ಮಡಿಕೇರಿ ಜ.24 NEWS DESK : ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ರೈತ ವಿರೋಧಿ ನೀತಿಗಳನ್ನು ಪ್ರತಿರೋಧಿಸಿ, ದುಡಿಯುವ ಜನಸಮುದಾಯದ ಸಮಸ್ಯೆಗಳನ್ನು ಪರಿಹರಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಫೆ.1 ರಂದು ಬೆಂಗಳೂರಿನಲ್ಲಿ ಬಜೆಟ್ ಪೂರ್ವ ಜನಾಗ್ರಹ ಬೃಹತ್ ಪ್ರತಿಭಟನೆ ಮತ್ತು ಬಹಿರಂಗ ಅಧಿವೇಶನ ನಡೆಯಲಿದೆ ಎಂದು ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್‍ನ ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷ ಹೆಚ್.ಎಂ.ಸೋಮಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10.30 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಕಾರ್ಮಿಕರ ಕನಿಷ್ಠ ವೇತನ, ಗೌರವಧನದ ಹೆಚ್ಚಳಕ್ಕಾಗಿ ಬಿಸಿಯೂಟ, ಅಂಗನವಾಡಿ, ಆಶಾ, ಕೈಗಾರಿಕಾ, ಕಟ್ಟಡ, ಸಾರಿಗೆ, ಬೀಡಿ, ಪ್ಲಾಂಟೇಷನ್, ಬ್ಯಾಂಕ್-ವಿಮಾ, ಗಿಗ್, ಗಣಿಕಾರ್ಮಿರಿಂದ ಪ್ರತಿಭಟನೆ ನಡೆಯಲಿದೆ ಎಂದು ಮಾಹಿತಿ ನೀಡಿದರು. ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಪ್ರಿಯಾಂಕ ಗಾಂಧಿಯವರು ಘೋಷಿಸಿದ್ದ 6ನೇ ಗ್ಯಾರಂಟಿಯಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ 15 ಸಾವಿರ ಹಾಗೂ ಸಹಾಯಕಿಯರಿಗೆ ರೂ.10 ಸಾವಿರ, ಶಾಲೆಗಳಲ್ಲಿ ಬಿಸಿಯೂಟ ಕಾರ್ಯಕರ್ತೆಯರಿಗೆ ರೂ.10 ಸಾವಿರ ಮತ್ತು ಆಶಾ ಕಾರ್ಯಕರ್ತೆಯರಿಗೆ…
ಲೇಖಕ: admin
ಮಡಿಕೇರಿ ಜ.24 : ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದಲ್ಲಿ ಪ್ರಸಕ್ತ ಸಾಲಿನಿಂದ ಏಕಕಾಲಕ್ಕೆ ‘ದ್ವಿ ಪದವಿ’ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆಯೆಂದು ವಿವಿಯ ಕುಲಪತಿಗಳಾದ ಪ್ರೊ.ಶರಣಪ್ಪ ವಿ. ಹಲಸೆ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಯುಜಿಸಿ ನಿಯಮಾವಳಿಗಳಂತೆ ಪೂರ್ಣಾವಧಿಯಲ್ಲಿ (ರೆಗ್ಯೂಲರ್ ತರಗತಿ) ಯಾವುದೇ ವಿಶ್ವ ವಿದ್ಯಾನಿಲಯದಲ್ಲಿ ಒಂದು ಕೋರ್ಸ್ ಮಾಡುತ್ತಿರುವವರು ಮುಕ್ತ ವಿವಿಯಲ್ಲಿ ಮತ್ತೊಂದು ಕೋರ್ಸ್‍ನ್ನು ಏಕಕಾಲದಲ್ಲಿ ಮಾಡಲು ಅವಕಾಶವನ್ನು ಒದಗಿಸಲಾಗಿದೆ.ಈ ಸದವಕಾಶವನ್ನು ವಿದ್ಯಾರ್ಥಿಗಳು ಬಳಸಿಕೊಳ್ಳುವಂತೆ ಕೋರಿಕೊಂಡರು. ಮುಕ್ತ ವಿವಿಗೆ ಎ+ ಮಾನ್ಯತೆ- ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯಕ್ಕೆ ನ್ಯಾಕ್‍ನಿಂದ ಎ+ ಮಾನ್ಯತೆ ದೊರಕಿದೆ. ರಾಷ್ಟ್ರದಲ್ಲಿ ಒಟ್ಟು 17 ಮುಕ್ತ ವಿವಿಗಳಿದ್ದು, ಇವುಗಳಲ್ಲಿ ಗುಜರಾತ್ ಮುಕ್ತ ವಿವಿ ಎ++ ಮಾನ್ಯತೆ ಪಡೆದಿದ್ದರೆ, ನಂತರದ ಸ್ಥಾನದಲ್ಲಿ ಎ+ ಮಾನ್ಯತೆಯೊಂದಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯ ಇರುವುದಾಗಿ ಸಂತಸ ವ್ಯಕಪಡಿಸಿದರು. 64 ವಿಷಯಗಳ ಅಧ್ಯಯನಕ್ಕೆ ಅವಕಾಶ- ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯಕ್ಕೆ ಯುಜಿಸಿಯು 2023 ರಿಂದ…
ಮಡಿಕೇರಿ ಜ.24 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 2023-24ನೇ ಸಾಲಿನ “ಗೌರಮ್ಮ ದತ್ತಿ ಪ್ರಶಸ್ತಿ” ಪುರಸ್ಕಾರಕ್ಕೆ ಜಿಲ್ಲೆಯ ಮಹಿಳಾ ಲೇಖಕಿಯರಿಂದ ಕನ್ನಡ ಭಾಷಾ ಕೃತಿಗಳನ್ನು ಆಹ್ವಾನಿಸಲಾಗಿದೆ. ಈ ಮೊದಲು ಇತರ ಪ್ರಶಸ್ತಿ ಪಡೆದ ಕೃತಿಗಳನ್ನು ಕಳುಹಿಸಲು ಅವಕಾಶ ಇರುವುದಿಲ್ಲ. ತಮ್ಮ ಪ್ರಕಟಿತ ಒಂದು ಕೃತಿಯನ್ನು ಮೂರು ಪ್ರತಿಗಳಲ್ಲಿ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಚೇರಿ, ಎಸ್.ಜಿ.ಎಸ್.ಆರ್.ವೈ ಕಟ್ಟಡ, ಅಂಬೇಡ್ಕರ್ ಭವನದ ಬಳಿ, ಫೀ.ಮಾ.ಕಾರ್ಯಪ್ಪ ವೃತ್ತ, ಮಡಿಕೇರಿ-571201 ಇಲ್ಲಿಗೆ ಕಳುಹಿಸಿ ಕೊಡಬೇಕು. ಕೃತಿಯನ್ನು ಕಳುಹಿಸಲು ಫೆ.5 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗೆ ಎಸ್.ಐ.ಮುನೀರ್ ಅಹಮ್ಮದ್-9886181613, ರೇವತಿ ರಮೇಶ್-9663254829 ಸಂಪರ್ಕಿಸಬಹುದಾಗಿದೆ.
ಮಡಿಕೇರಿ ಜ.24 NEWS DESK : ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷರಾಗಿ ಬಳಗದ ಹಿರಿಯ ಸದಸ್ಯ ಲೋಕನಾಥ್ ಅಮೆಚೂರು ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರುಗಳಾಗಿ ಎಂ.ಇ.ಮೊಹಿದ್ದೀನ್, ರೇವತಿ ರಮೇಶ್, ಪ್ರಧಾನ ಕಾರ್ಯದರ್ಶಿಯಾಗಿ ಭಾರತಿ ರಮೇಶ್, ಸಹ ಕಾರ್ಯದರ್ಶಿಯಾಗಿ ಜಯಪ್ಪ ಹಾನಗಲ್ ಹಾಗೂ ಕೋಶಾಧಿಕಾರಿಯಾಗಿ ಕಡ್ಲೇರ ತುಳಸಿ ಮೋಹನ್ ನೇಮಕಗೊಂಡಿದ್ದಾರೆ. ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಎಂ.ಪಿ.ಕೇಶವಕಾಮತ್, ಕೆ.ಟಿ.ಬೇಬಿ ಮ್ಯಾಥ್ಯು, ಡಿ.ಕೆ.ಹರೀಶ್ ಸರಳಾಯ, ಕೆ.ವಿ.ಉಮೇಶ್, ಎಂ.ಎಂ.ಲಿಯಾಕತ್ ಆಲಿ, ಅಂಬೆಕಲ್ ನವೀನ್, ಬಿ.ಆರ್.ಜೋಯಪ್ಪ, ಶ್ವೇತಾ ರವೀಂದ್ರ, ಪಿ.ಪಿ.ಸುನಿತ ಪ್ರೀತು ಆಯ್ಕೆಯಾಗಿದ್ದಾರೆ. ಗೌರವ ಸಲಹೆಗಾರರಾಗಿ ಟಿ.ಪಿ.ರಮೇಶ್, ವಿಲ್‍ಫ್ರಡ್ ಕ್ರಾಸ್ತಾ, ಎಸ್.ಐ.ಮುನೀರ್ ಅಹ್ಮದ್, ಟಿ.ಜಿ.ಪ್ರೇಮ್ ಕುಮಾರ್, ಪಿ.ಜಿ.ರಾಜಶೇಖರ್ ಅವರನ್ನು ನೇಮಿಸಲಾಯಿತು. ಜಿಲ್ಲಾಧ್ಯಕ್ಷ ಎಂ.ಪಿ.ಕೇಶವಕಾಮತ್ ಅವರ ಗೈರು ಹಾಜರಿಯಲ್ಲಿ ಬಳಗದ ಉಪಾಧ್ಯಕ್ಷರಾದ ಎಂ.ಇ.ಮೊಹಿದ್ದೀನ್ ಅವರ ಅಧ್ಯಕ್ಷತೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.
ಮಡಿಕೇರಿ ಜ.24 NEWS DESK : ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲು ಮತ್ತು ಪೂರ್ಣಗೊಂಡಿರುವ ಯೋಜನೆಗಳನ್ನು ಉದ್ಘಾಟಿಸಲು ಜ.25 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರಾಜಪೇಟೆ ಹಾಗೂ ಮಡಿಕೇರಿಗೆ ಆಗಮಿಸುತ್ತಿರುವ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮಡಿಕೇರಿ ಮತ್ತು ವಿರಾಜಪೇಟೆ ಭಾಗದಲ್ಲಿ ಬಂದೋಬಸ್ತ್ ಗಾಗಿ ಸುಮಾರು ಒಂದು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರ ನಿರ್ದೇಶನದಂತೆ ಇಂದು ಮೈತ್ರಿ ಪೊಲೀಸ್ ಸಭಾಂಗಣದಲ್ಲಿ ಪೊಲೀಸರ ಸಭೆ ನಡೆಯಿತು. ಮುಖ್ಯಮಂತ್ರಿಗಳ ಆಗಮನದ ಸಂದರ್ಭ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಮಾರ್ಗದರ್ಶನ ನೀಡಲಾಯಿತು. ಮಂಡ್ಯ, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸುಮಾರು 500 ಪೊಲೀಸರು ಮಡಿಕೇರಿಗೆ ಆಗಮಿಸಿದ್ದಾರೆ. 2023 ರಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನದಲ್ಲಿದ್ದ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಗೆ ಬಂದಿದ್ದಾಗ ಅವರ ಕಾರಿನ ಮೇಲೆ ಮೊಟ್ಟೆ ದಾಳಿಯಾಗಿತ್ತು. ಆದ್ದರಿಂದ ಈ ಬಾರಿ ಪೊಲೀಸ್ ಬಂದೋ ಬಸ್ತ್ ಬಿಗಿಗೊಳಿಸಲಾಗಿದೆ.
ಸುಂಟಿಕೊಪ್ಪ ಜ.24 : ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಲೋಹಿತ್ ಕುಮಾರ್ ಗೆ ರಾಜ್ಯಪಾಲರಿಂದ ಕಬ್ ಸೇವಾದಳ ವಿಭಾಗದಲ್ಲಿ ರಾಜ್ಯ ಪುರಸ್ಕಾರ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನಲ್ಲಿ ನಡೆದ ಕಬ್ ಸೇವಾದಳದ ವಿಭಾಗದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದರು. ಪ್ರಶಸ್ತಿಗೆ ಭಾಜನರಾದ ವಿದ್ಯಾರ್ಥಿಗೆ ಮಾರ್ಗದರ್ಶಕರಾಗಿ ಕಬ್ ಮಾಸ್ಟರ್ ಈವಾ ಜೀತಾ ಬೆನ್ನಿಸ್ ಉತ್ತಮ ತರಬೇತಿಯನ್ನು ನೀಡಿದ್ದು, ಶಾಲಾ ಮುಖ್ಯ ಶಿಕ್ಷಕಿ ವೀರಾ ಡಿಸೋಜ ಹಾಗೂ ಆಡಳಿತ ಮಂಡಳಿಯವರು ಬಾಲಕನ ಸಾಧನೆಯನ್ನು ಅಭಿನಂದಿಸಿದರು.
ಮೈಸೂರು ಜ.24 NEWS DESK : ಪಿರಿಯಾಪಟ್ಟಣ ತಾಲ್ಲೂಕಿನ ಮುತ್ತಿನಮುಳುಸೋಗೆಯಲ್ಲಿ 79 ಗ್ರಾಮಗಳ 150 ಕೆರೆ – ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ರೇಷ್ಮೆ ಮತ್ತು ಪಶುಸಂಗೋಪನಾ ಸಚಿವರಾದ ಕೆ.ವೆಂಕಟೇಶ್, ಜಲಸಂಪನ್ಮೂಲ ಸಚಿವರು, ಉಪಮುಖ್ಯಮಂತ್ರಿಗಳು ಆದ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ.ಮಹದೇವಪ್ಪ, ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಹಾಗೂ ಶಾಸಕರುಗಳಾದ ಮರಿತಿಬ್ಬೇಗೌಡ, ಡಿ.ರವಿಶಂಕರ್, ಟಿ.ಎಸ್.ಶ್ರೀವತ್ಸ, ಡಾ.ಮಂಥರ್ ಗೌಡ, ಸಿ.ಅನಿಲ್ ಕುಮಾರ್, ಕೆ.ಹರೀಶ್ ಗೌಡ, ಡಾ.ಡಿ.ತಿಮ್ಮಯ್ಯ, ಸಚಿವ ಕೆ.ವೆಂಕಟೇಶ್ ಅವರ ಪುತ್ರ ಯುವ ಮುಖಂಡ ನಿತಿನ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಬೆಂಗಳೂರು ಜ.24 NEWS DESK : ಸ್ಕಾಟ್‌ಲ್ಯಾಂಡ್ ಆಫ್ ಇಂಡಿಯಾ ಎಂದೇ ಕರೆಯಲ್ಪಡುವ ಮಡಿಕೇರಿಯಲ್ಲಿ ರಾತ್ರಿ ವೇಳೆ ಬೆಳಕಿನ ಅಡಚಣೆ ಬಹಳ ಕಡಿಮೆ. ಇದು ನಕ್ಷತ್ರಗಳು ಹಾಗೂ ಗ್ರಹಗಳ ವೀಕ್ಷಣೆಗೆ ಇರುವಂತಹ ಭಾರತ ದೇಶದ ಅತ್ಯುತ್ತಮ ಸ್ಥಳಗಳಲ್ಲಿ ಒಂದಾಗಿದ್ದು ಇಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಸುಮಾರು 12.26 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅತ್ಯಾಧುನಿಕ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ತಾರಾಲಯವನ್ನು ಸ್ಥಾಪಿಸಲಾಗುವುದು. ಇದರ ಶಂಕುಸ್ಥಾಪನೆಯನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ನಾಳೆ ನೆರವೇರಿಸಲಿದ್ದಾರೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಪ್ರಚುರ ಪಡಿಸುವ ಉದ್ದೇಶದಿಂದ ಹಾಗೂ ವಿಜ್ಞಾನದ ಶಿಕ್ಷಣ, ವೈಚಾರಿಕ ಚಿಂತನೆ ಮೂಡಿಸುವುದಕ್ಕೆ ಹಾಗೂ ಖಗೋಳ ವಿಜ್ಞಾನ ವಿಷಯಗಳನ್ನು ವಿದ್ಯಾರ್ಥಿಗಳು ಮತ್ತು ಜನಸಾಮಾನ್ಯರಿಗೆ ಅರಿವು ಮೂಡಿಸುವ ದೃಷ್ಟಿಯಿಂದ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ವಿಜ್ಞಾನ ಕೇಂದ್ರ ಮತ್ತು…
ಸೋಮವಾರಪೇಟೆ ಜ.24 : ಶಾಲೆ ಆವರಣಕ್ಕೆ ಹಾವು ಬರುತ್ತಿವೆ. ಬೀದಿನಾಯಿಗಳಿಂದ ನಮ್ಮನ್ನು ರಕ್ಷಿಸಿ, ಶಾಲೆಯ ಮೇಲ್ಚಾವಣಿ ಮುರಿದು ಬೀಳುವ ಹಂತದಲ್ಲಿದೆ. ಶೌಚಾಲಯಗಳನ್ನು ನಿರ್ಮಿಸಿಕೊಡುವಂತೆ ಮಕ್ಕಳ ಗ್ರಾಮಸಭೆಯಲ್ಲಿ ವಿವಿಧ ಬೇಡಿಕೆಗಳ ಸುರಿಮಳೆಗೈದರು. ದೊಡ್ಡಮಳ್ತೆ ಗ್ರಾಮ ಪಂಚಾಯಿತಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ನಾವು ಪ್ರತಿಷ್ಠಾನ ವತಿಯಿಂದ ಗೆಜ್ಜೆಹಣಕೋಡು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಮಕ್ಕಳ ಗ್ರಾಮಸಭೆಯಲ್ಲಿ ಮಕ್ಕಳು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಗೆಜ್ಜೆಹಣಕೋಡು ಶಾಲೆಯ 7ನೇ ತರಗತಿ ರತನ್ ತನ್ನ ಶಾಲೆಯ ಸಮಸ್ಯೆಗಳನ್ನು ಹೇಳಿಕೊಂಡ. ಮೈದಾನಕ್ಕೆ ತಂತಿಬೇಲಿ, ಹಾವುಗಳಿಂದ ನಾವು ರಕ್ಷಣೆ ಪಡೆಯಬೇಕಾದರೆ ಕಾಂಪೌಂಡ್ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಶಾಶ್ವತ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು. ಶೌಚಾಲಯ ಸರಿಪಡಿಕೊಡವಂತೆ ಮನವಿ ಮಾಡಿದರು. ನಮ್ಮ ಶಾಲೆಯಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಕಾರ್ಯಕ್ರಮದ ಸಂದರ್ಭ ಶಾಲಾ ಆವರಣದಲ್ಲಿರುವ ವಿದ್ಯುತ್ ಕಂಬವನ್ನು ಬೇರೆಡೆ ಸ್ಥಳಾಂತರ ಮಾಡಬೇಕೆಂದು ಮನವಿ ಸಲ್ಲಿಸಲಾಗಿದ್ದು, ಕ್ರಮ ಕೈಗೊಳ್ಳುವ ಭರವಸೆಯನ್ನು ಜೆ.ಇ.ನೀಡಿದ್ದರು. ಆದರೆ ಒಂದು ವರ್ಷ ಕಳೆದರು ಯಾವುದೇ…
ವಿರಾಜಪೇಟೆ ಜ.24 NEWS DESK : ಕನ್ನಡ ಮಾಧ್ಯಮದಲ್ಲಿ ಓದಲು ಕೀಳರಿಮೆ ಇರಬಾರದು. ಕನ್ನಡ ಮಾದ್ಯಮದಲ್ಲಿ ವಿದ್ಯಾಭ್ಯಾಸ ಮಾಡಿದವರು ಇಂದು ಉನ್ನತ ಮಟ್ಟದ ಸ್ಥಾನವನ್ನು ಅಲಂಕರಿಸಿದ್ದಾರೆ ಎಂದು ಜಯಪ್ರಕಾಶ್ ನಾರಾಯಣ ಸ್ಮಾರಕ ಪ್ರೌಢಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಡಾ. ಎಂ.ಸಿ.ಕಾರ್ಯಪ್ಪ ಅಭಿಪ್ರಾಯಪಟ್ಟರು. ಜಯಪ್ರಕಾಶ್ ನಾರಾಯಣ ಸ್ಮಾರಕ ಪ್ರೌಢಶಾಲೆಯ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಹೆಚ್ಚು ಓದಿ ಉನ್ನತ ಮಟ್ಟಕ್ಕೆ ಬೆಳೆಯುವಂತಾಗಬೇಕು. ಮಹಾನ್ ವ್ಯಕ್ತಿಗಳನ್ನು ಸ್ಮರಿಸಿಕೊಳ್ಳುವುದು ಮುಖ್ಯವಲ್ಲ, ಅವರಂತೆ ನಾವು ಆಗಬೇಕು ಎನ್ನುವ ಮನೋಭಾವನೆ ವಿದ್ಯಾರ್ಥಿಗಳಲ್ಲಿ ಬೆಳೆಯಬೇಕು ಎಂದರು. ವಿರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ. ಕೆ.ಸಿ.ದಯಾನಂದ ಮಾತನಾಡಿ, ಶಾಲೆಗಳಲ್ಲಿ ನೂರಾರು ವಿದ್ಯಾರ್ಥಿಗಳನ್ನು ನೋಡಿಕೊಳ್ಳುವುದು ಶಿಕ್ಷಕರ ಜವಾಬ್ದಾರಿಯಾದರೆ, ಮನೆಗಳಲ್ಲಿರುವ ಮಕ್ಕಳನ್ನು ಸರಿಯಾದ ದಾರಿಯಲ್ಲಿ ನಡೆದುಕೊಳ್ಳುವಂತೆ ತಿದ್ದಿ ಬುದ್ದಿ ಹೇಳುವುದು ಪೋಷಕರ ಕರ್ತವ್ಯ ಎಂದರು. ಕ್ಷೇತ್ರ ಸಮನ್ವಯ ಅಧಿಕಾರಿ ವನಜಾಕ್ಷಿ ಮಾತನಾಡಿ, ಶಾಲೆ ಹಾಗೂ ಮುಖ್ಯ ಶಿಕ್ಷಕರು ನಮಗೆ ಒಂದು ನೆರೆಮನೆಯಂತೆ. ಯಾವುದೇ ಕೆಲಸ…






