇ ಅವಮಾನ ಮಾಡಿಲ್ಲ. ಬಿಜೆಪಿ ತನಗೆ ಅವಮಾನ ಮಾಡಿದ್ದು, ಯಾವುದೇ ಕಾರಣಕ್ಕೂ ತಾನು ಮತ್ತೆ ಬಿಜೆಪಿಗೆ ಮರಳುವುದಿಲ್ಲ ಎಂದು ಶೆಟ್ಟರ್ ತಿಳಿಸಿದ್ದರು. ಅದಾದ ಬಳಿಕ ಅವರು ನನ್ನನ್ನು ಭೇಟಿ ಮಾಡಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ::: ಪರಿಶೀಲನೆ ::: ಕಾಫಿ ಬೆಳೆಗಾರರ…

Read More

ಕೊಡಗು (ವಿರಾಜಪೇಟೆ) ಜ 25 NEWS DESK :  ಬಿಜೆಪಿ ಭಾರತದಲ್ಲಿ, ಯಾವುದಾದರೂ ರಾಜ್ಯದಲ್ಲಿ ಒಂದೇ ಒಂದು ಅಣೆಕಟ್ಟು ಕಟ್ಟಿಸಿ ರೈತರಿಗೆ, ಕೃಷಿಗೆ ನೆರವಾದ ಒಂದೇ ಒಂದು ಉದಾಹರಣೆ ಇದ್ದರೆ ನಾನು ಬಿಜೆಪಿ ವಿರುದ್ಧ ಮಾತಾಡುವುದನ್ನೇ ನಿಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇರ ಸವಾಲು ಹಾಕಿದರು. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ನೆರೆದಿದ್ದ ಬೃಹತ್ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದರು. ಕಾಂಗ್ರೆಸ್ ಈ ದೇಶಕ್ಕೆ ಏನೂ ಮಾಡಿಲ್ಲ ಎಂದು ಬಿಜೆಪಿ ಬೊಬ್ಬೆ ಹೊಡೆಯುತ್ತದೆ. ಇಡೀ ದೇಶದಲ್ಲಿರುವ ಅಣೆಕಟ್ಟುಗಳನ್ನು ಕಟ್ಟಿಸಿದ್ದು ಕಾಂಗ್ರೆಸ್ ಪಕ್ಷ. ಬಿಜೆಪಿ ನೆಪಕ್ಕಾದರೂ ಒಂದೂ ಅಣೆಕಟ್ಟು ಕಟ್ಟಿಸಲಿಲ್ಲ. ಕಟ್ಟಿಸಿದ ಉದಾಹರಣೆ ಇದ್ದರೆ ಹೇಳಿ ಎಂದು ಸವಾಲು ಹಾಕಿದರು. 1925 ರಲ್ಲೇ ಆರ್‌ಎಸ್‌ಎಸ್ ಹುಟ್ಟಿದರೂ ಅಪ್ಪಿ ತಪ್ಪಿಯೂ ಭಾರತ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ.‌ ಭಾರತೀಯರನ್ನು ಬ್ರಿಟಿಷರ ದಾಸ್ಯದಿಂದ ಬಿಡುಗಡೆಗೊಳಿಸಿದ್ದು , ಇದಕ್ಕಾಗಿ ಹೋರಟ ಮಾಡಿ ಪ್ರಾಣ ತ್ಯಾಗ ಮಾಡಿದ, ಜೈಲು ಸೇರಿದ ಇತಿಹಾಸ, ಚರಿತ್ರೆ ಇರುವುದು ಕಾಂಗ್ರೆಸ್ಸಿಗೆ…

Read More

ಮಡಿಕೇರಿ ಜ.25 NEWS DESK : ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಗೆ ಕೊಡಗು ಜಿಲ್ಲೆಗೆ  ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರನ್ನು ವಿರಾಜಪೇಟೆಯ ಪಂಜರುಪೇಟೆಯಲ್ಲಿ ಸಾರ್ವಜನಿಕರು ಹೂಮಳೆಗರೆದು ಜಯಘೋಷಗಳೊಂದಿಗೆ ಸ್ವಾಗತಿಸಿದರು. ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರು ತಮ್ಮ ಕಾರಿನಲ್ಲಿ ಸ್ವತಃ ತಾವೇ ಚಾಲನೆ ಮಾಡಿಕೊಂಡು ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ  ಅವರನ್ನು ಕರೆ ತಂದರು.

Read More

ಮಡಿಕೇರಿ ಜ.25 : NEWS DESK ಕಾವೇರಿ ತುಲಾಸಂಕ್ರಮಣದ ಕಾವೇರಿ ತೀರ್ಥೋದ್ಭವದ ದಿನ ರಾಜ್ಯದಲ್ಲಿ ಸಾರ್ವತ್ರಿಕ ರಜೆ ಘೋಷಣೆ ಮಾಡಬೇಕೆಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ವಿರಾಜಪೇಟೆಯಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕರು, ಕರ್ನಾಟಕ ರಾಜ್ಯದ ಬಹುತೇಕ ಭಾಗ ಕೃಷಿ ಕಾರ್ಯಕ್ಕಾಗಿ ಕಾವೇರಿ ನದಿಯನ್ನೇ ಅವಲಂಬಿಸಿದೆ. ಕಾವೇರಿ ತಾಯಿ ತೀರ್ಥರೂಪಿಣಿಯಾಗಿ ದರ್ಶನ ನೀಡುವ ದಿನ ರಜೆ ನೀಡುವುದು ಸೂಕ್ತ ಎಂದರು. ಕಾವೇರಿ ತೀರ್ಥೋದ್ಭವದ ಆಚರಣೆಗೆ ಹೆಚ್ಚಿನ ಅನುದಾನ ನೀಡಬೇಕೆಂದು ಮನವಿ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಬಡವರ, ದೀನ ದಲಿತರ, ಅಲ್ಪಸಂಖ್ಯಾತರ, ಕಾರ್ಮಿಕರ ಮತ್ತು ಪ್ರತಿಯೊಂದು ವರ್ಗದ ಜನರ ಏಳಿಗೆಗಾಗಿ ಶ್ರಮಿಸುತ್ತಿರುವ ಸರ್ಕಾರವಾಗಿದೆ ಎಂದು ಪೊನ್ನಣ್ಣ ಹೇಳಿದರು.

Read More

ಮಡಿಕೇರಿ ಜ.25  NEWS DESK :  ವಿರಾಜಪೇಟೆ ತಾಲ್ಲೂಕಿನ ಕೂರ್ಗ್ ಗಾಲ್ಫ್ ಲಿಂಕ್ಸ್ ಹೆಲಿಪ್ಯಾಡ್‍ಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಿದ್ದು,  ಜಿಲ್ಲಾಡಳಿತ, ಕೊಡಗು ಜಿಲ್ಲಾ ಕಾಂಗ್ರೆಸ್, ಉಸ್ತುವಾರಿ ಸಚಿವ ಬೋಸರಾಜು, ಶಾಸಕರಾದ ಎ.ಎಸ್.ಪೊನ್ನಣ್ಣ, ಡಾ.ಮಂಥರ್ ಗೌಡ ಪುಷ್ಪ ಗುಚ್ಚ ನೀಡಿ ಭವ್ಯ ಸ್ವಾಗತ ಕೋರಿದರು.

Read More

ಮಡಿಕೇರಿ ಜ.25  NEWS DESK :  ಕಾಡಾನೆ ದಾಳಿಯಿಂದ ಕಾರ್ಮಿಕ ಮಹಿಳೆ ಮೃತಪಟ್ಟಿರುವ ಘಟನೆ ಅಮ್ಮತ್ತಿ ಸಮೀಪದ ಹೊಸೂರು ಬೆಟ್ಟಗೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಬೇಬಿ (52) ಮೃತ ದುರ್ದೈವಿ. ತೋಟದಲ್ಲಿ ಕಾಫಿ ಕೊಯ್ಲು ಕೆಲಸ ಮುಗಿಸಿಕೊಂಡು ಸಂಜೆ ಮರುಳುತ್ತಿದ್ದ ಸಂದರ್ಭ ಕಾಡಾನೆ ದಾಳಿ ನಡೆಸಿದೆ. ಇದರ ಪರಿಣಾಮ ಹೊಟ್ಟೆ ಹಾಗೂ ಸೊಂಟಕ್ಕೆ ತೀವ್ರ ಗಾಯಗಳಾಗಿ ಬೇಬಿ ಸ್ಥಳದಲ್ಲೇ ಸಾವನ್ನಪ್ಪಿದರು. ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಹಾಗೂ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಕಾರ್ಮಿಕ ಮುಖಂಡ ಮಹದೇವ್ ಮಾತನಾಡಿ, ಬೆಟ್ಟಗೇರಿ ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಕಾರ್ಮಿಕರು ಕೆಲಸಕ್ಕೆ ತೆರಳಲು ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ತಕ್ಷಣ ಕಾಡಾನೆ ಹಾವಳಿಯನ್ನು ತಡೆಗಟ್ಟಲು ಶಾಶ್ವತ ಯೋಜನೆಯನ್ನು ರೂಪಿಸಬೇಕೆಂದು ಒತ್ತಾಯಿಸಿದರು. ಶಾಸಕ ಭೇಟಿ :: ಸ್ಥಳಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು. ಪರಿಹಾರವನ್ನು ಕೂಡಲೇ…

Read More