ಲೇಖಕ: admin

ವಿರಾಜಪೇಟೆ ಜ.24 NEWS DESK :  ಶ್ರೀ ರಾಮನ ಭಕ್ತನಾಗಿರುವ ಶ್ರೀ ಆಂಜನೇಯ ನ ಪಾದ ಸ್ಪರ್ಶದ ಪುಣ್ಯ ಸ್ಥಾನವಾಗಿರುವ ಮಾಕುಟ್ಟ ಅರಣ್ಯ ಪ್ರದೇಶದ ಹನುಮಾನ್ ಪಾರ ದೇವಾಲಯದಲ್ಲಿ ಶ್ರೀರಾಮೋತ್ಸವ ಅಂಗವಾಗಿ ಸಂಕಲ್ಪ ಪೂಜೆ ನೆರವೇರಿತು. ರಾಮೋತ್ಸವ ಅಂಗವಾಗಿ ಗ್ರಾಮಸ್ಥರು, ರಾಮ ಭಕ್ತರು ಸ್ಥಳಕ್ಕೆ ಆಗಮಿಸಿ ಸಂಕಲ್ಪ ಪೂಜೆ ಸಲ್ಲಿಸಿದರು. ಶ್ರೀ ರಾಮನ ಪ್ರಾಣ ಪ್ರತಿಷ್ಟೆ, ದೇಗುಲ ಲೋಕಾರ್ಪಣೆ ವೇಳೆ ಸರ್ವರಿಗೂ ಒಳಿತಾಗಲಿ ಎಂದು ಸಂಕಲ್ಪ ಮಾಡಲಾಯಿತು. ಈ ಸಂಧರ್ಭದಲ್ಲಿ ಪ್ರಮುಖರಾದ ಚುಪ್ಪ ನಾಗರಾಜ್, ಟಿ.ಅರ್.ಗಣೇಶ್, ದೇಗುಲ ಅರ್ಚಕ ಸುಕುಮಾರ್, ಅಯ್ಯಪ್ಪ ಭಜನಾ ಮಂದಿರದ ಅದ್ಯಕ್ಷ ಮಹೇಶ್,ಶಿವಪ್ಪ, ಉಮೇಶ್, ತೀರ್ಥ ಕುಮಾರ್,ಹರೀಶ್ ಕುಟ್ಟಿ,ಬಿ,ಎಂ. ಗಿರೀಶ್, ದೇವಾ ದಾಸ್ ಮತ್ತು ಗ್ರಾಮಸ್ಥರು ಹಾಜರಿದ್ದರು. ಇತಿಹಾಸ ::  ಮೆದುಡಿ ಪಾರ ಅಥವಾ ಹನುಮಾನ್ ಪಾರ “ಬೃಹತ್ ಕಲ್ಲು” ಎಂಬ ಅರ್ಥ ಕಲ್ಪಿಸಲಾಗುತ್ತದೆ. ಬೆಟ್ಟದಂತಿರುವ ಬೃಹತ್ ಕಲ್ಲಿನ ಮೇಲೆ ಶ್ರೀ ಆಂಜನೇಯ ಸ್ವಾಮಿ ಪಾದ ಹಾಗೂ ಬಾಲ ಎಳೆದುಕೊಂಡು ಹೋಗಿರುವ ಕುರುಹುಗಳು ಇಂದಿಗೂ ಕಾಣಸಿಗುತ್ತದೆ.ರಸ್ತೆಯ ಅಂಚಿನಿಂದ…

Read More

ವಿರಾಜಪೇಟೆ ಜ.24 NEWS DESK : ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಎಡೂರು ಗ್ರಾಮದಲ್ಲಿ  ಶ್ರೀ ಕಲ್ಲುರ್ಟಿ ಮತ್ತು ಸ್ವಾಮಿ ಕೊರಗಜ್ಜ ಹಾಗೂ ಇತರ ದೈವದ ವಾರ್ಷಿಕ ಕೋಲವು ಶ್ರದ್ಧಾಭಕ್ತಿಯಿಂದ ಜರುಗಿತು. ಗ್ರಾಮದ ಶ್ರೀ ಕಲ್ಲುರ್ಟಿ ಮತ್ತು ಕೊರಗಜ್ಜ ದೈವ ಸ್ಥಾನದಲ್ಲಿ  ಎರಡು ದಿನಗಳ ಕಾಲ ನಡೆದ ದೈವ ಸೇವೆಗಳಲ್ಲಿ ಗಣಪತಿ ಹೋಮದೊಂದಿಗೆ ಆರಂಭವಾದ ವಾರ್ಷಿಕ ಉತ್ಸವವು ನಾಗ ತಂಬಿಲ ಸೇವೆ, ಸತ್ಯನಾರಾಯಣ ಪೂಜೆ, ಜೋಡಿ ಕಲ್ಲುರ್ಟಿ, ಪಾಷಣಮೂರ್ತಿ ದೈವಗಳ ಕೋಲಗಳು, ಗುಳಿಗ, ಮಂತ್ರ ದೇವತೆ, ಅಣ್ಣಪ್ಪ, ಪಂಜುರ್ಲಿ ಮತ್ತು ಸ್ವಾಮಿ ಕೊರಗಜ್ಜ ದೈವಗಳ ನೇಮೋತ್ಸವವು ಜರುಗಿತು. ದೈವಗಳ ನೇಮೋತ್ಸವದ ಸಂಧರ್ಭದಲ್ಲಿ ಎಡೂರು, ಅಮ್ಮತ್ತಿ, ಕಣ್ಣಂಗಾಲ ಗ್ರಾಮಗಳು ಸೇರಿದಂತೆ ವಿವಿಧ ಗ್ರಾಮಗಳಿಂದ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಂಡಿದ್ದರು. ನೆರೆದಿದ್ದ ಭಕ್ತಾಧಿಗಳಿಗೆ ಉತ್ಸವ ಸಮಿತಿ ವತಿಯಿಂದ ಎರಡು ದಿನಗಳ ಹಗಲು ಮತ್ತು ರಾತ್ರಿ ಅನ್ನಸಂತರ್ಪಣೆ ಸೇವೆ ನಡೆಯಿತು. ದೇವಾಲಯದ ಪ್ರಮುಖರಾದ ಲವನ್ ಪೂಜಾರಿ ಮತ್ತು ದೈವ ನರ್ತಕರು, ಹಾಗೂ ದೇಗುಲದ ಉತ್ಸವ ಸಮಿತಿಯ ಸದಸ್ಯರು…

Read More

ಮಡಿಕೇರಿ ಜ.24 : ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಜ.25 ರಂದು ಸಂಜೆ 4 ಗಂಟೆಯಿಂದ “ಸಾಮೂಹಿಕ ಸತ್ಯನಾರಾಯಣ” ಪೂಜೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯುವ “ಸಾಮೂಹಿಕ ಸತ್ಯನಾರಾಯಣ” ಪೂಜೆಯಲ್ಲಿ ಭಾಗವಹಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ. ಚಂದ್ರಶೇಖರ್ ಕೋರಿದ್ದಾರೆ.

Read More

ಮಡಿಕೇರಿ ಜ.24 NEWS DESK : 2022-23 ನೇ ಸಾಲಿನ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಜ.28 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಮಡಿಕೇರಿ ನಗರದ ಶಾಲೆ, ಕಾಲೇಜುಗಳಲ್ಲಿ ನಡೆಯಲಿರುವ ಲಿಖಿತ ಪರೀಕ್ಷೆಯ ಸಂಬಂಧ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದೆ. ಪುರುಷ ಮತ್ತು ತೃತೀಯ ಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‍ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‍ಗಳನ್ನು ಧರಿಸುವುದು, ಜಿಪ್ ಪಾಕೆಟ್‍ಗಳು, ದೊಡ್ಡ ಬಟನ್‍ಗಳು ಇರುವ ಶರ್ಟ್‍ಗಳನ್ನು ಧರಿಸತಕ್ಕದಲ್ಲ. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‍ಗಳನ್ನು ಧರಿಸಬಾರದು. ಪರೀಕ್ಷಾ ಕೇಂದ್ರದೊಳಗೆ ಶೂಗಳನ್ನು ನಿಷೇಧಿಸಲಾಗಿದ್ದು, ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸುವುದು. ಕುತ್ತಿಗೆ ಸುತ್ತ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ ಎಂದು ಪೊಲೀಸ್ ಅಧೀಕ್ಷಕರಾದ ಕೆ.ರಾಮರಾಜನ್ ತಿಳಿಸಿದ್ದಾರೆ.

Read More

ಮಡಿಕೇರಿ ಜ.24 NEWS DESK : ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆಯು ಜನವರಿ, 25 ರಂದು ಬೆಳಗ್ಗೆ 10 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ, ವಿವಿದ್ದೋದ್ದೇಶ ಸಭಾಂಗಣದಲ್ಲಿ ನಡೆಯಲಿದೆ. ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಸಿ.ಶ್ಯಾಮ್ ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ಇತರರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಜ.24 NEWS DESK : ಗ್ರಾಮ ಪಂಚಾಯ್ತಿ ನೌಕರರಿಗೆ ಕನಿಷ್ಟ ವೇತನ ನಿಗಧಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾ.ಪಂ ನೌಕರರ ಸಂಘ ಕೊಡಗು ಜಿಲ್ಲಾ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಂಘದ ಪದಾಧಿಕಾರಿಗಳು ಹಾಗೂ ಗ್ರಾ.ಪಂ ನೌಕರರು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು. ಈ ಸಂದರ್ಭ ಸಮಿತಿ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಮಾತನಾಡಿ, ಗ್ರಾ.ಪಂ ಗಳಲ್ಲಿ ಕಾರ್ಯನಿರ್ವಹಿಸುವ ನೌಕರರಿಗೆ 31 ಸಾವಿರ ರೂ.ಗಳನ್ನು ಕನಿಷ್ಟ ವೇತನವಾಗಿ ನಿಗದಿಪಡಿಸಬೇಕೆನ್ನುವುದು ತಮ್ಮ ಪ್ರಮುಖ ಬೇಡಿಕೆಯಾಗಿದೆ. ಇದರೊಂದಿಗೆ ನಿವೃತ್ತ ಪಂಚಾಯ್ತಿ ನೌಕರರ ಬದುಕಿಗೆ ಆರ್ಥಿಕ ಸ್ಥಿರತೆ ನೀಡಲು 6 ಸಾವಿರ ರೂ. ಪಿಂಚಣಿ ನೀಡಬೇಕು. ಅನಾರೋಗ್ಯಕ್ಕೆ ಒಳಗಾದ ನೌಕರರಿಗೆ ಆಸ್ಪತ್ರೆ ವೆಚ್ಚವನ್ನು ಭರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಪಂಚಾಯ್ತಿಗಳಿಗೆ ನೌಕರರನ್ನು ಗುತ್ತಿಗೆ ಮತ್ತು ಹೊರ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡುವ ಪದ್ಧತಿಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು. 2023ರ ನ.18 ರಂದು ಸರ್ಕಾರ…

Read More